Tag: Pak Pm

  • ಟ್ರಂಪ್‌ಗೆ `ಎಕ್ಸ್‌’ನಲ್ಲಿ ಪಾಕ್ ಪ್ರಧಾನಿ ಅಭಿನಂದನೆ – ಬ್ಯಾನ್ ಮಾಡಿದ್ದ ಸೋಶಿಯಲ್‌ ಮೀಡಿಯಾ ವೇದಿಕೆ ಬಳಸಿದ್ದಕ್ಕೆ ಜನರ ಆಕ್ಷೇಪ

    ಟ್ರಂಪ್‌ಗೆ `ಎಕ್ಸ್‌’ನಲ್ಲಿ ಪಾಕ್ ಪ್ರಧಾನಿ ಅಭಿನಂದನೆ – ಬ್ಯಾನ್ ಮಾಡಿದ್ದ ಸೋಶಿಯಲ್‌ ಮೀಡಿಯಾ ವೇದಿಕೆ ಬಳಸಿದ್ದಕ್ಕೆ ಜನರ ಆಕ್ಷೇಪ

    ಇಸ್ಲಾಮಾಬಾದ್‌: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ 2ನೇ ಬಾರಿಗೆ ಗೆಲುವು ಸಾಧಿಸಿದ ಡೊನಾಲ್ಡ್‌ ಟ್ರಂಪ್‌ (Donald Trump0 ಅವರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif) ಎಕ್ಸ್‌ ಖಾತೆಯಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ. ನಿಷೇಧಿತ ಎಕ್ಸ್‌ ಖಾತೆ ಪ್ರವೇಶಿಸಲು ಪ್ರಧಾನಿಗಳು ವಿಪಿಎನ್‌ ಬಳಸಿದ್ದಾರೆ. ಇದರಿಂದ ಕಾನೂನು ಉಲ್ಲಂಘನೆಯಾಗಿದೆ ಎಂದು ಜನರಿಂಧ ಆಕ್ರೋಶ ವ್ಯಕ್ತವಾಗಿದೆ.

    ಷರೀಫ್‌ ಎಕ್ಸ್‌ನಲ್ಲಿ ಹೇಳಿದ್ದೇನು?
    ಇತ್ತೀಚೆಗೆ ಅಧ್ಯಕೀಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಟ್ರಂಪ್‌ಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಪಾಕಿಸ್ತಾನ-ಅಮೆರಿಕದ (Pakistan – USA) ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ವಿಸ್ತರಿಸಲು ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ – 25ಕ್ಕೂ ಅಧಿಕ ಸಾವು

    ಈ ವರ್ಷಾರಂಭದಲ್ಲಿ ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ಅತ್ತಾವುಲ್ಲಾ ತರಾರ್, ರಾಷ್ಟ್ರೀಯ ಭದ್ರತಾ ಸಮಸ್ಯೆಗಳನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ʻಎಕ್ಸ್ʼ ನಿಷೇಧಿಸುವುದಾಗಿ ಘೋಷಿಸಿದ್ದರು. ಏಕೆಂದರೆ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA)ಗೆ ಸೇರಿದ ಭಯೋತ್ಪಾದಕರು ದೇಶವಿರೋಧಿ ಚಟುವಟಿಕೆಗಳನ್ನು ಹರಡಲು ʻಎಕ್ಸ್‌ʼ ವೇದಿಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದರು. ಇಂತಹ ಪರಿಸ್ಥಿತಿ ಇರುವಾಗ ಪಿಎಂ ಷರೀಫ್ ಅಭಿನಂದನೆ ಸಲ್ಲಿಸಲು ಎಕ್ಸ್‌ ಖಾತೆ ಬಳಸಿದ್ದು, ಜನರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡೊನಾಲ್ಡ್‌ ಟ್ರಂಪ್‌ಗೆ ರಷ್ಯಾ ಅಧ್ಯಕ್ಷ ಪುಟಿನ್‌ ವಿಶ್‌ – ಮಾತುಕತೆಗೆ ಸಿದ್ಧ ಎಂದ ನಾಯಕರು 

    ಪಾಕ್‌ ಮತ್ತು ಯುಎಸ್‌ ಹಳೆಯ ಸ್ನೇಹಿತರು:
    ಪ್ರಧಾನಿ ಶೆಹಬಾಜ್‌ ಷರೀಫ್‌ ಅವರ ಎಕ್ಸ್‌ ವಿವಾದ ನಡುವೆ ಪಾಕಿಸ್ತಾನದ ವಿದೇಶಾಂಗ ಕಚೇರಿಯ ವಕ್ತಾರ ಮುಮ್ತಾಜ್ ಜಹ್ರಾ ಬಲೋಚ್ ಮಾತನಾಡಿ, ಪಾಕಿಸ್ತಾನ ಮತ್ತು ಯುಎಸ್ ಹಳೆಯ ಸ್ನೇಹಿತರು ಮತ್ತು ಪಾಲುದಾರರು. ಯುನೈಟೆಡ್ ಸ್ಟೇಟ್ಸ್‌ನೊಂದಿಗಿನ ನಮ್ಮ ಸಂಬಂಧವು ದಶಕಗಳಷ್ಟು ಹಳೆಯದಾಗಿದೆ. ಟ್ರಂಪ್ ಅವರ 2ನೇ ಅವಧಿಯು ಇಸ್ಲಾಮಾಬಾದ್‌-ಚೀನಾ ಜೊತೆಗಿನ ಸಂಬಂಧದ ಮೇಲೆ ಪರಿಣಾಮ ಬೀರಲ್ಲ ಎಂದು ಒತ್ತಿ ಹೇಳಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷದ ಚುನಾವಣೆಯಲ್ಲಿ ಕೆನಡಾ ಪ್ರಧಾನಿ ಟ್ರುಡೋಗೆ ಸೋಲು : ಮಸ್ಕ್‌ ಭವಿಷ್ಯ

  • 72 ವರ್ಷಗಳ ನಂತ್ರ ಮತ್ತೆ ತೆರೆದಿದೆ ಪಾಕ್‍ನಲ್ಲಿರುವ ಹಿಂದೂ ದೇಗುಲ

    72 ವರ್ಷಗಳ ನಂತ್ರ ಮತ್ತೆ ತೆರೆದಿದೆ ಪಾಕ್‍ನಲ್ಲಿರುವ ಹಿಂದೂ ದೇಗುಲ

    ಇಸ್ಲಮಾಬಾದ್: ಪಾಕಿಸ್ತಾನದಲ್ಲಿದ್ದ ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಪುರಾತನ ಹಿಂದೂ ದೇಗುಲವನ್ನು 72 ವರ್ಷಗಳ ಬಳಿಕ ಮತ್ತೆ ತೆರೆದು, ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲಾಗಿದೆ.

    ಪಾಕಿಸ್ತಾನದ ಸಿಯಾಲ್ ಕೋಟ್‍ನಲ್ಲಿ ‘ಶಾವಾಲಾ ತೇಜ ಸಿಂಗ್ ದೇವಾಲಯ’ ಇದೆ. ಈ ದೇವಾಲಯವನ್ನು 72 ವರ್ಷಗಳ ಹಿಂದೆ ಮುಚ್ಚಲಾಗಿತ್ತು. ಆದರೆ ಈಗ ಮತ್ತೆ ದೇಗುಲದ ಬಾಗಿಲು ತೆರೆದಿದೆ. ಸಾವಿರ ವರ್ಷಗಳ ಹಿಂದೆ ಸರ್ದಾರ್ ತೇಜ್ ಸಿಂಗ್ ಅವರು ಶಾವಾಲಾ ತೇಜ ಸಿಂಗ್ ದೇವಾಲಯವನ್ನು ನಿರ್ಮಿಸಿದ್ದರು. ಈ ದೇವಾಲಯವು ಭಾರತ-ಪಾಕ್ ವಿಭಜನೆಯ ಸಮಯದಲ್ಲಿ ಮುಚ್ಚಲಾಗಿತ್ತು.

    1992ರಲ್ಲಿ ಭಾರತದಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದ ನಂತರ ಪಾಕ್‍ನಲ್ಲಿದ್ದ ಹಿಂದೂಗಳು ಶಾವಾಲಾ ತೇಜ ಸಿಂಗ್ ದೇಗುಲಕ್ಕೆ ಭೇಟಿ ನೀಡುವುದನ್ನು ನಿಲ್ಲಿಸಿದ್ದರು. ಅಂದಿನಿಂದ ದೇಗುಲದಲ್ಲಿ ಪೂಜೆ, ಪುನಸ್ಕಾರಗಳು ನಡೆಯದೆ ಪಾಳುಬಿದ್ದಿತ್ತು.

    ಸುದ್ದಿಸಂಸ್ಥೆಯೊಂದರ ವರದಿ ಪ್ರಕಾರ, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ನಿರ್ದೇಶನದ ಮೇರೆಗೆ ದೇವಾಲಯದ ಬಾಗಿಲನ್ನು ಮತ್ತೆ ತೆರೆಯಲಾಗಿದೆ ಎನ್ನಲಾಗಿದೆ. ಅಲ್ಲದೆ ಜನರು ಯಾವುದೇ ಸಮಯದಲ್ಲಿ ಇಲ್ಲಿಗೆ ಭೇಟಿ ನೀಡಲು ಮುಕ್ತರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಬಿಲಾಲ್ ಹೈದರ್ ಹೇಳಿದ್ದಾರೆ.

    ಹಾಗೆಯೇ ದೇವಾಲಯದ ಸಂರಕ್ಷಣೆ ಮತ್ತು ಪುನಃಸ್ಥಾಪಿಸುವ ಕಾರ್ಯವನ್ನು ಕೂಡ ಶೀಘ್ರದಲ್ಲೇ ಆರಂಭಿಸಲಾಗುತ್ತಿದೆ ಎಂದು ಪಾಕಿಸ್ತಾನ ಸರ್ಕಾರ ತಿಳಿಸಿದೆ.

  • ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಐಸಿಜೆ ತೀರ್ಪನ್ನು ಶ್ಲಾಘಿಸಿದ ಪಾಕ್ ಪ್ರಧಾನಿ

    ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಐಸಿಜೆ ತೀರ್ಪನ್ನು ಶ್ಲಾಘಿಸಿದ ಪಾಕ್ ಪ್ರಧಾನಿ

    – ಈ ಬಗ್ಗೆ ಪಾಕ್ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ತೇವೆ

    ಇಸ್ಲಾಮಾಬಾದ್: ಭಾರತೀಯ ಕಮಾಂಡರ್ ಕುಲಭೂಷಣ್ ಜಾಧವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಜೆ ನೀಡಿರುವ ತೀರ್ಪಿಗೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಟ್ವೀಟ್ ಮೂಲಕ ಶ್ಲಾಘಿಸಿದ್ದಾರೆ.

    ಕುಲಭೂಷಣ್ ಜಾಧವ್ ಪ್ರಕರಣದ ವಿಚಾರವಾಗಿ ಬುಧವಾರ ಐಸಿಜೆ ಕೋರ್ಟ್ ಪಾಕ್ ನೀಡಿರುವ ಗಲ್ಲು ಶಿಕ್ಷೆಗೆ ತಡೆ ನೀಡಿ ರಾಜತಾಂತ್ರಿಕ ನೆರವು ನೀಡಬೇಕೆಂದು ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಈಗ ಇಮ್ರಾನ್ ಖಾನ್ ಟ್ವೀಟ್ ಮಾಡಿ, ಕಮಾಂಡರ್ ಕುಲಭೂಷಣ್ ಜಾಧವ್ ಅವರನ್ನು ಖುಲಾಸೆಗೊಳಿಸಿ, ಬಿಡುಗಡೆ ಮಾಡದಿರುವ ಐಸಿಜೆ ನಿರ್ಧಾರವನ್ನು ಶ್ಲಾಘಿಸುತ್ತೇನೆ. ಆದರೆ ಪಾಕಿಸ್ತಾನದ ಜನರ ವಿರುದ್ಧ ಮಾಡಿರುವ ಅಪರಾಧಗಳಲ್ಲಿ ಅವರು ತಪ್ಪಿತ್ತಸ್ಥರಾಗಿದ್ದಾರೆ. ಪಾಕಿಸ್ತಾನವು ಕಾನೂನಿನ ಪ್ರಕಾರ ತನ್ನ ಕ್ರಮವನ್ನು ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಭಾರತದ ಪರ ಗೂಢಚರ್ಯೆ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ, ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. 2017ರ ಏಪ್ರಿಲ್ ನಲ್ಲಿ ಫೀಲ್ಡ್ ಜನರಲ್ ಕೋರ್ಟ್ ಮಾರ್ಷಲ್ ಜಾಧವ್ ಅವರಿಗೆ ಗಲ್ಲು ಶಿಕ್ಷೆ ವಿಧಿಸಿದೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ (ಐಎಸ್‍ಪಿಆರ್) ತಿಳಿಸಿತ್ತು.

    ವಿಚಾರಣೆ ವೇಳೆ ರಾ ಪರ ನಾನು ಗೂಢಚರ್ಯೆ ನಡೆಸುತ್ತಿದ್ದ ವಿಚಾರವನ್ನು ಕುಲಭೂಷಣ ಜಾಧವ್ ತಪ್ಪೊಪ್ಪಿಕೊಂಡಿದ್ದರು ಎಂದು ಐಎಸ್‍ಪಿಆರ್ ತನ್ನ ಹೇಳಿಕೆಯಲ್ಲಿ ಉಲ್ಲೇಖಿಸಿತ್ತು. ಕೂಲಭೂಷಣ್ ಜಾಧವ್ ನೌಕಾ ಸೇನೆಯ ನಿವೃತ್ತ ಅಧಿಕಾರಿಯಾಗಿದ್ದರು. ಆದರೆ ಅವರು ರಾ ಪರವಾಗಿ ಗೂಢಚರ್ಯೆ ನಡೆಸುತ್ತಿರುವ ಆರೋಪವನ್ನು ಭಾರತ ಸರ್ಕಾರ ನಿರಾಕರಿಸಿತ್ತು. 2016ರ ಮಾರ್ಚ್ 3ರಂದು ಬಲೂಚಿಸ್ತಾನದ ಮಶೇಕಲ್ ಎಂಬಲ್ಲಿ ಕುಲಭೂಷಣ್ ಜಾಧವ್ ಅವರು ಅರೆಸ್ಟ್ ಅಗಿದ್ದರು. ಅಲ್ಲದೆ 2017ರಲ್ಲಿ ಪಾಕಿಸ್ತಾನದ ಮಿಲಿಟರಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿತ್ತು.

    ವಿಯೆನ್ನಾ ಒಪ್ಪಂದದ ಪ್ರಕಾರ ಕುಲಭೂಷಣ್‍ಗೆ ಭಾರತ ರಾಜತಾಂತ್ರಿಕ ನೆರವು ನೀಡಲು ಅವಕಾಶ ಮಾಡಿಕೊಡಬೇಕಿತ್ತು. ಈ ಕುರಿತು 16 ಬಾರಿ ಭಾರತದ ಮಾಡಿದ್ದ ಮನವಿಯನ್ನು ಪಾಕಿಸ್ತಾನ ತಿರಸ್ಕರಿಸಿತ್ತು. ಹೀಗಾಗಿ ಭಾರತ ಮೇ 2017ರಂದು ಅಂತರಾಷ್ಟ್ರೀಯ ನ್ಯಾಯಾಲಯದ ಮೊರೆ ಹೋಗಿತ್ತು. ಪ್ರಕರಣವನ್ನು ಕೈಗೆತ್ತಿಕೊಂಡ 10 ಸದಸ್ಯರುಳ್ಳ ನ್ಯಾಯಪೀಠ 18 ಮೇ 2017ರಂದು ಕುಲಭೂಷಣ್ ಜಾಧವ್ ಅವರಿಗೆ ಪಾಕಿಸ್ತಾನ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಿತ್ತು.

    ಭಾರತ ಗಲ್ಲುಶಿಕ್ಷೆಯನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿಕೊಂಡಿದ್ದು, ನಿವೃತ್ತ ನೌಕಾ ಸೇನಾಧಿಕಾರಿ ಕುಲಭೂಷಣ್‍ರನ್ನು ಇರಾನ್‍ನಿಂದ ಪಾಕಿಸ್ತಾನ ಕಿಡ್ನಾಪ್ ಮಾಡಿತ್ತು ಎಂಬ ಅಂಶವನ್ನು ಕೋರ್ಟ್ ನಲ್ಲಿ ಭಾರತ ಮಂಡಿಸಿತ್ತು.