Tag: Operation Ajay

  • ಆಪರೇಷನ್ ಅಜಯ್ ತಂಡದಲ್ಲಿ ಕಾರವಾರದ ಮಹಿಮಾ

    ಆಪರೇಷನ್ ಅಜಯ್ ತಂಡದಲ್ಲಿ ಕಾರವಾರದ ಮಹಿಮಾ

    ಕಾರವಾರ: ಇಸ್ರೇಲ್‌ನಿಂದ (Israel) ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಇತ್ತೀಚೆಗೆ ನಡೆಸಿದ ‘ಆಪರೇಷನ್ ಅಜಯ್’ (Operation Ajay) ತಂಡದಲ್ಲಿ ಕಾರವಾರ (Karwar) ತಾಲೂಕಿನ ಬಿಣಗಾದ ಮಹಿಮಾ ಶೆಟ್ಟಿಯವರು (Mahima Shetty) ಭಾಗವಹಿಸಿ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಶ್ರಮವಹಿಸುವ ಮೂಲಕ ಜಿಲ್ಲೆಯ ಹಿರಿಮೆ ಹೆಚ್ಚಿಸಿದ್ದಾರೆ.

    ಸದ್ಯ ಗೋವಾದ ಪರ್ವೊರಿಮ್‌ನಲ್ಲಿ ನೆಲೆಸಿರುವ ದುರ್ಗಪ್ಪ ಶೆಟ್ಟಿ ಮತ್ತು ನಯನಾ ದಂಪತಿಯ ಪುತ್ರಿ ಮಹಿಮಾ ಶೆಟ್ಟಿ ಆಪರೇಷನ್ ಅಜಯ್ ತಂಡದಲ್ಲಿ ಭಾಗಿಯಾಗಿದ್ದರು. ಏರ್ ಇಂಡಿಯಾದಲ್ಲಿ (Air India) ಗಗನಸಖಿ (Air Hostess) ಆಗಿರುವ ಅವರು ಇಸ್ರೇಲ್‌ನಲ್ಲಿ ಸಿಲುಕಿದ್ದ ಭಾರತೀಯರನ್ನು ಕರೆತರುವ ಆರು ಮಂದಿಯ ತಂಡದಲ್ಲಿ ಇವರು ಸಹ ಭಾಗಿಯಾಗಿದ್ದರು. ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

    ಮಹಿಮಾರವರು ಇಸ್ರೇಲ್‌ಗೆ ತೆರಳಿದ್ದಾಗ ಕ್ಷಿಪಣಿ ದಾಳಿ ನಡೆಯುತ್ತಿದ್ದುದರಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಆದರೂ ಯಾವುದೇ ಹಿಂಜರಿಕೆಯಿಲ್ಲದೇ 236 ಮಂದಿ ಭಾರತೀಯರನ್ನು ಕರೆತಂದಿದ್ದಾಗಿ ಮಹಿಮಾರವರು ಮಾಹಿತಿ ನೀಡಿದ್ದು, ಈ ಕೆಲಸಕ್ಕೆ ಅವಕಾಶ ಸಿಕ್ಕಿದ್ದು ನಮ್ಮ ಪುಣ್ಯ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ನಕಲಿ ವೋಟರ್ ಐಡಿ ಪ್ರಕರಣ; ಸಚಿವ ಭೈರತಿ ಸುರೇಶ್ ರಾಜೀನಾಮೆ ಕೊಡಬೇಕು: ರವಿಕುಮಾರ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿಗೆ ಬರ್ತಿದ್ದಂತೆ ಎಲ್ಲ ಭಾರ ಇಳಿದು ನೆಮ್ಮದಿ ಸಿಕ್ಕಿತು: ಇಸ್ರೇಲ್‌ ಯುದ್ಧ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    ದೆಹಲಿಗೆ ಬರ್ತಿದ್ದಂತೆ ಎಲ್ಲ ಭಾರ ಇಳಿದು ನೆಮ್ಮದಿ ಸಿಕ್ಕಿತು: ಇಸ್ರೇಲ್‌ ಯುದ್ಧ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    ನವದೆಹಲಿ: ಆಪರೇಷನ್ ಅಜಯ್ ಮಿಷನ್ (Operation Ajay) ಮುಂದುವರಿದ್ದು, ಇಸ್ರೇಲ್‌ನಲ್ಲಿ (Israel) ಸಿಲುಕಿರುವ ಭಾರತೀಯರನ್ನು ಹೊತ್ತ 4ನೇ ವಿಮಾನ ಭಾರತಕ್ಕೆ ಬಂದಿಳಿದಿದೆ. 274 ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ.

