Tag: Oscar 2025

  • ‘ಲಾಪತಾ ಲೇಡಿಸ್’ ಬೆನ್ನಲ್ಲೇ ಆಸ್ಕರ್‌ಗೆ ಪ್ರವೇಶ ಪಡೆದ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಚಿತ್ರ

    ‘ಲಾಪತಾ ಲೇಡಿಸ್’ ಬೆನ್ನಲ್ಲೇ ಆಸ್ಕರ್‌ಗೆ ಪ್ರವೇಶ ಪಡೆದ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಚಿತ್ರ

    ‘ಲಾಪತಾ ಲೇಡಿಸ್’ (Laapataa Ladies) ಬೆನ್ನಲ್ಲೇ ಬಾಲಿವುಡ್ ನಟ ರಣ್‌ದೀಪ್ ಹೂಡಾ (Randeep Hooda) ನಟಿಸಿ, ನಿರ್ದೇಶಿಸಿರುವ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಚಿತ್ರವು ಅಧಿಕೃತವಾಗಿ 2025ರ (Oscar 2025) ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದೆ. ಇದನ್ನೂ ಓದಿ:ಹಿಂದಿ ಬಿಗ್ ಬಾಸ್‌ಗೆ ಎಂಟ್ರಿ ಕೊಡ್ತಾರಾ ಮಹೇಶ್ ಬಾಬು ಸಂಬಂಧಿ?

     

    View this post on Instagram

     

    A post shared by SANDEEP SINGH (@officialsandipssingh)

    ಆಮೀರ್‌ ಖಾನ್‌ ನಿರ್ಮಾಣದ ‘ಲಾಪತಾ ಲೇಡಿಸ್‌’ ಚಿತ್ರ ಆಸ್ಕರ್‌ ಆಯ್ಕೆಯಾದ ಬೆನ್ನಲ್ಲೇ ಈಗ ಈ ಸಿನಿಮಾ ಆಸ್ಕರ್ 2025ಕ್ಕೆ ಅಧಿಕೃತವಾಗಿ ಪ್ರವೇಶ ಪಡೆದಿದೆ. ಈ ಜೀವನಚರಿತ್ರೆಯಾಧಾರಿತ ಸಿನಿಮಾವೂ ಸ್ವಾತಂತ್ರ‍್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಅವರ ಜೀವನಗಾಥೆಯನ್ನು ಹೊಂದಿದೆ. ಈ ಸಿನಿಮಾದಲ್ಲಿ ರಣ್‌ದೀಪ್ ಹೂಡಾ ಜೊತೆ ಬಾಲಿವುಡ್ ನಟಿ ಅಂಕಿತಾ ಲೋಖಂಡೆ (Ankitha Lokhande) ನಟಿಸಿದ್ದರು. ಈ ಚಿತ್ರ ಕಳೆದ ವರ್ಷ 2024ರಲ್ಲಿ ತೆರೆಕಂಡಿತ್ತು.

    ಈ ಸಿನಿಮಾವೀಗ ಆಸ್ಕರ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಚಿತ್ರದ ನಿರ್ಮಾಪಕ ಸಂದೀಪ್ ಈ ಖುಷಿಯ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸಂತಸದ ಜೊತೆ ಹೆಮ್ಮೆ ಹಾಗೂ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ. ಗೌರವ ಹಾಗೂ ವಿನಮ್ರತೆ, ನಮ್ಮ ಸಿನಿಮಾ ‘ಸ್ವಾತಂತ್ರ‍್ಯ ವೀರ್ ಸಾವರ್ಕರ್’ ಅಧಿಕೃತವಾಗಿ ಆಸ್ಕರ್‌ಗೆ ಆಯ್ಕೆಯಾಗಿದೆ. ಈ ಚಿತ್ರವನ್ನು ಗುರುತಿಸಿದ ‘Film Federation Of India’ ತಂಡಕ್ಕೆ ಧನ್ಯವಾದಗಳು. ನಮ್ಮನ್ನು ಬೆಂಬಲಿಸಿದವರಿಗೂ ಧನ್ಯವಾದಗಳು ಎಂದಿದ್ದಾರೆ.

  • Oscar 2025: ಆಸ್ಕರ್‌ ಅಂಗಳಕ್ಕೆ ಧುಮುಕಿದ ಆಮೀರ್‌ ಖಾನ್‌ ನಿರ್ಮಾಣದ ‘ಲಾಪತಾ ಲೇಡಿಸ್’ ಚಿತ್ರ

    Oscar 2025: ಆಸ್ಕರ್‌ ಅಂಗಳಕ್ಕೆ ಧುಮುಕಿದ ಆಮೀರ್‌ ಖಾನ್‌ ನಿರ್ಮಾಣದ ‘ಲಾಪತಾ ಲೇಡಿಸ್’ ಚಿತ್ರ

    ಸ್ಕರ್ ಅವಾರ್ಡ್‌ ಕಾರ್ಯಕ್ರಮದ ಬಗ್ಗೆ ಬಿಗ್‌ ಅಪ್‌ಡೇಟ್‌ವೊಂದು ಸಿಕ್ಕಿದೆ. ಕಿರಣ್ ರಾವ್ ಚೊಚ್ಚಲ ನಿರ್ದೇಶನದ ಬಾಲಿವುಡ್ ಸಿನಿಮಾ ‘ಲಾಪತಾ ಲೇಡಿಸ್’ (Laapataa Ladies) ಚಿತ್ರ 2025ರ ಆಸ್ಕರ್‌ಗೆ (Oscar 2025) ನಾಮ ನಿರ್ದೇಶನಗೊಂಡಿದೆ. ಇದನ್ನೂ ಓದಿ:ಟ್ರೋಲ್‌ಗೆ ಡೋಂಟ್ ಕೇರ್- ಮತ್ತೆ ಬಾತ್‌ರೂಮ್ ರೀಲ್ಸ್ ಶೇರ್ ಮಾಡಿದ ನಿವೇದಿತಾ ಗೌಡ

    ಆಮೀರ್‌ ಖಾನ್‌ ನಿರ್ಮಾಣದ ಮತ್ತು ಕಿರಣ್‌ ರಾವ್‌ ನಿರ್ದೇಶನದ ‘ಲಾಪತಾ ಲೇಡಿಸ್‌’ ಚಿತ್ರವು ಭಾರತವನ್ನು ಪ್ರತಿನಿಧಿಸಿ ಆಸ್ಕರ್‌ ಅಂಗಳಕ್ಕೆ ಲಗ್ಗೆ ಇಟ್ಟಿದೆ. ಇದರ ಜೊತೆಗೆ 29 ಸಿನಿಮಾಗಳು 2025ರ ಆಸ್ಕರ್‌ ರೇಸ್‌ನಲ್ಲಿವೆ. ಹನುಮಾನ್‌, ಕಲ್ಕಿ 2898 ಎಡಿ, ಅನಿಮಲ್ ಸಿನಿಮಾ, ಗುಡ್‌ ಲಕ್‌, ಆರ್ಟಿಕಲ್‌ 370, ಆಟ್ಟಂ, ಆಡುಜೀವಿತಂ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಿವೆ.

    ಕಳೆದ ವರ್ಷ ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್‌’ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್‌ ಪ್ರಶಸ್ತಿ ಲಭಿಸಿತ್ತು.