Tag: Padmashri award

  • ಸಿನಿಮಾ ಭರಾಟೆಲಿ ತೊಗಲು ಬೊಂಬೆ ಕಲೆ ನಶಿಸಿ ಹೋಗುತ್ತಿದೆ: ಪದ್ಮಶ್ರೀ ವಿಜೇತೆ ಭೀಮವ್ವ

    ಸಿನಿಮಾ ಭರಾಟೆಲಿ ತೊಗಲು ಬೊಂಬೆ ಕಲೆ ನಶಿಸಿ ಹೋಗುತ್ತಿದೆ: ಪದ್ಮಶ್ರೀ ವಿಜೇತೆ ಭೀಮವ್ವ

    – ಈ ವಯಸ್ಸಿನಲ್ಲಿ ಕಲೆ ಗುರುತಿಸಿ ಪುರಸ್ಕಾರ ಮಾಡಿದ ಮೋದಿ ಸರ್ಕಾರಕ್ಕೆ ಧನ್ಯವಾದ

    ಹುಬ್ಬಳ್ಳಿ: ಸಿನಿಮಾ ಭರಾಟೆಯಲ್ಲಿ ತೊಗಲು ಬೊಂಬೆ ಕಲೆಯು ನಶಿಸಿ ಹೋಗುತ್ತಿದೆ. ಆದರೆ ಈ ಕಲೆ ಉಳಿಯಬೇಕು ಎಂದು ಪದ್ಮಶ್ರೀ ಪ್ರಶಸ್ತಿ ವಿಜೇತೆ ಭೀಮವ್ವ (Bhimavva) ಹೇಳಿದರು.

    ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ಜನಾಂಗಕ್ಕೆ, ಮಕ್ಕಳಿಗೆ, ಮೊಮ್ಮಕ್ಕಳಿಗೆ ಈ ತೊಗಲು ಗೊಂಬೆ (Togalu Gombe) ಕಲೆಯನ್ನು ಕಲಿಸುತ್ತೇನೆ. ಈ ವಯಸ್ಸಿನಲ್ಲಿ ಕಲೆ ಗುರುತಿಸಿ ಪುರಸ್ಕಾರ ಮಾಡಿದ ಮೋದಿ ಸರ್ಕಾರಕ್ಕೆ ಧನ್ಯವಾದಗಳು. ನನಗೆ ಬಹಳಷ್ಟು ಸಂತೋಷವಾಗಿದೆ. ದೇಶ, ವಿದೇಶದಲ್ಲಿ ಕಲೆ ಪ್ರದರ್ಶನ ಮಾಡಿದ್ದೇನೆ. ಇನ್ನೂ ಮುಂದೆ ಕಲೆ ಉಳಿಸುವ ಕಾರ್ಯ ಮಾಡುವೆ ಎಂದರು. ಇದನ್ನೂ ಓದಿ: ನಿಮ್ಗೆ ಹುಚ್ಚು ಹಿಡಿದಿದ್ಯಾ? – ಪಾಕಿಸ್ತಾನದಲ್ಲಿ ಈಗ ಸೇನೆ Vs ಪೊಲೀಸ್‌ ಕಿತ್ತಾಟ

    ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ (Padma Shri award) ಪಡೆದಿರುವ ಕೊಪ್ಪಳ ಜಿಲ್ಲೆಯ ಭೀಮವ್ವ ಅವರು ದೆಹಲಿಯಿಂದ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ್ದರು. ಬಳಿಕ ಹುಬ್ಬಳ್ಳಿಯಿಂದ ಕುಟುಂಬಸ್ಥರ ಜೊತೆಗೆ ಸ್ವಗ್ರಾಮಕ್ಕೆ ತೆರಳಿದರು.

  • ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಸಿದ್ದರಾಮಯ್ಯ

    ಪುನೀತ್‌ ರಾಜ್‌ಕುಮಾರ್‌ಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು: ಸಿದ್ದರಾಮಯ್ಯ

    ಬೆಂಗಳೂರು: ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

    ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜ್‌ಕುಮಾರ್‌ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು. ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿಂದಗಿ ಉಪ ಚುನಾವಣೆ: 4,031 ಮತಗಳ ಅಂತರದಲ್ಲಿ ಬಿಜೆಪಿ ಮುನ್ನಡೆ

    ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ರಾಜ್ಯ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂಬ ಒತ್ತಾಯವೂ ಕೇಳಿಬಂದಿದೆ. ಅವರಿಗೆ ಸರ್ಕಾರದಿಂದ ಯಾವ ಪ್ರಶಸ್ತಿ ನೀಡಬೇಕು ಎಂಬ ಬಗ್ಗೆ ಉಪ ಚುನಾವಣೆ ಫಲಿತಾಂಶದ ನಂತರ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದರು. ಇದನ್ನೂ ಓದಿ: ಮಗ ಮನೆಗೆ ಹಿಂದಿರುಗುತ್ತಿದ್ದಂತೆ ಶಾರೂಖ್ ನಿವಾಸದಲ್ಲಿ ಕಳೆಕಟ್ಟಿದ ದೀಪಾವಳಿ ಹಬ್ಬದ ಸಂಭ್ರಮ

     

    PUNEET RAJKUMAR

    ನಟ ಪುನೀತ್‌ ರಾಜ್‌ಕುಮಾರ್‌ ಅವರು ಹೃದಯ ಸ್ತಂಭನದಿಂದ ಶುಕ್ರವಾರ ನಿಧನರಾದರು. ಅವರ ನಟನೆ, ಸಾಮಾಜಿಕ ಸೇವೆಯನ್ನು ಪರಿಗಣಿಸಿ ಮರಣೋತ್ತರ ಗೌರವ ಸಲ್ಲಿಸಬೇಕು ಎಂದು ಸಾರ್ವಜನಿಕರ ಒತ್ತಾಯವಾಗಿದೆ.

  • ವೃಕ್ಷಮಾತೆ ಸಾಲು ಮರದ ತಿಮ್ಮಕ್ಕಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

    ವೃಕ್ಷಮಾತೆ ಸಾಲು ಮರದ ತಿಮ್ಮಕ್ಕಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

    ನವದೆಹಲಿ: ಪರಿಸರ ಸಂರಕ್ಷಣೆಗೆ ನೀಡಿರುವ ಕೊಡುಗೆಗೆ ಮಾನ್ಯತೆ ನೀಡಿ, ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಅಲ್ಲದೆ ಟ್ವೀಟ್ ಮೂಲಕ ಸ್ವತಃ ರಾಷ್ಟ್ರಪತಿಗಳೇ ವೃಕ್ಷಮಾತೆಗೆ ಅಭಿನಂದನೆ ತಿಳಿಸಿದ್ದಾರೆ.

    ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್, ಪರ್ವತಾರೋಹಿ ಬಚೇಂದ್ರಿ ಪಾಲ್, ಜಾನಪದ ಗಾಯಕಿ ತೀಜನ್ ಬಾಯಿ, ಪರಿಸರಪ್ರೇಮಿ, ಕರ್ನಾಟಕದ ಸಾಲು ಮರದ ತಿಮ್ಮಕ್ಕ ಸೇರಿದಂತೆ 54 ಗಣ್ಯರಿಗೆ 2019ನೇ ಸಾಲಿನ ಪದ್ಮ ಪುರಸ್ಕಾರಗಳನ್ನು ಪ್ರಧಾನ ಮಾಡಿದ್ದಾರೆ. ಈ ಹಿಂದೆ ಮಾರ್ಚ್ 11ರಂದು ವಿವಿಧ ಕ್ಷೇತ್ರದಲ್ಲಿ ಸಾಧಿಸಿದ 56 ಗಣ್ಯರಿಗೆ ಪದ್ಮ ಪ್ರಶಸ್ತಿ ನೀಡಿ ರಾಷ್ಟ್ರಪತಿಗಳು ಗೌರವಿಸಿದ್ದರು. ಇದನ್ನೂ ಓದಿ: ದಿಗ್ಗಜರಿಗೆ ರಾಷ್ಟ್ರಪತಿಗಳಿಂದ ಪದ್ಮ ಗೌರವ ಪ್ರದಾನ

