Tag: P.C. Shekhar

  • ರೋಮಿಯೋ ಚಿತ್ರ ನಿರ್ದೇಶಕನ ಸಿನಿಮಾಗೆ ವಿಜಯ ರಾಘವೇಂದ್ರ ಹೀರೋ

    ರೋಮಿಯೋ ಚಿತ್ರ ನಿರ್ದೇಶಕನ ಸಿನಿಮಾಗೆ ವಿಜಯ ರಾಘವೇಂದ್ರ ಹೀರೋ

    ಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಸಿದ್ದಪ್ಪ (Prakash Siddappa) ನಿರ್ಮಿಸುತ್ತಿರುವ ಹೊಸ ಚಿತ್ರವನ್ನು ರೋಮಿಯೋ, ರಾಗ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ (P. C. Shekhar) ನಿರ್ದೇಶಿಸುತ್ತಿದ್ದಾರೆ. ತಮ್ಮ ನಟನೆಯಿಂದಲೇ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ (Vijaya Raghavendra) ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ಪ್ರಕಾಶ್, “ರೈತರ ಕುರಿತ ವಿಷಯ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದೆ” ಮತ್ತು ಪಿ.ಸಿ. ಶೇಖರ್ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿದ್ದರು. ಈಗ ಅವರು ಅಲಯನ್ಸ್ ಯೂನಿವರ್ಸಿಟಿಯ ಫಿಲ್ಮ್ ಮೇಕಿಂಗ್ ಕೋರ್ಸ್‌ನ ಸಹಯೋಗದಲ್ಲಿ ಆಕಾಶ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ಮೊದಲ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷದ ಸಂಗತಿ. ಅಲಯನ್ಸ್‌ನಲ್ಲಿ ಕಲಿತು ಈಗ ಬೇರೆ ಬೇರೆ ಉದ್ಯೋಗದಲ್ಲಿರುವ ಹಳೆ ವಿದ್ಯಾರ್ಥಿಗಳು ಚಿತ್ರ ನಿರ್ಮಾಣದಲ್ಲಿ ನಮ್ಮೊಂದಿಗಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುವ ಪ್ರಯತ್ನ ನಡೆಯುತ್ತಿದೆ. ಚಿತ್ರದಲ್ಲಿ ವಿಜಯ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಉಳಿದ ಕಲಾವಿದರು ಮತ್ತು ತಂತ್ರಜ್ಞರ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದು.

    ಅಲಯನ್ಸ್ ಯೂನಿವರ್ಸಿಟಿಯ ಚಲನಚಿತ್ರ ನಿರ್ಮಾಣ ಮತ್ತು ಮಾಧ್ಯಮ ಅಧ್ಯಯನದ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡುತ್ತಿರುವ ಆಕಾಶ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ಚಲನಚಿತ್ರವನ್ನು ನಿರ್ದೇಶಿಸುವುದಕ್ಕಿಂತ ಹೆಚ್ಚಿನ ಖುಷಿ ಏನಿದೆ. ಈ ಅವಕಾಶಕ್ಕಾಗಿ ಪ್ರಕಾಶ್ ಅವರಿಗೆ ಧನ್ಯವಾದಗಳು. ಇದನ್ನು ಗುರು-ಶಿಷ್ಯ ಸಂಬಂಧ ಎನ್ನುತ್ತಾರೆ.

