Tag: Oyo Rooms

  • ಅವಿವಾಹಿತ ಜೋಡಿಗೆ ಓಯೋ ರೂಮ್‌ ನಿರ್ಬಂಧ – ಬೆಂಗಳೂರಲ್ಲೂ ನಿಯಮ ಜಾರಿಗೆ ಬಜರಂಗದಳ ಮನವಿ

    ಅವಿವಾಹಿತ ಜೋಡಿಗೆ ಓಯೋ ರೂಮ್‌ ನಿರ್ಬಂಧ – ಬೆಂಗಳೂರಲ್ಲೂ ನಿಯಮ ಜಾರಿಗೆ ಬಜರಂಗದಳ ಮನವಿ

    ಬೆಂಗಳೂರು: ಓಯೋ ಹೋಟೆಲ್‌ ಬುಕ್ಕಿಂಗ್‌ (OYO Hotel Booking) ಕಂಪನಿ ಚೆಕ್‌ ಇನ್‌ಗೆ ಸಂಬಂಧಿಸಿದಂತೆ ಅವಿವಾಹಿತರಿಗೆ ಹೋಟೆಲ್‌ ರೂಮ್‌ ನೀಡದಂತೆ ಹೊಸ ನಿಯಮ ಜಾರಿಗೊಳಿಸಿದೆ. ಈ ರೀತಿಯ ನಿಯಮವನ್ನ ಬೆಂಗಳೂರಿನಲ್ಲೂ ಜಾರಿಗೆ ತರುವಂತೆ ಬಜರಂಗದಳ (Bajrang Dal) ಮನವಿ ಮಾಡಿದೆ.

    ಬಿಬಿಎಂಪಿ ಆಯುಕ್ತರು (BBMP Commissioner), ನಗರ ಪೊಲೀಸ್‌ ಆಯುಕ್ತರಿಗೆ ಬಜರಂಗದಳದ ಕಾರ್ಯಕರ್ತರು ಮನವಿ ಸಲ್ಲಿಸಿದ್ದಾರೆ. ಹೋಂ ಸ್ಟೇ, ಲಾಡ್ಜ್‌, ಸರ್ವೀಸ್‌ ಅಪಾರ್ಟ್‌ಮೆಂಟ್‌ಗಳು ಹಾಗೂ ಯಾವುದೇ ಹೋಟೆಲ್‌ಗಳಲ್ಲಿ ಅವಿವಾಹಿತರಿಗೆ ಅವಕಾಶ ನೀಡಬಾರದು. ಏಕೆಂದರೆ ಕೆಲವರು ಎಲ್ಲೆ ಮೀರಿ ವರ್ತಿಸುವ ಸಾಧ್ಯತೆಗಳಿವೆ. ಜೊತೆಗೆ ಆ ಸ್ಥಳಗಳು ಅನೈತಿಕ ಚಟುವಟಿಕೆಯ ತಾಣವಾಗುವ ಸಾಧ್ಯತೆಗಳು ಹೆಚ್ಚಿವೆ. ಆದ್ದರಿಂದ ಈ ಮನವಿಯನ್ನು ಗಂಭಿರವಾಗಿ ಪರಿಗಣಿಸುವಂತೆ ಬಜರಂಗದಳ ಮನವಿ ಮಾಡಿದೆ.

    ಓಯೋ ಹೊಸ ನಿಯಮ ಏನು?
    ದೇಶದ ಪ್ರಮುಖ ಲಾಡ್ಜ್ ಬುಕ್ಕಿಂಗ್ ಕಂಪನಿಗಳಲ್ಲಿ ಓಯೋ ಕೂಡ ಒಂದಾಗಿದೆ. ದೇಶದ ಎಲ್ಲಾ ನಗರಗಳಲ್ಲಿಯೂ ತನ್ನ ಹೋಟಲ್‌ ಬುಕ್ಕಿಂಗ್‌ ಜಾಲವನ್ನು ವಿಸ್ತರಣೆ ಮಾಡಿಕೊಂಡಿದೆ. ಕಡಿಮೆ ದರ, ಗುಣಮಟ್ಟದ ಸೇವೆ, ದೊಡ್ಡ ಜಾಲದಿಂದ ಈ ಓಯೋ ಹೋಟೆಲ್‌ಗಳಿಗೂ ಹೆಸರುವಾಸಿಯಾಗಿವೆ. ಅದರಲ್ಲೂ ಅವಿವಾಹಿತರಿಗೆ ಹೋಟೆಲ್‌ ಚೆಕ್‌ ಇನ್‌ಗೆ ಅವಕಾಶ ನೀಡುವ ಕಾರಣಕ್ಕೆ ಈ ಹೋಟೆಲ್‌ ಗ್ರಾಹಕರ ನೆಚ್ಚಿನ ಆಯ್ಕೆಯಾಗಿತ್ತು. ಇದೀಗ ಅವಿವಾಹಿತರಿಗೆ ನಿರ್ಬಂಧ ವಿಧಿಸಿ ಹೊಸ ನಿಯಮ ಜಾರಿಗೊಳಿಸಿದೆ.

    ಮೀರತ್‌ನಲ್ಲಿ ಜಾರಿ:
    ಓಯೋನ ಈ ಹೊಸ ನಿಯಮವು ಉತ್ತರ ಪ್ರದೇಶದ ಮೀರತ್‌ನಲ್ಲಿ ಜಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ನಗರಗಳಲ್ಲಿಯೂ ಜಾರಿಗೆ ತರುವುದಾಗಿ ಸಂಸ್ಥೆ ಹೇಳಿದೆ. ಹಲವು ನಗರಗಳಲ್ಲಿ ಅವಿವಾಹಿತರಿಗೆ ಚೆಕ್ ಇನ್ ಮಾಡಲು ಅವಕಾಶ ನೀಡದಂತೆ ಸಾರ್ವಜನಿಕರಿಂದ ಅರ್ಜಿ ಸಲ್ಲಿಕೆಯಾಗಿತ್ತು. ಇದರಿಂದಾಗಿ ಓಯೋ ಈ ನಿಮಯ ಜಾರಿಗೊಳಿಸಿದೆ.  ಇದನ್ನೂ ಓದಿ:  ಗಡ್ಕರಿ ಭೇಟಿಯಾದ ಹೆಚ್‌ಡಿಕೆ – ಮಂಡ್ಯ ಹೊರವರ್ತುಲ ರಸ್ತೆ ಯೋಜನೆ, ಬೈಪಾಸ್ ಅಭಿವೃದ್ಧಿಗೆ ಮನವಿ

    ದಾಖಲೆ ಕಡ್ಡಾಯ:
    ಹೊಸ ನಿಯಮದ ಪ್ರಕಾರ, ಹೊಟೇಲ್‌ಗೆ ಬರುವ ಜೋಡಿಗಳು ಕಡ್ಡಾಯವಾಗಿ ತಮ್ಮ ಸಂಬಂಧದ ದಾಖಲೆ ತರುವುದು ಕಡ್ಡಾಯವಾಗಿದೆ. ಆನ್‌ಲೈನ್ ಬುಕ್ಕಿಂಗ್‌ಗೂ ಕೂಡ ಇದು ಕಡ್ಡಾಯವಾಗಿದೆ.

    ಒಟ್ಟಾರೆ ಸುರಕ್ಷಿತ ಮತ್ತು ಜವಾಬ್ದಾರಿಯುತ ಆತಿಥ್ಯ ಪದ್ಧತಿಗಳನ್ನು ಎತ್ತಿಹಿಡಿಯಲು ಬದ್ಧವಾಗಿದೆ ಎಂದು ಓಯೋ ಉತ್ತರ ಭಾರತ ಪ್ರಾದೇಶಿಕ ಮುಖ್ಯಸ್ಥ ತಿಳಿಸಿದ್ದಾರೆ.  ಇದನ್ನೂ ಓದಿ: ಕನ್ನಡದ ನಟಿಗೆ ಬಿಗ್ ಚಾನ್ಸ್- ತೆಲುಗಿನತ್ತ ಶರಣ್ಯ ಶೆಟ್ಟಿ

  • 20ನೇ ಮಹಡಿಯಿಂದ ಬಿದ್ದು OYO Rooms ಸಂಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!

    20ನೇ ಮಹಡಿಯಿಂದ ಬಿದ್ದು OYO Rooms ಸಂಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!

    ಚಂಡೀಗಢ: ಗಗನಚುಂಬಿ ಕಟ್ಟಡದ 20ನೇ ಮಹಡಿಯಿಂದ ಬಿದ್ದು, ಓಯೋ ರೂಮ್ಸ್ (Oyo Rooms) ಸಂಸ್ಥಾಪಕ ರಿತೇಶ್ ಅಗರ್ವಾಲ್ (Ritesh Agarwal) ಅವರ ತಂದೆ ರಮೇಶ್ ಅಗರ್ವಾಲ್ ಅವರು ಮೃತಪಟ್ಟಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ಶುಕ್ರವಾರ ನಡೆದಿದೆ.

