Tag: Pahalgam Terrorist Attack

  • ಕದನ ವಿರಾಮ ಉಲ್ಲಂಘನೆ: ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ – ಪ್ರಹ್ಲಾದ್ ಜೋಶಿ

    ಕದನ ವಿರಾಮ ಉಲ್ಲಂಘನೆ: ಪಾಕ್‌ನ ಇಬ್ಬಗೆ ನೀತಿಗೆ ಭಾರತೀಯ ಸೇನೆ ಪ್ರತ್ಯುತ್ತರ – ಪ್ರಹ್ಲಾದ್ ಜೋಶಿ

    ಹುಬ್ಬಳ್ಳಿ: ಕದನ ವಿರಾಮ ಘೋಷಣೆಯಾದ ಮೇಲೆಯೂ ಪಾಕಿಸ್ತಾನ ದಾಳಿ ಮುಂದುವರೆಸಿ ಇಬ್ಬಗೆ ನೀತಿ ಪ್ರದರ್ಶಿಸಿದ್ದು, ಭಾರತೀಯ ಸೇನೆ (Indian Army) ಇದಕ್ಕೆ ಪ್ರತ್ಯುತ್ತರ ಕೊಡುತ್ತದೆ. ಪಾಕ್ ವಿರುದ್ಧದ ದಾಳಿಗೆ ಕೇಂದ್ರ ಸರ್ಕಾರ ಸೇನೆಗೆ ಮುಕ್ತ ಅಧಿಕಾರ, ಸ್ವಾತಂತ್ರ‍್ಯ ನೀಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ತಿಳಿಸಿದರು.

    ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನ ಯಾವತ್ತೂ ದ್ವಂದ್ವ ನಿಲುವು ಮತ್ತು ಇಬ್ಬಗೆ ನೀತಿ ಅನುಸರಿಸುವಲ್ಲಿ ಎತ್ತಿದ ಕೈ ಎಂಬುದು ಗೊತ್ತಿರುವ ವಿಷಯ. ಅಲ್ಲದೇ, ಅಲ್ಲಿನ ಮಿಲಿಟರಿ ಪಡೆ ಚುನಾಯಿತ ಸರ್ಕಾರದ ಮಾತು ಕೇಳುವುದಿಲ್ಲ ಎಂಬುದು ಈಗ ಮತ್ತೊಮ್ಮೆ ಸಾಬೀತಾಗಿದೆ ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ:`ಆಪರೇಷನ್ ಸಿಂಧೂರ’ ಭಾರತದ ರಾಜಕೀಯ, ಸಾಮಾಜಿಕ, ಮಿಲಿಟರಿ ಶಕ್ತಿಯ ಬಲ – ರಾಜನಾಥ್ ಸಿಂಗ್

    ಪಹಲ್ಗಾಮ್ (Pahalgam) ಭಯೋತ್ಪಾದಕ ದಾಳಿಯ ನಂತರ ಗುಳ್ಳೇನರಿ ಬುದ್ಧಿಯ ಪಾಕಿಸ್ತಾನಕ್ಕೆ ಪಾಠ ಕಲಿಸಲು ಭಾರತೀಯ ಸೇನೆಗೆ ನಮ್ಮ ಸರ್ಕಾರ ಮುಕ್ತ ಅವಕಾಶ ನೀಡಿದೆ. ಅದರಂತೆ ಭಾರತೀಯ ಸೇನೆ ಪಾಕಿಸ್ತಾನಕ್ಕೆ ತೀಕ್ಷ್ಣ ಪ್ರತಿಕ್ರಿಯೆ, ಪ್ರತೀಕಾರದಲ್ಲಿ ತೊಡಗಿದೆ. ಬಹುದೊಡ್ಡ ಸಂಖ್ಯೆಯಲ್ಲಿ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿದೆ. ಭಾರತೀಯ ಸೇನೆ ಮೊದಲ ದಿನವೇ ಪಾಕಿಸ್ತಾನದ 9ಕ್ಕಿಂತ ಹೆಚ್ಚು ಭಯೋತ್ಪಾದಕರ ನೆಲೆಗಳನ್ನು ನಾಶಪಡಿಸಿದೆ. ಈ ದಾಳಿಯಿಂದಾಗಿ ದೊಡ್ಡ ಸಂಖ್ಯೆಯಲ್ಲಿ ಭಯೋತ್ಪಾದಕರು ಮತ್ತು ಭಯೋತ್ಪಾದಕ ಕುಟುಂಬಗಳು ಬಲಿಯಾಗಿವೆ. ಸಾಕಷ್ಟು ಭಯೋತ್ಪಾದಕ ಅಡಗುತಾಣಗಳು ಛಿದ್ರವಾಗಿವೆ. ಪ್ರಮುಖ ಉಗ್ರರು ಹತರಾಗಿದ್ದಾರೆ ಎಂದು ತಿಳಿಸಿದರು.

    ಯುದ್ಧವಾಗಿ ಪರಿಗಣಿಸುವ ಕಠಿಣ ನಿಲುವು: ದೇಶದಲ್ಲಿ ಭಯೋತ್ಪಾದನೆ ಸಂಪೂರ್ಣ ನಿರ್ಮೂಲನೆಗೆ ಪಣ ತೊಟ್ಟ ಕೇಂದ್ರ ಸರ್ಕಾರ ಇದೇ ಮೊದಲ ಬಾರಿಗೆ ಅತ್ಯಂತ ಕಠೋರ ನಿಲುವು ತೆಗೆದುಕೊಂಡಿದೆ. ಪಾಕ್ ಕದನ ವಿರಾಮಕ್ಕೂ ಮೊದಲೇ ಭಯೋತ್ಪಾದನೆಯನ್ನು ಯುದ್ಧವಾಗಿ ಪರಿಗಣಿಸುವಂತಹ ಅಭೂತಪೂರ್ವ ನಿರ್ಣಯ ಕೈಗೊಂಡಿದೆ ಎಂದು ಹೇಳಿದರು.

    ಕದನ ವಿರಾಮ ಪ್ರಸ್ತಾಪಿಸಿದ್ದ ಪಾಕ್: ಪಾಕಿಸ್ತಾನದ ಮಿಲಿಟರಿ ಪಡೆಗಳ ನಿರ್ದೇಶಕರು ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಿಗೆ ಫೋನ್ ಮಾಡಿ ಕದನ ವಿರಾಮಕ್ಕೆ ವಿನಂತಿ ಮಾಡಿದ್ದರು. ಆದರೆ ಅದನ್ನು ಈಗ ಉಲ್ಲಂಘಿಸಿದ್ದಾರೆ. ಹೀಗಾಗಿ ಭಯೋತ್ಪಾದಕರು ಮತ್ತು ಭಯೋತ್ಪಾದಕ ಸಂಘಟನೆಗಳನ್ನು ಪೋಷಿಸಿಕೊಂಡು ಬಂದ ಪಾಕ್‌ಗೆ ಭಾರತೀಯ ಸೇನೆ ಪ್ರತ್ಯುತ್ತರ ಕೊಡುತ್ತದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ ಭಯೋತ್ಪಾದನೆ ನಿಗ್ರಹಿಸಲಾಗಿದೆ. 1980ರ ನಂತರ ಪಹಲ್ಗಾಮ್‌ಗಿಂತ ದೊಡ್ಡ ಪ್ರಮಾಣದಲ್ಲಿ ಭಯೋತ್ಪಾದನಾ ಚಟುವಟಿಕೆ ನಡೆಯುತ್ತಿದ್ದವು. ಆದರೆ, ಈಗ ಅಂಥದ್ದಕ್ಕೆಲ್ಲ ಕಡಿವಾಣ ಹಾಕಲಾಗಿದೆ. ಹಿಂದೆಲ್ಲಾ ದೊಡ್ಡ ಪ್ರಮಾಣದ ಭಯೋತ್ಪಾದನೆ ನಡೆದಾಗಲೂ ಸೌಮ್ಯ ಪ್ರತಿಕ್ರಿಯೆ ನೀಡುತ್ತಿದ್ದ ಭಾರತ ಇದೇ ಮೊದಲ ಬಾರಿ ಪಾಕ್‌ಗೆ ನುಗ್ಗಿ ಹೊಡೆಯುತ್ತಿದ್ದೇವೆ ಎಂದರು.

    ಇಡೀ ದೇಶ ಒಂದಾಗಿ ಹೋರಾಡುತ್ತಿದೆ: ಪಹಲ್ಗಾಮ್ ದಾಳಿಯ ನಂತರ ಇದೇ ಮೊದಲ ಬಾರಿ ಭಯೋತ್ಪಾದನೆ ವಿರುದ್ಧ ಇಡೀ ದೇಶವೇ ಒಂದಾಗಿ ಹೋರಾಡುತ್ತಿದೆ. ಭಾರತೀಯ ಸೇನೆ ಅತ್ಯಂತ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ಪ್ರತೀಕಾರದ ದಾಳಿಯಲ್ಲಿ ಕಂದಹಾರ ಪ್ರಕರಣದಲ್ಲಿದ್ದವರು ಮತ್ತು ಪ್ರಮುಖ ಉಗ್ರರು ಸೇರಿದಂತೆ ಅವರ ಕುಟುಂಬದವರು ಹತರಾಗಿದ್ದಾರೆ.

    ಭಾರತ ಶಾಂತಿಪ್ರಿಯ ರಾಷ್ಟ್ರ. ಭಾರತೀಯರು ಯಾವತ್ತೂ ಶಾಂತಿಪ್ರಿಯರೇ, ನಾವಾಗಿಯೇ ಯಾವತ್ತೂ ಯಾರ ಮೇಲೂ ದಂಡೆತ್ತಿ ಹೋಗುವುದಿಲ್ಲ. ಆದರೆ, ನಮ್ಮ ಮೇಲೆ ಯಾರಾದರೂ ಬಂದರೆ ಸುಮ್ಮನೆ ಬಿಡುವ ಮಾತೇ ಇಲ್ಲ. ಭಾರತ-ಭಾರತೀಯರಿಗೆ ಅಂತದ್ದೊAದು ಶಕ್ತಿಯಿದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.ಇದನ್ನೂ ಓದಿ: ಪಾಕ್‌ ಕದನ ವಿರಾಮ ಉಲ್ಲಂಘಿಸಿದ್ರೆ ಪ್ರತಿದಾಳಿ ನಡೆಸಿ – ಕಮಾಂಡರ್‌ಗಳಿಗೆ ಭಾರತೀಯ ಸೇನೆ ಪೂರ್ಣ ಅಧಿಕಾರ

  • ದೇಶದಲ್ಲಿ ಯುದ್ಧ ಭೀತಿ – ಕರ್ನಾಟಕದ ಪೊಲೀಸರಿಗೆ ರಜೆ ರದ್ದು: ಪರಮೇಶ್ವರ್‌

    ದೇಶದಲ್ಲಿ ಯುದ್ಧ ಭೀತಿ – ಕರ್ನಾಟಕದ ಪೊಲೀಸರಿಗೆ ರಜೆ ರದ್ದು: ಪರಮೇಶ್ವರ್‌

    ಬೆಂಗಳೂರು: ಭಾರತ-ಪಾಕಿಸ್ತಾನ (India – Pakistan) ನಡುವೆ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ಕಾರಣ, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ಪೊಲೀಸರಿಗೆ ರಜೆ ಕೊಡುವುದಿಲ್ಲ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ್‌ (G Parameshwar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಯುದ್ದ ಭೀತಿ ಇದೆ. ಗಡಿ ಭಾಗದಲಲ್ಲಿ ಚಟುವಟಿಕೆಗಳು ನಡೆಯುತ್ತಿದೆ. ಉಗ್ರರನ್ನು ನಮ್ಮ ಸೇನೆ ಸದೆಬಡಿಯುತ್ತಿದೆ. ಇಂದಿನ ಪರಿಸ್ಥಿತಿ ತೀವ್ರ ಆದ್ರೆ, ಯುದ್ಧ ಆಗಬಹುದು. ಹೀಗಾಗಿ ಕೇಂದ್ರ ಎಲ್ಲಾ ರಾಜ್ಯಗಳಿಗೆ ಎಚ್ಚರ ವಹಿಸುವಂತೆ ಸೂಚನೆ ಕೊಟ್ಟಿದೆ. ಈ ಹಿನ್ನೆಲೆ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಿದ್ದೇವೆ. ಬೇರೆ ಯಾವುದೇ ರೀತಿಯ ಚಟುವಟಿಕೆಗಳ ಬಗ್ಗೆ ಎಚ್ಚರ ವಹಿಸುವಂತೆ ಪೊಲೀಸ್‌ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

    ಒಂದು ವೇಳೆ ಯುದ್ಧದ ಸಮಯ ಬಂದರೆ ನೀರು, ಆಹಾರ ಪದಾರ್ಥ, ಅಗತ್ಯ ವಸ್ತುಗಳ ಸಂಗ್ರಹದ ಬಗ್ಗೆ ಕ್ರಮಕ್ಕೆ ತಯಾರಿ ಮಡೆಯುತ್ತದೆ. ಈ ಬಗ್ಗೆ ಸಿಎಂ ಜೊತೆಗೆ ಸಭೆ ನಡೆಸಿ ಚರ್ಚಿಸುತ್ತೇವೆ. ಮುಂದೆ ಕೇಂದ್ರದಿಂದ ಬರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುತ್ತೇವೆ. ದೇಶದಲ್ಲಿ ಈ ಪರಿಸ್ಥಿತಿ ಇರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ ನಮ್ಮ ರಾಜ್ಯದ ಪೊಲೀಸರಿಗೆ ರಜೆಗಳನ್ನು ಮಂಜೂರು ಮಾಡುವುದಿಲ್ಲ. ಕೇಂದ್ರ ಸರ್ಕಾರ ಎಲ್ಲವೂ ಸರಿಯಿದೆ ಎಂದು ಸೂಚನೆ ಕೊಡುವರೆಗೂ ನಮ್ಮ ಪೊಲೀಸರಿಗೆ ರಜೆ ಕೊಡಲ್ಲ ಎಂದು ಮಾಹಿತಿ ನೀಡಿದರು.

