Tag: Pakistan Army

  • ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್‌ನಿಂದ ಸೇನಾ ವಾಹನದ ಮೇಲೆ ದಾಳಿ – 10ಕ್ಕೂ ಹೆಚ್ಚು ಪಾಕ್ ಸೈನಿಕರ ಸಾವು

    ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್‌ನಿಂದ ಸೇನಾ ವಾಹನದ ಮೇಲೆ ದಾಳಿ – 10ಕ್ಕೂ ಹೆಚ್ಚು ಪಾಕ್ ಸೈನಿಕರ ಸಾವು

    ಕ್ವೆಟ್ಟಾ: ಬಲೂಚಿಸ್ತಾನದಲ್ಲಿ (Balochistan) ನಡೆಯುತ್ತಿರುವ ಪ್ರತಿರೋಧ ಚಳುವಳಿಯ ಭಾಗವಾಗಿ ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್ (Balochistan Liberation Front) ಪಾಕಿಸ್ತಾನದ ಸೇನಾ ವಾಹನದ ಮೇಲೆ ದಾಳಿ ನಡೆಸಿದೆ. ಪರಿಣಾಮ 10ಕ್ಕೂ ಹೆಚ್ಚು ಪಾಕ್ ಸೈನಿಕರು (Pakistan Army) ಸಾವನ್ನಪ್ಪಿದ್ದಾರೆ.

    ಪಾಕಿಸ್ತಾನ ಸೇನೆಯು ಬಲೂಚ್ ರಾಜಿ ಆಜೋಯ್ ಸಂಗರ್ ಎಂಬ ಬಲೂಚ್ ಸಶಸ್ತ್ರ ಗುಂಪುಗಳ ಒಕ್ಕೂಟದ ನಿಯಂತ್ರಣದಲ್ಲಿರುವ ಪ್ರದೇಶಗಳಿಗೆ ಆಕ್ರಮಣಕಾರಿಯಾಗಿ ಮುನ್ನುಗ್ಗಲು ಪ್ರಯತ್ನಿಸಿದಾಗ ಖುಜ್ದಾರ್‌ನ ಜೆಹ್ರಿ ಪ್ರದೇಶದಲ್ಲಿ ಭೀಕರ ದಾಳಿ ನಡೆದಿದೆ. ಇದನ್ನೂ ಓದಿ:ಬೆಳಕಿನ ಕಿರಣಗಳಲ್ಲಿ ನಮ್ಮ ದೇಶ ಅದ್ಭುತ, ಬೆಂಗ್ಳೂರು, ಪುಣೆ ಮಿನುಗುತ್ತೆ – ಬಾಹ್ಯಾಕಾಶದಿಂದ ಭಾರತ ಕಂಡ ಬಗೆ ಹಂಚಿಕೊಂಡ ಶುಕ್ಲಾ

    ಈ ಕುರಿತು ಬಲೂಚ್ ರಾಜಿ ಆಜೋಯ್ ಸಂಗರ್ ವಕ್ತಾರ ಬಲೂಚ್ ಖಾನ್ ಬಿಡುಗಡೆ ಮಾಡಿದ ಹೇಳಿಕೆ ಪ್ರಕಾರ, ಘರ್ಷಣೆ ಸಮಯದಲ್ಲಿ 10ಕ್ಕೂ ಅಧಿಕ ಪಾಕಿಸ್ತಾನ ಸೈನಿಕರು ಸಾವನ್ನಪ್ಪಿದ್ದಾರೆ. BRASನ ಆರು ಹೋರಾಟಗಾರರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

    ಬಲೂಚ್ ಲಿಬರೇಶನ್ ಆರ್ಮಿ, ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್, ಬಲೂಚ್ ರಿಪಬ್ಲಿಕನ್ ಗಾರ್ಡ್ ಮತ್ತು ಸಿಂಧು ದೇಶ್ ರೆವಲ್ಯೂಷನರಿ ಆರ್ಮಿಗಳನ್ನು ಒಳಗೊಂಡಿರುವ ಒಕ್ಕೂಟವು ಒಂದೇ ಧ್ವಜದ ಅಡಿಯಲ್ಲಿ ಒಗ್ಗಟ್ಟಿನಿಂದ ಉಳಿಯುತ್ತವೆ. ಎಲ್ಲ ಪ್ರತಿರೋಧಗಳ ನಡುವೆಯೂ BRAS ಏಕತೆಗೆ ಬದ್ಧರಾಗುವುದನ್ನು ಪುನರುಚ್ಛರಿಸುತ್ತದೆ ಎಂದಿದ್ದಾರೆ.

    ಬಲೂಚಿಸ್ತಾನ್ ದೀರ್ಘಕಾಲದಿಂದ ನಡೆಯುತ್ತಿರುವ ಮಾನವ ಹಕ್ಕುಗಳ ಸಮಸ್ಯೆಗಳಿಗೆ ಕೇಂದ್ರಬಿಂದುವಾಗಿದೆ. ಈ ಪ್ರದೇಶವು ಪ್ರತ್ಯೇಕತಾವಾದಿ ಚಳುವಳಿಗಳು, ಬಲವಾದ ಮಿಲಿಟರಿ ಸಂಬಂಧಿಸಿದ ಹಿಂಸಾಚಾರಗಳನ್ನು ಎದುರಿಸಿದೆ.ಇದನ್ನೂ ಓದಿ: ದೀಪಾವಳಿ ಬೋನಸ್ ಕೊಟ್ಟಿಲ್ಲ ಅಂತ ಬೇಸರ; ಟೋಲ್ ಸಂಗ್ರಹಿಸದೇ ವಾಹನಗಳನ್ನ ಫ್ರೀ ಬಿಟ್ಟ ಸಿಬ್ಬಂದಿ

  • ಪಾಕಿಸ್ತಾನದ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್

    ಪಾಕಿಸ್ತಾನದ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್

    – ಭಾರತದ ವಿರುದ್ಧ ಮತ್ತೆ ವಿಷಕಾರಿದ ಸೈಫುಲ್ಲಾ ಖಾಲಿದ್‌

    ಇಸ್ಲಾಮಾಬಾದ್‌: ಪಹಲ್ಗಾಮ್‌ನ (Pahalgam) ಬೈಸರನ್ ಕಣಿವೆಯಲ್ಲಿ ಹಿಂದೂಗಳ ನರಮೇಧ ಮಾಡಿದ ಕೃತ್ಯದ ಮಾಸ್ಟರ್‌ ಮೈಂಡ್‌ ಸೈಫುಲ್ಲಾ ಖಾಲಿದ್ (Saifullah Khalid) ಪಾಕಿಸ್ತಾನದ ರ‍್ಯಾಲಿಯೊಂದರಲ್ಲಿ ಹಿರಿಯ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡಿದ್ದಾನೆ. ಜೊತೆಗೆ ವೇದಿಕೆ ಭಾಷಣದಲ್ಲಿ ಭಾರತದ ವಿರುದ್ಧ ಮತ್ತೆ ವಿಷಕಾರಿರುವುದು ಕಂಡುಬಂದಿದೆ.

    ಲಷ್ಕರ್-ಎ-ತೈಬಾ (LeT) ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ ಸೂತ್ರಧಾರ ಹಫೀಜ್ ಸಯೀದ್‌ನ (Hafiz Saeed) ಆಪ್ತನೂ ಕೂಡ ಆಗಿದ್ದಾನೆ. ಪಾಕಿಸ್ತಾನದ ಪಂಜಾಬ್‌ನಲ್ಲಿ ನಡೆದ ಸಾರ್ವಜನಿಕ ರ‍್ಯಾಲಿಯಲ್ಲಿ ರಾಜಕಾರಣಿ ಮಲಿಕ್ ಅಹ್ಮದ್ ಖಾನ್ ಜೊತೆಗೆ ವೇದಿಕೆ ಹಂಚಿಕೊಂಡಿರುವುದು ಕಂಡುಬಂದಿದೆ. ಅಲ್ಲದೇ ಪಾಕ್‌ ಸೇನೆಯಿಂದಲೇ ಅವನಿಗೆ ರಕ್ಷಣೆ ನೀಡಲಾಗಿದೆ. ಇದೇ ವೇದಿಕೆಯಲ್ಲಿ ಎಲ್‌ಇಟಿ‌ ಸ್ಥಾಪಕ ಮತ್ತು ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಅವರ ಪುತ್ರ ತಲ್ಹಾ ಸಯೀದ್ ಕೂಡ ಇದ್ದಾನೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

    ಬಳಿಕ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿರುವ ಸೈಫುಲ್ಲಾ ಖಾಲಿದ್‌, ಭಾರತ, ಹಿಂದೂಗಳ ವಿರುದ್ಧ ವಿಷ ಕಾರಿದ್ದಾನೆ. ಜೊತೆಗೆ ಆಪರೇಷನ್‌ ಸಿಂಧೂರದಲ್ಲಿ ಹತ್ಯೆಗೀಡಾದ ಪಾಕಿಸ್ತಾನಿ ಉಗ್ರರರನ್ನ ʻಹುತಾತ್ಮರುʼ ಎಂದು ಕರೆದಿದ್ದಾನೆ. ಇದನ್ನೂ ಓದಿ: ಭಾರತ ಜಲಯುದ್ಧ; ಇತ್ತ ಅಫ್ಘಾನಿಸ್ತಾನದಿಂದಲೂ ಶಾಕ್‌ ಆತಂಕ, ಪಾಕ್‌ನಲ್ಲಿ ಚೀನಾ ಅಣೆಕಟ್ಟೆ ನಿರ್ಮಾಣ ಯಾಕೆ?

    ಏಪ್ರಿಲ್‌ 22ರಂದು ಭಯೋತ್ಪಾದಕ ದಾಳಿ ನಡೆದಿರುವ ಬಗ್ಗೆ ನಾನು ಮಾಹಿತಿ ಪಡೆದುಕೊಂಡೆ. ಅದಾದಮೇಲೆ ಭಾರತ ನನ್ನನ್ನು ಮಾಸ್ಟರ್‌ ಮೈಂಡ್‌ ಅಂತ ಘೋಷಿಸಿರುವುದು ನನಗೆ ಗೊತ್ತಾಯ್ತು. ನಾವು ಗುಂಡಿನ ದಾಳಿಗೆ ಹೆದರೋದಿಲ್ಲ. ಹುತಾತ್ಮರಾಗಿಯೇ ಸಾಯಲು ಬಯಸುತ್ತೇವೆ ಎಂದು ಖಾಲಿದ್‌ ಹೇಳಿದ್ದಾನೆ. ಇದನ್ನೂ ಓದಿ: ಗೋಲ್ಡನ್‌ ಡೋಮ್;‌ ಕ್ಷಿಪಣಿ ದಾಳಿಯಿಂದ ಅಮೆರಿಕ ರಕ್ಷಣೆಗೆ ಬಾಹ್ಯಾಕಾಶದಲ್ಲಿ ರಕ್ಷಾಕವಚ

    ಸೈಫುಲ್ಲಾ ಖಾಲಿದ್‌ ಯಾರು?
    ಲಷ್ಕರ್-ಎ-ತೈಬಾ ಉಪ ಮುಖ್ಯಸ್ಥನಾಗಿರುವ ಸೈಫುಲ್ಲಾ ಖಾಲಿದ್ ಮುಂಬೈ ದಾಳಿ (Mumbai Attack) ಸೂತ್ರಧಾರ ಹಫೀಜ್ ಸಯೀದ್‌ ಆಪ್ತ ವ್ಯಕ್ತಿಯಾಗಿದ್ದಾನೆ. ಯಾವಾಗಲೂ ಐಷಾರಾಮಿ ಕಾರುಗಳಲ್ಲಿ ಪ್ರಯಾಣಿಸುವ ಈತನಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರ ಹಿಡಿದಿರುವ ಲಷ್ಕರ್‌ ಉಗ್ರರು ಭದ್ರತೆ ನೀಡುತ್ತಾರೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧ ಭಾರತದ ದಿಟ್ಟ ಹೋರಾಟಕ್ಕೆ ಬೆಂಬಲ – ಸ್ಲೊವೇನಿಯಾದಲ್ಲಿ ಸಂಸದ ಕ್ಯಾ. ಚೌಟ ಒಳಗೊಂಡ ಸರ್ವಪಕ್ಷ ನಿಯೋಗ

    ಯಾವಾಗಲೂ ಭಾರತದ ವಿರುದ್ಧವೇ ಕೆಲಸ ಮಾಡವುದರಿಂದ ಸೇನಾ ಅಧಿಕಾರಿಗಳ ಜೊತೆಗೂ ಈತ ಉತ್ತಮ ಸಂಬಂಧ ಹೊಂದಿದ್ದಾನೆ. ಎರಡು ತಿಂಗಳ ಹಿಂದೆ ಸೈಫುಲ್ಲಾ ಖಾಲಿದ್ ಪಾಕಿಸ್ತಾನದ ಪಂಜಾಬ್‌ನ ಕಂಗನ್‌ಪುರಕ್ಕೆ ಭೇಟಿ ನೀಡಿದ್ದ. ಕಂಗನ್‌ಪುರದಲ್ಲಿ ಪಾಕ್‌ ಸೇನೆಯ ದೊಡ್ಡ ಬೆಟಾಲಿಯನ್‌ ನೆಲೆಗೊಂಡಿದೆ. ಪಾಕಿಸ್ತಾನ ಸೇನೆಯ ಕರ್ನಲ್ ಜಾಹಿದ್ ಜರೀನ್ ಭಾರತದ ವಿರುದ್ಧ ಜಿಹಾದಿ ಭಾಷಣ ಮಾಡಲು ಈತನನ್ನು ಕರೆಸಿದ್ದ.ಭಾಷಣದಲ್ಲಿ ಪಾಕಿಸ್ತಾನ ಸೇನೆಯನ್ನು ಭಾರತದ ವಿರುದ್ಧದ ಕೃತ್ಯಕ್ಕೆ ಪ್ರಚೋದಿಸಿದ್ದ.

    ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಈತ ಭಾರತದ ವಿರುದ್ಧ ವಿಷಕಾರಿದ್ದ. ಇಂದು ಫೆಬ್ರವರಿ 2, 2025. ಕಾಶ್ಮೀರವನ್ನು ವಶಪಡಿಸಿಕೊಳ್ಳಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತೇವೆ. ಮುಂಬರುವ ದಿನಗಳಲ್ಲಿ ನಮ್ಮ ಮುಜಾಹಿದ್ದೀನ್ ದಾಳಿ ತೀವ್ರಗೊಳ್ಳಲಿದೆ. ಫೆಬ್ರವರಿ 2, 2026 ರೊಳಗೆ ಕಾಶ್ಮೀರ ಸ್ವತಂತ್ರವಾಗಲಿದೆ ಎಂದು ನಾವು ಭಾವಿಸುತ್ತೇವೆ ಎಂದು ಭರವಸೆ ನೀಡಿದ್ದ.

  • ಶಾಂತಿಯುತವಾಗಿ ಬದುಕಬೇಕಾದ್ರೆ ರೊಟ್ಟಿ ತಿನ್ನಿ, ಇಲ್ಲದಿದ್ರೆ ನನ್ನ ಬುಲೆಟ್‌ಗಳು ಯಾವಾಗಲೂ ರೆಡಿ ಇರುತ್ತೆ: ಮೋದಿ ವಾರ್ನಿಂಗ್‌

    ಶಾಂತಿಯುತವಾಗಿ ಬದುಕಬೇಕಾದ್ರೆ ರೊಟ್ಟಿ ತಿನ್ನಿ, ಇಲ್ಲದಿದ್ರೆ ನನ್ನ ಬುಲೆಟ್‌ಗಳು ಯಾವಾಗಲೂ ರೆಡಿ ಇರುತ್ತೆ: ಮೋದಿ ವಾರ್ನಿಂಗ್‌

    – ನಮ್ಮ ರಕ್ತ ಚೆಲ್ಲಲು ಯತ್ನಿಸುವವರಿಗೆ ಅವರದ್ದೇ ಭಾಷೆಯಲ್ಲಿ ಉತ್ತರಿಸಲು ಭಾರತ ಸಿದ್ಧ
    – ಭಯೋತ್ಪಾದನೆ ಕೈಬಿಡದಿದ್ದರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗುತ್ತೆ; ಪಾಕ್‌ಗೆ ಎಚ್ಚರಿಕೆ

    ಗಾಂಧಿನಗರ (ಭುಜ್‌): ನೀವು ಶಾಂತಿಯುತ ಜೀವನ ಬಯಸಿದ್ರೆ ನಿಮ್ಮ ಬ್ರೆಡ್‌ (ರೊಟ್ಟಿ) ತಿನ್ನಿ ಇಲ್ಲದಿದ್ದರೆ ನನ್ನ ಬುಲೆಟ್‌ಗಳು ಯಾವಾಗಲೂ ಸಿದ್ಧವಾಗಿರುತ್ತೆ. ಭಯೋತ್ಪಾದನೆಯನ್ನ ಕೈಬಿಡದಿದ್ರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗುತ್ತೆ ಅಂತ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪಾಕಿಸ್ತಾನ ಸರ್ಕಾರ , ಪಾಕ್‌ ಸೇನೆಗೆ (Pakistan’s Govt, Army) ದೊಡ್ಡ ಎಚ್ಚರಿಕೆ ನೀಡಿದರು.

    ರೋಡ್‌ ಶೋ ಬಳಿಕ ಗುಜರಾತ್‌ನ ಭುಜ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಬ್ಬರದ ಭಾಷಣ ಮಾಡಿದರು. ಪಾಕಿಸ್ತಾನ ಸರ್ಕಾರ ಮತ್ತು ಸೇನೆಗೆ ತೀಕ್ಷ್ಣ ಎಚ್ಚರಿಕೆ ನೀಡಿದರು. ʻನೀವು ಶಾಂತಿಯುತ ಜೀವನ ಬಯಸಿದ್ರೆ ನಿಮ್ಮ ಬ್ರೆಡ್‌ (ರೊಟ್ಟಿ) ತಿಂದು ಸುಮ್ಮನಿರಿ, ಇಲ್ಲದಿದ್ರೆ ನನ್ನ ಬುಲೆಟ್‌ಗಳು (Bullet) ಯಾವಾಗಲೂ ಸಿದ್ಧವಾಗಿರುತ್ತೆ. ಯಾವುದು ಬೇಕು ನೀವೇ ಆಯ್ಕೆ ಮಾಡಿಕೊಳ್ಳಿ ಅಂತ ಪಾಕ್‌ಗೆ ವಾರ್ನಿಂಗ್‌ ಕೊಟ್ಟರು.

    ಭಾಷಣದ ವೇಳೆ ಭಯೋತ್ಪಾದನೆಯ ವಿರುದ್ಧ ಭಾರತದ ಶೂನ್ಯ ಸಹಿಷ್ಣುತಾ ನೀತಿ ಉಲ್ಲೇಖಿಸಿದ ಪ್ರಧಾನಿ, ʻನಮ್ಮ ರಕ್ತ ಚೆಲ್ಲಲು ಪ್ರಯತ್ನಿಸುವವರಿಗೆ ಅವರದ್ದೇ ಭಾಷೆಯಲ್ಲಿ ಉತ್ತರಿಸಲು ಭಾರತ ಸಿದ್ಧವಿದೆ. ಭಾರತದ ಮೇಲೆ ಕಣ್ಣುಹಾಕುವವರು ಬೆಲೆ ತೆರಲೇಬೇಕಾಗುತ್ತದೆ ಎಂದರಲ್ಲದೇ, ಭಯೋತ್ಪಾದನೆಯನ್ನ ಬುಡಸಮೇತ ನಿರ್ಮೂಲನೆ ಮಾಡುವುದು ಮತ್ತು ಮಾನವೀಯತೆಯನ್ನ ರಕ್ಷಿಸುವುದು ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯ ಉದ್ದೇಶವಾಗಿದೆ ಎಂದು ಹೇಳಿದರು.

    ಮುಂದುವರಿದು.. ಭಯೋತ್ಪಾದನೆಯನ್ನ (Terrorism ಕೈಬಿಡದಿದ್ದರೆ ನಿಮ್ಮ ಮಕ್ಕಳ ಭವಿಷ್ಯ ಕತ್ತಲೆಯಲ್ಲಿ ಮುಳುಗುತ್ತದೆ ಎಂದು ಪಾಕ್‌ ಜನತೆಗೆ ಮೋದಿ ಮನವಿ ಮಾಡಿದರಲ್ಲದೇ ಭಯೋತ್ಪಾದನೆ ಪಾಕಿಸ್ತಾನಕ್ಕೆ ವಿನಾಶಕಾರಿ ಎಂಬುದನ್ನ ಪಾಕ್‌ ನಾಗರಿಕರಿಗೆ ಮತ್ತೊಮ್ಮೆ ಮನವರಿಗೆ ಮಾಡಿಕೊಟ್ಟರು.

    ಪ್ರವಾಸೋದ್ಯಮವು ಜನರನ್ನು ಸಂಪರ್ಕಿಸುತ್ತದೆ, ಬಹುರಾಷ್ಟ್ರೀಯ ಸ್ನೇಹವನ್ನು ಬಲಪಡಿಸುತ್ತದೆ. ಅದಕ್ಕಾಗಿಯೇ ಭಾರಯ ಪ್ರವಾಸೋದ್ಯಮದಲ್ಲಿ ನಂಬಿಕೆಯಿಡುತ್ತದೆ. ಆದ್ರೆ ಪಾಕಿಸ್ತಾನವು ಭಯೋತ್ಪಾದನೆಯನ್ನೇ ಪ್ರವಾಸೋದ್ಯಮವೆಂದು ಪರಿಗಣಿಸಿದೆ. ಇದು ಇಡೀ ವಿಶ್ವಕ್ಕೆ ಮಾರಕ ಹಾಗೂ ದೊಡ್ಡ ಬೆದರಿಕೆಯಾಗಿದೆ. ಆದ್ರೆ ಆಪರೇಷನ್‌ ಸಿಂಧೂರ ಭಯೋತ್ಪಾದನೆಯನ್ನು ಬುಡಸಮೇತ ಕೊನೆಗೊಳಿಸುವ ಧ್ಯೇಯ ಹೊಂದಿದೆ ಎಂದು ಅಬ್ಬರಿಸಿದರು.

    ಇದೇ ವೇಳೆ ಕಚ್ ಅಭಿವೃದ್ಧಿಯ ಬಗ್ಗೆ ಮಾತನಾಡಿದ ಮೋದಿ, ಈ ಹಿಂದೆ ಯಾವುದೇ ಮುಖ್ಯಮಂತ್ರಿ ಅಥವಾ ಕಚ್ ಸಚಿವರ ಭಾಷಣ ಪಾಕಿಸ್ತಾನದಿಂದಲೇ ಆರಂಭವಾಗುತ್ತಿತ್ತು ಮತ್ತು ಕೊನೆಗೊಳ್ಳುತ್ತಿತ್ತು. ಆದರೆ 2001 ರಲ್ಲಿ ಈ ವಿಷಯದ ಬಗ್ಗೆ ಸಮಯ ವ್ಯರ್ಥ ಮಾಡುವುದಿಲ್ಲ ಎಂದು ನಿರ್ಧರಿಸಿದೆವು. ಪಾಕಿಸ್ತಾನ ಅಸೂಯೆ ಪಡುವಂತೆ ಕಚ್‌ನ ಸಾಮರ್ಥ್ಯ ಎತ್ತಿ ತೋರಿಸುವುದಾಗಿ ಹೇಳಿದ್ದೆವು. ಅದರಂತೆ ನಾವಿಂದು ಕಚ್‌ ಜಿಲ್ಲೆಯನ್ನು ಅಭಿವೃದ್ಧಿಪಡಿಸಿದ್ದೇವೆ. ಇದರ ಅಭಿವೃದ್ಧಿ ನೋಡಿ ಶತ್ರುಗಳೂ ಅಸೂಯೆಪಡುತ್ತಿದ್ದಾರೆಂದು ತಿಳಿಸಿದರು.

  • ಭಾರತದ ದಾಳಿಗೆ ಬೆಚ್ಚಿ ಬಚ್ಚಿಟ್ಟುಕೊಂಡಿದ್ದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ

    ಭಾರತದ ದಾಳಿಗೆ ಬೆಚ್ಚಿ ಬಚ್ಚಿಟ್ಟುಕೊಂಡಿದ್ದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ

    ನವದೆಹಲಿ: ಭಾರತದ ʻಆಪರೇಷನ್‌ ಸಿಂಧೂರʼಕ್ಕೆ (Operation Sindoor) ಬೆಚ್ಚಿ ಬಂಕರ್‌ನಲ್ಲಿ ಬಚ್ಚಿಟ್ಟುಕೊಂಡಿದ್ದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್‌ಗೆ ಪಾಕ್‌ ಸರ್ಕಾರ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ ನೀಡಿದೆ.

