Tag: P C Mohan

  • ನಮ್ಮ ಮೆಟ್ರೋ ಎಡವಟ್ಟು – ಮೆಟ್ರೋ ಸ್ಟೇಷನ್ ಫುಲ್ ರಷ್

    ನಮ್ಮ ಮೆಟ್ರೋ ಎಡವಟ್ಟು – ಮೆಟ್ರೋ ಸ್ಟೇಷನ್ ಫುಲ್ ರಷ್

    – ಮೆಟ್ರೋ ವಿಳಂಬದಿಂದ ಪರದಾಡಿದ ಪ್ರಯಾಣಿಕರು

    ಬೆಂಗಳೂರು: ನಮ್ಮ ಮೆಟ್ರೋ (Namma Metro) ಎಡವಟ್ಟಿಗೆ ನಿಲ್ದಾಣದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ. ಅಂಬೇಡ್ಕರ್ ಜಯಂತಿಯ ಸಲುವಾಗಿ ಇಂದು ರಜೆ ಎಂದು ಪ್ರತಿ ಹತ್ತು ನಿಮಿಷಕ್ಕೊಂದು ಮೆಟ್ರೋ ರೈಲಿನ ಸಂಚಾರವಿದ್ದುದರಿಂದ ಮೆಟ್ರೋ ಸ್ಟೇಷನ್‌ಗಳಲ್ಲಿ ಪ್ರಯಾಣಿಕರು ಪರದಾಡಿದ್ದಾರೆ.

    ಉಳಿದೆಲ್ಲಾ ದಿನದಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ಸೇವೆ ಇರುತ್ತದೆ. ಆದರೆ ಇಂದು ಹತ್ತು ನಿಮಿಷಕ್ಕೊಂದು ಮೆಟ್ರೋ ಸೇವೆ ಇದ್ದುದರಿಂದ ಸ್ಟೇಷನ್‌ನಲ್ಲಿ ಜನದಟ್ಟಣೆಯಿಂದ ಪ್ರಯಾಣಿಕರು ಪರದಾಡುವಂತಾಯಿತು. ಇದನ್ನೂ ಓದಿ: ವಕ್ಫ್ ಹೆಸ್ರಲ್ಲಿ ಬಡವರ ಭೂಮಿ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಲೂಟಿ ನಿಲ್ಲಲಿದೆ – ನರೇಂದ್ರ ಮೋದಿ

    ಸಾಮಾನ್ಯವಾಗಿ ಭಾನುವಾರ ಮಾತ್ರ ಈ ರೀತಿ ಮಾಡುತ್ತಿದ್ದ ಮೆಟ್ರೋ ಸಂಸ್ಥೆಯು, ಈಗ ಸಾರ್ವತ್ರಿಕ ರಜಾ ದಿನವೂ ಮೆಟ್ರೋ ಸೇವೆಯನ್ನು ವಿಳಂಬ ಮಾಡುತ್ತಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಮೆಟ್ರೋ ವಿರುದ್ಧ ಸಂಸದ ಪಿ.ಸಿ.ಮೋಹನ್ ವೀಡಿಯೋ ಟ್ಯಾಗ್ ಮಾಡಿ ಕಿಡಿಕಾರಿದ್ದಾರೆ. ಇದನ್ನೂ ಓದಿ: 4,500 ಎಕ್ರೆಗೆ ದಾಖಲೆ ಇದೆ, ಅರಮನೆ ಹೆಸರಿಗೆ ಜಮೀನು ಬಂದ್ರೂ ಗ್ರಾಮಸ್ಥರು ಆತಂಕ ಪಡಬೇಕಿಲ್ಲ: ಪ್ರಮೋದಾದೇವಿ ಒಡೆಯರ್

