Tag: Pahalgam Terrorist Attack

  • ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯದಿಂದ ತಲಾ 1 ಲಕ್ಷ ಪರಿಹಾರ

    ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ಮಂತ್ರಾಲಯದಿಂದ ತಲಾ 1 ಲಕ್ಷ ಪರಿಹಾರ

    – ನಾವೆಲ್ಲರೂ ನಿದ್ರಾವಸ್ಥೆಯಿಂದ ಎಚ್ಚೆತ್ತು ಮೇಲ್ಬರಬೇಕು; ಶ್ರೀಗಳ ಕರೆ

    ರಾಯಚೂರು: ಪಹಲ್ಗಾಮ್‌ನಲ್ಲಿ (Pahalgam) ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಮಂತ್ರಾಲಯ (Mantralaya) ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಗಳು ಸಂತಾಪ ಸೂಚಿಸಿದ್ದಾರೆ. ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಕ್ಕೆ ಮಠದಿಂದ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಪಹಲ್ಗಾಮ್ ದಾಳಿಯ ಕುರಿತು ಮಾತನಾಡಿದ ಅವರು, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆಯನ್ನ ತೀವ್ರವಾಗಿ ಖಂಡಿಸುತ್ತೇವೆ. ನಾವೆಲ್ಲಾ ಭಾರತೀಯರು ಶಾಂತಿ ಪ್ರಿಯರು. ನಮ್ಮ ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲಾ ಸಮುದಾಯದವರು ಒಂದೇ ತಾಯಿ ಮಕ್ಕಳು. ನಾವೆಲ್ಲರೂ ಒಂದೇ ನಮ್ಮಲ್ಲಿ ಬೇಧ ಭಾವನೆ ಇಲ್ಲ. ಆದರೆ ಬೇರೆ ದೇಶದವರು, ಉಗ್ರರು ಬಂದು ನಮ್ಮಲ್ಲಿ ಒಡೆದಾಳುವ ನೀತಿ ಮಾಡಿ ಜಾತಿ, ಕೋಮು ಗಲಭೆ ಸೃಷ್ಟಿಸುವ ಮೂಲಕ ಅಶಾಂತಿ ಉಂಟುಮಾಡುವ ದುಷ್ಟ ಕೃತ್ಯ ಮಾಡುತ್ತಿದ್ದಾರೆ. ಇಂಥಹ ಉಗ್ರರನ್ನ ನಾವೆಲ್ಲಾ ಸಂಘಟಿತರಾಗಿ ಎದುರಿಸಬೇಕು ಎಂದು ಕರೆ ನೀಡುತ್ತೇವೆ ಎಂದರು. ಇದನ್ನೂ ಓದಿ: Pahalgam Terrorist Attack | ರಾಜನಾಥ್‌ ಸಿಂಗ್‌ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಶುರು – ರಾಹುಲ್‌, ಖರ್ಗೆ ಭಾಗಿ

    ನಮ್ಮ ಮಹಿಳೆಯರನ್ನ ರಕ್ಷಣೆ ಮಾಡಬೇಕು. ನಮ್ಮ ಧರ್ಮ, ದೇವಸ್ಥಾನ, ಮಠಮಾನ್ಯ ಶ್ರದ್ಧಾಕೇಂದ್ರಗಳನ್ನ ರಕ್ಷಣೆ ಮಾಡಬೇಕು. ನಿದ್ರಾವಸ್ಥೆಯಿಂದ ಎಚ್ಚೆತ್ತು ಮೇಲ್ಬರಬೇಕು. ಕಾಶ್ಮೀರದಲ್ಲಿ ನಡೆದ ಘಟನೆ ಎಲ್ಲಾದರೂ ನಡೆಯಬಹುದು. ಯಾರೂ ಎಚ್ಚರ ತಪ್ಪಿ ಇರಬಾರದು ಎಚ್ಚರಿಕೆಯಿಂದ ಇರಬೇಕು ಎಂದು ಕರೆ ನೀಡಿದರು. ಇದನ್ನೂ ಓದಿ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದ ದಿನವೇ ಗೌತಮ್‌ ಗಂಭೀರ್‌ಗೆ ಜೀವ ಬೆದರಿಕೆ

    ಮೃತರ ಕುಟುಂಬಗಳಿಗೆ ನೈತಿಕ ಬೆಂಬಲದ ಅವಶ್ಯಕತೆಯಿದೆ. ಈ ದುಷ್ಕೃತ್ಯದ ಕಾರಣಕರ್ತರನ್ನ ಸರ್ಕಾರಗಳು ಅನ್ವೇಷಣೆ ಮಾಡಿ ಸೂಕ್ತ ಶಿಕ್ಷೆಗೆ ಒಳಪಡಿಸಬೇಕು. ಅಶಾಂತಿ ಕದಡದಂತೆ ದೇಶದಲ್ಲಿ ಭದ್ರತೆ, ಜಾಗ್ರತೆ ವಹಿಸಬೇಕು ಎಂದು ಕೇಂದ್ರ ಸರ್ಕಾರ ಹಾಗೂ ಕಾಶ್ಮೀರ ಸರ್ಕಾರಕ್ಕೆ ಒತ್ತಾಯಿಸುತ್ತೇವೆ ಎಂದು ಹೇಳಿದರು.

  • ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

    ನೀರು ನಿಲ್ಲಿಸೋದು ಯುದ್ಧಕ್ಕೆ ಆಹ್ವಾನಿಸಿದಂತೆ – ಭಾರತದ ಪ್ರತೀಕಾರ ನಿರ್ಧಾರದಿಂದ ಕೋಪಗೊಂಡ ಪಾಕ್‌

    – ಭಾರತದ ಕ್ರಮಗಳ ಬಳಿಕ ಪಾಕ್ ಪ್ರಧಾನಿ ನೇತೃತ್ವದಲ್ಲಿ ಸಭೆ
    – ಭಾರತದ ಜೊತೆಗಿನ ಎಲ್ಲ ಒಪ್ಪಂದಗಳಿಗೆ ಬ್ರೇಕ್ – ಶಿಮ್ಲಾ ಒಪ್ಪಂದ ಅಮಾನತು
    – ಭಾರತದಲ್ಲಿ ಮುಸ್ಲಿಮರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ: ಎನ್‌ಎಸ್‌ಸಿ ಆರೋಪ

    ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ (Pahalgam Terrorist Attack) 26 ಮಂದಿ ಅಮಾಯಕರ ಸಾವಿನ ನಂತರ ಭಾರತವು ಪಾಕ್‌ ಜೊತೆಗಿನ ರಾಜತಾಂತ್ರಿಕ ಸಬಂಧವನ್ನು ಕಡಿದುಕೊಂಡಿದೆ. 1960ರ ಸಿಂಧೂ ನದಿ ಒಪ್ಪಂದ ರದ್ದು ಸೇರಿದಂತೆ ಹಲವು ಕಠಿಣ ನಿರ್ಧಾರ ಕೈಗೊಂಡಿದೆ. ಭಾರತದಲ್ಲಿರುವ ಪಾಕ್‌ (Pakistan) ಪ್ರಜೆಗಳು ದೇಶ ತೊರೆಯುವಂತೆ ಎಚ್ಚರಿಕೆ ನೀಡಿದೆ. ಈ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶಹಬಾಜ್‌ ಷರೀಫ್‌ (Shehbaz Sharif) ಇಂದು ಮಹತ್ವದ ಭದ್ರತಾ ಸಭೆ ನಡೆಸಿದ್ದಾರೆ.

    ಇಸ್ಲಾಮಾಬಾದ್‌ನಲ್ಲಿ (Islamabad) ಪಾಕಿಸ್ತಾನದ ಮೂರು ಸೇನಾಪಡೆಗಳ ಮುಖ್ಯಸ್ಥರು, ಪ್ರಮುಖ ಸಚಿವರು, ಉನ್ನತ ನಾಗರಿಕ ಮತ್ತು ಮಿಲಿಟರಿ ಅಧಿಕಾರಿಗಳೊಂದಿಗೆ ಪಾಕ್‌ ಪ್ರಧಾನಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪಾಕಿಸ್ತಾನ ಪಾಲಿನ ನೀರನ್ನು ತಡೆಯಲು ಭಾರತ ಪ್ರಯತ್ನಿಸಿದ್ರೆ, ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸುವುದಾಗಿ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಪಹಲ್ಗಾಮ್‌ ದಾಳಿ – ಪಾಕ್‌ ಉಗ್ರರ ಮಾಹಿತಿ ಕೊಟ್ಟವರಿಗೆ 20 ಲಕ್ಷ ಬಹುಮಾನ ಘೋಷಣೆ

    ಭಾರತಕ್ಕೆ ಪಾಕ್ ಏರ್‌ಸ್ಪೇಸ್ ಬಂದ್:
    ಇನ್ನೂ ಭಾರತ ಸರ್ಕಾರ (Indian Government) ಕಠಿಣ ನಿರ್ಧಾರ ಕೈಗೊಂಡಂತೆ ಪಾಕಿಸ್ತಾನ ಸಹ ಭಾರತ ವಿರೋಧಿ ನಿರ್ಧಾರಗಳನ್ನು ಇಂದಿನ ಪ್ರಮುಖ ಸಭೆಯಲ್ಲಿ ತೆಗೆದುಕೊಂಡಿದೆ. ಭಾರತದ ಒಡೆತನದ ಮತ್ತು ಭಾರತದ ವಿಮಾನಯಾನ ಸಂಸ್ಥೆಗಳಿಗೆ ಪಾಕಿಸ್ತಾನದ ವಾಯುಸೀಮೆಯನ್ನು ಸಂಪೂರ್ಣವಾಗಿ ಬಂದ್‌ ಮಾಡಲಾಗಿದೆ. ಜೊತೆಗೆ ಭಾರತದ ಜೊತೆಗಿನ ಎಲ್ಲಾ ಒಪ್ಪಂದಗಳನ್ನು ಕಡಿದುಕೊಳ್ಳಲು ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಂಡಿರುವುದಾಗಿ ತಿಳಿದುಬಂದಿದೆ. ಇದನ್ನೂ ಓದಿ: ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೇವೆ: ಘರ್ಜಿಸಿದ ಮೋದಿ

    ಮುಸ್ಲಿಮರ ಮೇಲೆ ದಬ್ಬಾಳಿಕೆ ಹೆಚ್ಚಾಗಿದೆ:
    ಮುಂದುವರಿದು… ಭಾರತದಲ್ಲಿ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರ ಮೇಲಿನ ದಬ್ಬಾಳಿಕೆ ಹೆಚ್ಚಾಗಿದೆ ಎಂದು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿ (ಎನ್‌ಎಸ್‌ಸಿ) ಆರೋಪಿಸಿದೆ. ಭಾರತ ಸರ್ಕಾರವು ವಕ್ಫ್ ತಿದ್ದುಪಡಿ ಕಾಯ್ದೆಯ ಮೂಲಕ ಮುಸ್ಲಿಂ ಸಮುದಾಯವನ್ನು ಅಂಚಿನಲ್ಲಿಡುತ್ತಿದೆ. ಈ ರೀತಿ ಮಾಡಿ ರಾಜಕೀಯ ಲಾಭ ಪಡೆಯಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಎನ್‌ಎಸ್‌ಸಿ ಆರೋಪಿಸಿದೆ. ಅಲ್ಲದೇ ಕಾಶ್ಮೀರ ಭಾರತ ಮತ್ತು ಪಾಕಿಸ್ತಾನದ ನಡುವಿನ ಬಗೆಹರಿಯದ ವಿವಾದವಾಗಿದೆ ಎಂದು ಹೇಳಿದೆ.

    ಭಾರತದ ಕ್ರಮಗಳಿಗೆ ತತ್ತರಿಸಿದ ಪಾಕ್
    ಇನ್ನೂ ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಬಳಿಕ ಭಾರತದ ಕ್ರಮಗಳಿಂದ ತತ್ತರಿಸಿರುವ ಪಾಕಿಸ್ತಾನ, ಭಾರತ ಸರ್ಕಾರದ ವಿರುದ್ಧ ಕಿಡಿ ಕಾರಿದೆ. ಭಾರತ ತೆಗೆದುಕೊಂಡ ಕ್ರಮಗಳು ಏಕಪಕ್ಷೀಯವಾಗಿದೆ, ಇದು ಅನ್ಯಾಯ, ರಾಜಕೀಯ ಪ್ರೇರಿತ, ಬೇಜವಾಬ್ದಾರಿ ಮತ್ತು ಆಧಾರರಹಿತ ಹೇಳಿದೆ. ಇದನ್ನೂ ಓದಿ: ಭಾರತದಿಂದ ದಾಳಿ ಭೀತಿ – ಕ್ಷಿಪಣಿ ಪರೀಕ್ಷೆಗೆ ಮುಂದಾದ ಪಾಕ್‌

    ಪಾಕ್‌ ಸಭೆಯ ಪ್ರಮುಖ ನಿರ್ಣಯಗಳೇನು?
    * ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಭಾರತದ ನಿರ್ಧಾರವನ್ನು ಪಾಕಿಸ್ತಾನ ತಿರಸ್ಕರಿಸಿದೆ. ಈ ಒಪ್ಪಂದವು ವಿಶ್ವಬ್ಯಾಂಕ್ ಮಧ್ಯಸ್ಥಿಕೆ ವಹಿಸಿದ ಅಂತಾರಾಷ್ಟ್ರೀಯ ಒಪ್ಪಂದವಾಗಿದ್ದು, ಏಕಪಕ್ಷೀಯವಾಗಿ ಅಮಾನತುಗೊಳಿಸಲಾಗುವುದಿಲ್ಲ ಎಂದು NSC ಹೇಳಿದೆ.
    * ಭಾರತವು ನೀರನ್ನು ನಿಲ್ಲಿಸಲು ಅಥವಾ ಬೇರೆಡೆಗೆ ತಿರುಗಿಸಲು ಪ್ರಯತ್ನಿಸಿದರೆ, ಅದನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುತ್ತದೆ ಮತ್ತು ಪೂರ್ಣ ಬಲದಿಂದ ಪ್ರತಿಕ್ರಿಯಿಸಲಾಗುತ್ತದೆ ಎಂದು ಪಾಕಿಸ್ತಾನ ಹೇಳಿದೆ.
    * ಶಿಮ್ಲಾ ಒಪ್ಪಂದ ಸೇರಿದಂತೆ ಭಾರತದೊಂದಿಗಿನ ಎಲ್ಲಾ ದ್ವಿಪಕ್ಷೀಯ ಒಪ್ಪಂದಗಳನ್ನು ನಾವು ಸ್ಥಗಿತಗೊಳಿಸುತ್ತಿದ್ದೇವೆ ಎಂದು ಪಾಕಿಸ್ತಾನ ಹೇಳಿದೆ.
    * ಜೊತೆಗೆ ಪಾಕಿಸ್ತಾನ ಸಹ ವಾಘಾ ಗಡಿಯನ್ನು ತಕ್ಷಣದಿಂದಲೇ ಮುಚ್ಚುತ್ತಿದ್ದು, ಅನುಮತಿ ಇರುವವರು ಮಾತ್ರ ಏಪ್ರಿಲ್‌ 30ರ ಒಳಗೆ ಹಿಂದಿರುಗಬಹುದು.
    * ಸಾರ್ಕ್ ವೀಸಾ ಯೋಜನೆಯಡಿಯಲ್ಲಿರುವ ಎಲ್ಲಾ ಭಾರತೀಯ ಪ್ರಜೆಗಳ ವೀಸಾಗಳನ್ನು ರದ್ದುಪಡಿಸಲಾಗಿದೆ. ಸಿಖ್ ಯಾತ್ರಿಕರಿಗೆ ಮಾತ್ರ ವಿನಾಯಿತಿ ನೀಡಲಾಗುವುದು. ಉಳಿದ ಭಾರತೀಯರು 48 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ಸೂಚಿಸಲಾಗಿದೆ.
    * ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸಲಹೆಗಾರರಿಗೆ ಪಾಕಿಸ್ತಾನ ತೊರೆಯುವಂತೆ ಆದೇಶಿಸಲಾಗಿದೆ. ಅಲ್ಲದೆ, ಪಾಕಿಸ್ತಾನದಲ್ಲಿರುವ ಭಾರತೀಯ ಹೈಕಮಿಷನ್‌ನ ಸಿಬ್ಬಂದಿಯನ್ನ 30ಕ್ಕೆ ಇಳಿಸಲಾಗಿದೆ.
    – ಭಾರತದೊಂದಿಗಿನ ಎಲ್ಲಾ ವ್ಯಾಪಾರ ಒಪ್ಪಂದ ಬಂದ್‌ಗೆ ನಿರ್ಧಾರ ಕೈಗೊಳ್ಳಲಾಗಿದೆ.

  • ನಾನೊಬ್ಬ ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗ್ತಿದೆ: ಉಗ್ರರ ದಾಳಿಗೆ ಸಲೀಂ ಮರ್ಚೆಂಟ್ ಕಿಡಿ

    ನಾನೊಬ್ಬ ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗ್ತಿದೆ: ಉಗ್ರರ ದಾಳಿಗೆ ಸಲೀಂ ಮರ್ಚೆಂಟ್ ಕಿಡಿ

    ಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದ ದಾಳಿ ಕುರಿತಂತೆ ಬಾಲಿವುಡ್ ಖ್ಯಾತ ಗಾಯಕ ಸಲೀಂ ಮರ್ಚೆಂಟ್ (Salim Merchant) ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಹಿಂದೂ ಎಂಬ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ನಾನೊಬ್ಬ ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗ್ತಿದೆ ಎಂದು ಸಲೀಂ ಮಾತನಾಡಿದ್ದಾರೆ. ಇದನ್ನೂ ಓದಿ: ಮಹಾಭಾರತ ಸಿನಿಮಾ ಮಾಡೋದಾಗಿ ಘೋಷಿಸಿದ ಆಮೀರ್ ಖಾನ್

    ಗಾಯಕ ಸಲೀಂ ಹಂಚಿಕೊಂಡಿರುವ ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ, ಹಿಂದೂ ಅನ್ನೋ ಕಾರಣಕ್ಕೆ ಈ ದಾಳಿಯಲ್ಲಿ ಅಮಾಯಕರ ಹತ್ಯೆಯಾಗಿದೆ. ಅಮಾಯಕರನ್ನೇ ಟಾರ್ಗೆಟ್ ಮಾಡಲಾಗಿದೆ. ಹತ್ಯೆ ಮಾಡಿದವರು ಮುಸ್ಲಿಂರೇ? ಖಂಡಿತಾ ಅಲ್ಲ. ಅವರು ಭಯೋತ್ಪಾದಕರು ಎಂದಿದ್ದಾರೆ. ಹತ್ಯೆಯನ್ನು ಇಸ್ಲಾಂ ಎಂದು ಒಪ್ಪುವುದಿಲ್ಲ. ಯಾವುದೇ ಧರ್ಮದಲ್ಲಿ ಹೀಗೆಲ್ಲಾ ಇಲ್ಲ. ನಾನೊಬ್ಬ ಮುಸ್ಲಿಂ ಆಗಿದ್ದಕ್ಕೆ ನಾಚಿಕೆ ಆಗುತ್ತಿದೆ. ಇಂತಹ ದಿನಗಳನ್ನು ನೋಡುವಂತೆ ಆಗಿದೆ. ಇದನ್ನೂ ಓದಿ:ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

     

    View this post on Instagram

     

    A post shared by Salim Merchant (@salimmerchant)

    ನನ್ನ ಹಿಂದೂ ಸಹೋದರ ಸಹೋದರಿಯರ ಮೇಲೆ ಅವರು ಕ್ರೂರವಾಗಿ ದಾಳಿ ಮಾಡಿದ್ದಾರೆ. ಅದು ಹಿಂದೂ ಆಗಿರೋದ್ದಕ್ಕೆ, ಇದು ಯಾವಾಗ ಅಂತ್ಯಗೊಳ್ಳುತ್ತೆ ಎಂದು ಅವರು ಪ್ರಶ್ನಿಸಿದ್ದಾರೆ. ಕಳೆದ ಎರಡ್ಮೂರು ವರ್ಷದಿಂದ ಕಾಶ್ಮೀರ ಜನರು ಸಮಸ್ಯೆಗಳಿಂದ ಮುಕ್ತಿ ಪಡೆದು, ಸಹಜ ಜೀವನಕ್ಕೆ ಮರಳುತ್ತಿದ್ದರು. ಈ ದಾಳಿಯಿಂದ ಮತ್ತೆ ಅದೇ ರೀತಿ ಪರಿಸ್ಥಿತಿ ಎದುರಿಸುವಂತಾಗಿದೆ. ನನಗೆ ಯಾವ ರೀತಿಯಲ್ಲಿ ನೋವು ಮತ್ತು ಆಕ್ರೋಶವನ್ನು ವ್ಯಕ್ತಪಡಿಸಬೇಕು ಅಂತ ಅರ್ಥವಾಗುತ್ತಿಲ್ಲ. ನಾನು ಆ ದೇವರಲ್ಲಿ ಕೇಳಿಕೊಳ್ಳುತ್ತೇನೆ, ತೀರಿಕೊಂಡಿರುವ ಆ ವ್ಯಕ್ತಿಗಳ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಗಾಯಕ ಸಲೀಂ ಮಾತನಾಡಿದ್ದಾರೆ.

    ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಗೆ 26 ಮಂದಿ ಹಿಂದೂಗಳು ಬಲಿಯಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

  • ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ, ಎಲ್ಲಾ ಉಗ್ರ ತಾಣಗಳನ್ನು ನಾಶಪಡಿಸಬೇಕು: ಸಿಎಂ

    ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ, ಎಲ್ಲಾ ಉಗ್ರ ತಾಣಗಳನ್ನು ನಾಶಪಡಿಸಬೇಕು: ಸಿಎಂ

    ಬೆಂಗಳೂರು: ಕೇಂದ್ರ ಸರ್ಕಾರದ ಜೊತೆ ನಾವಿದ್ದೇವೆ. ಎಲ್ಲಾ ಉಗ್ರ ತಾಣಗಳನ್ನು ನಾಶಪಡಿಸಬೇಕು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ (Pahalgam Terrorist Attack) ಬಲಿಯಾದ ಮತ್ತಿಕೆರೆಯ ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸರ್ಕಾರದ ಪರವಾಗಿ ಕನ್ನಡ ನಾಡಿನ ಏಳು ಕೋಟಿ ಜನರ ಪರವಾಗಿ ಭರತ್ ಭೂಷಣ್‌ಗೆ ಶ್ರದ್ದಾಂಜಲಿ ಸಲ್ಲಿಸಿದ್ದೇನೆ. ಇನ್ನೂ ಚಿಕ್ಕ ವಯಸ್ಸು. ಭರತ್ ಭೂಷಣ್ ಬಿಇ ಎಂಬಿಎ ಮಾಡಿದ್ದಾರೆ. ಉಗ್ರರು ಅಮಾನವೀಯವಾಗಿ ಕೃತ್ಯ ಎಸಗಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸಿದ್ದೇನೆ. ಉಗ್ರ ಚಟುವಟಿಕೆಗಳು ಈ ದೇಶದಿಂದ ಹೋಗಬೇಕು. ಯಾವುದೇ ಕಾರಣಕ್ಕೂ ಸರ್ಕಾರ ಕನಿಕರ ತೋರಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಪಾಕ್‌ ಸೇನಾ ಮುಖ್ಯಸ್ಥ ಮುನೀರ್‌ ಉಗ್ರ – ಲಾಡೆನ್‌ನಂತೆ ಈತನ ಅಂತ್ಯವಾಗಬೇಕು: ಪೆಂಟಗನ್‌ ಮಾಜಿ ಅಧಿಕಾರಿ

    ಹಾಡಹಗಲೇ ಹೆಂಡತಿ, ಮಗು ಇದ್ದಾಗಲೆ ಶೂಟ್ ಮಾಡೋದಕ್ಕಿಂತ ಹೇಯಕೃತ್ಯ ಇನ್ನೊಂದಿಲ್ಲ. ಮನುಷ್ಯತ್ವ ಇಲ್ಲದವರು ಅವರು. ಇದನ್ನು ಖಂಡಿಸುತ್ತೇನೆ. ಇದೇ ಜಿಲ್ಲೆಯಲ್ಲಿ ಪುಲ್ವಾಮ ಅಟ್ಯಾಕ್ ಆಯಿತು. ಘಟನೆಯಲ್ಲಿ 40 ಸೈನಿಕರು ಸಾವನ್ನಪ್ಪಿದ್ದರು. ಅಲ್ಲೇ ಇದೀಗ ಮತ್ತೆ ಮರುಕಳಿಸಿದೆ. ಅವರು ಎಲ್ಲೇ ಇದ್ದರೂ ಪತ್ತೆ ಹಚ್ಚಿ ನಿರ್ಮೂಲನೆ ಮಾಡಬೇಕು. ಬಹುಷಃ ಎಲ್ಲೋ ಒಂದು ಕಡೆ ಇಂಟೆಲಿಜೆನ್ಸ್ ಫೇಲ್ಯೂರ್ ಆಗಿದೆ ಅನ್ನಿಸುತ್ತಿದೆ ಎಂದರು. ಇದನ್ನೂ ಓದಿ: ಸಿಗರೇಟ್‌ ಸೇದಬೇಡಿ ಎಂದಿದ್ದಕ್ಕೆ ಅನ್ಯ ಕೋಮಿನ ಯುವಕರಿಂದ ಆರ್‌ಎಸ್ಎಸ್ ಮುಖಂಡ, ಕುಟುಂಬದ ಮೇಲೆ ಹಲ್ಲೆ

    ಸತ್ತವರ ಕುಟುಂಬಗಳಿಗೆ ನಮ್ಮ ಸರ್ಕಾರ 10 ಲಕ್ಷ ರೂ. ಪರಿಹಾರ ನೀಡಿದೆ. ಯಾವಾಗಲೂ ನಮ್ಮ ಸರ್ಕಾರ ಕುಟುಂಬದ ಜೊತೆ ಇದೆ. ಸಚಿವ ಸಂತೋಷ್ ಲಾಡ್ ಅವರನ್ನು ಕೂಡಲೇ ಕಾಶ್ಮೀರಕ್ಕೆ ಕಳುಹಿಸಿದ್ದೆ. ಮೃತದೇಹಗಳು ಹಾಗೂ ಕನ್ನಡಿಗರನ್ನು ವಾಪಸ್ ಕರೆತರುವಂತೆ ತಿಳಿಸಿದ್ದೆ. 177 ಜನರನ್ನು ಲಾಡ್ ವಾಪಸ್ ಕರೆತರುತ್ತಿದ್ದಾರೆ. ಇನ್ನೊಂದು ಸಾರಿ ಉಗ್ರ ಕೃತ್ಯ ಮರುಕಳಿಸದೆ ಇರುವ ಹಾಗೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: Pahalgam Terror Attack: ಶಿವಮೊಗ್ಗ ತಲುಪಿದ ಮಂಜುನಾಥ್‌ ಮೃತದೇಹ

  • Pahalgam Attack – ಲೆಫ್ಟಿನೆಂಟ್ ವಿನಯ್ ನರ್ವಾಲ್ ಅಂತ್ಯಕ್ರಿಯೆ ನೆರವೇರಿಸಿದ ತಂಗಿ

    Pahalgam Attack – ಲೆಫ್ಟಿನೆಂಟ್ ವಿನಯ್ ನರ್ವಾಲ್ ಅಂತ್ಯಕ್ರಿಯೆ ನೆರವೇರಿಸಿದ ತಂಗಿ

    – ನನ್ನ ಅಣ್ಣನ ಕೊಂದವ್ರನ್ನ ಸಾಯ್ಸಿ ಎಂದು ಆಕ್ರೋಶ

    ಚಂಡೀಗಢ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ಗುಂಡೇಟಿಗೆ (Pahalgam Terrorist Attack) ಬಲಿಯಾದ ನವವಿವಾಹಿತ, ನೌಕಾ ಸೇನೆಯ ಲೆಫ್ಟಿನೆಂಟ್ ವಿನಯ್ ನರ್ವಾಲ್ (Vinay Narwal) ಅವರ ಅಂತ್ಯಕ್ರಿಯೆಯನ್ನು ವಿನಯ್ ತಂಗಿ ಸೃಷ್ಟಿ ನೆರವೇರಿಸಿದ್ದಾರೆ.

    ಹರ್ಯಾಣದ (Haryana) ಕರ್ನಲ್‌ನಲ್ಲಿ ವಿನಯ್ ಅವರ ಅಂತ್ಯಕ್ರಿಯೆ ನೆರವೇರಿದೆ. ಅಣ್ಣನ ಚಿತೆಗೆ ತಂಗಿ ಸೃಷ್ಟಿ ಅಗ್ನಿ ಸ್ಪರ್ಶ ಮಾಡಿದ್ದಾರೆ. ಅತೀವ ದುಃಖದಿಂದ ಕಣ್ಣೀರು ಹಾಕುತ್ತಾ ವಿನಯ್ ಕುಟುಂಬಸ್ಥರು ಅಂತಿಮ ವಿಧಿ ವಿಧಾನ ಪೂರ್ಣಗೊಳಿಸಿದ್ದಾರೆ. ಇದನ್ನೂ ಓದಿ: ಜೆಪಿ ಪಾರ್ಕ್ ವಾರ್ಡ್‌ನಲ್ಲಿರುವ ಉದ್ಯಾನವನಕ್ಕೆ ಭರತ್ ಭೂಷಣ್ ಹೆಸರು

    ಈ ವೇಳೆ ತಂಗಿ ಸೃಷ್ಟಿಯ ಆಕ್ರೋಶ ಕಟ್ಟೆಯೊಡೆದು, ನನ್ನ ಅಣ್ಣನ ಕೊಂದವ್ರನ್ನ ಸಾಯ್ಸಿ ಸರ್ ಎಂದು ಹರ್ಯಾಣ ಸಿಎಂ ನಯಾಬ್ ಸಿಂಗ್ ಸೈನಿಗೆ ಮನವಿ ಮಾಡಿದ್ದಾರೆ. ಅವರು ನನ್ನಣ್ಣನಿಗೆ ನೀನು ಮುಸ್ಲಿಮಾ ಎಂದು ಕೇಳಿದ್ರು. ಬಳಿಕ ಅಣ್ಣನ ಮೇಲೆ ಮೂರು ಗುಂಡು ಹಾರಿಸಿದ್ರು. ಒಂದೂವರೆ ಗಂಟೆ ಕಾಲ ನಮ್ಮ ರಕ್ಷಣೆಗೆ ಯಾರೂ ಬರಲಿಲ್ಲ. ಉಗ್ರರು ಸಾಯ್ಬೇಕು, ನಂಗೆ ನ್ಯಾಯ ಬೇಕು ಎಂದು ಸೃಷ್ಟಿ ಕಣ್ಣೀರಿಟ್ಟರು. ಇದನ್ನೂ ಓದಿ: Pahalgam Terror Attack: ಶಿವಮೊಗ್ಗ ತಲುಪಿದ ಮಂಜುನಾಥ್‌ ಮೃತದೇಹ

    ಏಪ್ರಿಲ್ 16 ರಂದು ವಿನಯ್ ಹಾಗೂ ಹಿಮಾಂಶಿ ಅವರ ವಿವಾಹವಾಗಿತ್ತು. ಮೂರು ದಿನಗಳ ನಂತರ ಆರತಕ್ಷತೆ ನಡೆಯಿತು. ಆ ಬಳಿಕ ಜಮ್ಮು ಕಾಶ್ಮೀರಕ್ಕೆ ಹನಿಮೂನ್‌ಗೆ ತೆರಳಿದ್ದರು. ಇಬ್ಬರು ಪಹಲ್ಗಾಮ್ ಬಳಿಯ ಬೈಸರನ್‌ನ ರಮಣೀಯ ತಾಣದಲ್ಲಿ ಭೇಲ್‌ಪುರಿ ತಿನ್ನುತ್ತಿದ್ದಾಗ ಭಯೋತ್ಪಾದಕನೊಬ್ಬ ಲೆಫ್ಟಿನೆಂಟ್ ವಿನಯ್ ಅವರ ತಲೆಗೆ ಗುಂಡು ಹಾರಿಸಿದ್ದಾನೆ. ನಿನು ಮುಸಲ್ಮಾನನಾ? ಅಂತ ಕೇಳಿ ಗುಂಡು ಹಾರಿಸಿದ್ದಾನೆ. ಬಂದೂಕಿನಲ್ಲಿ ಸಿಡಿದ ಗುಂಡು ವಿನಯ್ ತಲೆಯನ್ನ ಸೀಳಿ ಪತ್ನಿ ಎದುರೇ ಪತಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ನರಮೇಧ – ಬೆಂಗಳೂರಿಗೆ ಆಗಮಿಸಿದ ಮೃತದೇಹ, ಕುಟುಂಬಸ್ಥರಿಗೆ ಹಸ್ತಾಂತರ

  • ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

    ಪಹಲ್ಗಾಮ್‌ ದಾಳಿಯಲ್ಲಿ ಮೃತಪಟ್ಟ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 10 ಲಕ್ಷ ಪರಿಹಾರ ಘೋಷಣೆ

    ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ (Pahalgam Terrorist Attack) ಮೃತಪಟ್ಟಿರುವ ರಾಜ್ಯದ ಪ್ರತಿ ನಾಗರಿಕರ ಕುಟುಂಬಗಳಿಗೆ ತಲಾ 10 ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

    ಗುರುವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ದಾಳಿಯಲ್ಲಿ ಕನ್ನಡಿಗರೂ ಮೃತಪಟ್ಟಿದ್ದು, ಅವರ ಪಾರ್ಥೀವ ಶರೀರವನ್ನು ರಾಜ್ಯಕ್ಕೆ ತರಲು ಸಕಲ ಸಿದ್ಧತೆಗಳು ನಡೆದಿವೆ. ಪಾರ್ಥೀವ ಶರೀರ ರಾಜ್ಯಕ್ಕೆ ಬರುತ್ತಿದ್ದಂತೆ ಅಂತ್ಯಸಂಸ್ಕಾರಕ್ಕೆ ಸಲ ವ್ಯವಸ್ಥೆ ಮಾಡಲಾಗುತ್ತಿದೆ. ಜೊತೆಗೆ ಬದುಕುಳಿದಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ.

    ಇನ್ನೂ ಉಗ್ರರ ದಾಳಿ ಬಗ್ಗೆ ಮಾತನಾಡಿದ ಸಿಎಂ, ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ತಿಳಿಸಿದರು.

    ಅಲ್ಲದೇ ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು. ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಕಾಶ್ಮೀರಕ್ಕೆ ತೆರಳಿರುವ 40ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳುಹಿಸಲಾಗಿದೆ ಎಂದರು.

    ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿಯೂ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

  • ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

    ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಬಾಲಿವುಡ್ ಸ್ಟಾರ್ಸ್‌

    ಹಲ್ಗಾಮ್‌ನಲ್ಲಿ (Pahalgam Terrorist Attack) ನಡೆದಿರುವ ವಿಶ್ವಾಸಘಾತುಕ ಕೃತ್ಯ ಮತ್ತು ಅಮಾನವೀಯ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳು ಸಾಲದು ಎಂದು ಶಾರುಖ್ ಖಾನ್ ಖಂಡಿಸಿದ್ದಾರೆ. ಉಗ್ರರ ಅಟ್ಟಹಾಸದ ಕುರಿತು ಶಾರುಖ್, ಸಲ್ಮಾನ್ ಖಾನ್ ಸೇರಿದಂತೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಪಹಲ್ಗಾಮ್‌ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ದುಃಖ ಮತ್ತು ಕೋಪವನ್ನು ವ್ಯಕ್ತಪಡಿಸಲು ಪದಗಳಿಲ್ಲ. ದುಃಖದಲ್ಲಿರುವ ಕುಟುಂಬಗಳಿಗೆ ದೇವರಲ್ಲಿ ಪ್ರಾರ್ಥಿಸೋಣ. ಈ ಹೇಯ ಕೃತ್ಯದ ವಿರುದ್ಧ ನಾವು ಒಗ್ಗಟ್ಟಾಗಿ, ಬಲವಾಗಿ ನಿಂತು ಈ ಕೃತ್ಯ ಮಾಡಿದವರಿಗೆ ತಕ್ಕ ಶಾಸ್ತಿಯಾಗಲಿ ಎಂದು ಹಾರೈಸೋಣ ಎಂದು ಶಾರುಖ್ ಖಾನ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

    ಭೂಮಿಯ ಮೇಲಿನ ಸ್ವರ್ಗವಾದ ಕಾಶ್ಮೀರ ನರಕವಾಗಿ ಬದಲಾಗುತ್ತಿದೆ. ಅಮಾಯಕ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ನನ್ನ ಹೃದಯ ಅವರ ಕುಟುಂಬಗಳಿಗಾಗಿ ಮಿಡಿಯುತ್ತದೆ. ಒಬ್ಬ ಅಮಾಯಕ ವ್ಯಕ್ತಿಯನ್ನು ಕೊಲ್ಲುವುದು ಇಡೀ ರಾಷ್ಟ್ರವನ್ನೇ ಕೊಂದಂತೆ ಎಂದು ಸಲ್ಮಾನ್‌ ಖಾನ್‌ (Salman Khan) ಬರೆದಿದ್ದಾರೆ.

    ಕಂಗನಾ ರಣಾವತ್ (Kangana Ranaut) ಹಂಚಿಕೊಂಡಿರುವ ಸ್ಟೋರಿಯಲ್ಲಿ, ಆ ದುರುಳರು ಅಮಾಯಕರ ಮೇಲೆ ದಾಳಿ ಮಾಡಿದ್ದಾರೆ. ಅಮಾಯಕರ ಮೇಲೆ ದಾಳಿ ಮಾಡಿ ನಪುಂಸಕತನ ಮೆರೆದಿದ್ದಾರೆ. ಇತಿಹಾಸದಲ್ಲಿ ಪ್ರತಿ ಯುದ್ಧವೂ ಸಹ ಯುದ್ಧಭೂಮಿಯಲ್ಲೇ ನಡೆದಿದೆ. ಆದರೆ ಈ ನಪುಂಸಕರು ಅಮಾಯಕರ ಮೇಲೆ ನಿರಸ್ತ್ರರಾಗಿರುವವರ ಮೇಲೆ ದಾಳಿ ಮಾಡಿದ್ದಾರೆ. ಯುದ್ಧಭೂಮಿಯ ಹೊರಗೆ ಕಾದಾಟ ಮಾಡುತ್ತಿರುವ ಈ ನಪುಂಸಕರ ಮೇಲೆ ಯುದ್ಧವಾದರೂ ಮಾಡುವುದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ. ಭಯೋತ್ಪಾದಕರಿಗೆ ಧರ್ಮ ಇದೆ, ಸಂತ್ರಸ್ತರಿಗೂ ಧರ್ಮ ಇದೆ ಎಂದಿದ್ದಾರೆ. ಭಯೋತ್ಪಾದಕರ ಧರ್ಮದ ಬಗ್ಗೆ ಬಹಿರಂಗವಾಗಿ ಹೇಳದೆ, ಮುಸ್ಲಿಂ ಭಯೋತ್ಪಾದಕರಿಂದ ಹಿಂದುಗಳು ದಶಕಗಳಿಂದಲೂ ಜೀವ ಕಳೆದುಕೊಳ್ಳುತ್ತಿದ್ದಾರೆ ಎಂದಿದ್ದಾರೆ.

     

    View this post on Instagram

     

    A post shared by Priyanka (@priyankachopra)

    ಪ್ರಿಯಾಂಕಾ ಚೋಪ್ರಾ (Priyanka Chopra) ಹಂಚಿಕೊಂಡಿರುವ ಪೋಸ್ಟ್‌ನಲ್ಲಿ ಪಹಲ್ಗಾಮ್ ದಾಳಿಯ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ಇದೊಂದು ಅತ್ಯಂತ ಹೇಯ ಕೃತ್ಯ ಎಂದು ಬರೆದುಕೊಂಡಿದ್ದಾರೆ. ಭಯೋತ್ಪಾದನೆಯ ಈ ಅಮಾನವೀಯ ಕೃತ್ಯವನ್ನು ಅವರು ಖಂಡಿಸಿದ್ದಾರೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಮತ್ತು ಪ್ರಾರ್ಥನೆಗಳು ಸಂತ್ರಸ್ತರ ಕುಟುಂಬದೊಂದಿಗೆ ಇವೆ. ಗಾಯಗೊಂಡಿರುವ ದಂಪತಿಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

     

    View this post on Instagram

     

    A post shared by Anupam Kher (@anupampkher)

    ಈ ಬಗ್ಗೆ ಅನುಪಮ್ ಖೇರ್‌ (Anupam Kher) ಮಾತನಾಡಿ, ಇಂದು ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ. 27 ಹಿಂದೂಗಳನ್ನು ಹುಡುಕಿ ಹುಡುಕಿ ಕೊಲ್ಲಲಾಗಿದೆ. ದುಃಖದ ಜೊತೆ ಕ್ರೋಧ, ಸಿಟ್ಟು ಬರುತ್ತದೆ. ನಾನು ಇದನ್ನು ಜೀವನದಲ್ಲಿ ಬಹಳಷ್ಟು ನೋಡಿದ್ದೇನೆ. ಕಾಶ್ಮೀರದಲ್ಲಿ ಹಿಂದೂಗಳ ಜನರೊಂದಿಗೆ ಜೊತೆ ಹೀಗೆ ಆಗ್ತಾನೇ ಇದೆ. ‘ಕಾಶ್ಮೀರ್ ಫೈಲ್ಸ್’ ಅವರ ಕಥೆಯಾಗಿದ್ದು, ಇದನ್ನು ಸಿನಿಮಾ ಮಾಡಿದಾಗ ಪ್ರೊಪಗಾಂಡ ಎಂದು ಕರೆದ್ರಿ. ದೇಶದ ವಿವಿಧ ಭಾಗಗಳಿಂದ ಜನರು ತಮ್ಮ ರಜಾದಿನಗಳನ್ನು ಕಳೆಯಲು ಕುಟುಂಬದ ಜೊತೆ ಕಾಶ್ಮೀರಕ್ಕೆ ಬಂದರು. ಈ ವೇಳೆ, ಅವರ ಧರ್ಮವನ್ನು ತಿಳಿದು ಕೊಲ್ಲಲಾಗಿದೆ ಎಂದು ಕೃತ್ಯವನ್ನು ಖಂಡಿಸಿದ್ದಾರೆ.

    ಇದರ ಬಗ್ಗೆ ಮಾತನಾಡೋಕೆ ಶಬ್ದವೇ ಸಿಗೋದಿಲ್ಲ. ಪತಿಯ ಮೃತ ದೇಹದ ಜೊತೆಗಿದ್ದ ಮಹಿಳೆಯನ್ನು ನಾನು ಮರೆಯಲು ಸಾಧ್ಯವಿಲ್ಲ. ನಾನು ಪಲ್ಲವಿ ಜಿ ಅವರ ಸಂದರ್ಶನ ನೋಡಿದೆ. ಪತಿಯನ್ನ ಕಣ್ಣೆದುರೇ ಸಾಯಿಸಿದಾಗ ನನ್ನನ್ನು ನನ್ನ ಮಗನನ್ನು ಸಾಯಿಸಿ ಅಂದಾಗ, ನಿಮ್ಮನ್ನು ಸಾಯಿಸಲ್ಲ ಮೋದಿಗೆ ಹೋಗಿ ಹೇಳಿ ಅಂದ್ರಲ್ಲ. ಬಹುಶಃ ಅವನು ಒಂದು ಸಂದೇಶವನ್ನು ನೀಡಲು ಬಯಸಿದ್ದಿರಬಹುದು ಎಂದಿದ್ದಾರೆ. ಮೋದಿಯವರು ಹಾಗೂ ಅಮಿತ್ ಶಾ ಅವರ ಬಳಿ ನಾನು ಕೇಳಿಕೊಳ್ಳುವುದೇನಂದರೆ ಉಗ್ರರಿಗೆ ನಾವು ಎಂಥಹ ಪಾಠ ಕಲಿಸಬೇಕು ಅಂದರೆ ಇನ್ನೂ ಏಳು ಜನ್ಮ ಎತ್ತಿ ಬಂದ್ರೂ ಇಂಥಹ ದುಷ್ಟ ಕೆಲಸ ಮಾಡುವ ಯೋಚನೆನೇ ಅವರಿಗೆ ಬರಬಾರದು ಎಂದಿದ್ದಾರೆ.

  • Pahalgam Terror Attack | ಭಾರತ ಶೀಘ್ರದಲ್ಲೇ ಪ್ರತೀಕಾರ ತೀರಿಸಿಕೊಳ್ಳಲಿದೆ – ಉಗ್ರರಿಗೆ ರಾಜನಾಥ್‌ ಸಿಂಗ್‌ ಎಚ್ಚರಿಕೆ

    Pahalgam Terror Attack | ಭಾರತ ಶೀಘ್ರದಲ್ಲೇ ಪ್ರತೀಕಾರ ತೀರಿಸಿಕೊಳ್ಳಲಿದೆ – ಉಗ್ರರಿಗೆ ರಾಜನಾಥ್‌ ಸಿಂಗ್‌ ಎಚ್ಚರಿಕೆ

    – ದಾಳಿಕೋರರನ್ನ ಸದೆಬಡಿಯಲು ಹೆಚ್ಚುವರಿ ಸೈನಿಕರ ನಿಯೋಜನೆ

    ನವದೆಹಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆದಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ಕೃತ್ಯ ಎಸಗಿದ ಉಗ್ರರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ. ಭಾರತವು ಶೀಘ್ರದಲ್ಲೇ ಪ್ರತೀಕಾರ ತೀರಿಸಿಕೊಳ್ಳಲಿದೆ. ತೆರೆಮರೆಯಲ್ಲಿ ಪಿತೂರಿ ನಡೆಸಿದವರನ್ನೂ ಸಹ ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

    ಭಾರತದ ಪ್ರತಿಯೊಬ್ಬ ನಾಗರಿಕನೂ ಈ ಹೇಡಿತನದ ಕೃತ್ಯದ ವಿರುದ್ಧ ಒಗ್ಗಟ್ಟಾಗಿದ್ದಾನೆ. ಹಾಗಾಗಿ ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ಸೂಕ್ತ ಉತ್ತರ ಕೊಡುತ್ತೇವೆ. ತೆರೆಮರೆಯಲ್ಲಿದ್ದುಕೊಂಡು ಪಿತೂರಿ ನಡೆಸಿದವರನ್ನೂ ನಾವು ಬಿಡೋದಿಲ್ಲ. ಭಾರತ ಸರ್ಕಾರ ಉಗ್ರರನ್ನು ಸದೆಬಡಿಯಲು ಅಗ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆ ನೀಡಿದ್ದಾರೆ.

    ಭಾರತವು ಪ್ರಾಚೀನ ನಾಗರಿಕತೆ ಮತ್ತು ದೊಡ್ಡ ಜನಸಂಖ್ಯೆಯುಳ್ಳ ದೇಶವಾಗಿದೆ. ಇಂತಹ ಭಯೋತ್ಪಾದಕ ಚಟುವಟಿಕೆಗಳಿಂದ ನಮ್ಮನ್ನು ಬೆದರಿಸಲು ಸಾಧ್ಯವಿಲ್ಲ. ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ತಕ್ಕ ಉತ್ತರ ಕೊಟ್ಟೇ ಕೊಡುತ್ತೇವೆ ಎಂದು ಎಚ್ಚರಿಸಿದ್ದಾರೆ.

    2 ಗಂಟೆಗೂ ಅಧಿಕ ಕಾಲ ಉನ್ನತಮಟ್ಟದ ಸಭೆ
    ಭಯೋತ್ಪಾದಕ ದಾಳಿಯ ನಂತರ ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದ ಉನ್ನತಮಟ್ಟದ ಸಭೆಯಲ್ಲಿ ಎರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ದ್ವಿವೇದಿ, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಮತ್ತು ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಎಕೆ ಸಿಂಗ್ ಭಾಗವಹಿಸಿದ್ದರು. ಸಭೆಯಲ್ಲಿ ಪಹಲ್ಗಾಂನಲ್ಲಾದ ಘಟನೆಯ ವಿವರಗಳನ್ನು ಸೇನಾ ಮುಖ್ಯಸ್ಥರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ನೀಡಿದರು.

    ಮಹತ್ವದ ವಿಷಯಗಳ ಕುರಿತು ಚರ್ಚೆ
    ಜಮ್ಮು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಸಭೆಯಲ್ಲಿ ಚರ್ಚಿಸಲಾಯಿತು. ಜೊತೆಗೆ ದಾಳಿಯ ನಂತರ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಇದರ ಜೊತೆಗೆ, ಭದ್ರತಾ ಸಮಿತಿಯ ಸಭೆಯು ಕೂಡ ನಡೆಯುವ ಸಾಧ್ಯತೆಯಿದೆ. ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ವಿಸ್ಕೃತ ಚರ್ಚೆಯನ್ನು ನಡೆಸಲಾಗಿದೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.

    ಇನ್ನೂ ಅಜಿತ್ ದೋವಲ್ ಜೊತೆಗೆ, ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಚೀಫ್ ಆಫ್ ಡಿಫೆನ್ಸ್ ಜನರಲ್ ಅನಿಲ್ ಚೌಹಾಣ್, ಭೂಸೇನೆಯ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ನೌಕಾಪಡೆಯ ಮುಖ್ಯಸ್ಥ ದಿನೇಶ್ ತ್ರಿಪಾಠಿ, ವಾಯುಪಡೆಯ ಮುಖ್ಯಸ್ಥ ಎ.ಪಿ ಸಿಂಗ್ ಈ ತುರ್ತು ಸಭೆಯಲ್ಲಿ ಭಾಗವಹಿಸಿದ್ದರು.

    ಉನ್ನತ ಮಿಲಿಟರಿ ಅಧಿಕಾರಿಗಳು ಈಗಾಗಲೇ ದಾಳಿ ನಡೆದ ಪ್ರದೇಶದಲ್ಲಿ ಹಾಜರಿದ್ದಾರೆ. ದಾಳಿಕೋರರನ್ನು ಸದೆಬಡಿಯಲು ಹೆಚ್ಚಿನ ಸೈನಿಕರನ್ನು ನಿಯೋಜಿಸಲಾಗಿದೆ. ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಇದೊಂದು ಅತ್ಯಂತ ಹೇಡಿತನದ ಮತ್ತು ಖಂಡನೀಯ ಕೃತ್ಯ. ಮೃತ ಪಟ್ಟ ಕುಟುಂಬಕ್ಕೆ ಸಾಂತ್ವನಗಳು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

  • ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಿರುತೆರೆ ದಂಪತಿ

    ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕಿರುತೆರೆ ದಂಪತಿ

    ಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Terrorist Attack) ಉಗ್ರರ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಕಿರುತೆರೆಯ ಖ್ಯಾತ ಜೋಡಿ ಶೋಯೆಬ್ ಇಬ್ರಾಹಿಂ (Shoaib Ibrahim) ಮತ್ತು ದೀಪಿಕಾ ಕಕ್ಕರ್ (Dipika Kakar) ಸೇಫ್ ಆಗಿದ್ದಾರೆ. ಈ ಘಟನೆಯ ಕುರಿತು ಶೋಯೆಬ್ ಪ್ರತಿಕ್ರಿಯಿಸಿ, ನಾವು ಸುರಕ್ಷಿತವಾಗಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್‌ ಉಗ್ರರ ಹೇಯ ಕೃತ್ಯ ಖಂಡಿಸಿದ ಶಿವಣ್ಣ, ರಶ್ಮಿಕಾ ಮಂದಣ್ಣ, ಅನುಷ್ಕಾ ಶರ್ಮಾ

     

    View this post on Instagram

     

    A post shared by Dipika (@ms.dipika)

    ಪ್ರವಾಸಕ್ಕೆಂದು ಪಹಲ್ಗಾಮ್‌ಗೆ ಮಗ ಹಾಗೂ ಪತ್ನಿ ದೀಪಿಕಾ ಜೊತೆ ಶೋಯೆಬ್ ಇಬ್ರಾಹಿಂ ಬಂದಿದ್ದರು. ಏ.22ರಂದು ನಡೆದ ಭಯೋತ್ಪಾದಕರ ದಾಳಿಗೂ ಕೆಲವು ಗಂಟೆಗಳ ಮುನ್ನ ಪಹಲ್ಗಾಮ್ ತೊರೆದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್‌ನಲ್ಲಿ ಹಿಂದೂಗಳ ನರಮೇಧ ಆಗಿದೆ: ಉಗ್ರರ ಕೃತ್ಯದ ಬಗ್ಗೆ ಅನುಪಮ್ ಖೇರ್ ಆಕ್ರೋಶ

    ಈ ಬಗ್ಗೆ ಶೋಯೆಬ್ ಪ್ರತಿಕ್ರಿಯಿಸಿ, ನಾವು ಸುರಕ್ಷಿತವಾಗಿದ್ದೇವೆ, ಚಿಂತಿಸಬೇಡಿ. ನಾವು ಕಾಶ್ಮೀರ ಬಿಟ್ಟಿದ್ದೇವೆ. ಈಗ ದೆಹಲಿ ತಲುಪಿದ್ದೇವೆ. ಹೊಸ ವ್ಲಾಗ್ ಶೀಘ್ರದಲ್ಲಿ ಬರಲಿದೆ ಎಂದು ಬರೆದುಕೊಂಡಿದ್ದಾರೆ.

    ಕುಂಕುಮ ಭಾಗ್ಯ, ನಚ್ ಬಲಿಯೆ, ಬಿಗ್ ಬಾಸ್ ಹಿಂದಿ 12ರ ಮೂಲಕ ಶೋಯೆಬ್ ಗುರುತಿಸಿದ್ದಾರೆ. ದೀಪಿಕಾ ಕೂಡ ಹಲವು ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ. 2018ರಲ್ಲಿ ಈ ಜೋಡಿ ಮದುವೆಯಾದರು.

  • ಪಾಕಿಸ್ತಾನ ಅವನತಿ ಆರಂಭವಾಗಿದೆ – ಜಗದೀಶ್ ಶೆಟ್ಟರ್ ಎಚ್ಚರಿಕೆ

    ಪಾಕಿಸ್ತಾನ ಅವನತಿ ಆರಂಭವಾಗಿದೆ – ಜಗದೀಶ್ ಶೆಟ್ಟರ್ ಎಚ್ಚರಿಕೆ

    ಹುಬ್ಬಳ್ಳಿ: ಪಾಕಿಸ್ತಾನ (Pakistan) ಪ್ರೋತ್ಸಾಹಿತ ಉಗ್ರಗಾಮಿಗಳು ಕಾಶ್ಮೀರದಲ್ಲಿನ ಪ್ರವಾಸಿಗರ ಮೇಲೆ ದಾಳಿ ಮಾಡಿದ್ದಾರೆ. ಈ ಮೂಲಕ ದೇಶದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ (Jagadish Shettar) ಆಕ್ರೋಶ ಹೊರಹಾಕಿದ್ದಾರೆ.

    ಪಹಲ್ಗಾಮ್ ದಾಳಿಯ (Pahalgam Attack) ಕುರಿತು ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಪ್ರಧಾನಿ ಮೋದಿ, ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲೆಸಿತ್ತು. ಹೀಗಾಗಿ ಹೆಚ್ಚಿನ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಆರಂಭ ಮಾಡಿದ್ದರು ಎಂದಿದ್ದಾರೆ. ಇದನ್ನೂ ಓದಿ: ಇಂದು ಮನೆಗೆ ಮರಳಬೇಕಿದ್ದ ಉದ್ಯಮಿ ಉಗ್ರರ ಗುಂಡಿಗೆ ಬಲಿ – ಇಡೀ ಗ್ರಾಮದಲ್ಲಿ ಮಡುಗಟ್ಟಿದ ಮೌನ

    ದೇಶದ ಜನತೆ ಕಾಶ್ಮೀರದಲ್ಲಿ (Kashmir) ಶಾಂತಿ ನೆಲೆಸಬೇಕು ಅನ್ನೋ ಇಚ್ಛೆ ಹೊಂದಿದ್ದಾರೆ. ಮೃತ ಕುಟುಂಬದ ಜೊತೆಗೆ ದೇಶ, ಭಾರತ ಸರ್ಕಾರವಿದೆ. ಉಗ್ರಗಾಮಿಗಳ ಹತ್ಯೆಯಾಗುತ್ತದೆ. ಭಾರತ ದೇಶ ಜಗತ್ತಿನಲ್ಲಿ ಪ್ರಬಲವಾಗಿ ಬೆಳೆಯುತ್ತಿದೆ. ಅದನ್ನು ಸಹಿಸಲು ಪಾಕಿಸ್ತಾನಕ್ಕೆ ಆಗುತ್ತಿಲ್ಲ. ಪಾಕಿಸ್ತಾನ ಅವನತಿ ಆರಂಭವಾಗಿದೆ. ಹಿಂದೂಗಳನ್ನೇ ಟಾರ್ಗೆಟ್ ಮಾಡಿ ದಾಳಿ ಮಾಡಿದ್ದಾರೆ. ಮೋದಿ ಅವರು ಬಲಾಢ್ಯ ರಾಷ್ಟ್ರ ಕಟ್ಟುತ್ತಿದ್ದಾರೆ. ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇದು ರಾಜಕೀಯ ಮಾಡುವ ಸಮಯವಲ್ಲ, ಅಮಾಯಕರಿಗೆ ನ್ಯಾಯ ಕೊಡಿಸುವ ಸಮಯ: ಮಲ್ಲಿಕಾರ್ಜುನ ಖರ್ಗೆ

    ಭದ್ರತಾ ವ್ಯವಸ್ಥೆ ಸರಿಯಿದೆ ಎಂದು ಪ್ರವಾಸಿಗರೇ ಹೇಳಿದ್ದಾರೆ. ಆದರೂ ಈ ಘಟನೆ ನಡೆದಿದೆ. ಯಾವ ಸರ್ಕಾರ ಬಂದಾಗ ಕೂಡಾ ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಇರಲಿಲ್ಲ. ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಅಲ್ಲಿ ಶಾಂತಿ ನೆಲೆಸಿತ್ತು. ಉಗ್ರಗಾಮಿಗಳನ್ನು ನಾಶ ಮಾಡಬೇಕು. ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಯನ್ನು ನಾಶ ಮಾಡಬೇಕು ಎಂದು ಕಿಡಿಕಾರಿದ್ದಾರೆ.