    ಭಾರತದೊಂದಿಗಿನ (India) ಇತ್ತೀಚಿನ ಸಂಘರ್ಷದಲ್ಲಿ ಸಶಸ್ತ್ರ ಪಡೆಗಳನ್ನು ಯಶಸ್ವಿಯಾಗಿ ಮುನ್ನಡೆಸಿದ್ದಕ್ಕಾಗಿ ಹಾಗೂ ಅವರ ಕಾರ್ಯತಂತ್ರವನ್ನು ಗುರುತಿಸಿ ಜನರಲ್ ಅಸೀಮ್ ಮುನೀರ್‌ಗೆ ಬಡ್ತಿ ನೀಡಿರುವುದಾಗಿ ಪಾಕಿಸ್ತಾನ (Pakistan) ಸರ್ಕಾರ ಹೇಳಿಕೊಂಡಿದೆ. ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಭಾರತದ ಪರಾಕ್ರಮಕ್ಕೆ ಬೆದರಿ ಬಂಕರ್‌ನಲ್ಲಿ ಅಡಗಿದ್ದ ಅಸಿಮ್‌ ಮುನೀರ್‌!

    ಜೊತೆಗೆ ವಾಯುಪಡೆಯ ಮುಖ್ಯಸ್ಥ ಮಾರ್ಷಲ್ ಜಹೀರ್ ಬಾಬರ್ ಸಿಧು ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರವೂ ಸೇವೆಯಲ್ಲಿ ಉಳಿಸಿಕೊಳ್ಳಲು ಸಂಪುಟವು ಸರ್ವಾನುಮತದಿಂದ ನಿರ್ಧರಿಸಿದೆ. ಇದನ್ನೂ ಓದಿ: ಭಾರತದ ದಾಳಿಗೆ ಬೆದರಿ ರಾವಲ್ಪಿಂಡಿಯಿಂದ ಪಾಕ್‌ ಸೇನಾ ಪ್ರಧಾನ ಕಚೇರಿ ಇಸ್ಲಾಮಾಬಾದ್‌ಗೆ ಶಿಫ್ಟ್‌!

    ಅಸೀಮ್‌ ಮುನೀರ್‌ 2022ರ ನವೆಂಬರ್‌ನಲ್ಲಿ ಪಾಕಿಸ್ತಾನ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದರು. ಈ ಹಿಂದೆ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಅವಧಿಯಲ್ಲಿ ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಆದರೆ ಅವರೊಂದಿಗಿನ ಭಿನ್ನಾಭಿಪ್ರಾಯದ ವರದಿಯ ನಂತರ ಕೇವಲ 8 ತಿಂಗಳಲ್ಲೇ ಹೊರನಡೆಸಿದ್ದರು. ಇದನ್ನೂ ಓದಿ: ಭಾರತ ವಿರೋಧಿ ಚಟುವಟಿಕೆ – ಬ್ರಿಟಿಷ್‌ ಕಾಶ್ಮೀರಿ ಪ್ರೊಫೆಸರ್‌ ಸಾಗರೋತ್ತರ ಪೌರತ್ವ ರದ್ದು

  • ಲಷ್ಕರ್ ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ – ಭಾರತ ತೀವ್ರ ಆಕ್ಷೇಪ

    ಲಷ್ಕರ್ ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕ್ ಸೇನಾಧಿಕಾರಿಗಳು ಭಾಗಿ – ಭಾರತ ತೀವ್ರ ಆಕ್ಷೇಪ

    – ಮುಗ್ಧ ವ್ಯಕ್ತಿ, ಧರ್ಮ ಪ್ರಚಾರಕ ಅಂತ ಬಣ್ಣಿಸಿದ ಪಾಕ್ ಸೇನೆ

    ಇಸ್ಲಾಮಾಬಾದ್: ಲಷ್ಕರ್-ಇ-ತೈಬಾ (Lashkar-e-Taiba) ಉಗ್ರನ ಅಂತ್ಯಕ್ರಿಯೆಯಲ್ಲಿ ಪಾಕಿಸ್ತಾನದ ಸೇನಾಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆದ ಬೆನ್ನಲ್ಲೇ ಪಾಕ್ ಸೇನೆ ಆತ ಒಬ್ಬ ಮುಗ್ಧ ವ್ಯಕ್ತಿ ಹಾಗೂ ಧರ್ಮ ಪ್ರಚಾರಕ ಎಂದು ಸಮರ್ಥನೆ ಮಾಡಿಕೊಂಡಿದೆ.

