Tag: oscar fernandes

  • ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ

    ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ

    ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್(80) ಅವರು ಇಹಲೋಕ ತ್ಯಜಿಸಿದ್ದಾರೆ.

    ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ  ಗಂಭೀರವಾಗಿತ್ತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

    ಕಾಂಗ್ರೆಸ್ ನಾಯಕರಾದ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ್ದರು. ಅಲ್ಲದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ಫರ್ನಾಂಡಿಸ್ ಅವರ ಕುಟುಂಬಸ್ಥರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು.

    ಆಸ್ಕರ್ ಫರ್ನಾಂಡಿಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಫರ್ನಾಂಡಿಸ್ ಗುರುತಿಸಿಕೊಂಡಿದ್ದರು. ಪಕ್ಷದಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಪ್ರಮುಖ ನಾಯಕರ ಪೈಕಿ ಆಸ್ಕರ್ ಫರ್ನಾಂಡಿಸ್ ಅವರು ಸಹ ಒಬ್ಬರಾಗಿದ್ದರು. ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಹ ಕೆಲಸ ಮಾಡಿದ್ದರು.

    ಫರ್ನಾಂಡಿಸ್ ಅವರು ಮಾರ್ಚ್ 27, 1941ರಲ್ಲಿ ಉಡುಪಿಯಲ್ಲಿ ಜನಿಸಿದ್ದರು. ಜನವರಿ 18, 1980 ರಲ್ಲಿ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ 17 ಜೂನ್ 2013ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾಗಿದ್ದರು. ಒಟ್ಟು ಐದು ಬಾರಿ ಉಡುಪಿಯಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಬಳಿಕ 2004ರಲ್ಲಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

  • ಆಸ್ಕರ್ ಫೆರ್ನಾಂಡಿಸ್‍ಗೆ ಶಸ್ತ್ರಚಿಕಿತ್ಸೆ ಯಶಸ್ವಿ

    ಆಸ್ಕರ್ ಫೆರ್ನಾಂಡಿಸ್‍ಗೆ ಶಸ್ತ್ರಚಿಕಿತ್ಸೆ ಯಶಸ್ವಿ

    ಮಂಗಳೂರು: ಕಾಂಗ್ರೆಸ್ಸಿನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

    ಸದ್ಯ ಆಸ್ಕರ್ ಅವರು ಮಂಗಳೂರಿನ ಯೆನಪೋಯ ಆಸ್ಪತ್ರೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಮೆದುಳಿನ ರಕ್ತನಾಳ ಹೆಪ್ಪುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದರು. ಹೀಗಾಗಿ ವೈದ್ಯರು ತಡರಾತ್ರಿ ಮೆದುಳಿನ ರಕ್ತನಾಳದ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಡಾ.ದಿವಾಕರ್ ರಾವ್ ಹಾಗೂ ಡಾ. ಸುನೀಲ್ ಶೆಟ್ಟಿ ಅವರಿಂದ ಶಸ್ತ್ರಚಿಕಿತ್ಸೆ ನಡೆದಿದ್ದು, ಹೆಪ್ಪುಗಟ್ಟಿದ ರಕ್ತ ಶಸ್ತ್ರಚಿಕಿತ್ಸೆಯ ಮೂಲಕ ತೆರವುಗೊಳಿಸಲಾಗಿದೆ.

    ವೈದ್ಯರುಗಳ ಪರಿಶ್ರಮದಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಶೀಘ್ರ ಪ್ರಜ್ಞೆ ಮರುಕಳಿಸುವ ನಿರೀಕ್ಷೆ ಇದೆ. ಕಳೆದ ಭಾನುವಾರ ಮನೆಯಲ್ಲಿ ಯೋಗ ಮಾಡುವ ಸಂದರ್ಭದಲ್ಲಿ ಜಾರಿ ಬಿದ್ದಿದ್ದರು. ಆದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲವೆಂದು ನಿರ್ಲಕ್ಷ್ಯ ವಹಿಸಿದ್ದರು. ಆ ಬಳಿಕ ಮಾಮೂಲಿ ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ತಲೆಯ ಒಳಭಾಗಕ್ಕೆ ಏಟು ಬಿದ್ದಿರುವುದು ಬೆಳಕಿಗೆ ಬಂದಿತ್ತು.

  • ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಕಟೀಲ್

    ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಕಟೀಲ್

    ಮಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

    ಆಸ್ಕರ್‍ ರನ್ನು ಕಂಡ ಬಳಿಕ ಕುಟುಂಬಿಕರ ಜೊತೆ ಮಾತನಾಡಿ ಧೈರ್ಯ ತುಂಬಿದ ನಳಿನ್ ಕುಮಾರ್ ಕಟೀಲ್ ಅವರು ನಂತರ ಮಾಧ್ಯಮಗಳ ಜೊತೆ ಮಾತನಾಡಿ, ಆಸ್ಕರ್ ಒಬ್ಬ ಹಿರಿಯ ರಾಜಕೀಯ ಮುತ್ಸದ್ದಿ, ಸಜ್ಜನಿಕೆಯ ರಾಜಕಾರಣಕ್ಕೆ ಹೆಸರಾದವರು. ಆರೋಗ್ಯದಲ್ಲಿ ಕಂಡು ಬಂದ ಏರುಪೇರಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದರು. ಇದನ್ನೂ ಓದಿ: ಧರ್ಮಸ್ಥಳದ ಪ್ರಸಾದ ನೀಡಿ ಆಸ್ಕರ್ ಫೆರ್ನಾಂಡಿಸ್ ಚೇತರಿಕೆಗೆ ಪ್ರಾರ್ಥಿಸಿದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

    ಆಸ್ಪತ್ರೆಗೆ ದಾಖಲಾದ ದಿನದಿಂದ ಇವತ್ತು ಅವರ ಆರೋಗ್ಯ ಸುಧಾರಿಸ್ತಾ ಇದೆ, ಶೀಘ್ರ ಗುಣಮುಖರಾಗಿ ಹೊರಗೆ ಬರಲಿ ಎಂದು ಪ್ರಾರ್ಥನೆ ಮಾಡುತ್ತೇವೆ. ರಾಜ್ಯಸಭೆಯಲ್ಲಿ ಅವರ ಮಾರ್ಗದರ್ಶನ ಇನ್ನಷ್ಟು ಕಾಲ ಸಿಗಲಿ ಎಂದು ಬೇಡಿಕೊಳ್ಳುತ್ತೇವೆ. ವೈದ್ಯರ ಜೊತೆಗೂ ಮಾತನಾಡಿದ್ದೇವೆ, ಅವರ ಆರೋಗ್ಯ ಸುಧಾರಿಸುತ್ತಾ ಇದೆ ಎಂದಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

  • ಧರ್ಮಸ್ಥಳದ ಪ್ರಸಾದ ನೀಡಿ ಆಸ್ಕರ್ ಫೆರ್ನಾಂಡಿಸ್ ಚೇತರಿಕೆಗೆ ಪ್ರಾರ್ಥಿಸಿದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

    ಧರ್ಮಸ್ಥಳದ ಪ್ರಸಾದ ನೀಡಿ ಆಸ್ಕರ್ ಫೆರ್ನಾಂಡಿಸ್ ಚೇತರಿಕೆಗೆ ಪ್ರಾರ್ಥಿಸಿದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ

    ಮಂಗಳೂರು: ಮಂಗಳೂರಿನ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

    ಆಸ್ಪತ್ರೆಗೆ ಭೇಟಿ ನೀಡಿದ ವೀರೇಂದ್ರ ಹೆಗ್ಗಡೆ ಅವರು ಆಸ್ಕರ್ ಫೆರ್ನಾಂಡಿಸ್ ಅವರಿಗೆ ಧರ್ಮಸ್ಥಳ ಮಂಜುನಾಥ ದೇವರ ಪ್ರಸಾದವನ್ನು ನೀಡಿ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದರು. ಬಳಿಕ ಕುಟುಂಬ ವರ್ಗದವರು ಮತ್ತು ವೈದ್ಯರೊಂದಿಗೆ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

