Tag: Padma Awards

  • ಅಜಿತ್ ಕುಮಾರ್, ಬಾಲಯ್ಯಗೆ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ಅಜಿತ್ ಕುಮಾರ್, ಬಾಲಯ್ಯಗೆ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ಟ ಅಜಿತ್ ಕುಮಾರ್ (Ajith Kumar), ಬಾಲಯ್ಯ, ಸಿಂಗರ್ ಅರಿಜಿತ್ ಸಿಂಗ್, ಶೇಖರ್ ಕಪೂರ್ ಸೇರಿದಂತೆ ಹಲವು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು (ಏ.28) ಪದ್ಮ ಪ್ರಶಸ್ತಿ ಪ್ರದಾನ (Padma Awards 2025) ಮಾಡಿದ್ದಾರೆ. ಇದನ್ನೂ ಓದಿ:ಮಂತ್ರವಾದಿ ಗೆಟಪ್‌ನಲ್ಲಿ ಬಂದ ಸಮಂತಾ- ಏನಿದು ಹೊಸ ಅವತಾರ?

    ದೆಹಲಿ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ತಮಿಳು ನಟ ಅಜಿತ್ ಕುಮಾರ್ ಮತ್ತು ತೆಲುಗು ನಟ ಬಾಲಯ್ಯ (Balayya) ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ.

    ಪದ್ಮ ಪ್ರಶಸ್ತಿ ಪಡೆದವರ ಪಟ್ಟಿ ಇಲ್ಲಿದೆ:

    ದಿವಂಗತ ಗಾಯಕ ಪಂಕಜ್ ಉದಾಸ್- ಪದ್ಮಭೂಷಣ

    ಚಲನಚಿತ್ರ ನಿರ್ಮಾಪಕ ಶೇಖರ್ ಕಪೂರ್-ಪದ್ಮಭೂಷಣ

    ಕನ್ನಡದ ನಟ ಅನಂತ್ ನಾಗ್- ಪದ್ಮಭೂಷಣ

    ನಟ ಅಶೋಕ್ ಲಕ್ಷ್ಮಣ್ ಸರಾಫ್- ಪದ್ಮಶ್ರೀ

    ನಟನಾ ತರಬೇತುದಾರ, ರಂಗ ನಿರ್ದೇಶಕ ಬ್ಯಾರಿ ಗಾಡ್ಫ್ರೇ ಜಾನ್-ಪದ್ಮಶ್ರೀ

    ಗಾಯಕ ಜಸ್ಪಿಂದರ್ ನರುಲಾ- ಪದ್ಮಶ್ರೀ

    ಗಾಯಕಿ ಅಶ್ವಿನಿ ಭಿಡೆ-ದೇಶಪಾಂಡೆ-ಪದ್ಮಶ್ರೀ

    ಸಂಗೀತ ಸಂಯೋಜಕ ರಿಕಿ ಗ್ಯಾನ್ ಕೇಜ್-ಪದ್ಮಶ್ರೀ

    ಜಾನಪದ ಗಾಯಕ ಭೇರು ಸಿಂಗ್ ಚೌಹಾಣ್-ಪದ್ಮಶ್ರೀ

    ಭಕ್ತಿ ಗಾಯಕ ಹರ್ಜಿಂದರ್ ಸಿಂಗ್ ಶ್ರೀನಗರ ವಾಲೆ-ಪದ್ಮಶ್ರೀ

    ಜಾನಪದ ಸಂಗೀತಗಾರ ಜೋಯ್ನಾಚರಣ್ ಬಠಾರಿ-ಪದ್ಮಶ್ರೀ

    ಶಾಸ್ತ್ರೀಯ ಗಾಯಕಿ ಕೆ ಓಮನಕುಟ್ಟಿ ಅಮ್ಮ-ಪದ್ಮಶ್ರೀ

    ಗಾಯಕ ಮಹಾಬೀರ್ ನಾಯಕ್ – ಪದ್ಮಶ್ರೀ

    ಮಮತಾ ಶಂಕರ್ – ಪದ್ಮಶ್ರೀ

  • ಹಿರಿಯ ನಟಿ ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ಹಿರಿಯ ನಟಿ ವೈಜಯಂತಿಮಾಲಾ, ಚಿರಂಜೀವಿ ಸೇರಿದಂತೆ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ನವದೆಹಲಿ: ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ತೆಲುಗು ನಟ ಕೊನಿಡೆಲಾ ಚಿರಂಜೀವಿ (Chiranjeevi), ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ ಬೀವಿ (M Fathima Beevi) ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮಹತ್ತರ ಸಾಧನೆಗೈದ ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu )ಇಂದು (ಗುರುವಾರ) ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ `ಬಾಂಬೆ ಸಮಾಚಾರ್’ ಪತ್ರಿಕೆ ಮಾಲೀಕ ಹಾರ್ಮುಸ್ಜಿ ಎನ್ ಕಾಮಾ (Hormusji N Cama), ಬಿಜೆಪಿ ನಾಯಕ ಓ.ರಾಜಗೋಪಾಲ್, ಲಡಾಖ್‍ನ ಆಧ್ಯಾತ್ಮಿಕ ನಾಯಕ ತೊಗ್ಡಾನ್ ರಿಂಪೋಚೆ, ತಮಿಳು ನಟ ದಿವಂಗತ ಕ್ಯಾಪ್ಟನ್ ವಿಜಯಕಾಂತ್, ಗುಜರಾತಿ ಪತ್ರಿಕೆ `ಜನ್ಮಭೂಮಿ’ ಸಿಇಒ ಕುಂದನ್ ವ್ಯಾಸ್ ಅವರಿಗೆ ಪದ್ಮ ಪ್ರಶಸ್ತಿಗಳನ್ನು (Padma Awards) ಪ್ರದಾನ ಮಾಡಲಾಯಿತು. ಇದನ್ನೂ ಓದಿ: Padma Awards 2024: ಕರ್ನಾಟಕದ 9 ಮಂದಿ ಸೇರಿ 132 ಜನರಿಗೆ ‘ಪದ್ಮ’ ಪ್ರಶಸ್ತಿ – ಸಂಪೂರ್ಣ ಪಟ್ಟಿ ಇಲ್ಲಿದೆ..

