Tag: Pahalgam Terrorist Attack

  • ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಉಗ್ರರ ದಾಳಿ ಖಂಡಿಸಿದ ಶ್ರೀನಿಧಿ ಶೆಟ್ಟಿ

    ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ: ಉಗ್ರರ ದಾಳಿ ಖಂಡಿಸಿದ ಶ್ರೀನಿಧಿ ಶೆಟ್ಟಿ

    ಟಿ ಶ್ರೀನಿಧಿ ಶೆಟ್ಟಿ ‘ಹಿಟ್ 3’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಪ್ರಚಾರ ಕಾರ್ಯದ ವೇಳೆ, ಪಹಲ್ಗಾಮ್‌ನಲ್ಲಿ ನಡೆದ ಉಗ್ರರ (Pahalgam Terrorist Attack) ದಾಳಿ ಬಗ್ಗೆ ನಟಿ ಖಂಡಿಸಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಶ್ರೀನಿಧಿ (Srinidhi Shetty) ‘ಪಬ್ಲಿಕ್ ಟಿವಿ’ಗೆ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:ಸಕ್ಸಸ್‌ಗಾಗಿ ಅದೃಷ್ಟ ಪರೀಕ್ಷೆಗಿಳಿದ ಸೋನಾಕ್ಷಿ ಸಿನ್ಹಾ

    ಶ್ರೀನಿಧಿ ಶೆಟ್ಟಿ ಮಾತನಾಡಿ, ಈ ಥರ ವಿಚಾರದ ಬಗ್ಗೆ ಮಾತನಾಡುವ ದಿನಗಳು ಮತ್ತೆ ಬರಬಾರದು. ಇದರ ಬಗ್ಗೆ ಅಭಿಪ್ರಾಯ ಕೊಡೋ ಹಾಗೇ ಆಗಬಾರದು. ನೊಂದ ಕುಟುಂಬಗಳಿಗೆ ದೇವರು ಶಕ್ತಿ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ. ಇದನ್ನೆಲ್ಲಾ ಮಾಡಿದವರಿಗೆ ಶಿಕ್ಷೆ ಆಗಲಿ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯುದ್ಧ ಆಗಲಿ ಅಂತ ಹೇಳೋಕೆ ನಾನ್ಯಾರು, ನಾನು ಡಿಫೆನ್ಸ್ ಅಲ್ಲಿ ಇಲ್ಲ. ಇಂತಹ ಘಟನೆ ಮತ್ತೆ ನಡೆಯಬಾರದು ಎಂದು ನಟಿ ಮಾತನಾಡಿದ್ದಾರೆ. ಇದನ್ನೂ ಓದಿ:‘ರಾಮಾಯಣ’ ಚಿತ್ರ ಕೈಬಿಟ್ಟಿದ್ಯಾಕೆ ಶ್ರೀನಿಧಿ ಶೆಟ್ಟಿ?- ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ‘ಕೆಜಿಎಫ್ 2’ ನಟಿ

    ಅಂದಹಾಗೆ, ನಾನಿ ನಟನೆಯ ‘ಹಿಟ್ 3’ ಸಿನಿಮಾ ಮೇ 1ರಂದು ಕನ್ನಡ, ತೆಲುಗು ಸೇರಿದಂತೆ ಹಲವು ಭಾಷೆಗಳಲ್ಲಿ ರಿಲೀಸ್‌ ಆಗ್ತಿದೆ. ಈ ಸಿನಿಮಾಗೆ ಸುದೀಪ್ ಪುತ್ರಿ ಸಾನ್ವಿ ಹಾಡಿದ್ದಾರೆ. ಈ ಚಿತ್ರವನ್ನು ಶೈಲೇಶ್ ಕೊಲನು ನಿರ್ದೇಶನ ಮಾಡಿದ್ದಾರೆ.

  • Pahalgam Terrorist Attack | ನಾಳೆ ಮೋದಿ ನೇತೃತ್ವದಲ್ಲಿ 2ನೇ ಸುತ್ತಿನ ಹೈವೋಲ್ಟೇಜ್‌ ಸಭೆ

    Pahalgam Terrorist Attack | ನಾಳೆ ಮೋದಿ ನೇತೃತ್ವದಲ್ಲಿ 2ನೇ ಸುತ್ತಿನ ಹೈವೋಲ್ಟೇಜ್‌ ಸಭೆ

    ನವದೆಹಲಿ: ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಪೈಶಾಚಿಕ ಕೃತ್ಯಕ್ಕೆ (Pahalgam Terrorist Attack) ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಈ ನಡುವೆ ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಬುಧವಾರ (ಏ.30) ಮಹತ್ವದ ಸರಣಿ ಸಭೆಗಳನ್ನು ನಡೆಸಲು ನಿರ್ಧರಿಸಲಾಗಿದೆ.

    ಬೆಳಗ್ಗೆ 11 ಗಂಟೆ ಸುಮಾರಿಗೆ ರಾಷ್ಟ್ರೀಯ ಭದ್ರತೆಯ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತಾ ಸಂಪುಟ ಸಮಿತಿ (CCS) ಸಭೆ ನಡೆಸಲಿದೆ. ಇದಾದ ಬಳಿಕ ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ (CCPA), ನಂತರ ಕೇಂದ್ರ ಸಂಪುಟ ಸಮಿತಿ ಮೋದಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಿದೆ. ಇದನ್ನೂ ಓದಿ: 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಪಾಕ್‌ ಪ್ರಜೆಗಳಿಗೆ ಭಾರತ ವಾರ್ನಿಂಗ್‌ – ಪಾಕ್‌ ಸಂಬಂಧಕ್ಕೆ ಎಳ್ಳುನೀರು

    ಪಹಲ್ಗಾಮ್ ದಾಳಿಯ ನಂತರ ನಡೆಯುತ್ತಿರುವ ಅತ್ಯುನ್ನತ ಮಟ್ಟದ 2ನೇ ಸುತ್ತಿನ ಸಭೆ ಇದಾಗಿದ್ದು, ಭದ್ರತೆ ಸಿದ್ಧತೆಗಳ ಕುರಿತು ಚರ್ಚೆ ನಡೆಯಲಿದೆ. ಜೊತೆಗೆ ಪಾಕಿಸ್ತಾನದ ವಿರುದ್ಧ ಇನ್ನಷ್ಟು ಕಠಿಣ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಏ.20ರಂದೇ ನಡೆಯಬೇಕಿದ್ದ ಪಹಲ್ಗಾಮ್ ದಾಳಿ 2 ದಿನ ತಡವಾಗಿದ್ದೇಕೆ? – NIA ತನಿಖೆಯಲ್ಲಿ ರೋಚಕ ಅಂಶ

    ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆ ವಹಿಸಲಿದ್ದಾರೆ. ಅಲ್ಲದೇ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ, ಆರೋಗ್ಯ ಸಚಿವ ಜೆ.ಪಿ ನಡ್ಡಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಇತರ ಹಿರಿಯ ಸಚಿವರೂ ಪಾಲ್ಗೊಳ್ಳಲಿದ್ದಾರೆ. ಇದಾದ ಬಳಿಕ ಆರ್ಥಿಕ ವ್ಯವಹಾರಗಳ ಸಮಿತಿ ಸಭೆ ನಡೆಸಲಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್‌ – ಉಗ್ರರ ಸಂಭಾವ್ಯ ದಾಳಿಯ ಎಚ್ಚರಿಕೆ ಕೊಟ್ಟ ಗುಪ್ತಚರ

    ಏ.23ರಂದು ಪ್ರಧಾನಿ ಮೋದಿ ನೇತೃತ್ವದಲ್ಲೇ ಸತತ 3 ಗಂಟೆಗಳ ಕಾಲ ಕೇಂದ್ರ ಸಂಪುಟ ಸಮಿತಿ ಸಭೆ ನಡೆದಿತ್ತು. ಈ ಸಭೆಯಲ್ಲಿ ಅಟ್ಟಾರಿ-ವಾಘಾ ಗಡಿ ಚೆಕ್‌ಪೋಸ್ಟ್‌ (Attari Border) ಅನ್ನು ತಕ್ಷಣದಿಂದ ಮುಚ್ಚುವುದು, ಸಾರ್ಕ್ ವಿಸಾ ವಿನಾಯಿತಿ ಯೋಜನೆ ಪಾಕಿಸ್ತಾನದವರಿಗೆ ರದ್ದು, ರಾಯಭಾರ ಕಚೇರಿ ಸಿಬ್ಬಂದಿ ಹಂತಹಂತವಾಗಿ ಕಡಿತಗೊಳಿಸುವುದು ಮತ್ತು 1960ರ ಸಿಂಧೂ ನದಿ ಒಪ್ಪಂದವನ್ನು ರದ್ದು ಮಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಮಿತಿ ತೆಗೆದುಕೊಂಡಿತ್ತು. ಈ ಮೂಲಕ ಪಾಕಿಸ್ತಾನ ಜೊತೆಗಿನ ರಾಜತಾಂತ್ರಿಕ ಸಂಬಂಧಕ್ಕೆ ಎಳ್ಳುನೀರು ಬಿಡಲಾಗಿತ್ತು. ಇದನ್ನೂ ಓದಿ: Pahalgam Attack | ಟಿಆರ್‌ಎಫ್‌ಗೆ ಭಾರತೀಯ ಯುವಕರೇ ಟಾರ್ಗೆಟ್‌ – ಈ ಭಯೋತ್ಪಾದಕ ಗುಂಪು ಹೇಗೆ ಕೆಲಸ ಮಾಡುತ್ತೆ?

