Tag: Operation Kamala Audio

  • ಬಿಜೆಪಿಯವರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ: ಸಿದ್ದರಾಮಯ್ಯ

    ಬಿಜೆಪಿಯವರಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ: ಸಿದ್ದರಾಮಯ್ಯ

    – ಮಾಜಿ ಸಿಎಂಗೆ ಬೆಳ್ಳಿ ಖಡ್ಗ ಗಿಫ್ಟ್

    ವಿಜಯಪುರ: ಸಂವಿಧಾನದ ಮೇಲೆ ಬಿಜೆಪಿಯವರಿಗೆ ನಂಬಿಕೆ ಇಲ್ಲ. ಹೀಗಾಗಿ ಆಪರೇಷನ್ ಆಡಿಯೋ ಪ್ರಕರಣವನ್ನು ಎಸ್‍ಐಟಿ ತನಿಖೆಗೆ ನೀಡಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

    ನಗರದಲ್ಲಿ ನೂತನವಾಗಿ ನಿರ್ಮಾಣವಾದ ಪಂಚಮಸಾಲಿ ಸಮಾಜದ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಪರೇಷನ್ ಕಮಲ ಆಡಿಯೋ ಪ್ರಕರಣ ತನಿಖೆಗೆ ಸಿಎಂ ಕುಮಾರಸ್ವಾಮಿ ಅವರು ಎಸ್‍ಐಟಿ ತಂಡವನ್ನು ರಚನೆ ಮಾಡಿದ್ದಾರೆ. ನಾವು ಯಾರು ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ತನಿಖೆಯ ಬಳಿಕ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟರು.

    ಅತೃಪ್ತ ಕಾಂಗ್ರೆಸ್ ಶಾಸಕರ ಅನರ್ಹತೆ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ಅವರು ಕ್ರಮಕೈಗೊಳ್ಳುತ್ತಾರೆ. ನಾನು ಸಲ್ಲಿಸಿದ ಮನವಿಯನ್ನು ವಾಪಾಸ್ ಪಡೆಯಲ್ಲ. ಸಮಿಶ್ರ ಸರ್ಕಾರ ಸುಭದ್ರವಾಗಿದೆ. ಕಾಂಗ್ರೆಸ್ ಶಾಸಕರು ಪಕ್ಷ ಬಿಡುವುದಿಲ್ಲ ಎಂದ ಅವರು, ಲೋಕಸಭಾ ಸೀಟುಗಳ ಹಂಚಿಕೆ ವಿಚಾರವಾಗಿ ಜೆಡಿಎಸ್ ಜೊತೆಗೆ ಮಾತುಕತೆಯಾಗಿಲ್ಲ ಎಂದರು.

    ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರ ಮೆದುಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಹೀಗಾಗಿ ಏನೇನೋ ಮಾತನಾಡುತ್ತಾರೆ. ಅವರಿಗೆ ಗಂಭೀರವಾಗಿ ಮಾತನಾಡುವುದು ಗೊತ್ತಿಲ್ಲ ಎಂದು ತೀರುಗೇಟು ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಬೆಳ್ಳಿ ಖಡ್ಗ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನ ಮೂರ್ತಿಯನ್ನು ಉಡುಗೊರೆಯಾಗಿ ನೀಡಲಾಯಿತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಭಾಪತಿಗಳನ್ನು ಬೀದಿಗೆ ನಿಲ್ಲಿಸಿದ್ದು ಸಿಎಂ ಕುಮಾರಸ್ವಾಮಿ: ಜಗದೀಶ್ ಶೆಟ್ಟರ್

    ಸಭಾಪತಿಗಳನ್ನು ಬೀದಿಗೆ ನಿಲ್ಲಿಸಿದ್ದು ಸಿಎಂ ಕುಮಾರಸ್ವಾಮಿ: ಜಗದೀಶ್ ಶೆಟ್ಟರ್

    – ಸಿಎಂ ಕುಮಾರಸ್ವಾಮಿ ಆರೋಪಿ ನಂಬರ್ 1
    – ಎಸ್‍ಐಟಿಯಿಂದ ತನಿಖೆ ವಿಳಂಬ, ಸದನ ಸಮಿತಿ ಮೂಲಕ ತನಿಖೆಯಾಗ್ಲಿ

    ಕೊಪ್ಪಳ: ಆಪರೇಷನ್ ಕಮಲ ಆಡಿಯೋ ಬಿಡುಗಡೆ ಮೂಲಕ ಸಿಎಂ ಕುಮಾರಸ್ವಾಮಿ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಬೀದಿಗೆ ನಿಲ್ಲಿಸಿದರು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿ ಅವರು ಶಾಸಕರ ಪುತ್ರ ಶರಣಗೌಡಗೆ ರೆಕಾರ್ಡ್ ಮಾಡುವಂತೆ ಹೇಳಿರುವುದು ಅಪರಾಧ. ಅಷ್ಟೇ ಅಲ್ಲದೆ ಇಬ್ಬರು ವ್ಯಕ್ತಿಗಳ ನಡುವೆ ನಡೆಯುವ ಸಂಭಾಷಣೆಯನ್ನು ಕೇಳಿರುವುದು ಕದ್ದಾಲಿಕೆ. ಇಂತಹದ್ದೇ ಪ್ರಕರಣದಿಂದಾಗಿ ರಾಮಕೃಷ್ಣ ಹೆಗ್ಡೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು ಹೇಳಿದರು.

    ಬಜೆಟ್ ಅಧಿವೇಶನದ ಬಳಿಕ ಸ್ಪೀಕರ್ ರಮೇಶ್ ಕುಮಾರ್ ಅವರ ಹೆಸರು ಪ್ರಸ್ತಾಪವಾಗಿರುವುದನ್ನು ಹೇಳಬಹುದಿತ್ತು. ಹೀಗಾಗಿ ಸಿಎಂ ಕುಮಾರಸ್ವಾಮಿ ಅವರೇ ಅಪರಾಧಿ ನಂಬರ್ 1 ಎಂದ ಅವರು, ಆಪರೇಷನ್ ಕಮಲ ಆಡಿಯೋ ತನಿಖೆಗೆ ನಾವು ಬೇಡವೆಂದಿಲ್ಲ. ಪ್ರಕರಣವನ್ನು ಎಸ್‍ಐಟಿಗೆ ನೀಡಿದರೆ ತನಿಖೆ ವಿಳಂಬ ಆಗುತ್ತದೆ ಎನ್ನುವ ಕಾರಣಕ್ಕೆ ಬೇಡವೆಂದು ಒತ್ತಾಯಿಸಿದ್ದೇವೆ. ಹೀಗಾಗಿ ಸದನ ಸಮಿತಿ ಮೂಲಕ ತನಿಖೆ ಮಾಡಬಹುದು ಎಂದರು.

    ರಾಜಕೀಯ ದ್ವೇಷ ಸಾಧನೆಗಾಗಿ ಕಾಂಗ್ರೆಸ್-ಜೆಡಿಎಸ್ ಸರ್ಕಾರವು ಎಸ್‍ಐಟಿ ತನಿಖೆಗೆ ವಹಿಸಲು ಹೊರಟಿದೆ. ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರ ದ್ವಂದ್ವ ನೀತಿ ಸ್ಪಷ್ಟವಾಗಿದೆ. ನಾವು ಆಪರೇಷನ್ ಕಮಲ ಮಾಡಿಲ್ಲ. ಈ ಹಿಂದೆ ಸಿಎಂ ಕುಮಾರಸ್ವಾಮಿ ಅವರು ವಿಜುಗೌಡ ಪಾಟೀಲ್ ಹಾಗೂ ಸುಭಾಷ್ ಗುತ್ತೇದಾರ ಅವರಿಗೆ ಹಣ ಕೇಳಿದ್ದರು ಎಂದು ಆರೋಪಿಸಿದರು.

    ಆಪರೇಷನ್ ಕಮಲ ಆಡಿಯೋದಲ್ಲಿ ಬಹಳಷ್ಟು ಎಡಿಟ್ ಆಗಿದೆ ಎಂದು ಸಿಎಂ ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. ಹೀಗಾಗಿ ತನಿಖೆಯಲ್ಲಿ ಸಾಬೀತಾಗುವರೆಗೂ ಇದು ಸ್ಪಷ್ಟವಾಗುದಿಲ್ಲ ಎಂದ ಅವರು, ದೋಸ್ತಿ ಸರ್ಕಾರದಲ್ಲಿ ಭಿನ್ನಮತವಿದೆ. ಅವರೇ ಸರ್ಕಾರ ಪತನ ಮಾಡಿಕೊಂಡರೆ ಅದಕ್ಕೆ ನಾವು ಏನೂ ಮಾಡುವುದಕ್ಕೆ ಆಗುತ್ತದೆ ಎಂದು ಗುಡುಗಿದರು.

    ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿ ಕುರಿತು ಪ್ರತಿಕ್ರಿಯೆ ನೀಡಿದ ಜಗದೀಶ್ ಶೆಟ್ಟರ್ ಅವರು, ಉಗ್ರರಿಗೆ ತಕ್ಕ ಪಾಠ ಕಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಸೈನಿಕರಿಗೆ ಸಂಪೂರ್ಣವಾದ ಅಧಿಕಾರವನ್ನು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಭಯೋತ್ಪಾದನೆ ಸಂಪೂರ್ಣವಾಗಿ ಸ್ಥಗಿತವಾಗುವ ವಿಶ್ವಾಸವಿದೆ ಎಂದ ಅವರು, ಇಂತಹ ಘಟನೆಗಳನ್ನು ರಾಜಕೀಯವಾಗಿ ಬಳಕೆ ಮಾಡಬಾರದು ಎಂದರು.

    ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ. ಈಗಾಗಲೇ ಪಾಕಿಸ್ತಾನವು ಎರಡು ಭಾಗವಾಗಿದೆ. ಇತ್ತ ಜಮ್ಮು-ಕಾಶ್ಮೀರದ ಸ್ಥಳೀಯ ನಿವಾಸಿಗಳೇ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದ್ದಾರೆ. ಈ ಮೂಲಕ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ದೂರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅವ್ರ ಮುಖ ಇಂಗು ತಿಂದ ಮಂಗನಂತಾಗಿದೆ: ಬಿಜೆಪಿ ಶಾಸಕರಿಗೆ ಸಿದ್ದರಾಮಯ್ಯ ಟಾಂಗ್

    ಅವ್ರ ಮುಖ ಇಂಗು ತಿಂದ ಮಂಗನಂತಾಗಿದೆ: ಬಿಜೆಪಿ ಶಾಸಕರಿಗೆ ಸಿದ್ದರಾಮಯ್ಯ ಟಾಂಗ್

    – ಮೂಲ ಉದ್ದೇಶವನ್ನೇ ಮರೆತ ಶಾಸಕರು
    – ಬಿಜೆಪಿಯವರಿಗೆ ಸ್ವಹಿತ ಮುಖ್ಯವಾಗಿದೆ

    ಬೆಂಗಳೂರು: ಅವರ ಮುಖ ನೋಡಬೇಕು ಇಂಗು ತಿಂದ ಮಂಗನಂತಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಬಿಜೆಪಿ ಶಾಸಕರ ಕುರಿತು ವ್ಯಂಗ್ಯವಾಡಿದ್ದಾರೆ.

    ಕಲಾಪದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಮಾಜಿ ಸಿಎಂ, ಸದನದಲ್ಲಿ ಜನರ ಜ್ವಲಂತ ಸಮಸ್ಯೆ ಚರ್ಚೆ ಮಾಡುವುದನ್ನು ಬಿಟ್ಟು ರಾಜಕೀಯ ಮಾಡುವುದಕ್ಕೆ ಇಲ್ಲಿಗೆ ಬರಬೇಕೇ? ಅವರಿಗೆ ಸ್ವಹಿತ ಮುಖ್ಯವೇ ಹೊರತು ಜನರ ಹಿತ ಮುಖ್ಯವಲ್ಲ. ಅವರು ಮೂಲ ಉದ್ದೇಶವನ್ನೇ ಮರೆತುಬಿಟ್ಟಿದ್ದಾರೆ. ಇದನ್ನು ರಾಜ್ಯದ ಜನ ಕ್ಷಮಿಸುವುದದಿಲ್ಲ ಎಂದು ಹೇಳಿ ಬಿಜೆಪಿ ಶಾಸಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯಪಾಲ ವಜುಬಾಯ್ ವಾಲಾ ಅವರನ್ನು ಭೇಟಿಯಾಗಿದ್ದಕ್ಕೆ ನಮ್ಮ ಆಕ್ಷೇಪವಿಲ್ಲ. ಆದರೆ ಶಾಸಕ ಪ್ರೀತಂಗೌಡ ಮನೆ ಮೇಲೆ ಕಲ್ಲು ತೂರಾಟದ ದೂರು ನೀಡಲು ಹೋಗಿದ್ದು ಸರಿಯಲ್ಲ. ಎಲ್ಲ ರೀತಿಯ ವಿಚಾರ ಕಾನೂನು, ಸುವ್ಯವಸ್ಥೆ ವಿಚಾರ ಅಸೆಂಬ್ಲಿಯಲ್ಲಿ ಚರ್ಚೆ ಮಾಡಬೇಕಲ್ಲವೇ? ರಾಜಭವನ ಇಂತಹ ಆರೋಪಗಳನ್ನು ಚರ್ಚೆ ಮಾಡುವ ಜಾಗವೇ? ಬಿಜೆಪಿಯವರು ಕರ್ತವ್ಯದಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

    ವಿರೋಧ ಪಕ್ಷದವರಿಗೆ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿಯಿಲ್ಲ. ಈ ಬಾರಿ ಸದನ ನಡೆಸಬಾರದೆಂದು ಬಿಜೆಪಿಯವರು ತೀರ್ಮಾನ ಮಾಡಿಕೊಂಡು ಬಂದಿದ್ದರು. ಹೀಗಾಗಿ ರಾಜ್ಯಪಾಲರ ಭಾಷಣಕ್ಕೆ ಅಡ್ಡಿ ಉಂಟು ಮಾಡಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಾದರೆ ಸದನದಲ್ಲಿ ಕೇಳಬೇಕಿತ್ತು. ಅದನ್ನು ಬಿಟ್ಟು ಗಲಾಟೆ ಮಾಡಿದ ಎಂದು ಅವರು, ಅಸೆಂಬ್ಲಿ ಹೇಗೆ ನಡೆಯಬೇಕೆಂದು ಬ್ಯುಸಿನೆಸ್ ಅಡ್ವೈಸರಿ ಕಮಿಟಿಯಲ್ಲಿ ಚರ್ಚೆ ಮಾಡಬೇಕು ಎಂದು ತಿಳಿಸಿದರು.

    ಅತೃಪ್ತರ ವಿರುದ್ಧ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ದೂರು ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಈ ಹಿಂದೆ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‍ಪಿ) ಸಭೆಗೆ ಹಾಗೂ ಕಲಾಪಕ್ಕೆ ಶಾಸಕರು ಬಂದಿರಲಿಲ್ಲ. ಹೀಗಾಗಿ ವಿಪ್ ಹಾಗೂ ನೋಟಿಸ್ ಜಾರಿ ಮಾಡಿದ್ದೇವು. ಬಳಿಕ ಸ್ಪೀಕರ್ ಅವರಿಗೆ ದೂರು ನೀಡಿದ್ದೇವು ಅಷ್ಟೇ ಎಂದು ಹೇಳಿ ಜಾರಿಕೊಂಡರು.

    ಎಸ್‍ಐಟಿ ತನಿಖೆಗೆ ಸಿಎಂ ಕುಮಾರಸ್ವಾಮಿ ಅವರೇ ಘೋಷಣೆ ಮಾಡಿದ್ದಾರೆ ಹೊರತು ನಾನಲ್ಲ. ಇಂತಹ ವಿಚಾರಗಳನ್ನು ನಾನು ಘೋಷಣೆ ಮಾಡುವುದಕ್ಕೆ ಆಗುತ್ತಾ? ನಾನೊಬ್ಬ ಸದಸ್ಯನಾಗಿ ಸಲಹೆಯನ್ನು ಹೇಳಿದ್ದೇನೆ ಅಷ್ಟೇ. ಎಸ್‍ಐಟಿ ತನಿಖೆಗೆ ಆದೇಶವಾಗಿದ್ದು, ಆದಷ್ಟು ಬೇಗ ತನಿಖಾ ತಂಡವನ್ನು ಸಿಎಂ ಕುಮಾರಸ್ವಾಮಿ ಅವರು ರಚನೆ ಮಾಡುತ್ತಾರೆ ಎದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಎಸ್‍ವೈ ಗ್ರಹಗತಿಗಳ ಶಾಂತಿಗಾಗಿ ವಿಶೇಷ ಪೂಜೆ!