    ಅಲ್ಲದೇ ಕರಾವಳಿ ಭಾಗದಲ್ಲಿ ಪೊಲೀಸರು ಮತ್ತಷ್ಟು ಪರಿಣಾಮವಾಗಿ ಕೆಲಸ ಮಾಡಬೇಕು. ಅಲ್ಲಿ ಕೂಡ ಭದ್ರತೆ ನೀಡಲಾಗಿದೆ. ಕೋಸ್ಟಲ್ ಭಾಗದಲ್ಲಿ ನಮ್ಮ ಅಧಿಕಾರದಲ್ಲಿರೋ ಕಡೆ ಭದ್ರತೆ ಕೊಡ್ತೀವಿ, ನೌಕಾಪಡೆ, ಅಂತಾರಾಷ್ಟ್ರೀಯ ಗಡಿಯಲ್ಲಿ ಎಲ್ಲ ಕಡೆಯೂ ಭದ್ರತೆ ಹೆಚ್ಚಿಸಲಾಗಿದೆ. ಕೇಂದ್ರ ಏನಾದ್ರು ಬಾರ್ಡರ್ ನಲ್ಲಿ ಸೆಕ್ಯುರಿಟಿ ಕೊಡೋದಾದರೆ ಕೇಂದ್ರ ನಮಗೆ ಸೂಚನೆ ಕೊಡುತ್ತದೆ. ಅದನ್ನ ನಾವು ಪಾಲನೆ ಮಾಡ್ತೀವಿ ಎಂದು ಹೇಳಿದರು.

  • ಆಸ್ಪತ್ರೆ, ಮೂಲಸೌಕರ್ಯ ಗುರಿಯಾಗಿಸಿ ಪಾಕ್‌ ಮಿಸೈಲ್‌ ದಾಳಿ, ತಕ್ಕ ಉತ್ತರ ಕೊಟ್ಟಿದ್ದೇವೆ: ವ್ಯೋಮಿಕಾ ಸಿಂಗ್

    ಆಸ್ಪತ್ರೆ, ಮೂಲಸೌಕರ್ಯ ಗುರಿಯಾಗಿಸಿ ಪಾಕ್‌ ಮಿಸೈಲ್‌ ದಾಳಿ, ತಕ್ಕ ಉತ್ತರ ಕೊಟ್ಟಿದ್ದೇವೆ: ವ್ಯೋಮಿಕಾ ಸಿಂಗ್

    ನವದೆಹಲಿ: ಪಾಪಿ ಪಾಕಿಸ್ತಾನ (Pakistan) ಗಡಿ ಮೀರಿ ಭಾರತದ ಮೇಲೆ ದಾಳಿ ಮಾಡುತ್ತಿದೆ. ಶೆಲ್ ದಾಳಿ ನಡೆಸಿ ಅಮಾಯಕರನ್ನ ಗುರಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಾದ ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ, ಹರಿಯಾಣ ಹಾಗೂ ಹಿಮಾಚಲ ಪ್ರದೇಶದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ. ಜಮ್ಮು-ಕಾಶ್ಮೀರದಲ್ಲಿ (Jammu And Kashmir) ಬೆಳಗ್ಗಿನವರೆಗೂ ಬ್ಲಾಕ್‌ಔಟ್ ಘೋಷಿಸಲಾಗಿತ್ತು.

    ಮೂಲಸೌಕರ್ಯಗಳಿಗೆ ಹಾನಿ:
    ಇಂದು ರಕ್ಷಣಾ ಸಚಿವಾಲಯ ನಡೆಸಿದ ಮಹತ್ವದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಂಗ್‌ ಕಮಾಂಡರ್‌ ವ್ಯೂಮಿಕಾ ಸಿಂಗ್‌ (Vyomika Singh), ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ಶ್ರೀನಗರ, ಅವರಂತಿಪುರ ಹಾಗೂ ಉಧಂಪುರದಲ್ಲಿರುವ ಆಸ್ಪತ್ರೆ, ಶಾಲೆ ಇತರ ಮೂಲ ಸೌಕರ್ಯಗಳ ಮೇಲೆ ದಾಳಿ ಮಾಡಿದೆ ಎಂದು ತಿಳಿಸಿದರು.

    ಅಲ್ಲದೇ ದಾಳಿ ನಡೆಸಲು ತನ್ನ ಸೈನ್ಯವನ್ನು ಮುಂದಕ್ಕೆ ಸಾಗಿಸುತ್ತಿದೆ, ಇದು ಪರಿಸ್ಥಿತಿಯನ್ನ ಮತ್ತಷ್ಟು ಉಲ್ಬಣಗೊಳಿಸುವ ಆಕ್ರಮಣಕಾರಿ ಉದ್ದೇಶವನ್ನ ಸೂಚಿಸುತ್ತದೆ. ಭಾರತೀಯ ಸಶಸ್ತ್ರ ಪಡೆಗಳು ಹೆಚ್ಚಿನ ಕಾರ್ಯಾಚರಣೆಯ ಸನ್ನದ್ಧತೆಯಲ್ಲಿವೆ. ಎಲ್ಲಾ ಪ್ರತಿಕೂಲ ಕ್ರಮಗಳನ್ನು ಪರಿಣಾಮಕಾರಿಯಾಗಿ ಎದುರಿಸಲಾಗಿದೆ ಮತ್ತು ದಿಟ್ಟ ಉತ್ತರ ಸಹ ನೀಡಲಾಗಿದೆ. ಪಾಕಿಸ್ತಾನ ಮತ್ತೂ ದಾಳಿಗೆ ಪ್ರೈತ್ನಿಸಿದ್ರೆ ನಮ್ಮ ಸೇನೆ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.

    ಪಾಕ್‌ ವಾಯುನೆಲೆಗಳು ಛಿದ್ರ:
    ಇನ್ನೂ ಭಾರತ ನಡೆಸಿದ ವಾಯುದಾಳಿಯಲ್ಲಿ ಸಿಯಾಲ್‌ಕೋಟ್, ಪಸ್ರೂರ್ ರಾಡಾರ್ ಸೈಟ್, ರಹೀಮ್ ಯಾರ್ ಖಾನ್, ಮುರಿದ್‌, ರಫೀಕ್, ಚುನಿಯನ್, ಚಕ್ಲಾಲಾ, ಸುಕ್ಕೂರ್ ಮೊದಲಾದ ಪಾಕಿಸ್ತಾನ ವಾಯುನೆಲೆಗಳನ್ನು ಧ್ವಂಸಗೊಳಿಸಿದೆ. ಜೊತೆಗೆ ಭಾರತದ ಮೇಲೆ ಪದೇ ಪದೇ ದಾಳಿಗೆ ಯತ್ನಿಸುತ್ತಿದ್ದ ಡ್ರೋನ್‌ ಲಾಂಚ್‌ಪ್ಯಾಡನ್ನೇ ಉಡೀಸ್‌ ಮಾಡಿದೆ ಎಂದು ಫೋಟೋ ಮತ್ತು ವಿಡಿಯೋ ಸಮೇತ ವಿವರಿಸಿದರು.

    ಅಮೃತಸರದಲ್ಲಿ ಪಾಕ್‌ ಡ್ರೋನ್‌ ಉಡೀಸ್‌:
    ಭಾರತೀಯ ಸೇನೆಯು ಪಾಕಿಸ್ತಾನದ ಡ್ರೋನ್‌ಗಳನ್ನು ಅಮೃತಸರದ ಖಾಸಾ ಕಂಟೋನ್ಮೆಂಟ್‌ನಲ್ಲಿ ಹೊಡೆದುರುಳಿಸಿದೆ. ಭಾರತದ ಸಾರ್ವಭೌಮತ್ವವನ್ನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಪಾಕಿಸ್ತಾನವು ಡ್ರೋನ್ ದಾಳಿಗಳ ಮೂಲಕ ಗಡಿಗಳಲ್ಲಿ ತೊಂದರೆ ಸೃಷ್ಟಿಸುತ್ತಿದೆ ಎಂದು ಭಾರತೀಯ ಸೇನೆ ಹೇಳಿದೆ. ಶನಿವಾರ ಮುಂಜಾನೆ 5 ಗಂಟೆಗೆ ಖಾಸಾ ಕಂಟೋನ್ಮೆಂಟ್ ಬಳಿ ಹಾರುತ್ತಿದ್ದ ಹಲವು ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ.

    ಜೆ&ಕೆ ಗುರಿಯಾಗಿಸಿ ಡ್ರೋನ್ ದಾಳಿ
    ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿಸಿ ಪಾಕಿಸ್ತಾನ ಶನಿವಾರವೂ ಹಲವಾರು ಡ್ರೋನ್ ದಾಳಿಗಳನ್ನು ನಡೆಸಿದೆ. ಶನಿವಾರ ಬೆಳಗಿನ ಜಾವ ಪಾಕಿಸ್ತಾನವು ಜಮ್ಮು ವಾಯುನೆಲೆ ಮತ್ತು ಉಧಂಪುರ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ, ಅಲ್ಲದೇ ಜಮ್ಮುವಿನ ಪ್ರಸಿದ್ಧ ಶಂಭು ದೇವಾಲಯದ ಮೇಲೂ ಕ್ಷಿಪಣಿ ದಾಳಿಗೆ ಪಾಕ್‌ ಯತ್ನಿಸಿದೆ. ಆದ್ರೆ ಭಾರತ ಈ ದಾಳಿಯನ್ನು ವಿಫಲಗೊಳಿಸಿದೆ. ಉಧಂಪುರದಲ್ಲಿ ಪಾಕಿಸ್ತಾನದ ಕ್ಷಿಪಣಿ ಬಿದ್ದಿದೆ. ಅದರ ಅವಶೇಷಗಳನ್ನು ಹೊರತೆಗೆಯಲಾಗಿದೆ.

  • ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ – ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌

    ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ – ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌

    ಇಸ್ಲಾಮಾಬಾದ್‌: ಉಗ್ರ ತಾಣಗಳ ಮೇಲೆ ಭಾರತ ನಡೆಸಿದ ದಾಳಿಯಿಂದ ಪಾಕ್‌ಗೆ ನಡುಕ ಹುಟ್ಟಿರುವುದು ಮತ್ತೆ ಸ್ಪಷ್ಟವಾದಂತೆ ಕಾಣ್ತಿದೆ. ಹೀಗಾಗಿ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ (Shahbaz Sharif) ಭಾರತದ ವಿರುದ್ಧ ಕಟು ಹೇಳಿಕೆಗಳನ್ನ ನೀಡಿದ್ದಾರೆ.

    ಬುಧವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಷರೀಫ್‌, ಭಾರತ (India) ತೀವ್ರ ಪರಿಣಾಮಗಳನ್ನ ಎದುರಿಸಬೇಕಾಗುತ್ತದೆ, ಅವರು ಮಾಡಿದ ತಪ್ಪಿಗೆ ಭಾರೀ ಬೆಲೆ ತೆರಬೇಕಾಗುತ್ತದೆ. ಪ್ರತಿ ರಕ್ತದ ಹನಿಗೂ ಸೇಡು ತೀರಿಸಿಕೊಳ್ತೀವಿ ಎಂದರಲ್ಲದೇ ನಾವು ದೇಶವನ್ನು ರಕ್ಷಿಸಲು ನಮ್ಮ ಕೊನೆಯುಸಿರು ಇರುವವರೆಗೂ ಹೋರಾಡುತ್ತೇವೆ ಎಂದಿದ್ದಾರೆ.

    ದಾಳಿ ಒಪ್ಪಿಕೊಳ್ಳದ ಪಾಕ್‌:
    ಅಲ್ಲದೇ ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್‌ ದಾಳಿ ಕುರಿತು ಮತ್ತೆ ಪ್ರಸ್ತಾಪಿಸಿದ ಷರೀಫ್‌, ಪಹಲ್ಗಾಮ್‌ ದಾಳಿ (Pahalgam Terrorist Attack Attack) ನಡೆದಾಗ ನಾನು ಟರ್ಕಿಗೆ ಭೇಟಿ ನೀಡಿದ್ದೆ. ಈ ದಾಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಆಗಲೇ ನಾವು ಈ ಬಗ್ಗೆ ಸ್ಪಷ್ಟನೆ ನೀಡಿದ್ದೇವೆ, ತನಿಖೆಗೆ ಸಹಕರಿಸಲೂ ಸಿದ್ಧರಿದ್ದೇವೆ ಎಂದು ಹೇಳಿದ್ದೆವು. ಆದ್ರೆ ಭಾರತ ನಮ್ಮ ಸ್ಪಷ್ಟನೆಯನ್ನು‌ ಸ್ವೀಕರಿಸದೇ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.

    ಇದಕ್ಕೂ ಮುನ್ನ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಮಾತನಾಡುತ್ತಾ, ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ. ಭಾರತದ ದಾಳಿ ಅಚ್ಚರಿ ಮೂಡಿಸಿತು. ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಭಾರತೀಯ ವಿಮಾನಗಳು ತಮ್ಮ ದೇಶವನ್ನು ಪ್ರವೇಶಿಸಿದರೆ ಸಮುದ್ರಕ್ಕೆ ಎಸೆಯಲು ಪಾಕಿಸ್ತಾನ ವಾಯುಪಡೆ ಸಿದ್ಧವಾಗಿದೆ ಮತ್ತು ಅದಕ್ಕಾಗಿ ಕಾಯುತ್ತಿದೆ. ಪಾಕಿಸ್ತಾನವು 5 ರಫೇಲ್ ಜೆಟ್‌ಗಳು ಮತ್ತು 2 ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಹಸಿಹಸಿ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದರು.

    ಏನಿದು ʻಆಪರೇಷನ್‌ ಸಿಂಧೂರʼ?
    ಕಳೆದ ಏಪ್ರಿಲ್‌ 22ರಂದು ಕಾಶ್ಮೀರದ ಪೆಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಾಲ್ವರು ಉಗ್ರರು ಓರ್ವ ವಿದೇಶಿ ಪ್ರಜೆ ಸೇರಿದಂತೆ 26 ಪ್ರವಾಸಿಗರನ್ನ ಗುಂಡಿಕ್ಕಿ ಕೊಂದಿದ್ದರು. ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಪಣ ತೊಟ್ಟಿದ್ದ ಭಾರತ ಮಂಗಳವಾರ ತಡರಾತ್ರಿ 1:44 ಗಂಟೆ ಸುಮಾರಿಗೆ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ಪಾಕ್‌ ಸೇನೆಯಾಗಲಿ ಅಥವಾ ನಾಗರಿಕರ ಮೇಲಾಗಲಿ ದಾಳಿ ಮಾಡದೇ ಉಗ್ರರ ನೆಲೆಗಳನ್ನು ಮಾತ್ರವೇ ಗುರಿಯಾಗಿಸಿ ದಾಳಿ ನಡೆಸಿದೆ.

    ಮೋಸ್ಟ್‌ವಾಂಟೆಡ್‌ಗಳನ್ನ ತಯಾರು ಮಾಡ್ತಿದ್ದ ನೆಲೆಗಳು ಧ್ವಂಸ:
    ಭಾರತ ಧ್ವಂಸ ಮಾಡಿರುವ ಈ ಉಗ್ರರ ನೆಲೆಗಳು ಮೋಸ್ಟ್‌ ಡೇಂಜರಸ್‌ ತಾಣಗಳು ಎಂದೇ ಗುರುತಿಸಿಕೊಂಡಿದ್ದು, ಇಡೀ ವಿಶ್ವಕ್ಕೆ ಕಂಟಕವಾಗಿದ್ದವು. ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಇಲ್ಲಿ ಅಡಗಿಸಿಡಲಾಗಿತ್ತು. ಜೊತೆಗೆ ವಿಶ್ವಾದ್ಯಂತ ವಿವಿಧೆಡೆಗೆ ಕಳುಹಿಸಲು ಉಗ್ರರಿಗೆ ಇಲ್ಲಿ ತರಬೇತಿ ನೀಡಲಾಗುತ್ತಿತ್ತು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

  • Operation Sindoor | ಪಾಕ್ ಉಗ್ರ ತಾಣಗಳ ಮೇಲೆ ಏರ್‌ಸ್ಟ್ರೈಕ್‌ – ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ

    Operation Sindoor | ಪಾಕ್ ಉಗ್ರ ತಾಣಗಳ ಮೇಲೆ ಏರ್‌ಸ್ಟ್ರೈಕ್‌ – ವಿಡಿಯೋ ಹಂಚಿಕೊಂಡ ಭಾರತೀಯ ಸೇನೆ

    ನವದೆಹಲಿ: ಪಾಕಿಸ್ತಾನ (Pakistan) ಹಾಗೂ ಪಾಕ್ ಆಕ್ರಮಿತ ಕಾಶ್ಮೀರದ 9 ಉಗ್ರರ ನೆಲೆಗಳ ಮೇಲೆ ನಡೆದ `ಆಪರೇಷನ್ ಸಿಂಧೂರ’ (Operation Sindoor) ವಾಯುದಾಳಿಯ ವಿಡಿಯೋವನ್ನು ಭಾರತೀಯ ಸೇನೆ ಹಂಚಿಕೊಂಡಿದೆ.

    ಏ.22ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕರ ಉಗ್ರರ ದಾಳಿಯ ಪ್ರತೀಕಾರವಾಗಿ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಭಾರತೀಯ ಸೇನೆ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ 70ಕ್ಕೂ ಅಧಿಕ ಭಯೋತ್ಪಾದಕರು ಸಾವನ್ನಪ್ಪಿರುವುದಾಗಿ ಮೂಲಗಳು ತಿಳಿಸಿವೆ.ಇದನ್ನೂ ಓದಿ: `ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿದ ಪಾಕ್ – ತುರ್ತು ಪರಿಸ್ಥಿತಿ ಘೋಷಣೆ

    ದಾಳಿಯ ಹಲವು ವಿಡಿಯೋಗಳನ್ನು ಸೇನೆ ಹಂಚಿಕೊಂಡಿದ್ದು, ವಾಯುದಾಳಿಗೆ ತತ್ತರಿಸಿದ ಪಾಕ್‌ನ ಜೈಶ್-ಎ-ಮೊಹಮ್ಮದ್ (ಜೆಇಎಂ), ಲಷ್ಕರ್-ಎ-ತೈಬಾ (ಎಲ್‌ಇಟಿ) ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಗುಂಪು ಸೇರಿ 9 ಉಗ್ರರ ನೆಲೆಗಳು ಧ್ವಂಸಗೊಂಡಿವೆ.

    ವಿಡಿಯೋದಲ್ಲಿ ಏನಿದೆ?
    ದಾಳಿ ಪ್ರಾರಂಭವಾದ ಮೊದಲು ಪಿಒಕೆಯ ಕೋಟ್ಲಿಯಲ್ಲಿರುವ ಮರ್ಕಜ್ ಅಬ್ಬಾಸ್ ಭಯೋತ್ಪಾದಕ ಕೇಂದ್ರದ ಧ್ವಂಸ, 25 ನಿಮಿಷಗಳ ದಾಳಿಯ ಮತ್ತೊಂದು ವಿಡಿಯೋದಲ್ಲಿ ನಿಯಂತ್ರಣ ರೇಖೆಯಿಂದ ಸುಮಾರು 30 ಕಿ.ಮೀಟರ್ ದೂರದಲ್ಲಿರುವ ಲಷ್ಕರ್-ಎ-ತೈಬಾ ನೆಲೆ ಕೋಟ್ಲಿಯಲ್ಲಿರುವ ಗುಲ್ಪುರ್ ಕೇಂದ್ರದ ನಾಶ, ಅಂತಾರಾಷ್ಟ್ರೀಯ ಗಡಿಯಿಂದ 6 ಕಿ.ಮೀ ದೂರದಲ್ಲಿರುವ ಸಿಯಾಲ್‌ಕೋಟ್‌ನಲ್ಲಿರುವ ಸರ್ಜಲ್ ಕೇಂದ್ರ, ಬಳಿಕ ಪಾಕಿಸ್ತಾನದ ಪಂಜಾಬ್‌ನಲ್ಲಿರುವ ಬಹಾವಲ್ಪುರದಲ್ಲಿರುವ ಜೆಇಎಂ ಮತ್ತು ಮುರಿಡ್ಕೆಯಲ್ಲಿರುವ ಎಲ್‌ಇಟಿಯ ಪ್ರಧಾನ ಕಚೇರಿಗಳ ಮೇಲೆ ದಾಳಿ ನಡೆಸಿರುವುದನ್ನು ತೋರಿಸುತ್ತದೆ.

    ನಂತರ ಅಂತರರಾಷ್ಟ್ರೀಯ ಗಡಿಯಿಂದ ಸುಮಾರು 12 ರಿಂದ 18 ಕಿ.ಮೀ ದೂರದಲ್ಲಿರುವ ಸಿಯಾಲ್‌ಕೋಟ್‌ನಲ್ಲಿರುವ ಮಹಮೂನ ಜಯ ಕೇಂದ್ರ, ತಂಗ್ಧರ್ ಸೆಕ್ಟರ್‌ನ ಎಲ್‌ಒಸಿಯಿಂದ 30 ಕಿ.ಮೀ ದೂರದಲ್ಲಿರುವ ಮತ್ತು ಪ್ರಮುಖ ಎಲ್‌ಇಟಿ ತರಬೇತಿ ಕೇಂದ್ರವಾಗಿದ್ದ ಮುಜಫರಾಬಾದ್‌ನಲ್ಲಿರುವ ಸವಾಯಿ ನಾಲಾ, ಸೈಯದ್ನಾ ಬೇಲಾಲ್ ಹಾಗೂ ಎಲ್‌ಒಸಿಯಿಂದ ಸುಮಾರು 9 ಕಿ.ಮೀ ದೂರದಲ್ಲಿರುವ ಭಿಂಬರ್‌ನಲ್ಲಿರುವ ಬರ್ನಾಲಾ ಕೇಂದ್ರವನ್ನು ನಾಶಪಡಿಸಿರುವುದನ್ನು ವಿಡಿಯೋ ಮೂಲಕ ಭಾರತೀಯ ಸೇನೆ ಹಂಚಿಕೊಂಡಿದೆ.ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?

  • `ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿದ ಪಾಕ್ – ತುರ್ತು ಪರಿಸ್ಥಿತಿ ಘೋಷಣೆ

    `ಆಪರೇಷನ್ ಸಿಂಧೂರ’ಕ್ಕೆ ತತ್ತರಿಸಿದ ಪಾಕ್ – ತುರ್ತು ಪರಿಸ್ಥಿತಿ ಘೋಷಣೆ

    ಇಸ್ಲಾಮಾಬಾದ್: ಭಾರತೀಯ ಸೇನೆ (Indian Army) ನಡೆಸಿದ `ಆಪರೇಷನ್ ಸಿಂಧೂರ’ದಿಂದಾಗಿ ಪಾಕ್ ತತ್ತರಿಸಿ ಹೋಗಿದ್ದು, ಪಾಕಿಸ್ತಾನದಲ್ಲಿ (Pakistan) ಸದ್ಯ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ.

    ಏ.22ರಂದು ಪಹಲ್ಗಾಮ್‌ನ (Pahalgam Terrorist Attack) ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕರ ಉಗ್ರರ ದಾಳಿಯಲ್ಲಿ 26 ಜನರು ಪ್ರಾಣತೆತ್ತರು. ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇದರ ಮಧ್ಯೆ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸೇಡು ತೀರಿಸಿಕೊಂಡಿದೆ.ಇದನ್ನೂ ಓದಿ:

    ಭಾರತದ ವಾಯುದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ. ಹೀಗಾಗಿ ಪಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಆದರೆ ಈ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯಿಸಿದ್ದು, ಈ ದಾಳಿಯಲ್ಲಿ ಅಮಾಯಕ ಪಾಕಿಸ್ತಾನಿಗಳ ಜೀವಹಾನಿಯಾಗಿದೆ. ಪಾಕಿಸ್ತಾನಿಗಳ ಆತ್ಮರಕ್ಷಣೆಗಾಗಿ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಇದರ ನಡುವೆ ಪಾಕ್ ಉಗ್ರರ ಸಾವಿನ ಅಂಕಿ-ಸಂಖ್ಯೆಯನ್ನು ಮುಚ್ಚಿಡಲು ಪ್ರಯತ್ನಿಸಿದೆ. ಭಾರತದ ಏರ್‌ಸ್ಟ್ರೈಕ್‌ನಲ್ಲಿ 26 ಜನರು ಸಾವನ್ನಪ್ಪಿದ್ದು, 40 ಜನರಿಗೆ ಗಾಯವಾಗಿದೆ. 6 ಸ್ಥಳಗಳ ಮೇಲೆ ದಾಳಿ ನಡೆದಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.ಇದನ್ನೂ ಓದಿ:

  • ರಾಯಚೂರು | ರೈಲ್ವೇ ಇಲಾಖೆಯಿಂದ ಮಾಕ್ ಡ್ರಿಲ್ – ನಾಗರಿಕರ ರಕ್ಷಣೆಗೆ ಜಾಗೃತಿ

    ರಾಯಚೂರು | ರೈಲ್ವೇ ಇಲಾಖೆಯಿಂದ ಮಾಕ್ ಡ್ರಿಲ್ – ನಾಗರಿಕರ ರಕ್ಷಣೆಗೆ ಜಾಗೃತಿ

    ರಾಯಚೂರು: ಸೌತ್ ಸೆಂಟ್ರಲ್ ರೈಲ್ವೇ ಗುಂತಕಲ್ ವಲಯದಿಂದ ರಾಯಚೂರಿನ (Raichuru) ರೈಲ್ವೇ ನಿಲ್ದಾಣದವರೆಗೆ ಸಿವಿಲ್ ಡಿಫೆನ್ಸ್ ತಂಡದಿಂದ ಮಾಕ್ ಡ್ರಿಲ್ (Mock Drill) ನಡೆಸಲಾಯಿತು. ಯುದ್ಧದ ದಾಳಿ ಸಂದರ್ಭಗಳಲ್ಲಿ ನಾಗರಿಕರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು 30ಕ್ಕೂ ಹೆಚ್ಚು ಜನರ ಸಿವಿಲ್ ಡಿಫೆನ್ಸ್ ತಂಡ ಅಣಕು ಕಾರ್ಯಾಚರಣೆ ಮಾಡಿತು.ಇದನ್ನೂ ಓದಿ: ಆಪರೇಷನ್‌ ಸಿಂಧೂರ | ಉಗ್ರರ ಶವಗಳನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸಿದ ಭಿಕಾರಿಸ್ತಾನ್‌!

    ಲಕ್ಷ್ಮೀ ಬಾಂಬ್, ಸ್ಮೋಕ್ ಬಾಂಬ್‌ಗಳನ್ನು ಬಳಸಿ ದಾಳಿ ವೇಳೆ ಜನ ಹೇಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು? ಅಧಿಕಾರಿಗಳು ಹೇಗೆ ಅಲರ್ಟ್ ಆಗಿರಬೇಕು? ಹಂತ ಹಂತವಾಗಿ ಗಾಯಾಳುಗಳನ್ನು ರಕ್ಷಿಸಿ ಹೇಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಬೇಕು ಎನ್ನುವುದರ ಬಗ್ಗೆ ಜಾಗೃತಿ ಮೂಡಿಸಲಾಯಿತು. ಡಿವಿಜನ್ ಸಿವಿಲ್ ಡಿಫೆನ್ಸ್ ಎಮರ್ಜೆನ್ಸಿ ಆಫಿಸರ್ ಕೆ.ಸುದರ್ಶನ ರೆಡ್ಡಿ ನೇತೃತ್ವದಲ್ಲಿ ಮಾಕ್ ಡ್ರಿಲ್ ನಡೆಸಲಾಯಿತು.

    ರೈಲ್ವೇ ನಿಲ್ದಾಣದಲ್ಲಿ ಯುದ್ಧದ ದಾಳಿ ಸನ್ನಿವೇಶ ಸೃಷ್ಟಿಸಿ ಅಣಕು ಕಾರ್ಯಾಚರಣೆ ಮಾಡಿದ ಸಿಬ್ಬಂದಿ ಜನರು ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದರು. ಬೆಂಕಿ ನಂದಿಸಿ ಅಪಾಯಗಳನ್ನು ತಗ್ಗಿಸುವ ಬಗ್ಗೆ ಮಾಕ್ ಡ್ರಿಲ್ ಮಾಡಲಾಯಿತು. ಗಡಿಯಲ್ಲಿ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ಕೇಂದ್ರದ ಸೂಚನೆ ಮೇರೆಗೆ ರೈಲ್ವೇ ಇಲಾಖೆಯಿಂದ ಕಾಚಗೂಡು, ರಾಯಚೂರು, ಔರಂಗಾಬಾದ್ ಮೂರು ಸ್ಥಳಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.ಇದನ್ನೂ ಓದಿ: ಆಮೀರ್ ಖಾನ್ ನಿವಾಸಕ್ಕೆ ಅಲ್ಲು ಅರ್ಜುನ್ ಭೇಟಿ- ಒಟ್ಟಿಗೆ ಸಿನಿಮಾ ಮಾಡ್ತಾರಾ?