    ಎಲ್ಲರನ್ನೂ ಕೇಂದ್ರ ಸಚಿವ ವಿ.ಕೆ. ಸಿಂಗ್ ಸ್ವಾಗತಿಸಿದ್ದಾರೆ. ಈ ಪೈಕಿ 8 ಮಂದಿ ಕನ್ನಡಿಗರು ತಮ್ಮ ಮನೆ ಸೇರಿಕೊಂಡಿದ್ದಾರೆ. ‘ಪಬ್ಲಿಕ್ ಟಿವಿ’ ಜೊತೆ ಇಸ್ರೇಲ್‌ನಿಂದ ಆಗಮಿಸಿದ ಕನ್ನಡಿಗರು ತಮ್ಮ ಅನುಭವ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ: ಅಖಾಡಕ್ಕಿಳಿದ ಇಸ್ರೇಲ್ ಪ್ರಧಾನಿ – ಹಮಾಸ್ ಬಂಡುಕೋರರಿಗೆ ನೇರ ಎಚ್ಚರಿಕೆ

    ನಂದಾ ಹಾಗೂ ರೇಣುಕಾ ದಂಪತಿ ಮಾತನಾಡಿ, ದೆಹಲಿ ಬರ್ತಿದ್ದಂತೆ ಎಲ್ಲ ಭಾರ ಇಳಿದು ಮಾನಸಿಕ ನೆಮ್ಮದಿ ಸಿಕ್ಕಿತು. ಇಸ್ರೇಲ್‌ನಿಂದ ಬಂದಿದ್ದು, ನಮಗೆ ಯುದ್ಧದ ಅನುಭವೇ ಆಯ್ತು. ಈಗಲೂ ಸೈರನ್ ಸೌಂಡ್, ಕಟ್ಟಡ ಅಲುಗಾಡಿದಂತೆ ಭಾಸವಾಗುತ್ತಿದೆ ಎಂದು ಯುದ್ಧದ ಭೀಕರತೆ ಬಗ್ಗೆ ಕನ್ನಡಿಗರು ಬಿಚ್ಚಿಟ್ಟಿದ್ದಾರೆ.

    ಅತ್ತ, ಹುಬ್ಬಳ್ಳಿಗೆ ಬಂದ ಡಾ. ಅಖಿಲೇಶ್ ಕಾರಗದ್ದೆ-ಕೃತಿ ದಂಪತಿ ಕನ್ನಡಿಗರಿಗೆ ಜಿಲ್ಲಾಡಳಿತ ಸ್ವಾಗತ ಕೋರಿದೆ. ಲೇಸರ್ ಟೆಕ್ನಾಲಜಿ ಪೋಸ್ಟ್ ಡಾಕ್ಟರಲ್ ಫೆಲೋ ವ್ಯಾಸಂಗಕ್ಕಾಗಿ ಕಳೆದ ಜೂನ್ ವೇಳೆ ದಂಪತಿ ಇಸ್ರೇಲ್‌ಗೆ ತೆರಳಿತ್ತು. ಇದನ್ನೂ ಓದಿ: ಯುದ್ಧ ಪೀಡಿತ ಇಸ್ರೇಲ್‍ನಿಂದ 197 ಜನರನ್ನು ಹೊತ್ತು ದೆಹಲಿಯೆಡೆಗೆ ಹಾರಿದ 3ನೇ ವಿಮಾನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುದ್ಧ ಪೀಡಿತ ಇಸ್ರೇಲ್‍ನಿಂದ 197 ಜನರನ್ನು ಹೊತ್ತು ದೆಹಲಿಯೆಡೆಗೆ ಹಾರಿದ 3ನೇ ವಿಮಾನ