  • ಏ.20ರಂದೇ ನಡೆಯಬೇಕಿದ್ದ ಪಹಲ್ಗಾಮ್ ದಾಳಿ 2 ದಿನ ತಡವಾಗಿದ್ದೇಕೆ? – NIA ತನಿಖೆಯಲ್ಲಿ ರೋಚಕ ಅಂಶ

    ಏ.20ರಂದೇ ನಡೆಯಬೇಕಿದ್ದ ಪಹಲ್ಗಾಮ್ ದಾಳಿ 2 ದಿನ ತಡವಾಗಿದ್ದೇಕೆ? – NIA ತನಿಖೆಯಲ್ಲಿ ರೋಚಕ ಅಂಶ

    ಶ್ರೀನಗರ: ಪಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದ ಭಯೋತ್ಪಾದಕ ದಾಳಿಯ ಕುರಿತು ಬೆಚ್ಚಿ ಬೀಳಿಸುವ ಅಂಶವೊಂದು ಎನ್‌ಐಎ (NIA) ತನಿಖೆಯಲ್ಲಿ ಬೆಳಕಿಗೆ ಬಂದಿದೆ.

    ಏ.22 ರಂದು ಪಹಲ್ಗಾಮ್‌ನ ಬೈಸರನ್ ವ್ಯಾಲಿಯಲ್ಲಿ ನಡೆದ ಹಿಂದೂಗಳ ನರಮೇಧ, ಅದಕ್ಕೂ ಎರಡು ದಿನಗಳ ಹಿಂದೆಯೇ ನಡೆಯಬೇಕಿತ್ತು. ಏ.20ರಂದು ಭಯೋತ್ಪಾದಕರು ದಾಳಿಯ ಸಂಚು ರೂಪಿಸಿಕೊಂಡು ಸ್ಥಳಕ್ಕೆ ಬಂದಿದ್ದರು. ಆದರೆ ಅಂದು ಹವಾಮಾನದಲ್ಲಿ ತೀವ್ರ ಬದಲಾವಣೆ, ತೀವ್ರವಾದ ಮಳೆ ಮತ್ತು ಮಂಜು ಮುಸುಕಿದಂತಹ ವಾತಾವರಣವಿದ್ದ ಕಾರಣದಿಂದ ಯೋಜನೆಯನ್ನು ಮುಂದೂಡಿದ್ದರು ಎಂಬುದು ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.ಇದನ್ನೂ ಓದಿ: ಐಪಿಎಲ್‌ಗಾಗಿ ಮಟನ್‌, ಪಿಜ್ಜಾ ತ್ಯಜಿಸಿದ್ದ ವೈಭವ್‌ – ಡಯಟ್‌ ಸೀಕ್ರೆಟ್‌ ರಿವೀಲ್‌ ಮಾಡಿದ ಕೋಚ್‌

    ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕರ ಟಾರ್ಗೆಟ್ ಬಹುದೊಡ್ಡದಾಗಿತ್ತು. ದೊಡ್ಡ ಬೇಟೆಗಾಗಿ ಕಾದು ಬಂದಿದ್ದ ಉಗ್ರರಿಗೆ ಅಂದು ಹವಾಮಾನ ಕೈಕೊಟ್ಟಿತ್ತು. ವಾತಾವರಣದಲ್ಲಿ ಹಠಾತ್ ಬದಲಾವಣೆಯಿಂದಾಗಿ ಬೈಸರನ್ ವ್ಯಾಲಿಯಲ್ಲಿ ಜನರ ಸಂಖ್ಯೆ ಕಡಿಮೆಯಾಗಿತ್ತು. ಹೀಗಾಗಿ ಹೆಚ್ಚು ಜನರನ್ನು ಹತ್ಯೆ ಮಾಡುವ ಉದ್ದೇಶದಿಂದಲೇ ದಾಳಿ ಮಾಡುವ ಯೋಜನೆಯನ್ನು ಮುಂದೂಡಿದ್ದರು ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಏ.22ರಂದು ನಡೆದಿದ್ದೇನು?
    ಹತ್ಯೆಯಾದ ದಿನ ಉಗ್ರರು ಸುತ್ತಮುತ್ತಲಿನ ಕಾಡು ಬೆಟ್ಟದಂತಿರುವ ಪ್ರದೇಶದಿಂದ ನುಗ್ಗಿ ಬಂದು ಗುಂಡು ಹಾರಿಸಿದ್ದರು ಎಂದು ಅಂದಾಜಿಸಲಾಗಿತ್ತು. ಎನ್‌ಐಎ ತನಿಖೆಯಲ್ಲಿ ವಿಷಯ ಬೆಳಕಿಗೆ ಬಂದಿದೆ. ಉಗ್ರರು ಏ.22 ರಂದು ಮಧ್ಯಾಹ್ನ 2:30ಕ್ಕೆ ಫುಡ್ ಸ್ಟಾಲ್ ಹಿಂಭಾಗದಲ್ಲಿ ಪ್ರವಾಸಿಗರಿಗಾಗಿ ಕಾದು ಕುಳಿತಿದ್ದರು. ಜನ ಸಮೂಹ ದೊಡ್ಡಗಾಗಿ ಸೇರುತ್ತಿದ್ದಂತೆ ಎದ್ದು ನಿಂತು ಹೆಸರು, ಧರ್ಮ ಕೇಳಿ ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದರು ಎಂದು ತಿಳಿದು ಬಂದಿದೆ.ಇದನ್ನೂ ಓದಿ: ಕಾಶ್ಮೀರದಲ್ಲಿ 48 ಪ್ರವಾಸಿ ತಾಣಗಳು ಬಂದ್‌ – ಉಗ್ರರ ಸಂಭಾವ್ಯ ದಾಳಿಯ ಎಚ್ಚರಿಕೆ ಕೊಟ್ಟ ಗುಪ್ತಚರ

  • ಪಹಲ್ಗಾಮ್ ಅಟ್ಟಹಾಸದ ಬಳಿಕ ಪಾಕ್ ಪ್ರಜೆಗಳ ಗಡೀಪಾರು – 55,000 ಮಂದಿಗಿಲ್ಲ ಗಡೀಪಾರಿನ ಆತಂಕ!

    ಪಹಲ್ಗಾಮ್ ಅಟ್ಟಹಾಸದ ಬಳಿಕ ಪಾಕ್ ಪ್ರಜೆಗಳ ಗಡೀಪಾರು – 55,000 ಮಂದಿಗಿಲ್ಲ ಗಡೀಪಾರಿನ ಆತಂಕ!

    ನವದೆಹಲಿ: ಪಹಲ್ಗಾಮ್ (Pahalgam Terrorist Attack) ಉಗ್ರರ ಅಟ್ಟಹಾಸದ ಬೆನ್ನಲ್ಲೇ ಪಾಕ್ (Pakistan) ಜೊತೆ ಎಲ್ಲಾ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿರುವ ಭಾರತ (India), ಕಟ್ಟುನಿಟ್ಟಿನ ಸೂಚನೆ ಹೊರಡಿಸಿ ಅಲ್ಪಾವಧಿ ವೀಸಾ ಹೊಂದಿರುವ ಪಾಕ್ ಪ್ರಜೆಗಳ ಗಡೀಪಾರು ಮಾಡುವ ಕೆಲಸ ಮಾಡುತ್ತಿದೆ. ಹೀಗಿದ್ದು ಭಾರತದಲ್ಲಿ (India) ಇನ್ನೂ 55,000 ಪಾಕ್ ಪ್ರಜೆಗಳಿದ್ದಾರೆ ಎಂದು ತಿಳಿದು ಬಂದಿದೆ.

    ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧದ ಬಳಿಕ ಕೇಂದ್ರ ಸರ್ಕಾರ ಭಾರತದಲ್ಲಿರುವ ಪಾಕ್ ಪ್ರಜೆಗಳ 14 ರೀತಿಯ ವೀಸಾಗಳನ್ನು ರದ್ದುಗೊಳಿಸಿತ್ತು. ಜೊತೆಗೆ 48 ಗಂಟೆಯೊಳಗೆ ಭಾರತ ಬಿಟ್ಟು ತೆರಳುವಂತೆ ಸೂಚನೆ ನೀಡಿತ್ತು.ಇದನ್ನೂ ಓದಿ: ಉಗ್ರರು ಗುಂಡು ಹಾರಿಸುವ ಹೊತ್ತಲ್ಲಿ 3 ಬಾರಿ ‘ಅಲ್ಲಾಹು ಅಕ್ಬರ್‌’ ಅಂತ ಕೂಗಿದ ಜಿಪ್‌ಲೈನ್‌ ಆಪರೇಟರ್‌

    ಕೇಂದ್ರದ ಕಟ್ಟುನಿಟ್ಟಿನ ಸೂಚನೆ ಬಳಿಕ ದೇಶದಲ್ಲಿ ಇನ್ನೂ 55,000 ಪಾಕ್ ಪ್ರಜೆಗಳಿದ್ದಾರೆ. ಈ 55,000 ಪಾಕ್ ಪ್ರಜೆಗಳು ದೀರ್ಘಾವಧಿ ವೀಸಾ ಹೊಂದಿದ್ದು, ಈ ಪೈಕಿ 54 ಸಾವಿರ ಮಂದಿ ಜನ ರಾಜಸ್ಥಾನದಲ್ಲಿ ವಾಸ್ತವ್ಯ ಹೂಡಿದ್ದಾರೆ. ಈಗಾಗಲೇ ಅಲ್ಪಾವಧಿ ವೀಸಾ ಹೊಂದಿದ್ದವರನ್ನು ರಾಜ್ಯ ಸರ್ಕಾರಗಳು ಹೊರಹಾಕಿವೆ. ಆದರೂ ಕೂಡ ಇನ್ನೂ ದೇಶದಲ್ಲಿ 55,000 ಪಾಕ್ ಪ್ರಜೆಗಳಿದ್ದಾರೆ.

    ಪಾಕಿಸ್ತಾನದಿಂದ ಬಂದು ಭಾರತೀಯರನ್ನು ಮದುವೆಯಾದವರಿಗೆ ಭಾರತ ಸರ್ಕಾರ ದೀರ್ಘಾವಧಿ ವೀಸಾ ನೀಡಿದೆ. ರಾಜಸ್ಥಾನದ ಗಡಿಯ ಹಳ್ಳಿಗಳಲ್ಲಿ ಈಗಲೂ ಕೂಡ ಪಾಕಿಸ್ತಾನದಿಂದ ಹೆಣ್ಣು ತಂದು ಮದುವೆ ಮಾಡಿಕೊಳ್ಳುವ ಸಂಸ್ಕೃತಿಯಿದೆ. ಹೀಗಾಗಿ ದೀರ್ಘಾವಧಿ ವೀಸಾ ಹೊಂದಿದ ಪಾಕ್ ಪ್ರಜೆಗಳ ಗಡೀಪಾರು ಮಾಡಲು ಕಾನೂನು ತೊಡಕು ಉಂಟಾಗಿದೆ.ಇದನ್ನೂ ಓದಿ: ಉಡುಪಿಯ ಕಾರ್ಕಳದಲ್ಲಿ ಉದ್ಯಮಿ ಆತ್ಮಹತ್ಯೆ – ಕಾರಿನೊಳಗೆ ಗುಂಡು ಹಾರಿಸಿಕೊಂಡ ವ್ಯಕ್ತಿ

  • Pahalgam Attack | ಟಿಆರ್‌ಎಫ್‌ಗೆ ಭಾರತೀಯ ಯುವಕರೇ ಟಾರ್ಗೆಟ್‌ – ಈ ಭಯೋತ್ಪಾದಕ ಗುಂಪು ಹೇಗೆ ಕೆಲಸ ಮಾಡುತ್ತೆ?

    Pahalgam Attack | ಟಿಆರ್‌ಎಫ್‌ಗೆ ಭಾರತೀಯ ಯುವಕರೇ ಟಾರ್ಗೆಟ್‌ – ಈ ಭಯೋತ್ಪಾದಕ ಗುಂಪು ಹೇಗೆ ಕೆಲಸ ಮಾಡುತ್ತೆ?

    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಅಟ್ಟಹಾಸವು (Pahalgam Terrorist Attack) ಭಯೋತ್ಪಾದನೆ ಮತ್ತು ಭಯೋತ್ಪಾದಕರ ವಿರುದ್ಧ ಇಡೀ ದೇಶವೇ ಒಗ್ಗೂಡುವಂತೆ ಮಾಡಿದೆ. ಈ ಕೃತ್ಯಕ್ಕೆ ಕಾರಣರಾದವರನ್ನ ಶಿಕ್ಷಿಸಲು ಸರ್ಕಾರ ಮಾಡುವ ಎಲ್ಲ ಪ್ರಯತ್ನಗಳಿಗೆ ಇಡೀ ದೇಶ ಬೆಂಬಲವಾಗಿ ನಿಂತಿದೆ. ದೇಶದ ಜನ, ಸಾಮಾಜಿಕ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಭಯೋತ್ಪಾದನೆ ವಿರುದ್ಧ ಒಗ್ಗಟ್ಟಿನ ಬಲವಾದ ಸಂದೇಶ ರವಾನಿಸಿವೆ.

    ಭಾರತ ಸರ್ಕಾರ ಪಾಕಿಸ್ತಾನದ (Pakistan) ವಿರುದ್ಧ ಹೆಜ್ಜೆ ಹೆಜ್ಜೆಗೂ ಕ್ರಮ ಕೈಗೊಳ್ಳುತ್ತಿದೆ. ಇದರಿಂದ ಇಡೀ ಪಾಕಿಸ್ತಾನದಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ. ಉಭಯ ದೇಶಗಳ ನಡುವೆ ಯಾವುದೇ ಸಂದರ್ಭದಲ್ಲೂ ಯುದ್ಧ ಘೋಷಣೆಯಾಗುವ ಸಾಧ್ಯತೆಗಳು ಮುನ್ನೆಲೆಗೆ ಬಂದಿವೆ. ಹೀಗಾಗಿ ಮೂರು ಸೇನಾ ಪಡೆಗಳಿಂದ ಭರ್ಜರಿ ಸಿದ್ಧತೆ ನಡೆಯುತ್ತಿದೆ, ವಾಯುಸೇನೆ ನೌಕಾಸೇನೆಗಳು ಈಗಾಗಲೇ ತಮ್ಮ ವ್ಯಾಪ್ತಿಯಲ್ಲಿ ತಾಲೀಮು ಪ್ರಾರಂಭಿಸಿ ಶತ್ರು ರಾಷ್ಟ್ರವನ್ನು ಬಗ್ಗು ಬಡಿಯಲು ಸಿದ್ಧರಿದ್ದೇವೆ ಎಂಬ ಸಂದೇಶ ರವಾನಿಸಿವೆ. ಮತ್ತೊಂದೆಡೆ ಗಡಿಯಲ್ಲಿ ಜನ ಬಂಕರ್‌ಗಳನ್ನು ಸ್ವಯಂಪ್ರೇರಿತವಾಗಿ ಶುಚಿಗೊಳಿಸುತ್ತಿದ್ದಾರೆ. ಇಷ್ಟೆಲ್ಲ ಉದ್ವಿಗ್ನತೆಗೆ ಕಾರಣವಾದ ʻಟಿಆರ್‌ಎಫ್‌ʼ (ದಿ ರೆಸಿಸ್ಟೆಂಟ್‌ ಫ್ರಂಟ್‌ – TRF) ಫಾಲ್ಕನ್‌ ಸ್ಕ್ವಾಡ್‌ ಹೇಗೆ ಕೆಲಸ ಮಾಡುತ್ತೆ? ಯುವಕರಿಗೆ ಹೇಗೆ ಬ್ರೈನ್‌ ವಾಶ್‌ ಮಾಡಿ ಸಂಘಟನೆಗೆ ಸೇರಿಸಿಕೊಳ್ಳುತ್ತೆ? ಇದರ ಮಾಸ್ಟರ್‌ ಮೈಂಡ್‌ ಯಾರು? ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಯಾವೆಲ್ಲ ಸಂಘಟನೆಗಳು ಈಗಲೂ ಸಕ್ರೀಯವಾಗಿವೆ ಎಂಬುದನ್ನು ತಿಳಿಯುವ ಕುತೂಹಲ ನಿಮಗಿದ್ದರೆ ಮುಂದೆ ಓದಿ…

    ಜಮ್ಮುವಿನಿಂದ ಪಥ ಬದಲಿಸಿದ ಉಗ್ರರು

    2014 ರಿಂದ 2018ರ ಅವಧಿ ಜಮ್ಮು ಮತ್ತು ಕಾಶ್ಮೀರ ಸ್ಥಳಗಳು ಉಗ್ರರ ಸ್ವರ್ಗವಾಗಿತ್ತು. 2014ರಿಂದ 2018ರ ವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 1,708 ಉಗ್ರರ ದಾಳಿಗಳು ನಡೆದಿದ್ದವು, 2018ರಿಂದ 2022ರ ವರೆಗೆ 761 ಉಗ್ರರ ದಾಳಿಗಳು ನಡೆದು 174 ಮಂದಿ ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿದಾಳಿ ನಡೆಸಿದ್ದ ಸೇನೆ (Indian Army) 626 ಉಗ್ರರನ್ನು ಬಲಿ ಪಡೆದಿತ್ತು. 2023ರಲ್ಲಿ ಜಮ್ಮು ಪ್ರದೇಶದಲ್ಲಿ ಮಾತ್ರವೇ ಸುಮಾರು 40 ಭಯೋತ್ಪಾದಕ ದಾಳಿಗಳು ನಡೆದಿರುವುದಾಗಿ ಸೇನೆ ಹೇಳಿದೆ. ಆದ್ರೆ 2019ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಭಯೋತ್ಪಾದಕರು ತಮ್ಮ ಕಾರ್ಯತಂತ್ರ ಬದಲಿಸಿದ್ದರು. ಆಗ ಕಾಶ್ಮೀರವನ್ನು ಬಿಟ್ಟು ಜಮ್ಮುವಿನಲ್ಲಿ ದಾಳಿಗಳನ್ನು ನಡೆಸತೊಡಗಿದರು. 2021ರಿಂದ ಜುಲೈ 2024ರ ವರೆಗೆ ಜಮ್ಮುವಿನ ವಿವಿಧ ಭಾಗಗಳಲ್ಲಿ 33 ಉಗ್ರ ದಾಳಿಗಳು ನಡೆದಿದ್ದವು. 2024ರ ಮಧ್ಯಭಾಗದವರೆಗೆ ಜಮ್ಮುವಿನಲ್ಲಿ 8 ದಾಳಿಗಳು ನಡೆದು, 11 ಮಂದಿ ಸಾವಿಗೀಡಾಗಿದ್ದರು; ವರ್ಷದ ಮೊದಲ ಆರು ತಿಂಗಳಲ್ಲಿ ನಡೆದ ದಾಳಿಗಳಿಂದ 12 ಮಂದಿ ನಾಗರಿಕರು ಪ್ರಾಣ ಕಳೆದುಕೊಂಡಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿದ್ದ ಕೆಲವು ಸೈನಿಕರನ್ನು ಚೀನಾದ ಗಡಿಗೆ ಕಳಿಸಿದ್ದು ಕೂಡ ಇಲ್ಲಿ ಉಗ್ರ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣ ಎನ್ನಲಾಗಿತ್ತು.

    ಭದ್ರತಾ ಪಡೆಗಳನ್ನು ತಪ್ಪು ದಾರಿಗೆಳೆಯುವುದು, ಗುಪ್ತಚರ ಅಧಿಕಾರಿಗಳ ದಿಕ್ಕುತಪ್ಪಿಸುವುದು ಸೇರಿದಂತೆ ಉಗ್ರರ ಹಲವು ತಂತ್ರಗಾರಿಕೆ ಇದರ ಹಿಂದಿತ್ತು. ಕಾಶ್ಮೀರಕ್ಕೆ ಹೋಲಿಸಿದರೆ, ಜಮ್ಮುವಿನಲ್ಲಿ ಕಡಿಮೆ ಸೇನಾ ನಿಯೋಜನೆ ಇದ್ದದ್ದು ಕೂಡ ಅಲ್ಲಿ ಉಗ್ರ ಚಟುವಟಿಕೆಗಳು ಹೆಚ್ಚಾಗಲು ಕಾರಣವಾಗಿತ್ತು. ಹಾಗಾಗಿ ಜಮ್ಮುವಿನ ಕಥುವಾ ಸೇರಿದಂತೆ ಅನೇಕ ಪ್ರದೇಶಗಳನ್ನೇ ಉಗ್ರರು ಟಾರ್ಗೆಟ್‌ ಮಾಡಿದ್ದರು. ಆದರೆ, 2019ರ ಬಳಿಕ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದಿರುವ ಭೀಕರ ದಾಳಿಯು, ಉಗ್ರರು ಮತ್ತೆ ಕಾಶ್ಮೀರದತ್ತ ದೃಷ್ಟಿ ನೆಟ್ಟಿರಬಹುದೇ ಎನ್ನುವ ಅನುಮಾನ ಮೂಡಿಸಿದೆ.

    ಇದೇ ಏ.17ರಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸೀಮ್ ಮುನೀರ್ ದ್ವಿರಾಷ್ಟ್ರ ಸಿದ್ಧಾಂತದ ಬಗ್ಗೆ ಮಾತನಾಡುತ್ತಾ, ಹಿಂದೂ ಹಾಗೂ ಮುಸ್ಲಿಂ ಧರ್ಮಗಳು ಹೇಗೆ ಭಿನ್ನ ಎಂದು ವಿವರಿಸಿದ್ದರು. ಕಾಶ್ಮೀರ ಎಂದೆಂದಿಗೂ ಪಾಕಿಸ್ತಾನದ ʻಕಂಠನಾಳ’ ಎಂದಿದ್ದರು. ಆದರೀಗ ಅವರ ಈ ಮಾತುಗಳಿಗೂ ಪಹಲ್ಲಾಮ್ ದಾಳಿಗೂ ನಂಟು ಇದೆ ಎನ್ನಲಾಗುತ್ತಿದೆ. ಪಾಕಿಸ್ತಾನವು ಆಂತರಿಕ ಸಂಘರ್ಷ ಮತ್ತು ಆರ್ಥಿಕ ಕುಸಿತದಂತಹ ತೀವ್ರ ಸಮಸ್ಯೆಗಳನ್ನು ಎದುರಿಸುತ್ತಿದೆ. ಅಲ್ಲಿನ ಜನರ ವಿಶ್ವಾಸ ಗಳಿಸುವ ಸಲುವಾಗಿ ಸೇನೆ ಮತ್ತು ರಾಜಕಾರಣಿಗಳು ಕಾಶ್ಮೀರ ವಿವಾದವನ್ನು ಜೀವಂತವಾಗಿಡಲು ಬಯಸುತ್ತಿದ್ದು, ಅದರ ಭಾಗವಾಗಿಯೇ ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ ಎನ್ನುವುದು ತಜ್ಞರ ವಿಶ್ಲೇಷಣೆ.

    ಯಾವ್ಯಾವ ಉಗ್ರ ಸಂಘಟನೆಗಳು ಸಕ್ರೀಯ?

    ಜಮ್ಮುವಿನ ವಿಸ್ತಾರ ಪ್ರದೇಶವನ್ನು ಪಾಕ್‌ ಮೂಲದ ಉಗ್ರರು ಈ ಹಿಂದೆಯೂ ಭಯೋತ್ಪಾದನಾ ಕೃತ್ಯಗಳಿಗೆ ಬಳಸಿದ್ದಾರೆ. ಸುರಂಗಗಳ ಮೂಲಕ ಉಗ್ರರು ದೇಶಕ್ಕೆ ನುಸುಳುತ್ತಿದ್ದು, ಡ್ರೋನ್‌ ಮೂಲಕ ಶಸ್ತ್ರಾಸ್ತ್ರಗಳನ್ನೂ ಸರಬರಾಜು ಮಾಡಿಕೊಳ್ಳುತ್ತಿದ್ದರು. ಅಲ್ಲದೇ ದೇಶದ ಗಡಿ ಭಾಗದಲ್ಲಿ ಹಿಂಸಾಚಾರ ಹೆಚ್ಚಿಸಲು ನಿಗೂಢ ಹತ್ಯೆ ಮಾಡುತ್ತಿದ್ದರು. ಈಗಲೂ ಅನೇಕ ಭಯೋತ್ಪಾದಕ ಗುಂಪುಗಳು ಗಡಿಯಾಚೆಗೆ ಸಕ್ರೀಯವಾಗಿವೆ. ಅದರಲ್ಲಿ ಟಿಆರ್‌ಎಫ್ ಪ್ರಮುಖವಾಗಿದೆ, ಇದನ್ನ ಜೈಶ್-ಎ-ಮೊಹಮ್ಮದ್‌ನ ಪ್ರಾಕ್ಸಿ ಎಂದು ಕರೆಯಲಾಗುತ್ತದೆ. ಇದರ ಹೊರತಾಗಿ ಜಮ್ಮು ಮತ್ತು ಕಾಶ್ಮೀರ ಘಜ್ವಾನಿ ಫೋರ್ಸ್, ಕಾಶ್ಮೀರ ಟೈಗರ್ಸ್ ಮತ್ತು ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ ಉಗ್ರ ಸಂಘಟನೆಗಳು ಸಕ್ರೀಯವಾಗಿವೆ. ಇವು ಆರ್ಟಿಕಲ್‌ 370 ರದ್ದಾದ ಬಳಿಕ ಅಸ್ತಿತ್ವಕ್ಕೆ ಬಂದಿವೆ.

    ಟಿಆರ್‌ಎಫ್‌ ಕೆಲಸ ಹೇಗೆ?

    ಕಾಶ್ಮೀರದಲ್ಲಿ ಸಕ್ರೀಯವಾಗಿರುವ ʻದಿ ರೆಸಿಸ್ಟಂಟ್‌ ಫ್ರಂಟ್‌ʼ ಆಧುನಿಕ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸುವುದು ತಿಂಗಳಾನುಗಟ್ಟಲೆ ಕಠಿಣ ತರಬೇತಿ ನೀಡುವುದು, ಬಳಿಕ ಕಣಿವೆ ಪ್ರದೇಶಗಳಲ್ಲಿ ದಾಳಿ ನಡೆಸುವುದು ಇದರ ಕಾರ್ಯತಂತ್ರ. ಒಂದು ವೇಳೆ ದಾಳಿಕೋರರು ಭಾರತೀಯ ಸೇನೆಗೆ ಸಿಕ್ಕಿಬಿದ್ದರೆ ಆತ್ಮಾಹುತಿ ಬಾಂಬ್‌ ಸ್ಫೋಟಿಕೊಳ್ಳುವುದಕ್ಕೂ ತರಬೇತಿ ನೀಡಲಾಗುತ್ತದೆ. ಅದಕ್ಕಾಗಿ ಕಟ್ಟುಮಸ್ತಾದ ಯುವಕರ ತಲೆಗೆ ಮತಾಂಧತೆ ಚಿಂತನೆಗಳನ್ನ ತುಂಬುತ್ತಾರೆ. ಬ್ರೈನ್‌ ವಾಶ್‌ ಮಾಡಿ ತಮ್ಮ ಸಂಘಟನೆಗಳಿಗೆ ಸೇರಿಸಿಕೊಳ್ಳುತ್ತದೆ. ನಿರುದ್ಯೋಗಿಗಳು, ತೀರಾ ಬಡತನ ಕುಟುಂಬದ ಯುವಕರಿಗೆ ಹಣದ ಆಮಿಷ ತೋರಿಸಿ, ನೀನೊಂದು ನಿರ್ದಿಷ್ಟ ಗುರಿ ಸಾಧಿಸಲು ಈ ಭೂಮಿಮೇಲೆ ಹುಟ್ಟಿದ್ದೀಯಾ ಎಂದು ಬ್ರೈನ್‌ ವಾಶ್‌ ಮಾಡುವುದು, ಬಳಿಕ ಅವರಿಗೆ ತರಬೇತಿ ನೀಡಿ ಭಾರತದ ವಿರುದ್ಧವೇ ದಾಳಿಗೆ ನಿಯೋಜಿಸುವುದು ಟಿಆರ್‌ಎಫ್‌ನ ಕೆಲಸ. ಆದ್ರೆ ಇತ್ತೀಚಿನ ದಿನಗಳಲ್ಲಿ ಟಿಆರ್‌ಎಫ್‌ ಆಧುನಿಕ ಶಸ್ತ್ರಾಸ್ತ್ರಗಳನ್ನು ದೊಡ್ಡ ಪ್ರಮಾಣದಲ್ಲಿ ಸಂಗ್ರಹಿಸಿದ್ದು, ಭದ್ರತಾ ಪಡೆಗಳು ಹಾಗೂ ಸಾಮಾನ್ಯ ಜನರ ಮೇಲಿನ ದಾಳಿಗಾಗಿ ಬಸಳಸುತ್ತಿದೆ. ಇತ್ತೀಚಿನ ಪಹಲ್ಗಾಮ್‌ ದಾಳಿಗೂ ಸಹ ಎಕೆ-47 ಮತ್ತು M4 ರೈಫಲ್‌ಗಳನ್ನ ಬಳಸಲಾಗಿತ್ತು ಅನ್ನೋದು ಗಮನಾರ್ಹ.

    ಹಣಕಾಸಿನ ನೆರವು ಹೇಗೆ?

    ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಸಂಘಟನೆಗಳು ಜೈಶ್‌ ಎ ಮೊಹಮ್ಮದ್‌ನಿಂದ ಹಣಕಾಸಿನ ನೆರವನ್ನು ಪಡೆಯುತ್ತಿವೆ. ಜೊತೆಗೆ ಭಾರತದ ಮೇಲೆ ಯಾವ ಯಾವ ರೀತಿ ದಾಳಿಗಳನ್ನ ನಡೆಸಬೇಕು ಅನ್ನೋ ರೂಪುರೇಷೆಯೂ ಈ ಸಂಘಟನೆ ಸಿದ್ಧಮಾಡಿಕೊಡುತ್ತದೆ. ಹಿಂದೆಲ್ಲಾ ಗಡಿ ನಿಯಂತ್ರಣ ರೇಖೆ ದಾಟಿ ಬರುತ್ತಿದ್ದ ಉಗ್ರರು, ಗೆರಿಲ್ಲಾ ಯುದ್ಧ ತಂತ್ರಗಳನ್ನು ಬಳಸುತ್ತಿದ್ದರು, ದಾಳಿ ಮಾಡಿ ದಟ್ಟ ಕಾಡುಗಳಲ್ಲಿ ಕಣ್ಮರೆಯಾಗುತ್ತಿದ್ದರು. ಆದ್ರೆ ಉಗ್ರರು ಹೈಬ್ರಿಡ್‌ ವಿಧಾನಗಳನ್ನು ಅನುಸರಿಸುತ್ತಿದ್ದಾರೆ. ಜೊತೆಗೆ ಚೀನಾ ನಿರ್ಮಿತ ಆಪ್‌ಗಳನ್ನ ಬಳಸಿಕೊಂಡು ದಾಳಿಯ ರೂಪುರೇಷೆಗಳನ್ನು ಚರ್ಚಿಸಲಾಗುತ್ತದೆ ಎನ್ನುವ ವರದಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗಿದೆ. ಈ ಆಪ್‌ಗಳ ಟ್ರ್ಯಾಕಿಂಗ್‌ ಮಾಡೋದು ಕಷ್ಟವಾಗಿರುವುದರಿಂದ ಭಾರತೀಯ ಸೇನೆಗೂ ಇದು ಸವಾಲಾಗಿದೆ.

    ಭಾರತೀಯ ಸೇನೆಗೆ ಸವಾಲಾಗಿರುವುದು ಏಕೆ?

    ಇತ್ತೀಚೆಗೆ ಜಮ್ಮುವಿನಲ್ಲಿ ನಡೆಯುತ್ತಿರುವ ಭಯೋತ್ಪಾದಕ ದಾಳಿಯಲ್ಲಿ ಸೈನಿಕರು ಉಗ್ರರನ್ನು ಮಟ್ಟಹಾಕಲು ಹರಸಾಹಸ ಪಡುತ್ತಿದ್ದಾರೆ, ಇದಕ್ಕೆ ಕಾರಣವೂ ಇದೆ. ಇತ್ತೀಚೆಗೆ ಈ ಸಂಘಟನೆಗಳು ಅತ್ಯುನ್ನತ ತರಬೇತಿ ಪಡೆದ ಭಯೋತ್ಪಾದಕರನ್ನ ಉಗ್ರ ಕೃತ್ಯಗಳಿಗೆ ನಿಯೋಜಿಸುತ್ತಿದ್ದಾರೆ. ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಪರ್ವತ ಪ್ರದೇಶಗಳಲ್ಲಿ ತರಬೇತಿ ಪಡೆದ ಉಗ್ರರನ್ನು ಇಲ್ಲಿಗೆ ಕಳಿಸಲಾಗುತ್ತಿದೆ. ಅಲ್ಲದೇ ಅಮೆರಿಕ ನಿರ್ಮಿತ ಎಂ4 ಅತ್ಯಾಧುನಿಕ ರೈಫಲ್‌ ಅನ್ನು ಕೃತ್ಯಕ್ಕೆ ಬಳಸುತ್ತಿದ್ದಾರೆ.

    ಕೃತ್ಯದ ಮಾಸ್ಟರ್‌ ಮೈಂಡ್‌ ಯಾರು?

    ಈ ದಾಳಿಯನ್ನು ಹೊಣೆಯನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕ ಸಂಘಟನೆಯ ಜೊತೆ ಗುರುತಿಸಿಕೊಂಡಿರುವ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿದೆ. ಲಷ್ಕರ್‌ ಸಂಘಟನೆಯ ಟಾಪ್‌ ಕಮಾಂಡರ್‌ ಆಗಿರುವ ಸೈಫುಲ್ಲಾ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಇಬ್ಬರು ಈ ಕೃತ್ಯದ ಮಾಸ್ಟರ್‌ ಮೈಂಡ್‌ ಆಗಿದ್ದಾನೆಂದು ತಿಳಿದುಬಂದಿದೆ. ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ (Mumbai Attack) ಸೂತ್ರಧಾರ ಹಫೀಜ್ ಸಯೀದ್‌ ಆಪ್ತ ವ್ಯಕ್ತಿಯಾಗಿದ್ದಾನೆ. ಯಾವಾಗಲೂ ಐಷಾರಾಮಿ ಕಾರುಗಳಲ್ಲಿ ಪ್ರಯಾಣಿಸುವ ಈತನಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದಿರುವ ಲಷ್ಕರ್‌ ಉಗ್ರರು ಭದ್ರತೆ ನೀಡುತ್ತಾರೆ.

    ಯಾವಾಗಲೂ ಭಾರತದ ವಿರುದ್ಧವೇ ಕೆಲಸ ಮಾಡುವುದರಿಂದ ಸೇನಾ ಅಧಿಕಾರಿಗಳ (Pakistan Army) ಜೊತೆಗೂ ಈತ ಉತ್ತಮ ಸಂಬಂಧ ಹೊಂದಿದ್ದಾನೆ. ಎರಡು ತಿಂಗಳ ಹಿಂದೆ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಪಂಜಾಬ್‌ನ ಕಂಗನ್‌ಪುರಕ್ಕೆ ಭೇಟಿ ನೀಡಿದ್ದ. ಕಂಗನ್‌ಪುರದಲ್ಲಿ ಪಾಕ್‌ ಸೇನೆಯ ದೊಡ್ಡ ಬೆಟಾಲಿಯನ್‌ ನೆಲೆಗೊಂಡಿದೆ. ಪಾಕಿಸ್ತಾನ ಸೇನೆಯ ಕರ್ನಲ್ ಜಾಹಿದ್ ಜರೀನ್ ಭಾರತದ ವಿರುದ್ಧ ಜಿಹಾದಿ ಭಾಷಣ ಮಾಡಲು ಈತನನ್ನು ಕರೆಸಿದ್ದ.ಭಾಷಣದಲ್ಲಿ ಪಾಕಿಸ್ತಾನ ಸೇನೆಯನ್ನು ಭಾರತದ ವಿರುದ್ಧದ ಕೃತ್ಯಕ್ಕೆ ಪ್ರಚೋದಿಸಿದ್ದ. ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಭಾರತದ ವಿರುದ್ಧ ವಿಷಕಾರಿದ್ದ. ಇಂದು ಫೆಬ್ರವರಿ 2, 2025. ಕಾಶ್ಮೀರವನ್ನು ವಶಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಮುಂಬರುವ ದಿನಗಳಲ್ಲಿ ನಮ್ಮ ಮುಜಾಹಿದ್ದೀನ್ ದಾಳಿ ತೀವ್ರಗೊಳ್ಳಲಿದೆ. ಫೆಬ್ರವರಿ 2, 2026 ರೊಳಗೆ ಕಾಶ್ಮೀರ ಸ್ವತಂತ್ರವಾಗಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಭರವಸೆ ನೀಡಿದ್ದ ಅನ್ನೋದು ಗಮನಾರ್ಹ.

  • ಪ್ಯಾಂಟ್ ಬಿಚ್ಚಿಸಿದ್ರು, ಮತ್ತೊಂದು ಬಿಚ್ಚಿಸಿದ್ರು ಅನ್ನೋದು ನನ್ಗೆ ಗೊತ್ತಿಲ್ಲ: ಆರ್‌.ಬಿ ತಿಮ್ಮಾಪೂರ

    ಪ್ಯಾಂಟ್ ಬಿಚ್ಚಿಸಿದ್ರು, ಮತ್ತೊಂದು ಬಿಚ್ಚಿಸಿದ್ರು ಅನ್ನೋದು ನನ್ಗೆ ಗೊತ್ತಿಲ್ಲ: ಆರ್‌.ಬಿ ತಿಮ್ಮಾಪೂರ

    – ಹಿಂದೂಗಳನ್ನ ಹುಡುಕಿ ಕೊಂದ್ರು ಅಂತ ಬಿಜೆಪಿ ರಾಜಕಾರಣ ಮಾಡ್ತಿದೆ ಎಂದು ಸಚಿವ ಅಸಮಾಧಾನ

    ಬೆಳಗಾವಿ: ಪಹಲ್ಗಾಮ್‌ ದಾಳಿ (Pahalgam Terrorist Attack) ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಹಿಂದೂಗಳನ್ನ ಹುಡುಕಿ ಕೊಂದರು ಅಂತ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಆರ್‌.ಬಿ ತಿಮ್ಮಾಪೂರ (RB Timmapur) ಹೇಳಿದ್ದಾರೆ.

    ಬೆಳಗಾವಿಯಲ್ಲಿ ʻಪಬ್ಲಿಕ್‌ ಟಿವಿʼ (Public TV) ಜೊತೆಗೆ ಮಾತನಾಡಿದ ಅವರು, ಪ್ಯಾಂಟ್ ಬಿಚ್ಚಿಸಿದ್ರು ಅಂತ ಮೃತರ ಪತ್ನಿಯೇ ಹೇಳಿದ್ದಾರೆ, ಇದಕ್ಕೆ ನೀವೇನು ಹೇಳ್ತೀರಿ ಅನ್ನೋ ಪ್ರಶ್ನೆಗೆ ಉತ್ತರಿಸಿ, ಪ್ಯಾಂಟ್ ಬಿಚ್ಚಿಸಿದರು ಮತ್ತೊಂದು ಬಿಚ್ಚಿಸಿದರು ಎಂಬುದು ನನಗೆ ಗೊತ್ತಿಲ್ಲ. ಆದ್ರೆ ರಾಜಕಾರಣದಲ್ಲಿ ಧರ್ಮ ಬೆರೆಸದೇ ರಕ್ಷಣೆ ಕಡೆ ಗಮನ ಕೊಡಲಿ ಎಂದು ಹೇಳಿದರು. ಇದನ್ನೂ ಓದಿ: ಉಗ್ರರು ನಿಮ್ಮ ಚಡ್ಡಿ ಬಿಚ್ಚಿಸಿ ಚೆಕ್ ಮಾಡಿದ್ರೆ ಏನ್ ಮಾಡ್ತೀರಿ – ತಿಮ್ಮಾಪೂರ್‌ ವಿರುದ್ಧ ಸೂರ್ಯ ಆಕ್ರೋಶ 

    ಇಂತಹ ಕೃತ್ಯವನ್ನು ನಾವೆಲ್ಲರೂ ಖಂಡಿಸುತ್ತೇವೆ. ಅಂತಹವರ ಮೇಲೆ ತುರ್ತು ಕ್ರಮ ಕೈಗೊಳ್ಳಬೇಕು. ಉಗ್ರರು ಬಂದು ನನ್ನ ದೇಶದ ಪ್ರಜೆಯನ್ನ ಹೊಡೆದಾಗ ಕೆಲವರು ಧರ್ಮ ಕೇಳಿ ಮಾಡಿದ್ದಾರೆ ಅಂತ ಮಾಧ್ಯಮಗಳಲ್ಲಿ ಗಮನಿಸಿದೆ. ಇಂತಹ ಕೃತ್ಯಕ್ಕೆ ಸಪೋರ್ಟ್‌ ಮಾಡುವವರ ವಿರುದ್ಧವೂ ಕ್ರಮ ಆಗಬೇಕು. ಅವರನ್ನ ಸದೆಬಡಿಯುವ ಕಡೆ ಗಮನಕೊಡಬೇಕು. ಬೇಹುಗಾರಿಕೆ ಗಟ್ಟಿಗೊಳಿಸಿದ್ರೆ, ಈ ಸ್ಥಿತಿ ಬರುತ್ತಿರಲಿಲ್ಲ. ಯುದ್ಧಕ್ಕೆ ಹೊರಟಿದ್ದೀವಿ ಅನ್ನೋ ಮಾತೇ ಬರುತ್ತಿರಲಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: Pahalgam Terror Attack – ಮೃತ ಭರತ್ ಭೂಷಣ್ ಪತ್ನಿ ಹೇಳಿಕೆ ದಾಖಲಿಸಿಕೊಂಡ ಎನ್‌ಐಎ

    ಆದ್ರೆ ದೇಶದ ಪ್ರಜೆಗಳ ವಿಚಾರದಲ್ಲಿ ರಾಜಕೀಯ ಮಾಡೋದು ಸರಿಯಲ್ಲ, ಧರ್ಮವನ್ನ ಇದರಲ್ಲಿ ತರಬೇಡಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬರಿದಾದ ತುಂಗಭದ್ರಾ; ಕಲ್ಯಾಣ ಕರ್ನಾಟಕ, ಆಂಧ್ರ-ತೆಲಂಗಾಣದ ಜಿಲ್ಲೆಗಳಿಗೆ ನೀರಿನ ಅಭಾವ ಸಾಧ್ಯತೆ

  • ಉಗ್ರರ ದಾಳಿ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದ ಅತುಲ್ ಕುಲಕರ್ಣಿ

    ಉಗ್ರರ ದಾಳಿ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿದ ಅತುಲ್ ಕುಲಕರ್ಣಿ

    ಹಲ್ಗಾಮ್‌ನಲ್ಲಿ ಏ.22ರಂದು ಉಗ್ರರ ದಾಳಿ ನಡೆದ (Pahalgam Terrorist Attack) ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲು ಪ್ರವಾಸಿಗರಲ್ಲಿ ಭಯ ಮೂಡಿದೆ. ಹಾಗಾಗಿ ಕಾಶ್ಮೀರಕ್ಕೆ ನಟ ಅತುಲ್ ಕುಲಕರ್ಣಿ (Atul Kulkarni) ಭೇಟಿ ನೀಡಿ ಪ್ರವಾಸಿಗರು ಮತ್ತೆ ಬರುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ:ಮಾಜಿ ಪತ್ನಿ ಮನೆಗೆ ಗೆಳತಿಯೊಂದಿಗೆ ಬಂದ ಆಮೀರ್ ಖಾನ್

    ಉಗ್ರರ ದಾಳಿಯ ಬಳಿಕ ಕಾಶ್ಮೀರಕ್ಕೆ ಭೇಟಿ ನೀಡಿ ಸಮಯ ಕಳೆದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ನಲ್ಲಿ ಏಪ್ರಿಲ್- ಮೇ ತಿಂಗಳುಗಳಲ್ಲಿ ಕಾಶ್ಮೀರ ಪ್ರವಾಸಿಗರಿಂದ ತುಂಬಿರುತ್ತದೆ. ಆದರೆ ಉಗ್ರರ ದಾಳಿಯ ಬಳಿಕ ವಿಮಾನವೂ ಖಾಲಿ ಇದೆ. ಈ ವಿಮಾನ ಯಾವಾಗಲೂ ತುಂಬಿರುತ್ತಿತ್ತು. ನಾವೀಗ ಮತ್ತೆ ಸ್ಥಾನವನ್ನು ತುಂಬಬೇಕು, ಭಯೋತ್ಪಾದನೆಯನ್ನು ಸೋಲಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ:KD ಚಿತ್ರದ ಸ್ಪೆಷಲ್‌ ವಿಡಿಯೋ ಔಟ್- ಮಸ್ತ್ ಆಗಿದೆ ಮಚ್ಚಲಕ್ಷ್ಮಿಯ ಅವತಾರ

    ಇದು ಹಿಂದೂಸ್ತಾನದ ಭೂಮಿ, ಇಲ್ಲಿ ಭಯಕ್ಕಿಂತ ಧೈರ್ಯವೇ ಹೆಚ್ಚು. ಇದು ಹಿಂದೂಸ್ತಾನದ ಭೂಮಿ, ಇಲ್ಲಿ ಪ್ರೀತಿ ದ್ವೇಷವನ್ನು ಗೆಲ್ಲುತ್ತದೆ. ಕಾಶ್ಮೀರಕ್ಕೆ ಹೋಗೋಣ, ನಾನು ಬಂದಿದ್ದೇನೆ ನೀವೂ ಬನ್ನಿ ಎಂದು ಅತುಲ್ ಸೋಶಿಯಲ್‌ ಮೀಡಿಯಾದಲ್ಲಿ ಫ್ಯಾನ್ಸ್‌ಗೆ ಸಂದೇಶ ನೀಡಿದ್ದಾರೆ.

    ಬಹುಭಾಷಾ ನಟ ಅತುಲ್ ಕುಲಕರ್ಣಿ ಅವರು ಮೈತ್ರಿ, ಯಕ್ಷ, ಎದೆಗಾರಿಕೆ, ಉಗ್ರಂ, ಅಭಿನೇತ್ರಿ ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ಭಾರತ – ಪಾಕ್‌ ನಡುವೆ ಉದ್ವಿಗ್ನತೆ ಮೇಲೆ ಚೀನಾ ನಿಗಾ – ಪಾಕಿಸ್ತಾನದ ಈ ಬೇಡಿಕೆಗೆ ಬೆಂಬಲ

    ಭಾರತ – ಪಾಕ್‌ ನಡುವೆ ಉದ್ವಿಗ್ನತೆ ಮೇಲೆ ಚೀನಾ ನಿಗಾ – ಪಾಕಿಸ್ತಾನದ ಈ ಬೇಡಿಕೆಗೆ ಬೆಂಬಲ

    ಶ್ರೀನಗರ/ಇಸ್ಲಾಮಾಬಾದ್‌/ಬೀಜಿಂಗ್‌: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯ (Pahalgam Terrorist Attack) ಬಳಿಕ ಭಾರತ ಸರ್ಕಾರ ಪಾಕ್‌ ವಿರುದ್ಧ ತ್ವರಿತ ಕ್ರಮಗಳನ್ನು ಕೈಗೊಳ್ಳುತ್ತಿದೆ, ಇದರಿಂಧ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆದ್ರೆ ಈ ಬೆಳವಣಿಗೆಯನ್ನು ಚೀನಾ (China) ಸೂಕ್ಮವಾಗಿ ಗಮನಿಸುತ್ತಿದೆ.

    ಈ ನಡುವೆ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಪಾಕಿಸ್ತಾನದ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಮೊಹಮ್ಮದ್ ಇಶಾಕ್ ದಾರ್ ಜೊತೆಗೆ ಮಾತನಾಡಿದ್ದು, ಪಾಕಿಸ್ತಾನದ ಬೇಡಿಕೆಯೊಂದಕ್ಕೆ ಬೆಂಬಲ ನೀಡಿರುವುದಾಗಿ ವರದಿಗಳು ತಿಳಿಸಿವೆ.

    ಹೌದು. ಪಹಲ್ಗಾಮ್ ದಾಳಿಯ ಕುರಿತು ತಟಸ್ಥ ತನಿಖೆ ನಡೆಸಬೇಕೆಂಬ ಪಾಕಿಸ್ತಾನದ ಬೇಡಿಕೆಗೆ ಚೀನಾ ಬೆಂಬಲ ವ್ಯಕ್ತಪಡಿಸಿದೆ ಎನ್ನಲಾಗಿದೆ ಎಂದು ಚೀನಾದ ಮಾಧ್ಯಮ ವರದಿ ಮಾಡಿದೆ.

    ಚೀನಾ – ಪಾಕ್‌ ನಡುವೆ ಮಾತುಕತೆ
    ಚೀನಾದ ಕಮ್ಯುನಿಸ್ಟ್ ಪಕ್ಷದ ಮುಖವಾಣಿ ಗ್ಲೋಬಲ್ ಟೈಮ್ಸ್ ಪ್ರಕಾರ, ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಅವರು ಪಾಕ್‌ ವಿದೇಶಾಂಗ ಸಚಿವ ಇಶಾಕ್ ದಾರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಏತನ್ಮಧ್ಯೆ, ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ಗಮನಿಸುತ್ತಿರುವುದಾಗಿ ಚೀನಾ ಹೇಳಿದೆ.

    ಪಾಕ್‌ ಬೇಡಿಕೆ ಏನು?
    ಪಹಲ್ಗಾಮ್ ದಾಳಿಯ ತನಿಖೆಯಲ್ಲಿ ರಷ್ಯಾ ಮತ್ತು ಚೀನಾವನ್ನ ಸೇರಿಸಬೇಕೆಂದು ಪಾಕಿಸ್ತಾನ ಒತ್ತಾಯಿಸಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಭಾರತದ ಪ್ರಧಾನಿ ನರೇಂದ್ರ ಮೋದಿ ಸತ್ಯ ಹೇಳುತ್ತಿದ್ದಾರೋ ಅಥವಾ ಸುಳ್ಳು ಹೇಳುತ್ತಿದ್ದಾರೋ ಎಂಬುದನ್ನ ಅಂತಾರಾಷ್ಟ್ರೀಯ ತಂಡ ತನಿಖೆ ಮಾಡಬೇಕು ಎಂದು ಹೇಳಿತ್ತು.

  • ಭಾರತ ಹಿಂದೂಗಳಂತೆ ಮುಸ್ಲಿಮರಿಗೂ ಸೇರಿದೆ – ಪಹಲ್ಗಾಮ್ ದಾಳಿ ಬಗ್ಗೆ ರಾಖಿ ಸಾವಂತ್ ಮಾತು

    ಭಾರತ ಹಿಂದೂಗಳಂತೆ ಮುಸ್ಲಿಮರಿಗೂ ಸೇರಿದೆ – ಪಹಲ್ಗಾಮ್ ದಾಳಿ ಬಗ್ಗೆ ರಾಖಿ ಸಾವಂತ್ ಮಾತು

    ಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಬಾಲಿವುಡ್ ಚಿತ್ರರಂಗದ ಅನೇಕ ನಟ ನಟಿಯರು ಖಂಡಿಸಿದ್ದಾರೆ. ಇದೀಗ ರಾಖಿ ಸಾವಂತ್ (Rakhi Sawant) ಅವರು ಹಿಂದೂ ಮತ್ತು ಮುಸ್ಲಿಂ ವಿಭಜನೆಯನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಮುಂದಿನ ರಜೆಯಲ್ಲಿ ಕಾಶ್ಮೀರಕ್ಕೆ ಭೇಟಿ ನೀಡೋದಾಗಿ ನಟಿ ಹೇಳಿದ್ದಾರೆ. ಇದನ್ನೂ ಓದಿ: ದಳಪತಿ ವಿಜಯ್‌ ನೋಡಲು ಮರದಿಂದ ಜಿಗಿದು ಅಭಿಮಾನಿಯ ಹುಚ್ಚಾಟ- ವಿಡಿಯೋ ವೈರಲ್

    ರಾಖಿ ಬುರ್ಖಾ ಧರಿಸಿ ಉಗ್ರರ ದಾಳಿ ಕುರಿತು ಮಾತನಾಡಿ, ನಾವೆಲ್ಲರೂ ಒಂದೇ. ನಮ್ಮ ಹಿಂದೂಸ್ಥಾನದಿಂದ ಮುಸ್ಲಿಮರನ್ನು ಯಾರೂ ಓಡಿಸಲು ಸಾಧ್ಯವಿಲ್ಲ. ಭಾರತವು ಹಿಂದೂಗಳಿಗೆ ಸೇರಿದಷ್ಟೇ ಮುಸ್ಲಿಮರಿಗೂ ಸೇರಿದೆ. ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸಬೇಡಿ. ಸಣ್ಣ ಮಕ್ಕಳಂತೆ ವರ್ತಿಸಬೇಡಿ, ಪ್ರಬುದ್ಧರಾಗಿರಿ. ದೇವರ ಮೇಲೆ ಕರುಣೆ ತೋರಿ. ದೇವರು ಎಷ್ಟು ನೋವನ್ನು ಅನುಭವಿಸುತ್ತಿರಬಹುದು ಎಂದು ಊಹಿಸಿ. ಅವನು ನಮ್ಮೆಲ್ಲರನ್ನೂ ಸೃಷ್ಟಿಸಿದನು, ನಾವೆಲ್ಲರೂ ಅವನ ಮಕ್ಕಳು. ಆದರೆ ನಾವು ಪರಸ್ಪರ ಜಗಳವಾಡುತ್ತಿದ್ದೇವೆ. ಒಬ್ಬರನ್ನೊಬ್ಬರು ಕೊಲ್ಲುತ್ತಿದ್ದೇವೆ ಇದರಿಂದ ದೇವರಿಗೂ ಬೇಜಾರ್ ಆಗಿದೆ ಎಂದಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್‌ನಲ್ಲಿ ತುಂಬಾ ಕ್ರೂರವಾಗಿ ಸಾಯಿಸಿದ್ದಾರೆ: ಉಗ್ರರ ದಾಳಿ ಬಗ್ಗೆ ರಾಗಿಣಿ ಕಿಡಿ

     

    View this post on Instagram

     

    A post shared by Rakhi Sawant (@rakhisawant2511)

    ನಾನು ನನ್ನ ಮುಂದಿನ ರಜೆಯನ್ನು ಕಾಶ್ಮೀರದಲ್ಲಿ ಕಳೆಯುತ್ತೇನೆ. ಕಾಶ್ಮೀರಕ್ಕೆ ಹೋಗುವುದು ನಮ್ಮ ಹಕ್ಕು. ಕಾಶ್ಮೀರ ನಮ್ಮದು ಮತ್ತು ಕಾಶ್ಮೀರದ ಜನರು ನಮ್ಮ ಸಹೋದರ ಸಹೋದರಿಯರು. ನಾವು ಭಾರತದ ಹೊರಗೆ ಹೋಗುವುದಿಲ್ಲ. ನಾನು ಕಾಶ್ಮೀರಕ್ಕೆ ಹೋಗುತ್ತೇನೆ, ನೀವು ನನ್ನನ್ನು ಬೆಂಬಲಿಸುತ್ತೀರಾ? ಅಲ್ವಾ ಎಂದು ಅಭಿಮಾನಿಗಳಿಗೆ ನಟಿ ಪ್ರಶ್ನಿಸಿದ್ದಾರೆ. ಈ ಕಾರ್ಯಕ್ಕೆ ಬಾಲಿವುಡ್ ಕೂಡ ಬೆಂಬಲಿಸುತ್ತದೆ ಎಂದು ರಾಖಿ ಮಾತನಾಡಿದ್ದಾರೆ.

    ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಬಲಿಯಾಗಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದಾರೆ.

  • Pahalgam Attack | AK-47, M4 ರೈಫಲ್‌ ಹೊತ್ತು, ದಟ್ಟ ಕಾಡಿನಲ್ಲಿ 22 ಗಂಟೆ ನಡೆದುಕೊಂಡೇ ಬಂದಿದ್ದ ಉಗ್ರರು

    Pahalgam Attack | AK-47, M4 ರೈಫಲ್‌ ಹೊತ್ತು, ದಟ್ಟ ಕಾಡಿನಲ್ಲಿ 22 ಗಂಟೆ ನಡೆದುಕೊಂಡೇ ಬಂದಿದ್ದ ಉಗ್ರರು

    ಶ್ರೀನಗರ: ಪಹಲ್ಗಾಮ್‌ನಲ್ಲಿ ರಕ್ತದೋಕುಳಿ ಹರಿಸಿದ (Pahalgam Terrorist Attack) ಉಗ್ರರ ಬಗ್ಗೆ ಮತ್ತಷ್ಟು ರೋಚಕ ಸಂಗತಿಗಳು ಹೊರಬೀಳುತ್ತಿವೆ. ಇದೀಗ ಶಸ್ತ್ರಸಜ್ಜಿತ ಉಗ್ರರು ದಾಳಿ ನಡೆಸುವುದಕ್ಕಾಗಿಯೇ AK-47 ಮತ್ತು M4 ರೈಫಲ್‌ಗಳನ್ನ ಹೊತ್ತು ದಟ್ಟ ಕಾಡುಗಳ ಮಧ್ಯೆ 22 ಗಂಟೆಗಳ ಕಾಲ ನಡೆದು ಪಹಲ್ಗಾಮ್‌ (Pahalgam) ತಲುಪಿದ್ದರು ಅನ್ನೋ ಸ್ಫೋಟಕ ಮಾಹಿತಿ ಬೆಳಕಿಗೆ ಬಂದಿದೆ.

    ಮೂಲಗಳ ಪ್ರಕಾರ, ಶಸ್ತ್ರಸಜ್ಜಿತ ಭಯೋತ್ಪಾದಕರು ಬೈಸರನ್‌ (Baisaran) ಕಣಿವೆ ಪ್ರದೇಶಕ್ಕೆ ತಲುಪಲು ದಟ್ಟ ಕಾಡಿನೊಳಗೆ ಸುಮಾರು 20-22 ಗಂಟೆಗಳ ಕಾಲ ನಡೆದುಕೊಂಡೇ ಬಂದಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಮರದ ಮೇಲೆ ಕುಳಿತು ಇಡೀ ಕೃತ್ಯ ಸೆರೆ ಹಿಡಿದಿದ್ದ ರೀಲ್ಸ್‌ ವಿಡಿಯೋಗ್ರಾಫರ್‌ ಎನ್‌ಐಎಗೆ ಪ್ರಮುಖ ಸಾಕ್ಷಿ

    ಆಧುನಿಕ ಶಸ್ತ್ರಾಸ್ತ್ರಗಳ ಬಳಕೆ
    ಉಗ್ರ ಕೃತ್ಯಕ್ಕೆ ಭಯೋತ್ಪಾದಕರು ಆಧುನಿಕ AK-47 ಮತ್ತು M4 ಅಸಾಲ್ಟ್ ರೈಫಲ್‌ಗಳನ್ನು ಬಳಸಿದ್ದಾರೆ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ತಂಡ ದೃಢಪಡಿಸಿದೆ. ಜೊತೆಗೆ ಘಟನಾ ಸ್ಥಳದಲ್ಲಿ ಕಾಟ್ರಿಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಪಾಕ್‌ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಿದೆ: ಸಿದ್ದರಾಮಯ್ಯ

    2 ಮೊಬೈಲ್‌ ಕಸಿದ ಉಗ್ರರು
    ಇನ್ನೂ ದಾಳಿ ಸಂದರ್ಭದಲ್ಲಿ ರಕ್ತದೋಕುಳಿ ಹರಿಸಿದ ಉಗ್ರರು ಸ್ಥಳದಲ್ಲಿದ್ದ ಓರ್ವ ಪ್ರವಾಸಿಗರು ಹಾಗೂ ಸ್ಥಳೀಯ ನಿವಾಸಿಯೊಬ್ಬರ ಮೊಬೈಲ್‌ ಫೋನುಗಳನ್ನು ಕಸಿದುಕೊಂಡಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನೂ ಈ ಉಗ್ರ ಕೃತ್ಯದಲ್ಲಿ ಮೂವರು ಪಾಕಿಸ್ತಾನಿಯರು ಹಾಗೂ ಓರ್ವ ಸ್ಥಳೀಯ ಭಾಗಿಯಾಗಿದ್ದಾನೆಂದು ತಿಳಿದುಬಂದಿದೆ. ಸ್ಥಳೀಯ ಭಯೋತ್ಪಾದಕನನ್ನು ಆದಿಲ್ ಥೋಕರ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಪಟಾಕಿ ಸಿಡಿದರೂ, ಪಾಕಿಸ್ತಾನವನ್ನೇ ದೂಷಿಸುತ್ತಾರೆ: ಶಾಹಿದ್‌ ಅಫ್ರಿದಿ

    ಮರದ ಮೇಲೆ ಕುಳಿತು ಇಡೀ ಕೃತ್ಯ ಸೆರೆ
    ಸದ್ಯ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ಮಳೆಗರೆಯುತ್ತಿದ್ದಂತೆ ಭಯಕ್ಕೆ ಮರ ಏರಿದ್ದ ರೀಲ್ಸ್‌ ವಿಡಿಯೋ ಗ್ರಾಫರ್‌ ಇಡೀ ಕೃತ್ಯವನ್ನು ಮರದ ಮೇಲೆ ಕುಳಿತುಕೊಂಡೆ ಸೆರೆ ಹಿಡಿಯುತ್ತಿದ್ದರು. ಇದೀಗ ಎನ್‌ಐಎಗೆ ಆ ವಿಡಿಯೋ ಗ್ರಾಫರ್‌ (Reels Videographer) ಪ್ರಮುಖ ಸಾಕ್ಷಿಯಾಗಿದ್ದಾರೆ. ಲಭ್ಯವಾಗಿರುವ ವಿಡಿಯೋ ಪ್ರಕಾರ, ನಾಲ್ವರು ಉಗ್ರರು ಎರಡು ಗುಂಪುಗಳಾಗಿ ಬೇರ್ಪಟ್ಟಿದ್ದರು. ಇಬ್ಬರು ಹುಲ್ಲುಗಾವಲು ಪ್ರದೇಶದ ಎರಡೂ ಬದಿ ಅವಿತುಕೊಂಡಿದ್ದರೆ, ಮತ್ತಿಬ್ಬರು ಅಲ್ಲೇ ಇದ್ದ ತಿಂಡಿ ಅಂಗಡಿ ಬಳಿ ಅವಿತಿದ್ದರು. ಮಧ್ಯಾಹ್ನ 2.30ರ ಸುಮಾರಿಗೆ, ಅಂಗಡಿಗಳ ಹಿಂದೆ ಅಡಗಿಕೊಂಡಿದ್ದ ಇಬ್ಬರು ಭಯೋತ್ಪಾದಕರು ಹೊರಬಂದರು. ಆಗ ಅಲ್ಲಿ ತಿಂಡಿ ತಿನ್ನುತ್ತಿದ್ದ ಸ್ಥಳೀಯರಲ್ಲದವರನ್ನ ಧರ್ಮದ ಬಗ್ಗೆ ಕೇಳುತ್ತಾ ಬಂದವರು. ಕೆಲವರು ತಪ್ಪಿಸಿಕೊಳ್ಳು ತಾನು ಮುಸ್ಲಿಂ ಎಂದು ಹೇಳಿದಾಗ ಕಲಿಮಾ ಪಠಿಸಲು ಹೇಳಲಾಯಿತು. ಬಳಿಕ ಕಲಿಮಾ ಪಠಿಸಲು ಸಾಧ್ಯವಾಗದವರನ್ನ ಪಾಯಿಂಟ್‌ ಬ್ಲಾಕ್‌ನಲ್ಲಿ ಶೂಟ್‌ ಮಾಡುತ್ತಾ ಬಂದರು. ಗುಂಡು ಹಾರಿಸುತ್ತಿದ್ದಂತೆ ಇಡೀ ಪ್ರದೇಶದಲ್ಲಿ ಭೀತಿ ಉಂಟಾಗಿ ಕೆಲವರು ದಿಕ್ಕಾಪಾಲಾಗಿ ಓಡಿದರು. ಈ ಸಂದರ್ಭದಲ್ಲಿ ಹುಲ್ಲುಗಾವಲಿನ ಜಿಪ್‌ಲೈನ್‌ನಲ್ಲಿ ಅವಿತಿದ್ದವರೂ ಗುಂಡು ಹಾರಿಸಲು ಶುರು ಮಾಡಿದ್ರು. ಈ ಎಲ್ಲಾ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ವರದಿಗಳು ತಿಳಿಸಿವೆ.