    ಬಿಎಸ್‍ವೈ ಗ್ರಹಗತಿಗಳ ಶಾಂತಿಗಾಗಿ ವಿಶೇಷ ಪೂಜೆ!

    ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಡಿಯೋ ಸಂಕಷ್ಟ ಎದುರಾಗಿರುವ ಹಿನ್ನೆಲೆಯಲ್ಲಿ ಗ್ರಹಗತಿಗಳ ಶಾಂತಿಗಾಗಿ ಮಂಡ್ಯದ ಬಿಜೆಪಿ ಕಾರ್ಯಕರ್ತರು ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ನಗರದ ಶಕ್ತಿ ದೇವತೆ ಕಾಳಿಕಾಂಬ ದೇವಾಲಯದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರಲ್ಲಿ ಅರ್ಚನೆ ಮಾಡಿಸಿದ ಕಾರ್ಯಕರ್ತರು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅಷ್ಟ ದಿಕ್ಕಿನಲ್ಲೂ ತಡೆ ಒಡೆದು ಗ್ರಹಗತಿಗಳಿಗೆ ಶಾಂತಿ ಮಾಡಿಸಿದರು. ಇದನ್ನು ಓದು: ಸಿದ್ದರಾಮಯ್ಯ ಒತ್ತಡಕ್ಕೆ ಮಣಿದ ಸಿಎಂ ಎಚ್‍ಡಿಕೆ!

    ಹಾಸನದ ಮೂರು ಗ್ರಹಗಳಾದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಇಬ್ಬರು ಮಕ್ಕಳಾದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ, ಸಿಎಂ ಕುಮಾರಸ್ವಾಮಿ, ಕನಕಪುರದ ಎರಡು ಗ್ರಹಗಳಾದ ಜಲಸಂಪನ್ಮೂಲ ಹಾಗೂ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಮೈಸೂರಿನ ಒಂದು ಗ್ರಹ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಶಾಂತಿ ಪೂಜೆ ಮಾಡಿಸಲಾಗಿದೆ ಎಂದು ಕಾರ್ಯಕರ್ತರು ವ್ಯಂಗ್ಯವಾಡಿದ್ದಾರೆ. ಇದನ್ನು ಓದು: ಹುಡುಗಾಟಿಕೆ ಆಡ್ಬಿಟ್ರಿ ನೀವು- ಬಿಎಸ್‍ವೈ ಆಡಿಯೋಗೆ ಹೈಕಮಾಂಡ್ ಕೆಂಡಾಮಂಡಲ

    ಈ ವೇಳೆ ಬಿ.ಎಸ್.ಯಡಿಯೂರಪ್ಪ ಅವರು ಆಪರೇಷನ್ ಕಮಲ ಆಡಿಯೋ ಪ್ರಕರಣದಿಂದ ಮುಕ್ತವಾಗಲಿ ಹಾಗೂ ಅವರು ಶೀಘ್ರದಲ್ಲಿ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಕಾರ್ಯಕರ್ತರು ಪ್ರಾರ್ಥಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯಾರ್ರೀ ಅವ್ನು ಪ್ರೀತಂ ಗೌಡ: ದೇವೇಗೌಡ ಕೆಂಡಾಮಂಡಲ

    ಯಾರ್ರೀ ಅವ್ನು ಪ್ರೀತಂ ಗೌಡ: ದೇವೇಗೌಡ ಕೆಂಡಾಮಂಡಲ

    ನವದೆಹಲಿ: ಯಾರ್ರೀ ಅವ್ನು ಪ್ರೀತಂಗೌಡ ಎಂದು ಪ್ರಶ್ನಿಸಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಿಡಿಕಾರಿದ್ದಾರೆ.

    ಆಪರೇಷನ್ ಆಡಿಯೋ ಕಮಲದ ವಿಚಾರವಾಗಿ ಮಾಧ್ಯಮಗಳು ಪ್ರಶ್ನಿಸುತ್ತಿದ್ದಂತೆ ಶಾಸಕ ಪ್ರೀತಂಗೌಡ ವಿರುದ್ಧ ದೇವೇಗೌಡ ಗರಂ ಆದರು. ನನಗೆ ಯಾವ ಪ್ರೀತಂಗೌಡನೂ ಗೊತ್ತಿಲ್ಲ. ನಾನು ಪಾರ್ಲಿಮೆಂಟ್ ನಿಂದ ಈಗ ಬಂದಿದ್ದೇನೆ. ನನಗೇನು ಗೊತ್ತಿಲ್ಲ. ಯಾರೇ ಆದರೂ ಕಾನೂನು ಪ್ರಕಾರ ಕ್ರಮ ಕೈಗೊಳುತ್ತಾರೆ ಎಂದು ತಿಳಿಸಿದರು.