    ವೈಜಯಂತಿ ಮಾಲಾ ಮತ್ತು ಚಿರಂಜೀವಿ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿದರೆ, ಫಾತಿಮಾ ಬೀವಿ, ಹಾರ್ಮುಸ್ಜಿ ಎನ್ ಕಾಮಾ, ರಾಜಗೋಪಾಲ್, ವಿಜಯಕಾಂತ್, ರಿಂಪೋಚೆ ಮತ್ತು ವ್ಯಾಸ್ ಅವರಿಗೆ ಪದ್ಮಭೂಷಣ ನೀಡಲಾಯಿತು. ಬೀವಿ, ವಿಜಯಕಾಂತ್ ಮತ್ತು ರಿಂಪೋಚೆ ಅವರ ಕುಟುಂಬದ ಸದಸ್ಯರು ಪ್ರಶಸ್ತಿ ಸ್ವೀಕರಿಸಿದ್ದಾರೆ.

    ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

    ಪ್ರತಿ ವರ್ಷ ಗಣರಾಜ್ಯೋತ್ಸವದ ಮೊದಲು ಪ್ರಶಸ್ತಿಗಳನ್ನು ಪ್ರಕಟಿಸಲಾಗುತ್ತದೆ. 2024 ರಲ್ಲಿ 5 ಪದ್ಮ ವಿಭೂಷಣ, 17 ಪದ್ಮ ಭೂಷಣ ಮತ್ತು 110 ಪದ್ಮ ಪ್ರಶಸ್ತಿ ಸೇರಿದಂತೆ 132 ಪ್ರಶಸ್ತಿಗಳನ್ನು ರಾಷ್ಟ್ರಪತಿ ಘೋಷಿಸಿದ್ದರು. ಹೆಚ್ಚಿನ ಸಾಧಕರಿಗೆ ಏ.22 ರಂದು ಪ್ರಶಸ್ತಿ ನೀಡಲಾಗಿತ್ತು. ಇದನ್ನೂ ಓದಿ: ‘ಮೆಗಾಸ್ಟಾರ್’ಗೆ ಪದ್ಮವಿಭೂಷಣ: ಅಭಿನಂದಿಸಿದ ಸಂಸದೆ ಸುಮಲತಾ

     

  • ಕಾಂಗ್ರೆಸ್‌ ಸುಳ್ಳು ಹೇಳ್ತಿದೆ, ಮೋದಿ ಬಳಿ ಹೇಳಿರುವುದು ನನ್ನ ಮನದಾಳದ ಮಾತು: ರಶೀದ್ ಅಹ್ಮದ್ ಖಾದ್ರಿ

    ಕಾಂಗ್ರೆಸ್‌ ಸುಳ್ಳು ಹೇಳ್ತಿದೆ, ಮೋದಿ ಬಳಿ ಹೇಳಿರುವುದು ನನ್ನ ಮನದಾಳದ ಮಾತು: ರಶೀದ್ ಅಹ್ಮದ್ ಖಾದ್ರಿ

    ನವದೆಹಲಿ: ಪದ್ಮ ಪುರಸ್ಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಜೊತೆ ಬಿದರಿ ಕಲೆಯ ಕಲಾವಿದ ಬೀದರ್‌ನ ಶಾ ರಶೀದ್ ಅಹ್ಮದ್ ಖಾದ್ರಿಯವರು (Shah Rasheed Ahmed Quadri) ಆಡಿದ್ದ ಮಾತುಗಳು ಇದೀಗ ರಾಜಕೀಯ ಸ್ವರೂಪ ಪಡೆದಿವೆ.

    ಪದ್ಮಶ್ರೀ ಪ್ರಶಸ್ತಿ ಪಡೆದ ರಶೀದ್ ಅಹ್ಮದ್ ಖಾದ್ರಿ ಮತ್ತು ಮೋದಿಯ ಮಾತುಕತೆ ಮೊದಲೇ ನಿರ್ಧಾರವಾಗಿತ್ತು. ಖಾದ್ರಿಯವರಿಗೆ ಮೊದಲೇ ಹೇಳಿಕೊಟ್ಟು ಇಂತಹ ಹೇಳಿಕೆ ಕೊಡಿಸಿದ್ದಾರೆ ಎಂದು ಕಾಂಗ್ರೆಸ್ (Congress) ರಾಜ್ಯಸಭಾ ಸದಸ್ಯ ಪ್ರಮೋದ್ ತಿವಾರಿ (Pramod Tiwari) ಆರೋಪ ಮಾಡಿದ್ದಾರೆ.

    ಈ ಆರೋಪಕ್ಕೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪದ್ಮಶ್ರೀ ಖಾದ್ರಿಯವರು ಕಾಂಗ್ರೆಸ್ ನಾಯಕರ ಆರೋಪಕ್ಕೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಅವರಿಗೆ ಇಂತಹ ಮಾತು ಹೇಳಲು ನಾಚಿಕೆ ಆಗಬೇಕು. ಅವರು ಸುಳ್ಳು ಹೇಳುತ್ತಿದ್ದಾರೆ. ನಾನು ಮೋದಿ ಬಳಿ ಹೇಳಿರುವುದು ನನ್ನ ಮನದಾಳದ ಮಾತು ಎಂದು ಸ್ಪಷ್ಟಪಡಿಸಿದ್ದಾರೆ.

    ರಶೀದ್ ಅಹ್ಮದ್ ಖಾದ್ರಿ ಹೇಳಿದ್ದೇನು?
    ಬಿಜೆಪಿ ಸರ್ಕಾರ (BJP Government) ಮುಸ್ಲಿಮರಿಗೆ ಪ್ರಶಸ್ತಿ ನೀಡುವುದಿಲ್ಲ ಎಂದು ಭಾವಿಸಿದ್ದೆ. ಆದರೆ ನನ್ನ ಊಹೆಯನ್ನು ನೀವು ಸುಳ್ಳು ಮಾಡಿದ್ದೀರಿ ಎಂದು ಪದ್ಮಶ್ರೀ ಪ್ರಶಸ್ತಿ ಪಡೆದ ಕರ್ನಾಟಕದ (Karnataka) ಖ್ಯಾತ ಬಿದರಿ ಕಲಾವಿದ ಶಾ ರಶೀದ್ ಅಹ್ಮದ್ ಖಾದ್ರಿ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಹೇಳಿದ್ದರು. ಇದನ್ನೂ ಓದಿ: ರಾಹುಲ್‌ ಗಾಂಧಿ ನಾಯಕತ್ವದಲ್ಲಿ ಕಾಂಗ್ರೆಸ್ ಎಂದಿಗೂ ಉದ್ಧಾರವಾಗದು: ಗುಲಾಂ ನಬಿ ಆಜಾದ್

    ನಾನು ಯುಪಿಎ ಸರ್ಕಾರದ (UPA Government) ಅವಧಿಯಲ್ಲಿ ಪದ್ಮ ಪ್ರಶಸ್ತಿಯನ್ನು ನಿರೀಕ್ಷಿಸಿದ್ದೆ. ಆದರೆ ನನಗೆ ಅದು ಸಿಗಲಿಲ್ಲ. ನಿಮ್ಮ ಬಿಜೆಪಿ ಸರ್ಕಾರ ಬಂದಾಗ ನನಗೆ ಯಾವುದೇ ಪ್ರಶಸ್ತಿ ಸಿಗುವುದಿಲ್ಲ ಎಂದು ಭಾವಿಸಿದ್ದೆ. ಆದರೆ ನೀವು ನನ್ನ ಊಹೆ ತಪ್ಪು ಎಂದು ಸಾಬೀತುಪಡಿಸಿದ್ದೀರಿ. ನಿಮಗೆ ನಾನು ಪ್ರಾಮಾಣಿಕ ಕೃತಜ್ಞತೆ ಸಲ್ಲಿಸುತ್ತಿದ್ದೇನೆ ಎಂದು ತಿಳಿಸಿದ್ದರು.

  • ಸೆ.15ವರೆಗೆ ಪದ್ಮ ಪ್ರಶಸ್ತಿ ನಾಮನಿರ್ದೇಶನ ಮಾಡಿ

    ಸೆ.15ವರೆಗೆ ಪದ್ಮ ಪ್ರಶಸ್ತಿ ನಾಮನಿರ್ದೇಶನ ಮಾಡಿ

    ನವದೆಹಲಿ: 2023ನೇ ಸಾಲಿನ ಪದ್ಮ ಪ್ರಶಸ್ತಿಗಾಗಿ ಆನ್‍ಲೈನ್ ನಾಮನಿರ್ದೇಶನ ಮತ್ತು ಶಿಫಾರಸು ಮಾಡಲು ಸೆಪ್ಟೆಂಬರ್ 15 ಕೊನೆಯ ದಿನಾಂಕ ಎಂದು ಗೃಹ ಸಚಿವಾಲಯ ಪ್ರಕಟಿಸಿದೆ.

    2023ರ ಪದ್ಮ ಪ್ರಶಸ್ತಿಗಳಿಗಾಗಿ ನಾಮನಿರ್ದೇಶನ ಮಾಡಲು ಆನ್‍ಲೈನ್‍ನಲ್ಲಿ ಮೇ 1ರಿಂದ ಮುಕ್ತವಾಗಿ ತೆರೆಯಲಾಗಿತ್ತು. ಈಗ ಗೃಹ ಸಚಿವಾಲಯವು, 2023 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಕಟಿಸಲಾಗುವ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಸೆಪ್ಟೆಂಬರ್ 15 ಕೊನೆಯ ದಿನ ಎಂದು ತಿಳಿಸಿದೆ. ಇದನ್ನೂ ಓದಿ: ಮೊದಲ ಪ್ರಯತ್ನದಲ್ಲಿ UPSC ಪರೀಕ್ಷೆಯಲ್ಲಿ ಉತ್ತೀರ್ಣ 

    ಈ ವೇಳೆ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು/ ಶಿಫಾರಸುಗಳನ್ನು ರಾಷ್ಟ್ರೀಯ ಪ್ರಶಸ್ತಿಗಳ ಪೋರ್ಟಲ್‍ನ ಅಧಿಕೃತ ವೆಬ್‍ಸೈಟ್-https://awards.gov.in ನಲ್ಲಿ ಮಾತ್ರ ಆನ್‍ಲೈನ್‍ನಲ್ಲಿ ಸ್ವೀಕರಿಸಲಾಗುವುದು ಎಂದು ಅಧಿಕೃತವಾಗಿ ತಿಳಿಸಿದೆ.

    ಪದ್ಮ ಪ್ರಶಸ್ತಿ ಎಂದರೆ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ. ಇದು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. 1954ರಲ್ಲಿ ಸ್ಥಾಪನೆಯಾದ ಪದ್ಮ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪ್ರಕಟಿಸಲಾಗುತ್ತದೆ. ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರನ್ನು ಗುರುತಿಸಿ, ಗೌರವಿಸುವ ಹಾಗೂ ಅವರನ್ನು ಸಮಾಜಕ್ಕೆ ಪರಿಚಯಿಸುವ ಮಹನ್ ಉದ್ದೇಶದಿಂದ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುತ್ತೆ ಬರಲಾಗಿದೆ.

    ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಾಮಾಜಿಕ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರ, ನಾಗರಿಕ ಸೇವೆಗಳು, ವ್ಯಾಪಾರ, ಉದ್ಯಮ ಮತ್ತು ಕೈಗಾರಿಕೆ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ವಿಶಿಷ್ಟ ಮತ್ತು ಅನನ್ಯ ಸಾಧನೆ ಮತ್ತು ಸೇವೆ ನೀಡಿರುವ ಗಣ್ಯರನ್ನು ಈ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗುತ್ತದೆ. ಇದನ್ನೂ ಓದಿ: ಉಕ್ರೇನ್‍ಗೆ 9 ಬಿಲಿಯನ್ ಯುರೋ ಕಳುಹಿಸಲು ಒಪ್ಪಿಕೊಂಡ ಇಯು 

  • ಪದ್ಮ ಪ್ರಶಸ್ತಿ ಸ್ವೀಕಾರಕ್ಕೂ ಮುನ್ನ ಪ್ರಧಾನಿ ಕಾಲಿಗೆ ನಮಸ್ಕರಿಸಿದ 125 ವಯಸ್ಸಿನ ಯೋಗಿ

    ಪದ್ಮ ಪ್ರಶಸ್ತಿ ಸ್ವೀಕಾರಕ್ಕೂ ಮುನ್ನ ಪ್ರಧಾನಿ ಕಾಲಿಗೆ ನಮಸ್ಕರಿಸಿದ 125 ವಯಸ್ಸಿನ ಯೋಗಿ

    ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪದ್ಮ ಪ್ರಶಸ್ತಿ ಪುರಸ್ಕಾರ ಸಮಾರಂಭ ಅಪರೂಪದ ಕ್ಷಣಗಳಿಗೆ ಸಾಕ್ಷಿ ಆಯಿತು. ವಾರಣಾಸಿಯ 125 ವರ್ಷ ವಯಸ್ಸಿನ ಯೋಗ ಗುರು ಸ್ವಾಮಿ ಶಿವಾನಂದ ಅವರು ಪ್ರಶಸ್ತಿ ಸ್ವೀಕರಿಸುವ ಮುನ್ನ ಪ್ರಧಾನಿ ಮೋದಿಗೆ ಪಾದಾಭಿವಂದನೆ ಮಾಡಿದರು. ಇದಕ್ಕೆ ಪ್ರತಿಯಾಗಿ ಮೋದಿ ಕೂಡ ಶಿರಬಾಗಿ ನಮಸ್ಕರಿಸಿದರು.

    ರಾಷ್ಟ್ರಪತಿಗಳಿಗೂ ಸ್ವಾಮಿ ಶಿವಾನಂದರು ನಮಸ್ಕರಿಸಿದರು. ರಾಷ್ಟ್ರಪತಿಗಳು ಕೂಡಲೇ ಅವರನ್ನು ಎಬ್ಬಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಜನರಲ್ ಬಿಪಿನ್ ರಾವತ್, ಗೀತಾ ಪ್ರೆಸ್ ಮಾಲೀಕರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾಂಗ್ರೆಸ್ ಹಿರಿಯ ನಾಯಕ, ಪದ್ಮಭೂಷಣ ಗುಲಾಂ ನಬಿ ಆಜಾದ್ ಸೇರಿ ಒಟ್ಟು 63 ಗಣ್ಯರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ: ರಾಜಕೀಯ ಪಕ್ಷಗಳು ಜನರ ನಡುವೆ ಒಡಕು ಮೂಡಿಸುತ್ತಿವೆ: ಗುಲಾಂ ನಾಬಿ ಅಜಾದ್

    ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಸೇರಿದಂತೆ ಎರಡು ಪದಕ ಗೆದ್ದು ಇತಿಹಾಸ ನಿರ್ಮಿಸಿದ ಭಾರತದ ಶೂಟರ್ ಅವನಿ ಲೇಖರಾ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು. ಜೊತೆಗೆ ಹಾಕಿ ಕ್ರೀಡಾಪಟು ವಂದನಾ ಕಟಾರಿಯಾ ಪ್ರಶಸ್ತಿ ಪಡೆದರು. ಇದನ್ನೂ ಓದಿ: ರಾಜ್ಯಸಭೆಗೆ ಕ್ರಿಕೆಟಿಗ ಹರ್ಭಜನ್ ಸಿಂಗ್ ನಾಮನಿರ್ದೇಶನ – ಅವಿರೋಧವಾಗಿ ಆಯ್ಕೆಯಾಗಲಿರುವ ಬಜ್ಜಿ

  • ಬಿಪಿನ್‌ ರಾವತ್‌ಗೆ ಪದ್ಮವಿಭೂಷಣ – ರಾಜ್ಯದ ಐವರಿಗೆ ಪದ್ಮಶ್ರೀ

    ಬಿಪಿನ್‌ ರಾವತ್‌ಗೆ ಪದ್ಮವಿಭೂಷಣ – ರಾಜ್ಯದ ಐವರಿಗೆ ಪದ್ಮಶ್ರೀ

    ನವದೆಹಲಿ: ವಿವಿಧ ಕ್ಷೇತ್ರದಲ್ಲಿ ಸಾಧೆನೆ ಮಾಡಿದವರಿಗೆ ನಾಳೆ ಗಣರಾಜ್ಯೋತ್ಸವದಲ್ಲಿ ಪದ್ಮವಿಭೂಷಣ, ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈಗಾಗಲೇ ಪ್ರಶಸ್ತಿ ಪಡೆಯುವ ಸಾಧಕರ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ.

    ಕೇಂದ್ರ ಸರ್ಕಾರದ ಅತ್ಯುನ್ನತ ಗೌರವವಾದ ಪದ್ಮ ಪ್ರಶಸ್ತಿಗಳು ಪ್ರಕಟವಾಗಿದೆ. ರಾಜ್ಯದ ಐವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿ ಪದ್ಮವಿಭೂಷಣ, ಪದ್ಮಭೂಷಣ ಎರಡು ಪ್ರಶಸ್ತಿಯೂ ಕರ್ನಾಟಕಕ್ಕೆ ಸಿಕ್ಕಿಲ್ಲ.ಕೇಂದ್ರ ಸರ್ಕಾರದ ಅತ್ಯುನ್ನತ ಗೌರವವಾದ ಪದ್ಮ ಪ್ರಶಸ್ತಿಗಳು ಪ್ರಕಟವಾಗಿದೆ. ರಾಜ್ಯದ ಐವರು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಬಾರಿ ಪದ್ಮವಿಭೂಷಣ, ಪದ್ಮಭೂಷಣ ಎರಡು ಪ್ರಶಸ್ತಿಯೂ ಕರ್ನಾಟಕಕ್ಕೆ ಸಿಕ್ಕಿಲ್ಲ.

    ರಾಜ್ಯದ ಐದು ಜನಕ್ಕೆ ಪದ್ಮಶ್ರೀ, ಪದ್ಮವಿಭೂಷಣ, ಪದ್ಮಭೂಷಣ ಎರಡು ಪ್ರಶಸ್ತಿ ಕರ್ನಾಟಕಕ್ಕೆ ಈ ಬಾರಿ ಇಲ್ಲ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಮುನ್ನಾದಿನದಂದು ಘೋಷಿಸಲಾಗುತ್ತದೆ. ಈ ಬಾರಿ ಪದ್ಮ ಪ್ರಶಸ್ತಿ ಪಡೆಯುವ ಸಾಧಕರ ಪಟ್ಟಿಯನ್ನು ಈಗಾಲಗಲೇ ಬಿಡುಗಡೆ ಮಾಡಲಾಗಿದೆ. ಪದ್ಮ ಪ್ರಶಸ್ತಿಗಳನ್ನು 1954 ರಲ್ಲಿ ಸ್ಥಾಪಿಸಲಾಯಿತು ಮತ್ತು ಶಿಕ್ಷಣ, ಕಲೆ, ಸಾಹಿತ್ಯ, ವಿಜ್ಞಾನ, ನಟನೆ, ಸಮಾಜ ಸೇವೆ ಮತ್ತು ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ಚಟುವಟಿಕೆಯ ವಿವಿಧ ಕ್ಷೇತ್ರಗಳಲ್ಲಿ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ನಾಗರಿಕರಿಗೆ ನೀಡಲಾಗುತ್ತದೆ.

    ಈ  128 ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಈ ಬಾರಿ 4 ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಪದ್ಮಶ್ರೀ ಪ್ರಶಸ್ತಿಗಳು ಇವೆ. ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಮತ್ತು 13 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಇದ್ದಾರೆ.

    ಸಿದ್ದಲಿಂಗಯ್ಯಗೆ ಮರಣೋತ್ತರ ಪದ್ಮಪ್ರಶಸ್ತಿ, ಅಮ್ಮಯ್ ಮಹಾಲಿಂಗ ನಾಯ್ಕ್ ಕೃಷಿ ಕ್ಷೇತ್ರದ ಸಾಧನೆಗೆ, ಅಬ್ದುಲ್ ಖಾದರ್ ನಡಕಟ್ಟಿನ್, ನಾವಿನ್ಯತೆ ಕ್ಷೇತ್ರಕ್ಕೆ, ಎಚ್.ಆರ್. ಕೇಶವಮೂರ್ತಿ ಕಲಾ ಕ್ಷೇತ್ರಕ್ಕೆ , ಸುಬ್ಬಣ್ಣ ಅಯ್ಯಪನ್, ಸೈನ್ಸ್ ಅಂಡ್ ಇಂಜನಿಯರಿಂಗ್ ಕ್ಷೇತ್ರದ ಸೇವೆಗಾಗಿ ಪದ್ಮಪ್ರಶಸ್ತಿ.

    ಬಿಪಿನ್ ರಾವತ್‍ಗೆ ಪದ್ಮವಿಭೂಷಣ ಮರಣೋತ್ತರ ಪ್ರಶಸ್ತಿ, ಉತ್ತರ ಪ್ರದೇಶದ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ, ಕಾಂಗ್ರೆಸ್ ನಾಯಕ ಗುಲಾಂ ಅಜಾದ್‍ಗೆ ಪದ್ಮಭೂಷಣ ಪ್ರಶಸ್ತಿ, ಸುಂದರರಾಜನ್ ಪಿಚೈ – ಪದ್ಮಭೂಷಣ, ಓಲಂಪಿಕ್ ಕ್ರೀಡಾಪಟು ನೀರಜ್ ಚೋಪ್ರಾಗೆ ಪದ್ಮಶ್ರೀ ನೀಡಲಾಗುತ್ತಿದೆ.

  • ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ

    ಹೆಚ್.ಆರ್ ರಂಗನಾಥ್ ಅವರಿಗೆ ನಾನು ಆಭಾರಿಯಾಗಿದ್ದೇನೆ: ಹರೇಕಳ ಹಾಜಬ್ಬ

    ಬೆಂಗಳೂರು: ಅಕ್ಷರ ಸಂತ ಅಂತಲೇ ಖ್ಯಾತಿ ಪಡೆದ ಹರೇಕಳ ಹಾಜಬ್ಬ ಇಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಈ ವೇಳೆ ಮಾತನಾಡಿದ ಹರೇಕಳ ಹಾಜಬ್ಬ, ನಾನು ಹೆಚ್.ಆರ್ ರಂಗನಾಥ್ ಅವರಿಗೂ ಆಭಾರಿಯಾಗಿದ್ದೇನೆ ಎಂದು ಹೇಳಿ ಸಂತಸ ವ್ಯಕ್ತಪಡಿಸಿದ್ದಾರೆ.

    ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಈ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಇಂದು ಬಹಳಷ್ಟು ಹೆಮ್ಮೆಯ ದಿನವಾಗಿದೆ. ಇಂದು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದು ತುಂಬಾ ಸಂತೋಷವಾಗಿದೆ. ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿರುವುದು ಸಂತೋಷ. ಈ ಪ್ರಶಸ್ತಿಗೆ ನಾನು ಅರ್ಹ ಎಂದು ನಾನು ಯಾವತ್ತು ಕನಸೂ ಕಂಡಿಲ್ಲ. 2003 ಸೆಪ್ಟಂಬರ್ 14 ರಂದು ಹೊಸದಿಗಂತ ಪತ್ರಿಕೆ ನನ್ನನ್ನು ಬೆಳಕಿಗೆ ತಂದಿತ್ತು. ಅದೇ ವರ್ಷ ಕನ್ನಡಪ್ರಭ ಕೂಡಾ ಈ ವಿಚಾರವಾಗಿ ಸುದ್ದಿ ಮಾಡಿತ್ತು. ಆಗ ಎಚ್. ಆರ್ ರಂಗನಾಥ್ ಅವರು ಎಡಿಟರ್ ಆಗಿದ್ದರು. ಆಗ ಅವರು ನನ್ನ ಹರೇಕಳ ಗ್ರಾಮಕ್ಕೆ ಭೇಟಿಕೊಟ್ಟಿದ್ದರು. ನಾನು ಪದ್ಮಶ್ರೀ ಪ್ರಶಸ್ತಿ ಪಡೆದ ಈ ಸಂದರ್ಭದಲ್ಲಿ ಅವರನ್ನು ನೆನಪಿಸಿಕೊಂಡೆನು. ಮೂಲೆಯಲ್ಲಿ ಇದ್ದ ಜನರನ್ನು ದೇಶಕ್ಕೆ ತೋರಿಸಿಕೊಟ್ಟರು. ನಾನು ಅವರಿಗೆ ಖುಣಿಯಾಗಿದ್ದೇನೆ ಎಂದು ಹೇಳಿದರು.ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ರಾಜ್ಯದ್ಯಾಂತ ಬಹಳಷ್ಟು ಜನರು ನನನ್ನು ಗುರುತಿಸಿದರು. ನಾನು ಹೆಚ್ ಆರ್ ರಂಗನಾಥ್ ಅವರಿಗೂ ಆಭಾರಿಯಾಗಿದ್ದೇನೆ. ನಾನು ಸಂಘಟನೆಗಳ ಬೆಂಬಲದಲ್ಲಿ ಸರ್ಕಾರಿ ಶಾಲೆ ನಿರ್ಮಾಣಕ್ಕೆ ಪ್ರಯತ್ನಿಸಿದೆ. ಈಗ ಕಾಲೇಜು ತರುವ ಉದ್ದೇಶ ಇದ್ದು ಸರ್ಕಾರದ ಸಹಕಾರ ಕೇಳಿದ್ದೇನೆ. ಚಪ್ಪಲಿ ಬಿಟ್ಟು ಪ್ರಶಸ್ತಿ ಸ್ವೀಕಾರ ಮಾಡಿದ್ದೇನೆ. ನನ್ನನ್ನು ಗುರುತಿಸಿದ ಎಲ್ಲರಿಗೂ ಧನ್ಯವಾದಗಳು. ಚಹಕೂಟದಲ್ಲಿ ಪ್ರಧಾನಿ ಮೋದಿಯವರನ್ನು ಮಾತನಾಡಿಸಿದೆ. ನನ್ನ ಕೈ ಮುಟ್ಟಿ ಪ್ರಧಾನಿ ಮೋದಿ ಮಾತನಾಡಿಸಿದರು ಎಂದು ಹೇಳುತ್ತಾ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ಸಂತೋಷದ ಕ್ಷಣಗಳನ್ನು ಮೆಲುಕು ಹಾಕಿದರು. ಇದನ್ನೂ ಓದಿ:  119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ಸರ್ಕಾರಿ ಶಾಲೆ ಇದ್ದರೆ ಬಡವರ ಮಕ್ಕಳಿಗೆ ಸಹಾಯವಾಗುತ್ತದೆ. ಎಲ್ಲ ಕಡೆ ಸರ್ಕಾರಿ ಶಾಲೆ ಇದೆ, ಆದರೆ ನಮ್ಮ ಊರಿನಲ್ಲಿ ಒಂದು ಶಾಲೆ ಬೇಕು ಎಂದು ನನಗೆ ಅನ್ನಿಸಿತ್ತು. ದಾನಿಗಳ ಹತ್ತಿರ ಸಹಾಯವನ್ನು ಕೇಳಿದ್ದೇನೆ.  ಸರ್ಕಾರವು ನನಗೆ ಸಹಾಯ ಮಾಡಿದೆ. ನನ್ನ ಹಣವನ್ನು ನಾನು ಹಾಕಿದ್ದೇನೆ ಎಂದು ಹೇಳಲು ತಯಾರಿಲ್ಲ. ಹಲವರು ನನಗೆ ಸಹಾಯ ಮಾಡಿದ್ದಾರೆ. ಈ ಮಣ್ಣಿಗೆ ನಾನು ಖುಣಿಯಾಗಿದ್ದೇನೆ ಎಂದರು.

    ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಲೋಕಸಭೆ ಸದಸ್ಯರಾದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಕೋಟಾ ಶ್ರೀನಿವಾಸ್ ಪೂಜಾರಿ ಸೇರಿದಂತೆ ಅನೇಕರಿಗೆ ನಾನು ಧನ್ಯವಾದವನ್ನು ಹೇಳುತ್ತೇನೆ. ಚಹಾಕೂಟದಲ್ಲಿ ಭಾಗಿಯಾದ ವೇಳೆ ಪ್ರಧಾನಿ ಮೋದಿಯವರು ಕೈ ಮುಟ್ಟಿ ಮಾತನಾಡಿಸಿದರು. ಇದು ನನ್ನ ಬದುಕಿನಲ್ಲಿ ಮರೆಯಲಾಗದ ದಿನ. ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕನ್ನಡದಲ್ಲಿ ಮಾತನಾಡಿದೆ ಅವರು ಸಂತೋಷ ವ್ಯಕ್ತಪಡಿಸಿದರು ಎಂದರು.

    ಶಾಲೆ ನಿರ್ಮಾಣಕ್ಕೆ ಶ್ರಮಿಸಿದ ಬಳಿಕ ಕಾಲೇಜು ನಿರ್ಮಾಣದ ಕನಸು ಇದ್ದು, ಕಾಲೇಜು ನಿರ್ಮಾಣಕ್ಕೆ ನೆರವು ನೀಡುವಂತೆ ಕೇಳಿದ್ದೇನೆ. ಸರ್ಕಾರ ಸಹಾಯ ಮಾಡಬಹುದು ಎಂದು ನಿರೀಕ್ಷೆ ಇದೆ. ಕಾಲೇಜು ನಿರ್ಮಾಣ ಆದರೆ ವಿದ್ಯಾರ್ಥಿಗಳಿಗೆ ಸಹಾಯ ಆಗಲಿದೆ. ನನ್ನ ತಂದೆ ತಾಯಿ ಶಿಕ್ಷಣ ಪಡೆದಿಲ್ಲ, ನಾನು ಓದಿಲ್ಲ ಆದರೆ ಮುಂದಿನ ಪೀಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂದರು.

  • 119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

    ನವದೆಹಲಿ: 2021ನೇ ಸಾಲಿನ ಪದ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 119 ಸಾಧಕರಿಗೆ ಗೌರವ ಸಲ್ಲಿಸಿದ್ದಾರೆ.

    7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 29 ಮಹಿಳೆಯರು, 16 ಮರಣೋತ್ತರ ಪ್ರಶಸ್ತಿ ಪುರಸ್ಕೃತರು ಸೇರಿದ್ದಾರೆ.

    ಕರ್ನಾಟಕದ ಅಕ್ಷರ ಸಂತ ಹರೇಕಳ ಹಾಜಬ್ಬ, ಉದ್ಯಮಿ ವಿಜಯ ಸಂಕೇಶ್ವರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು, ಭಾರತೀಯ ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಮ್‍ಪಾಲ್, ನಿವೃತ್ತ ಏರ್ ಮಾರ್ಷಲ್ ಡಾ. ಪದ್ಮಾ ಬಂಡೋಪಾದ್ಯಾಯ, ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ್ ಚಾನುಲಾಲ್ ಮಿಶ್ರಾ, ಬಾಲಿವುಡ್ ತಾರೆ ಕಂಗನಾ ರನಾವತ್, ಗಾಯಕ ಅದ್ನಾನ್ ಸಾಮಿ ಸೇರಿದಂತೆ ಹಲವರು ಇಂದು ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ:   ಅಪ್ಪು ಸಮಾಧಿಗೆ ಮಂಡಕ್ಕಿ ಹಾರ ಮಾಡಿಕೊಂಡು ಬಂದ ವೃದ್ಧೆ

    ಕೇಂದ್ರದ ಮಾಜಿ ಸಚಿವೆ ದಿ.ಸುಷ್ಮಾ ಸ್ವರಾಜ್, ದಿ.ಜಾರ್ಜ್ ಫರ್ನಾಂಡಿಸ್, ದಿ.ಅರುಣ್ ಜೇಟ್ಲಿ, ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸುಷ್ಮಾ ಅವರ ಪುತ್ರಿ ಬಾನುಶ್ರೀ ಸ್ವರಾಜ್ ಅವರು ರಾಷ್ಟ್ರಪತಿಗಳಿಂದ ಪಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ:  ಕಳಪೆ ರಸ್ತೆ ನಿರ್ಮಾಣ ಮಾಡುವ ಗುತ್ತಿಗೆದಾರರ ಬಿಲ್ ತಡೆ ಹಿಡಿಯಿರಿ: ಶ್ರೀಮಂತ್ ಪಾಟೀಲ್

    ಐಸಿಎಂಆರ್ ಮಾಜಿ ಮುಖ್ಯ ವಿಜ್ಷಾಣಿ ಡಾ ರಾಮನ್ ಗಂಗಾಖೇಡ್ಕರ್, ನಟಿ ಕಂಗನಾ ರಣಾವತ್ ಅವರಿಗೆ ಪದ್ಮಶ್ರೀ, ಗಾಯಕ ಅದ್ನಾನ್ ಸಾಮಿ, ಟೋಕಿಯೊ ಒಲಿಂಪಿಕ್ಸ್ ನಲ್ಲಿ ಮಹಿಳಾ ಹಾಕಿ ತಂಡವನ್ನು ಮುನ್ನೆಡೆಸಿದ್ದ ರಾಣಿ ರಾಂಪಲ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

  • ಡಾ. ಬಿಎಂ ಹೆಗ್ಡೆಗೆ ಪದ್ಮ ವಿಭೂಷಣ, ಕಂಬಾರಗೆ ಪದ್ಮಭೂಷಣ – ರಾಜ್ಯದ 5 ಮಂದಿಗೆ ಪದ್ಮ ಪ್ರಶಸ್ತಿ

    ಡಾ. ಬಿಎಂ ಹೆಗ್ಡೆಗೆ ಪದ್ಮ ವಿಭೂಷಣ, ಕಂಬಾರಗೆ ಪದ್ಮಭೂಷಣ – ರಾಜ್ಯದ 5 ಮಂದಿಗೆ ಪದ್ಮ ಪ್ರಶಸ್ತಿ

    ನವದೆಹಲಿ: ಗಣರಾಜ್ಯೋತ್ಸವದ ಹಿನ್ನಲೆ ರಾಜ್ಯದ 5 ಮಂದಿ ಸೇರಿದಂತೆ ಒಟ್ಟು 119 ಮಂದಿಗೆ ಪದ್ಮ ಪ್ರಶಸ್ತಿ ಸಿಗಲಿದೆ. ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರು ಮರಣೋತ್ತರ ಪದ್ಮ ವಿಭೂಷಣ ಗೌರವಕ್ಕೆ ಪಾತ್ರವಾಗಿದ್ದಾರೆ.

    ಕೇಂದ್ರ ಗೃಹ ಸಚಿವಾಲಯ ಇಂದು ರಾತ್ರಿ ಸಾಧಕರ ಪಟ್ಟಿಯನ್ನು ಪ್ರಕಟ ಮಾಡಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿಎಂ ಹೆಗ್ಡೆ ಅವರಿಗೆ ಪದ್ಮವಿಭೂಷಣ ಸಾಹಿತ್ಯ ರಂಗದಲ್ಲಿ ಚಂದ್ರಶೇಖರ್‌ ಕಂಬಾರ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.

    ಮಂಜಮ್ಮ ಜೋಗತಿ(ಕಲೆ), ರಂಗಸ್ವಾಮಿ ಲಕ್ಷ್ಮಿ ನಾರಾಯಣ ಕಶ್ಯಪ( ಸಾಹಿತ್ಯ ಮತ್ತು ಶಿಕ್ಷಣ), ಕೆವೈ ವೆಂಕಟೇಶ್(ಕ್ರೀಡೆ ) ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ.

    ಸಾರ್ವಜನಿಕ ವ್ಯವಹಾರಗಳ ವಿಭಾಗದಲ್ಲಿ ಪ್ರಶಸ್ತಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಸಿಕ್ಕಿದೆ. ಒಟ್ಟು 7 ಮಂದಿಗೆ ಪದ್ಮ ವಿಭೂಷಣ, 10 ಮಂದಿಗೆ ಪದ್ಮಭೂಷಣ, 102 ಮಂದಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತದೆ.

    ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಿ ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಲಿದ್ದಾರೆ.

  • ಕೊರೊನಾ ಭೀತಿ – ಪದ್ಮ ಪುರಸ್ಕಾರ ಪ್ರದಾನ ಮುಂದೂಡಿಕೆ

    ಕೊರೊನಾ ಭೀತಿ – ಪದ್ಮ ಪುರಸ್ಕಾರ ಪ್ರದಾನ ಮುಂದೂಡಿಕೆ

    ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಏಪ್ರಿಲ್ 3ರಂದು ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‍ನಲ್ಲಿ ನಡೆಯಬೇಕಿದ್ದ ಪದ್ಮ ಪುರಸ್ಕಾರ ಪ್ರದಾನ ಕಾರ್ಯಕ್ರಮ ಅರ್ನಿದಿಷ್ಟವಾಧಿಗೆ ಮುಂದೂಡಿಕೆಯಾಗಿದೆ.

    ಭಾರತದಲ್ಲಿ ಸೊಂಕಿತರ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಈ ತಿರ್ಮಾನ ತೆಗೆದುಕೊಂಡಿದ್ದು, ಮುಂದಿನ ದಿನಾಂಕ ನಿಗದಿ ಆಗುವರೆಗೂ ಕಾರ್ಯಕ್ರಮ ಮುಂದೂಡಿಕೆಯಾಗಿದೆ ಎಂದು ತನ್ನ ಪತ್ರದಲ್ಲಿ ತಿಳಿಸಿದೆ.

    2019ರ ಗಣರಾಜೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಒಟ್ಟು ಏಳು ಗಣ್ಯರಿಗೆ ಪದ್ಮವಿಭೂಷಣ, 16 ಮಂದಿಗೆ ಪದ್ಮಭೂಷಣ, 118 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.

    ಕರ್ನಾಟಕದ ತುಳಸಿಗೌಡ, ಹರೆಕಲ ಹಾಜಬ್ಬ, ಎಂಪಿ ಗಣೇಶ್, ಕೆ.ವಿ ಸಂಪತ್ ಕುಮಾರ್, ಜಯಲಕ್ಷ್ಮಿ, ಉದ್ಯಮಿ ವಿಜಯ್ ಸಂಕೇಶ್ವರ್, ಬೆಂಗಳೂರು ಗಂಗಾಧರ್, ಭರತ್ ಗೋಯಂಕಾಗೆ ಪದ್ಮ ಶ್ರೀ, ಪೇಜಾವರ ಶ್ರೀಗಳಿಗೆ ಮರಣೋತ್ತರ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ.