Tag: P. Chidambaram

  • ಆಪರೇಷನ್‌ ಬ್ಲೂ ಸ್ಟಾರ್‌ ತಪ್ಪು, ಅದಕ್ಕೆ ಇಂದಿರಾ ಗಾಂಧಿ ಪ್ರಾಣವನ್ನೇ ಪಣಕ್ಕಿಟ್ಟರು: ಪಿ.ಚಿದಂಬರಂ

    ಆಪರೇಷನ್‌ ಬ್ಲೂ ಸ್ಟಾರ್‌ ತಪ್ಪು, ಅದಕ್ಕೆ ಇಂದಿರಾ ಗಾಂಧಿ ಪ್ರಾಣವನ್ನೇ ಪಣಕ್ಕಿಟ್ಟರು: ಪಿ.ಚಿದಂಬರಂ

    ನವದೆಹಲಿ: ಆಪರೇಷನ್‌ ಬ್ಲೂ ಸ್ಟಾರ್‌ (Operation Blue Star) ತಪ್ಪು. ಅದಕ್ಕೆ ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಅವರು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟರು ಎಂದು ಕಾಂಗ್ರೆಸ್‌ ಹಿರಿಯ ನಾಯಕ, ಮಾಜಿ ಗೃಹ ಸಚಿವ ಪಿ.ಚಿದಂಬರಂ (P.Chidambaram) ಅಭಿಪ್ರಾಯಪಟ್ಟಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಇಲ್ಲಿ ಯಾವುದೇ ಮಿಲಿಟರಿ ಅಧಿಕಾರಿಗಳಿಗೆ ಅಗೌರವವಿಲ್ಲ. ಆದರೆ, ಅದು (ಬ್ಲೂ ಸ್ಟಾರ್) ಗೋಲ್ಡನ್ ಟೆಂಪಲ್ ಅನ್ನು ಹಿಂಪಡೆಯಲು ತಪ್ಪು ಮಾರ್ಗವಾಗಿತ್ತು. ಕೆಲವು ವರ್ಷಗಳ ನಂತರ, ಸೈನ್ಯವನ್ನು ಹೊರಗಿಡುವ ಮೂಲಕ ಗೋಲ್ಡನ್ ಟೆಂಪಲ್ ಅನ್ನು ಹಿಂಪಡೆಯಲು ಸರಿಯಾದ ಮಾರ್ಗವನ್ನು ನಾವು ಪ್ರದರ್ಶಿಸಿದ್ದೇವೆ. ಬ್ಲೂ ಸ್ಟಾರ್ ತಪ್ಪು ಮಾರ್ಗವಾಗಿತ್ತು. ಆ ತಪ್ಪಿಗೆ ಇಂದಿರಾ ಗಾಂಧಿಯವರು ತಮ್ಮ ಪ್ರಾಣವನ್ನೇ ತೆತ್ತರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಧಾನಿ ಭೇಟಿಯಾದ ಸೆರ್ಗಿಯೊ ಗೋರ್ – ಟ್ರಂಪ್ ಮೋದಿಯನ್ನ ಗ್ರೇಟ್‌ ಫ್ರೆಂಡ್‌ ಅಂತ ಪರಿಗಣಿಸ್ತಾರೆ: ಯುಎಸ್‌ ರಾಯಭಾರಿ

    ಅಮೃತಸರದ ಗೋಲ್ಡನ್ ಟೆಂಪಲ್ ಸಂಕೀರ್ಣದಿಂದ ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ನೇತೃತ್ವದ ಉಗ್ರಗಾಮಿಗಳನ್ನು ಹೊಡೆದುರುಳಿಸಲು ಇಂದಿರಾ ಗಾಂಧಿಯವರು 1984 ರ ಜೂನ್‌ನಲ್ಲಿ ಆಪರೇಷನ್ ಬ್ಲೂ ಸ್ಟಾರ್ ನಡೆಸಿದ್ದರು.

    ಈ ಕಾರ್ಯಾಚರಣೆಯಿಂದ ಭಾರೀ ಸಾವು-ನೋವುಗಳು ಸಂಭವಿಸಿದವು. ಇದು ಸಿಖ್‌ರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ಕೆಲವೇ ತಿಂಗಳುಗಳ ನಂತರ, ಪ್ರತೀಕಾರವಾಗಿ ಗಾಂಧಿಯನ್ನು ಅವರ ಸಿಖ್ ಅಂಗರಕ್ಷಕರು ಹತ್ಯೆ ಮಾಡಿದರು. ಇದು ದೇಶಾದ್ಯಂತ ಭೀಕರ ಸಿಖ್ ವಿರೋಧಿ ಗಲಭೆಗಳಿಗೆ ಕಾರಣವಾಯಿತು. ಇದನ್ನೂ ಓದಿ: ತಾಲಿಬಾನ್ ಸಚಿವನ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿಷೇಧ – ನಮ್ಮ ಪಾತ್ರ ಇಲ್ಲ ಅಂತ ಕೇಂದ್ರ ಸ್ಪಷ್ಟನೆ

    ಇಂದಿರಾ ಗಾಂಧಿಯವರ ಅಂಗರಕ್ಷಕರಾಗಿದ್ದ ಬಿಯಾಂತ್ ಸಿಂಗ್ ಮತ್ತು ಸತ್ವಂತ್ ಸಿಂಗ್, 1984ರ ಅಕ್ಟೋಬರ್ 31 ರಂದು ನಿವಾಸದಲ್ಲಿ ಇಂದಿರಾ ಗಾಂಧಿಯನ್ನು ಹತ್ಯೆ ಮಾಡಿದರು.

  • ಕಾಂಗ್ರೆಸ್‌ ದೌರ್ಬಲ್ಯಗಳೇ ಉಗ್ರರನ್ನ ಬಲಪಡಿಸಿತು, ಇಂದಿನ ಭಾರತ ಶತ್ರುಗಳ ಮನೆಗಳಿಗೇ ನುಗ್ಗಿ ಹೊಡೆಯುತ್ತೆ: ಮೋದಿ

    ಕಾಂಗ್ರೆಸ್‌ ದೌರ್ಬಲ್ಯಗಳೇ ಉಗ್ರರನ್ನ ಬಲಪಡಿಸಿತು, ಇಂದಿನ ಭಾರತ ಶತ್ರುಗಳ ಮನೆಗಳಿಗೇ ನುಗ್ಗಿ ಹೊಡೆಯುತ್ತೆ: ಮೋದಿ

    – 2008ರ ಮುಂಬೈ ದಾಳಿ ಉಲ್ಲೇಖಿಸಿ ಕಾಂಗ್ರೆಸ್‌ ವಿರುದ್ಧ ಕಿಡಿ
    – ಯಾವ ರಾಷ್ಟ್ರ ಕಾಂಗ್ರೆಸ್‌ ಮೇಲೆ ಒತ್ತಡ ಹೇರಿತ್ತು ಅನ್ನೋದನ್ನ ಬಹಿರಂಗಪಡಿಸಲಿ

    ಮುಂಬೈ: ಕಾಂಗ್ರೆಸ್‌ ಪಕ್ಷವು ಉಗ್ರರ ಬಗ್ಗೆ ಮೃದು ಧೋರಣೆ ಹೊಂದಿದೆ. ಕಾಂಗ್ರೆಸ್‌ನ (Congress) ದೌರ್ಬಲ್ಯಗಳೇ ಉಗ್ರರನ್ನ ಬಲಪಡಿಸಿತು. ಆದ್ರೆ ಇಂದಿನ ಭಾರತ ಶತ್ರುಗಳ ಮನೆಗಳಿಗೇ ನುಗ್ಗಿ ಹೊಡೆಯುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಗುಡುಗಿದರು.

    ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹಂತ-1 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ, 26/11 ದಾಳಿ (2008 Mumbai Attack) ವೇಳೆ ಜಾಗತಿಕ ಒತ್ತಡವಿತ್ತು ಎಂದಿದ್ದ ಪಿ.ಚಿದಂಬರಂ ಹೇಳಿಕೆಗೆ ತಿರುಗೇಟು ಕೊಟ್ಟರು. ಅಲ್ಲದೇ ತಮ್ಮ ಮೇಲೆ ಒತ್ತಡ ಹಾಕಿದ್ದ ದೇಶ ಯಾವುದು ಎಂದು ಕಾಂಗ್ರೆಸ್ ಬಹಿರಂಗಪಡಿಸಲಿ ಎಂದು ಬಹಿರಂಗವಾಗಿಯೇ ಸವಾಲೆಸೆದರು.

    2008ರ ಮುಂಬೈ ಭಯೋತ್ಪಾದಕ ದಾಳಿಯ (Terrorist Attack) ಬಳಿಕ ಕಾಂಗ್ರೆಸ್‌ ಪಕ್ಷ ತನ್ನ ದೌರ್ಬಲ್ಯವನ್ನು ತೋರಿಸಿತು. ಅಂದಿನ ರಾಜಕೀಯ ನಿರ್ಧಾರಗಳೂ ಸಹ ಬೇರೆ ದೇಶದ ಒತ್ತಡದಿಂದ ಪ್ರಭಾವಿತವಾಗಿತ್ತು ಎಂದು ಮೋದಿ ವಾಗ್ದಾಳಿ ನಡೆಸಿದರು.

    ಮುಂಬೈ (Mumbai) ಭಾರತದ ಆರ್ಥಿಕ ರಾಜಧಾನಿ ಮಾತ್ರವಲ್ಲ, ಅತ್ಯಂತ ಕ್ರಿಯಾಶೀಲ ನಗರಗಳಲ್ಲಿ ಒಂದಾಗಿದೆ. ಅದಕ್ಕಾಗಿಯೇ 2008ರಲ್ಲಿ ಉಗ್ರರು ಮುಂಬೈ ಅನ್ನು ಗುರಿಯಾಗಿಸಿಕೊಂಡರು. ಆದ್ರೆ ಅಂದಿನ ಕಾಂಗ್ರೆಸ್‌ ತನ್ನ ದೌರ್ಬಲ್ಯವನ್ನ ತೋರಿಸಿತು ಎಂದು ಕಿಡಿ ಕಾರಿದರು.

    ಯಾವ ದೇಶ ಅಂತಹ ಒತ್ತಡ ಹೇರಿತ್ತು?
    ಮುಂದುವರಿದು… ಮಾಜಿ ಗೃಹಸಚಿವ ಪಿ.ಚಿದಂಬರಂ ಅವರು ಸಂದರ್ಶನದಲ್ಲಿ ನೀಡಿದ್ದ ಹೇಳಿಕೆ ಉಲ್ಲೇಖಿಸಿದ ಪ್ರಧಾನಿ ಮೋದಿ, ಇತ್ತೀಚೆಗೆ ಕಾಂಗ್ರೆಸ್‌ ನಾಯಕರೊಬ್ಬರು ಮುಂಬೈ ದಾಳಿಯ ಬಳಿಕ ನಮ್ಮ ಭದ್ರತಾ ಪಡೆಗಳು ಪಾಕಿಸ್ತಾನದ ಮೇಲೆ ದಾಳಿ ಮಾಡಲು ಸಜ್ಜಾಗಿದ್ದವು. ಆದ್ರೆ ಬೇರೆ ದೇಶದ ಒತ್ತಡದಿಂದಾಗಿ ಭದ್ರತಾ ಪಡೆಗಳನ್ನು ನಿಲ್ಲಿಸಿತು ಎಂದು ಬಹಿರಂಗಪಡಿಸಿದ್ದಾರೆ. ಹಾಗಿದ್ದಲ್ಲಿ, ಯಾವ ರಾಷ್ಟ್ರ ಅಂತಹ ಒತ್ತಡ ಹೇರಿದೆ ಎಂಬುದನ್ನು ಬಹಿರಂಗಪಡಿಸಲಿ ಎಂದು ಸವಾಲೆಸೆದರು.

    ಕಾಂಗ್ರೆಸ್‌ನ ತಪ್ಪಿಗೆ ಜೀವಗಳು ಬಲಿಯಾಗಿವೆ
    ಯಾವ ರಾಷ್ಟ್ರ ಒತ್ತಡ ಹೇರಿತು ಅನ್ನೋದನ್ನ ಬಹಿರಂಗಪಡಿಸಬೇಕು. ಏಕೆಂದ್ರೆ ಆ ನಿರ್ಧಾರದಿಂದಾಗಿಯೇ ಭಾರತ ಸಾಕಷ್ಟು ತೊಂದರೆ ಅನುಭವಿಸಬೇಕಾಯ್ತು. ಕಾಂಗ್ರೆಸ್‌ನ ದೌರ್ಬಲ್ಯಗಳು ಉಗ್ರರನ್ನ ಬಲಪಡಿಸಿತು. ಕಾಂಗ್ರೆಸ್‌ ಮಾಡಿದ ಈ ತಪ್ಪಿದೆ ಈ ದೇಶ ಪದೇ ಪದೇ ಜೀವಗಳನ್ನು ಬಲಿ ಕೊಡುವ ಮೂಲಕ ಬೆಲೆ ತೆರಬೇಕಾಯ್ತು. ಆದ್ರೆ ನಮಗೆ ರಾಷ್ಟ್ರೀಯ ಭದ್ರತೆ, ನಮ್ಮ ನಾಗರಿಕರ ಸುರಕ್ಷತೆಗಿಂತ ಬೇರಾವುದೂ ಮುಖ್ಯವಲ್ಲ ಎಂದು ಹೇಳಿದರು.

    chidambaram

    ಇಂದಿನ ಭಾರತ ಬಲಿಷ್ಠ ಭಾರತ, ಶತ್ರುಗಳನ್ನ ಅವರ ಮನೆಗಳಿಗೇ ನುಗ್ಗಿ ಹೊಡೆದುರುಳಿಸುತ್ತೆ. ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ನಡೆಸಿದ ಆಪರೇಷನ್‌ ಸಿಂಧೂರವೇ ಇದಕ್ಕೆ ಸ್ಪಷ್ಟ ನಿದರ್ಶನ. ಆಪರೇಷನ್ ಸಿಂಧೂರ ನಂತರ ಇಡೀ ಜಗತ್ತು ಭಾರತದ ಶಕ್ತಿಯನ್ನು ಮೆಚ್ಚಿಕೊಂಡಿದೆ ಎಂದು ಶ್ಲಾಘಿಸಿದರು.

  • ಮುಂಬೈ ಉಗ್ರರ ವಿರುದ್ಧ ಆಪರೇಷನ್‌ಗೆ ಯುಪಿಎ ಅಡ್ಡಿ – ಚಿದಂಬರಂ ಹೇಳಿಕೆ, ಸೋನಿಯ ವಿರುದ್ಧ ಬಿಜೆಪಿ ಕೆಂಡ

    ಮುಂಬೈ ಉಗ್ರರ ವಿರುದ್ಧ ಆಪರೇಷನ್‌ಗೆ ಯುಪಿಎ ಅಡ್ಡಿ – ಚಿದಂಬರಂ ಹೇಳಿಕೆ, ಸೋನಿಯ ವಿರುದ್ಧ ಬಿಜೆಪಿ ಕೆಂಡ

    ಮುಂಬೈ: 2008ರ ಮುಂಬೈನ ತಾಜ್‌ ಹೋಟೆಲ್ (2008 Mumbai Attacks) ಮೇಲೆ ನಡೆದ ಭಯೋತ್ಪಾದನಾ ದಾಳಿಗೆ ಸಂಬಧಿಸಿದಂತೆ ಮಾಜಿ ಕೇಂದ್ರ ಗೃಹ ಸಚಿವ ಪಿ. ಚಿದಂಬರಂ (P Chidambaram) ರಹಸ್ಯವೊಂದನ್ನು ಬಟ್ಟಬಯಲು ಮಾಡಿದ್ದು ಸಂಚಲನ ಮೂಡಿಸಿದೆ.

    166 ಜನರ ಹತ್ಯೆ ನಂತರ ಪಾಕಿಸ್ತಾನದಲ್ಲಿ (Pakistan) ಲಷ್ಕರ್ -ಇ-ತೋಯ್ಬಾ ಉಗ್ರರ ವಿರುದ್ಧ ಮಿಲಿಟರಿ ಕಾರ್ಯಾಚರಣೆ ನಡೆಸಲು ನಾನು ಮುಂದಾಗಿದ್ದೆ. ಆದರೆ ಅದಕ್ಕೆ ಯುಪಿಎ ಸರ್ಕಾರ ಅಡ್ಡಗಾಲು ಹಾಕಿತ್ತು ಅಂತ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

    ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಿರೋಧ ಹಾಗೂ ಅಮೆರಿಕದ (USA) ಒತ್ತಡದಿಂದ ಅಂದಿನ ಯುಪಿಎ ಸರ್ಕಾರ (UPA Government) ರಾಜತಾಂತ್ರಿಕ ಮಾರ್ಗವನ್ನು ಆಯ್ಕೆ ಮಾಡಿಕೊಂಡಿತು ಎಂಬ ಸ್ಫೋಟಕ ವಿಚಾರವನ್ನ ಹೊರಹಾಕಿದ್ದಾರೆ. ಇದನ್ನೂ ಓದಿ:  ಪಾಕಿಸ್ತಾನದಲ್ಲಿ ಬಾಂಬ್‌ ದಾಳಿ – ಕನಿಷ್ಠ 10 ಜನ ಸಾವು

    ಚಿದಂಬರಂ ಹೇಳಿಕೆ ಹೊರಬೀಳುತ್ತಿದ್ದಂತೆಯೇ ಬಿಜೆಪಿ ಕೆಂಡಕಾರಿದ್ದು, ಅಂದಿನ ಯುಪಿಎ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣದ ಪೋಸ್ಟ್ ಮಾಡಿರುವ ಬಿಜೆಪಿ ನಾಯಕ ಶೆಹಜಾದ್ ಪೂನಾವಾಲಾ, ಪಾಕಿಸ್ತಾನ ವಿರುದ್ಧ ಪ್ರತೀಕಾರಕ್ಕೆ ಮುಂದಾಗಿದ್ದ ಚಿದಂಬರಂ ಅವರನ್ನು ಸೋನಿಯಾ ಗಾಂಧಿ ಅಥವಾ ಮನಮೋಹನ್ ಸಿಂಗ್ ಅವರು ತಡೆದರೇ ಎಂದು ಪ್ರಶ್ನಿಸಿದ್ದಾರೆ.

    ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿ ಮುಂಬೈ ದಾಳಿಯನ್ನು ವಿದೇಶಿ ಶಕ್ತಿಗಳ ಒತ್ತಡದಿಂದಾಗಿ ದುರುಪಯೋಗಪಡಿಸಿಕೊಳ್ಳಲಾಗಿದೆ ಅಂತ ಮಾಜಿ ಗೃಹ ಸಚಿವರು ಒಪ್ಪಿಕೊಂಡಿದ್ದಾರೆ ಎಂದು ಪೋಸ್ಟ್ ಮಾಡಿದ್ದಾರೆ.

  • ಮೋದಿ ಸರ್ಕಾರ ಮೀಸಲಾತಿ ಕಿತ್ತುಕೊಳ್ಳಲು ಹಿಂಜರಿಯುವುದಿಲ್ಲ: ಪಿ.ಚಿದಂಬರಂ

    ಮೋದಿ ಸರ್ಕಾರ ಮೀಸಲಾತಿ ಕಿತ್ತುಕೊಳ್ಳಲು ಹಿಂಜರಿಯುವುದಿಲ್ಲ: ಪಿ.ಚಿದಂಬರಂ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಬಿಜೆಪಿ (BJP) ಸರ್ಕಾರ ಮೀಸಲಾತಿಯನ್ನು ಕಿತ್ತುಕೊಳ್ಳಲು ಹಿಂಜರಿಯುವುದಿಲ್ಲ. ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (EWS) 10 ಪ್ರತಿಶತ ಮೀಸಲಾತಿ ಒದಗಿಸುವ 103ನೇ ತಿದ್ದುಪಡಿಯು ಮೀಸಲಾತಿಯನ್ನು ದುರ್ಬಲಗೊಳಿಸುವ ಪ್ರಯತ್ನದ ಭಾಗವಾಗಿದೆ ಎಂದು ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಹೇಳಿದ್ದಾರೆ.

    ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ (Congress) ಉದ್ದೇಶಪೂರ್ವಕವಾಗಿ ಸಂವಿಧಾನ ಅಪಾಯದಲ್ಲಿದೆ. ಲೋಕಸಭೆ ಚುನಾವಣೆಯ ನಂತರ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ತೆಗೆದುಹಾಕುತ್ತದೆ ಎಂಬ ಅಪಪ್ರಚಾರವನ್ನು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಮಾಡಿದೆಯೇ ಎಂದು ಖಾಸಗಿ ಸಂದರ್ಶನದಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು: ಕಾಂಗ್ರೆಸ್ ನಾಯಕ ಕೆ.ಬಿ.ಕೋಳಿವಾಡ

    ಬಿಜೆಪಿ ಸಂವಿಧಾನವನ್ನು ತಿದ್ದುಪಡಿ ಮಾಡುತ್ತದೆ. ಅವರು ತಯಾರಿ ನಡೆಸುತ್ತಿದ್ದರೂ, ಈಗ ಸಾರ್ವತ್ರಿಕ ಚುನಾವಣೆಯಲ್ಲಿ ಬಹುಮತ ಸಿಗದಿದ್ದರೂ ಬಿಜೆಪಿ ಸಂವಿಧಾನ ತಿದ್ದುಪಡಿಗೆ ಮುಂದಾಗಿದೆ ಎಂದು ಹೇಳಿದರು. ಇನ್ನು ಇಡಬ್ಲ್ಯುಎಸ್ ಬಗ್ಗೆ ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಪ್ರಸ್ತಾಪಿಸಿ, ಸುಪ್ರೀಂ ಕೋರ್ಟ್ 3:2 ಆದೇಶ ನೀಡಿದೆ. ಭಿನ್ನ ಆದೇಶ ನೀಡಿದ ಆದೇಶಗಳನ್ನು ನೀವು ಓದಿದ್ದೀರಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ತಮಿಳುನಾಡು ಮಾಜಿ ಸಚಿವ ಸೆಂಥಿಲ್ ಬಾಲಾಜಿಗೆ ಸುಪ್ರೀಂ ಜಾಮೀನು

    ಚುನಾವಣೆ ವೇಳೆ ಪ್ರತಿಪಕ್ಷ ನಾಯಕರ ವಿರುದ್ಧ ಹಲವಾರು ಪ್ರಕರಣಗಳು ದಾಖಲಾಗಿವೆ. ನಮ್ಮ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲಾಯಿತು. ನೀವು ದೇಶದ ವಿರೋಧ ಪಕ್ಷಗಳ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವುದನ್ನು ಒಪ್ಪಿಕೊಳ್ಳಬಹುದೇ? ನೀವು ಅದನ್ನು ಮುಕ್ತ ಮತ್ತು ನ್ಯಾಯಯುತ ಎಂದು ಕರೆಯುತ್ತೀರಾ? ಎಂದು ಕೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯನವ್ರೆ ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ: ಜಗ್ಗೇಶ್

  • Article 370 Verdict: ಸುಪ್ರೀಂ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ: ಪಿ ಚಿದಂಬರಂ

    Article 370 Verdict: ಸುಪ್ರೀಂ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ: ಪಿ ಚಿದಂಬರಂ

    ನವದೆಹಲಿ: ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು (Jammu and Kashmir Special Status) ರದ್ದು ಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರ ಸರಿ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್‌ (Supreme Court) ಐತಿಹಾಸಿಕ ತೀರ್ಪು ನೀಡಿದ್ದು, ಈ ಆದೇಶವನ್ನು ಗೌರವಯುತವಾಗಿ ಒಪ್ಪುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿದ್ದಾರೆ.

    ಆರ್ಟಿಕಲ್‌ 370 ರದ್ದತಿ ಆದೇಶದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಕಟ್ಟುನಿಟ್ಟಾಗಿ ತಿದ್ದುಪಡಿ ಮಾಡುವವರೆಗೆ 370 ಗೌರವಕ್ಕೆ ಅರ್ಹವಾಗಿದೆ. ರಾಜ್ಯವನ್ನು ವಿಭಜಿಸುವ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಅದರ ಸ್ಥಾನಮಾನವನ್ನು ಕಡಿಮೆ ಮಾಡುವ ಪ್ರಶ್ನೆಯನ್ನು ಗೌರವಾನ್ವಿತ ಸುಪ್ರೀಂ ಕೋರ್ಟ್ ನಿರ್ಧರಿಸದಿರುವುದು ನಮಗೆ ನಿರಾಶೆಯಾಗಿದೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ (Congress) ಯಾವಾಗಲೂ ಜಮ್ಮು-ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾಗಿ ಮಾರ್ಪಟ್ಟಿರುವ ಸಂಪೂರ್ಣ ರಾಜ್ಯತ್ವವನ್ನು ಮರುಸ್ಥಾಪಿಸಲು ಒತ್ತಾಯಿಸುತ್ತದೆ. ಈ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಕೂಡಲೇ ಸಂಪೂರ್ಣ ರಾಜ್ಯ ಸ್ಥಾನಮಾನ ಮರುಸ್ಥಾಪಿಸಬೇಕು, ಲಡಾಖ್ ಜನರ ಆಶೋತ್ತರಗಳನ್ನೂ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Article 370 Verdict – ಇಂದಿನ ತೀರ್ಪು ಕೇವಲ ತೀರ್ಪಲ್ಲ, ಭರವಸೆಯ ದಾರಿದೀಪ: ಮೋದಿ ಸಂತಸ

    ವಿಧಾನಸಭೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ನಾವು ಸ್ವಾಗತಿಸುತ್ತೇವೆ. ಅದಾಗ್ಯೂ, ಚುನಾವಣೆಗಳನ್ನು ತಕ್ಷಣವೇ ನಡೆಸಬೇಕು, ಒಂದು ವರ್ಷ ಕಾಯಲು ನಿಖರ ಕಾರಣಗಳಿಲ್ಲ ಎಂದು ಚಿದಂಬರಂ (P Chidambaram) ಹೇಳಿದ್ದಾರೆ.

    2019ರ ಆಗಸ್ಟ್‌ 6 ರಂದು ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ಲಡಾಖ್, ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ಹಲವು ಮಂದಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠ ಸರ್ವಾನುಮತದ ತೀರ್ಪು ಪ್ರಕಟಿಸಿ ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದಿದೆ.

  • ಮಹಾರಾಷ್ಟ್ರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಿ.ಚಿದಂಬರಂ

    ಮಹಾರಾಷ್ಟ್ರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಿ.ಚಿದಂಬರಂ

    ನವದೆಹಲಿ: ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮಹಾರಾಷ್ಟ್ರ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಚಿದಂಬರಂ ತವರು ರಾಜ್ಯವಾದ ತಮಿಳುನಾಡಿನಿಂದ ಮೇಲ್ಮನೆಗೆ ಹೊಸ ಅವಧಿಗೆ ಆಯ್ಕೆಯಾದ ನಂತರ ಮಹಾರಾಷ್ಟ್ರದಿಂದ ಆಯ್ಕೆಯಾಗಿದ್ದ ರಾಜ್ಯಸಭಾ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಕೆಲದಿನಗಳ ಹಿಂದೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಚಿದಂಬರಂ ತಮಿಳುನಾಡಿನಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: ಪ್ರತಿಭಟನೆ ವೇಳೆ ತಳ್ಳಿದ ಪೊಲೀಸರು – ಮೂಳೆ ಮುರಿತಕ್ಕೊಳಗಾದ ಪಿ.ಚಿದಂಬರಂ

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತಮಿಳುನಾಡಿನಿಂದ ರಾಜ್ಯಸಭೆಗೆ ನಾನು ಆಯ್ಕೆಯಾದ ಬಳಿಕ ಇದೀಗ ಮಹಾರಾಷ್ಟ್ರದಿಂದ ಆಯ್ಕೆಯಾಗಿದ್ದ ನನ್ನ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ. ಹಾಗಾಗಿ ಇಂದು ನಾನು ಮಹಾರಾಷ್ಟ್ರದ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ರಾಜ್ಯಸಭೆಯ ಗೌರವಾನ್ವಿತ ಅಧ್ಯಕ್ಷರು ನನ್ನ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಮಹಾರಾಷ್ಟ್ರ ರಾಜ್ಯವನ್ನು ಪ್ರತಿನಿಧಿಸಿದ್ದು ನನ್ನ ಭಾಗ್ಯ. ಮಹಾರಾಷ್ಟ್ರದ ಜನ ಶಾಂತಿ ಮತ್ತು ಸಮೃದ್ಧಿಯನ್ನು ಹೊಂದಲಿ ಎಂದು ಬಯಸುತ್ತೇನೆ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು – 22 ರೈಲುಗಳ ಸಂಚಾರ ರದ್ದು

    Live Tv

  • ಪ್ರತಿಭಟನೆ ವೇಳೆ ತಳ್ಳಿದ ಪೊಲೀಸರು – ಮೂಳೆ ಮುರಿತಕ್ಕೊಳಗಾದ ಪಿ.ಚಿದಂಬರಂ

    ಪ್ರತಿಭಟನೆ ವೇಳೆ ತಳ್ಳಿದ ಪೊಲೀಸರು – ಮೂಳೆ ಮುರಿತಕ್ಕೊಳಗಾದ ಪಿ.ಚಿದಂಬರಂ

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಇ.ಡಿ ವಿಚಾರಣೆ ಒಳಪಡಿಸಿದ್ದನ್ನು ವಿರೋಧಿಸಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆ ವೇಳೆ ಪೊಲೀಸರು ಕಾಂಗ್ರೆಸ್ ನಾಯಕ ಪಿ.ಚಿದಂಬರಂರನ್ನು ತಳ್ಳಿದ ವೇಳೆ‌ ಎಡ ಪಕ್ಕೆಲುಬು ಮುರಿತಕ್ಕೊಳಗಾಗಿದ್ದಾರೆ ಎಂದು ಪಕ್ಷದ ವಕ್ತಾರ ರಣ್‍ದೀಪ್ ಸುರ್ಜೇವಾಲಾ ದೂರಿದ್ದಾರೆ.

    ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಇ.ಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದರು. ಎಐಸಿಸಿ ಕಚೇರಿಯಿಂದ ಇ.ಡಿ ಕಚೇರಿವರೆಗೂ ಪಾದಯಾತ್ರೆ ಮೂಲಕ ರಾಹುಲ್ ಗಾಂಧಿ ಇ.ಡಿ ಕಚೇರಿಗೆ ಆಗಮಿಸಿದರು. ಈ ವೇಳೆ ಪ್ರಿಯಾಂಕಾ ವಾದ್ರಾ, ಕೆ.ಸಿ ವೇಣುಗೋಪಾಲ್, ಅಶೋಕ್ ಗೆಹ್ಲೋಟ್, ಪಿ.ಚಿದಂಬಂರಂ, ಸುರ್ಜೇವಾಲಾ, ಡಿ.ಕೆ ಸುರೇಶ್ ಅವರಿಗೆ ಸಾಥ್ ನೀಡಿದರು. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದರು. ನಂತರ ಕೆ.ಸಿ ವೇಣುಗೋಲಾಲ್, ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಇ.ಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಕಾಂಗ್ರೆಸ್ ಮುಖಂಡರ ನಡುವೆ ವಾಗ್ಯುದ್ಧ, ನೂಕಾಟ ತಳ್ಳಾಟ ನಡೆಯಿತು. ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ರಾಹುಲ್ ಗಾಂಧಿಗೆ ಸಂಕಷ್ಟ – ಇಂದು 2 ಹಂತಗಳಲ್ಲಿ ಇ.ಡಿ ಡ್ರಿಲ್

    ಈ ವೇಳೆ ಇಡಿ ಕಚೇರಿ ಬಳಿ ಬಂದಿದ್ದ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಡಿ.ಕೆ.ಸುರೇಶ್ ಮತ್ತಿತರನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಈ ವೇಳೆ ಪೊಲೀಸರು ವೇಣುಗೋಪಾಲ್ ಅವರ ಅಂಗಿಯನ್ನು ಹರಿದಿದ್ದು, ಅವರು ಅಸ್ವಸ್ಥರಾದ ಪ್ರಸಂಗವೂ ನಡೆದಿತ್ತು. ಇದನ್ನೂ ಓದಿ: ಪೊಲೀಸರನ್ನು ನೋಡುತ್ತಲೇ ಎದ್ನೋ ಬಿದ್ನೋ ಓಟಕ್ಕಿತ್ತ ಶ್ರೀನಿವಾಸ್ ಬಿವಿ

  • ವೀಸಾ ಹಗರಣ – ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

    ವೀಸಾ ಹಗರಣ – ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

    ನವದೆಹಲಿ: ವೀಸಾ ನೀಡಿಕೆ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ  ಚಿದಂಬರಂ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದೆಹಲಿಯ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

    ಪಿ. ಚಿದಂಬರಂ ಕೇಂದ್ರ ಗೃಹ ಮಂತ್ರಿಯಾಗಿದ್ದಾಗ 2011ರಲ್ಲಿ 263 ಚೀನಾ ಪ್ರಜೆಗಳಿಗೆ ವೀಸಾ ನೀಡಿದ ಆರೋಪದಲ್ಲಿ ಕಾರ್ತಿ ಚಿದಂಬರಂ ಮತ್ತು ಸಿಎ ಎಸ್.ಭಾಸ್ಕರ್ ರಾಮನ್ ಸೇರಿದಂತೆ ಮತ್ತಿತರ ವಿರುದ್ಧ ಜಾರಿ ನಿರ್ದೇಶನಾಲಯ ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿತ್ತು. ಆ ಬಳಿಕ ಮೇ 30 ರಂದು ಕಾರ್ತಿ ಚಿದಂಬರಂ ನಿರೀಕ್ಷಣಾ ಜಾಮೀನು ಆದೇಶವನ್ನು ದೆಹಲಿಯ ವಿಶೇಷ ನ್ಯಾಯಾಲಯ ಕಾಯ್ದಿರಿಸಿತ್ತು. ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಬಿಜೆಪಿ ಆಗ್ರಹ

    ಈ ಅರ್ಜಿಯನ್ನು ವಿಚಾರಣೆಗೆ ಒಳಪಡಿಸಿದ ವಿಶೇಷ ನ್ಯಾಯಾಧೀಶ ಎಂ.ಕೆ ನಾಗಪಾಲ್, ಈ ಅರ್ಜಿಯನ್ನು ಪರಿಗಣಿಸಲು ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಕಾರ್ತಿಗೆ ಜಾಮೀನು ಮಂಜೂರು ಮಾಡಲು ನಿರಾಕರಿಸಿದರು. ಇದನ್ನೂ ಓದಿ: ಉಡುಪಿಯ ಯುಪಿಸಿಎಲ್‍ಗೆ ಹಸಿರುಪೀಠ ಚಾಟಿ – ಅವಾಂತರಕ್ಕೆ 52 ಕೋಟಿ ರೂ. ದಂಡ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಎಫ್‍ಐಆರ್‌ನ್ನು ಪರಿಗಣಿಸಿದ ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಕಾರ್ತಿ ನಂ.1 ಆರೋಪಿ ಎಂದು ಪ್ರಕರಣ ದಾಖಲಿಸಿಕೊಂಡಿದೆ.

  • ನನ್ನ ಹೆಸರಿನಲ್ಲಿ ಎಫ್‌ಐಆರ್ ಇಲ್ಲದಿದ್ದರೂ ಸಿಬಿಐ ದಾಳಿ ನಡೆಸಿದೆ: ಪಿ. ಚಿದಂಬರಂ

    ನನ್ನ ಹೆಸರಿನಲ್ಲಿ ಎಫ್‌ಐಆರ್ ಇಲ್ಲದಿದ್ದರೂ ಸಿಬಿಐ ದಾಳಿ ನಡೆಸಿದೆ: ಪಿ. ಚಿದಂಬರಂ

    ಚೆನ್ನೈ: ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ದೆಹಲಿ ಹಾಗೂ ಚೆನ್ನೈನಲ್ಲಿರುವ ಮನೆಗಳಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ಮಂಗಳವಾರ ಬೆಳ್ಳಂಬೆಳಗ್ಗೆ ಶೋಧ ಕಾರ್ಯ ನಡೆಸಿದೆ. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಪಿ. ಚಿದಂಬರಂ, ನನ್ನ ಹೆಸರಿನಲ್ಲಿ ಎಫ್‌ಐಆರ್ ದಾಖಲಾಗಿಲ್ಲ. ಆದರೂ ಸಿಬಿಐ ದಾಳಿ ನಡೆಸಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾರ್ತಿ ಚಿದಂಬರಂಗೆ ಬೆಳ್ಳಂಬೆಳಗ್ಗೆ ಶಾಕ್ – ಮನೆ ಸೇರಿ 7 ಕಡೆ ಸಿಬಿಐ ದಾಳಿ

    ಮಂಗಳವಾರ ಬೆಳಗ್ಗೆ ಸಿಬಿಐ ತಂಡ ಚೆನ್ನೈನಲ್ಲಿರುವ ನನ್ನ ನಿವಾಸ ಹಾಗೂ ದೆಹಲಿಯಲ್ಲಿರುವ ನನ್ನ ಅಧಿಕೃತ ನಿವಾಸವನ್ನು ಶೋಧಿಸಿವೆ. ಸಿಬಿಐ ತಂಡ ನನಗೆ ಎಫ್‌ಐಆರ್ ತೋರಿಸಿದೆ. ಆದರೆ ಅದರಲ್ಲಿ ನನ್ನ ಹೆಸರಿನಲ್ಲಿ ಯಾವುದೇ ಆರೋಪಗಳಿಲ್ಲ. ಶೋಧ ತಂಡಕ್ಕೆ ದಾಳಿಯಲ್ಲಿ ಯಾವುದೇ ವಸ್ತುಗಳು ಸಿಕ್ಕಿಲ್ಲ. ಅವರ ದಾಳಿ ಕುತೂಹಲ ಮೂಡಿಸಿತ್ತು ಎಂದು ಪಿ. ಚಿದಂಬರಂ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಫ್ಯಾಟ್ ಸರ್ಜರಿಗೆ 1 ಲಕ್ಷ 60 ಸಾವಿರ ಕೊಟ್ಟಿದ್ದರಂತೆ ಚೇತನಾ ರಾಜ್ : ಕುಟುಂಬ ಆರೋಪ

    2010-14 ಅವಧಿಯಲ್ಲಿ ವಿದೇಶೀ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಕಾರ್ತಿ ಚಿದಂಬರಂ ವಿರುದ್ಧ ಹೊಸ ಪ್ರಕರಣ ದಾಖಲಿಸಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೆಹಲಿ, ಮುಂಬೈ ಹಾಗೂ ತಮಿಳುನಾಡಿನ 7 ಕಡೆಗಳಲ್ಲಿ ದಾಳಿ ನಡೆಸಿದೆ.

  • ಕಾರ್ತಿ ಚಿದಂಬರಂಗೆ ಬೆಳ್ಳಂಬೆಳಗ್ಗೆ ಶಾಕ್ – ಮನೆ ಸೇರಿ 7 ಕಡೆ ಸಿಬಿಐ ದಾಳಿ

    ಕಾರ್ತಿ ಚಿದಂಬರಂಗೆ ಬೆಳ್ಳಂಬೆಳಗ್ಗೆ ಶಾಕ್ – ಮನೆ ಸೇರಿ 7 ಕಡೆ ಸಿಬಿಐ ದಾಳಿ

    ಚೆನ್ನೈ: ಕಾಂಗ್ರೆಸ್ ಹಿರಿಯ ನಾಯಕ, ವಕೀಲ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಮನೆ ಹಾಗೂ ಕಚೇರಿಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ನಡೆಸಿದೆ.

    ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ, ಮುಂಬೈ, ತಮಿಳುನಾಡಿನ 7 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2010-14ರ ಅವಧಿಯಲ್ಲಿ ವಿದೇಶಿ ಹಣ ರವಾನೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಚಿದಂಬರಂ ವಿರುದ್ಧ ಹೊಸದಾಗಿ ಪ್ರಕರಣ ದಾಖಲಿಸಿದೆ. ಇದನ್ನೂ ಓದಿ:  ಕನ್ನಡಿಗ ಅನಿಲ್ ಹೆಗ್ಡೆಗೆ ಬಿಹಾರ್ ರಾಜ್ಯಸಭಾ ಟಿಕೆಟ್

    250 ಚೀನಾ ಪ್ರಜೆಗಳ ವೀಸಾಗೆ 50 ಲಕ್ಷ ರೂಪಾಯಿ ಲಂಚವನ್ನು ಪಡೆಯಲಾಗಿದೆ ಎಂದು ಆರೋಪಿಸಿ ಸಿಬಿಐ ಹೊಸ ಪ್ರಕರಣ ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ.

    ದೆಹಲಿ, ತಮಿಳುನಾಡು, ಚೆನ್ನೈ ಹಾಗೂ ಶಿವಗಂಗೈನಲ್ಲಿರುವ ಚಿದಂಬರಂ ಅವರ ಮನೆ, ಕಚೇರಿಗಳ ಮೇಲೆ ಮಂಗಳವಾರ ಸಿಬಿಐ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.  ಇದನ್ನೂ ಓದಿ: ನಟಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ – ನಟ ದಿಲೀಪ್ ಸ್ನೇಹಿತ ಅರೆಸ್ಟ್‌