    ಇಂದು ಬಿಡುಗಡೆಯಾದ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಲು ದೇವೇಗೌಡ ನಿರಾಕರಿಸಿದರು. ಈ ಕುರಿತು ಕೇಳುವುದಕ್ಕೆ ಪತ್ರಕರ್ತರಿಗೆ ನಾಚಿಕೆ ಆಗಲ್ವಾ ಎಂದು ಪ್ರಶ್ನಿಸಿ ಮಾಧ್ಯಮಗಳ ವಿರುದ್ಧ ಕಿಡಿಕಾರಿದರು. ಆಪರೇಷನ್ ಕಮಲ ಆಡಿಯೋ ಪ್ರಕರಣದ ವಿಚಾರಣೆಗೆ ಸ್ಥಳೀಯ ಪೊಲೀಸರು ಇದ್ದಾರೆ. ನಾನು ಪ್ರತಿಕ್ರಿಯೆ ನೀಡಲ್ಲ ಎಂದು ತಿಳಿಸಿದರು. ಇದನ್ನು ಓದಿ: ಗೌಡರ ಕುಟುಂಬ ಗೂಂಡಾಗಿರಿ ಕುಟುಂಬವಲ್ಲ – ಕಲ್ಲು ತೂರಾಟ ಮಾಡಿದವ್ರನ್ನ ಕ್ಷಮಿಸಲ್ಲ: ಸಿಎಂ ಎಚ್‍ಡಿಕೆ

    ಪ್ರೀತಂ ಗೌಡ ಹೇಳಿದ್ದೇನು?:
    ಸೂರ್ಯ ಚಂದ್ರ ಇರುವವರೆಗೂ ರಾಷ್ಟ್ರೀಯ ಪಕ್ಷ ದೇಶದಲ್ಲಿ ಇರುತ್ತದೆ. ಮಾಜಿ ಪ್ರಧಾನಿ ದೇವೇಗೌಡರ ವಿಕೆಟ್ ಹೋಗುತ್ತೆ. ಸಿಎಂ ಕುಮಾರಸ್ವಾಮಿ ಆರೋಗ್ಯವೂ ಸರಿಯಿಲ್ಲ. ಇದರಿಂದಾಗಿ ಜೆಡಿಎಸ್ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತದೆ. ಮೈತ್ರಿ ಸರ್ಕಾರ ಈಗಂತೂ ಬಿದ್ದರೆ ಸಾಕು ಎನ್ನುವಂತಿದೆ. ನನಗೂ ಈಗ 35-36ನೇ ವಯಸ್ಸು, ಶಾಸಕನಾಗಿ ಇದ್ದೇನೆ. ನಿನಗೆ 30 ವರ್ಷವಾಗಿದೆ. ಇನ್ನೂ 40 ವರ್ಷ ರಾಜಕಾರಣ ಮಾಡಬೇಕು. ಎಲ್ಲಾ ಒಟ್ಟಿಗೆ ಇರೋಣ ಎಂದು ಅನಾಮಿಕ ವ್ಯಕ್ತಿಯ ಜೊತೆಗೆ ಫೋನಿನಲ್ಲಿ ಪ್ರೀತಂ ಗೌಡ ಮಾತನಾಡುತ್ತಿರುವ ಆಡಿಯೋ ವೈರಲ್ ಆಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಕ್ಷ ಇಲ್ಲವೇ ರಾಜೀನಾಮೆ ಎರಡೇ ಆಯ್ಕೆ: ಉಮೇಶ್ ಜಾಧವ್

    ಪಕ್ಷ ಇಲ್ಲವೇ ರಾಜೀನಾಮೆ ಎರಡೇ ಆಯ್ಕೆ: ಉಮೇಶ್ ಜಾಧವ್

    – ಸಚಿವ ಸ್ಥಾನಕ್ಕೆ ಕ್ಷೇತ್ರದ ಜನರಿಂದ ಒತ್ತಾಯ

    ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿರಬೇಕು. ಇಲ್ಲವೇ ರಾಜೀನಾಮೆ ನೀಡಬೇಕು. ಈ ಎರಡರಲ್ಲಿ ಒಂದು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಚಿಂಚೋಳಿ ಶಾಸಕ ಉಮೇಶ್ ಜಾಧವ್ ಅವರು ರಾಜೀನಾಮೆ ನೀಡುವ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ.

    ವಿಧಾನಸಭೆ ಕಲಾಪಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕರು, ರಾಜೀನಾಮೆ ನೀಡುವ ವಿಚಾರದಲ್ಲಿ ಗೊಂದಲವಿದ್ದು, ಕ್ಷೇತ್ರದ ಮತದಾರರ ಸಲಹೆ ಪಡೆದು ಮುಂದುವರಿಯುತ್ತೇನೆ. ಸ್ಪೀಕರ್ ರಮೇಶ್ ಕುಮಾರ್ ಅವರು ನೀಡಿದ ನೋಟಿಸ್ ತಲುಪಿದ ಮೇಲೆ ಉತ್ತರ ಕೊಡುತ್ತೇನೆ. ಸ್ಥಳೀಯವಾಗಿ ಕ್ಷೇತ್ರದಲ್ಲಿ ಸಮಸ್ಯೆಯಿಂದ ಅಸಮಾಧಾನವಿದೆ ಎಂದು ಹೇಳಿದರು.

    ಬಿಜೆಪಿಯವರ ಆಪರೇಷನ್ ಕಮಲಕ್ಕೆ ನಾನು ಒಳಗಾಗಿಲ್ಲ. ಅಲ್ಲಿ ನನ್ನ ಸ್ನೇಹಿತರಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಜೊತೆ ಮುಂಬೈ ಹೋಟೆಲ್‍ನಲ್ಲಿ ಇರಲಿಲ್ಲ. ನಾನು ಬೆಂಗಳೂರಿನಲ್ಲೇ ಇದ್ದೆ ಎಂದ ಶಾಸಕರು, ನಾನು ಪಕ್ಷದಲ್ಲೇ ಇರುತ್ತೇನೆ. ಪಕ್ಷ ಬಿಟ್ಟು ಹೋಗಲ್ಲ. ಕಲಾಪದಲ್ಲಿ ಇಂದು ಬಜೆಟ್ ವಿಧೇಯಕ ಮತದಾನ ಹೀಗಾಗಿ ಬಂದಿದ್ದೇನೆ ಎಂದರು.