  • ಹಸುವಿನ ಕೆಚ್ಚಲು ಕೊಯ್ದ ಪ್ರಕರಣ – ಮಾಲೀಕನಿಗೆ 2 ಹಸು, 1 ಕರು ನೀಡಿದ ಪಿ.ಸಿ ಮೋಹನ್‌

    ಹಸುವಿನ ಕೆಚ್ಚಲು ಕೊಯ್ದ ಪ್ರಕರಣ – ಮಾಲೀಕನಿಗೆ 2 ಹಸು, 1 ಕರು ನೀಡಿದ ಪಿ.ಸಿ ಮೋಹನ್‌

    ಬೆಂಗಳೂರು: ಚಾಮರಾಜಪೇಟೆಯಲ್ಲಿ (Chamarajpet) ಹಸುವಿನ (Cow) ಕೆಚ್ಚಲು ಕೊಯ್ದಿದ್ದ ಪ್ರಕರಣಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ್ದ ಸಂಸದ ಪಿ.ಸಿ ಮೋಹನ್‌ (P.C Mohan) ಅವರು ಹಸುವಿನ ಮಾಲೀಕನಿಗೆ 2 ಹಸು ಹಾಗೂ ಒಂದು ಕರುವನ್ನು ನೀಡಿದ್ದಾರೆ.

    ಹಸು ಮಾಲೀಕ ಕರ್ಣನಿಗೆ ಸಾಂತ್ವನ ಮಾಡಿದ ಸಂಸದರು. ನಾನು ವೈಯಕ್ತಿಕವಾಗಿ ಹಸುವನ್ನು ನೀಡಿದ್ದೇನೆ ಎಂದಿದ್ದಾರೆ.

    ವಾದ್ಯಮೇಳಗಳ ಮೂಲಕ ಹಸು ಹಾಗೂ ಕರುವನ್ನು ಕರ್ಣ ಅವರ ಮನೆಗೆ ತಲುಪಿಸಿದ್ದಾರೆ. ಹಸು ನೀಡುವ ಮುನ್ನ, ಹಸು ಹಾಗೂ ಕರುವಿಗೆ ಚಾಮರಾಜಪೇಟೆಯ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿಸಲಾಯಿತು. ಬಳಿಕ ಹಸುವನ್ನು ಕರ್ಣ ಅವರ ಸುಪರ್ದಿಗೆ ನೀಡಲಾಗಿದೆ.

    ಚಾಮರಾಜಪೇಟೆಯ (Chamarajpet) ವಿನಾಯಕ ನಗರದಲ್ಲಿ ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ಕೊಯ್ದಿದ್ದು ಈಗ ಪಶು ಆಸ್ಪತ್ರೆಯಲ್ಲಿ (Veterinary Hospital) ಚಿಕಿತ್ಸೆ ನೀಡಲಾಗಿತ್ತು. ಘಟನಾ ಸ್ಥಳಕ್ಕೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿಸಿ ಮೋಹನ್‌ ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಕ್ಲಾಸ್‌ ತೆಗೆದುಕೊಂಡಿದ್ದರು. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಾಗ್ದಾಳಿ ನಡೆಸಿದ್ದರು.

  • ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ – ಓರ್ವ ಆರೋಪಿ ಅರೆಸ್ಟ್‌

    ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಪ್ರಕರಣ – ಓರ್ವ ಆರೋಪಿ ಅರೆಸ್ಟ್‌

    ಬೆಂಗಳೂರು: ಇಲ್ಲಿನ ಚಾಮರಾಜಪೇಟೆಯಲ್ಲಿ (Chamarajpet) ಹಸುಗಳ ಕೆಚ್ಚಲು (Cows Udder) ಕೊಯ್ದು ವಿಕೃತಿ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಕಾಟನ್‌ಪೇಟೆ ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯನ್ನು ಬಂಧಿಸಿ ಸ್ಥಳ ಮಹಜರು ನಡೆಸಿರುವ ಸೋಕೋ ಟೀಂ ತಡರಾತ್ರಿಯಿಂದಲೇ ವಿಚಾರಣೆ ಆರಂಭಿಸಿದೆ. ಇದನ್ನೂ ಓದಿ: ಮೂರು ಹೊಸ ಹಸುಗಳನ್ನು ನಾನೇ ಕೊಡಿಸುತ್ತೇನೆ: ಜಮೀರ್ 

    ಏನಿದು ಅಮಾನವೀಯ ಪ್ರಕರಣ?
    ಬೀದಿಯಲ್ಲಿ ಮಲಗಿದ್ದ 3 ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಘಟನೆ ಚಾಮರಾಜಪೇಟೆಯಲ್ಲಿ ಭಾನುವಾರ ನಡೆದಿದೆ. ವಿನಾಯಕ ನಗರದಲ್ಲಿ ತಡರಾತ್ರಿ ಕರ್ಣ ಎಂಬುವರಿಗೆ ಸೇರಿದ್ದ 3 ಹಸುಗಳ ಕೆಚ್ಚಲು ಕೊಯ್ದ ರಕ್ತದ ಕೋಡಿಯನ್ನೇ ಹರಿಸಿದ್ದರು. ಸದ್ಯ ಹಸುಗಳಿಗೆ ಚಾಮರಾಜಪೇಟೆ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕಾಟನ್ ಪೇಟೆ ಪೊಲೀಸರು ತನಿಖೆ ಆರಂಭಿಸಿದ್ದರು. ಇದನ್ನೂ ಓದಿ: ಹಸುಗಳನ್ನು ಹೋರಾಟಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಕೆಚ್ಚಲಿಗೆ ಕತ್ತರಿ!

    ಇನ್ನೂ ಈ ಪ್ರಕರಣದಲ್ಲೂ ರಾಜಕೀಯ ಕೆಸರೆರಚಾಟಕ್ಕೆ ಶುರುವಾಗಿದೆ. ಘಟನೆ ಬೆಳಕಿಗೆ ಬರ್ತಿದ್ದಂತೆ ಬಿಜೆಪಿ ನಾಯಕರು ಸ್ಥಳಕ್ಕೆ ಭೇಟಿ ಕೊಟ್ರು.. ಸ್ಥಳೀಯ ಸಂಸದ ಪಿಸಿ ಮೋಹನ್ ಸ್ಥಳ ಪರಿಶೀಲಿಸಿ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು. ವಿಪಕ್ಷ ನಾಯಕ ಅಶೋಕ್ ಕೂಡ ಸ್ಥಳಕ್ಕಾಗಮಿಸಿ, ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಸಂಕ್ರಾಂತಿಗೆ ಹಸುವಿನ ಕೆಚ್ಚಲು ಕೊಯ್ದಿರೋ ಗಿಫ್ಟ್ ಕೊಟ್ಟಿದ್ದಾರೆ. ಇದು ಜಿಹಾದಿ ಮನಸ್ಥಿತಿ, ಹಾಲು ಕೊಡುವ ಕೆಚ್ಚಲು ಕೊಯ್ದಿದ್ದಾರೆ ಎಂದು ಕಿಡಿಕಾರಿದ್ರು.

    ಈ ವೇಳೆ ವೈಯಕ್ತಿಕವಾಗಿ 1 ಲಕ್ಷ ಪರಿಹಾರವನ್ನೂ ಘೋಷಿಸಿದ್ರು. ಇತ್ತ, ಹಿಂದೂ ಮುಖಂಡರೂ ಘಟನೆಯನ್ನು ಉಗ್ರವಾಗಿ ಖಂಡಿಸಿದ್ದಾರೆ. ಘಟನೆಯನ್ನು ಸಿಎಂ ಖಂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ ಅಂದಿದ್ದಾರೆ. ಸ್ಥಳೀಯ ಶಾಸಕರೂ ಆಗಿರುವ ಸಚಿವ ಜಮೀರ್, ಕಾಟನ್‌ಪೇಟೆ ಪಶುವೈದ್ಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತೆ. 3 ಹೊಸ ಹಸುಗಳನ್ನು ನಾನೇ ಕೊಡಿಸ್ತೀನಿ ಅಂದಿದ್ದಾರೆ. ಇದನ್ನೂ ಓದಿ: ಛೇ ಇದೆಂತಾ ವಿಕೃತಿ! – ಹಸುಗಳ ಕೆಚ್ಚಲು ಕೊಯ್ದ ದುರುಳರು

  • Bengaluru Central Lok Sabha 2024: ಹ್ಯಾಟ್ರಿಕ್‌ ಗೆಲುವಿನ ಸರದಾರನಿಗೆ ಬ್ರೇಕ್‌ ಹಾಕುತ್ತಾ ಕಾಂಗ್ರೆಸ್?‌

    Bengaluru Central Lok Sabha 2024: ಹ್ಯಾಟ್ರಿಕ್‌ ಗೆಲುವಿನ ಸರದಾರನಿಗೆ ಬ್ರೇಕ್‌ ಹಾಕುತ್ತಾ ಕಾಂಗ್ರೆಸ್?‌

    – ಪಿ.ಸಿ.ಮೋಹನ್‌ v/s ಮನ್ಸೂರ್‌ ಅಲಿ ಖಾನ್‌

    2008 ರಲ್ಲಿ ಅಸ್ತಿತ್ವಕ್ಕೆ ಬಂದ ಲೋಕಸಭಾ ಕ್ಷೇತ್ರ ಬೆಂಗಳೂರು ಕೇಂದ್ರ (Bengaluru Central). ಅಸ್ತಿತ್ವಕ್ಕೆ ಬಂದಾಗಿನಿಂದಲೂ ಇದು ಬಿಜೆಪಿ ವಶದಲ್ಲಿದೆ. ಈಗ ಮತ್ತೆ ಲೋಕಸಭಾ ಚುನಾವಣೆ ಬಂದಿದೆ. ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್‌ ಪಕ್ಷ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಶತಪ್ರಯತ್ನ ನಡೆಸುತ್ತಿದೆ. ಸತತ ನಾಲ್ಕು ಬಾರಿ ಗೆಲುವು ಸಾಧಿಸಿರುವ ಬಿಜೆಪಿ ಕ್ಷೇತ್ರವನ್ನು ಪ್ರತಿಷ್ಠೆಯ ಕಣವಾಗಿ ಸ್ವೀಕರಿಸಿದೆ.

    ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಬಿಜೆಪಿಯ ಪಿ.ಸಿ.ಮೋಹನ್‌ (P.C.Mohan) ಬಿಗಿ ಹಿಡಿತ ಸಾಧಿಸಿದ್ದಾರೆ. ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯ ಹೊಂದಿರುವ ಕ್ಷೇತ್ರದಲ್ಲಿ ಭಾಷಾ ಮತ್ತ ಧಾರ್ಮಿಕ ಅಲ್ಪಸಂಖ್ಯಾತರ ಬೆಂಬಲ ಪಡೆಯುವುದು ಇಲ್ಲಿ ಸ್ಪರ್ಧಿಸುವ ಯಾವುದೇ ಅಭ್ಯರ್ಥಿಗೆ ಸವಾಲಿನ ವಿಷಯವಾಗಿದೆ. ಅದೇ ಲೆಕ್ಕಾಚಾರದಲ್ಲಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಬೆಂಗಳೂರು ಕೇಂದ್ರ ಕ್ಷೇತ್ರದ 2024 ರ ಸಾರ್ವತ್ರಿಕ ಚುನಾವಣೆಯು ಜಿದ್ದಾಜಿದ್ದಿನ ಕಣವಾಗಿದೆ. ಇದನ್ನೂ ಓದಿ: Bengaluru South Lok Sabha 2024: ಪ್ರತಿಷ್ಠೆಯ ಕಣವನ್ನು ಮತ್ತೆ ಗೆಲ್ಲುತ್ತಾ ಬಿಜೆಪಿ?- ‘ಕೈ’ ವಶಕ್ಕೆ ತಂತ್ರವೇನು?

    ಕ್ಷೇತ್ರ ಪರಿಚಯ
    2008 ರಲ್ಲಿ ಕ್ಷೇತ್ರ ಪುನರ್‌ ವಿಂಗಡಣೆಯಲ್ಲಿ ಬೆಂಗಳೂರು ಗ್ರಾಮಾಂತರ ಅಸ್ತಿತ್ವಕ್ಕೆ ಬಂತು. ಆಗಿನಿಂದಲೂ ಕ್ಷೇತ್ರದಲ್ಲಿ ಬಿಜೆಪಿ ಬಿಗಿ ಹಿಡಿತ ಸಾಧಿಸಿದೆ. 2009 ರಲ್ಲಿ ಕ್ಷೇತ್ರಕ್ಕೆ ನಡೆದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪಿ.ಸಿ.ಮೋಹನ್‌ ಗೆಲುವು ದಾಖಲಿಸಿದ್ದರು. ಮತ್ತೆ 2014, 2019 ರ ಚುನಾವಣೆಯಲ್ಲೂ ಜಯಸಿ ಹ್ಯಾಟ್ರಿಕ್‌ ಸರದಾರ ಎನಿಸಿಕೊಂಡಿದ್ದಾರೆ.

    ವಿಧಾನಸಭಾ ಕ್ಷೇತ್ರಗಳೆಷ್ಟು?
    ಈ ಕ್ಷೇತ್ರ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳು ಒಳಪಡುತ್ತವೆ. ಸರ್ವಜ್ಞನಗರ, ಸಿ.ವಿ. ರಾಮನ್‌ ನಗರ, ಶಿವಾಜಿನಗರ, ಶಾಂತಿನಗರ, ಗಾಂಧಿ ನಗರ, ರಾಜಾಜಿನಗರ, ಚಾಮರಾಜಪೇಟೆ, ಮಹದೇವಪುರ (ಎಸ್‌ಸಿ) ವಿಧಾನಸಭಾ ಕ್ಷೇತ್ರಗಳಿವೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ಅಂತಹದ್ದೇನು ಬದಲಾವಣೆ ಆಗಿಲ್ಲ. ಹಿಂದಿನಂತೆಯೇ ಕಾಂಗ್ರೆಸ್‌ 5 ಹಾಗೂ ಬಿಜೆಪಿ 3 ಸ್ಥಾನ ಗಳಿಸಿದೆ. ಇದನ್ನೂ ಓದಿ: Bengaluru North Lok Sabha 2024: ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್‌ ಹಾಕುತ್ತಾ ಕಾಂಗ್ರೆಸ್‌?

    ಮತದಾರರು ಎಷ್ಟಿದ್ದಾರೆ?
    ಬೆಂಗಳೂರೂ ಕೇಂದ್ರ ವ್ಯಾಪ್ತಿಯಲ್ಲಿ ಒಟ್ಟು 23,98,910 ಮತದಾರರಿದ್ದಾರೆ. ಅವರ ಪೈಕಿ 12,36,897 ಪುರುಷ ಹಾಗೂ 11,61,548 ಮಹಿಳಾ ಮತದಾರರಿದ್ದಾರೆ. 465 ತೃತೀಯಲಿಂಗಿ ಮತದಾರರು ಇದ್ದಾರೆ.

    ಕಳೆದ ಚುನಾವಣೆಯಲ್ಲಿ ಏನಾಗಿತ್ತು?
    2019 ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮೂರನೇ ಬಾರಿ ಸ್ಪರ್ಧಿಸಿದ್ದ ಪಿ.ಸಿ.ಮೋಹನ್‌ ಗೆಲುವು ಸಾಧಿಸಿದ್ದರು. ಕಾಂಗ್ರೆಸ್‌ ಅಭ್ಯರ್ಥಿ ರಿಜ್ವಾನ್‌ ಅರ್ಷದ್‌ (Rizwan Arshad) ಎರಡನೇ ಬಾರಿಯೂ ಸೋತಿದ್ದರು. ಬಿಜೆಪಿ 70,968 ಮತಗಳ ಅಂತರದಿಂದ ಗೆಲುವು ದಾಖಲಿಸಿತ್ತು. ಇದನ್ನೂ ಓದಿ: Bagalkot Lok Sabha 2024: ಚಾಲುಕ್ಯರ ನಾಡಲ್ಲಿ ಬಾವುಟ ಹಾರಿಸೋದ್ಯಾರು?

     

    ಪಿ.ಸಿ.ಮೋಹನ್‌ಗೆ 4ನೇ ಬಾರಿ ಬಿಜೆಪಿ ಟಿಕೆಟ್‌
    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಬೇಕೆಂಬ ಬೇಡಿಕೆ ವ್ಯಕ್ತವಾಗಿತ್ತು. ಆದರೆ ಕ್ಷೇತ್ರದಲ್ಲಿ ನಡೆದ ಮೂರು ಚುನಾವಣೆಯಲ್ಲೂ ಸತತವಾಗಿ ಗೆದ್ದಿರುವ ಪಿ.ಸಿ.ಮೋಹನ್‌ಗೆ ಬಿಜೆಪಿ ಮತ್ತೆ ಮಣೆ ಹಾಕಿದೆ.