    ಇನ್ನು ಈ ಸಿನಿಮಾದ ಬಗ್ಗೆ ಮಾತನಾಡೋಣ, ಇದು ರೈತನ ಕುರಿತ ಸಿನಿಮಾ. ಬಹುತೇಕ ಚಿತ್ರೀಕರಣ ಹಳ್ಳಿಯಲ್ಲಿಯೇ ನಡೆಯಲಿದೆ. ರೈತ ಮತ್ತು ಸಾರ್ವಜನಿಕರ ನಡುವಿನ ಸಂಬಂಧದ ಜೊತೆಗೆ ದೇಶಕ್ಕೆ ರೈತನ ಮಹತ್ವವನ್ನು ತೋರಿಸುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುವುದು. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಕಥೆ ಬರೆಯುವಾಗ ವಿಜಯ ರಾಘವೇಂದ್ರರನ್ನು ಗಮನದಲ್ಲಿಟ್ಟುಕೊಂಡು ಕಥೆ ಬರೆದಿದ್ದೆ. ಅವರಿಗೆ ಕಥೆ ಹೇಳಿದಾಗ ಅವರು ಇಷ್ಟಪಟ್ಟು ನಟಿಸಲು ಒಪ್ಪಿದ್ದು ತುಂಬಾ ಖುಷಿ ತಂದಿದೆ. ಚಿತ್ರವು ಅದ್ದೂರಿ ತಾರಾಗಣ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಹೊಂದಿದೆ.  ಇಷ್ಟು ವರ್ಷಗಳ ನನ್ನ ಸಿನಿ ಪಯಣದಲ್ಲಿ ಇದೊಂದು ವಿಭಿನ್ನ ಶೈಲಿಯ ಸಿನಿಮಾ. ಇದು ನನ್ನ ಹೃದಯಕ್ಕೆ ಹತ್ತಿರವಾದ ಚಿತ್ರವಾಗಿದ್ದು, ತುಂಬಾ ಪ್ರೀತಿಯಿಂದ ಮಾಡಲಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ಪಿ.ಸಿ.ಶೇಖರ್.

    ನಿರ್ದೇಶಕ ಪಿ.ಸಿ.ಶೇಖರ್ ಬಂದು ಈ ಚಿತ್ರದ ಕಥೆ ಹೇಳಿದಾಗ ಕಥೆ ಕೇಳಿ ತುಂಬಾ ಖುಷಿಯಾಯಿತು. ಅನ್ನದಾತ ರೈತನ ಕುರಿತಾದ ಈ ಚಿತ್ರದ ನಾಯಕನನ್ನಾಗಿ ಆಯ್ಕೆ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್ ಹಾಗೂ ನಿರ್ಮಾಪಕ ಪ್ರಕಾಶ್ ಸಿದ್ದಪ್ಪ ಅವರಿಗೆ ಧನ್ಯವಾದಗಳು. ಪಿ.ಸಿ.ಶೇಖರ್ ನಿರ್ದೇಶನದ ನನ್ನ ಮೊದಲ ಸಿನಿಮಾ ಇದು ಎನ್ನುತ್ತಾರೆ ನಟ ವಿಜಯ ರಾಘವೇಂದ್ರ.

  • ವಿಲನ್ ಇಟ್ಟುಕೊಂಡು ‘BAD’ ಸಿನಿಮಾ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್

    ವಿಲನ್ ಇಟ್ಟುಕೊಂಡು ‘BAD’ ಸಿನಿಮಾ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್

    ರೋಮಿಯೋ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ ಶೇಖರ್(P.C. Shekhar) ನಿರ್ದೇಶನದಲ್ಲಿ ನಕುಲ್ ಗೌಡ (Nakul Gowda) (ಪ್ರೀತಿಯ ರಾಯಭಾರಿ ಖ್ಯಾತಿ) ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರ ‘BAD’. ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರ ಕನ್ನಡದಲ್ಲಿ ವಿಭಿನ್ನ ಪ್ರಯತ್ನ ಎನ್ನಬಹುದು.

    ಈ ಚಿತ್ರಕ್ಕೆ  BAD ಅಂತ ಹೆಸರಿಡಲು ಕಾರಣವಿದೆ. ಏಕೆಂದರೆ ಇದರಲ್ಲಿ ನಾಯಕ ಹಾಗೂ ನಾಯಕಿ ಅಂತ ಇಲ್ಲ. ಎಲ್ಲಾ ವಿಲನ್ ಪಾತ್ರಗಳೆ. ಅದರಲ್ಲಿ ಮುಖ್ಯ ವಿಲನ್ ಗಳಿರುತ್ತಾರಷ್ಟೆ. ರೋಷಮಾನ್ ಎಫೆಕ್ಟ್ ಎಂಬ ವಿಧಾನವನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗುತ್ತಿದೆ‌. ಜಪಾನ್ ನಿರ್ದೇಶಕರೊಬ್ಬರು ಈ ವಿಧಾನವನ್ನು ತಮ್ಮ ಚಿತ್ರದ ಮೂಲಕ ಪರಿಚಯಿಸಿದ್ದರು. ಕನ್ನಡದಲ್ಲಿ ಇದರ ಬಳಕೆಯಾಗಿರುವುದು ವಿರಳ ಎನ್ನಬಹುದು. ಇದನ್ನೂ ಓದಿ:ಅಮ್ಮು ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಸ್ಪಷ್ಟನೆ

    ಒಂದೇ ಕಥೆಯನ್ನೇ ಬೇರೆಬೇರೆಯವರು ಹೇಳುವ ವಿಧಾನ ಬೇರೆ ರೀತಿ ಆಗಿರುತ್ತದೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ಕಾಲು ಭಾಗ ಮುಕ್ತಾಯವಾಗಿದೆ. ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ನನ್ನ ನಿರ್ದೇಶನದ ಹತ್ತನೇ ಚಿತ್ರ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನನ್ನ ನಿರ್ದೇಶನದ ಹತ್ತು ಚಿತ್ರಗಳಲ್ಲಿ ಒಂಬತ್ತು ಚಿತ್ರಗಳಿಗೆ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿದ್ದಾರೆ. ನಾನೇ ಕಥೆ, ಚಿತ್ರಕಥೆ ರಚಿಸಿದ್ದೇನೆ.  ಸಂಕಲನವನ್ನು ಮಾಡುತ್ತಿದ್ದೇನೆ. ನನ್ನ ಹಿಂದಿನ ರಾಗ ಹಾಗೂ ದಿ ಟೆರರಿಸ್ಟ್ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಸಚಿನ್ ಬಿ ಹೊಳಗುಂಡಿ ಈ ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನವಿದೆ ಎನ್ನುತ್ತಾರೆ ಶೇಖರ್.

    ಇದೊಂದು ಪ್ರಯೋಗಾತ್ಮಕ ಚಿತ್ರವಾಗಿದ್ದು, ಬರುವ ಪಾತ್ರಗಳ ಅಭಿನಯ ನೋಡುಗರಿಗೆ ಸಹಜ ರೀತಿಯಲ್ಲಿ ಕಾಣಬೇಕು ಹಾಗೂ ಅವರ ಪಾತ್ರವನ್ನು ನೋಡಿದ ಕೂಡಲೆ, ಇವರದು ಇಂತಹುದೇ ಪಾತ್ರ ಎಂದು ಪ್ರೇಕ್ಷಕರು ಅಂದುಕೊಳ್ಳಬಾರದು. ಹಾಗಾಗಿ ಈ ಚಿತ್ರದಲ್ಲಿ ಹೆಚ್ಚು ಹೊಸ ಕಲಾವಿದರೆ ಅಭಿನಯಿಸುತ್ತಿದ್ದಾರೆ ಎನ್ನುವುದು ನಿರ್ದೇಶಕರ ಮಾತು.

     

    ಪ್ರೀತಿಯ ರಾಯಭಾರಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ, ಮಾನ್ವಿತ ಹರೀಶ್ (Manvita Harish), ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಹಾಗೂ ಅನೇಕ ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ‌. ಶಕ್ತಿ ಶೇಖರ್ ಈ ಚಿತ್ರದ ಛಾಯಾಗ್ರಾಹಕರು ಎಂದು ನಿರ್ದೇಶಕ ಪಿ.ಸಿ.ಶೇಖರ್ ಚಿತ್ರದ ಕುರಿತು ಮಾಹಿತಿ ನೀಡಿದ್ದಾರೆ.

  • ತೆರೆಯ ಮೇಲೂ ಒಂದಾದ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ

    ತೆರೆಯ ಮೇಲೂ ಒಂದಾದ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ

    ವ್ ಮಾಕ್ಟೈಲ್ ಚಿತ್ರದಲ್ಲಿ ಜೋಡಿಯಾಗಿ ಸಿನಿರಂಗವನ್ನು ರಂಜಿಸಿದ್ದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್, ಈ ಸಿನಿಮಾದಲ್ಲಿ ಮಾತ್ರವಲ್ಲ ವೈಯಕ್ತಿಕ ಜೀವನದಲ್ಲೂ ಅವರು ಜೊತೆಯಾದರು. ಸತಿ ಪತಿಯಾಗಿ ಒಂದೊಳ್ಳೆ ಜೀವನ ಸಾಗಿಸುತ್ತಿದ್ದಾರೆ. ಸಿನಿಮಾದಲ್ಲಿ ಪ್ರೇಮಿಯಾಗಿ ಪಾತ್ರ ಮಾಡಿದ್ದವರು, ನಿಜ ಜೀವನದಲ್ಲೂ ಅದನ್ನು ಮುಂದುವರೆಸಿಕೊಂಡು ಹೋಗಿ, ನಂತರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ಸ್ ನಿಂದ ಮತ್ತೆರಡು ಪ್ಯಾನ್ ಇಂಡಿಯಾ ಸಿನಿಮಾ

