ಚಿಕ್ಕಬಳ್ಳಾಪುರ: ಲಾರಿ ಓವರ್ ಟೇಕ್ (Over Take) ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮಾಕಳಿ ಬಳಿ ನಡೆದಿದೆ.
ಬೆಳಗ್ಗೆ ದೇವಸ್ಥಾನಕ್ಕೆಂದು ಇನ್ನೋವಾ ಕಾರಿನಲ್ಲಿ 08 ಮಂದಿ ತೆರಳುತ್ತಿದ್ದರು. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ರಭಸಕ್ಕೆ ಮೃತದೇಹಗಳು ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ಬಾಸ್ ಜೊತೆ ಅಕ್ರಮ ಸಂಬಂಧದ ಶಂಕೆ – ಲಿವ್ ಇನ್ ಗೆಳತಿಯ ಹತ್ಯೆಗೈದು ಶವದೊಂದಿಗೆ ಮಲಗಿದ್ದ 2 ಮಕ್ಕಳ ತಂದೆ
ಮೃತರನ್ನು ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ನಿವಾಸಿಗಳಾದ ಕಾಳಪ್ಪ, ಪುರುಷೋತ್ತಮ, ನಾರಾಯಣಪ್ಪ, ಈಶ್ವರಪ್ಪ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳಿಗೆ ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: Hassan | ಎರಡೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ
ಹಾಸನ: ಓವರ್‌ಟೇಕ್ (Over Take) ಮಾಡುವಾಗ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಮಹಿಳೆ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಹಾಸನ (Hassan) ತಾಲೂಕಿನ ಕಾರೇಕೆರೆ ಗ್ರಾಮದ ಕೃಷಿ ಕಾಲೇಜು ಎದುರು ನಡೆದಿದೆ.
ಹಾಸನ ನಗರದ ಕೆ.ಹೊಸಕೊಪ್ಪಲು ಬಡಾವಣೆ ನಿವಾಸಿ ಶಾಂತಮ್ಮ (45) ಮೃತ ದುರ್ದೈವಿ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಆಲ್ಟೋ ಹಾಗೂ ವ್ಯಾಗನರ್ ಕಾರುಗಳು ಕಾರೇಕೆರೆ ಬಳಿ ಫ್ಲೈಓವರ್ ಬಳಿ ಓವರ್‌ಟೇಕ್ ಮಾಡುವಾಗ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಎರಡೂ ಕಾರುಗಳು ಪಲ್ಟಿಯಾಗಿವೆ. ಇದನ್ನೂ ಓದಿ: ಬೌಂಡರಿ ಬಳಿ ಮೇಲಕ್ಕೆ ಜಿಗಿದು ಕ್ಯಾಚ್ – ಮೆಕ್‌ಗುರ್ಕ್ ಮ್ಯಾಜಿಕ್‌ಗೆ ಅಂಕಿತ್ ಔಟ್
ವ್ಯಾಗನರ್ ಕಾರಿನಲ್ಲಿದ್ದ ಪತಿ ಹಾಗೂ ಗರ್ಭಿಣಿ ಪತ್ನಿ ಅಪಘಾತದ ನಂತರ ಬೇರೆ ಕಾರಿನಲ್ಲಿ ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಟೋ ಕಾರಿನಲ್ಲಿದ್ದ ಕೆ.ಹೊಸಕೊಪ್ಪಲು ಬಡಾವಣೆಯ ನಾಗೇಶ, ಯುಕ್ತಿ, ಗೌರಮ್ಮ, ಶಾಂತಮ್ಮರ ಪೈಕಿ ಶಾಂತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು, ಆರು ವರ್ಷದ ಯುಕ್ತಿ ಎಂಬ ಮಗುವಿಗೆ ಗಾಯಗಳಾಗಿವೆ. ಗಾಯಾಳುಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಭಾರತದ ಅಭಿವೃದ್ಧಿಗೆ ಆರ್‌ಎಸ್‌ಎಸ್ ಕೊಡುಗೆ ಅಪಾರ: ಮೋದಿ ಬಣ್ಣನೆ
ಚಿಕ್ಕಬಳ್ಳಾಪುರ: ಓವರ್ ಟೇಕ್ (Over take) ಮಾಡಲು ಹೋಗಿ ಎರಡು ಕ್ಯಾಂಟರ್‌ಗಳ (Canter) ನಡುವೆ ಡಿಕ್ಕಿಯಾಗಿ, ಕ್ಯಾಂಟರ್ ಚಾಲಕರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿರುವ ಘಟನೆ ಶಿಡ್ಲಘಟ್ಟ ತಾಲೂಕಿನ ಅಮ್ಮನ ಕೆರೆಯ ಕಟ್ಟೆ ಮೇಲೆ ಭಾನುವಾರ (ಜ.28) ನಡೆದಿದೆ.
