Tag: Operation Sindhura

  • ಪಾಕ್‌ ದಾಳಿಯನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿದ್ದೇವೆ – ಭಾರತೀಯ ಸೇನೆ ಅಭಯ

    ಪಾಕ್‌ ದಾಳಿಯನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿದ್ದೇವೆ – ಭಾರತೀಯ ಸೇನೆ ಅಭಯ

    – 15 ನಗರಗಳ ಮೇಲಿನ ದಾಳಿಗಳನ್ನೂ ಹತ್ತಿಕ್ಕಿದ ಸೇನೆ

    ನವದೆಹಲಿ: ಪಾಕಿಸ್ತಾನ ಸಶಸ್ತ್ರಪಡೆಗಳು (Pakistan Armed Forces) ಮೇ 8 ಮತ್ತು 9ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ನಡೆಸಿದ ದಾಳಿಯನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿರುವುದಾಗಿ ಭಾರತೀಯ ಸೇನೆ (Indian Army) ಅಧಿಕೃತ ಹೇಳಿಕೆ ನೀಡಿದೆ.

    ಈ ಕುರಿತು ಇಂಡಿಯನ್‌ ಆರ್ಮಿ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಪಾಕಿಸ್ತಾನ ಸಶಸ್ತ್ರ ಪಡೆಗಳು ಇದೇ ಮೇ 08 ಮತ್ತು 09ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು (Drones) ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿಕೊಂಡು ಅನೇಕ ದಾಳಿಗಳನ್ನು ನಡೆಸಿದವು. ಜಮ್ಮು ಮತ್ತು ಕಾಶ್ಮೀರದ (Jammu and Kashmir) ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆ ಮಾಡಿವೆ. ಆದ್ರೆ ಪಾಕ್‌ನ ಡ್ರೋನ್ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಿ, ಸಿಎಫ್‌ವಿಗಳಿಗೆ ತಕ್ಕ ಉತ್ತರ ನೀಡಲಾಗಿದೆ ಎಂದು ಸೇನೆ ಹೇಳಿದೆ. ಇದನ್ನೂ ಓದಿ: ಪಾಕ್‌ನ ಪ್ರಮುಖ ಎಫ್‌-16 ಹೊಡೆದುರುಳಿಸಿದ ಭಾರತೀಯ ವಾಯು ಸೇನೆ

    ಅಲ್ಲದೇ ಭಾರತೀಯ ಸೇನೆಯು ರಾಷ್ಟ್ರದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಬದ್ಧವಾಗಿದೆ. ಎಲ್ಲಾ ದುಷ್ಟ ವಿನ್ಯಾಸಗಳಿಗೆ ಬಲದಿಂದ ಪ್ರತಿಕ್ರಿಯಿಸಲಾಗುವುದು ಎಂದು ಹೇಳಿದೆ. ಇದನ್ನೂ ಓದಿ: ಸಾಂಬಾದಲ್ಲಿ ಹಲವು ಪಾಕ್ ಉಗ್ರರ ಹತ್ಯೆ

    15 ನಗರಗಳ ಮೇಲಿನ ದಾಳಿ ಹತ್ತಿಕ್ಕಿದ ಸೈನ್ಯ:
    ಆಪರೇಷನ್‌ ಸಿಂಧೂರ ಕಾರ್ಯಾಚರಣೆಯ ಒಂದು ದಿನದ ನಂತರ ನಿನ್ನೆ ರಾತ್ರಿ (ಮೇ 8) ಮತ್ತು ಇಂದು ಬೆಳಿಗ್ಗೆ (ಮೇ 9) ಪಾಕಿಸ್ತಾನವು ಭಾರತದ ಮೇಲೆ ಮತ್ತೆ ದಾಳಿ ಮಾಡಲು ಪ್ರಯತ್ನಿಸಿದೆ. ಇದನ್ನೂ ಓದಿ: ಜಮ್ಮುವಿನ ಮೇಲೆ ದಾಳಿಗೆ ಯತ್ನಿಸಿದ್ದ ಪಾಕ್‌ನ 50ಕ್ಕೂ ಹೆಚ್ಚು ಡ್ರೋನ್‌ಗಳು ಮಟಾಶ್‌

    ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಗುಜರಾತ್ ಸೇರಿದಂತೆ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿರುವ 15 ನಗರಗಳಲ್ಲಿನ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಉದ್ವಿಗ್ನತೆ ಹೆಚ್ಚಿಸಲು ಪಾಕ್ ಪ್ರಯತ್ನಿಸಿತು. ಆದರೆ, ಆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಇದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಇದನ್ನೂ ಓದಿ: ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನ ತ್ಯಜಿಸುವಂತೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಜೆಡಿ ವ್ಯಾನ್ಸ್

  • ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನ ತ್ಯಜಿಸುವಂತೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಜೆಡಿ ವ್ಯಾನ್ಸ್

    ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನ ತ್ಯಜಿಸುವಂತೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಜೆಡಿ ವ್ಯಾನ್ಸ್

    – ಭಾರತ-ಪಾಕ್ ವಿಷಯದಲ್ಲಿ ಮಧ್ಯ ಪ್ರವೇಶಿಸಲ್ಲ, ನಮಗೆ ಸಂಬಂಧಿಸಿಲ್ಲ; ಯುಎಸ್‌ ಉಪಾಧ್ಯಕ್ಷ

    ವಾಷಿಂಗ್ಟನ್‌: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ. ಈ ವಿಷಯದಲ್ಲಿ ಅಮೆರಿಕ (America) ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ. ಇದು ನಮಗೆ ಸಂಬಂಧಿಸಿದ ವಿಷಯವಲ್ಲ ಎಂದೂ ತಿಳಿಸಿದೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ (JD Vance), 2 ಪರಮಾಣು ಶಕ್ತಿ ಹೊಂದಿರುವ ರಾಷ್ಟ್ರಗಳ ನಡುವೆ ಸಂಘರ್ಷ ಹೆಚ್ಚಾಗುವ ಅಪಾಯದ ಬಗ್ಗೆ ಅಮೆರಿಕ ಚಿಂತಿಸಿದೆ. ಆದರೆ, ಅವರ ಕ್ರಮಗಳನ್ನು ನಾವು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಉಭಯ ದೇಶಗಳು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಲು ವಾಷಿಂಗ್ಟನ್ ಪ್ರೋತ್ಸಾಹಿಸುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಜಮ್ಮು ಮೇಲೆ ಪಾಕಿಸ್ತಾನ ಕ್ಷಿಪಣಿ ದಾಳಿ ಯತ್ನ – ಮಿಸೈಲ್‌, ಡ್ರೋನ್‌ ಹೊಡೆದುರುಳಿಸಿದ ಭಾರತ

    ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ (Donald Trump) ಮತ್ತು ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರ ಮಾತನ್ನು ವ್ಯಾನ್ಸ್ ಪುನರುಚ್ಚರಿಸಿದ್ದಾರೆ. ʻನಾವು ಸಂಘರ್ಷವನ್ನು ತಡೆಯಲು ಆಶಿಸುತ್ತೇವೆ. ಆದರೆ, ಯಾವುದೇ ದೇಶವನ್ನು ನಿರಾಯುಧೀಕರಣ ಮಾಡಲು ಸಾಧ್ಯವಿಲ್ಲʼ ಎಂದು ಹೇಳಿದ್ದಾರೆ. ಪ್ರಾದೇಶಿಕ ಸಂಘರ್ಷ ಅಥವಾ ಪರಮಾಣು ಯುದ್ಧದ ಸಾಧ್ಯತೆಯ ಬಗ್ಗೆಯೂ ಅವರು ಮಾತನಾಡಿದ್ದಾರೆ. ಆದರೆ, ರಾಜತಾಂತ್ರಿಕ ಪ್ರಯತ್ನಗಳು ಮತ್ತು ಎರಡೂ ಕಡೆಯವರ ಸಂಯಮದಿಂದ ಶಾಂತಿ ನೆಲೆಸುವ ಭರವಸೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಾಕ್‌ನ ಪ್ರಮುಖ ಎಫ್‌-16 ಹೊಡೆದುರುಳಿಸಿದ ಭಾರತೀಯ ವಾಯು ಸೇನೆ

    ಕಾರ್ಯದರ್ಶಿ ರುಬಿಯೊ ಎರಡೂ ದೇಶಗಳ ನಾಯಕರೊಂದಿಗೆ ಪ್ರತ್ಯೇಕವಾಗಿ ಮಾತನಾಡಿದ್ದಾರೆ. ತಕ್ಷಣವೇ ಉದ್ವಿಗ್ನತೆ ಕಡಿಮೆ ಮಾಡುವಂತೆ ಒತ್ತಾಯಿಸಿದ್ದಾರೆ. ಭಯೋತ್ಪಾದನೆ ವಿರುದ್ಧ ಹೋರಾಡಲು ಅಮೆರಿಕ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಉಭಯ ದೇಶಗಳು ಶಾಂತಿ ಕಾಪಾಡಿಕೊಳ್ಳಬೇಕು. ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.

    ಅಮೆರಿಕ ಈ ವಿಷಯದಲ್ಲಿ ತಟಸ್ಥವಾಗಿರಲು ನಿರ್ಧರಿಸಿದೆ. ಆದರೆ, ಶಾಂತಿ ಸ್ಥಾಪನೆಗೆ ತನ್ನ ಬೆಂಬಲವನ್ನು ನೀಡುತ್ತದೆ. ಉಭಯ ದೇಶಗಳು ಸಂಯಮದಿಂದ ವರ್ತಿಸಬೇಕೆಂದು ಅಮೆರಿಕ ಕೋರಿದೆ. ಇದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಡುವುದನ್ನು ತಪ್ಪಿಸಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌

    ಗುರುವಾರ ರಾತ್ರಿ ಜಮ್ಮುವಿನ ಮೇಲೆ ಪಾಕ್‌ ನೂರು ಕ್ಷಿಪಣಿಗಳಿಂದ ದಾಳಿ ಬಳಿಕ ಭಾರತ ತನ್ನ ದಾಳಿಯನ್ನು ತೀವ್ರಗೊಳಿಸಿದೆ. ಭಾರತದ ದಾಳಿಗೆ ಇಡೀ ಪಾಕ್‌ ಜೀವಭಯದಲ್ಲಿ ನಡುಗುತ್ತಿದೆ. ಇದನ್ನೂ ಓದಿ: ಭಾರತ-ಪಾಕ್ ಗಡಿಯಲ್ಲಿ ಹೈ-ಅಲರ್ಟ್ ಘೋಷಣೆ

  • ಆಪರೇಷನ್‌ ಸಿಂಧೂರ, 4 ದಿನ ಕ್ವಾರಂಟೈನ್‌ – ಕಾರ್ಯಾಚರಣೆ ಯಶಸ್ವಿಯಾಗಿದ್ದು ಹೇಗೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಆಪರೇಷನ್‌ ಸಿಂಧೂರ, 4 ದಿನ ಕ್ವಾರಂಟೈನ್‌ – ಕಾರ್ಯಾಚರಣೆ ಯಶಸ್ವಿಯಾಗಿದ್ದು ಹೇಗೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ನವದೆಹಲಿ: ಒಂದು ಕಡೆ ಮಾಕ್‌ ಡ್ರಿಲ್‌ಗೆ ಸೂಚನೆ, ಇನ್ನೊಂದು ಸಮರಾಭ್ಯಾಸ ಪೋಸ್ಟ್‌, ಮತ್ತೊಂದು ಕಡೆ ನೌಕಾ ದಳದಿಂದ ಕ್ಷಿಪಣಿ ಪ್ರಯೋಗ… ಹೀಗೆ ಅಭ್ಯಾಸ ಮಾಡುತ್ತಿದ್ದಾಗ ಭಾರತ (India) ಯಾವ ರೀತಿ ಪ್ರತೀಕಾರ ತೀರಿಸುತ್ತದೆ ಎಂಬ ಪ್ರಶ್ನೆ ಎದ್ದಿತ್ತು. ಭಾರತ ದಾಳಿ ನಡೆಸಿದರೆ ಅಣು ಬಾಂಬ್‌ ಹಾಕುತ್ತೇವೆ. ಕ್ಷಿಪಣಿ ದಾಳಿ ಮಾಡುತ್ತೇವೆ ಎಂದು ಪಾಕಿಸ್ತಾನ ಬೆದರಿಸಿತ್ತು. ಈ ಬೆದರಿಕೆಗೆ ಜಗ್ಗದ ಭಾರತ ಮಧ್ಯರಾತ್ರಿ ಪಾಕ್‌ ಮಲಗಿದ್ದಾಗ ಆಪರೇಷನ್‌ ಸಿಂಧೂರ (Operation Sindhura)  ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿ ಉಗ್ರರ ನೆಲೆಗಳನ್ನು ಯಶಸ್ವಿಯಾಗಿ ಧ್ವಂಸಗೊಳಿಸಿದೆ.

    ಈ ಕಾರ್ಯಾಚರಣೆಗೆʼಆಪರೇಷನ್ ಸಿಂಧೂರʼ ಹೆಸರನ್ನು ಸೂಚಿಸಿದ್ದೇ ಪ್ರಧಾನಿ ಮೋದಿ. ಸಿಂಧೂರ ಎಂದರೆ ಶಕ್ತಿಯ ಸಂಕೇತ. ಏಪ್ರಿಲ್ 22ರಂದು ಪಹಲ್ಗಾಮ್ ದಾಳಿ ಬಳಿಕ ಒಬ್ಬ ಉಗ್ರನನ್ನೂ ಬಿಡುವುದಿಲ್ಲ.  ಊಹೆಗೂ ನಿಲುಕದ ರೀತಿ ಬೆಲೆ ತೆರಬೇಕಾಗುತ್ತೆ ಅಂತ ಬಿಹಾರದಲ್ಲಿ ಪ್ರಧಾನಿ ಮೋದಿ ಗುಡುಗಿದ್ದರು. ಆ ಬಳಿಕ ವಾರ್ ರೂಂನಲ್ಲಿ ಕುಳಿತ ಮೋದಿ ಬ್ಯಾಕ್ ಟು ಬ್ಯಾಕ್ ಮ್ಯಾರಥಾನ್ ಸಭೆಗಳನ್ನು ನಡೆಸಿದ್ದರು.  ಆ ಮೂಲಕ ಆಪರೇಷನ್ ಸಿಂಧೂರ ಕಾರ್ಯರೂಪಕ್ಕೆ ಪ್ಲಾನ್ ಮಾಡಿದ್ದರು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

     

    ಪ್ಲಾನ್ ನಡೆದಿದ್ದೇಗೆ?
    ಉಗ್ರರ 21 ಅಡುಗುತಾಣ ಭಾರತದ ಗುಪ್ತಚರ ಇಲಾಖೆ ಗುರುತಿಸಿತ್ತು. ಏ.29 ರಂದು ಮೋದಿ ಮೊದಲ ಉನ್ನತ ಮಟ್ಟದ ಸಭೆ ನಡೆಸಿದರು. ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್‌ ಜನರಲ್ ಅನಿಲ್ ಚೌಹಾಣ್, ಭೂಸೇನೆ, ವಾಯುಸೇನೆ, ನೌಕಾಸೇನೆಯ ಮುಖ್ಯಸ್ಥರು ಭಾಗಿಯಾಗಿದ್ದರು. ಸಶಸ್ತ್ರ ಪಡೆಗಳಿಗೆ ಪರಮಾಧಿಕಾರ ನೀಡಿದ ಮೋದಿ ಪಾಕ್‌ಗೆ ನುಗ್ಗಿ ಹೊಡೆಯಬೇಕು ಎಂದು ಸೂಚಿಸಿದ್ದರು. ಇದನ್ನೂ ಓದಿ: ಆಪರೇಷನ್‌ ಸಿಂಧೂರ | ಉಗ್ರರ ಶವಗಳನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸಿದ ಭಿಕಾರಿಸ್ತಾನ್‌!

    ಮೇ 3 ರಂದು ಮೋದಿ ಎರಡನೇ ಉನ್ನತ ಮಟ್ಟದ ಸಭೆ ನಡೆಸಿದರು. ಪಾಕ್‌ನಲ್ಲಿರುವ ಉಗ್ರರ ನೆಲೆಗಳ ಮೇಲೆ ದಾಳಿಗೆ ನಿರ್ಣಯ ಕೈಗೊಳ್ಳಲಾಯಿತು. ಈ ಸಂದರ್ಭದಲ್ಲಿ ದಾಳಿ ನಡೆಸಲು ಆಯ್ಕೆಯಾದ ಅಧಿಕಾರಿಗಳನ್ನು ಸೌತ್ ಬ್ಲಾಕ್‌ನಲ್ಲಿ ಇರಿಸಲಾಗಿತ್ತು. ಅಧಿಕಾರಿಗಳಿಗೆ ಯಾರ ಸಂಪರ್ಕವೂ ಇಲ್ಲದಂತೆ ಕ್ವಾರಂಟೈನ್‌ ಮಾಡಲಾಗಿತ್ತು.

    ಮೇ 5 ರಂದು ಅಜಿತ್‌ ದೋವಲ್‌ ಅವರು ಉಗ್ರರ ವಿರುದ್ಧದ ಕಾರ್ಯಾಚರಣೆ ಹೇಗೆ ನಡೆಸಬೇಕು ಎಂಬುದರ ಬಗ್ಗೆ ವಿವರಣೆ ನೀಡಿದರು. ವಿವರಣೆ ಒಪ್ಪಿಗೆ ಸೂಚಿಸಿದ ಮೋದಿ ಆಪರೇಷನ್ ಸಿಂಧೂರ ಅನುಮತಿ ನೀಡಿದ ಬಳಿಕ ಮೇ 6 ಮತ್ತು 7 ರ ಮಧ್ಯರಾತ್ರಿ ಆಪರೇಷನ್‌ ಸಿಂಧೂರಕ್ಕೆ ಮುಹೂರ್ತ ಫಿಕ್ಸ್‌ ಆಯ್ತು. ಈ ಮುಹೂರ್ತದಂತೆ ವಾಯುನೆಲೆಯಿಂದ ಮಧ್ಯರಾತ್ರಿ ಹಾರಿದ ರಫೇಲ್‌ ವಿಮಾನಗಳು ಉಗ್ರರ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ ಧ್ವಂಸ ಮಾಡಿ ಮರಳಿತು. ಇದನ್ನೂ ಓದಿ: ಏರ್‌ಸ್ಟ್ರೈಕ್‌ಗೆ ಪಾಕ್‌ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ – ವ್ಯವಹಾರವೇ ಸ್ಥಗಿತ

    ಮೇ 7 ರ ಮಧ್ಯರಾತ್ರಿ 1:51ಕ್ಕೆ ಪಹಲ್ಗಾಮ್‌ ನರಮೇಧಕ್ಕೆ Justice is Served ಜೈ ಹಿಂದ್‌ ಎಂದು ಎಡಿಜಿಪಿ ಇಂಡಿಯನ್‌ ಆರ್ಮಿ ಪೋಸ್ಟ್‌ ಮಾಡುವ ಮೂಲಕ ವಿಶ್ವಕ್ಕೆ ಅಪರೇಷನ್‌ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಬಗ್ಗೆಅಧಿಕೃತವಾಗಿ ತಿಳಿಸಿತು.

  • ಕಸಬ್‌, ಡೇವಿಡ್‌ ಹೆಡ್ಲಿ ತರಬೇತಿ ಪಡೆದ ಕ್ಯಾಂಪ್‌ ಧ್ವಂಸ: ಭಾರತ

    ಕಸಬ್‌, ಡೇವಿಡ್‌ ಹೆಡ್ಲಿ ತರಬೇತಿ ಪಡೆದ ಕ್ಯಾಂಪ್‌ ಧ್ವಂಸ: ಭಾರತ

    ನವದೆಹಲಿ: ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕ್‌ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಲ್ಲಿದ್ದ ಉಗ್ರರ ಒಟ್ಟು 9 ನೆಲೆಗಳ ಮೇಲೆ ಭಾರತ ದಾಳಿ ನಡೆಸಿದೆ ಎಂದು ಭಾರತ ಅಧಿಕೃತವಾಗಿ ತಿಳಿಸಿದೆ.

    ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಜೊತೆ ಸಶಸ್ತ್ರ ಪಡೆಗಳ ಇಬ್ಬರು ಹಿರಿಯ ಮಹಿಳಾ ಅಧಿಕಾರಿಗಳಾದ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ ಅವರು ಆಪರೇಷನ್‌ ಸಿಂಧೂರದ ಬಗ್ಗೆ  ಮಾಹಿತಿ ನೀಡಿದರು.

    ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು?
    ಬಲವಾದ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಒಂಬತ್ತು ಗುರಿಗಳನ್ನು ಆಯ್ಕೆ ಮಾಡಲಾಗಿತ್ತು.ವಿಶ್ವಾಸಾರ್ಹ ಗುಪ್ತಚರ ಮತ್ತು ಗಡಿಯಾಚೆಗಿನ ಭಯೋತ್ಪಾದನೆಯಲ್ಲಿ ಅವರ ಪಾಲ್ಗೊಳ್ಳುವಿಕೆಯ ಆಧಾರದ ಮೇಲೆ  ಗುರಿಗಳನ್ನು ಆಯ್ಕೆ ಮಾಡಲಾಗಿತ್ತು.

    ಜನರು ಮತ್ತು ಪಾಕ್‌  ಮಿಲಿಟರಿ ನೆಲೆಗಳ ಮೇಲೆ ಭಾರತ ಯಾವುದೇ ದಾಳಿ ನಡೆಸಿಲ್ಲ. ಉಗ್ರರ ನೆಲೆಗಳ ಮೇಲೆ ಮಾತ್ರ ಈ ದಾಳಿ ನಡೆದಿದೆ. ಮುಂಬೈ ದಾಳಿಕೋರರಾದ  ಕಸಬ್‌, ಹೇಡ್ಲಿ ತರಬೇತಿ ಪಡೆದ ಕ್ಯಾಂಪ್‌ ಧ್ವಂಸ ಮಾಡಲಾಗಿದೆ.

    ಎರಡು ದೇಶಗಳ ಮಧ್ಯೆ ಈಗಲೂ ಪರಿಸ್ಥಿತಿ ಉದ್ವಿಗ್ನಗೊಂಡಿರುವ ಕಾರಣ ಈಗ ಯಾವುದೇ ಪ್ರಶ್ನೆಗಳನ್ನು ತೆಗೆದುಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

    ನಮ್ಮ ಗುಪ್ತಚರ ಸಂಸ್ಥೆಗಳು ಭಯೋತ್ಪಾದಕರು ಮತ್ತು ಪಾಕಿಸ್ತಾನದಲ್ಲಿರುವ ಸಂಯೋಜಕರ ನಡುವಿನ ಸಂವಹನ ಪತ್ತೆ ಹಚ್ಚಿತ್ತು. ಈ ಕಾರಣಕ್ಕೆ ಇಂದು ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಮಾಡುವ ತನ್ನ ಹಕ್ಕನ್ನು ಚಲಾಯಿಸಿದೆ.