    ಯುದ್ಧ ಪೀಡಿತ ಇಸ್ರೇಲ್‍ನಿಂದ 197 ಜನರನ್ನು ಹೊತ್ತು ದೆಹಲಿಯೆಡೆಗೆ ಹಾರಿದ 3ನೇ ವಿಮಾನ

    ಟೆಲ್ ಅವೀವ್: ಯುದ್ಧ ಪೀಡಿತ ಇಸ್ರೇಲ್‍ನಿಂದ (Israel) ಭಾರತೀಯರನ್ನು (India) ಹೊತ್ತ ಮೂರನೇ ವಿಮಾನ ನವದೆಹಲಿಗೆ ಹೊರಟಿದೆ ಎಂದು ಭಾರತೀಯ ರಾಯಭಾರ ಕಚೇರಿ ಶನಿವಾರ ತಿಳಿಸಿದೆ.

    197 ಜನರನ್ನು ವಿಮಾನ ಹೊರಟಿದೆ ಎಂದು ಇಸ್ರೇಲ್‍ನಲ್ಲಿರುವ ರಾಯಭಾರ ಕಚೇರಿ ಮಾಹಿತಿ ನೀಡಿದೆ. `ಆಪರೇಷನ್ ಅಜಯ್’ (Operation Ajay) ಅಡಿಯಲ್ಲಿ ಇಸ್ರೇಲ್‍ನಿಂದ ಭಾರತೀಯರನ್ನು ಕರೆತರುವ ಕಾರ್ಯ ನಡೆಯುತ್ತಿದೆ. ಇಂದು ಬೆಳಗ್ಗೆ ಇಸ್ರೇಲ್‍ನ ಟೆಲ್ ಅವೀವ್‍ನಿಂದ 235 ಭಾರತೀಯ ಪ್ರಜೆಗಳನ್ನು ಹೊತ್ತ ಎರಡನೇ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಇದಕ್ಕೂ ಮೊದಲು ಬಂದಿದ್ದ ವಮಾನದಲ್ಲಿ 230 ಜನ ಬಂದಿದ್ದರು.

    ಇಸ್ರೇಲ್‍ನಲ್ಲಿರುವ ಸುಮಾರು 18,000 ಭಾರತೀಯರನ್ನು ಮರಳಿ ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್‍ನ್ನು ಪ್ರಾರಂಭಿಸಿದೆ. ಗುರುವಾರದಿಂದ ಭಾರತೀಯರ ನೋಂದಣಿ ಆರಂಭವಾಗಿದೆ. ಇಸ್ರೇಲ್‍ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು ಭಾರತೀಯ ಕಂಪನಿಗಳಿಗೆ ನೆರವು ನೀಡುತ್ತಿದೆ. ಸಹಾಯದ ಅಗತ್ಯವಿರುವ ಭಾರತೀಯರಿಗೆ ಸಹಾಯವಾಣಿಯನ್ನು ಸ್ಥಾಪಿಸಿದೆ…

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Operation Ajay: ಭಾರತ ಸರ್ಕಾರಕ್ಕೆ ಸಲಾಂ – ಇಸ್ರೇಲ್‌ ಯುದ್ಧ ಭೂಮಿಯ ಅನುಭವ ಬಿಚ್ಚಿಟ್ಟ ಕನ್ನಡಿಗರು

    Operation Ajay: ಭಾರತ ಸರ್ಕಾರಕ್ಕೆ ಸಲಾಂ – ಇಸ್ರೇಲ್‌ ಯುದ್ಧ ಭೂಮಿಯ ಅನುಭವ ಬಿಚ್ಚಿಟ್ಟ ಕನ್ನಡಿಗರು

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ (Israel Hamas War) ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಮೊದಲ ಹಂತದಲ್ಲಿ 230 ಮಂದಿ ಭಾರತೀಯರನ್ನ ಕರೆತರಲಾಗಿದ್ದು, ಈ ಪೈಕಿ ಐವರು ಕನ್ನಡಿಗರೂ ಇದ್ದಾರೆ. ಅವರಿಂದು ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಯುದ್ಧಭೂಮಿಯ ಅನುಭವ ಬಿಚ್ಚಿಟ್ಟಿದ್ದಾರೆ.

    ಮಹಾರಾಷ್ಟ್ರ ಯುವತಿ ಕಂಡಂತೆ ಇಸ್ರೇಲ್‌ ಹೇಗಿತ್ತು?
    ಕಳೆದ 9 ತಿಂಗಳಿನಿಂದ ಇಸ್ರೇಲ್‌ನಲ್ಲಿ ಕೆಲಸ ಮಾಡಿಕೊಂಡಿರುವ ಮಹಾರಾಷ್ಟ್ರ ಮೂಲದ ಯುವತಿ ಪ್ರಿಯಾಂಕಾ ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿ, ಯುದ್ಧಭೂಮಿಯ ಅನುಭವ ಹಂಚಿಕೊಂಡಿದ್ದಾರೆ. ನಾನು ಇದ್ದ ಅಷ್ಟೂ ದಿನಗಳಲ್ಲಿ ಇದೇ ಮೊದಲ ಬಾರಿಗೆ ದೊಡ್ಡಮಟ್ಟದ ಸಮಸ್ಯೆ ಆಗಿರೋದು. ನಾವು ಇಸ್ರೇಲ್‌ ಕೇಂದ್ರ ಭಾಗದಲ್ಲಿದ್ದೆವು. ದಕ್ಷಿಣಕ್ಕೆ 120 ಕಿಮೀ ದೂರದಲ್ಲಿದ್ದ ಗಾಜಾಪಟ್ಟಿಯಲ್ಲಿ ದಾಳಿ ನಡೆದಿತ್ತು. ಇದರಿಂದ ಸಾಕಷ್ಟು ಆತಂಕಕ್ಕೆ ಒಳಗಾಗಿದ್ದೆವು ಎಂದು ಹೇಳಿದ್ದಾರೆ.

    ನಾವು ಬಂಕರ್‌ಗಳಲ್ಲಿ ಅಡಗಿ ಕೂರಬೇಕಿತ್ತು. ದಿನಕ್ಕೆ ಎರಡು ಬಾರಿ ಸೈರನ್‌ ಮಾಡುತ್ತಿದ್ದರು. ಆಗ 9 ನಿಮಿಗಳಷ್ಟೇ ಕಾಲಾವಕಾಶ ಸಿಗುತ್ತಿತ್ತು. ಅಷ್ಟರಲ್ಲೇ ನಾವು ಮತ್ತೊಂದು ಬಂಕರ್‌ ಸೇರಿಕೊಳ್ಳಬೇಕಿತ್ತು. ದಿನಕ್ಕೆ ಎರಡು ಬಾರಿ ಮಾತ್ರ ಸೈರನ್‌ ಆಗುತ್ತಿತ್ತು. ಕೆಲವೊಮ್ಮೆ ದಿನಕ್ಕೆ ಒಂದು ಬಾರಿ ಮಾತ್ರ ಆಗುತ್ತಿತ್ತು. ಬಂಕರ್‌ನಿಂದ ಆಚೆ ಬಂದಾಗ ರಾಕೆಟ್‌, ಗುಂಡಿನ ಶಬ್ಧ ಕಿವಿಗೆ ಅಪ್ಪಳಿಸುತ್ತಿತ್ತು, ಪರಿಸ್ಥಿತಿ ಸೂಕ್ಷ್ಮವಾಗಿ ಇದ್ದುದರಿಂದ ನಾವು ನೋಡಲು ಸಾಧ್ಯವಾಗಲಿಲ್ಲ. ಆದ್ರೆ ನಾವು ಬಂಕರ್‌ ನಿಂದ ಮತ್ತೊಂದು ಬಂಕರ್‌ಗೆ ತೆರಳುತ್ತಿದ್ದ ವೇಳೆ ಅನೇಕ ಇಸ್ರೇಲಿಯನ್ನರು ನನಗೆ ಸಹಾಯ ಮಾಡಿದರು, ಸೇಫ್‌ ಆಗಿ ಹೋಗಿ ಅಂತಾ ಹೇಳಿದರು. ಅವರ ಹೆಸರೂ ಕೂಡ ನನಗೆ ಗೊತ್ತಾಗಲಿಲ್ಲ ಎಂದು ಹೇಳಿಕೊಂಡಿದ್ದಾರೆ.

    ಇನ್ನೂ ಇಸ್ರೇಲ್‌ ಉತ್ತರ ಭಾಗದಲ್ಲಿ ಮತ್ತು ದಕ್ಷಿಣಕ್ಕೆ ಇರುವ ಗಾಜಾದಲ್ಲಿ ಸಮಸ್ಯೆ ತುಂಬಾ ಸಮಸ್ಯೆಯಾಗಿತ್ತು. ಭಾರತಕ್ಕೆ ಬಂದ ನಂತರ ಆತಂಕವೆಲ್ಲಾ ದೂರವಾಯಿತು. ನಮ್ಮನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಸೇರಿಸಿದ್ದಕ್ಕೆ ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇವೆ. ಶೀಘ್ರದಲ್ಲೇ ಇಸ್ರೇಲ್‌ ಪರಿಸ್ಥಿತಿಯನ್ನು ನಿಯಂತ್ರಿಸಲಿದೆ ಎಂದೂ ವಿಶ್ವಾಸ ವ್ಯಕ್ತಪಡಿಸಿದರು.

    ನಾವಿದ್ದ ಜಾಗ ಸೇಫ್‌:
    ಕಳೆದ ಎರಡು ವರ್ಷಗಳಿಂದ ಟೆಲ್‌ ಅವೀವ್‌ನಿಂದ 40 ಕಿಮೀ ದೂರದಲ್ಲಿರುವ ಆರ್ಯಲ್‌ ನಗರದ ವಿಶ್ವವಿದ್ಯಾಲಯದಲ್ಲಿ PHD ಪದವಿ ಮಾಡುತ್ತಿರುವ ವಿಜಯಪುರ ಮೂಲದ ಈರಣ್ಣ ʻಪಬ್ಲಿಕ್‌ ಟಿವಿʼಯೊಂದಿಗೆ ಮಾತನಾಡಿದ್ದಾರೆ. ನಾವಿದ್ದ 300 ಕಿಮೀ ದೂರದಲ್ಲಿ ಯುದ್ಧ ಶುರುವಾಗಿತ್ತು. ಗಡಿ ಭಾಗಗಳಲ್ಲಿ ಮಾತ್ರ ಸಮಸ್ಯೆಯಿತ್ತು. ಆದ್ರೆ ನಾವಿದ್ದ ಕಡೆ ತುಂಬಾ ಸೇಫ್‌ ಇತ್ತು, ಯುದ್ಧದ ಅನುಭವವೇ ಆಗಲಿಲ್ಲ ಎಂದು ಹೇಳಿದ್ದಾರೆ.