ಶಿಡ್ಲಘಟ್ಟ-ಚಿಕ್ಕಬಳ್ಳಾಪುರ (Sidlaghatta-Chikkaballapur) ಮಾರ್ಗದಲ್ಲಿರುವ ಅಮ್ಮನ ಕೆರೆ ಕಟ್ಟೆಮೇಲೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಎರಡು ಕ್ಯಾಂಟರ್ ಚಾಲಕರು ಜಿದ್ದಿಗೆ ಬಿದ್ದವರಂತೆ ಪರಸ್ಪರ ಓವರ್ ಟೇಕ್ ಮಾಡಲು ಅತೀ ವೇಗವಾಗಿ ಕ್ಯಾಂಟರ್ ಚಾಲನೆ ಮಾಡಿದ್ದಾರೆ. ಈ ವೇಳೆ ಓವರ್ ಸ್ಪೀಡ್‌ನಿಂದ ಡಿವೈಡರ್‌ಗೆ ಡಿಕ್ಕಿ ಹೊಡೆದು, ಮುಗ್ಗರಿಸಿ ನೆಲಕ್ಕುರುಳಿವೆ. ಇದನ್ನೂ ಓದಿ: ಹೃದಯಾಘಾತ – ಮಾಜಿ ಶಾಸಕ ನಾಗನಗೌಡ ಕಂದಕೂರು ನಿಧನ
ನವದೆಹಲಿ: ಆಳವಾದ ಕಂದಕಕ್ಕೆ ಬಸ್ಸೊಂದು ಬಿದ್ದ ಪರಿಣಾಮ ಕನಿಷ್ಠ 38 ಜನರು ಸಾವನ್ನಪ್ಪಿದ್ದು, ಹಲವು ಜನರು ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ದೋಡಾ (Doda) ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ನಡೆದಿದೆ. ದೋಡಾ ಜಿಲ್ಲೆಯಲ್ಲಿ ಒಂದು ವಾರದಲ್ಲಿ ನಡೆದ ಎರಡನೇ ರಸ್ತೆ ಅಪಘಾತ ಇದಾಗಿದೆ.
ಬಸ್ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಟ್ರುಂಗಲ್-ಅಸ್ಸಾರ್ ಬಳಿ ಸ್ಕಿಡ್ ಆಗಿ 300 ಅಡಿ ಕೆಳಗೆ ಬಿದ್ದಿದೆ ಎನ್ನಲಾಗಿದೆ. ಬಸ್ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಬ್ಯಾಡಗಿಯಲ್ಲಿ ಖಾಸಗಿ ಬಸ್ ಪಲ್ಟಿ – ಪ್ರಯಾಣಿಕರಿಗೆ ಗಾಯ
ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ಬಸ್ ಅಪಘಾತದಲ್ಲಿ ಉಂಟಾದ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಡಿವಿ ಕಾಮ್ ಮತ್ತು ಡಿಸ್ಟ್ ಅಡ್ಮಿನ್‌ಗೆ ನಿರ್ದೇಶನ ನೀಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹರಿದು ಪೊಲೀಸ್ ಸಾವು; ಇದೇನು ಹೊಸದಲ್ಲ ಎಂದ ಸಚಿವ
ಪ್ರಧಾನಿ ನರೇಂದ್ರ ಮೋದಿ (Narendra Modi) ಘಟನೆಯ ಕುರಿತು ಸಂತಾಪ ಸೂಚಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತ ದುಃಖಕರವಾಗಿದೆ. ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಪಿಎಂಒ ಎಕ್ಸ್‌ನಲ್ಲಿ (X) ಪೋಸ್ಟ್ ಮಾಡಿದೆ. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಅಲ್ಲದೇ ಗಾಯಗೊಂಡವರಿಗೆ 50,000 ರೂ. ನೆರವು ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಲಿಂಡರ್ ಸ್ಫೋಟಕ್ಕೆ ಮನೆ ಛಿದ್ರ ಛಿದ್ರ – ಮೂವರು ಗಂಭೀರ
ಓವರ್‌ಟೇಕ್ ಮಾಡುವ ಪೈಪೋಟಿಯಲ್ಲಿ ಅಪಘಾತ:
ಈ ಮಾರ್ಗದಲ್ಲಿ ಮೂರು ಬಸ್‌ಗಳು ಒಟ್ಟಿಗೆ ಸಂಚರಿಸುತ್ತಿದ್ದವು. ಪರಸ್ಪರ ಓವರ್‌ಟೇಕ್ ಮಾಡುವ ಪೈಪೋಟಿಯಲ್ಲಿ ಈ ಭಾರಿ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಲಕ್ಷ್ಮೀ ಪೂಜೆಗಿಟ್ಟಿದ್ದ ವಜ್ರಾಭರಣ ಹೊತ್ತೊಯ್ದ ಕಳ್ಳರು
ಜಿಲ್ಲಾಧಿಕಾರಿ, ಎಸ್‌ಎಸ್‌ಪಿ ದೋಡಾ ಮತ್ತು ಇತರ ಹಲವು ಅಧಿಕಾರಿಗಳು ಜಿಎಂಸಿ ದೋಡಾ ತಲುಪಿದ್ದಾರೆ. ಗಾಯಾಳುಗಳಿಗೆ ತಕ್ಷಣವೇ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಪಟಾಕಿಗೆ ಆಕಸ್ಮಿಕ ಬೆಂಕಿ – ಕುರ್ಚಿ ಸಮೇತ ಹಾರಿ ಬಿದ್ದು ಯುವಕ ಸಾವು
ಗದಗ: ಓವರ್ ಟೇಕ್ (Over Take) ಮಾಡುವ ವೇಳೆ ಸರ್ಕಾರಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಗದಗ (Gadag) ಜಿಲ್ಲೆಯ ಮುಂಡರಗಿ (Mundaragi) ಪಟ್ಟಣದಲ್ಲಿ ನಡೆದಿದೆ.
ಬೈಕ್ ಸವಾರ ಬ್ಯಾಲವಾಡಗಿ ನಿವಾಸಿ ಮಂಜುನಾಥ ಬಂಡಿಯವರ್ (44) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮಂಜುನಾಥ ಮುಂಡರಗಿನಲ್ಲಿ ಚಿಕನ್ ವ್ಯಾಪಾರಿಯಾಗಿದ್ದರು. ಕೆಇಬಿ (KEB) ಬಳಿ ನೀರು ತುಂಬಿಕೊಂಡು ಅಂಗಡಿ ಕಡೆಗೆ ಹೊರಟಿದ್ದ ಸಂದರ್ಭ ಅದೇ ಮಾರ್ಗವಾಗಿ ಶಿರಹಟ್ಟಿಗೆ ಸರ್ಕಾರಿ ಬಸ್ ಹೊರಟಿತ್ತು. ಬಸ್ ಓವರ್ ಟೇಕ್ ಮಾಡುವ ವೇಳೆ ಬಸ್‌ಗೆ ಟಚ್ ಆಗಿ ಹಿಂಬದಿ ಚಕ್ರದಡಿ ಬಿದ್ದಿದ್ದಾರೆ. ಬಸ್ ತಲೆ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಲೋಕಾಯುಕ್ತ ಟ್ರ್ಯಾಪ್ ಕೇಸ್‌ನಲ್ಲಿ ಹೆಸರು – ಮಹಿಳಾ ಪೊಲೀಸ್ ಇನ್‌ಸ್ಪೆಕ್ಟರ್ ಅಮಾನತು
ಇವತ್ತು ಕಾರ ಹುಣ್ಣಿಮೆ ತಡವಾಗಿ ಹೋಗು ಎಂದು ಮನೆಯವರು ಹೇಳಿದ್ದಾರೆ. ಆದರೂ ಮನೆಯವರ ಮಾತು ಧಿಕ್ಕರಿಸಿ ಅಂಗಡಿ ಪೂಜೆ ಮಾಡಬೇಕು ಎಂದು ಬೇಗ ಬಂದಿದ್ದಾರೆ. ಪೂಜೆಗಾಗಿ ನೀರು ತರಲು ಹೋದ ವೇಳೆ ಬಸ್ ಚಕ್ರದಡಿ ಸಿಲುಕಿ ಪ್ರಾಣ ಬಿಟ್ಟಿರುವುದು ನಿಜಕ್ಕೂ ದುರಂತವೇ ಸರಿ. ಘಟನೆಯಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಅರ್ಕೆಸ್ಟ್ರಾ ಹಾಡು ಬದಲಿಸುವ ವಿಚಾರಕ್ಕೆ ಗಲಾಟೆ – ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ
ಭುವನೇಶ್ವರ: ಓಡಿಶಾದ ರಾಷ್ಟ್ರೀಯ ಹೆದ್ದಾರಿ 16ರಲ್ಲಿ ಎಂಎಸ್‍ಎಂಇ ರಾಜ್ಯ ಮಂತ್ರಿ ಪ್ರತಾಪ್ ಚಂದ್ರ ಸಾರಂಗಿ ಅವರ ಕಾರ್ ಓವರ್ ಟೇಕ್ ಮಾಡಿ ಚಾಲಕರಿಗೆ ದಂಡ ಹಾಕಲಾಗಿದೆ.
ಸಚಿವ ಸಾರಂಗಿ ಅವರ ಪ್ರಯಾಣಿಸುತ್ತಿದ್ದ ಮಾರ್ಗದಲ್ಲಿ ಎರಡು ಕಾರ್ ಗಳು ಓವರ್ ಟೇಕ್ ಮಾಡಿದ್ದವು. ತದನಂತರ ಎಸ್ಕಾರ್ಟ್ ಎರಡು ಕಾರ್ ಗಳನ್ನ ಸುಮಾರು 20 ಕಿಲೋ ಮೀಟರ್ ಹಿಂಬಾಲಿಸಿ ತಡೆದಿದ್ದಾರೆ. ನಂತರ ಕಾರ್ ಚಾಲಕರಿಬ್ಬರನ್ನ ಐದು ಗಂಟೆ ಠಾಣೆಯಲ್ಲಿ ರಿಸಿ ದಂಡ ವಿಧಿಸಿ ಕಳುಹಿಸಲಾಗಿದೆ.
ಕೋಲ್ಕತ್ತಾ ಮೂಲದ ಸಂತೋಷ್ ತಮ್ಮ ಸೋದರ, ಪತ್ನಿ ಹಾಗೂ ಮಕ್ಕಳೊಂದಿಗೆ ಬಾಲಸೋರ್ ಜಿಲ್ಲೆಯ ಪಂಚಲಿಂಗೇಶ್ವರ ಕ್ಷೇತ್ರಕ್ಕೆ ಎರಡು ಕಾರ್ ಗಳಲ್ಲಿ ತೆರಳುತ್ತಿದ್ದರು. ಸಂತೋಷ್ ಅವರ ಕಾರುಗಳು ಹೆದ್ದಾರಿ ಪ್ರವೇಶಿಸುತ್ತಿದ್ದಂತೆ ಎಸ್ಕಾರ್ಟ್ ಸಿಬ್ಬಂದಿ ಹಾರ್ನ್ ಹಾಕಿದ್ದಾರೆ. ಹಾರ್ನ್ ಕೇಳದ ಹಿನ್ನೆಲೆ ಸಂತೋಷ್ ಓವರ್‍ಟೇಕ್ ಮಾಡಿ ಮುಂದೆ ಸಾಗಿದ್ದಾರೆ.
ಹಿಂದಿನಿಂದ ಸೈರನ್ ಕೇಳಿದಾಗ ಅಂಬುಲೆನ್ಸ್ ಅಂತ ಸೈಡ್ ನೀಡಿದೆ. ಆದ್ರೆ ಅದು ಸಚಿವರ ಎಸ್ಕಾರ್ಟ್ ಸಿಬ್ಬಂದಿ ವಾಹನವಾಗಿತ್ತು. ಸಚಿವರ ಕಾರ್ ಓವರ್ ಟೇಕ್ ಮಾಡೋದು ತಪ್ಪು ಎಂದು ನಮಗೆ ತಿಳಿದಿರಲಿಲ್ಲ. ಐದು ಗಂಟೆ ನಮ್ಮನ್ನ ಠಾಣೆಯಲ್ಲಿರಿಸಿ ಸಮಯ ವ್ಯರ್ಥ ಮಾಡಲಾಯ್ತು. ಪೊಲೀಸರು ಪಿಆರ್ ಬಾಂಡ್ ನಲ್ಲಿ ನಮ್ಮ ಸಹಿ ತೆಗೆದು ದಂಡ ತೆಗದುಕೊಂಡಿದ್ದಾರೆ ಎಂದು ಸಂತೋಷ್ ಬೇಸರ ವ್ಯಕ್ತಪಡಿಸಿದ್ದಾರೆ.
ಸಚಿವ ಪ್ರತಾಪ್ ಚಂದ್ರ ಸಾರಂಗಿ ಸಮೀಕ್ಷೆ ಸಭೆ ಹಿನ್ನೆಲೆ ಬಾಲಸೋರ್ ಜಿಲ್ಲೆಯ ಬಾಸ್ತಾಗೆ ಆಗಮಿಸಿದ್ದರು. ಸಚಿವರ ಎಸ್ಕಾರ್ಟ್ ಸಿಬ್ಬಂದಿ ಇಬ್ಬರು ಚಾಲಕರನ್ನ ಕಾರ್ ಸಹಿತ ಠಾಣೆಗೆ ಕರೆ ತಂದಿದ್ದರು. ನಿಯಮದಂತೆ ಇಬ್ಬರಿಗೂ ದಂಡ ಹಾಕಲಾಗಿದೆ ಎಂದು ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಅಶೋಕ್ ನಾಯಕ್ ಹೇಳಿದ್ದಾರೆ.
ಬೆಂಗಳೂರು: ಅಂಬುಲೆನ್ಸ್ ಬರುತ್ತಿದೆ ಅಂದರೆ ಸಾಮಾನ್ಯವಾಗಿ ಅದಕ್ಕೆ ದಾರಿ ಮಾಡಿಕೊಡುತ್ತೇವೆ. ಆದರೆ ಅದನ್ನು ಪಾಲಿಸಿ ಮಾದರಿಯಾಗಬೇಕಿದ್ದ ನಮ್ಮ ಡಿಸಿಎಂ ಅಶ್ವಥ್ ನಾರಾಯಣ ಮುಂದೆ ಬರುತ್ತಿದ್ದ ಅಂಬುಲೆನ್ಸ್ ಹಿಂದಿಕ್ಕಿ ಅಡ್ಡ ಬಂದಿದ್ದಾರೆ.
ಸಂಜೆ 4:30ಕ್ಕೆ ಬೆಂಗಳೂರಿನ ಕಾವೇರಿ ಜಂಕ್ಷನ್ ಬಳಿ ಯಾವ ಮಟ್ಟಿಗೆ ಜಾಮ್ ಅನ್ನೋದು ಆ ರಸ್ತೆಯಲ್ಲಿ ಓಡಾಡೋರಿಗೆ ಗೊತ್ತೆ ಇರುತ್ತೆ. ಆ ರೀತಿಯ ಜಾಮ್ ರಸ್ತೆಯಲ್ಲೂ ಸಾಮಾನ್ಯ ಜನ ಅಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟಿದ್ದರೂ ಡಿಸಿಎಂ ಸಾಹೇಬ್ರು ದಾರಿಬಿಡದೇ ಫೋನ್ ನಲ್ಲಿ ಬ್ಯುಸಿಯಾಗಿದ್ದಾರೆ.
ಅಂಬುಲೆನ್ಸ್ ಓವರ್ ಟೆಕ್ ಮಾಡಿದ್ದರೆ ದಂಡ ಇದೆ. ಆ ದಂಡವನ್ನ ಡಿಸಿಎಂ ಸಾಹೇಬ್ರಿಗೆ ಹಾಕಬೇಕಬೇಕು. ಸಾಮಾನ್ಯ ಜನ ಈ ತಪ್ಪನ್ನು ಮಾಡಿದರೆ ಹೇಗೆ ಬೆಲೆ ತೆರುತ್ತಾರೋ ಅದೇ ರೀತಿ ಡಿಸಿಎಂ ಬೆಲೆ ತೆತ್ತು ದಂಡ ಕಟ್ಟುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.
ಕಾರವಾರ: ಓವರ್‍ಟೇಕ್ ಮಾಡಿದ್ದನ್ನ ಪ್ರಶ್ನಿಸಿದ್ದ ಕೆಎಸ್‍ಆರ್‍ಟಿಸಿ ಬಸ್ ಚಾಲಕರಿಗೆ ಖಾಸಗಿ ಬಸ್ ಚಾಲಕ ಹಾಗೂ ಏಜೆಂಟ್ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ.
ಚಂದ್ರಹಾಸ್ ಬೀಸನಳ್ಳಿ ಹಾಗೂ ಏಕನಾಥ್ ಎಂಬವರು ಹಲ್ಲೆಗೊಳಗಾದ ಬಸ್ ಚಾಲಕರು. ಚಂದ್ರಹಾಸ್ ಮತ್ತು ಏಕನಾಥ್ ಇಬ್ಬರೂ ಅತಿ ವೇಗವಾಗಿ ಬಸ್ ಚಾಲನೆ ಮಾಡುತ್ತಿದ್ದ ಸುಗಮ ಟೂರಿಸ್ಟ್ ಬಸ್ ಸಂಸ್ಥೆಯ ವಾಹನ ಚಾಲಕರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಕಚೇರಿಯ ಒಳಗೆ ಕರೆದುಕೊಂಡು ಹೋಗಿ ಕಚೇರಿಯ ಏಜೆಂಟ್ ಸಂತೋಷ್ ಶೆಟ್ಟಿ ಹಾಗೂ ಆತನ ಸಹಚರರು ಸೇರಿ ಹಲ್ಲೆ ನೆಡೆಸಿದ್ದಾರೆ.
ಆಗಿದ್ದೇನು?: ಇಂದು ಬೆಳಗ್ಗೆ ಕೆಎಸ್‍ಆರ್‍ಟಿಸಿ ನಗರ ಸಾರಿಗೆ ಬಸ್ ಮುದಗಾ ದಿಂದ ಕಾರವಾರಕ್ಕೆ ಬರುತ್ತಿರುವಾಗ ಬಿಣಗಾ ಗ್ರಾಮದ ಬಳಿ ಬೆಂಗಳೂರಿನಿಂದ ಕಾರವಾರಕ್ಕೆ ಬರುತಿದ್ದ ಸುಗಮ ಟ್ರಾವೆಲ್ಸ್ ಅತೀ ವೇಗದಿಂದ ಸರ್ಕಾರಿ ಬಸ್ ಅನ್ನು ಓವರ್ ಟೇಕ್ ಮಾಡಿತ್ತು. ಇದರಿಂದಾಗಿ ಸರ್ಕಾರಿ ಬಸ್ ಅಪಘಾತವಾಗುವುದರಲ್ಲಿತ್ತು. ಹೀಗಾಗಿ ನಿಲ್ದಾಣಕ್ಕೆ ಬಂದವೇಳೆ ಇದನ್ನು ಸರ್ಕಾರಿ ಬಸ್ ಚಾಲಕರಾದ ಚಂದ್ರಹಾಸ್ ಹಾಗೂ ಏಕನಾಥ್ ಪ್ರಶ್ನಿಸಿದ್ರು. ಇದರಿಂದ ಕೋಪಗೊಂಡ ಖಾಸಗಿ ಬಸ್ ಚಾಲಕರು ಚಂದ್ರಹಾಸ್ ಮತ್ತು ಏಕನಾಥ್‍ರ ಮೇಲೆ ಹಲ್ಲೆ ಮಾಡಿದ್ದಾರೆ.
ಹಲ್ಲೆಗೊಳಗಾದ ಇಬ್ಬರು ಸರ್ಕಾರಿ ಬಸ್ ಚಾಲಕರು ಕಾರವಾರ ನಗರ ಪೊಲೀಸ್ ಠಾಣೆಗೆ ದೂರು ನೀಡಲು ಹೋದರೆ ಪೊಲೀಸರು ದೂರು ಸ್ವೀಕರಿಸಿಲ್ಲ. ಈ ಕಾರಣದಿಂದ ಸರ್ಕಾರಿ ಬಸ್ ಸಿಬ್ಬಂದಿ ನಗರದ ವಿವಿಧಡೆ ಸಂಚರಿಸುವ ಸರ್ಕಾರಿ ಬಸ್ಸುಗಳನ್ನು ಸ್ಥಗಿತಗೊಳಿಸಿ ಸುಗಮ ಟ್ರಾವೆಲ್ಸ್ ಕಚೇರಿ ಎದುರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಕೆಲವು ಕಾಲ ನಗರದ ಹೃದಯ ಭಾಗದಲ್ಲಿ ಕೆಲಕಾಲ ಉದ್ವಿಗ್ನ ಸ್ಥಿತಿ ಸಹ ನಿರ್ಮಾಣವಾಗಿತ್ತು.
ಕೊನೆಗೆ ಸ್ಥಳಕ್ಕೆ ಬಂದ ಪೊಲೀಸರು ಸುಗಮ ಟ್ರಾವೆಲ್ಸ್ ನ ಸಂತೋಷ್ ಶೆಟ್ಟಿಯನ್ನು ವಶಕ್ಕೆ ಪಡೆದುಕೊಂಡ ನಂತರ ಸಾರಿಗೆ ನೌಕರರು ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ. ಇನ್ನೂ ಸಂತೋಷ್ ಶೆಟ್ಟಿಯ ಸಹಚರರಾದ ನಾಲ್ವರು ತಲೆಮರೆಸಿಕೊಂಡಿದ್ದಾರೆ. ಪೊಲೀಸರು ನಾಪತ್ತೆಯಾಗಿರುವ ನಾಲ್ವರ ಪತ್ತೆಗಾಗಿ ಜಾಲ ಬೀಸಿದ್ದಾರೆ.