Tag: over speed

  • ಬಸ್ಸಿಗೆ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್- ಬಾಲಕಿ ಸಾವು

    ಬಸ್ಸಿಗೆ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಹರಿದ ಖಾಸಗಿ ಬಸ್- ಬಾಲಕಿ ಸಾವು

    ಚಿಕ್ಕಮಗಳೂರು: ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಏಕಾಏಕಿ ಖಾಸಗಿ ಬಸ್ (Private Bus) ಹರಿದ ಪರಿಣಾಮ ಬಾಲಕಿ ಸಾವನ್ನಪ್ಪಿದ್ದು, ಉಳಿದ ಮಕ್ಕಳು ಪಾರಾದ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ (Tarikere) ತಾಲೂಕಿನ ಕಾವಲ್ ದುಗ್ಲಾಪುರ ಗೇಟ್‌ನಲ್ಲಿ ನಡೆದಿದೆ.

    ಘಟನೆಯಿಂದ ಗಾಯಗೊಂಡಿದ್ದ ತುಳಸಿ (15) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.  ಇನ್ನೋರ್ವ ಬಾಲಕಿ ನಿವೇದಿತ (14)  ಸ್ಥಿತಿ ಗಂಭೀರವಾಗಿದ್ದು, ಶಿವಮೊಗ್ಗದ (Shivamogga) ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಓವರ್ ಸ್ಪೀಡ್‌ನಿಂದ (Over Speed) ನಿಯಂತ್ರಣ ತಪ್ಪಿದ ಖಾಸಗಿ ಬಸ್ ಏಕಾಏಕಿ ರಸ್ತೆ ಬದಿಯ ಬಸ್ ನಿಲ್ದಾಣ ಹಾಗೂ ಮನೆಗಳತ್ತ ನುಗ್ಗಿದೆ. ನಿಯಂತ್ರಣ ತಪ್ಪಿದ ಬಸ್ ಕಂಡು ರಸ್ತೆ ಬದಿ ಪ್ರಯಾಣಿಕರು ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ಇದನ್ನೂ ಓದಿ:  ವೃದ್ಧೆಯನ್ನು ಸೆಕ್ಸ್‌ಗೆ ಪೀಡಿಸಿದ್ದ ಆರೋಪ- ಯುವಕ ಅರೆಸ್ಟ್

    ಐವರು ಮಕ್ಕಳು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು, ಡಿಕ್ಕಿ ರಭಸಕ್ಕೆ ಮನೆಯ ಮುಂಭಾಗದ ಛಾವಣಿ ಸಂಪೂರ್ಣ ಜಖಂ ಆಗಿದೆ. ಅಧಿಕ ವೇಗದ ಖಾಸಗಿ ಬಸ್‌ಗಳ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಬಸ್ಸಿನ ಮೇಲೆ ಕಲ್ಲು ತೂರಾಟ ಮಾಡಿ ಬಸ್‌ನ ಗಾಜು ಪುಡಿ ಪುಡಿ ಮಾಡಿದ್ದಾರೆ. ಸ್ಥಳಕ್ಕೆ ತರೀಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಲಿವಿಂಗ್ ಪಾರ್ಟ್ನರ್ ಮೇಲೆ ಸಂಶಯ- ಯುವತಿಯಿಂದ ಯುವಕನ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಂಭೀರ ಗಾಯ

    ಯಾದಗಿರಿಯಲ್ಲಿ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಂಭೀರ ಗಾಯ

    ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ (Overturn) ಓರ್ವ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯವಾಗಿರುವ ಘಟನೆ ಯಾದಗಿರಿ (Yadgiri) ಜಿಲ್ಲೆಯ ಸುರಪುರ (Surapura) ತಾಲೂಕಿನ ಕವಡಿಮಟ್ಟಿ ಗ್ರಾಮದ ಬಳಿ ಭಾನುವಾರ ಮುಂಜಾನೆ ನಡೆದಿದೆ.

    ಖಾಸಗಿ ಬಸ್‌ನಲ್ಲಿ 30ಕ್ಕೂ ಹೆಚ್ಚು ಜನ ಪ್ರಯಾಣಿಕರಿದ್ದು, ಬಸ್ ಬೆಂಗಳೂರಿನಿಂದ (Bengaluru) ಸುರಪುರ ಮಾರ್ಗವಾಗಿ ಹುಮ್ನಾಬಾದ್(Humnabad) ಕಡೆ ಚಲಿಸುತ್ತಿತ್ತು. ಬಸ್ ಓವರ್ ಸ್ಪೀಡ್ (Over Speed) ಇದ್ದ ಕಾರಣ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕವಡಿಮಟ್ಟಿ ಬಳಿ ಪಲ್ಟಿಯಾಗಿದೆ. ಬಸ್ ಪಲ್ಟಿಯಾದ ಸುದ್ದಿ ತಿಳಿದ ಗ್ರಾಮಸ್ಥರು ಸ್ಥಳಕ್ಕೆ ದೌಡಾಯಿಸಿ ಬಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆದಿದ್ದಾರೆ. ಬಸ್ ಪಲ್ಟಿಯ ರಭಸಕ್ಕೆ ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಇದನ್ನು ಓದಿ: ಕೊಡೇಕಲ್‌ನಲ್ಲಿ ಕಲ್ಲು ತೂರಾಟ ಪ್ರಕರಣ – ಸುರಪುರ ಕ್ಷೇತ್ರದಲ್ಲಿ ನಿಷೇಧಾಜ್ಞೆ ವಿಸ್ತರಣೆ 

    ಸುರಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪಲ್ಟಿಯಾದ ಬಸ್ ತೆರವುಗೊಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದವರನ್ನು ಸ್ಥಳೀಯರ ನೆರವಿನೊಂದಿಗೆ ಸುರಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನು ಓದಿ: ಬಂಡೀಪುರಕ್ಕೆ ಪ್ರಧಾನಿ ಮೋದಿ ಆಗಮನ

  • ಬಳ್ಳಾರಿಯಲ್ಲಿ ಅದಿರು ಲಾರಿಗಳ ಅಬ್ಬರಕ್ಕೆ ನಿತ್ಯ ಅಮಾಯಕರು ಬಲಿ!

    -ಜನರ ಪಾಲಿಗೆ ಕಿಲ್ಲರ್ ಲಾರಿಗಳಾದ್ರೂ ಜಿಲ್ಲಾಡಳಿತಕ್ಕಿಲ್ಲ ವರಿ

    ಬಳ್ಳಾರಿ: ಜಿಲ್ಲೆಯಲ್ಲಿ ಅದಿರು ಲಾರಿಗಳ ಅಬ್ಬರ ಜೋರಾಗಿಬಿಟ್ಟಿದೆ. ಅದಿರು ಲಾರಿಗಳಿಗೆ ಸಿಲುಕಿ ನಿತ್ಯ ಅಮಾಯಕ ಪ್ರಯಾಣಿಕರು ಬಲಿಯಾಗುತ್ತಿದ್ದಾರೆ. ಗಣಿ ಪ್ರದೇಶವಾದ ಸಂಡೂರು, ತೋರಣಗಲ್‍ನಲ್ಲಿ ಅದಿರು ಲಾರಿಗಳು ಇದೀಗ ಅಕ್ಷರಶಃ ಕಿಲ್ಲರ್ ಲಾರಿಗಳಂತೆ ಓಡಾಡುತ್ತಿವೆ. ಹೀಗಾಗಿ ಜನರು ರಸ್ತೆಯ ಮೇಲೆ ಓಡಾಡಲೂ ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

    ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಅದಿರು ಲಾರಿಗಳ ಅಬ್ಬರಕ್ಕೆ ಬ್ರೇಕ್ ಹಾಕೋರೆ ಇಲ್ಲದಂತಾಗಿ ಬಿಟ್ಟಿದೆ. ಗಣಿಗಾರಿಕೆ ನಿಂತರೂ ಅದಿರು ಲಾರಿಗಳ ಅಬ್ಬರ ಮಾತ್ರ ಇನ್ನೂ ತಗ್ಗಿಲ್ಲ. ಸಾಕ್ಟ್ ಯಾರ್ಡ್ ಕಾರ್ಖಾನೆಗಳಿಗೆ ಬೇಗನೇ ಅದಿರು ಸರಬುರಾಜು ಮಾಡಲು ಲಾರಿಗಳು ಓವರ್ ಸ್ಪೀಡ್ ಆಗಿ ಓಡುತ್ತಿರುವುದರಿಂದ ನಿತ್ಯ ಒಂದಿಬ್ಬರು ಅದಿರು ಲಾರಿಗಳಿಗೆ ಆಹಾರವಾಗುವಂತಾಗಿದೆ.

    ಕಳೆದ 5 ವರ್ಷಗಳಲ್ಲಿ 73 ಜನರು ಅದಿರು ಲಾರಿಗಳ ಅಪಘಾತದಲ್ಲಿ ಮೃತಪಟ್ಟರೆ ಬರೋಬ್ಬರಿ 304 ಜನರು ಲಾರಿಗಳ ಅಪಘಾತದಿಂದ ಗಾಯಗೊಂಡು ನಿತ್ಯ ನರಕಯಾತನೆ ಪಡುವಂತಾಗಿದೆ. ಕಳೆದ ಜನವರಿ ತಿಂಗಳೊಂದರಲ್ಲೇ 6 ಜನರು ಮೃತಪಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹೀಗಾಗಿ ಅದಿರು ಲಾರಿಗಳ ಅಬ್ಬರಕ್ಕೆ ಬ್ರೇಕ್ ಹಾಕೋರೂ ಯಾರು ಇಲ್ವಾ ಅನ್ನೋ ಪ್ರಶ್ನೆ ಎದುರಾಗಿದೆ.

    ಅದಿರು ಲಾರಿಗಳ ಅಬ್ಬರಕ್ಕೆ ಅಮಾಯಕ ಜನರು ಬಲಿಯಾಗಿರುವುದನ್ನು ವಿರೋಧಿಸಿ ಸ್ಥಳೀಯ ಸಂಘಟನೆಗಳು ಪ್ರತಿಭಟನೆ ಮಾಡಿದ್ರೆ ಕ್ರಮ ಕೈಗೊಳ್ಳಬೇಕಾದ ಜಿಲ್ಲಾಡಳಿತ ಇದೀಗ ಹೋರಾಟಗಾರರ ವಿರುದ್ಧವೇ ಪ್ರಕರಣ ದಾಖಲಿಸಿ ಹೋರಾಟ ಹತ್ತಿಕ್ಕುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಅಲ್ಲದೇ ಜನರ ಜೀವ ಕಾಪಾಡಬೇಕಾದ ಜಿಲ್ಲಾಧಿಕಾರಿಗಳೇ ಜನರ ಜೀವ ತಗೆಯುವ ಲಾರಿಗಳ ಪರವಾಗಿ ನಿಂತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.