    ಸಿಎಲ್‍ಪಿ ಸಭೆಗೆ ಗೈರು ಆಗಿದ್ದ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕರು, ವೈಯಕ್ತಿಕ ಕಾರಣದಿಂದಾಗಿ ಹಾಜರಾಗಿಲ್ಲ. ಈ ಸಂಬಂಧ ಪಕ್ಷದ ನಾಯಕರಿಗೆ ಕಾರಣ ಕೊಟ್ಟಿದ್ದೇನೆ. ನನ್ನ ಸ್ಪಷ್ಟನೆಯಲ್ಲಿ ತಪ್ಪು ಇದ್ದರೆ ಕ್ರಮ ಕೈಗೊಳ್ಳಲಿ ಎಂದ ಅವರು, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ದೊಡ್ಡವರು. ಅವರ ಬಗ್ಗೆ ನಾನು ಮಾತನಾಡುವುದಿಲ್ಲ. ಸಮಯ ಬಂದಾಗ ಮಾತನಾಡುತ್ತೇನೆ ಎಂದು ಹೇಳಿ ಟಾಂಗ್ ಕೊಟ್ಟರು.

    ನಾನು ತಪ್ಪು ಮಾಡಿಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ನನ್ನ ನಾಯಕ. ಬಿಜೆಪಿಯಲ್ಲಿ ನನ್ನ ಗೆಳೆಯರಿದ್ದಾರೆ. ಅವರ ಜೊತೆಗೆ ಸಂಪರ್ಕದಲ್ಲಿ ಇಲ್ಲದೆ ಇರುವುದಕ್ಕೆ ಆಗುತ್ತದೆಯೇ? ಸರ್ಕಾರ ಬೀಳಿಸುವ ವಿಚಾರವನ್ನ ಮಾಡಿಲ್ಲ. ಅಷ್ಟೇ ಅಲ್ಲದೆ ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಆದರೆ ಕ್ಷೇತ್ರದ ಮತದಾರರಿಗೆ ನಾನು ಸಚಿವನಾಗಬೇಕು ಎನ್ನುವ ಆಶಯ ಎಂದು ಸಚಿವ ಸ್ಥಾನದ ಬೇಡಿಕೆಯನ್ನು ಸಮರ್ಥಿಸಿಕೊಂಡರು.

    ಕಲಾಪದಲ್ಲಿ ಕ್ಷೇತ್ರದ ಸಮಸ್ಯೆ ಕುರಿತು ಮತದಾನ ಮಾಡಬೇಕು. ಇವತ್ತೂ ಕೂಡ ಬಂದಿಲ್ಲ ಎನ್ನುವ ಕಳಂಕ ಹೊತ್ತುಕೊಳ್ಳಲು ನಾನು ಸಿದ್ಧನಿಲ್ಲ ಎಂದ ಅವರು, ನಾನು ಗೊಂದಲದಲ್ಲಿದ್ದೇನೆ. ರಾಜೀನಾಮೆ ಕುರಿತು ನಿರ್ಣಯವಾಗಿಲ್ಲ ಎಂದರು.

    ಬಿಜೆಪಿಯಿಂದ ಲೋಕಸಭೆ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕರು, ಈ ಬಗ್ಗೆ ನನಗೆ ಗೊತ್ತಿಲ್ಲ. ಮಾಧ್ಯಮಗಳಲ್ಲಿ ಹೀಗೆ ಸುದ್ದಿ ಬರುತ್ತಿರುವುದನ್ನು ನೋಡಿದ್ದೇನೆ ಅಷ್ಟೇ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದೇವೇಗೌಡರ ವಿಕೆಟ್ ಉರುಳುತ್ತೆ ಎಂದ ಪ್ರೀತಮ್ ಗೌಡ ವಿರುದ್ಧ ಪ್ರತಿಭಟನೆ

    ದೇವೇಗೌಡರ ವಿಕೆಟ್ ಉರುಳುತ್ತೆ ಎಂದ ಪ್ರೀತಮ್ ಗೌಡ ವಿರುದ್ಧ ಪ್ರತಿಭಟನೆ

    – ಮನೆಗೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಕಾರ್ಯಕರ್ತರು

    ಹಾಸನ: ಆಪರೇಷನ್ ಕಮಲದ ಆಡಿಯೋದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ವಿಕೆಟ್ ಉರುಳುತ್ತೆ ಎಂದು ಹೇಳಿದ್ದ ಬಿಜೆಪಿಯ ಹಾಸನ ಶಾಸಕ ಪ್ರೀತಮ್‍ಗೌಡ ಮನೆಗೆ ಕಲ್ಲು ಎಸೆದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಕ್ಷೇತ್ರದ ಅಭಿವೃದ್ಧಿಯನ್ನು ಬಿಟ್ಟು ಮಾಜಿ ಪ್ರಧಾನಿ ದೇವೇಗೌಡ ಅವರ ಬಗ್ಗೆ ಇಲ್ಲ ಸಲ್ಲದ ಹೇಳಿಕೆ ನೀಡಿದ್ದಾರೆ. ಒಬ್ಬ ಹಿರಿಯ ನಾಯಕನ ಕುರಿತು ಅಸಭ್ಯವಾಗಿ ಮಾತನಾಡುವುದು ಸರಿಯಲ್ಲ. ಶಾಸಕ ಪ್ರೀತಮ್‍ಗೌಡ ಮನೆಯಿಂದ ಹೊರ ಬಂದು ಕ್ಷಮೆ ಕೇಳಬೇಕು ಎಂದು ಪ್ರತಿಭಟನಾ ನಿರತ ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