    ಲವ್ ಮಾಕ್ಟೈಲ್ ಇಬ್ಬರ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್ ನೀಡಿತು. ಆನಂತರ ಅವರು ಲವ್ ಮಾಕ್ಟೈಲ್ 2 ನಲ್ಲೂ ಜೊತೆಯಾಗಿಯೇ ನಟಿಸಿದರು. ಬಾಕ್ಸ್ ಆಫೀಸಿನಲ್ಲಿ ಅದು ಅಷ್ಟೇನೂ ಸದ್ದು ಮಾಡದೇ ಇದ್ದರೂ, ಜೋಡಿಯು ನೋಡುಗರಿಗೆ ಇಷ್ಟವಾಯಿತು. ಈಗ ಅದನ್ನೇ ಮುಂದುವರೆಸುವ ನಿಟ್ಟಿನಲ್ಲಿ ನಿರ್ದೇಶಕ ಪಿ.ಸಿ.ಶೇಖರ್ ಮತ್ತೊಂದು ಹೊಸ ಸಿನಿಮಾವನ್ನು ಇದೇ ಜೋಡಿಯಾಗಿ ನಿರ್ದೇಶನ ಮಾಡುತ್ತಿದ್ದಾರೆ. ಅದಕ್ಕೆ ಬ್ಯುಟಿಫುಲ್ ಆಗಿರುವ ಶೀರ್ಷಿಕೆಯನ್ನೂ ಇಟ್ಟಿದ್ದಾರೆ. ಇದನ್ನೂ ಓದಿ : ‘ಕಾಳಿ’ ಟೈಟಲ್ ಧ್ರುವ ಸರ್ಜಾಗಾ? ಅಥವಾ ಅಭಿಷೇಕ್ ಅಂಬರೀಶ್ ಗಾ?

    ಪಿ.ಸಿ. ಶೇಖರ್ ಸಿನಿಮಾ ರಂಗದಲ್ಲಿ ಕೊಂಚ ಗ್ಯಾಪ್ ತಗೆದುಕೊಂಡು ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರಕ್ಕೆ ಲವ್ ಬರ್ಡ್ಸ್ ಎಂದು ಹೆಸರಿಟ್ಟಿದ್ದಾರೆ. ರಿಯಲ್ ಲೈಫ್‍ನ ಲವ್ ಬರ್ಡ್ಸ್ ಅನ್ನೇ ನಾಯಕ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಕಥೆಗೂ ಮತ್ತು ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅವರ ಜೋಡಿಗೂ ಒಂದಾಣಿಕೆ ಆಗುತ್ತಿದ್ದರಿಂದ, ಇದೇ ಜೋಡಿಯನ್ನು ಆಯ್ಕೆ ಮಾಡಿಕೊಂಡು, ಸಿನಿಮಾ ಮಾಡುತ್ತಿದ್ದಾರೆ. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರು ಉಳಿಸಿ – ಪ್ರಧಾನಿಗೆ ನಟ ಅನಿರುದ್ಧ್ ಪತ್ರ

    ಲವ್ ಬರ್ಡ್ಸ್ ಚಿತ್ರಕ್ಕೆ ಮಿಲನಾ ನಾಗರಾಜ್ ನಾಯಕಿಯಾದರೆ, ಡಾರ್ಲಿಂಗ್ ಕೃಷ್ಣ ನಾಯಕ. ಮದುವೆಯಾದ ಜೋಡಿಯ ನಂತರದ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆಯಂತೆ. ದಾಂಪತ್ಯ ಜೀವನದ ಹಲವು ಸಂಗತಿಗಳನ್ನು ಈ ಸಿನಿಮಾದ ಮೂಲಕ ಹೇಳಲು ಹೊರಟಿದ್ದಾರಂತೆ ನಿರ್ದೇಶಕರು.