Tag: Pahalgam Terrorist Attack

  • ಕಾಶ್ಮೀರದಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿದ ಮೋದಿ

    ಕಾಶ್ಮೀರದಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿದ ಮೋದಿ

    – ಇಂದು ರಾತ್ರಿಯೇ ಭಾರತಕ್ಕೆ ಬಂದಿಳಿಯುವ ಸಾಧ್ಯತೆ
    – 2019ರ ಪುಲ್ವಾಮಾ ಬಳಿಕ ಅತಿದೊಡ್ಡ ದಾಳಿ

    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸುಮಾರು 30 ಮಂದಿ ಸಾವನ್ನಪ್ಪಿದ್ದು, 2019ರ ಪುಲ್ವಾಮಾ ದಾಳಿ ಬಳಿಕ ಅತಿದೊಡ್ಡ ದಾಳಿಯಾಗಿದೆ. ಇದು ನಾಗರಿಕರ ಮೇಲೆ ನಡೆದ ಅತ್ಯಂತ ಭೀಕರ ದಾಳಿ ಎಂದು ಅಧಿಕಾರಿಗಳು ಹೇಳಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿಯೇ ತಮ್ಮ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ಮರಳಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

    ದಾಳಿ ನಡೆದ ಕೆಲವೇ ಒಂದು ಗಂಟೆಯಲ್ಲೇ ದೇಶಾದ್ಯಂತ ಆಕ್ರೋಶ ವ್ಯಕ್ತವಾಗತೊಡಗಿತು. ಈ ಕುರಿತು ಮಾಹಿತಿ ಪಡೆದ ಮೋದಿ, ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕರೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಇದೀಗ 2 ದಿನಗಳ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ಇಂದು ರಾತ್ರಿಯೇ ಭಾರತಕ್ಕೆ ಬಂದಿಳಿಯಲಿದ್ದಾರೆ ಎಂದು ವರದಿಗಳು ತಿಳಿಸಿವೆ. ಈ ಕುರಿತ ವಿಡಿಯೋ ಇಲ್ಲಿದೆ…

  • Pahalgam Attack | ಉಗ್ರರ ಗುಂಡಿಗೆ ವಾರದ ಹಿಂದೆಯಷ್ಟೇ ಮದ್ವೆಯಾಗಿದ್ದ ನೌಕಾಪಡೆ ಅಧಿಕಾರಿ ಬಲಿ

    Pahalgam Attack | ಉಗ್ರರ ಗುಂಡಿಗೆ ವಾರದ ಹಿಂದೆಯಷ್ಟೇ ಮದ್ವೆಯಾಗಿದ್ದ ನೌಕಾಪಡೆ ಅಧಿಕಾರಿ ಬಲಿ

    – ಬಿಹಾರ ಮೂಲದ ಗುಪ್ತಚರ ಇಲಾಖೆ ಅಧಿಕಾರಿ ಪತ್ನಿ ಕಣ್ಣಮುಂದೆಯೇ ಸಾವು

    ನವದೆಹಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲಬಿಚ್ಚಿದ್ದು, ಹಿಂದೂಗಳ ನರಮೇಧವಾಗಿದೆ. ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ ಕಣಿವೆಯಲ್ಲಿ ಪ್ರವಾಸಿಗರನ್ನೇ ಟಾರ್ಗೆಟ್ ಮಾಡಿ 30ಕ್ಕೂ ಪ್ರವಾಸಿಗರನ್ನು ಕೊಂದು ರಕ್ತದ ಕೋಡಿ ಹರಿಸಿದ್ದಾರೆ. ಇನ್ನು ಉಗ್ರರ ಗುಂಡಿನ ದಾಳಿಗೆ ವಾರದ ಹಿಂದೆಯಷ್ಟೇ ಬಲಿಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ.

    ಲೆಫ್ಟಿನೆಂಟ್ ವಿನಯ್ ನರ್ವಾಲ್ (26) ದಾಳಿಯಲ್ಲಿ ಮೃತಪಟ್ಟ ಅಧಿಕಾರಿ. ಹರಿಯಾಣ ಮೂಲದ ನರ್ವಾಲ್‌ ಇದೇ ಏಪ್ರಿಲ್‌ 16ರಂದು ಮದುವೆಯಾಗಿದ್ದರು. ಕೊಚ್ಚಿಯಲ್ಲಿ ಹೊಸದಾಗಿ ನೇಮಕಗೊಂಡಿದ್ದ ನೌಕಾಪಡೆಯ ನರ್ವಾಲ್‌ ರಜೆಯ ಮೇಲೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಲ್ಲಿರುವಾಗಲೇ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.

    ಗುಪ್ತಚರ ಇಲಾಖೆ ಅಧಿಕಾರಿ ಸಾವು:
    ಅಲ್ಲದೇ ಉಗ್ರರ ದಾಳಿಗೆ ಗುಪ್ತಚರ ಇಲಾಖೆ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಬಿಹಾರ ಮೂಲದ ರಂಜನ್ ಅವರು ತಮ್ಮ ಪತ್ನಿ, ಮಗು ಕಣ್ಣಮುಂದೆಯೇ ಗುಂಡಿಗೆ ಬಲಿಯಾಘಿದ್ದಾರೆ. ಬಿಹಾರ ಮೂಲದ ಮನೀಶ್‌ ರಂಜನ್‌ ತೆಲಂಗಾಣ ಗುಪ್ತಚರ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕೆಲಸಕ್ಕೆ ರಜೆ ಹಾಕಿ ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳಿದ್ದರು. ಕುಟುಂಬದೊಂದಿಗೆ ಸಂತಸದಿಂದ ಕಾಲ ಕಳೆಯುವಾಗಲೇ ರಕ್ಕಸರ ದಾಳಿಗೆ ಬಲಿಯಾಗಿದ್ದಾರೆ. ಅವರ ಪತ್ನಿ ಮತ್ತು ಮಗು ಸುರಕ್ಷಿತವಾಗಿದ್ದಾರೆ.

  • Pahalgam Terrorist Attack – ಮತ್ತೋರ್ವ ಕನ್ನಡಿಗನ ಸಾವಿನ ಶಂಕೆ, ನಾಲ್ವರು ಕನ್ನಡಿಗರಿಗೆ ಗಾಯ: ತೇಜಸ್ವಿ ಸೂರ್ಯ

    Pahalgam Terrorist Attack – ಮತ್ತೋರ್ವ ಕನ್ನಡಿಗನ ಸಾವಿನ ಶಂಕೆ, ನಾಲ್ವರು ಕನ್ನಡಿಗರಿಗೆ ಗಾಯ: ತೇಜಸ್ವಿ ಸೂರ್ಯ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ (Pahalgam Terrorist Attack ) ಮತ್ತೋರ್ವ ಕನ್ನಡಿಗನ ಸಾವಿನ ಶಂಕೆ ಇದೆ. ನಾಲ್ವರು ಕನ್ನಡಿಗರು ಗಾಯಗೊಂಡ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಖಚಿತವಾಗಬೇಕಿದೆ ಎಂದು ಕಾಶ್ಮೀರದಲ್ಲಿರುವ ಸಂಸದ ತೇಜಸ್ವಿ ಸೂರ್ಯ (Tejasvi Surya) ʻಪಬ್ಲಿಕ್ ಟಿವಿʼಗೆ ಮಾಹಿತಿ ನೀಡಿದ್ದಾರೆ.

    ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲಬಿಚ್ಚಿದ್ದು, ಹಿಂದೂಗಳ ನರಮೇಧವಾಗಿದೆ. ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ ಕಣಿವೆಯಲ್ಲಿ ಪ್ರವಾಸಿಗರನ್ನೇ ಟಾರ್ಗೆಟ್ ಮಾಡಿ 30ಕ್ಕೂ ಪ್ರವಾಸಿಗರನ್ನು ಕೊಂದು ರಕ್ತದ ಕೋಡಿ ಹರಿಸಿದ್ದಾರೆ. ಇಬ್ಬರು ವಿದೇಶಿಗರು ಸೇರಿದಂತೆ ರಾಶಿ ರಾಶಿ ಹೆಣಗಳನ್ನು ಟಾರ್ಪಲ್‍ನಲ್ಲಿ ಮುಚ್ಚಲಾಗಿದೆ.

    ಪ್ರವಾಸದ ಖುಷಿಯಲ್ಲಿದ್ದ ಪ್ರವಾಸಿಗರ ಬಳಿ ಏಕಾಏಕಿ ನುಗ್ಗಿರುವ ಟಿಆರ್‍ಎಫ್ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ. ಅದರಲ್ಲೂ, ಪುರುಷರನ್ನೇ ಟಾರ್ಗೆಟ್ ಮಾಡಿ, ತಲೆಗೆ ಗನ್ ಇಟ್ಟು ನಿನ್ನ ಹೆಸರೇನು? ನಿನ್ನ ಧರ್ಮ ಏನು ಅಂತ ಕೇಳುತ್ತಲೇ ಕೊಂದಿದ್ದಾರೆ. ಉಗ್ರರ ಗುಂಡಿಗೆ ಇಬ್ಬರು ಕನ್ನಡಿಗರು ಬಲಿಯಾಗಿದ್ದಾರೆ.

    ಬೆಂಗಳೂರಿನ ಮತ್ತಿಕೆರೆಯ ಭರತ್ ಭೂಷಣ್, ಶಿವಮೊಗ್ಗ ಮಂಜುನಾಥ್ ರಾವ್ ದುರ್ಮರಣಕ್ಕೀಡಾಗಿದ್ದಾರೆ. ಶಿವಮೊಗ್ಗದ ಮಂಜುನಾಥ್ ರಾವ್ (47) ಪತ್ನಿ ಪಲ್ಲವಿ, ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ತೆರಳಿದ್ದರು. ಇಂದು ಮಧ್ಯಾಹ್ನ 1:30ರ ಸುಮಾರಿಗೆ ಉಗ್ರರು ಗುಂಡಿನ ದಾಳಿ ಮಾಡಿದ್ದಾರೆ. ಪತ್ನಿ, ಪುತ್ರನ ಕಣ್ಣೆದುರೇ ಮಂಜುನಾಥ್ ತಲೆಗೇ ಗುಂಡು ಹೊಡೆದಿದ್ದಾರೆ.

  • ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ – ಪಹಲ್ಗಾಮ್‌ ದಾಳಿ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತು

    ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ – ಪಹಲ್ಗಾಮ್‌ ದಾಳಿ ಬಗ್ಗೆ ಚಕ್ರವರ್ತಿ ಸೂಲಿಬೆಲೆ ಮಾತು

    ಬೆಂಗಳೂರು: ಕಾಶ್ಮೀರ ಸರಿ ಹೋಗುವ ಜಾಗವಲ್ಲ ಅಂತ ಅನೇಕ ಬಾರಿ ಅನ್ನಿಸಿದೆ. ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ. ದೇಶದ ಇತರ ಭಾಗದ ಜನರ ದುಡ್ಡಲ್ಲೇ ಕಾಶ್ಮೀರಿ ಮುಸ್ಲಿಮರು ಜೀವನ ಮಾಡುತ್ತಿರೋದು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele) ಹೇಳಿದ್ದಾರೆ.

    ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿ ಕುರಿತು ʻಪಬ್ಲಿಕ್‌ ಟಿವಿʼ ಜೊತೆಗೆ ಮಾತನಾಡಿದ ಅವರು, ಕಾಶ್ಮೀರ ಸರಿ ಹೋಗುವ ಜಾಗವಲ್ಲ ಅಂತ ಅನೇಕ ಬಾರಿ ಅನ್ನಿಸಿದೆ. ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ. ದೇಶದ ಇತರ ಭಾಗದ ಜನರ ದುಡ್ಡಲ್ಲೇ ಕಾಶ್ಮೀರಿ ಮುಸ್ಲಿಮರು ಜೀವನ ಮಾಡುತ್ತಿರೋದು. ಕೊಲೆ ಮಾಡೋಕೆ ಪಾಕಿಸ್ತಾನದಿಂದಲೇ ಬರಬೇಕಿಲ್ಲ. ಅಲ್ಲಿನ ಸ್ಥಳೀಯರೇ ಹೇಳುವ ಪ್ರಕಾರ ಒಳಗೆಯೇ ಜಮಾತ್ ತಂಡ ಕಟ್ಟುತ್ತಿದೆ ಎಂದು ಬಾಂಬ್‌ ಸಿಡಿಸಿದ್ದಾರೆ. ಇದನ್ನೂ ಓದಿ: Pahalgam Terrorist Attack | ಶ್ರೀನಗರಕ್ಕೆ ಅಮಿತ್ ಶಾ ಭೇಟಿ – ಉನ್ನತ ಅಧಿಕಾರಿಗಳ ಜೊತೆ ಹೈವೋಲ್ಟೇಜ್‌ ಮೀಟಿಂಗ್‌

    ಯಾರಿಂದ ಬದುಕಿದ್ದೀರೋ ಅವರನ್ನೇ ನಾಶ ಮಾಡಿ ಸರ್ಕಾರಕ್ಕೆ ಸಂದೇಶ ಕೊಡುವ ಯತ್ನ ಇದು. ವ್ಯಕ್ತಿ ಮುಸ್ಲಿಂ ಅಲ್ಲ ಅಂತಾ ಕನ್ಪರ್ಮ್ ಮಾಡಿಕೊಂಡು ಕೊಲೆ ಮಾಡಿದ್ದಾರೆ. ಇದು ಹೇಯ ಕೃತ್ಯ. ಮಾನವೀಯ ಇಲ್ಲದ ದುಷ್ಟ ಜನಾಂಗ ಅದು. ಘಟನೆ ಬಳಿಕವು ಯಾವ ಮುಸ್ಲಿಂ ಮಾತಾನಾಡುತ್ತಿಲ್ಲ. ಮುಸ್ಲಿಂ ಮೂಲವಾಧಿಗಳು. ಭಾರತೀಯ ಸಂಸ್ಕೃತಿ, ಕಾನೂನು ಸಂವಿಧಾನ ಯಾವುದನ್ನ ಅವರು ಒಪ್ಪಲ್ಲ. ಪ್ರಪಂಚದ ಟೆರರಿಸ್ಟ್ ಲೀಸ್ಟ್ ಮಾಡಿ 99% ಮುಸ್ಲಿಮರೇ ಇರ್ತಾರೆ. ಪ್ಯಾಂಟ್ ಬಿಚ್ಚಿ ಕತ್ನಾ ಆಗಿದೀಯಾ ಅಂತ ಪರಿಶೀಲಿಸಿ ಕೊಲೆ ಮಾಡ್ತಾರೆ ಅಂದ್ರೆ ಇವರು ಎಷ್ಟು ಕ್ರೂರಿಗಳು ಎಂದು ಕೆಂಡಾಮಂಡಲವಾದರು. ಇದನ್ನೂ ಓದಿ: ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ – ಶಿವಮೊಗ್ಗದ ಉದ್ಯಮಿ ಪತ್ನಿಗೆ ಉಗ್ರ ಹೇಳಿದ ಮಾತು

    ಸರ್ಕಾರಕ್ಕೆ ಎಚ್ಚರಿಕೆ ಕೊಡಲು ಈ ಕೆಲಸ ಮಾಡಿದ್ದಾರೆ. ಜನರ ಜೀವಕ್ಕೆ ಸರ್ಕಾರ ಗ್ಯಾರೆಂಟಿ ಕೊಡಬೇಕು. ಪ್ರಧಾನಿಗಳು, ಅಮಿತ್ ಶಾ ಕೂಡ ಈ ಬಗ್ಗೆ ಹೇಳಬೇಕು. ಕಾಶ್ಮೀರ ಎಷ್ಟು ಸೇಫ್ ಅಂದ್ರೆ ಕಳೆದ ವರ್ಷಕ್ಕಿಂತ ಈ ವರ್ಷ ಭಯೋತ್ಪಾದನೆ ಚಟುವಟಿಕೆ ಕಡಿಮೆ ಅನ್ನೋದೆ ಸೇಫ್ಟಿನಾ..? ಅಲ್ಲಿನ ಜನರೇ ಉಗ್ರರನ್ನ ಹಿಡಿದು ಬಡಿಯಬೇಕು. ಊಟ ಬೇಕು ಅಂದ್ರೆ ದೇಶದ ಇತರೆ ಜನ ಬೇಕು. ಕಾಶ್ಮೀರ ಜನರ ಒಳ್ಳೇತನ ಕೂಡ ಕಾಡುತ್ತೆ. ವಕ್ಫ್ ವಿಚಾರಕ್ಕೆ ಇದು ಆದ ಕೃತ್ಯದಂತಿಲ್ಲ. ಅಲ್ಲಿನ ಜನ ವಕ್ಫ್ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಪಾಕಿಸ್ತಾನದಲ್ಲಿನ ಭಯೋತ್ಪಾದಕರನ್ನ ಸೈಲೆಂಟಾಗಿ ಅನೌನ್ ಗನ್ ಮ್ಯಾನ್ ಗಳು ಕೊಲೆ ಮಾಡಿದ್ದಾರೆ. ಇದು ಅಸ್ತಿತ್ವಕ್ಕೆ ಪ್ರಶ್ನೆಯಾಗಿದೆ. ಜಾಗತಿಕ ಮಟ್ಟದಲ್ಲಿ ಕೃತ್ಯದ ಮೂಲಕ ಭಯೋತ್ಪಾದನೆ ಹೆಸರಲ್ಲಿ ಹಣ ಮಾಡೋಕು ಮಾಡಿರಬಹುದು. ಆದರೆ ಶೀಘ್ರ ಭಾರತ ಪ್ರತ್ಯುತ್ತರ ನೀಡಲಿದೆ. ಅಮೇರಿಕದ ಉಪಾಧ್ಯಕ್ಷ ನಮ್ಮ ದೇಶದಲ್ಲೇ ಇದ್ದಾರೆ. ಪಾಕಿಸ್ತಾನಕ್ಕೆ ಅಮೆರಿಕ ಜೊತೆ ಸೇರಿ ಬುದ್ದಿ ಕಲಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.  ಇದನ್ನೂ ಓದಿ: Pahalgam Terrorist Attack – ಉಗ್ರರ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ

  • Pahalgam Attack | ದೆಹಲಿ, ಮುಂಬೈ ಪ್ರವಾಸಿ ತಾಣಗಳ ಮೇಲೂ ನಿಗಾ, ಬುಧವಾರ ಜಮ್ಮು ಬಂದ್‌ಗೆ ಕರೆ

    Pahalgam Attack | ದೆಹಲಿ, ಮುಂಬೈ ಪ್ರವಾಸಿ ತಾಣಗಳ ಮೇಲೂ ನಿಗಾ, ಬುಧವಾರ ಜಮ್ಮು ಬಂದ್‌ಗೆ ಕರೆ

    ನವದೆಹಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಉಗ್ರರು ಬಾಲಬಿಚ್ಚಿದ್ದು, ಹಿಂದೂಗಳ ನರಮೇಧವಾಗಿದೆ. ದಕ್ಷಿಣ ಕಾಶ್ಮೀರದ ಪ್ರವಾಸಿ ತಾಣ ಪಹಲ್ಗಾಮ್ ಕಣಿವೆಯಲ್ಲಿ ಪ್ರವಾಸಿಗರನ್ನೇ ಟಾರ್ಗೆಟ್ ಮಾಡಿ 30ಕ್ಕೂ ಪ್ರವಾಸಿಗರನ್ನು ಕೊಂದು ರಕ್ತದ ಕೋಡಿ ಹರಿಸಿದ್ದಾರೆ. ಇಬ್ಬರು ವಿದೇಶಿಗರು ಸೇರಿದಂತೆ ರಾಶಿ ರಾಶಿ ಹೆಣಗಳನ್ನು ಟಾರ್ಪಲ್‌ನಲ್ಲಿ ಮುಚ್ಚಲಾಗಿದೆ. ಪ್ರವಾಸದ ಖುಷಿಯಲ್ಲಿದ್ದ ಪ್ರವಾಸಿಗರ ಬಳಿ ಏಕಾಏಕಿ ನುಗ್ಗಿರುವ ಲಷ್ಕರ್‌ನ ಅಂಗ ಉಗ್ರ ಸಂಘಟನೆ ಟಿಆರ್‌ಎಫ್ ಟೆರರಿಸ್ಟ್‌ಗಳು ದಾಳಿ ನಡೆಸಿದ್ದಾರೆ.

    ಇನ್ನೂ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿ ಬೆನ್ನಲ್ಲೇ ಮುಂಬೈ ಮತ್ತು ದೆಹಲಿ ಪೊಲೀಸರು ಅಲರ್ಟ್‌ ಆಗಿದ್ದಾರೆ. ಮುಂಬೈ ಮತ್ತು ದೆಹಲಿಯ ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ ವಹಿಸಿದ್ದಾರೆ. ಪ್ರವಾಸಿ ತಾಣಗಳು ಮತ್ತು ಇತರ ಪ್ರಮುಖ ಸ್ಥಳಗಳ ಮೇಲೆ ನಿಗಾ ವಹಿಸುವಂತೆ ಉನ್ನತ ಅಧಿಕಾರಿಗಳು ಸೂಚನೆ ನೀಡಿರುವುದಾಗಿ ವರದಿಗಳು ತಿಳಿಸಿವೆ.

    ಉಗ್ರರ ದಾಳಿಗೆ ಅಮೆರಿಕದ ಉಪಾಧ್ಯಕ್ಷ ಖಂಡನೆ:
    ಇನ್ನೂ ಭಾರತದ ಪ್ರವಾಸದಲ್ಲಿರುವ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್‌ ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿದ್ದು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ:  Pahalgam Terrorist Attack | ಶ್ರೀನಗರಕ್ಕೆ ಅಮಿತ್ ಶಾ ಭೇಟಿ – ಉನ್ನತ ಅಧಿಕಾರಿಗಳ ಜೊತೆ ಹೈವೋಲ್ಟೇಜ್‌ ಮೀಟಿಂಗ್‌

    ಬುಧವಾರ ಜಮ್ಮು ಬಂದ್‌ಗೆ ಕರೆ
    ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬೆನ್ನಲ್ಲೇ ಜಮ್ಮು ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿ ಹಾಗೂ ವಿವಿಧ ಸಂಘಟನೆಗಳು ಬುಧವಾರ (ಏಪ್ರಿಲ್ 23) ಜಮ್ಮು ಬಂದ್‌ಗೆ ಕರೆ ನೀಡಿವೆ. ಇದನ್ನೂ ಓದಿ: ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ – ಶಿವಮೊಗ್ಗದ ಉದ್ಯಮಿ ಪತ್ನಿಗೆ ಉಗ್ರ ಹೇಳಿದ ಮಾತು

    ಇನ್ನೂ ಕಾಶ್ಮೀರದಲ್ಲಿ ಪ್ರವಾಸಿಗರ ಮೇಲಿನ ದಾಳಿ ಖಂಡಿಸಿ ಇಲ್ಲಿನ ಸ್ಥಳೀಯರು ಸೋಪೋರ್, ಗಂಡೇರ್ಬಲ್, ಹಂದ್ವಾರ, ಬಂಡಿಪೋರಾ ಮತ್ತು ಕಾಶ್ಮೀರದ ಇತರ ಭಾಗಗಳಲ್ಲಿ ಮೇಣದಬತ್ತಿ ಮೆರವಣಿಗೆ ನಡೆಸಿದ್ದಾರೆ. ಇದನ್ನೂ ಓದಿ: ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

  • Pahalgam Terrorist Attack | ಶ್ರೀನಗರಕ್ಕೆ ಅಮಿತ್ ಶಾ ಭೇಟಿ – ಉನ್ನತ ಅಧಿಕಾರಿಗಳ ಜೊತೆ ಹೈವೋಲ್ಟೇಜ್‌ ಮೀಟಿಂಗ್‌

    Pahalgam Terrorist Attack | ಶ್ರೀನಗರಕ್ಕೆ ಅಮಿತ್ ಶಾ ಭೇಟಿ – ಉನ್ನತ ಅಧಿಕಾರಿಗಳ ಜೊತೆ ಹೈವೋಲ್ಟೇಜ್‌ ಮೀಟಿಂಗ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿಯ (Pahalgam Terrorist Attack) ಬಳಿಕ ಶ್ರೀನಗರಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ, ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

    ಉಗ್ರರ ದಾಳಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮತ್ತು ಸ್ಥಳಕ್ಕೆ ಭೇಟಿ ನೀಡುವಂತೆ ಪ್ರಧಾನಿ ಮೋದಿಯವರು ಅಮಿತ್ ಶಾ ಅವರಿಗೆ ಸೂಚಿಸಿದ್ದರು. ಪ್ರಧಾನಿ ಸೂಚನೆಯಂತೆ ಅಮಿತ್ ಶಾ ಅವರು ಶ್ರೀನಗರಕ್ಕೆ ತೆರಳಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ | ಸೌದಿಯಿಂದಲೇ ಮೋದಿ ಕರೆ, ಸ್ಥಳಕ್ಕೆ ಹೊರಟ ಅಮಿತ್‌ ಶಾ

    ಶ್ರೀ ನಗರಕ್ಕೆ ತೆರಳುವ ಮುನ್ನ ಅಮಿತ್ ಶಾ (Amit Shah) ಅವರು ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ಈ ಬಗ್ಗೆ ಸಭೆ ಕರೆದಿದ್ದರು. ಸಭೆಯಲ್ಲಿ ಗುಪ್ತಚರ ಬ್ಯೂರೋ ಮುಖ್ಯಸ್ಥ ತಪನ್ ದೇಕಾ ಮತ್ತು ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಭಾಗವಹಿಸಿದ್ದರು ಎಂದು ಮೂಲಗಳು ತಿಳಿಸಿವೆ.

    ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಹಾಗೂ ಹಾವೇರಿ ಮೂಲದ ಭರತ್‌ ಸೇರಿದಂತೆ 30 ಮಂದಿ ಮೃತಪಟ್ಟಿದ್ದಾರೆ. ದಾಳಿಯಲ್ಲಿ ಇತರ 12 ಜನ ಗಾಯಗೊಂಡಿದ್ದಾರೆ.

    ಈ ವರ್ಷದ ಅಮರನಾಥ ಯಾತ್ರೆಗೆ ದೇಶಾದ್ಯಂತ ನೋಂದಣಿ ನಡೆಯುತ್ತಿರುವಾಗ ಈ ದಾಳಿ ನಡೆದಿದೆ. 38 ದಿನಗಳ ತೀರ್ಥಯಾತ್ರೆ ಜುಲೈ 3 ರಿಂದ ಎರಡು ಮಾರ್ಗಗಳಿಂದ ಪ್ರಾರಂಭವಾಗಲಿದೆ. ಇದನ್ನೂ ಓದಿ: ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

  • ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ – ಶಿವಮೊಗ್ಗದ ಉದ್ಯಮಿ ಪತ್ನಿಗೆ ಉಗ್ರ ಹೇಳಿದ ಮಾತು

    ʻನಿನ್ನನ್ನು ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ – ಶಿವಮೊಗ್ಗದ ಉದ್ಯಮಿ ಪತ್ನಿಗೆ ಉಗ್ರ ಹೇಳಿದ ಮಾತು

    – ಆ ಉಗ್ರರು ಹಿಂದೂಗಳನ್ನ ಗುರಿಯಾಗಿಸಿಕೊಂಡೇ ಬಂದಂತೆ ತೋರ್ತಿತ್ತು; ಪಲ್ಲವಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿರುವ ಭಯೋತ್ಪಾದಕ ದಾಳಿಗೆ (Terrorist Attack) ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ಸೇರಿದಂತೆ ಪ್ರಮುಖರು ತಮ್ಮ ಎಕ್ಸ್‌ ಖಾತೆಗಳಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ಖಂಡಿಸಿದ್ದಾರೆ. ಈ ನಡುವೆ ದಾಳಿಯಲ್ಲಿ ತನ್ನನ ಗಂಡನನ್ನು ಕಳೆದುಕೊಂಡ ಶಿವಮೊಗ್ಗ (Shivamogga) ಮೂಲದ ರಿಯಲ್‌ ಎಸ್ಟೇಟ್ ಉದ್ಯಮಿಯ‌ ಪತ್ನಿ ಪಲ್ಲವಿ, ತಮ್ಮ ದುಃಖವನ್ನು ಹಂಚಿಕೊಂಡಿದ್ದಾರೆ.

    ಮಗನಿಗೆ ಬೇಸಿಗೆ ರಜೆ ಸಿಕ್ಕ ಹಿನ್ನೆಲೆಯಲ್ಲಿ ಕಾಶ್ಮೀರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ. ದಾಳಿಯಿಂದ ಬದುಕುಳಿದಿರುವ ಪಲ್ಲವಿ, ಮನಕಲುಕುವ ಕ್ಷಣಗಳನ್ನು ವಿವರಿಸಿದ್ದಾರೆ. ನಾನು, ನನ್ನ ಪತ್ನಿ, ಮಗ ಕಾಶ್ಮೀರಕ್ಕೆ ಹೋಗಿದ್ದೆವು. ನಾವು ಪಹಲ್ಗಾಮ್‌ನಲ್ಲಿದ್ದಾಗ ಮಧ್ಯಾಹ್ನ 1:30ರ ವೇಳೆಗೆ ದಾಳಿ ನಡೆಯಿತು. ನನ್ನ ಪತಿಯನ್ನ ಕಣ್ಣಮುಂದೆಯೇ ಕೊಂದುಬಿಟ್ಟರು. ಅದನ್ನ ನೆನೆಸಿಕೊಂಡ್ರೆ ಈಗಲೂ ಕೆಟ್ಟ ಕನಸಿನಂತೆ ಭಾಸವಾಗ್ತಿದೆ ಎಂಧು ಭಾವುಕರಾದರು. ಇದನ್ನೂ ಓದಿ: ಪತಿಯನ್ನು ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ – ಉಗ್ರರಿಂದ ಹತ್ಯೆಗೀಡಾದ ಉದ್ಯಮಿ ಪತ್ನಿಯ ಕಣ್ಣೀರು

    ಅವರು ದಾಳಿ ಮಾಡಿದ್ದು ನೋಡಿದ್ರೆ, ಹಿಂದೂಗಳನ್ನ ಗುರಿಯಾಗಿಸಿಕೊಂಡೇ ಬಂದಂತೆ ತೋರ್ತಿತ್ತು. ಮೂರರಿಂದ ನಾಲ್ಕು ಜನ ನಮ್ಮ ಮೇಲೆ ದಾಳಿ ಮಾಡಿದ್ರು. ನಾನು ಅವರಿಗೆ ಹೇಈದೆ. ನನ್ನ ಪತಿಯನ್ನ ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ ಎಂದು ಹೇಳಿದೆ. ಆಗ ಅವರಲ್ಲಿದ್ದ ಒಬ್ಬ ʻನಾನು ನಿನ್ನನ್ನ ಕೊಲ್ಲುವುದಿಲ್ಲ, ಹೋಗಿ ಮೋದಿಗೆ ಇದನ್ನ ಹೇಳುʼ ಅಂತ ಹೇಳಿದ ಎಂದು ಹೇಳಿದರು.  ಇದನ್ನೂ ಓದಿ: ದುಷ್ಟ ಅಜೆಂಡಾ ಎಂದಿಗೂ ಯಶಸ್ವಿಯಾಗಲ್ಲ, ದಾಳಿಕೋರರನ್ನು ಸುಮ್ಮನೆ ಬಿಡಲ್ಲ: ಗುಡುಗಿದ ಮೋದಿ

    ಇನ್ನೂ ʻಪಬ್ಲಿಕ್‌ ಟಿವಿʼ ಜೊತೆ ಮಾತನಾಡಿದ ಪಲ್ಲವಿ ಅವರು, ನಾವು ಒಂದು 500 ಜನ ಇದ್ವಿ. ಮಿನಿ ಸ್ವಿಡ್ಜರ್‌ಲ್ಯಾಂಡ್ ಅಂತಾ ಒಂದು ಪಾಯಿಂಟ್ ಅದು.‌ ಆಗಷ್ಟೇ ಹೋಗಿ ಕುದುರೆ ಇಳಿದಿದ್ವಿ. ನನ್ನ ಮಗ ಬೆಳಗ್ಗೆಯಿಂದ ಏನೂ ತಿಂದಿರಲಿಲ್ಲ. ಅಲ್ಲೇನಾದ್ರೂ ತಗೊಳೋಕೆ ಅಂತಾ ನಮ್ಮ ಮನೆಯವರು, ಅಂಗಡಿಯವರ ಬಳಿ ವಿಚಾರಿಸಲು ಹೋದರು. ನನ್ನ ಮಗನ ಕರೆಯಲು ನಾನು ಹೋದೆ. ಗುಂಡಿನ ತರ ಸೌಂಡ್ ಬಂತು. ನಾವೆಲ್ಲಾ ಆರ್ಮಿಯವರು ಇರಬೇಕು ಅಂನ್ಕೊಂಡ್ವಿ. ನಾನು ಈ ಕಡೆ ತಿರುಗಿ ನೋಡೋ ಅಷ್ಟರಲ್ಲಿ ಬೇರೆಯವರೆಲ್ಲಾ ಓಡುತ್ತಿದ್ದರು. ನನ್ನ ಮಗನ ಕರೆದುಕೊಳ್ಳೋಕೆ ಅಂತಾ ನೋಡ್ತಿನಿ, ಅಷ್ಟರಲ್ಲಿ ನಮ್ಮ ಮನೆಯವರು ರಕ್ತದ ಮಡುವಿನಲ್ಲಿ ಇದ್ದರು. ಅವರು ತಲೆಗೆ ಹೊಡೆದಿದ್ದಾರೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: Pahalgam Terrorist Attack – ಉಗ್ರರ ದಾಳಿಗೆ ಮತ್ತೊಬ್ಬ ಕನ್ನಡಿಗ ಬಲಿ

    ನಾನು ಅಲ್ಲೇ ಇದ್ದ ಭಯೋತ್ಪಾದಕನ ಬಳಿ ನನ್ನ ಪತಿಯನ್ನು ಸಾಯಿಸಿದ್ದೀರಾ, ನನ್ನನ್ನು ಸಾಯಿಸಿ ಎಂದು ನಾನು ಕೇಳಿದೆ. ನನ್ನ ಮಗ ಏ ನಾಯಿ… ನನ್ನ ತಂದೆಯನ್ನು ಕೊಂದೆಯಲ್ಲಾ, ನಮ್ಮನ್ನು ಕೊಂದುಬಿಡು ಎಂದ.. ಇಲ್ಲ ನಿಮ್ಮನ್ನು ಸಾಯಿಸಲ್ಲ. ಮೋದಿಗೆ ಹೋಗಿ ಹೇಳು ಎಂದು ಹೋದ. ನಮ್ಮ ಎದುರಿಗೆ ಓಡಾಡುತ್ತಿದ್ದರು. ಯಾರೂ ಇರಲಿಲ್ಲ.. ಸೈನಿಕರೂ ಯಾರೂ ಇರಲಿಲ್ಲ. ಮಾಮೂಲಿ ಬಟ್ಟೆಯಲ್ಲಿ ಇದ್ದರು. ನವ ದಂಪತಿ ಒಬ್ಬರು ಬಂದಿದ್ದರು. ಗಂಡಸರಿಗೆ ಮಾತ್ರ ಹೊಡೆದರು. ಹೆಂಗಸರು, ಮಕ್ಕಳಿಗೆ ಏನೂ ಆಗಿಲ್ಲ. ನಮಗೆ ನಮ್ಮ ಮನೆಯವರ ಮೃತದೇಹ ಬೇಗ ಸಿಗಬೇಕು, ಫ್ಲೈಟ್ ಅರೆಂಜ್ ಮಾಡಿ, ಕಳಿಸಿ ಎಂದು ಒತ್ತಾಯಿಸಿದ್ದಾರೆ.

  • ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

    ಮುಗ್ಧರನ್ನು ಕೊಲ್ಲುವುದು ದುಷ್ಟತನ- ಪಹಲ್ಗಾಮ್‌ ದಾಳಿ ಖಂಡಿಸಿದ ನಟ ಅಕ್ಷಯ್ ಕುಮಾರ್

    ಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Jammu & Kashmir Pahalgam Terror Attack) ನಡೆದ ಭಯೋತ್ಪಾದಕರ ದಾಳಿಯಲ್ಲಿ 30 ಮಂದಿ ಸಾವನ್ನಪ್ಪಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಸದ್ಯ ಈ ಉಗ್ರರ ಪೈಶಾಚಿಕ ಕೃತ್ಯವನ್ನು ನಟ ಅಕ್ಷಯ್ ಕುಮಾರ್ (Akshay Kumar) ಖಂಡಿಸಿದ್ದಾರೆ. ಈ ರೀತಿ ಮುಗ್ಧರನ್ನು ಕೊಲ್ಲುವುದು ದುಷ್ಟತನ ಎಂದಿದ್ದಾರೆ. ಇದನ್ನೂ ಓದಿ:ಪತಿಯನ್ನು ಕೊಂದಿದ್ದೀರಿ, ನನ್ನನ್ನೂ ಕೊಂದುಬಿಡಿ – ಉಗ್ರರಿಂದ ಹತ್ಯೆಗೀಡಾದ ಉದ್ಯಮಿ ಪತ್ನಿಯ ಕಣ್ಣೀರು

    ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ತಿಳಿದು ಆಘಾತವಾಗಿದೆ. ಈ ರೀತಿಯ ಮುಗ್ಧ ಜನರನ್ನು ಕೊಲ್ಲುವುದು ದುಷ್ಟತನ. ಅವರ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:Pahalgam Terrorist Attack | ಕನ್ನಡಿಗರ ರಕ್ಷಣೆಗಾಗಿ ತಂಡ ರಚನೆ ಮಾಡಿದ್ದೇವೆ: ಹೆಚ್‌ಕೆ ಪಾಟೀಲ್

    ಅಂದಹಾಗೆ, ಮಧ್ಯಾಹ್ನದ ವೇಳೆ ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲು ಪ್ರದೇಶದಲ್ಲಿ ಕುದುರೆ ಮೇಲೆ ಕುಳಿತು ಪ್ರವಾಸಿಗರು ಸಮಯ ಕಳೆಯುತ್ತಿದ್ದ ವೇಳೆ ಸೇನಾ ಸಮವಸ್ತ್ರ ಧರಿಸಿ ಬಂದ ಭಯೋತ್ಪಾದಕರು, ಪ್ರವಾಸಿಗರನ್ನು ಮಾತನಾಡಿಸುವ ನೆಪದಲ್ಲಿ ಬಂದು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಗೆ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ ಬಲಿಯಾಗಿದ್ದಾರೆ.

  • ಗುಂಡು ಹಾರಿಸುವ ಮುನ್ನ ಪುರುಷರಿಗೆ ಇಸ್ಲಾಂನ ʻಕಲಿಮಾʼ ಪಠಿಸುವಂತೆ ಬೆದರಿಸಿದ್ದ ಉಗ್ರರು!

    ಗುಂಡು ಹಾರಿಸುವ ಮುನ್ನ ಪುರುಷರಿಗೆ ಇಸ್ಲಾಂನ ʻಕಲಿಮಾʼ ಪಠಿಸುವಂತೆ ಬೆದರಿಸಿದ್ದ ಉಗ್ರರು!

    ಶ್ರೀನಗರ: ಲಷ್ಕರ್‌ ಶಾಖೆಯ ಟಿಆರ್‌ಎಫ್‌ (TRF) ಭಯೋತ್ಪಾದಕ ಗುಂಪು ಪ್ರವಾಸಿಗರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 30 ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸೇನಾ ಸಮವಸ್ತ್ರ ಧರಿಸಿ ಬಂದ ಉಗ್ರರು ಮಾತನಾಡಿರುವ ನೆಪದಲ್ಲಿ ಬಂದು ಗುಂಡು ಹಾರಿಸಿದ್ದಾರೆ.

    ಮೊದಲು ನೀವು ಮುಸಲ್ಮಾನರಾ? (Muslims) ಎಂದು ಕೇಳಿದ ಉಗ್ರರು, ಗುಂಡು ಹಾರಿಸುವುದಕ್ಕೂ ಮುನ್ನ ಪುರುಷರಿಗೆ ಇಸ್ಲಾಂನ ʻಕಲಿಮಾʼ (Kalima) ಪಠಿಸುವಂತೆ ಬೆದರಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೇಲ್ಪುರಿ ತಿನ್ನುವಾಗ ನೀನು ಮುಸಲ್ಮಾನನಾ ಅಂತ ಕೇಳಿ ಗುಂಡು ಹಾರಿಸಿದ ಉಗ್ರ – ದಾಳಿ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

    ʻಕಲಿಮಾʼ ಅಥವಾ ಶಹದಾ ಅಂದ್ರೆ ಏನು?
    ಕಲಿಮಾ ಅಥವಾ ಶಹದಾ ಅನ್ನೋದು ನಂಬಿಕೆಯ ಇಸ್ಲಾಮಿಕ್ (Islamic) ಘೋಷಣೆ. ಇದು ಇಸ್ಲಾಂ ನಂಬಿಕೆಯ ಐದು ಸ್ತಂಭಗಳಲ್ಲಿ ಒಂದೆಂದು ನಂಬುತ್ತಾರೆ. ಅರೇಬಿಕ್‌ನಲ್ಲಿ ‘ಅಶ್ಹದು ಆನ್ ಲಾ ಇಲಾಹ ಇಲ್ಲಲ್ಲಾಹ್, ವ ಅಶ್ಹದು ಅನ್ನ ಮುಹಮ್ಮದುರ್ ರಸುಲುಲ್ಲಾಹ್’ ಎಂದು ಬಣ್ಣಿಸುತ್ತಾರೆ. ಇದನ್ನು ಪ್ರಾಮಾಣಿಕವಾಗಿ ಪಠಿಸಿದವರು ಮುಸ್ಲಿಂ ಅನುಯಾಯಿಗಳಾಗುತ್ತಾರೆ, ಅವರು ಇಸ್ಲಾಂ ಧರ್ಮದ ಮಡಿಲಿಗೆ ಬರುತ್ತಾರೆ ಅನ್ನೋದು ನಂಬಿಕೆ. ಆದ್ದರಿಂದಲೇ ಪ್ರವಾಸಿಗರಿಗೆ ಗುಂಡು ಹಾರಿಸುವುದಕ್ಕೂ ಮುನ್ನ ಕಲಿಮಾ ಪಠಿಸುವಂತೆ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ.  ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಮಂಜುನಾಥ್‌ ರಾವ್‌ ಯಾರು?

    ಸೂಕ್ತ ಕ್ರಮಕ್ಕೆ ಅಮಿತ್‌ ಶಾಗೆ ಸೂಚಿಸಿದ ಮೋದಿ:
    ಭಯೋತ್ಪಾದಕ ದಾಳಿಯ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಹಿನ್ನೆಲೆ ಅಮಿತ್ ಶಾ ತುರ್ತು ಸಭೆ ಕರೆದಿದ್ದಾರೆ. ಸಭೆಯಲ್ಲಿ ಐಬಿ ಗೃಹ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಇತರ ಅಧಿಕಾರಿಗಳು ಉಪಸ್ಥಿತರಿದ್ದರು. ಜಮ್ಮು ಮತ್ತು ಕಾಶ್ಮೀರ ಡಿಜಿಪಿ ಈ ಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸಿದ್ದಾರೆ.  ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ | ಸೌದಿಯಿಂದಲೇ ಮೋದಿ ಕರೆ, ಸ್ಥಳಕ್ಕೆ ಹೊರಟ ಅಮಿತ್‌ ಶಾ

    ಸದ್ಯ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸಹ ದಾಳಿಯನ್ನು ಖಂಡಿಸಿದ್ದು, ಪ್ರವಾಸಿಗರ ಮೇಲೆ ದಾಳಿ ನಡೆಸುವುದು ಅತ್ಯಂತ ಹೇಯ ಕೃತ್ಯ ಎಂದು ಎಂದು ಕಿಡಿ ಕಾರಿದ್ದಾರೆ. ಈ ನಡುವೆ ಭಯೋತ್ಪಾದಕರನ್ನು ಹಿಡಿಯಲು ಭದ್ರತಾ ಪಡೆಗಳು ಶೋಧ ಕಾರ್ಯ ಆರಂಭಿಸಿವೆ.  ಇದನ್ನೂ ಓದಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ – ಶಿವಮೊಗ್ಗದ ಉದ್ಯಮಿ ಸಾವು, 12 ಮಂದಿಗೆ ಗಾಯ

  • Pahalgam Terrorist Attack | ಕನ್ನಡಿಗರ ರಕ್ಷಣೆಗಾಗಿ ತಂಡ ರಚನೆ ಮಾಡಿದ್ದೇವೆ: ಹೆಚ್‌ಕೆ ಪಾಟೀಲ್

    Pahalgam Terrorist Attack | ಕನ್ನಡಿಗರ ರಕ್ಷಣೆಗಾಗಿ ತಂಡ ರಚನೆ ಮಾಡಿದ್ದೇವೆ: ಹೆಚ್‌ಕೆ ಪಾಟೀಲ್

    ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪಹಲ್ಗಾಮ್‌ನಲ್ಲಿ (Pahalgam) ನಡೆದ ಭಯೋತ್ಪಾದಕ ದಾಳಿಯಲ್ಲಿ (Terrorist Attack) ಗಾಯಗೊಂಡವರು ಹಾಗೂ ಅಲ್ಲಿರುವ ಕನ್ನಡಿಗರಿಗಾಗಿ ಒಂದು ತಂಡ ರಚನೆ ಮಾಡಿ, ರಕ್ಷಣಾ ಕಾರ್ಯಾಚರಣೆಗಾಗಿ ಕಳುಹಿಸುತ್ತಿದ್ದೇವೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಹೆಚ್‌ಕೆ ಪಾಟೀಲ್ (HK patil) ಮಾಹಿತಿ ನೀಡಿದರು.

    `ಪಬ್ಲಿಕ್ ಟಿವಿ’ ಜೊತೆ ಮಾತನಾಡಿ ಮಾಹಿತಿ ಹಂಚಿಕೊಂಡ ಅವರು, ನನಗೆ ಸಿಕ್ಕ ಮಾಹಿತಿ ಪ್ರಕಾರ ಮಂಜುನಾಥ್ ಎನ್ನುವ ಒಬ್ಬರು ಸಾವನ್ನಪ್ಪಿದ್ದಾರೆ. ಆದರೆ ಕೆಲವು ವರದಿಯ ಪ್ರಕಾರ, ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಆದರೆ ಆ ಕುರಿತು ಅಧಿಕೃತ ಮಾಹಿತಿ ಬಂದಿಲ್ಲ. ಸದ್ಯದ ಮಾಹಿತಿ ಪ್ರಕಾರ ಒಟ್ಟು 12 ಜನ ಕನ್ನಡಿಗರಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಸಿಎಂ ಹಾಗೂ ಮುಖ್ಯ ಕಾರ್ಯದರ್ಶಿಯವರ ಜೊತೆ ಮಾತನಾಡಿದ್ದೇನೆ. ಈಗಾಗಲೇ ಒಂದು ತಂಡ ರಚನೆ ಮಾಡಿ, ರಕ್ಷಣಾ ಕಾರ್ಯಾಚರಣೆಗಾಗಿ ಕಳುಹಿಸುತ್ತಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಪೈಶಾಚಿಕ ಕೃತ್ಯ – 27ಕ್ಕೂ ಹೆಚ್ಚು ಪ್ರವಾಸಿಗರು ಬಲಿ?

    ಕರ್ನಾಟಕ ಭವನದ ಅಧಿಕಾರಿಗಳು, ಹಿರಿಯ ಅಧಿಕಾರಿಗಳು ಹೊರಡಲು ಸಿದ್ಧರಾಗಿದ್ದಾರೆ. ಇನ್ನೂ ಕನ್ನಡಿಗರು ಯಾರೆಲ್ಲ ಇದ್ದಾರೆ ಎಂದು ಅವರ ಬಗ್ಗೆ ಪಟ್ಟಿ ಮಾಡಲು ಏಜೆನ್ಸಿಗಳಿಗೆ ತಿಳಿಸಲಾಗಿದೆ. ಗಾಯಗೊಂಡವರು ಮೂವರು, ಸಾವನ್ನಪ್ಪಿದವರು ಇಬ್ಬರು ಎನ್ನಲಾಗುತ್ತಿದ್ದು, ಒಬ್ಬರ ಬಗ್ಗೆ ಅಧಿಕೃತವಾಗಿ ತಿಳಿದು ಬಂದಿದೆ. ಇನ್ನೊಬ್ಬರ ಬಗ್ಗೆ ಮಾಹಿತಿ ತಿಳಿದು ಬರಬೇಕಿದೆ ಎಂದು ತಿಳಿಸಿದರು.

    ಏನಿದು ಘಟನೆ?
    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶಿವಮೊಗ್ಗದ ಪ್ರವಾಸಿಗರೊಬ್ಬರು ಸಾವಿಗೀಡಾಗಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿಯಾಗಿರುವ ಮಂಜುನಾಥ್ ಅವರು ಪತ್ನಿ ಪಲ್ಲವಿ ಹಾಗೂ ಪುತ್ರ ಅಭಿಜೇಯ ಜೊತೆ ಪ್ರವಾಸಕ್ಕೆ ಹೋಗಿದ್ದರು.ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಕನ್ನಡಿಗ ಮಂಜುನಾಥ್‌ ರಾವ್‌ ಯಾರು?