    ಗುರುಗ್ರಾಮದ ಸೆಕ್ಟರ್ 54ರಲ್ಲಿರುವ ಡಿಎಲ್‌ಎಫ್‌ನ ದಿ ಕ್ರೆಸ್ಟ್ ಸೊಸೈಟಿಯ 20ನೇ ಮಹಡಿಯಿಂದ ವ್ಯಕ್ತಿಯೊಬ್ಬರು ಕೆಳಗೆ ಬಿದ್ದಿದ್ದಾರೆ ಎಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಡಿಎಲ್‌ಎಫ್ ಭದ್ರತಾ ಸಿಬ್ಬಂದಿ ಪೊಲೀಸರಿಗೆ ತಿಳಿಸಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗ ಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆಂದು ವೈದ್ಯರು ದೃಢಪಡಿಸಿದ್ದಾರೆ.

    ಪೊಲೀಸರ (Police) ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತ್ತು. ಘಟನಾ ಸ್ಥಳದಲ್ಲಿ ಪರಿಶೀಲನೆ ವೇಳೆ, ಕಟ್ಟಡದ ಮೇಲಿನಿಂದ ಬಿದ್ದ ವ್ಯಕ್ತಿ ರಮೇಶ್ ಪ್ರಸಾದ್ ಅಗರ್ವಾಲ್ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ರಮೇಶ್ ಅಗರವಾಲ್ ಅವರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಇದನ್ನೂ ಓದಿ: ಕೋವಿಡ್‌ ಬಳಿಕ ಏರಿಕೆಯಾಗಿದ್ದ ಎಲೆಕ್ಟ್ರಾನಿಕ್ಸ್‌ ಉತ್ಪನ್ನಗಳ ಬೆಲೆ ಭಾರೀ ಇಳಿಕೆ

    ಈ ಕುರಿತು ಪ್ರತಿಕ್ರಿಯಿಸಿರುವ ರಿತೇಶ್ ಅಗರ್ವಾಲ್, ನನಗೆ ನನ್ನ ತಂದೆಯೇ ಮಾರ್ಗದರ್ಶಕರು. ಅವರೇ ನನ್ನ ಶಕ್ತಿ. ಅವರಿಂದು ನಮ್ಮಿಂದ ದೂರವಾಗಿದ್ದಾರೆ. ಅರ್ಥಪೂರ್ಣ ಜೀವನ ನಡೆಸಿದ ಅವರು ನನಗೆ ಪ್ರತಿದಿನ ಸ್ಫೂರ್ತಿಯಾಗಿದ್ದರು. ಅವರ ಪ್ರತಿಯೊಂದು ಮಾತುಗಳು ನನ್ನ ಹೃದಯದಲ್ಲಿ ಆಳವಾಗಿ ಬೇರೂರಿದೆ. ಈ ದುಃಖದ ಸಮಯದಲ್ಲಿ ನನ್ನ ಖಾಸಗಿ ತನವನ್ನೂ ಗೌರವಿಸುವಂತೆ ಎಲ್ಲರಿಗೂ ಮನವಿ ಮಾಡಿಕೊಳ್ಳುತ್ತೇನೆ ಎಂದು ಅವರು ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ರಮೇಶ್ ಅವರ 29 ವರ್ಷದ ಮಗ ರಿತೇಶ್ ಅಗರವಾಲ್ ಅವರ ವಿವಾಹವು ಗೀತಾಂಶಾ ಸೂದ್ ಜತೆ ನಡೆದಿತ್ತು. ಮಾರ್ಚ್ 7 ರಂದು ದೆಹಲಿಯ ತಾಜ್ ಪ್ಯಾಲೇಸ್ ಪಂಚತಾರಾ ಹೋಟೆಲ್‌ನಲ್ಲಿ ಅದ್ಧೂರಿ ಆರತಕ್ಷತೆ ಸಹ ನಡೆದಿತ್ತು ಎನ್ನಲಾಗಿದೆ. ಇದನ್ನೂ ಓದಿ: ಸೆಲೆಬ್ರಿಟಿ, ಸಾಮಾಜಿಕ ಮಾಧ್ಯಮ ಪ್ರಭಾವಿಗಳಿಗೆ ಹೊಸ ಗೈಡ್‌ಲೈನ್ಸ್