Tag: Pak Soldiers

  • ಅಫ್ಘಾನ್ ಗಡಿಯಲ್ಲಿ ಮತ್ತೆ ಘರ್ಷಣೆ; 5 ಪಾಕ್ ಸೈನಿಕರ ಸಾವು

    ಅಫ್ಘಾನ್ ಗಡಿಯಲ್ಲಿ ಮತ್ತೆ ಘರ್ಷಣೆ; 5 ಪಾಕ್ ಸೈನಿಕರ ಸಾವು

    ಇಸ್ಲಾಮಾಬಾದ್: ಅಫ್ಘಾನಿಸ್ತಾನ ಗಡಿಯ ಬಳಿ ನಡೆದ ಘರ್ಷಣೆಯಲ್ಲಿ ಐವರು ಪಾಕಿಸ್ತಾನಿ ಸೈನಿಕರು ಮತ್ತು 25 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನ ಸೇನೆ ಭಾನುವಾರ ತಿಳಿಸಿದೆ. ‌

    ಹಿಂದಿನ ಸರಣಿ ಘರ್ಷಣೆಗಳ ನಂತರ ಉದ್ವಿಗ್ನತೆಯನ್ನು ಶಮನಗೊಳಿಸಲು ಎರಡೂ ದೇಶಗಳ ನಿಯೋಗಗಳು ಇಸ್ತಾಂಬುಲ್‌ನಲ್ಲಿ ಭೇಟಿಯಾದಾಗಲೂ ಹಿಂಸಾಚಾರ ಸಂಭವಿಸಿದೆ.

    ಶುಕ್ರವಾರ ಮತ್ತು ಶನಿವಾರ ಉಗ್ರಗಾಮಿಗಳು ಅಫ್ಘಾನಿಸ್ತಾನದಿಂದ ಪಾಕಿಸ್ತಾನದ ಕುರ್ರಂ ಮತ್ತು ಉತ್ತರ ವಜೀರಿಸ್ತಾನ್ ಜಿಲ್ಲೆಗಳಿಗೆ, ವಾಯುವ್ಯ ಗಡಿಯುದ್ದಕ್ಕೂ ಇರುವ ಒರಟಾದ ಪ್ರದೇಶಗಳಿಗೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಪಾಕಿಸ್ತಾನಿ ಸೇನೆ ಹೇಳಿಕೊಂಡಿದೆ.

    ಶನಿವಾರ ಮುಂಜಾನೆ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಕದನ ವಿರಾಮ ಮುಂದುವರೆದಿದೆ ಎಂದು ಹೇಳಿದ್ದರು. ಅಫ್ಘಾನಿಸ್ತಾನ ಶಾಂತಿಯನ್ನು ಬಯಸುತ್ತದೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಿದರು. ಆದರೆ ಇಸ್ತಾಂಬುಲ್‌ನಲ್ಲಿ ಒಪ್ಪಂದ ಮಾಡಿಕೊಳ್ಳಲು ವಿಫಲವಾದರೆ ಯುದ್ಧವಾಗುತ್ತದೆ ಎಂದು ಸಹ ಅವರು ಎಚ್ಚರಿಸಿದ್ದರು.

    ಪಾಕಿಸ್ತಾನದ ಆರೋಪಗಳಿಗೆ ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಇನ್ನೂ ಪ್ರತಿಕ್ರಿಯಿಸಿಲ್ಲ. ಆದಾಗ್ಯೂ, ಉಗ್ರರಿಗೆ ಆಶ್ರಯ ನೀಡುವುದನ್ನು ಆ ಗುಂಪು ನಿರಾಕರಿಸುತ್ತದೆ. ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳು ಅಫ್ಘಾನ್ ಸಾರ್ವಭೌಮತ್ವವನ್ನು ಉಲ್ಲಂಘಿಸುತ್ತದೆ ಎಂದು ಹೇಳುತ್ತದೆ.