    ಭಾರತ ಸರ್ಕಾರಕ್ಕೆ ಸಲಾಂ:
    ನಾವು ಕಳೆದ 2 ವರ್ಷಗಳಿಂದ ಇಸ್ರೇಲ್‌ನ ಅರಿಯಲ್‌ ನಗರದಲ್ಲಿ ಇದ್ದೇವೆ. ನಾವಿದ್ದ ಜಾಗದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇತ್ತು. ಎಂದಿನಂತೆ ಕೆಲಕ್ಕೆ ಹೋಗಿ ಬರುತ್ತಿದ್ದೆವು. ಕೆಲವು ಸಂದರ್ಭಗಳಲ್ಲಿ ಮಾತ್ರ ಹೊರಗಡೆ ಹೋಗಬೇಡಿ, ಬಂಕರ್‌ ವ್ಯವಸ್ಥೆ ಕಲ್ಪಿಸಿದ್ರೆ ಅಲ್ಲಿಗೆ ಸ್ಥಳಾಂತರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡುತ್ತಿದ್ದರು. ಕೊನೆಗೆ ಭಾರತಕ್ಕೆ ಬಂದಿದ್ದು ನಿರಾಳ ಎನಿಸಿದೆ. ದೇಶಕ್ಕೆ ಬರಲು ಭಾರತ ಸರ್ಕಾರ ತುಂಬಾ ಸಹಕಾರ ನೀಡಿದ್ದಕ್ಕೆ ಧನ್ಯವಾದ ತಿಳಿಸುತ್ತೇವೆ. ಎಷ್ಟೇ ಆದ್ರೂ ನಮ್ಮ ದೇಶ ನಮ್ಮ ದೇಶವೇ ಎಂದು ಶ್ಲಾಘಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    Operation Ajay: ಇಸ್ರೇಲ್‌ನಿಂದ 230 ಮಂದಿ ಭಾರತೀಯರ ಆಗಮನ – ಕನ್ನಡಿಗರಿಗೆ ಟಿ.ಬಿ ಜಯಚಂದ್ರ ಆತ್ಮೀಯ ಸ್ವಾಗತ

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ (Israel Hamas War) ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಭಾರತೀಯರನ್ನು (Indians) ಹೊತ್ತ ಮೊದಲ ವಿಮಾನ ಇಸ್ರೇಲ್‌ನಿಂದ ದಹೆಲಿಗೆ ಬಂದಿಳಿದಿದೆ.

    ಒಟ್ಟು 230 ಮಂದಿ ಭಾರತೀಯರು ತವರಿಗೆ ಮರಳಿದ್ದು, ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಸ್ವಾಗತಿಸಿದ್ದಾರೆ. 230 ಮಂದಿಯಲ್ಲಿ ಐವರು ಕನ್ನಡಿಗರು ಸಹ ಇದ್ದು, ಅವರನ್ನ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ (TB Jayachandra) ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದೇ ವೇಳೆ ದೆಹಲಿಯಿಂದ ಕರ್ನಾಟಕಕ್ಕೆ ತೆರಳಲು ಸಾರಿಗೆ ವೆಚ್ಚದ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರನ್ನ ರೇಪ್‌ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್‌ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್‌ ಮಹಿಳೆ

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಯಚಂದ್ರ ಅವರು, ಇಸ್ರೆಲ್‌ನಿಂದ ಬಂದ ಕನ್ನಡಿಗರ ಜೊತೆ ಮಾತನಾಡಿದ್ದೇನೆ. ದೆಹಲಿಗೆ ಬಂದಿರುವ ಅವರ ಯೋಗಕ್ಷೇಮವನ್ನು ಕರ್ನಾಟಕ ಸರ್ಕಾರ ನೋಡಿಕೊಳ್ಳಲಿದೆ. ಪ್ರತಿಯತೊಬ್ಬರನ್ನು ಅವರ ಊರುಗಳಿಗೆ ಕ್ಷೇಮವಾಗಿ ತಲುಪಿಸುವ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಲಿದೆ. ರಷ್ಯಾ-ಉಕ್ರೇನ್‌ ಯುದ್ಧದ ಸಂಧರ್ಭದಲ್ಲಿ ಮಾಡಿದಂತೆ ಈ ಬಾರಿಯೂ ವ್ಯವಸ್ಥೆ ಮಾಡಲಾಗುವುದು. ಉಳಿದುಕೊಳ್ಳಲು ಕರ್ನಾಟಕ ಭವನದಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: 10ನೇ ತರಗತಿ ವಿದ್ಯಾರ್ಥಿಯನ್ನ ಸೆಕ್ಸ್‌ಗೆ ಪೀಡಿಸುತ್ತಿದ್ದ ಟೀಚರ್‌; ಮತಾಂತರಕ್ಕೂ ಒತ್ತಾಯ – ಕೇಸ್‌ ದಾಖಲು