    ಟ್ವೀಟ್‍ನಲ್ಲಿ ಏನಿದೆ?
    ಸಮಾಜ ಸೇವೆ ಮಾಡಿದಂತಹ ಶ್ರೀಮತಿ ಸಾಲುಮರದ ತಿಮ್ಮಕ್ಕರವರಿಗೆ ರಾಷ್ಟ್ರಪತಿ ಪದ್ಮಶ್ರೀ ಪುರಸ್ಕಾರವನ್ನು ಪ್ರದಾನ ಮಾಡಿದ್ದಾರೆ. 107 ನೇ ವಯಸ್ಸಿನ ಕರ್ನಾಟಕದ ಶ್ರೀಮತಿ ತಿಮ್ಮಕ್ಕರವರು ಒಬ್ಬ ಪರಿಸರವಾದಿ ಹಾಗೂ ತನ್ನ ಹಳ್ಳಿಯಾದ ಹುಲಿಕಲ್‍ನಿಂದ ಕುದೂರುವರೆಗಿನ 4 ಕಿ.ಮೀ ಹೆದ್ದಾರಿಯ ಉದ್ದಗಲಕ್ಕೂ ಆಲದ ಮರಗಳನ್ನು ನೆಟ್ಟು ಹೆಸರುವಾಸಿಯಾಗಿದ್ದಾರೆ.

    ಪರಿಸರದ ಮೇಲೆ ತಮಗಿರುವ ಪ್ರೀತಿಯಿಂದ ರಸ್ತೆ ಬದಿಗಳಲ್ಲಿ ಮರಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ನೀರುಣಿಸಿ ಪೋಷಿಸಿ ತಿಮ್ಮಕ್ಕನವರು ವೃಕ್ಷಮಾತೆಯಾದವರು. ಸಾಲುಮರದ ತಿಮ್ಮಕ್ಕ ಮೂಲಕ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನವರು. ಮಕ್ಕಳು ಇಲ್ಲವೆನ್ನುವ ಕಾರಣಕ್ಕೆ ರಸ್ತೆ ಬದಿಯ ಆಲದ ಮರಗಳನ್ನೇ ತಮ್ಮ ಮಕ್ಕಳೆಂದು ಭಾವಿಸಿ ಬೆಳೆಸಿ, ಪೋಷಿಸಿ ಪರಿಸರ ಉಳಿಸಿ ಎಂದು ಸಾರಿದ ವೃಕ್ಷಮಾತೆ. ಇದೇ ಕಾರಣಕ್ಕೆ ಅವರು ಸಾಲುಮರದ ತಿಮ್ಮಕ್ಕ ಎಂದು ಖ್ಯಾತಿ ಪಡೆದಿದ್ದಾರೆ.

    ಸಾಲು ಮರದ ತಿಮ್ಮಕ್ಕನವರು ನೆಟ್ಟ ಮರಗಳೆಲ್ಲವೂ ಕುದೂರಿನಿಂದ ಹುಲಿಕಲ್‍ನ ರಾಜ್ಯ ಹೆದ್ದಾರಿಯಲ್ಲಿ ಇಂದಿಗೂ ಇವೆ. ಈಗ ಇವುಗಳನ್ನು ಬೆಳೆಸುವ ಜವಾಬ್ದಾರಿಯನ್ನು ಕರ್ನಾಟಕ ಸರ್ಕಾರ ವಹಿಸಿಕೊಂಡಿದೆ. ಆದ್ರೆ ಇಳಿಯ ವಯಸಿನಲ್ಲೂ ತಿಮ್ಮಕ್ಕ ಅವರು ಮಾತ್ರ ಪರಿಸರ ರಕ್ಷಣೆ, ಕಾಳಜಿಯನ್ನು ಮರೆತಿಲ್ಲ. ಸ್ವಾರ್ಥವಿಲ್ಲದೆ ಪರಿಸರಕ್ಕಾಗಿ ಸೇವೆ ಸಲ್ಲಿಸಿದ ತಿಮ್ಮಕ್ಕ ಅವರ ಕಾರ್ಯವನ್ನು ಮೆಚ್ಚಿ ಈಗಾಗಲೇ ಹಲವು ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿಗಳು ಲಭಿಸಿದೆ. ಬಿಬಿಸಿ 2016 ರಲ್ಲಿ ಜಗತ್ತಿನ ಅತಿ ಪ್ರಭಾವಿ ಮಹಿಳೆಯರ ಪಟ್ಟಿಯಲ್ಲಿ ಕೂಡ ಸಾಲು ಮರದ ತಿಮ್ಮಕ್ಕ ಅವರು ಸ್ಥಾನ ಪಡೆದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv