Tag: organs donate

  • ಹುಟ್ಟುಹಬ್ಬದ ದಿನವೇ ಮಗ ಸಾವು – ಕೈ ಹಿಡಿದು ಕೇಕ್‌ ಕತ್ತರಿಸಿ, ಅಂಗಾಂಗ ದಾನ ಮಾಡಿದ ಪೋಷಕರು

    ಹುಟ್ಟುಹಬ್ಬದ ದಿನವೇ ಮಗ ಸಾವು – ಕೈ ಹಿಡಿದು ಕೇಕ್‌ ಕತ್ತರಿಸಿ, ಅಂಗಾಂಗ ದಾನ ಮಾಡಿದ ಪೋಷಕರು

    ಕೊಪ್ಪಳ: ಅಪಘಾತಕ್ಕೊಳಗಾಗಿ (Accident) ಚಿಕಿತ್ಸೆ ಪಡೆಯುತ್ತಿದ್ದ ಮಗ ಹುಟ್ಟುಹಬ್ಬದ ದಿನವೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನ (Organ Donation) ಮಾಡಿ ಸಾರ್ಥಕತೆ ಮೆರೆದಿದ್ದಾರೆ.

    ಕೊಪ್ಪಳದ (Koppal) ಕನಕಗಿರಿ ಮೂಲದ ಆರ್ಯನ್ (22) ಮೃತ ಯುವಕ. 15 ದಿನಗಳ ಹಿಂದೆ ಹಾಸನದ (Hassan) ಸಮೀಪ ಬೈಕ್ ಅಪಘಾತಕ್ಕೊಳಗಾಗಿ, ಆರ್ಯನ್‌ ಗಾಯಗೊಂಡಿದ್ದ. ಆತನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೇ ಹುಟ್ಟುಹಬ್ಬದ ದಿನವೇ (ಅ.24) ಯುವಕ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಬೆಂಗಳೂರು| ಉಸಿರುಗಟ್ಟಿಸಿ 7 ವರ್ಷದ ಮಗಳ ಕೊಂದ ಮಲತಂದೆ

    ಮೃತಪಟ್ಟ ಮಗನ ಕೈ ಹಿಡಿದು ಪೋಷಕರು ಕೇಕ್ ಕತ್ತರಿಸಿ ಕಣ್ಣೀರಿಟ್ಟಿದ್ದಾರೆ. ಬಳಿಕ ಮಗನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಇಂದು (ಅ.25) ಕೊಪ್ಪಳದ ಕನಕಗಿರಿಯಲ್ಲಿ ಆರ್ಯನ್ ಅಂತ್ಯಕ್ರಿಯೆ ನಡೆಯಲಿದೆ. ಇದನ್ನೂ ಓದಿ: ಲೈಫ್‌ ಸೆಟಲ್‌ ಮಾಡ್ತೀನಿ, ಮದುವೆಯಾಗೋಣ ಅಂತ ನಂಬಿಸಿ ರೇಪ್ – ಡಿಜೆ ಹಳ್ಳಿ ಇನ್ಸ್‌ಪೆಕ್ಟರ್‌ ವಿರುದ್ಧ ಎಫ್‌ಐಆರ್

  • ಅಂಗಾಂಗ ದಾನ ಮಾಡಿ 9 ಜೀವಗಳಿಗೆ ಬೆಳಕಾದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ 8 ಲಕ್ಷ ರೂ. ಪರಿಹಾರ

    ಅಂಗಾಂಗ ದಾನ ಮಾಡಿ 9 ಜೀವಗಳಿಗೆ ಬೆಳಕಾದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ 8 ಲಕ್ಷ ರೂ. ಪರಿಹಾರ

    ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಪ್ರಥಮ ಪಿಯುಸಿ (PUC) ವಿದ್ಯಾರ್ಥಿನಿ ರಕ್ಷಿತಾ (Rakshitha) ಕುಟುಂಬಕ್ಕೆ ರಾಜ್ಯ ಸರ್ಕಾರ (Karnataka Government) ಎಂಟು ಲಕ್ಷ ರೂ. ಪರಿಹಾರ (Compensation) ಘೋಷಣೆ ಮಾಡಿದೆ.

    ಚಿಕ್ಕಮಗಳೂರು ನಗರದ ಸರ್ಕಾರಿ ಬಾಲಿಕಾ ಪದವಿ ಪೂರ್ವ ಕಾಲೇಜಿನಲ್ಲಿ ಫಸ್ಟ್ ಪಿಯುಸಿ ಓದುತ್ತಿದ್ದ 18 ವರ್ಷದ ಯುವತಿ ರಕ್ಷಿತಾ, ಐದು ದಿನಗಳ ಹಿಂದೆ ಸರ್ಕಾರಿ ಬಸ್‍ನಿಂದ (Bus) ಇಳಿಯುವಾಗ ಆಯಾ ತಪ್ಪಿ ಬಿದ್ದು ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು (Brain Dead). ಕೂಡಲೇ ಆಸ್ಪತ್ರೆಗೆ ಸೇರಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಹಾಗಾಗಿ, ರಕ್ಷಿತಾ ಪೋಷಕರು ಆಕೆಯ ಸಾವಿನ ನೋವಿನಲ್ಲೂ ಆಕೆಯ ಅಂಗಾಂಗಗಳನ್ನು ದಾನ ಮಾಡಿದ್ದರು. ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ – ಕುಟುಂಬದ ನಿರ್ಧಾರಕ್ಕೆ ವ್ಯಾಪಕ ಮೆಚ್ಚುಗೆ

    ಆಕೆಯ ಒಂಬತ್ತು ಅಂಗಾಂಗಳಿಂದ 9 ಜನರ ಜೀವ ಉಳಿದಿದೆ. ಹಾಗಾಗಿ, ಸರ್ಕಾರ ಆಕೆಯ ಕುಟುಂಬಕ್ಕೆ ಪರಿಹಾರ ಎನ್ನುವುದಕ್ಕಿಂತ ಗೌರವಯುತವಾಗಿ ಎಂಟು ಲಕ್ಷ ರೂ. ಹಣವನ್ನು ನೀಡಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ರೂ. ತಾಂಡಾ ಅಭಿವೃದ್ಧಿ ನಿಗಮದಿಂದ 1 ಲಕ್ಷ ರೂ. ಹಾಗೂ ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ ರೂ. ಹಣವನ್ನು ಸರ್ಕಾರ ಮಂಜೂರು ಮಾಡಿದೆ. ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಕುಡುಚಿ ಶಾಸಕ ಪಿ.ರಾಜೀವ್ (P. Rajeev) ಕಡೂರಿನ ಸೋಮನಹಳ್ಳಿ ತಾಂಡ್ಯಾದ ರಕ್ಷಿತಾ ಮನೆಗೆ ಭೇಟಿ ನೀಡಿ ತಾಂಡ ಅಭಿವೃದ್ಧಿ ನಿಗಮದ ಒಂದು ಲಕ್ಷ ರೂ. ಹಾಗೂ ಉದ್ಯಮಶೀಲತೆ ಯೋಜನೆಯಡಿಯ 2 ಲಕ್ಷ ಒಟ್ಟು ಮೂರು ಲಕ್ಷ ರೂ. ಹಣದ ಚೆಕ್ ನೀಡಲಿದ್ದಾರೆ. ಸರ್ಕಾರದ ಪ್ರತಿನಿಧಿಯಾಗಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮುಖ್ಯಮಂತ್ರಿ ಪರಿಹಾರ ನಿಧಿಯ 5 ಲಕ್ಷ ರೂ. ಚೆಕ್ ನೀಡಲಿದ್ದಾರೆ. ಇದನ್ನೂ ಓದಿ: ಗಾಂಜಾ ಮಿಶ್ರಿತ ಚಾಕ್ಲೇಟ್ ಮಾರಾಟ- ರಾಯಚೂರಿನಲ್ಲಿ ಅಬಕಾರಿ ಪೊಲೀಸರ ದಾಳಿ

    Live Tv
    [brid partner=56869869 player=32851 video=960834 autoplay=true]

  • ಬಸ್‍ನಿಂದ ಬಿದ್ದು ಯುವತಿಯ ಮೆದುಳು ನಿಷ್ಕ್ರಿಯ – ಸಾವಿನಲ್ಲೂ 9 ಜನರ ಬಾಳಿಗೆ ಬೆಳಕಾದಳು

    ಬಸ್‍ನಿಂದ ಬಿದ್ದು ಯುವತಿಯ ಮೆದುಳು ನಿಷ್ಕ್ರಿಯ – ಸಾವಿನಲ್ಲೂ 9 ಜನರ ಬಾಳಿಗೆ ಬೆಳಕಾದಳು

    ಚಿಕ್ಕಮಗಳೂರು: ಮಗಳ ಸಾವಿನ ನೋವಿನಲ್ಲೂ ಹೆತ್ತವರು ಆಕೆಯ ಒಂಬತ್ತು ಅಂಗಾಂಗಳನ್ನು ದಾನ (Organs Donate) ಮಾಡಿ ಸಾರ್ಥಕತೆ ಮರೆದ ಪ್ರೇರಣದಾಯಕ ಘಟನೆಗೆ ಜಿಲ್ಲೆಯ ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಶೇಖರ್ ನಾಯ್ಕ್ ಹಾಗೂ ಲಕ್ಷ್ಮಿ ದಂಪತಿ ಸಾಕ್ಷಿಯಾಗಿದ್ದಾರೆ.

    ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ಶೇಖರ್ ನಾಯ್ಕ್, ಲಕ್ಷ್ಮಿಬಾಯಿ ದಂಪತಿಯ ಪುತ್ರಿ ರಕ್ಷಿತಾ ಚಿಕ್ಕಮಗಳೂರು ನಗರದ ಬಸವನಹಳ್ಳಿಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ವಾಣಿಜ್ಯ (ಕಾಮರ್ಸ್) ಓದುತ್ತಿದ್ದಳು. ನಗರದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ನಲ್ಲಿ ಇದ್ದಳು. ಎರಡು ದಿನಗಳ ಹಿಂದೆ ಮನೆಗೆ ಹೋಗಲೆಂದು ಹೋಗುವಾಗ ಸರ್ಕಾರಿ ಬಸ್‍ನಿಂದ (Bus) ಆಯಾತಪ್ಪಿ ಬಿದಿದ್ದಳು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಕರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ತಲೆಗೆ ಗಂಭೀರ ಗಾಯವಾದ ಕಾರಣ ವೈದ್ಯರು ಬದುಕಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದೆ. ರಕ್ಷಿತಾಳ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದ್ದು ಬೇರೆಲ್ಲಾ ಅಂಗಾಂಗಳಿಗೆ ಯಾವುದೇ ತೊಂದರೆಯಾಗದ ಹಿನ್ನೆಲೆ ಅವುಗಳ ದಾನಕ್ಕೆ ಮುಂದಾಗಬಹುದು ಎಂದು ವೈದ್ಯರು ಹೆತ್ತವರಿಗೆ ಮಾಹಿತಿ ನೀಡಿದ್ದಾರೆ. ಮಗಳನ್ನು ಕಳೆದುಕೊಂಡ ನೋವಲ್ಲೂ ಅಪ್ಪ ಶೇಖರ್ ನಾಯ್ಕ್-ಅಮ್ಮ ಲಕ್ಷ್ಮಿ ಬಾಯಿ ರಕ್ಷಿತಾಳ ಎಲ್ಲಾ ಅಂಗಾಂಗಗಳ ದಾನಕ್ಕೆ ಮುಂದಾಗಿ ಮಗಳ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇದನ್ನೂ ಓದಿ: ತಾಯಿಯ ಮಡಿಲಲ್ಲೇ ಭಾಷಣ ಮಾಡಿ ಪ್ರಥಮ ಸ್ಥಾನ ಗೆದ್ದ ಬಾಲಕಿ!

    ಎದೆಬಡಿತ ನಮಗೆ ಕೇಳಿಸಲ್ಲ:
    ನನ್ನ ತಂಗಿಯ ಒಂಬತ್ತು ಅಂಗಾಗಳನ್ನು ಒಂಬತ್ತು ಜನರಿಗೆ ಹಾಕುತ್ತಾರೆ. ಅವರೆಲ್ಲಾ ಬದುಕುತ್ತಾರೆ. ಆದರೆ, ಆಕೆಯ ಕಣ್ಣು ಮತ್ತೊಬ್ಬರ ಮೂಲಕ ಜಗತ್ತನ್ನು ನೋಡಲಿದೆ. ಆದರೆ, ನಮ್ಮನ್ನ ನೋಡಲ್ಲ. ಆಕೆಯ ಎದೆಬಡಿತ ಮತ್ತೊಬ್ಬರಿಗೆ ಕೇಳಿಸುತ್ತೆ. ಆದರೆ, ನಮಗೆ ಕೇಳಿಸಲ್ಲ ಎಂದು ರಕ್ಷಿತಾಳ 14 ಜನ ಸಹೋದರರು ಕಣ್ಣೀರಿಟ್ಟಿದ್ದಾರೆ. ನಮ್ಮ ತಂಗಿ ನಮ್ಮ ಜೊತೆ ಇಲ್ಲ. ಆದರೆ, ಅಂಗಾಂಗಗಳ ಮೂಲಕ ಮತ್ತೊಬ್ಬರ ಬದುಕಿಗೆ ಬೆಳಕಾಗಲಿದ್ದಾಳೆ. ನಾವು ಯಾವುದೇ ತೊಂದರೆ ಮಾಡಲ್ಲ. ಆಕೆಯ ಯಾವ್ಯಾವ ಅಂಗಗಳು ಮತ್ತೊಬ್ಬರಿಗೆ ಉಪಯೋಗಕ್ಕೆ ಬರುತ್ತೋ ಆ ಎಲ್ಲಾ ಅಂಗಗಳನ್ನೂ ತೆಗೆದುಕೊಳ್ಳಲಿ ಎಂದು ಕಣ್ಣೀರಿಟ್ಟಿದ್ದಾರೆ.

    ಒಬ್ಬಳೆ ಮಗಳು:
    ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯಾದ ರಕ್ಷಿತಾಳ ಅಪ್ಪ-ಅಮ್ಮರದ್ದು ದೊಡ್ಡ ಕುಟುಂಬ. ದೊಡ್ಡಪ್ಪ-ಚಿಕ್ಕಪ್ಪನ ಮಕ್ಕಳು ಸೇರಿದಂತೆ 14 ಜನ ಅಣ್ಣತಮ್ಮಂದಿರಿಗೆ ರಕ್ಷಿತಾ ಒಬ್ಬಳೆ ಮುದ್ದಿನ ತಂಗಿ. ಹಾಗಾಗಿ, ಆಕೆಯನ್ನು ಹೇಗಾದರೂ ಉಳಿಸಿಕೊಳ್ಳಬೇಕು ಎಂದು ಹೆತ್ತವರು, ಸಹೋದರರೂ ಹೋರಾಡುತ್ತಿದ್ದಾರೆ. ಹಳ್ಳಿಯಲ್ಲಿ ನೂರಾರು ಜನ ಆಕೆಗೆ ಪ್ರಾರ್ಥಿಸಿದ್ದಾರೆ. ಕುಟುಂಬಸ್ಥರು ಮೂರ್ನಾಲ್ಕು ದಿನದಿಂದ ಊಟ-ತಿಂಡಿ-ನಿದ್ದೆ ಬಿಟ್ಟು ಹೋರಾಡುತ್ತಿದ್ದಾರೆ. ಆದರೆ, ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿದ್ದು ವೈದ್ಯರು ಉಳಿಯಲು ಸಾಧ್ಯವೇ ಇಲ್ಲ ಎಂದಾಗ ಹೆತ್ತವರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಹೋಗ್ಬೇಡಿ ಸರ್- ಮಂಡ್ಯದಲ್ಲಿ ಶಿಕ್ಷಕನ ವರ್ಗಾವಣೆಗೆ ವಿದ್ಯಾರ್ಥಿಗಳು ಕಣ್ಣೀರು

    ಒಂಬತ್ತು ಅಂಗಗಳ ದಾನ:
    ರಕ್ಷಿತಾಳ ಹೃದಯ, ಎರಡು ಕಿಡ್ನಿ, ಎರಡು ಕಣ್ಣುಗಳು, ಎರಡು ಶ್ವಾಸಕೋಶ ಸೇರಿ ಒಟ್ಟು ಒಂಭತ್ತು ಮಂದಿಗೆ ರಕ್ಷಿತಾಳ ಅಂಗಾಂಗಗಳನ್ನು ಜೋಡಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಸ್ಪತ್ರೆ ಸರ್ಜನ್ ಡಾ.ಮೋಹನ್ ಸ್ಪಷ್ಟಪಡಿಸಿದ್ದಾರೆ. ಅದಕ್ಕಾಗಿ ಈಗಾಗಲೇ ಚಿಕ್ಕಮಗಳೂರಿಗೆ ಬೆಂಗಳೂರು, ಚೆನ್ನೈನಿಂದ ನುರಿತ ವೈದ್ಯರ ತಂಡವೂ ಆಗಮಿಸಿದೆ. ಗುರುವಾರ (ಸೆಪ್ಟೆಂಬರ್ 22) ಬೆಳಗ್ಗೆ 10.30 ರಿಂದ 12 ಗಂಟೆಯೊಳಗೆ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿರುವ ರಕ್ಷಿತಾಳ ಅಂಗಾಂಗಳನ್ನು ತೆಗೆಯುವ ಪ್ರಕ್ರಿಯೆ ನಡೆಯಲಿದೆ. ಕೂಡಲೇ ಎರಡು ಹೆಲಿಕಾಪ್ಟರ್ ಮೂಲಕ ರಕ್ಷಿತಾಳ ಅಂಗಾಂಗಗಳನ್ನು ರವಾನೆ ಮಾಡಲು ಜಿಲ್ಲಾಡಳಿತ ಸಿದ್ಧತೆ ಮಾಡಿದೆ.

    Live Tv
    [brid partner=56869869 player=32851 video=960834 autoplay=true]

  • ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ 16 ತಿಂಗಳ ಮುದ್ದು ಕಂದ

    ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ 16 ತಿಂಗಳ ಮುದ್ದು ಕಂದ

    ನವದೆಹಲಿ: ಪುಟ್ಟ ಪುಟ್ಟ ಹೆಜ್ಜೆಯಿಟ್ಟು ನಡೆಯಲು ಪ್ರಯತ್ನಿಸುವ ವೇಳೆ ಬಿದ್ದ ಪರಿಣಾಮ ಮೆದುಳು ನಿಷ್ಕ್ರಿಯವಾಗಿ 16 ತಿಂಗಳ ಮಗು ಮೃತಪಟ್ಟಿರುವ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ಅಂಗಾಂಗ ದಾನದೊಂದಿಗೆ ಮಗು ಸಾವಿನಲ್ಲೂ ಸಾರ್ಥಕತೆ ಮೆರೆದಿದೆ.

    ಆಗಸ್ಟ್ 17ರಂದು ಬೆಳಗ್ಗೆ ಬಿದ್ದು ಮಗು ರಿಶಾಂತ್‌ ಗಂಭೀರವಾಗಿ ಗಾಯಗೊಂಡಿತ್ತು. ವೃತ್ತಿಯಲ್ಲಿ ಖಾಸಗಿ ಗುತ್ತಿಗೆದಾರರಾದ ಮಗುವಿನ ತಂದೆ ಉಪಿಂದರ್, ತಕ್ಷಣ ಮಗುವನ್ನು ಜಮುನಾ ಪಾರ್ಕ್‌ನಲ್ಲಿರುವ ತಮ್ಮ ನಿವಾಸದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್‌ ಮಗುವಿನ ಮೆದುಳು ನಿಷ್ಕ್ರಿಯವಾಗಿದೆ ಎಂದು ಏಮ್ಸ್‌ ವೈದ್ಯರು ದೃಢಪಡಿಸಿದರು. ಇದನ್ನೂ ಓದಿ: ಸಾವಿನಲ್ಲೂ ಸಾರ್ಥಕತೆ ಮೆರೆದ ಕೂಲಿ ಕಾರ್ಮಿಕರು- ಮೃತಪಟ್ಟ 9 ಮಂದಿಯಲ್ಲಿ 6 ಜನರ ನೇತ್ರದಾನ

    ಮಗುವಿನ ಅಂಗಾಂಗ ದಾನ ಮಾಡಿದರೆ ಅನೇಕರ ಬದುಕಿಗೆ ಬೆಳಕು ನೀಡಿದಂತಾಗುತ್ತದೆ ಎಂದು ಏಮ್ಸ್‌ ವೈದ್ಯರು ಮಗು ರಿಶಾಂತ್‌ ಪೋಷಕರಿಗೆ ಸಲಹೆ ನೀಡಿದರು. ಅಲ್ಲದೇ ಅಂಗಾಂಗ ದಾನದ ಬಗ್ಗೆ ಕೌನ್ಸೆಲಿಂಗ್‌ ಕೂಡ ನಡೆಸಿದರು. AIIMS ವೈದ್ಯರ ಸಲಹೆ ಮೇರೆಗೆ ಮಗುವಿನ ಪೋಷಕರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದರು.

    ರಿಶಾಂತ್‌ ನಮ್ಮ ಕುಟುಂಬದ ಪ್ರೀತಿಯ ಮಗನಾಗಿದ್ದ. ಐವರು ಅಕ್ಕಂದಿರು ಅವನನ್ನು ತುಂಬಾ ಪ್ರೀತಿಸುತ್ತಿದ್ದರು. ದುರದೃಷ್ಟವಶಾತ್‌ ಅಂದು ನಾನು ಕೆಲಸಕ್ಕೆ ಹೊರಡುವ ಆತುರದಲ್ಲಿದ್ದೆ. ಈ ವೇಳೆ ಆತ ಬಿದ್ದು ಗಂಭೀರ ಗಾಯಗೊಂಡ. ಆತನನ್ನು ಹಿಡಿದುಕೊಳ್ಳಲು ನನ್ನಿಂದ ಸಾಧ್ಯವಾಗಲಿಲ್ಲ. ಮುದ್ದು ಕಂದ ಇನ್ನಿಲ್ಲವಾಗಿದ್ದಾನೆ. ಅವನ ಅಂಗಾಂಗಗಳು ಇತರರ ಜೀವ ಉಳಿಸುತ್ತೆ ಎನ್ನುವ ಉದ್ದೇಶದಿಂದ ದಾನ ಮಾಡಿದ್ದೇವೆ ಎಂದು ಉಪೀಂದರ್‌ ಭಾವುಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಗೆ 15 ಬಾರಿ ಕರೆ ಮಾಡಿ ಟೆಕ್ಕಿ ಸುಂದರಿ ಆತ್ಮಹತ್ಯೆ

    Live Tv
    [brid partner=56869869 player=32851 video=960834 autoplay=true]

  • ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ವೃದ್ಧೆ

    ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ವೃದ್ಧೆ

    ಹುಬ್ಬಳ್ಳಿ: ಅಂಗಾಂಗ ದಾನ ಮಾಡುವ ಮೂಲಕ ಮುರಗೆಮ್ಮ ಬಸಪ್ಪ ಹೂಗಾರ ಎಂಬವರು ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಗತಿಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ.

    ಮುರಗೆಮ್ಮ ಮೂಲತಃ ಕಮಡೊಳ್ಳಿ ಗ್ರಾಮದವರಾಗಿದ್ದು, ಪ್ರಸ್ತುತವಾಗಿ ಹುಬ್ಬಳ್ಳಿಯ ನವನಗರ ನಿವಾಸಿಯಾಗಿದ್ದರು. ಮುರಗೆಮ್ಮ ಅವರ ಪಾರ್ಥಿವ ಶರೀರವನ್ನು ಬೈಲಹೊಂಗಲದ ಡಾ. ರಾಮಣ್ಣನವರ ಚಾರಿಟಬಲ್ ಟ್ರಸ್ಟ್ ಮುಖಾಂತರ ಕೆಎಲ್‍ಇ ವಿಶ್ವವಿದ್ಯಾಲಯದ ಶ್ರೀ ಬಿಎಂಕೆ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿಗೆ ದಾನ ಮಾಡಲಾಗಿದೆ.

    ಪ್ರಸ್ತುತ ವೈಜ್ಞಾನಿಕ ದಿನಮಾನಗಳಲ್ಲಿ ಕೂಡ ಅವೈಜ್ಞಾನಿಕ ಮೂಢನಂಬಿಕೆ ಆಚರಣೆಗಳಿಂದ ನಮ್ಮ ಜನರು ಭಯಭೀತರಾಗುತ್ತಾರೆ. ಅಲ್ಲದೆ ನಿಧನದ ನಂತರದಲ್ಲಿ ಇಲ್ಲಸಲ್ಲದ ಊಹಾಪೋಹಗಳಿಗೆ ತಲೆ ಕೆಡೆಸಿಕೊಳ್ಳುತ್ತಾರೆ. ಇಂತಹ ಅವೈಜ್ಞಾನಿಕ ಚಿಂತನೆಗಳನ್ನು ಹೋಗಲಾಡಿಸಿ ಮನುಷ್ಯ ದೇಹ ಸಾವಿನ ನಂತರವೂ ಹಲವಾರು ಉಪಯೋಗಕ್ಕೆ ಬರುತ್ತದೆ ಎಂಬುದಕ್ಕೆ ಮುರಗೆಮ್ಮನವರ ಮೃತ ದೇಹದ ದಾನ ಸೂಕ್ತ ನಿದರ್ಶನವಾಗಿದೆ.

    ಸಾವಿನ ನಂತರದಲ್ಲಿ ಮನುಷ್ಯನ ದೇಹದಲ್ಲಿರುವ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅದೆಷ್ಟೋ ಅಂಧ ಕಣ್ಣುಗಳು ಸುಂದರ ಜಗತ್ತನ್ನು ನೋಡಲು ಸೂಕ್ತ ಮಾರ್ಗವಾಗಿದೆ. ಸಾವಿನ ನಂತರವೂ ಮನುಷ್ಯ ಬದುಕಿರಬಹುದು ಎಂಬಂತ ಮಾತಿಗೆ ದೇಹ ದಾನ ಹಾಗೂ ಸಾವಿನ ನಂತರದಲ್ಲಿ ಅಂಗಾಂಗ ದಾನ ಮಾಡುವುದು ವಿಶೇಷವಾಗಿದೆ.