Tag: Operation Shiva

  • ಅಮರನಾಥ ಯಾತ್ರಿಕರಿಗಾಗಿ ‘ಆಪರೇಷನ್ ಶಿವ’

    ಅಮರನಾಥ ಯಾತ್ರಿಕರಿಗಾಗಿ ‘ಆಪರೇಷನ್ ಶಿವ’

    ಶ್ರೀನಗರ: ಪಹಲ್ಗಾಮ್ ದಾಳಿ ಬೆನ್ನಲ್ಲೇ ಅಮರನಾಥ ಯಾತ್ರಿಕರಿಗೆ ಬಹುಪದರದ ಗರಿಷ್ಠ ಭದ್ರತೆ ಕಲ್ಪಿಸುವ ಉದ್ದೇಶದಿಂದ ಭಾರತೀಯ ಸೇನೆ, ಸಿಆರ್‌ಪಿಎಫ್ ಹಾಗೂ ಕಾಶ್ಮೀರ ಪೊಲೀಸ್ ಇಲಾಖೆ ಜಂಟಿಯಾಗಿ `ಆಪರೇಷನ್ ಶಿವ’ (Operation Shiva) ಯೋಜನೆಯನ್ನು ಜಾರಿಗೆ ತಂದಿದೆ.

    ‘ಆಪರೇಷನ್ ಶಿವ’ ಅಮರನಾಥ ಯಾತ್ರಿಕರಿಗೆ ಹೆಜ್ಜೆ ಹೆಜ್ಜೆಗೂ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಮಾಡಲು ಅನುಕೂಲ ಮಾಡಿಕೊಡಲಿದೆ. ಇನ್ನೂ ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭಗೊಳ್ಳಲಿದ್ದು ಆಗಸ್ಟ್ 9ಕ್ಕೆ ಮುಗಿಯಲಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 14 ದಿನಗಳು ಯಾತ್ರೆ ಅವಧಿ ತಗ್ಗಲಿದೆ. ಭದ್ರತಾ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಕಾಮೆಡ್‌-ಕೆ: ಎಕ್ಸಲೆಂಟ್ ಮೂಡುಬಿದಿರೆಗೆ ರಾಷ್ಟ್ರಮಟ್ಟದಲ್ಲಿ ಮೊದಲ ರ‍್ಯಾಂಕ್

    ಸುಧಾರಿತ ಭದ್ರತಾ ತಂತ್ರಜ್ಞಾನ, ಸಿಸಿಟಿವಿ, ಜಾಮರ್‌ಗಳ ಅಳವಡಿಕೆ, ಡ್ರೋನ್ ಕ್ಯಾಮೆರಾ, ಸಶಸ್ತ್ರ ಪಡೆ ಕಣ್ಗಾವಲು ಸೇರಿದಂತೆ ಗರಿಷ್ಠ ಮಟ್ಟದ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭದ್ರತೆಯ ದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಚಿನ್ನಸ್ವಾಮಿ ಸ್ಟೇಡಿಯಂಗೆ ಸಿಐಡಿ ತಂಡ ಭೇಟಿ – ಕಾಲ್ತುಳಿತ ಸ್ಥಳದಲ್ಲಿ ಪರಿಶೀಲನೆ

    ಸುಮಾರು 50,000 ಅರೆಸೆನಾಪಡೆ ಸಿಬ್ಬಂದಿ ಮತ್ತು ಕಾಶ್ಮೀರ ಪೊಲೀಸರು ನಿತ್ಯ ಸ್ಫೋಟಕಗಳ ಪತ್ತೆ ಕಾರ್ಯಾಚರಣೆ ನಡೆಸಲಿದ್ದಾರೆ. ನೋಂದಾಯಿತ ಯಾತ್ರಿಕರಿಗೆ ‘ಆರ್‌ಎಫ್‌ಐಡಿ’ ಟ್ಯಾಗ್ ನೀಡಲಾಗಿದ್ದು, ಅಮರನಾಥ ಯಾತ್ರೆಯ ಪ್ರತಿಯೊಂದು ಕ್ಷಣದ ಮೇಲೂ ಇದರ ಮೂಲಕ ನಿಗಾವಹಿಸಬಹುದಾಗಿದೆ. ಇದನ್ನೂ ಓದಿ: ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಹೆದ್ದಾರಿಯಲ್ಲಿ ತುರ್ತು ಭೂಸ್ಪರ್ಶ

  • ಅಮರನಾಥ ಯಾತ್ರೆಗೆ ಉಗ್ರರ ದಾಳಿ ಭೀತಿ – ಭದ್ರತಾ ಪಡೆಗಳಿಂದ ʻಆಪರೇಷನ್ ಶಿವʼಆರಂಭ!

    ಅಮರನಾಥ ಯಾತ್ರೆಗೆ ಉಗ್ರರ ದಾಳಿ ಭೀತಿ – ಭದ್ರತಾ ಪಡೆಗಳಿಂದ ʻಆಪರೇಷನ್ ಶಿವʼಆರಂಭ!

    ಶ್ರೀನಗರ: ಅಮರನಾಥ ಯಾತ್ರೆಗೆ ಉಗ್ರರ ಭೀತಿ ಇರುವುದರಿಂದ ಯಾತ್ರೆಯನ್ನು ಸುಗಮವಾಗಿ ನಡೆಸಲು ಭಾರತೀಯ ಭದ್ರತಾ ಪಡೆಗಳು ʻಆಪರೇಷನ್ ಶಿವʼ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿವೆ.

    ಯಾತ್ರೆ ಜು.3 ರಂದು ಪ್ರಾರಂಭವಾಗಿ ಆ.9 ರವರೆಗೆ 38 ದಿನಗಳವರೆಗೆ ಅಮರನಾಥ ಯಾತ್ರೆ ನಡೆಯಲಿದೆ. ಈ ಅವಧಿಯಲ್ಲಿ ಹಿಮಾಲಯದ 3,880 ಮೀಟರ್ ಎತ್ತರದಲ್ಲಿರುವ ಶಿವನ ಗುಹಾ ದೇವಾಲಯಕ್ಕೆ ಲಕ್ಷಾಂತರ ಭಕ್ತರು ಭೇಟಿ ನೀಡಲಿದ್ದಾರೆ. ಭಕ್ತರ ಸುರಕ್ಷತೆಗಾಗಿ ಸೇನೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಯಾತ್ರಿ ನಿವಾಸದಿಂದ ಇಡೀ ಮಾರ್ಗದಲ್ಲಿ ಭದ್ರತೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: Operation Sindoor | ಮೋಸ್ಟ್‌ ಡೇಂಜರಸ್‌ ಉಗ್ರರನ್ನ ತಯಾರು ಮಾಡ್ತಿದ್ದ ತಾಣಗಳು ಉಡೀಸ್‌

    ಯಾತ್ರೆಯ ಸಮಯದಲ್ಲಿ ಭದ್ರತಾ ಪಡೆಗಳು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಗೃಹ ಸಚಿವ ಅಮಿತ್ ಶಾ ನಿರ್ದೇಶನ ನೀಡಿದ್ದಾರೆ. ಅಮರನಾಥ ಯಾತ್ರೆ ನಡೆಯುವ ಮಾರ್ಗ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಮತ್ತು ಅರೆಸೈನಿಕ ಅಧಿಕಾರಿಗಳು, ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ.

    ಮಾರ್ಗಗಳು, ಶಿಬಿರಗಳು ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ 50,000ಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಲಾಗಿದೆ. ಡ್ರೋನ್‌ಗಳು ಮತ್ತು ಹೆಲಿಕಾಪ್ಟರ್‌ಗಳನ್ನು ಸಹ ಬಳಸಲಾಗುವುದು. ಯಾತ್ರಿಕರನ್ನು ಪರೀಕ್ಷಿಸಲು ಬಾಡಿ ಸ್ಕ್ಯಾನರ್‌ಗಳು, ಸಿಸಿಟಿವಿ ಕ್ಯಾಮೆರಾಗಳು ಸೇರಿದಂತೆ ಮೂರು ಹಂತದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗುತ್ತದೆ. ಭದ್ರತಾ ಪಡೆಗಳು ಈಗಾಗಲೇ ದೇಗುಲಕ್ಕೆ ಹೋಗುವ ಮಾರ್ಗದ 3D ಮ್ಯಾಪಿಂಗ್ ಮಾಡಿವೆ. ಎಲ್ಲಾ ನೋಂದಾಯಿತ ಯಾತ್ರಿಕರಿಗೆ ಅವರ ನೈಜ-ಸಮಯದ ಟ್ರ್ಯಾಕಿಂಗ್ RFID ಟ್ಯಾಗ್‌ಗಳನ್ನು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ಎಚ್ಚೆತ್ತುಕೊಂಡಿರುವ ಸರ್ಕಾರ ಈ ಭದ್ರತಾ ವ್ಯವಸ್ಥೆಗಳನ್ನು ಮಾಡಿದೆ. ಇದನ್ನೂ ಓದಿ: Operation Sindoor – 1 ಬ್ರಹ್ಮೋಸ್‌ ಕ್ಷಿಪಣಿಯ ದರ ಎಷ್ಟು? ಸ್ಪೀಡ್‌ ಎಷ್ಟಿರುತ್ತೆ?