Tag: Operations

  • ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ – ಕಾರ್ಯಾಚರಣೆ ಸ್ಥಗಿತ?

    ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ – ಕಾರ್ಯಾಚರಣೆ ಸ್ಥಗಿತ?

    ಮಡಿಕೇರಿ: ಕೊಡಗಿನ ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿದು ಇಬ್ಬರು ನಾಪತ್ತೆಯಾಗಿ 15 ದಿನಗಳೇ ಕಳೆದಿವೆ. ಈ ಇಬ್ಬರ ಹುಡುಕಾಟಕ್ಕಾಗಿ ಎನ್.ಡಿ.ಆರ್.ಎಫ್, ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸೇರಿದ್ದಂತೆ 100ಕ್ಕೂ ಹೆಚ್ಚು ಜನರು ನಿರಂತರ ಹುಡುಕಾಟ ನಡೆಸುತ್ತಲೇ ಇದ್ದಾರೆ.

    ಭೂಕುಸಿತದಲ್ಲಿ ಕಣ್ಮರೆಯಾಗಿದ್ದ ಕೇರಳದ ಶ್ರೀನಿವಾಸ್ ಮತ್ತು ನಾರಾಯಣ ಆಚಾರ್ ಅವರ ಪತ್ನಿ ಶಾಂತಾ ಈ ಇಬ್ಬರು ಇನ್ನೂ ಪತ್ತೆಯಾಗಿಲ್ಲ. ಹುಡುಕಾಟ ನಡೆಸಿರುವ ಎನ್.ಡಿ.ಆರ್.ಎಫ್ ತಂಡದ ಕಮಾಂಡರ್ ಇದುವರೆಗೆ ಎಷ್ಟು ಸಾಧ್ಯವೋ ಅಷ್ಟು ಹುಡುಕಿದ್ದೇವೆ. ಮಳೆ ಕೂಡ ಬಿಟ್ಟು ಬಿಟ್ಟು ಬರುತ್ತಲೇ ಇದ್ದು, ಭಾರೀ ಪ್ರಮಾಣದ ಮಂಜು ಸುರಿಯುತ್ತಿದೆ. ಹೀಗಾಗಿ ಇನ್ನೂ ಹುಡುಕಾಡುವುದು ಸವಾಲಿನ ಕೆಲಸ ಎನ್ನುತ್ತಿದ್ದಾರೆ.

    ಒಂದು ವೇಳೆ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಂಡಲ್ಲಿ ಕಳೆದ ಎರಡು ವರ್ಷಗಳಲ್ಲಿ ಭೂಕುಸಿತದಲ್ಲಿ ಕಣ್ಮರೆ ಆಗಿರುವವರನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿದ ರೀತಿಯಲ್ಲಿ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗುವುದು ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

    ಬ್ರಹ್ಮಗಿರಿ ಬೆಟ್ಟ ಕುಸಿದು ಐದು ಜನರು ಕಣ್ಮರೆಯಾಗಿದ್ದರು. ಬಳಿಕ ಅರ್ಚಕ ನಾರಾಯಣ ಆಚಾರ್ ಅವರ ಸಹೋದರ ಆನಂದತೀರ್ಥ ಮತ್ತು ಸಹಾಯಕ ಅರ್ಚಕ ರವಿಕಿರಣ್ ಅವರ ಮೃತದೇಹಗಳು ಪತ್ತೆಯಾಗಿದ್ದವು. ಇನ್ನುಳಿದ ಇಬ್ಬರಿಗಾಗಿ ರಕ್ಷಣಾ ತಂಡಗಳು ನಿರಂತರ ಹುಡುಕಾಟ ನಡೆಸುತ್ತಿದ್ದವು. ಅದರೆ ಇಂದಿಗೂ ಮೃತ ದೇಹ ದೊರಕ್ಕಿಲ್ಲ. ಹೀಗಾಗಿ ಬಹುತೇಕ ಇಂದು ಸಂಜೆಯಿಂದ ಕಾರ್ಯಚರಣೆ ಸ್ಥಗಿತ ಮಾಡುವುದಾಗಿ ಎನ್.ಡಿ.ಆರ್.ಎಫ್ ತಿಳಿಸಿದೆ.

  • ಮೂರು ತಿಂಗಳು ತಾಯ್ತನವನ್ನು ಮುಂದೂಡಿ: ಡಾ. ಪದ್ಮಿನಿ ಪ್ರಸಾದ್ ಸಲಹೆ

    ಮೂರು ತಿಂಗಳು ತಾಯ್ತನವನ್ನು ಮುಂದೂಡಿ: ಡಾ. ಪದ್ಮಿನಿ ಪ್ರಸಾದ್ ಸಲಹೆ

    ಬೆಂಗಳೂರು: ಕೊರೊನಾ ವೈರಸ್ ಸೋಂಕು ಎಲ್ಲೆಡೆ ಹರಡುತ್ತಿರುವ ಹಿನ್ನೆಲೆ ಮೂರು ತಿಂಗಳುಗಳ ಕಾಲ ತಾಯ್ತನ ಮುಂದೂಡಿಕೆ ಮಾಡಿಕೊಂಡರೆ ಒಳ್ಳೆಯದು ಎಂದು ಸ್ತ್ರಿರೋಗ ತಜ್ಞೆ ಡಾ. ಪದ್ಮಿನಿ ಪ್ರಸಾದ್ ಸಲಹೆ ನೀಡಿದ್ದಾರೆ.

    ತಾಯ್ತನ ಮಹಿಳೆಯರ ಬಾಳಿನ ಪ್ರಮುಖ ಘಟ್ಟ. ಆದರೆ ಸದ್ಯ ಎಲ್ಲೆಡೆ ಕೊರೊನಾ ವೈರಸ್ ಭೀತಿ ಇರುವ ಕಾರಣಕ್ಕೆ ತಾಯ್ತನದ ಪ್ಲಾನ್ ಮಾಡಿದ ದಂಪತಿ ಇನ್ನು ಮೂರು ತಿಂಗಳ ಕಾಲ ಈ ಪ್ಲಾನ್ ಮುಂದೂಡಿಕೆ ಮಾಡಿದರೆ ಉತ್ತಮ ಅಂತ ಪದ್ಮಿನಿ ಅವರು ಸಲಹೆ ನೀಡಿದ್ದಾರೆ. ಗರ್ಭಧಾರಣೆಯಾದರೆ ಆಸ್ಪತ್ರೆಗೆ ಭೇಟಿ ಕೊಡಬೇಕಾಗುತ್ತೆ. ಈ ಸಮಯದಲ್ಲಿ ಸೋಂಕು ತಗುಲುವ ಭೀತಿ ಇರುತ್ತೆ. ಅಲ್ಲದೇ ಗರ್ಭಧಾರಣೆಯ ಸಮಯದಲ್ಲಿ ಮಹಿಳೆಯರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡರೆ ಒಳ್ಳೆಯದು ಎಂದು ಸೂಚಿಸಿದ್ದಾರೆ.

    ಅಷ್ಟೇ ಅಲ್ಲದೇ ಕೊರೊನಾ ಭೀತಿಯಲ್ಲಿ ರೋಗಿಗಳಿಗೆ ಆಪರೇಷನ್ ಮುಂದೂಡಿಕೆ ಮಾಡಿಕೊಳ್ಳಲು ವೈದ್ಯರು ಸಲಹೆ ನೀಡುತ್ತಿದ್ದಾರೆ. ತೀರಾ ಎಮರ್ಜೆನ್ಸಿ ಅಲ್ಲದ ನಿಗದಿಯಾಗಿರುವ ಆಪರೇಷನ್ ಮುಂದೂಡಿಕೆ ಮಾಡಲು ವೈದ್ಯರು ರೋಗಿಗಳಿಗೆ ಸೂಚಿಸುತ್ತಿದ್ದಾರೆ. ಕೊರೊನಾ ಭೀತಿಯಿಂದ ತಾಯ್ತನದ ಪ್ಲಾನ್ ಮುಂದೂಡಿಕೆ ಮಾಡೋದೋ ಬೇಡ್ವೋ ಅಂತಾ ಕನ್‍ಫ್ಯೂಷನ್‍ನಲ್ಲಿ ದಂಪತಿಗಳು ವೈದ್ಯರ ಮೊರೆ ಹೋಗುತ್ತಿದ್ದಾರೆ.

    ಆಸ್ಪತ್ರೆ ಆವರಣದಲ್ಲಿ ನೂರಾರು ರೋಗಿಗಳು ಇರುತ್ತಾರೆ. ಅವರಿಗೆ ಸೋಂಕು ತಲುಲಿದ್ದರೆ ಅದು ಗರ್ಭಿಣಿಯರಿಗೆ ಹಾಗೂ ಇತರೆ ರೋಗಿಗಳಿಗೆ ತಗುಲುವ ಸಾಧ್ಯತೆ ಇರುತ್ತೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಸೋಂಕು ತಗಲಿದರೆ ಗುಣಪಡಿಸಿಕೊಳ್ಳಲು ಕಷ್ಟವಾಗುತ್ತದೆ. ಹೀಗಾಗಿ ಮುನ್ನೆಚ್ಚರಿಲಾ ಕ್ರಮಗಳನ್ನು ತೆಗೆದುಕೊಳ್ಳೋದು ಬಹಳ ಮುಖ್ಯವಾಗುತ್ತೆ. ಆದ್ದರಿಂದ ವೈದ್ಯರು ಆಪರೇಷನ್ ಮಾಡಿಸುವವರಿಗೆ ಹಾಗೂ ಮಗುವನ್ನು ಪಡೆಯಲು ಇಚ್ಛಿಸುವ ದಂಪತಿಗಳಿಗೆ ವೈದ್ಯರು ಹೀಗೆ ಸಲಹೆ ನೀಡುತ್ತಾರೆ ಎಂದು ಪದ್ಮಿನಿ ಅವರು ತಿಳಿಸಿದ್ದಾರೆ.

    ಇಂಗ್ಲೆಂಡ್‍ನಲ್ಲಿ ಜನಿಸಿದ ನವಜಾತ ಶಿಶುವಿಗೆ ಕೊರೊನಾ ಸೋಂಕು ತಗುಲಿದ ಹಿನ್ನೆಲೆ ವೈದ್ಯರು ಮಹಿಳೆಯರಿಗೆ ತಮ್ಮ ತಾಯ್ತನವನ್ನು ಮುಂದೂಡಿಕೆ ಮಾಡಿಕೊಳ್ಳಲು ಸಲಹೆ ನೀಡುತ್ತಿದ್ದಾರೆ. ಇಂಗ್ಲೆಂಡ್‍ನಲ್ಲಿ ತಾಯಿಗೆ ಸೋಂಕು ಇದ್ದ ಕಾರಣ ಅದು ಮಗುವಿಗೂ ತಗುಲಿದೆ. ತಾಯಿಗೆ ಹೆರಿಗೆಯ ಮೊದಲು ಕೊರೊನಾ ಸೋಂಕು ತಟ್ಟಿರುವ ಶಂಕೆ ಹಿನ್ನೆಲೆ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿತ್ತು. ಆದರೆ ಅದರ ವರದಿ ತಾಯಿ ಮಗುವಿಗೆ ಜನ್ಮ ಕೊಟ್ಟ ನಂತರ ಬಂದಿದೆ. ಹೀಗಾಗಿ ಆಗ ತಾನೆ ಹುಟ್ಟಿದ ಶಿಶುವಿಗೂ ಸೋಂಕು ಹರಡಿದೆ. ವಿಶ್ವದಲ್ಲೇ ಅತೀ ಚಿಕ್ಕ ವಯಸ್ಸಿಗೆ ಕೊರೊನಾ ಸೋಂಕು ತಟ್ಟಿದ ಪ್ರಕರಣ ಇದಾಗಿದ್ದು, ಲಂಡನ್‍ನಲ್ಲಿರುವ ಆಸ್ಪತ್ರೆಯಲ್ಲಿ ತಾಯಿ, ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ.

  • ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕಿರೋ 16 ರೈಲ್ವೇ ಸಿಬ್ಬಂದಿ ರಕ್ಷಣೆಗೆ ಕಾರ್ಯಾಚರಣೆ ಆರಂಭ

    ಸಕಲೇಶಪುರದಲ್ಲಿ ಅಪಾಯಕ್ಕೆ ಸಿಲುಕಿರೋ 16 ರೈಲ್ವೇ ಸಿಬ್ಬಂದಿ ರಕ್ಷಣೆಗೆ ಕಾರ್ಯಾಚರಣೆ ಆರಂಭ

    ಹಾಸನ: ಹೆಲಿಕಾಪ್ಟರ್ ಕಾರ್ಯಾಚರಣೆ ದುಸ್ತರ ಹಿನ್ನೆಲೆ ಅಪಾಯದಲ್ಲಿ ಸಿಲುಕಿರುವ ರೈಲ್ವೇ ಸಿಬ್ಬಂದಿ ರಕ್ಷಿಸಲು ಸಕಲೇಶಪುರ ಎ ಸಿ ನೇತೃತ್ವದ ತಂಡದಿಂದ ಕಾರ್ಯಾಚರಣೆ ಆರಂಭವಾಗಿದೆ.

    ಸಕಲೇಶಪುರ ತಾಲ್ಲೂಕಿನ ಎಡಕುಮೇರಿ ಬಳಿ ನಿರಂತರ ಮಳೆಯಿಂದ ಗುಡ್ಡಗಳು ಕುಸಿಯುತ್ತಿವೆ. ಪರಿಣಾಮ 16 ಜನ ರೈಲ್ವೇ ಸಿಬ್ಬಂದಿ ರೈಲ್ವೇ ನಿಲ್ದಾಣದಿಂದ ಹೊರ ಬರಲಾಗದೆ ಅಪಾಯದಲ್ಲಿದ್ದಾರೆ. ಹೀಗಾಗಿ ಹೆಲಿಕಾಪ್ಟರ್ ಮೂಲಕ ರಕ್ಷಣೆ ಮಾಡಲು ರೈಲ್ವೇ ಇಲಾಖೆ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಭಾರೀ ಮಳೆಯಾಗುತ್ತಿರುವುದರಿಂದ ಹೆಲಿಕಾಪ್ಟರ್ ಬಳಕೆ ಅಸಾಧ್ಯವಾಗಿದ್ದು, ಪಶ್ಚಿಮ ಘಟ್ಟದ ಟ್ರೆಕ್ಕಿಂಗ್ ಮಾರ್ಗದ ಮೂಲಕ ಕರೆತರಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

    ಬೆಂಗಳೂರು- ಮಂಗಳೂರು ಸಂಪರ್ಕದ ರೈಲು ಮಾರ್ಗದಲ್ಲಿ ಸಿಲುಕಿರುವ ಎಲ್ಲಾ ಸಿಬ್ಬಂದಿಗಳನ್ನು ರಕ್ಷಿಸಲು ತಂಡ ಕಾಗಿನೆರಿ ಮೂಲಕ ತೆರಳಿದ್ದು, ಮಧ್ಯಾಹ್ನದ ವೇಳೆಗೆ ಅಪಾಯದಲ್ಲಿರುವ ಸಿಬ್ಬಂದಿಗಳನ್ನು ಕರೆತರುವ ನಿರೀಕ್ಷೆ ಇದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಡುಪಿಯ ವಿದ್ಯಾರ್ಥಿನಿ ಬದುಕಿಸಲು 150 ಕಿ.ಮೀ ಝೀರೋ ಟ್ರಾಫಿಕ್ ನಿರ್ಮಿಸಿ ಬೆಂಗ್ಳೂರಿಗೆ ರವಾನೆ

    ಉಡುಪಿಯ ವಿದ್ಯಾರ್ಥಿನಿ ಬದುಕಿಸಲು 150 ಕಿ.ಮೀ ಝೀರೋ ಟ್ರಾಫಿಕ್ ನಿರ್ಮಿಸಿ ಬೆಂಗ್ಳೂರಿಗೆ ರವಾನೆ

    ಉಡುಪಿ: ರಾಜ್ಯದ ಅತೀದೊಡ್ಡ ಝೀರೋ ಟ್ರಾಫಿಕ್ ನಿರ್ಮಾಣ ಮಾಡಿ ಆರನೇ ತರಗತಿ ವಿದ್ಯಾರ್ಥಿನಿಯನ್ನು ಉಡುಪಿಯಿಂದ ಬೆಂಗಳೂರಿಗೆ ರವಾನೆ ಮಾಡಲಾಗಿದೆ.

    ಉಡುಪಿಯ ಬೈಂದೂರಿನ ಗ್ರಾಮದ ಆರನೇ ತರಗತಿ ವಿದ್ಯಾರ್ಥಿನಿ ಅನುಶಾ. ಈಕೆ ಗಂಭೀರವಾದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಳು. ಹೀಗಾಗಿ ಗುರುವಾರ ಅನುಶಾಳನ್ನು ಬೈಂದೂರು ತಾಲೂಕಿನ ಅರೆಶೀರೂರಿನಿಂದ ಉಡುಪಿ-ಮಂಗಳೂರು ಮಾರ್ಗವಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಉಡುಪಿ ಕಾರ್ಮಿಕ ವೇದಿಕೆ ಅಧ್ಯಕ್ಷ ರವಿ ಶೆಟ್ಟಿ ಅನಾರೋಗ್ಯ ಪೀಡಿತೆಯನ್ನು ಬೆಂಗಳೂರಿಗೆ ರವಾನೆ ಮಾಡುವ ಕೆಲಸದಲ್ಲಿ ಸಂಪೂರ್ಣ ತೊಡಗಿಸಿಕೊಂಡಿದ್ದರು. ಸುಮಾರು 140 ಕಿಲೋ ಮೀಟರ್ ದೂರದವರೆಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಝೀರೋ ಟ್ರಾಫಿಕ್ ರಸ್ತೆಯನ್ನು ನಿರ್ಮಾಣ ಮಾಡಿದ್ದರು.

    ಒಂದು ಪೊಲೀಸ್ ವಾಹನ ಮತ್ತು ಆಂಬುಲೆನ್ಸ್ ಅತೀ ವೇಗದಲ್ಲಿ ಮಂಗಳೂರಿನ ಬಜ್ಪೆ ನಿಲ್ದಾಣಕ್ಕೆ ತಲುಪಿ ಅಲ್ಲಿಂದ 1 ಗಂಟೆಯ ಜೆಟ್ ಏರ್ ವೇಸ್ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಅನುಶಾಳನ್ನು ರವಾನೆ ಮಾಡಲಾಯಿತು. ಹೆಬ್ಬಾಳದ ಆಸ್ಟರ್ ಹಾಸ್ಪಿಟಲ್ ನಲ್ಲಿ ಆಪರೇಷನ್ ನಡೆಸಲಾಗುವುದು. ಬೆಂಗಳೂರು ವೈದ್ಯರು ಉಡುಪಿಗೆ ಬಂದು ಶಸ್ತ್ರಚಿಕಿತ್ಸೆ ಕೊಡಲು 48 ಗಂಟೆ ತಗಲುವುದರಿಂದ ವೈದ್ಯರು ಅನುಶಾಳನ್ನು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ.

    ಮಧ್ಯಾಹ್ನ ಸುಮಾರು 2 ಗಂಟೆಗೆ ಬಂದ ಅನುಶಾಗೆ ಬೆಂಗಳೂರಿನಲ್ಲಿ ಹೆಬ್ಬಾಳದ ಆಸ್ಟರ್ ಆಸ್ಪತ್ರೆಯಲ್ಲಿ ಅನುಶಾಳಿಗೆ ಚಿಕಿತ್ಸೆ ಶುರುಮಾಡಲಾಗಿದೆ. ಅರೆಶೀರೂರು ಹೈಸ್ಕೂಲಿನ ಮುಖ್ಯ ಶಿಕ್ಷಕರ ಮಗಳು ಅನುಶಾ ಕಡು ಬಡತನದಿಂದ ಬಂದವಳು. ಆಕೆಯ ಶಸ್ತ್ರಚಿಕಿತ್ಸೆಗೆ ಹಣಕಾಸಿನ ಅವಶ್ಯಕತೆಯಿದೆ ಎಂದು ಕುಟುಂಬ ಮನವಿ ಮಾಡಿಕೊಂಡಿದೆ.

    ಬೈಂದೂರಿನಿಂದ ಕುಂದಾಪುರ- ಉಡುಪಿ, ಪಡುಬಿದ್ರೆ ಮಾರ್ಗವಾಗಿ ಮೂಲ್ಕಿವರೆಗೆ ಉಡುಪಿ ಜಿಲ್ಲಾ ಪೊಲೀಸರು ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ದಾರೆ. ಆದರೆ ಉಡುಪಿಯ ಗಡಿ ದಾಟಿ ಮಂಗಳೂರಿಗೆ ಬಂದ ಕೂಡಲೇ ಪೊಲೀಸರು ಅಸಹಾಕಾರ ತೋರಿದ್ದಾರೆ. ಮಾಮೂಲಿಯಂತೆ ಟ್ರಾಫಿಕ್ ರಸ್ತೆಯಲ್ಲಿ ಆಂಬುಲೆನ್ಸ್ ಗೆ ಕಿರಿಕಿರಿ ಮಾಡಿದೆ. ವೇಗವಾಗಿ ಮಂಗಳೂರು ವಿಮಾನ ನಿಲ್ದಾಣ ರೀಚ್ ಆಗಬೇಕಿದ್ದ  ಆಂಬುಲೆನ್ಸ್ ತಡವಾಗಿ ತಲುಪಿತು.

    ಮಂಗಳೂರು ಜಿಲ್ಲಾ ಪೊಲೀಸರು ಅನುಶಾ ಇದ್ದ ಆಂಬುಲೆನ್ಸ್ ಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಿಲ್ಲ. ವಾಹನ ದಟ್ಟಣೆಯ ನಡುವೆ ನಡುವೆ ಆಂಬುಲೆನ್ಸ್ ನಿಧಾನಗತಿಯಲ್ಲಿ ವಿಮಾನ ನಿಲ್ದಾಣ ತಲುಪದ್ದು, ಸುಮಾರು 15 ನಿಮಿಷಗಳ ಕಾಲ ನಾವು ವಿಳಂಬವಾಗಿ ವಿಮಾನ ನಿಲ್ದಾಣ ತಲುಪಬೇಕಾಯಿತು. ಏರ್ ಪೋರ್ಟ್ ನಿಂದ ಹತ್ತಾರು ಫೋನ್ ಕರೆಗಳು ಬಂದವು ಎಂದು ಆಂಬುಲೆನ್ಸ್ ಜೊತೆಗಿದ್ದ ರವಿಶೆಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.