  • ದೇಶದ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಶುರು – `ಆಪರೇಷನ್ ಅಭ್ಯಾಸ್’ ಹೆಸರಲ್ಲಿ ಅಣಕು ಕಾರ್ಯಾಚರಣೆ

    ದೇಶದ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ಶುರು – `ಆಪರೇಷನ್ ಅಭ್ಯಾಸ್’ ಹೆಸರಲ್ಲಿ ಅಣಕು ಕಾರ್ಯಾಚರಣೆ

    ಬೆಂಗಳೂರು: ಕೇಂದ್ರ ಗೃಹ ಸಚಿವಾಯಲದ (Union Home Ministry) ಸೂಚನೆ ಮೇರೆಗೆ ದೇಶದ 244 ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ (Mock Drill)(ಅಣುಕು ಕಾರ್ಯಾಚರಣೆ) ಆರಂಭವಾಗಿದೆ.

    ಬೆಂಗಳೂರಿನ (Bengaluru)35 ಕಡೆಗಳಲ್ಲಿ ಸೈರನ್ ಮೊಳಗಿದ್ದು, ಆಪರೇಷನ್ ಅಭ್ಯಾಸ್ ಹೆಸರಲ್ಲಿ ನಾಗರಿಕ ಅಣುಕು ಪ್ರದರ್ಶನ ಆರಂಭವಾಗಿದೆ. ಗೆಸ್ಟ್ ಹೌಸ್‌ನಲ್ಲಿ ಬೆಂಕಿ ಬಿದ್ದಾಗ ಹೇಗೆ ರಕ್ಷಣೆ ಮಾಡಬೇಕು? ಸಮುದ್ರ ತೀರದಲ್ಲಿ ಯಾವ ರೀತಿ ಕಾರ್ಯಾಚರಣೆ ಇರುತ್ತದೆ? ಸಾರ್ವಜನಿಕರು ಯಾವ ರೀತಿ ವರ್ತಿಸಬೇಕು? ಮಾನಸಿಕ ಸ್ಥೈರ್ಯ ಹೇಗೆ ತುಂಬಬೇಕು? ಎಂಬುದರ ಅಣಕು ಕಾರ್ಯಾಚರಣೆ ನಡೆಯುತ್ತಿದೆ.ಇದನ್ನೂ ಓದಿ: ರಾಷ್ಟ್ರಪತಿ ಭೇಟಿಯಾಗಿ ‘ಆಪರೇಷನ್‌ ಸಿಂಧೂರ’ ಬಗ್ಗೆ ವಿವರಿಸಿದ ಮೋದಿ

    ಬೋಟ್ ರೆಸ್ಕ್ಯೂಗೆ ಸಿವಿಲ್ ಡಿಫೆನ್ಸ್, ಅಗ್ನಿಶಾಮಕ ದಳ ಹಾಗೂ ಆಲ್ ಇಂಡಿಯಾ ವಾಟರ್ ರೆಸ್ಕ್ಯೂ ಟೀಂನಿಂದ ಕಾರ್ಯಾಚರಣೆ ನಡೆಯುತ್ತಿದೆ. ಹಲಸೂರು ಕೆರೆಯಲ್ಲಿ ನಡೆಯುತ್ತಿರುವ ಬೋಟ್ ರೆಸ್ಕ್ಯೂ ನೋಡಲು ಬಂದ ಗೃಹ ಸಚಿವ ಪರಮೇಶ್ವರ್ ಹಾಗೂ ಬಿಜೆಪಿ ಸಂಸದ ಎಂಪಿ ಸುಧಾಕರ್ ಆಗಮಿಸಿದ್ದು, ಅಣುಕು ಕವಾಯತು ವೀಕ್ಷಿಸುತ್ತಿದ್ದಾರೆ.

    ಏ.22ರಂದು ಮಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಪರಿಸ್ಥಿತಿಯಲ್ಲಿ ಉದ್ವಿಗ್ನತೆ ಉಂಟಾಗಿದೆ. ವಿವಿಧ ತುರ್ತು ಪರಿಸ್ಥಿತಿಯಲ್ಲಿ ದೇಶದ ಜನರನ್ನ ಸಿದ್ಧಗೊಳಿಸುವ ಉದ್ದೇಶದಿಂದಾಗಿ ಅಣಕು ಕಾರ್ಯಾಚರಣೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು.

    ಗೃಹ ಸಚಿವಾಲಯದ ಹೇಳಿಕೆಯ ಪ್ರಕಾರ, ನಾಗರಿಕರಿಗೆ ತರಬೇತಿ ನೀಡುವುದು ಈ ಕವಾಯತುಗಳ ಪ್ರಮುಖ ಅಂಶವಾಗಿರುತ್ತದೆ. ವಾಯುದಾಳಿ ಸೈರನ್ ಮತ್ತು ವಿದ್ಯುತ್ ಕಡಿತದ ಸಂದರ್ಭದಲ್ಲಿ ಹೇಗೆ ಪ್ರತಿಕ್ರಿಯಿಸಬೇಕು ಎಂಬುವುದರ ಮೇಲೆ ಈ ಕವಾಯತುಗಳ ಉದ್ದೇಶವಾಗಿರುತ್ತದೆ.ಇದನ್ನೂ ಓದಿ: ಭಾರತದ ವಿರುದ್ಧ ಪ್ರತಿದಾಳಿಗೆ ಪಾಕ್‌ ಕುತಂತ್ರ – ಸೇನೆಗೆ ಪರಮಾಧಿಕಾರ ನೀಡಿದ ಪ್ರಧಾನಿ ಶೆಹಬಾಜ್ ಶರೀಫ್

  • ಯಾವುದೇ ದೋಷವಿಲ್ಲದೆ ತನ್ನ ಗುರಿ ಸಾಧಿಸಿದೆ – ಸೇನೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

    ಯಾವುದೇ ದೋಷವಿಲ್ಲದೆ ತನ್ನ ಗುರಿ ಸಾಧಿಸಿದೆ – ಸೇನೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

    ನವದೆಹಲಿ: ಪಹಲ್ಗಾಮ್ ದಾಳಿಗೆ (Pahalgam Terrorist Attack) ಪ್ರತೀಕಾರವಾಗಿ ಭಾರತೀಯ ಸೇನೆ (Indian Army) ನಡೆಸಿದ `ಆಪರೇಷನ್ ಸಿಂಧೂರ’ ಯಾವುದೇ ದೋಷವಿಲ್ಲದೇ ಗುರಿ ತಲುಪಿದೆ ಎಂದು ಭಾರತೀಯ ಸಶಸ್ತ್ರ ಪಡೆಯನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶ್ಲಾಘಿಸಿದ್ದಾರೆ.

    ಏ.22ರಂದು ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಉಗ್ರರು ನಡೆಸಿದ ಹಿಂದೂಗಳ ನರಮೇಧದಲ್ಲಿ 26 ಜನರನ್ನು ಬಲಿತೆಗೆದುಕೊಂಡಿದ್ದರ ಪ್ರತೀಕಾರವಾಗಿ `ಆಪರೇಷನ್ ಸಿಂಧೂರ’ ಅಡಿಯಲ್ಲಿ ಭಾರತೀಯ ಸೇನೆ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ರಫೇಲ್ ವಿಮಾನಗಳ ಮೂಲಕ ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ.ಇದನ್ನೂ ಓದಿ: ವಾಯುನೆಲೆ ನಿರ್ಬಂಧ – ಮೇ 10ರವರೆಗೆ 165ಕ್ಕೂ ಹೆಚ್ಚು ಇಂಡಿಗೋ ವಿಮಾನ ಬಂದ್

    ದಾಳಿಯ ಬಳಿಕ ಭದ್ರತೆಯ ಕುರಿತು ಸಂಪುಟ ಸಮಿತಿ ಸಭೆ ಆಯೋಜಿಸಲಾಗಿತ್ತು. ಸಭೆಗೂ ಮುನ್ನ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಪ್ರಧಾನಿ ಮೋದಿಯವರನ್ನು ಭೇಟಿಯಾದರು.

    ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಪಾಕಿಸ್ತಾನದ ವಿರುದ್ಧ ನಡೆಸಿದ `ಆಪರೇಷನ್ ಸಿಂಧೂರ’ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು. ಭಾರತೀಯ ಸೇನೆ ಅಂದುಕೊಂಡ ಹಾಗೆ ಯಾವುದೇ ದೋಷಗಳಿಲ್ಲದೇ ಕಾರ್ಯಾಚರಣೆಯ ಗುರಿ ತಲುಪಿದೆ. ಇಡೀ ದೇಶ ಭಾರತೀಯ ಸೇನೆಯೊಂದಿಗಿದೆ ಎಂದು ಹೇಳಿದರು.

    ಭಾರತೀಯ ಸಶಸ್ತ್ರ ಪಡೆಗಳು ಒಟ್ಟು ಒಂಬತ್ತು ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ರಕ್ಷಣಾ ಸಚಿವಾಲಯದ ಪ್ರಕಾರ, ಸೇನೆಯು ಕೇಂದ್ರಿಕರಿಸಿ, ಅಳತೆ ತೂಗಿ ನಿಖರವಾಗಿ ದಾಳಿ ನಡೆಸಿದ್ದು, ಪಾಕಿಸ್ತಾನದ ಯಾವುದೇ ಮಿಲಿಟರಿ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡಿಲ್ಲ ಎಂದು ತಿಳಿಸಿದೆ.ಇದನ್ನೂ ಓದಿ: ಏರ್‌ಸ್ಟ್ರೈಕ್‌ಗೆ ಸಾಕ್ಷಿ ಎಲ್ಲಿದೆ ಅಂದವರ ಬಾಯಿಯನ್ನೇ ಬಂದ್‌ ಮಾಡಿದ ಸೇನೆ!

  • ಇದು ಪ್ರಾರಂಭವಷ್ಟೇ, ಉಗ್ರ ಪೋಷಕ ಪಾಕ್‌ಗೆ ಭಾರತ ತಕ್ಕ ಪಾಠ ಕಲಿಸುತ್ತೆ – ಯತ್ನಾಳ್

    ಇದು ಪ್ರಾರಂಭವಷ್ಟೇ, ಉಗ್ರ ಪೋಷಕ ಪಾಕ್‌ಗೆ ಭಾರತ ತಕ್ಕ ಪಾಠ ಕಲಿಸುತ್ತೆ – ಯತ್ನಾಳ್

    ವಿಜಯಪುರ: ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ’ ಇದು ಪ್ರಾರಂಭವಷ್ಟೇ, ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಹಾಕಿಕೊಂಡಿರುವ ಅವರು, ಭಾರತೀಯ ಸೇನೆಯಿಂದ ನಡೆದ ಏರ್‌ಸ್ಟ್ರೈಕ್‌`ಆಪರೇಷನ್ ಸಿಂಧೂರ’ ಪ್ರತೀಕಾರದ ದಾಳಿಯನ್ನು ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿಯವರ (PM Modi) ನೇತೃತ್ವದಲ್ಲಿ ಭಾರತೀಯ ಸೇನೆ, ನೌಕಾ ಪಡೆ ಹಾಗೂ ವಾಯು ಪಡೆಗಳು ಉಗ್ರರ ನೆಲೆಯ ಮೇಲೆ ದಾಳಿ ನಡೆಸಿದೆ ಎಂದು ಉಲ್ಲೇಖಿಸಿದ್ದಾರೆ.ಇದನ್ನೂ  ಓದಿ: ಯೋಧರ ಹೋರಾಟ ಶುರುವಾಗಿದೆ: ‘ಆಪರೇಷನ್ ಸಿಂಧೂರ’ಗೆ ಜೈ ಎಂದ ತಲೈವಾ

    ಏ.22 ರಂದು ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಲಾಮ್‌ನ (Pahalgam) ಬೈಸರನ್ ಕಣಿವೆಯಲ್ಲಿ ನಡೆದಿದ್ದ ಅಮಾಯಕ ಪ್ರವಾಸಿಗರ ಹತ್ಯೆಯ ಪ್ರತೀಕಾರವನ್ನು ಭಾರತೀಯ ಸೇನೆ ತೆಗೆದುಕೊಂಡಿದೆ. ಇದು ಪ್ರಾರಂಭವಷ್ಟೇ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ. ಸಮಸ್ತ ಭಾರತೀಯರ ಪರವಾಗಿ ಈ ದಾಳಿಯನ್ನು ಸ್ವಾಗತಿಸುತ್ತೇನೆ. ಸೇನೆ ಮತ್ತು ಸರ್ಕಾರದ ಜೊತೆ ನಾವೆಲ್ಲರೂ ನಿಲ್ಲೋಣ. ಭಾರತ ಮಾತೆಗೆ ಜಯವಾಗಲಿ, ಜೈ ಹಿಂದ್ ಎಂದು ಬರೆದುಕೊಂಡಿದ್ದಾರೆ.

    ಎಕ್ಸ್‌ನಲ್ಲಿ ಎನಿದೆ?
    ಪ್ರಧಾನಿ ನರೇಂದ್ರ ಮೋದಿ ಜಿ ಅವರ ನೇತೃತ್ವದಲ್ಲಿ ಭಾರತದ ಸೇನೆ, ನೌಕಾ ಪಡೆ ಹಾಗೂ ವಾಯು ಪಡೆ ಉಗ್ರರ ನೆಲೆಯ ಮೇಲೆ ದಾಳಿ ಮಾಡಿ ಪಹಲ್ಗಾಮ್ ನಲ್ಲಿ ನಡೆದ ಅಮಾಯಕ ಪ್ರವಾಸಿಗರ ಹತ್ಯೆಯ ಪ್ರತೀಕಾರ ತೆಗೆದುಕೊಂಡಿದೆ. ಇದು ಪ್ರಾರಂಭವಷ್ಟೇ. ಉಗ್ರ ಪೋಷಕ ಪಾಕಿಸ್ತಾನಕ್ಕೆ ಭಾರತ ತಕ್ಕ ಪಾಠ ಕಲಿಸುತ್ತದೆ. ಸಮಸ್ತ ಭಾರತೀಯರ ಪರವಾಗಿ ಈ ದಾಳಿಯನ್ನು ಸ್ವಾಗತಿಸುತ್ತೇನೆ ಹಾಗೂ ಸೇನೆ ಮತ್ತು ಸರ್ಕಾರದ ಜೊತೆ ನಾವೆಲ್ಲರೂ ನಿಲ್ಲೋಣ.

    ಭಾರತ ಮಾತೆಗೆ ಜಯವಾಗಲಿ
    ಜೈ ಹಿಂದ್.ಇದನ್ನೂ  ಓದಿ: ಭಾರತೀಯರಿಗೆ ಇಂದು ಸಮಾಧಾನ ತಂದ ದಿನ: ಹೆಚ್.ಕೆ ಪಾಟೀಲ್