    ಈ ಸಂದರ್ಭದಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆ ಅವರು, ಆಸ್ಕರ್ ಫೆರ್ನಾಂಡಿಸ್ ರವರು ಇಂದಿರಾಗಾಂಧಿ, ರಾಜೀವ್ ಗಾಂಧಿಯವರಿಗೆ ಆಪ್ತರಾಗಿದ್ದರು. ರಾಜ್ಯಕ್ಕೆ ಬಹಳಷ್ಟು ಸೇವೆ ಮಾಡಿದ್ದಾರೆ. ಅವರಿಗೆ ಧರ್ಮಸ್ಥಳ ಮಂಜುನಾಥ ದೇವರ ಪ್ರಸಾದ ಹಾಕಿ, ಶುಭಹಾರೈಸಿ ಬಂದಿದ್ದೇನೆ. ವೈದ್ಯರ ವರದಿ ಪ್ರಕಾರ, ಅವರ ಮೆದುಳು ಇನ್ನೂ ಚುರುಕಾಗಿದೆ. ಪಕ್ಷಾತೀತವಾಗಿ ಕರ್ನಾಟಕ ಹಾಗೂ ತುಳುನಾಡಿನ ಜನತೆ ಅವರ ಆರೋಗ್ಯಕ್ಕಾಗಿ ಪ್ರಾರ್ಥನೆ ಮಾಡುತ್ತಿದ್ದೇವೆ ಅವರು ಶೀಘ್ರ ಗುಣಮುಖರಾಗಲಿ ಎಂದು ವೀರೇಂದ್ರ ಹೆಗ್ಗಡೆ ಹಾರೈಸಿದರು. ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

  • ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ಸುಧಾರಿಸಲು ದೇವಸ್ಥಾನ, ಚರ್ಚ್, ಮಸೀದಿಯಲ್ಲಿ ಪ್ರಾರ್ಥನೆ

    ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ಸುಧಾರಿಸಲು ದೇವಸ್ಥಾನ, ಚರ್ಚ್, ಮಸೀದಿಯಲ್ಲಿ ಪ್ರಾರ್ಥನೆ

    ಉಡುಪಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚೇತರಿಕೆಗಾಗಿ ಹಾರೈಸಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ತಾಲೂಕಿನ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.

    ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ, ಪೊಲಿಪು ಜಾಮಿಯಾ ಮಸೀದಿ, ಉದ್ಯಾವರ ಚರ್ಚ್, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ, ಉದ್ಯಾವರ ಮಹಾಗಣಪತಿ ದೇವಸ್ಥಾನ ಸಹಿತವಾಗಿ ವಿವಿಧ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಗಳಲ್ಲಿ ಪ್ರಾರ್ಥನೆ, ಹರಕೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಆಸ್ಕರ್ ಅವರು ಎಲ್ಲರ ಆಜಾತಶತ್ರು ಎಂದರು.

    ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪಕ್ಷವನ್ನು ಮುನ್ನಡೆಸಿದ್ದಾರೆ. ಜಾತಿ, ಮತ, ಧರ್ಮ, ಪಕ್ಷ ಭೇಧ ಮರೆತು ಸೇವೆ ಸಲ್ಲಿಸಿದ್ದಾರೆ. ಅವರ ಸೇವೆ ಪಕ್ಷ, ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟಕ್ಕೆ ಇನ್ನೂ ಬೇಕಿದೆ. ಅವರಿಗಾಗಿ ಎಲ್ಲೆಡೆ ಪ್ರಾರ್ಥನೆ ನಡೆಯುತ್ತಿದೆ ಎಂದು ಹೇಳಿದರು. 2 ದಿನಗಳಿಂದ ಉಡುಪಿ ಜಿಲ್ಲೆಯಾದ್ಯಂತ ಆಪ್ತರ ಅಭಿಮಾನಿಗಳು ಕಾಂಗ್ರೆಸ್ ನಾಯಕರು ದೇವರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಆಸ್ಕರ್ ಆರೋಗ್ಯಕ್ಕಾಗಿ ಅನಂತೇಶ್ವರ ದೇವರಿಗೆ ಪೂಜೆ – ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರಾರ್ಥನೆ

    ಜಿಲ್ಲಾ ಬಿಜೆಪಿ ಅಧ್ಯಕ್ಷ ಪೂಜಾರಿ ಸುರೇಶ್ ನಾಯಕ್ ಆಸ್ಕರ್ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿಕೊಟ್ಟು ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

  • ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

    ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆಶಿ

    ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

    ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡಿದ್ದ ಆಸ್ಕರ್ ಫೆರ್ನಾಂಡಿಸ್ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ದಾಖಲಾಗಿದ್ದು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ಅವರ ಆರೋಗ್ಯ ವಿಚಾರಿಸಲು ಮಂಗಳೂರಿಗೆ ಆಗಮಿಸಿದ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಕರ್ ಅವರ ಮನೆಯವರಲ್ಲಿ ಮಾತುಕತೆ ನಡೆಸಿದ್ರು. ಆಸ್ಪತ್ರೆ ಭೇಟಿ ಬಳಿಕ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ ಆಸ್ಕರ್ ಅವರ ಆರೋಗ್ಯ ಹದಗೆಟ್ಟಿಲ್ಲ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ತಜ್ಞ ವೈದ್ಯರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ದೆಹಲಿಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡೋ ಅಗತ್ಯ ಇಲ್ಲ ಎಂದರು.

    ದೇಶದ ವಿವಿಧ ಕಡೆಯಿಂದಲೆ ಮಂಗಳೂರಿನ ಆಸ್ಪತ್ರೆಗೆ ಬರುತ್ತಾರೆ. ಹೀಗಾಗಿ ಇಲ್ಲೇ ಉತ್ತಮ ಚಿಕಿತ್ಸೆ ಪಡೆದು ಅವರು ಶೀಘ್ರ ಗುಣಮುಖರಾಗಿ ಹೊರ ಬರಲಿ ಎಂದು ದೇವರಲ್ಲಿ ಪ್ರಾರ್ಥಿಸೋದಾಗಿ ಹೇಳಿದರು.

    ವಲಸಿಗರು ಅಲ್ಲ,ಬಿಜೆಪಿಯ ಶಾಸಕ ಸಚಿವರುಗಳು: ವಲಸೆ ಶಾಸಕರು ಈಗ ಅವರು ವಲಸಿಗರಲ್ಲ, ಅವರು ಬಿಜೆಪಿ ಶಾಸಕರು- ಸಚಿವರುಗಳು, ಅವರಿಗೂ ನಮಗೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಶಾಸಕರು ಮೀಟಿಂಗ್ ಮಾಡಿ, ಯಾರನ್ನ ಭೇಟಿ ಮಾಡಿದ್ರು ಅದಕ್ಕೂ ನಮಗೂ ಸಂಬಧವಿಲ್ಲ. ವಲಸೆ ಶಾಸಕರು ಮರಳಿ ಪಕ್ಷಕ್ಕೆ ಬರುವ ವಿಚಾರದ ಬಗ್ಗೆ ನಾನು ಈಗ ಏನು ಹೇಳಲ್ಲ. ಅದಕ್ಕೆಲ್ಲಾ ಇನ್ನು ಸಮಯವಿದೆ. ಮುಂದೆ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನಿಮಗೂ ಸಿಗಲಿದೆ ನಾನು ಕೂಡ ಉತ್ತರ ಕೊಡುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

  • ಆಸ್ಕರ್ ಆರೋಗ್ಯಕ್ಕಾಗಿ ಅನಂತೇಶ್ವರ ದೇವರಿಗೆ ಪೂಜೆ – ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರಾರ್ಥನೆ

    ಆಸ್ಕರ್ ಆರೋಗ್ಯಕ್ಕಾಗಿ ಅನಂತೇಶ್ವರ ದೇವರಿಗೆ ಪೂಜೆ – ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರಾರ್ಥನೆ

    ಉಡುಪಿ: ರಾಜ್ಯಸಭಾ ಸದಸ್ಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಶೀಘ್ರ ಗುಣಮುಖರಾಗಲಿ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ದೇವರ ಮೊರೆ ಹೋಗಿದೆ. ಅನಂತೇಶ್ವರ ದೇವರಿಗೆ, ರಾಘವೇಂದ್ರ ಸ್ವಾಮಿಗಳಿಗೆ ಪೂಜೆ ಸಲ್ಲಿಸಿದೆ.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೇತೃತ್ವದಲ್ಲಿ ಪದಾಧಿಕಾರಿಗಳು ಸದಸ್ಯರು ರಥಬೀದಿಯಲ್ಲಿರುವ ಅನಂತೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು. ಆಸ್ಕರ್ ಫೆರ್ನಾಂಡಿಸ್ ಶೀಘ್ರ ಚೇತರಿಕೆಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳಲಾಯಿತು. ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ರಾಘವೇಂದ್ರ ಮಠದಲ್ಲಿ ಆಸ್ಕರ್ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

    ಸುಮಾರು 50 ವರ್ಷಗಳ ಕಾಲ ರಾಷ್ಟ್ರರಾಜಕಾರಣದಲ್ಲಿ ತೊಡಗಿಸಿಕೊಂಡಿರುವ ಆಸ್ಕರ್ ಫೆರ್ನಾಂಡಿಸ್, ಪಕ್ಷಬೇಧ ಮರೆತು ಕೆಲಸ ಮಾಡಿದವರು. ಜಾತಿ ಮತ ಬೇಧ ರಾಜಕಾರಣವನ್ನು ಹತ್ತಿರವೂ ಸೇರಿಸಿಕೊಂಡವರಲ್ಲ. ಗಾಂಧಿ ಕುಟುಂಬಕ್ಕೆ ಬಹಳ ಹತ್ತಿರ ಇರುವ ಸ್ವಾರ್ಥ ರಹಿತ ಜೀವನ ನಡೆಸುವವರು ಇನ್ನಷ್ಟು ಬಾಳಿ ಬದುಕಬೇಕು ಎಂದು ಅರ್ಚಕರ ಮೂಲಕ ದೇವರಲ್ಲಿ ಕೋರಿಕೊಳ್ಳಲಾಯ್ತು. ಇನ್ನಷ್ಟು ಕಾಲ ಆಸ್ಕರ್ ಅವರ ಸೇವೆ ದೇಶಕ್ಕೆ ಸಿಗಬೇಕು ಎಂದು ನಾಯಕರು ದೇವರಲ್ಲಿ ಪ್ರಾರ್ಥನೆ ಮಾಡಿದರು. ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

    ಅಶೋಕ್ ಕುಮಾರ್ ಮಾತನಾಡಿ, ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಚಿಂತಾಜನಕವಾಗಿದೆ. ನಾಯಕರ ಆರೋಗ್ಯ ವಿಚಾರಿಸಲು ಮಂಗಳೂರಿಗೆ ಹೋಗುವ ಪರಿಸ್ಥಿತಿ ಈಗ ಇಲ್ಲ. ಕೊರೋನಾ ಕಾರಣ ಎಲ್ಲರನ್ನು ಆಸ್ಪತ್ರೆಯೊಳಗೆ ಬಿಡುತ್ತಿಲ್ಲ. ಚರ್ಚ್ ಮಸೀದಿಯಲ್ಲಿ ಈಗಾಗಲೇ ಪ್ರಾರ್ಥನೆಗಳನ್ನು ಕಾಂಗ್ರೆಸ್ನ ಕಾರ್ಯಕರ್ತರು ಅಭಿಮಾನಿಗಳು ಸಲ್ಲಿಸಿದ್ದಾರೆ. ವಿಶೇಷ ಪೂಜೆ ದೇವರಿಗೆ ನೀಡಿದ್ದೇವೆ. ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದೇವೆ. ಎಲ್ಲರೂ ದೇವರಲ್ಲಿ ಪ್ರಾರ್ಥನೆ ಮಾಡಿ ಎಂದರು.

  • ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

    ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

    ಮಂಗಳೂರು: ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಆಸ್ಕರ್ ಅವರು ಭಾನುವಾರ ಮನೆಯಲ್ಲಿ ನಿಯಂತ್ರಣ ತಪ್ಪಿ ಜಾರಿ ಬಿದಿದ್ದರು. ಆದರೆ ದೊಡ್ಡ ಪ್ರಮಾಣದಲ್ಲಿ ಗಾಯವಾಗಿಲ್ಲವೆಂದು ನಿರ್ಲಕ್ಷ್ಯ ವಹಿಸಿದ್ದರು.

    ಇದೀಗ ಮಾಮೂಲಿ ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತೆರಳಿದ್ದ ವೇಳೆ ತಲೆಯ ಒಳಭಾಗಕ್ಕೆ ಏಟು ಬಿದ್ದಿರುವುದು ಬೆಳಕಿಗೆ ಬಂದಿದೆ. ಶಸ್ತ್ರ ಚಿಕಿತ್ಸೆ ಹಿನ್ನೆಲೆಯಲ್ಲಿ ಆಸ್ಕರ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳು ಇವೆ: ಅಲಂ ಪಾಷಾ

  • ಆಪ್ತ ಸಹಾಯಕನಿಗೆ ಸಂಬಳವೇ ಕೊಟ್ಟಿಲ್ವಂತೆ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್

    ಆಪ್ತ ಸಹಾಯಕನಿಗೆ ಸಂಬಳವೇ ಕೊಟ್ಟಿಲ್ವಂತೆ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್

    ಉಡುಪಿ: ರಾಜ್ಯಸಭಾ ಸದಸ್ಯ, ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ತಮ್ಮ ಆಪ್ತ ಸಹಾಯಕನಿಗೆ ಲಕ್ಷಗಟ್ಟಲೆ ಸಂಬಳ ಬಾಕಿಯಿಟ್ಟಿದ್ದಾರಂತೆ. ವರ್ಷಗಟ್ಟಲೆ ಕಾದರೂ ಸಂಬಳ ಕೊಟ್ಟಿಲ್ವಂತೆ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ರೂ ಆಸ್ಕರ್ ಪರ್ಸ್ ಬಿಚ್ಚಿಲ್ವಂತೆ.

    ಆಸ್ಕರ್ ಆಪ್ತ ಸಹಾಯಕ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಮಾಡಲಿದ್ದಾರೆ. ಆಸ್ಕರ್ ಅವರ ಮಣಿಪಾಲ ವರ್ಕ್ ಶಾಪ್ ನಲ್ಲಿ ನಂತರ ಮನೆಯಲ್ಲಿ 1972ರಿಂದ 1987ರವರಗೆ ಉಡುಪಿಯ ಅಂಬಲ್ಪಾಡಿಯ ಗೋಪಾಲ ಪೂಜಾರಿ ಕೆಲಸಕ್ಕಿದ್ದರು. ಮೊದಲು ಸೂಪರ್ ವೈಸರ್ ಆಗಿದ್ದ ಗೋಪಾಲ್ ಪೂಜಾರಿ ನಂತರ ಆಪ್ತ ಸಹಾಯಕರಾದರು. ಈ ಸಂದರ್ಭದಲ್ಲಿ ಸಂಬಳ ನೀಡಿಲ್ಲ. ಆ ಮೇಲೆ ಸಂಬಳ ಕೊಡುವುದಾಗಿ ಹೇಳುತ್ತಾ ದಿನ ದೂಡಿದರು.

    ಈವರೆಗೆ ನನಗೆ 6 ಲಕ್ಷ 10 ಸಾವಿರ ರೂಪಾಯಿ ಸಂಬಳದ ಹಣ ಕೊಡೋದು ಬಾಕಿಯಿದೆ ಅಂತ ಗೋಪಾಲ ಪೂಜಾರಿ ಆರೋಪಿಸಿದ್ದಾರೆ. 1995ರಲ್ಲಿ ಸೋನಿಯಾಗಾಂಧಿಗೆ ದೂರು ನೀಡಿದ್ದೆ. ಸೋನಿಯಾಗಾಂಧಿ ಆಸ್ಕರ್ ಅವರನ್ನು ಕರೆದು ಸಂಬಳ ಕೊಡಿ ಎಂದು ತಾಕೀತು ಮಾಡಿದ್ದರು. ಆದ್ರೂ ಅವರು ಹಣ ಕೊಡಲಿಲ್ಲ. ಮಗಳ ಮದುವೆ ಸಂದರ್ಭದಲ್ಲಾದ್ರೂ ಕೊಡಬಹುದು ಎಂದು ಕಾದು ಈಗ ಮೋಸ ಹೋಗಿದ್ದೇನೆ ಎಂದು ಅವರು ಹೇಳಿದರು.

    ಕಾರ್ಮಿಕ ಇಲಾಖೆ, ಮುಖ್ಯಮಂತ್ರಿಗಳು, ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ರೂ ಪ್ರಯೋಜನವಿಲ್ಲ ಎಂದು ಗೋಪಾಲ್ ಪೂಜಾರಿ ದೂರಿದ್ದಾರೆ. ಏಪ್ರಿಲ್ 1 ರವರೆಗೆ ಗಡುವು ನೀಡಿರುವ ಅವರು, ಏಪ್ರಿಲ್ 2ರಂದು ಉಪವಾಸ ಕೂರುವುದಾಗಿ ಹೇಳಿದ್ದಾರೆ. ಗೋಪಾಲ್ ಪೂಜಾರಿ ಪತ್ನಿ ಚಂಚಲ ಅನಾರೋಗ್ಯದಿಂದ ಬಳಲುತ್ತಿದ್ದು ಸಂಬಂಧಿಕರಿಂದ ಸಹಾಯ ಯಾಚಿಸುವಂತಾಗಿದೆ ಎಂದು ಹೇಳಿದರು.