  • ಬಲೂಚಿಸ್ತಾನ್‌ ಲಿಬರೇಶನ್ ಆರ್ಮಿಯಿಂದ ಐಇಡಿ ದಾಳಿ – 12 ಪಾಕ್ ಸೈನಿಕರು ಸಾವು

    ಬಲೂಚಿಸ್ತಾನ್‌ ಲಿಬರೇಶನ್ ಆರ್ಮಿಯಿಂದ ಐಇಡಿ ದಾಳಿ – 12 ಪಾಕ್ ಸೈನಿಕರು ಸಾವು

    – ಸ್ಫೋಟದ ತೀವ್ರತೆಗೆ ವಾಹನ ಸಮೇತ ಸೈನಿಕರ ದೇಹ ಛಿದ್ರ ಛಿದ್ರ

    ಇಸ್ಲಾಮಾಬಾದ್‌: ಬಲೂಚಿಸ್ತಾನದ ಕಚ್ಚಿ ಜಿಲ್ಲೆಯ ಮಾಚ್‌ ಪ್ರದೇಶದಲ್ಲಿ ಪಾಕಿಸ್ತಾನಿ ಸೇನಾ ಬೆಂಗಾವಲು ಪಡೆ ವಾಹನದ (Pakistan Army vehicle) ಮೇಲೆ ಬಲೂಚ್ ಲಿಬರೇಶನ್ ಆರ್ಮಿ (BLA) ಐಇಡಿ (ಸುಧಾರಿತ ಸ್ಫೋಟಕ ಸಾಧನ) ದಾಳಿ ನಡೆಸಿದ್ದು, ಪಾಕ್ ಸೇನೆಯ 12 ಮಂದಿ ಪಾಕ್‌ ಸೈನಿಕರನ್ನು ಹತ್ಯೆ ಮಾಡಿದೆ.

    ಬಲೂಚ್‌ ಲಿಬರೇಷನ್‌ ಆರ್ಮಿಯ (Balochistan Liberation Army) ಹೋರಾಟಗಾರರು ಪಾಕ್‌ ಸೇನಾ ವಾಹನವನ್ನು ಗುರಿಯಾಗಿಸಿ ಈ ದಾಳಿ ನಡೆಸಿದ್ದಾರೆ. ಈ ವೇಳೆ ವಿಶೇಷ ಕಾರ್ಯಾಚರಣೆ ಕಮಾಂಡರ್ ತಾರಿಕ್ ಇಮ್ರಾನ್ ಮತ್ತು ಸುಬೇದಾರ್ ಉಮರ್ ಫಾರೂಕ್ ಸೇರಿದಂತೆ ಸೇನಾ ವಾಹನದಲ್ಲಿದ್ದ 12 ಸೈನಿಕರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಲಾಹೋರ್‌ನಲ್ಲಿ ಅಲ್ಲೋಲ ಕಲ್ಲೋಲ – ಮಿಲಿಟರಿ ವಿಮಾನ ನಿಲ್ದಾಣದ ಬಳಿ ಮೂರು ಸ್ಫೋಟ

    ಸಾಂದರ್ಭಿಕ ಚಿತ್ರ

    ಸ್ಫೋಟ ಸಂಭವಿಸಿದ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ (Social Media) ಹರಿದಾಡುತ್ತಿದೆ. ಸ್ಫೋಟದ ತೀವ್ರತೆಗೆ ವಾಹನ ಸಮೇತ ಅದರಲ್ಲಿದ್ದ ಸೈನಿಕರ ದೇಹ ಛಿದ್ರ ಛಿದ್ರವಾಗಿದೆ. ಈ ಬೆನ್ನಲ್ಲೇ ಎಚ್ಚೆತ್ತ ಪಾಕ್‌ ಸೇನೆ ಬಲೂಚ್‌ ಹೋರಾಟಗಾರರನ್ನ ಸದೆಬಡಿಯಲು ಪಣ ತೊಟ್ಟಿದೆ. ಇದನ್ನೂ ಓದಿ: ಉಗ್ರರು ಅಮಾಯಕರ ಮೇಲೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಆಗಲ್ಲ – ಆಪರೇಷನ್‌ ಸಿಂಧೂರ ಬೆಂಬಲಿಸಿದ ಇಸ್ರೇಲ್‌

    ಒಂದು ವಾರದ ಹಿಂದೆಯಷ್ಟೇ ಬಲೂಚಿಸ್ತಾನ ಪ್ರಾಂತ್ಯದ ಕಚ್‌ ಮತ್ತು ಜಿಯಾರತ್‌ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಪಾಕಿಸ್ತಾನ ಭದ್ರತಾ ಪಡೆಗಳು 10 ಉಗ್ರರನ್ನ ಕೊಂದಿದ್ದವು, ಇದಕ್ಕೆ ಪ್ರತೀಕಾರವಾಗಿ ಬಲೂಚ್‌ ಉಗ್ರರು ಐಇಡಿ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: Operation Sindoor | ಭಾರತದ ದಾಳಿಯಲ್ಲಿ 31 ಮಂದಿ ಹತ್ಯೆ, 46 ಮಂದಿಗೆ ಗಾಯ – ಹೊಣೆ ಹೊತ್ತ ಪಾಕ್‌ ಸೇನೆ