    ಕೇಂದ್ರ ಸರ್ಕಾರದ ಜೊತೆಗೆ ನಮ್ಮ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ. ಹಂತ ಹಂತವಾಗಿ ಕನ್ನಡಿಗರು ವಾಪಸ್ ಬರಲಿದ್ದಾರೆ. ರಾಜ್ಯ ಸರ್ಕಾರ ಜೊತೆಗಿದೆ ಎನ್ನುವ ಸಂದೇಶ ನೀಡಲು ನಾನೇ ಅವರ ಸ್ವಾಗತಕ್ಕೆ ಬಂದಿದ್ದೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಪರೇಷನ್ ಅಜಯ್ – ಇಂದು ರಾತ್ರಿ ಇಸ್ರೇಲ್‌ನಿಂದ ಆಗಮಿಸಲಿದೆ ಭಾರತೀಯರನ್ನು ಹೊತ್ತ ಮೊದಲ ವಿಮಾನ

    ಆಪರೇಷನ್ ಅಜಯ್ – ಇಂದು ರಾತ್ರಿ ಇಸ್ರೇಲ್‌ನಿಂದ ಆಗಮಿಸಲಿದೆ ಭಾರತೀಯರನ್ನು ಹೊತ್ತ ಮೊದಲ ವಿಮಾನ

    ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ (Operation Ajay) ಅನ್ನು ಪ್ರಾರಂಭಿಸಲಾಗಿದೆ. ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಂದು ರಾತ್ರಿ ಟೆಲ್ ಅವಿವ್‌ನ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.

    ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಟೆಲ್ ಅವಿವ್‌ನಿಂದ ದೆಹಲಿಗೆ ಚಾರ್ಟರ್ಡ್ ಫ್ಲೈಟ್ ಅನ್ನು ಕಳುಹಿಸಿರುವುದಾಗಿ ವಿದ್ಯಾರ್ಥಿಗಳಿಗೆ ಮೇಲ್ ಸಂದೇಶ ಕಳುಹಿಸಿದೆ. ಈ ವಿಮಾನ ಇಂದು ಇಸ್ರೇಲ್ (Israel) ಕಾಲಮಾನ ರಾತ್ರಿ ಸುಮಾರು 9 ಗಂಟೆಗೆ ಬೆನ್ ಗುರಿಯಾನ್ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಲಿದೆ.

    ಭಾರತೀಯ ವಿದ್ಯಾರ್ಥಿಗಳಿಗೆ ಮೇಲ್‌ನಲ್ಲಿ ಗೂಗಲ್ ಫಾರ್ಮ್ ಅನ್ನು ಭರ್ತಿ ಮಾಡಲು ಕೇಳಲಾಗಿದೆ. ನಂತರ ಅವರು ದೃಢೀಕರಣ ಸಂದೇಶವನ್ನು ಸ್ವೀಕರಿಸುತ್ತಾರೆ. ಒಂದು ಚೆಕ್ ಇನ್ ಲಗೇಜ್ 23 ಕೆ.ಜಿ ಗಿಂತ ಹೆಚ್ಚಿರಬಾರದು ಮತ್ತು ಒಂದು ಕ್ಯಾಬಿನ್ ಲಗೇಜ್ ಅನ್ನು ಅನುಮತಿಸಲಾಗುವುದು ಎಂದು ಮೇಲ್‌ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಮಹಿಳೆಯರನ್ನ ರೇಪ್‌ ಮಾಡ್ತಿದ್ದಾರೆ, ಮಕ್ಕಳನ್ನ ಕೊಲ್ತಿದ್ದಾರೆ- ಹಮಾಸ್‌ ಉಗ್ರರ ಕರಾಳ ಮುಖ ಬಿಚ್ಚಿಟ್ಟ ಭಾರತದ ಇಸ್ರೇಲ್‌ ಮಹಿಳೆ

    ಇಸ್ರೇಲ್ ಮೇಲೆ ಹಮಾಸ್ (Hamas) ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್‌ನಿಂದ ಏರ್‌ಲಿಫ್ಟ್ ಮಾಡಲು ಭಾರತ ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ. ಇದನ್ನೂ ಓದಿ: ಗಾಝಾ ನಗರಕ್ಕೆ ಇಸ್ರೇಲ್ ದಿಗ್ಬಂಧನ – ಅನ್ನ, ನೀರಿಗೂ ಪ್ಯಾಲೆಸ್ತೀನಿಯರ ಪರದಾಟ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ

    ಇಸ್ರೇಲ್‍ನಿಂದ ಭಾರತೀಯರನ್ನು ಕರೆತರಲು ಅಪರೇಷನ್ ಅಜಯ್ ಆರಂಭಿಸಿದ ಕೇಂದ್ರ ಸರ್ಕಾರ

    ನವದೆಹಲಿ: ಯುದ್ಧ ಪೀಡಿತ ಇಸ್ರೇಲ್‍ನಲ್ಲಿ (Israel) ಸಿಲುಕಿರುವ ಭಾರತೀಯರನ್ನು (India) ಕರೆತರಲು ಕೇಂದ್ರ ಸರ್ಕಾರ ಆಪರೇಷನ್ ಅಜಯ್ (Operation Ajay) ಹೆಸರಿನಲ್ಲಿ ವಿಶೇಷ ವಿಮಾನಗಳನ್ನು ಕಳಿಸಿಕೊಡಲು ಸಿದ್ಧತೆ ನಡೆಸಿದೆ.

    ಇಸ್ರೇಲ್‍ನಲ್ಲಿ 18,000 ಭಾರತೀಯರಿದ್ದಾರೆ. ಅವರನ್ನು ಕರೆತರಲು ವಿಶೇಷ ಚಾರ್ಟರ್ ಫ್ಲೈಟ್‍ಗಳನ್ನು ಕಳಿಸಲಾಗುವುದು. ವಿದೇಶದಲ್ಲಿರುವ ನಮ್ಮ ಪ್ರಜೆಗಳ ಸುರಕ್ಷತೆ ಮತ್ತು ಯೋಗಕ್ಷೇಮಕ್ಕೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್  (S.Jaishankar) ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಸ್ರೇಲ್, ಹಮಾಸ್ ಸಂಘರ್ಷ- ಭಾರತದ ಆರ್ಥಿಕ ಕಾರಿಡಾರ್ ಯೋಜನೆಗೆ ಯುದ್ಧದ ಕಾರ್ಮೋಡ

    ಹಿಂದಿರುಗಲು ಮೊದಲು ನೋಂದಾಯಿಸಿದ ಭಾರತೀಯರಿಗೆ ಸೂಚನೆ ನೀಡಲಾಗಿದೆ. ನಾಳೆ ಭಾರತಕ್ಕೆ ಮೊದಲ ವಿಶೇಷ ವಿಮಾನದಲ್ಲಿ ಅವರನ್ನು ಕಳಿಸಲಾಗುವುದು. ಅಲ್ಲದೇ ನೋಂದಾಯಿತರಿಗೆ ಇಮೇಲ್ ಮೂಲಕ ಸಂದೇಶ ರವಾನಿಸಲಾಗಿದೆ ಎಂದು ಇಸ್ರೇಲ್‍ನಲ್ಲಿರುವ ಭಾರತದ ರಾಯಭಾರ ಕಚೇರಿ ತಿಳಿಸಿದೆ.

    ಇದುವರೆಗೂ ಇಸ್ರೇಲ್ ಹಾಗೂ ಹಮಾಸ್ ಉಗ್ರರ ನಡುವಿನ ಯುದ್ಧದಲ್ಲಿ ಸುಮಾರು 3,000ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಇಸ್ರೇಲ್‌ಗೆ ಬಂದಿಳಿದ ಅಮೆರಿಕದ ಶಸ್ತ್ರಾಸ್ತ್ರ ಹೊತ್ತ ಮೊದಲ ವಿಮಾನ – ಇಸ್ರೇಲ್‌ಗೆ ನೂರಾನೆ ಬಲ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]