    15 ದಿನದ ಹಿಂದೆ ಆಸ್ಕರ್ ಗೆ ಪತ್ರ ಬರೆದಿದ್ದೆ. ಅದಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಕೊಟ್ಟ ಹಿಂಬರವನ್ನೂ ಲಗತ್ತಿಸಿದ್ದೆ. ಇದಕ್ಕೂ ಅವರಿಂದ ಉತ್ತರ ಬಂದಿಲ್ಲ ಎಂದು ಹೇಳಿದರು. ನಿಗಮ ಮಂಡಳಿಗೆ ನೇಮಕ ಮಾಡುತ್ತೇನೆ ಎಂದು ಒಂದು ಬಾರಿ ಆಸ್ಕರ್ ಭರವಸೆ ಕೊಟ್ಟಿದ್ದರು ಎಂಬುದನ್ನು ಗೋಪಾಲ್ ಪೂಜಾರಿ ನೆನಪಿಸಿಕೊಂಡರು.

  • ರಾಹುಲ್ ಗಾಂಧಿ ಪ್ರವಾಸ ಮಾಡಿದ್ರೆ ಬಿಜೆಪಿಗೆ ಟೆನ್ಶನ್ ಯಾಕೆ- ಆಸ್ಕರ್ ಫೆರ್ನಾಂಡಿಸ್ ಪ್ರಶ್ನೆ

    ರಾಹುಲ್ ಗಾಂಧಿ ಪ್ರವಾಸ ಮಾಡಿದ್ರೆ ಬಿಜೆಪಿಗೆ ಟೆನ್ಶನ್ ಯಾಕೆ- ಆಸ್ಕರ್ ಫೆರ್ನಾಂಡಿಸ್ ಪ್ರಶ್ನೆ

    ಉಡುಪಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಕೊಟ್ಟಲ್ಲೆಲ್ಲಾ ಬಿಜೆಪಿಗೆ ಲಾಭ ಅಂತ ಹೇಳುತ್ತಾರೆ. ಹಾಗಾದ್ರೆ ರಾಹುಲ್ ಪ್ರವಾಸ ಮಾಡಿದ್ರೆ ಬಿಜೆಪಿಗೆ ಟೆನ್ಶನ್ ಯಾಕೆ ಅಂತ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಪ್ರಶ್ನಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಪ್ರವಾಸದ ವೇಳೆ ಅಭೂತಪೂರ್ವ ಜನಬೆಂಬಲ ಸಿಕ್ಕಿದೆ. ಸರ್ಕಾರದ ಕೆಲಸ ಜನರ ಮನಸ್ಸು, ಹೃದಯ, ಕರುಳನ್ನು ತಲುಪಿದೆ. ರಾಹುಲ್ ರಾಜ್ಯಕ್ಕೆ ಬಂದ್ರೆ ಬಿಜೆಪಿಗೆ ಲಾಭ ಆಗೋದಾದ್ರೆ ಪ್ರಧಾನಿ ಮೋದಿ, ಅಮಿತ್ ಶಾ ಬಂದ್ರೆ ಕಾಂಗ್ರೆಸ್ಸಿಗೆ ಲಾಭವಾಗುತ್ತಾ? ಅಂತ ಆಸ್ಕರ್ ಪ್ರಶ್ನೆ ಮಾಡಿದರು.

    ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೀನುಗಾರರ ಸಮಾವೇಶ ಮಾಡುತ್ತಾರೆ. ಕರಾವಳಿ ಮೀನುಗಾರರು ಸಂಕಷ್ಟದಲ್ಲಿದ್ದಾರೆ. ಸಮಾವೇಶ ಮಾಡುವ ಜೊತೆ ಮೀನುಗಾರರಿಗೆ ಎಲ್ಲಾ ವಿಚಾರದಲ್ಲೂ ಸಂಪೂರ್ಣ ಸಹಕಾರ ಕೊಡಿ ಎಂದು ಹೇಳಿದರು.

    ರಾಹುಲ್ ಗಾಂಧಿ ದೇವಸ್ಥಾನ ಭೇಟಿ ವಿಚಾರದಲ್ಲಿ ವಿಪಕ್ಷಗಳು ಟೀಕಿಸುತ್ತವೆ. ಟೀಕೆ ಮಾಡುವುದು ಅವರ ಕೆಲಸ ಎಂದು ಹೇಳಿದರು.