    ಕಾಂಗ್ರೆಸ್‌ನಿಂದ ರಿಜ್ವಾನ್‌ ಅರ್ಷದ್‌ ಪುತ್ರ ಕಣಕ್ಕೆ
    ಮುಸ್ಲಿಂ ಮತದಾರರ ಬಾಹುಳ್ಯವಿರುವ ಕ್ಷೇತ್ರದಲ್ಲಿ ಈ ಬಾರಿ ಗೆಲುವು ಸಾಧಿಸಬೇಕು ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಕೇಂದ್ರದ ಮಾಜಿ ಸಚಿವ ಕೆ.ರೆಹಮಾನ್‌ ಖಾನ್ ಅವರ ಪುತ್ರ‌ ಹಾಗೂ ಎಐಸಿಸಿ ಕಾರ್ಯದರ್ಶಿ ಮನ್ಸೂರ್‌ ಅಲಿ ಖಾನ್‌ (Mansoor Ali Khan) ಅವರನ್ನು ಹುರಿಯಾಳಾಗಿಸಿದೆ. ರಾಜ್ಯ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಹ್ಯಾರೀಸ್‌ ಹೈಕಮಾಂಡ್‌ ಮಟ್ಟದಲ್ಲಿ ಟಿಕೆಟ್‌ ಗಿಟ್ಟಿಸಲು ಪ್ರಯತ್ನಿಸಿದ್ದರು. ಆದರೆ ಅವರ ಪ್ರಯತ್ನ ಫಲಿಸಲಿಲ್ಲ. ಇದನ್ನೂ ಓದಿ: Dakshina Kannada Lok Sabha 2024: ಬಿಜೆಪಿ ಭದ್ರಕೋಟೆ ಭೇದಿಸುತ್ತಾ ಕಾಂಗ್ರೆಸ್?‌

    ಜಾತಿವಾರು ಲೆಕ್ಕಾಚಾರ
    ಮುಸ್ಲಿಂ- 6,00,000
    ಕ್ರೈಸ್ತರು- 2,00,000
    ಎಸ್‌ಸಿ- 4,00,000
    ಇತರೆ- 6,00,000

  • ಹಿಜಬ್‌ ಸಂಬಂಧ ಹೈಕೋರ್ಟ್‌ ತೀರ್ಪು- ಕೋಟ, ಸೂಲಿಬೆಲೆ, ಮೋಹನ್‌, ಸುರೇಶ್‌ಕುಮಾರ್‌ ಪ್ರತಿಕ್ರಿಯೆ

    ಹಿಜಬ್‌ ಸಂಬಂಧ ಹೈಕೋರ್ಟ್‌ ತೀರ್ಪು- ಕೋಟ, ಸೂಲಿಬೆಲೆ, ಮೋಹನ್‌, ಸುರೇಶ್‌ಕುಮಾರ್‌ ಪ್ರತಿಕ್ರಿಯೆ

    ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದ ಬೆನ್ನಲ್ಲೆ ಅನೇಕ ರಾಜಕೀಯ ನಾಯಕರು ತೀರ್ಪಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಯುವ ಬ್ರಿಗೇಡ್‍ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ, ಸಂಸದ ಹೆಚ್.ಸಿ ಮೋಹನ್ ಹಾಗೂ ಮಾಜಿ ಸಚಿವ ಸುರೇಶ್‌ಕುಮಾರ್‌ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿ ಕೋರ್ಟ್‌ ಆದೇಶವನ್ನು ಸ್ವಾಗತಿಸಿದ್ದಾರೆ.

    ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವೀಟ್ ಮಾಡಿ, ಹಿಜಬ್ ವಿವಾದ ವಿಚಾರದಲ್ಲಿ ರಾಜ್ಯದ ಉಚ್ಚ ನ್ಯಾಯಾಲಯ ತೀರ್ಪು ನೀಡಿದ್ದು, ಸರ್ಕಾರದ ನಿಲುವನ್ನು ಸಮರ್ಥಿಸಿ ಸಮವಸ್ತ್ರ ಕಡ್ಡಾಯ ಆದೇಶವನ್ನು ಎತ್ತಿ ಹಿಡಿದಿದೆ. ನ್ಯಾಯಾಲಯದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ಎಲ್ಲರೂ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಯುವ ಬ್ರಿಗೇಡ್‍ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಿಜಬ್ ತೀರ್ಪಿಗೆ ಸಂಬಂಧಿಸಿ ಶಿಕ್ಷಣ ಕೇಂದ್ರಗಳಲ್ಲಿ ಹಿಜಬ್ ಇಲ್ಲ, ಕೇವಲ ಸಮವಸ್ತ್ರ. ಇದು ಹೈಕೋರ್ಟ್ ಆದೇಶ ಎಂದಿದ್ದಾರೆ. ಇದನ್ನೂ ಓದಿ: ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂತಿರುಗಿ: ಮಾಳವಿಕಾ ಅವಿನಾಶ್

    ಸಂಸದ ಹೆಚ್.ಸಿ ಮೋಹನ್ ಸರಣಿ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದು, ಶಾಲಾ-ಕಾಲೇಜುಗಳಲ್ಲಿ ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಬಟ್ಟೆಗಳನ್ನು ನಿಷೇಧಿಸುವ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಕರ್ನಾಟಕ ಸರ್ಕಾರ ನೀಡಿರುವ ಮಾರ್ಗಸೂಚಿಗಳನ್ನು ಅನುಸರಿಸಬೇಕು. ವಿದ್ಯಾರ್ಥಿಗಳು ಏಕರೂಪದ ಬಟ್ಟೆಗಳನ್ನು ಧರಿಸಬೇಕು ಎಂದು ತಿಳಿಸಿದರು.

    ತರಗತಿಯಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಮುಸ್ಲಿಂ ಹುಡುಗಿಯರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹಿಜಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯ ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶವನ್ನು ತೀರ್ಪು ನೀಡಿದೆ. ಜೊತೆಗೆ ಶಾಲೆಯಲ್ಲಿ ಹಿಜಬ್ ಧರಿಸಲು ನಿಷೇಧವನ್ನು ಎತ್ತಿಹಿಡಿದಿದೆ. ತೀರ್ಪು ಸ್ವಾಗತಾರ್ಹವಾಗಿದೆ ಎಂದರು. ಇದನ್ನೂ ಓದಿ: 6 ವಿದ್ಯಾರ್ಥಿನಿಯರು ಹಠ ಮಾಡದೇ ಶಾಲೆಗೆ ಬರ್ಬೇಕು, ಸಮವಾದ ಶಿಕ್ಷಣ ನೀಡುತ್ತೇವೆ: ರಘುಪತಿ ಭಟ್

    ಮಾಜಿ ಸಚಿವ ಎಸ್‌ ಸುರೇಶ್‌ಕುಮಾರ್‌ ಟ್ವೀಟ್‌ ಮಾಡಿ, ಸಮವಸ್ತ್ರ ವಿಷಯ ಕುರಿತ ಕರ್ನಾಟಕ ಉಚ್ಛ ನ್ಯಾಯಾಲಯದ ತೀರ್ಪು ಅತ್ಯಂತ ಸ್ವಾಗತಾರ್ಹ. ಸಮಸ್ಯೆ ಇಲ್ಲಿಗೆ ಕೊನೆಯಾಗಿ, ಎಲ್ಲಾ ಮಕ್ಕಳು ಶಾಲೆ – ಕಾಲೇಜುಗಳಲ್ಲಿ ಶಿಕ್ಷಣ ಪಡೆಯುವುದಕ್ಕೆ ಗಮನ ಹರಿಸುವಂತೆ ನಾವೆಲ್ಲ ಸಹಕಾರ ನೀಡಬೇಕಿದೆ. ಇದನ್ನೂ ಓದಿ: ಮಕ್ಕಳಿಗೆ ವಿದ್ಯೆಗಿಂತ ಮತ್ತೊಂದಿಲ್ಲ, ನ್ಯಾಯಾಲಯ ಕೊಟ್ಟಿರುವ ತೀರ್ಪನ್ನು ಪಾಲಿಸಬೇಕು: ಬೊಮ್ಮಾಯಿ

    ಐತಿಹಾಸಿಕ ತೀರ್ಪು..?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.