    ಶಾಸಕ ಪ್ರೀತಮ್‍ಗೌಡ ವಿರುದ್ಧ ಘೋಷಣೆ ಕೂಗುತ್ತಿದ್ದಾಗ ಬಿಜೆಪಿ ಶಾಸಕರು ಅಲ್ಲಿಗೆ ಬಂದಿದ್ದಾರೆ. ಈ ವೇಳೆ ಎರಡೂ ಪಕ್ಷಗಳ ಕಾರ್ಯಕರ್ತರ ಮಧ್ಯೆ ಮಾತಿಗೆ ಮಾತು ಬೆಳೆದು ಗಲಾಟೆ ಮಾಡಿಕೊಂಡಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಲು ಯತ್ನಿಸಿದ್ದಾರೆ. ಆದರೂ ಎರಡೂ ಪಕ್ಷಗಳು ಕಾರ್ಯಕರ್ತರು ಪರಸ್ಪರ ವಾಗ್ದಾಳಿ ನಡೆಸಿ ತಳ್ಳಾಡಿದ್ದಾರೆ.

    ಪ್ರೀತಮ್‍ಗೌಡ ಹೇಳಿದ್ದೇನು?:
    ಸೂರ್ಯ ಚಂದ್ರ ಇರುವವರೆಗೂ ರಾಷ್ಟ್ರೀಯ ಪಕ್ಷ ದೇಶದಲ್ಲಿ ಇರುತ್ತದೆ. ಮಾಜಿ ಪ್ರಧಾನಿ ದೇವೇಗೌಡರ ವಿಕೆಟ್ ಹೋಗುತ್ತೆ. ಸಿಎಂ ಕುಮಾರಸ್ವಾಮಿ ಆರೋಗ್ಯವೂ ಸರಿಯಿಲ್ಲ. ಇದರಿಂದಾಗಿ ಜೆಡಿಎಸ್ ರಾಜ್ಯದಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತದೆ. ಮೈತ್ರಿ ಸರ್ಕಾರ ಈಗಂತೂ ಬಿದ್ದರೆ ಸಾಕು ಎನ್ನುವಂತಿದೆ. ನನಗೂ ಈಗ 35-36ನೇ ವಯಸ್ಸು, ಶಾಸಕನಾಗಿ ಇದ್ದೇನೆ. ನಿನಗೆ 30 ವರ್ಷವಾಗಿದೆ. ಇನ್ನೂ 40 ವರ್ಷ ರಾಜಕಾರಣ ಮಾಡಬೇಕು. ಎಲ್ಲಾ ಒಟ್ಟಿಗೆ ಇರೋಣ ಎಂದು ಅನಾಮಿಕ ವ್ಯಕ್ತಿಯ ಜೊತೆಗೆ ಫೋನಿನಲ್ಲಿ ಪ್ರೀತಮ್‍ಗೌಡ ಮಾತನಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸದನಕ್ಕೆ ಹಾಜರಾಗುವಂತೆ ಬಿಜೆಪಿ ಶಾಸಕರಿಗೆ ವಿಪ್ ಜಾರಿ

    ಸದನಕ್ಕೆ ಹಾಜರಾಗುವಂತೆ ಬಿಜೆಪಿ ಶಾಸಕರಿಗೆ ವಿಪ್ ಜಾರಿ

    ಬೆಂಗಳೂರು: ಪಕ್ಷದ ಎಲ್ಲಾ ಶಾಸಕರು ಫೆಬ್ರವರಿ 13 ಹಾಗೂ 14ರಂದು ಕಡ್ಡಾಯವಾಗಿ ವಿಧಾನಸಭಾ ಕಲಾಪಕ್ಕೆ ಹಾಜರಾಗಬೇಕು ಎಂದು ಬಿಜೆಪಿ ವಿಪ್ ಜಾರಿ ಮಾಡಿದೆ.

    ಸ್ಪೀಕರ್ ರಮೇಶ್ ಕುಮಾರ್ ಅವರು ಸದನವನ್ನು ಮುಂದೂಡುವವರೆಗೂ ಬಿಜೆಪಿ ಶಾಸಕರು ಕಲಾಪದಲ್ಲಿ ಹಾಜರು ಇರಲೆಬೇಕು ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ ಸುನೀಲ್ ಕುಮಾರ್ ಅವರು ವಿಪ್‍ನಲ್ಲಿ ಜಾರಿಗೊಳಿಸಿದ್ದಾರೆ.

    ಈ ಮೂಲಕ ಹಣಕಾಸು ವಿಧೇಯಕ ಮಂಡನೆ ವೇಳೆ ಮೈತ್ರಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಪ್ಲಾನ್ ಮಾಡಲಾಗಿದೆ. ಇತ್ತ ಕಾಂಗ್ರೆಸ್ ಅತೃಪ್ತ ಶಾಸಕರು ಕಲಾಪಕ್ಕೆ ಹಾಜರಾಗದೇ ದೂರ ಉಳಿಯುತ್ತಿದ್ದಾರೆ. ಇದನ್ನೆ ಅಸ್ತ್ರವಾಗಿ ಪ್ರಯೋಗಿಸಿ ಹಣಕಾಸು ವಿಧೇಯಕಕ್ಕೆ ಬೆಂಬಲ ಸಿಗದಂತೆ ನೋಡಿಕೊಳ್ಳಲು ಬಿಜೆಪಿಯಿಂದ ಸಿದ್ಧತೆ ನಡೆದಿದೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

     

    ಆಪರೇಷನ್ ಕಮಲ ಆಡಿಯೋ ಪ್ರಕರಣ ವಿಚಾರಣೆಯ ಕುರಿತು ಕಲಾಪದಲ್ಲಿ ಇಂದು ಆಡಳಿತ ಪಕ್ಷ ಹಾಗೂ ವಿಪಕ್ಷದ ಶಾಸಕರ ಮಧ್ಯೆ ವಾಗ್ದಾಳಿಯೇ ನಡೆಯಿತು. ಹೀಗಾಗಿ ಸದನವು ಸಂಜೆ 6.45ರವರೆಗೆ ನಡೆಯಬೇಕಾಯಿತು. ಆದರೂ ತನಿಖೆಯನ್ನು ಎಸ್‍ಐಟಿಗೆ ಒಪ್ಪಿಸಬೇಕೋ? ಅಥವಾ ಸದನ ಸಮಿತಿಗೆ ನೀಡಬೇಕು ಎನ್ನುವುದು ನಿರ್ಧಾರವಾಗಲಿಲ್ಲ. ಇದರಿಂದಾಗಿ ಕಲಾಪವನ್ನು ಬುಧವಾರ ಬೆಳಗ್ಗೆ 10.30ಕ್ಕೆ ಮುಂದೂಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜೀನಾಮೆಗೆ ನಿರ್ಧರಿಸಿದ್ದ ಸ್ಪೀಕರ್ ಮನವೊಲಿಸಲು ಮೈತ್ರಿ ನಾಯಕರು ಸುಸ್ತೋ ಸುಸ್ತೋ!

    ರಾಜೀನಾಮೆಗೆ ನಿರ್ಧರಿಸಿದ್ದ ಸ್ಪೀಕರ್ ಮನವೊಲಿಸಲು ಮೈತ್ರಿ ನಾಯಕರು ಸುಸ್ತೋ ಸುಸ್ತೋ!

    ಬೆಂಗಳೂರು: ಆಪರೇಷನ್ ಕಮಲ ಆಡಿಯೋ ವಿಚಾರವಾಗಿ ರಾಜೀನಾಮೆಗೆ ಮುಂದಾಗಿದ್ದ ಸ್ಪೀಕರ್ ರಮೇಶ್ ಕುಮಾರ್ ಅವರ ಮನವೊಲಿಸುವಲ್ಲಿ ಮೈತ್ರಿ ಸರ್ಕಾರದ ನಾಯಕರು ಸುಸ್ತಾಗಿದ್ದಾರಂತೆ.

    ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಜಿ.ಪರಮೇಶ್ವರ್ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಅವರು ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಮನವೊಲಿಸಲು ಯತ್ನಿಸಿದ್ದಾರೆ. ನೀವು ರಾಜೀನಾಮೆ ನೀಡಿದರೆ ತಪ್ಪಾಗುತ್ತದೆ. ಆಪರೇಷನ್ ಕಮಲ ಆಡಿಯೋ ಪ್ರಕರಣದ ಕುರಿತು ವಿಚಾರಣೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನು ಓದು: 50 ಕೋಟಿಯ ಕಸದ ಬುಟ್ಟಿ ತಲೆ ಮೇಲೆ ಇಟ್ಕೊಂಡು ಹೊರಗೆ ಹೋಗೋಕ್ಕಾಗಲ್ಲ- ಸ್ಪೀಕರ್ ಬೇಸರ

    ಆಪರೇಷನ್ ಕಮಲದ ಆಡಿಯೋ ಪ್ರಕರಣದಲ್ಲಿ ನನ್ನ ಹೆಸರು ಪ್ರಸ್ತಾಪ ಮಾಡಿದ್ದು ಬೇಸರ ತಂದಿದೆ. ಅಷ್ಟೇ ಅಲ್ಲದೆ 50 ಕೋಟಿ ರೂ. ನೀಡುವ ವಿಚಾರವನ್ನು ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಯಿಂದ ಮನಸ್ಸು ಭಾರವಾಗಿದೆ. 15 ದಿನ ನನ್ನನ್ನ ನನ್ನ ಪಾಡಿಗೆ ಬಿಟ್ಟುಬಿಡಿ. ಒಂದಿಷ್ಟು ಕಾಲ ವಿಶ್ರಾಂತಿ ಪಡೆಯುತ್ತೇನೆ. ಉಪಸಭಾಧ್ಯಕ್ಷರು ಸದನ ನಡೆಸಲಿ ಎಂದು ರಮೇಶ್ ಕುಮಾರ್ ಅವರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಇದನ್ನು ಓದು: 

    ರಮೇಶ್ ಕುಮಾರ್ ಅವರು ಇಂದು ವಿಧಾನಸಭಾ ಅಧಿವೇಶನದ ಆರಂಭದಲ್ಲೇ ಆಪರೇಷನ್ ಕಮಲದ ಆಡಿಯೋ ವಿಚಾರವಾಗಿ ಅಸಮಾಧಾನ ಹೊರಹಾಕಿದ್ದರು. ಅಷ್ಟೇ ಅಲ್ಲದೆ ಸ್ಪೀಕರ್ ಸ್ಥಾನದ ಮೌಲ್ಯವನ್ನು ಶಾಸಕರಿಗೆ ತಿಳಿಸಿಕೊಡುವ ಪ್ರಯತ್ನ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv