Tag: organ

  • ಯೋಧರು ಸೇರಿ ಐವರ ಪ್ರಾಣ ಉಳಿಸಿದ ಮೃತ ಮಹಿಳೆಯ ಅಂಗಾಂಗ

    ಯೋಧರು ಸೇರಿ ಐವರ ಪ್ರಾಣ ಉಳಿಸಿದ ಮೃತ ಮಹಿಳೆಯ ಅಂಗಾಂಗ

    ಮುಂಬೈ: ಮೃತ ಮಹಿಳೆಯ ಅಂಗಾಂಗದಿಂದ ಯೋಧರು ಸೇರಿ ಐವರ ಪ್ರಾಣ ಉಳಿಸಿದ ಸ್ಪೂರ್ತಿ ನೀಡುವ ಸುದ್ದಿಯೊಂದು ಪುಣೆಯಲ್ಲಿ ನಡೆದಿದೆ.

    ಪುಣೆಯ ಸದರ್ನ್ ಕಮಾಂಡ್ ಆಸ್ಪತ್ರೆಯಲ್ಲಿ ಸೇನಾ ಯೋಧರು ಸೇರಿದಂತೆ ಮೃತ ಮಹಿಳೆಯ ಅಂಗಾಂಗ ದಾನವು 5 ಜನರ ಜೀವಗಳನ್ನು ಉಳಿಸಿದೆ. ಮಹಿಳೆಗೆ ಮೆದುಳಿನ ಸಮಸ್ಯೆ ಉಂಟಾಗಿದ್ದರಿಂದ ಆಕೆಯನ್ನು ಕಮಾಂಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಘಲಕಾರಿಯಾಗದೇ ಆಕೆ ಸಾಯುವ ಪರಿಸ್ಥಿತಿಯಲ್ಲಿ ಇದ್ದಳು. ಈ ಹಿನ್ನೆಲೆ ಆಕೆಯ ಕುಟುಂಬದವರು ಮಹಿಳೆಯ ಅಗಾಂಗಗಳನ್ನು ಅಗತ್ಯ ಇರುವ ರೋಗಿಗಳಿಗೆ ದಾನ ಮಾಡಬೇಕೆಂದು ನಿರ್ಧರಿಸಿದ್ದಾರೆ. ಇದನ್ನೂ ಓದಿ: ವೀಡಿಯೋ ಬಂದ್ ವಿಚಾರ – ಯಾರು ಏನೇ ಹೇಳಲಿ, ಈಗ ಮೊದಲಿನಂತೆ ನಿಯಮ ಇರಲಿದೆ: ಸಿಎಂ 

    ಜುಲೈ 14 ರ ರಾತ್ರಿ ಮತ್ತು ಜುಲೈ 15 ರ ಮುಂಜಾನೆ, ಮೂತ್ರಪಿಂಡದ ಅಂಗಗಳನ್ನು ಭಾರತೀಯ ಸೇನೆಯ ಇಬ್ಬರು ಸೈನಿಕರಿಗೆ ಕಸಿ ಮಾಡಲಾಯಿತು. ಕಣ್ಣುಗಳನ್ನು ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು ಕಣ್ಣಿನ ಬ್ಯಾಂಕ್‍ನಲ್ಲಿ ಸಂರಕ್ಷಿಸಲಾಗಿದೆ ಮತ್ತು ಪುಣೆಯ ರೂಬಿ ಹಾಲ್ ಕ್ಲಿನಿಕ್‍ನಲ್ಲಿ ರೋಗಿಯೊಬ್ಬರಿಗೆ ಮಹಿಳೆಯ ಲಿವರ್ ನೀಡಲಾಯಿತು.

    ಈ ಕುರಿತು ಟ್ವೀಟ್ ಮಾಡಿದ ಅಧಿಕಾರಿಗಳು ಅಂಗಾಂಗ ದಾನದ ಬಗ್ಗೆ ಶ್ಲಾಘಿಸಿದರು. ಟ್ವೀಟ್‍ನಲ್ಲಿ, ಸದರ್ನ್ ಕಮಾಂಡ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಜ್ಞರ ಉತ್ತಮ ಕೆಲಸ, ಅವರ ಪಟ್ಟುಬಿಡದ ಪ್ರಯತ್ನ ಐದು ತೀವ್ರ ಅಸ್ವಸ್ಥ ರೋಗಿಗಳಿಗೆ ಜೀವನ ಮತ್ತು ದೃಷ್ಟಿ ನೀಡಿತು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ಖಶೋಗಿ ಹತ್ಯೆಗೆ ಸೌದಿ ಕ್ರೌನ್ ಪ್ರಿನ್ಸ್ ಹೊಣೆಗಾರಿಕೆ: ಬೈಡನ್ 

    Live Tv
    [brid partner=56869869 player=32851 video=960834 autoplay=true]

  • ಅಪಘಾತದಲ್ಲಿ ಯುವಕ ಸಾವು- ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ

    ಅಪಘಾತದಲ್ಲಿ ಯುವಕ ಸಾವು- ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ

    ಮಡಿಕೇರಿ: ಕಳೆದ 5 ದಿನಗಳ ಹಿಂದೆ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ, ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಮೃತನ ಕುಟುಂಬಸ್ಥರು ಆತನ ಅಂಗಾಂಗ ದಾನ ಮಾಡುವ ಮೂಲಕ  ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

    ಪ್ರಜ್ವಲ್ (22) ಸಾವಿಗೀಡಾದ ಯುವಕ. ಈತ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದ ರೈತ ಸುರೇಶ್ ಅವರ ಮಗನಾಗಿದ್ದನು. ಪ್ರಜ್ವಲ್ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದ.

    ಕೂಡ್ಲೂರು ಕೈಗಾರಿಕಾ ಕಾಫಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಜ್ವಲ್, ಭಾನುವಾರ ರಾತ್ರಿ ಕೂಡ್ಲೂರ್ ಕಡೆಯಿಂದ ಕೂಡಿಗೆಗೆ ಹೋಗುತ್ತಿದ್ದ. ಈ ಸಂದರ್ಭ ಕೂಡುಮಂಗಳೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಬೈಕ್ ಡಿಕ್ಕಿಯಾಗಿತ್ತು. ಪರಿಣಾಮ ಪ್ರಜ್ವಲ್ ತಲೆ ಭಾಗಕ್ಕೆ ಭಾರೀ ಪೆಟ್ಟು ಬಿದ್ದಿತ್ತು. ಗಾಯಾಳುವಿಗೆ ಕುಶಾಲನಗರ ಅರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಮೈಸೂರು ಅಪೋಲೋ ಆಸ್ಪತ್ರೆಗೆ ಸಾಗಿಸಲಾಗಿತ್ತು. ಪ್ರಜ್ವಲ್ ಬದುಕುವುದು ಕಷ್ಟ ಎಂದು ವೈದ್ಯರು ತಿಳಿಸುತ್ತಾರೆ. ಬಳಿಕ ಪ್ರಜ್ವಲ್ ತಂದೆ ತಾಯಿ ಹಾಗೂ ಚಿಕ್ಕಪ್ಪ ಮತ್ತು ಕುಟುಂಬಸ್ಥರು ಪ್ರಜ್ವಲ್‍ನ ಅಂಗಾಂಗ ದಾನ ಮಾಡಲು ನಿರ್ಧರಿಸಿ ಪ್ರಜ್ವಲ್‍ನ ಹೃದಯ ,ಕಣ್ಣು, ಕಿಡ್ನಿ ದಾನ ಮಾಡಿದ್ದಾರೆ. ಇದನ್ನೂ ಓದಿ: IPL Auction -15.25 ಕೋಟಿಗೆ ಇಶಾನ್ ಕಿಶನ್ ಸೇಲ್‌

    ಅಂಗಾಗಗಳನ್ನು ದಾನವಾಗಿ ನೀಡಿದ ಬಳಿಕ ಕೂಡಿಗೆಗೆ ಆಗಮಿಸಿದ ಪ್ರಜ್ವಲ್ ಪಾರ್ಥೀವ ಶರೀರಕ್ಕೆ ಗೌರವ ನಮನ ಸಲ್ಲಿಸಲಾಯಿತು. ಸ್ಥಳೀಯ ಗ್ರಾಪಂ ಜನಪ್ರತಿನಿಧಿಗಳು, ಆಟೋ ಚಾಲಕರುಗಳು, ನೂರಾರು ಮಂದಿ ಯುವಕರು ಮೃತದೇಹ ಬರಮಾಡಿಕೊಂಡು ಪುಷ್ಪಾರ್ಚನೆ ಮಾಡಿ ಅಂತಿಮ ನಮನ ಸಲ್ಲಿಸಿದರು.

  • ನಾನು ಅಂಗಾಂಗ ದಾನ ಮಾಡುತ್ತೇನೆ, ನೀವೂ ಮಾಡಿ- ಸಿಎಂ ಬೊಮ್ಮಾಯಿ ಕರೆ

    ನಾನು ಅಂಗಾಂಗ ದಾನ ಮಾಡುತ್ತೇನೆ, ನೀವೂ ಮಾಡಿ- ಸಿಎಂ ಬೊಮ್ಮಾಯಿ ಕರೆ

    – ಜೀವ ಹೋದ ನಂತರ ಇನ್ನೊಂದು ಜೀವ ಉಳಿಸೋಣ

    ಉಡುಪಿ: ನಾನು ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ನೀವು ಸಹಿ ಹಾಕಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

    ಇಂದು ವಿಶ್ವ ಅಂಗಾಂಗ ದಾನ ದಿನ. ಈ ದಿನ ನಾನು ಕೂಡ ಅಂಗಾಂಗ ದಾನ ಪತ್ರಕ್ಕೆ ಸಹಿ ಹಾಕುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಉಡುಪಿಯ ಮಣಿಪಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಕಿಡ್ನಿ ಸಹಿತ ಬೇರೆ ಬೇರೆ ಅಂಗಾಂಗ ದಾನ ಮಾಡುವುದು ಮತ್ತು ಅಂಗಾಂಗಗಳನ್ನು ಯಶಸ್ವಿಯಾಗಿ ಕಸಿ ಮಾಡುವುದು ನಡೆಯುತ್ತಿದೆ ಎಂದರು. ಇದನ್ನೂ ಓದಿ: BJP ಜೊತೆಗೆ ಟ್ವಿಟ್ಟರ್ ಕೈಜೋಡಿಸಿ ಪ್ರಜಾತಂತ್ರ ಹತ್ತಿಕ್ಕುವ ಕೃತ್ಯದಲ್ಲಿ ತೊಡಗಿದೆ: ಪ್ರಿಯಾಂಕಾ ಗಾಂಧಿ

    ಹೆಚ್ಚಿನ ಜನರು ಅಂಗಾಂಗ ದಾನಕ್ಕೆ ಮುಂದೆ ಬಂದರೆ ಸಾವಿರಾರು ಜೀವಗಳನ್ನು ಉಳಿಸಲು ಸಾಧ್ಯವಿದೆ. ಇವತ್ತು ವಿಶ್ವ ಅಂಗಾಂಗ ದಾನ ದಿನದಂದು ನಾನೂ ಅಂಗಾಂಗ ದಾನಕ್ಕೆ ಸಹಿ ಹಾಕುತ್ತೇನೆ. ಅಂಗಾಂಗ ದಾನಕ್ಕೆ ಎಲ್ಲರಿಗೂ ಕರೆ ಕೊಡುತ್ತಿದ್ದೇನೆ ಎಂದರು. ಅಂಗಾಂಗ ದಾನ ಮಾಡುವ ಮೂಲಕ ಮಣ್ಣಲ್ಲಿ ಮಣ್ಣಾಗುವ ಅಂಗಾಂಗಗಳು ಉಪಯೋಗವಾಗಿ ಇನ್ನೊಂದು ಜೀವ ಉಳಿಯಲು ಸಾಧ್ಯವಿದ್ದರೆ ಯಾಕೆ ಹಾಗೆ ಮಾಡಬಾರದು? ಆದ್ದರಿಂದ ಎಲ್ಲರೂ ವಿಶ್ವ ಅಂಗಾಂಗ ದಿನದಂದು ಎಲ್ಲರೂ ಅಂಗಾಂಗ ದಾನ ಮಾಡಲು ಸಂಕಲ್ಪ ಮಾಡೋಣ ಎಂದರು.

    ಜೀವ ಉಳಿಸುವ ಈ ಪುಣ್ಯ ಕಾರ್ಯಕ್ಕೆ ಎಲ್ಲರೂ ಮುಂದೆ ಬರಬೇಕು. ಸಂಕಷ್ಟದಲ್ಲಿ ಇರುವ ಜೀವ ಉಳಿಸಲು ಸಹಕಾರಿಯಾಗಬೇಕು. ಕುಟುಂಬದವರ ಮನವೊಲಿಸಿ. ಜೀವ ಹೋದ ನಂತರ ಇನ್ನೊಂದು ಜೀವ ಉಳಿಸಿ ಎಂದು ಸಿಎಂ ಹೇಳಿದರು.

  • ಮೃತ ಮಹಿಳೆಯ ಅಂಗಾಂಗದಿಂದ ಉಳಿಯಿತು 3 ಜನರ ಪ್ರಾಣ

    ಮೃತ ಮಹಿಳೆಯ ಅಂಗಾಂಗದಿಂದ ಉಳಿಯಿತು 3 ಜನರ ಪ್ರಾಣ

    ನವದೆಹಲಿ: ಮೆದುಳು ಸತ್ತ 57 ವರ್ಷದ ಮಹಿಳೆಯೊಬ್ಬರು ತಮ್ಮ ಅಂಗಾಂಗವನ್ನು ದಾನ ಮಾಡುವ ಮೂಲಕ 3 ಮಂದಿಯ ಪ್ರಾಣವನ್ನು ಉಳಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    ಮಹಿಳೆ ತೀವ್ರವಾಗಿ ತಲೆಗೆ ಗಾಯಗೊಂಡು ಮಾರ್ಚ್ 28ರಂದು ಚಿಕಿತ್ಸೆಗಾಗಿ ದ್ವಾರಕಾದ ಆಕಾಶ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ವೈದ್ಯರು ರೋಗಿಯ ಮೆದುಳು ಸತ್ತಿದೆ ಎಂದು ಘೋಷಿಸಿದ್ದರು. ಬಳಿಕ ಆಸ್ಪತ್ರೆಯ ಸಿಬ್ಬಂದಿ ಮಹಿಳೆಯ ಅಂಗಾಂಗಗಳನ್ನು ದಾನ ಮಾಡುವುದಾಗಿ ಕುಟುಂಬಸ್ಥರಿಗೆ ಕೇಳಿದಾಗ ಒಪ್ಪಿಕೊಂಡಿದ್ದಾರೆ.

    ಬಳಿಕ ಮಹಿಳೆಯ ಅಂಗಾಂಗಗಳನ್ನು ದೇಹದಿದಂದ ಹೊರತೆಗೆದು ಮಾರ್ಚ್ 29ರಂದು ಬೆಳಗ್ಗೆ 5 ಗಂಟೆಗೆ ವರ್ಗಾಯಿಸಲಾಗಿತು. ಆಕೆಯ ಕಿಡ್ನಿವೊಂದನ್ನು ದ್ವಾರಕಾದ ಆಕಾಶ್ ಹೆಲ್ತ್‌ಕೇರ್‌ನಲ್ಲಿರುವ 52 ವರ್ಷದ ವ್ಯಕ್ತಿಗೆ ನೀಡಲಾಗಿದ್ದು, ಮಹಿಳೆಯ ಲೀವರ್‌ನನ್ನು ಗುರ್ಗಾಂವ್‍ನ ಮೆಡಂತಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ 71 ವರ್ಷದ ವ್ಯಕ್ತಿಗೆ ನೀಡಲಾಗಿದೆ ಎಂದು ಆಕಾಶ್ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಮಹಿಳೆಯ ಕಾರ್ನಿಯಾಗಳನ್ನು ಶ್ರಾಫ್ ಕಣ್ಣಿನ ಕೆಂದ್ರದಲ್ಲಿರುವ ಕಣ್ಣಿನ ಬ್ಯಾಂಕ್‍ನಲ್ಲಿ ಸಂರಕ್ಷಿಸಲಾಗಿದ್ದು, ಮಹಿಳೆಯ ಅಂಗಾಂಗಗಳನ್ನು ಕಸಿ ಮಾಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸುಮಾರು 20 ಗಂಟೆಗಳ ಕಾಲ ಬೇಕಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

  • ಸಾವಿನಲ್ಲೂ 9 ಮಂದಿ ಬಾಳಲ್ಲಿ ಹೊಸ ಬೆಳಕು ಮೂಡಿಸಿ ಸಾರ್ಥಕತೆ ಮೆರೆದ ಮಹಿಳೆ

    ಸಾವಿನಲ್ಲೂ 9 ಮಂದಿ ಬಾಳಲ್ಲಿ ಹೊಸ ಬೆಳಕು ಮೂಡಿಸಿ ಸಾರ್ಥಕತೆ ಮೆರೆದ ಮಹಿಳೆ

    ಕೊಯಮತ್ತೂರು: ಮೆದುಳು ನಿಷ್ಕ್ರಿಯಗೊಂಡಿದ್ದ 56 ವರ್ಷದ ಮಹಿಳೆಯೊಬ್ಬರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ.

    ಕೊಯಮತ್ತೂರಿನ ಬ್ಯಾಂಕ್‍ವೊಂದರಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಹೃದಯ, ಯಕೃತ್ತು, ಶ್ವಾಸಕೋಶ, ಕಿಡ್ನಿಗಳು, ಕಣ್ಣುಗಳು, ಚರ್ಮ ಮತ್ತು ಎಲುಬುಗಳನ್ನು ಮೃತಪಡುವ ಮೊದಲು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ.

    ನವೆಂಬರ್ 30 ರಂದು ಇವರು ಆಫೀಸ್‍ನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಇದ್ದಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದರು. ನಂತರ ಸಹ ಉದ್ಯೋಗಿಗಳು ಕೂಡಲೇ ಇವರನ್ನು ಸಮೀಪದ ಕೆ.ಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯನ್ನು ಪರೀಕ್ಷೆ ಮಾಡಿದ ಬಳಿಕ ಅವರಿಗೆ ಅಧಿಕ ರಕ್ತ ಒತ್ತಡ, ಕಾರ್ಡಿಯೊ-ವ್ಯಾಸ್ಕೂಲರ್ (ಹೃದಯ-ರಕ್ತನಾಳದ ಸಮಸ್ಯೆ) ಮತ್ತು ಮೆದುಳಿನ ರಕ್ತ ಸ್ರಾವದಿಂದ ಬಳಲುತ್ತಿದ್ದಾರೆ ಎನ್ನುವ ವಿಚಾರ ವೈದ್ಯರಿಗೆ ತಿಳಿಯಿತು.

    ಪರಿಣಿತ ವೈದ್ಯರ ತಂಡವೊಂದು ಭಾನುವಾರ ಆಕೆಯನ್ನ ಆಪರೇಷನ್ ಮಾಡಿ ಉಳಿಸಲು ಪ್ರಯತ್ನಿಸಿದ್ದಾರೆ. ಆದರೆ ಆಕೆಯ ಮೆದುಳು ನಿಷ್ಕ್ರಿಯವಾಯಿತು. ಅಷ್ಟೇ ಅಲ್ಲದೇ ಮತ್ತೆ ಅದನ್ನು ಸರಿ ಮಾಡಲು ಸಾಧ್ಯವಾಗದಷ್ಟು ಹಾನಿಯಾಯಿತು ಎಂದು ಆಸ್ಪತ್ರೆಯ ಮುಖ್ಯಸ್ಥ ಡಾ.ಜಿ ಭಕ್ತವತ್ಸಲಂ ಹೇಳಿದರು.

    ವೈದ್ಯರು ಮತ್ತೆ ಎರಡು ಪರೀಕ್ಷೆಗಳನ್ನು ಮಾಡಿ ಸಂಜೆ ಹೊತ್ತಿಗೆ ಆಕೆಯ ಬ್ರೈನ್ ಡೆಡ್ ಆಗಿದೆ ಎಂದು ತಿಳಿಸಿದ್ದಾರೆ. ನಂತರ ಮಹಿಳೆಯ ಮಗ ಮತ್ತು ಮಗಳ ಇಬ್ಬರ ಅನುಮತಿಯನ್ನು ಪಡೆದು ಹೃದಯ, ಯಕೃತ್ತು, ಶ್ವಾಸಕೋಶ, ಕಿಡ್ನಿಗಳು, ಕಣ್ಣುಗಳು, ಚರ್ಮ ಮತ್ತು ಎಲುಬುಗಳನ್ನು ಆಸ್ಪತ್ರೆ ಪಡೆದುಕೊಂಡಿತು.

    ಮಹಿಳೆಯಿಂದ ಪಡೆದುಕೊಂಡ ಅಂಗಾಂಗಗಳನ್ನು, ತಮಿಳು ನಾಡಿನ ಟ್ರಾನ್ಸ್ ಪ್ಲಾಂಟ್ ಅಥಾರಿಟಿ, ಯಕೃತ್ತು, ಮತ್ತು ಒಂದು ಕಿಡ್ನಿ ಕೆ.ಜಿ. ಆಸ್ಪತ್ರೆಗೆ, ಮತ್ತೊಂದು ಕಿಡ್ನಿಯನ್ನು ಶ್ರೀ ರಾಮಕೃಷ್ಣ ಆಸ್ಪತ್ರೆಗೆ, ಕಣ್ಣುಗಳನ್ನು ಅರವಿಂದ್ ಕಣ್ಣಿನ ಆಸ್ಪತ್ರೆಗೆ, ಚರ್ಮ ಮತ್ತು ಎಲುಬುಗಳನ್ನು ಗಂಗಾ ಆಸ್ಪತ್ರೆ, ಹೃದಯ ಮತ್ತು ಶ್ವಾಸಕೋಶ ಫೊರ್ಟಿಸ್ ಆಸ್ಪತ್ರೆ/ಗ್ಲೋಬಲ್ ಆಸ್ಪತ್ರೆ ಹಸ್ತಾಂತರಿಸಲಾಗುವುದು. ಇದರಿಂದ 9 ಜನರ ಜೀವನದಲ್ಲಿ ಹೊಸ ಬೆಳಕು ಮೂಡುತ್ತದೆ ಎಂದು ಭಕ್ತವತ್ಸಲಂ ಹೇಳಿದ್ದಾರೆ.