    ಏ.22 ರಂದು ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ `ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಲ್ಲಿ ಲಷ್ಕರ್-ಇ-ತೈಬಾ ಸಂಘಟನೆಯ ಉಗ್ರ ಸಾವನ್ನಪ್ಪಿದ್ದ. ಆತನ ಅಂತ್ಯಕ್ರಿಯೆಯಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಭಯೋತ್ಪಾದಕ ಮಸೂದ್ ಅಜರ್‌ನ ಸಹೋದರ ಅಬ್ದುಲ್ ರೌಫ್ ಅಜರ್ ಹಾಗೂ ಪಾಕಿಸ್ತಾನ ಅಧಿಕಾರಿಗಳು ಭಾಗಿಯಾಗಿದ್ದ ಫೋಟೋ ವೈರಲ್ ಆಗಿ, ವಿವಾದ ಉಂಟಾಗಿತ್ತು.ಇದನ್ನೂ ಓದಿ: ಭಾರತ-ಪಾಕ್ ʻಕದನ-ವಿರಾಮʼ ಮಾತುಕತೆ – ಇಂದು ಎರಡೂ ದೇಶಗಳ ಡಿಜಿಎಂಒಗಳ ಸಭೆ

    ಫೋಟೋ ವೈರಲ್ ಆದ ಬೆನ್ನಲ್ಲೇ ವಿವಾದ ಕಡಿಮೆ ಮಾಡುವ ಉದ್ದೇಶದಿಂದ ಪತ್ರಿಕಾಗೋಷ್ಠಿ ನಡೆಸಿದ್ದು, ಪಾಕಿಸ್ತಾನದ ಮಿಲಿಟರಿ ವಕ್ತಾರ ಡಿಜಿ ಐಎಸ್‌ಪಿಆರ್ ಮಾತನಾಡಿ, ಆತ ಒಬ್ಬ ಸರಳ, ಮುಗ್ಧ ಕುಟುಂಬದ ವ್ಯಕ್ತಿ, ಪಕ್ಷದ ಕಾರ್ಯಕರ್ತ ಎಂದು ಹೇಳಿಕೊಂಡಿದ್ದಾರೆ. ಜೊತೆಗೆ ಅದನ್ನು ಸಾಬೀತುಪಡಿಸಲು ಪಾಕಿಸ್ತಾನ ರಾಷ್ಟ್ರೀಯ ಗುರುತಿನ ಚೀಟಿಯನ್ನು ಕೂಡ ಪ್ರದರ್ಶಿಸಿದ್ದಾರೆ.

    ಆದರೆ ಭಾರತೀಯ ಅಧಿಕಾರಿಗಳ ಮಾಹಿತಿ ಪ್ರಕಾರ, ಅಧಿಕೃತ ದಾಖಲೆಗಳು ಸಂಪೂರ್ಣವಾಗಿ ವಿಭಿನ್ನ ಕಥೆಯನ್ನು ಹೇಳುತ್ತವೆ. `ಆಪರೇಷನ್ ಸಿಂಧೂರ’ ಕುರಿತು ನಡೆದ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮಾತನಾಡಿ, ಭಾರತ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದ ಭಯೋತ್ಪಾದಕನ ಅಂತ್ಯಕ್ರಿಯೆ ವೇಳೆ ಅಮೆರಿಕದಿಂದ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲ್ಪಟ್ಟ ಮತ್ತು ಹಿರಿಯ ಎಲ್‌ಇಟಿ ಕಮಾಂಡರ್ ಹಫೀಜ್ ಅಬ್ದುಲ್ ರೌಫ್ ಭಾಗಿಯಾಗಿರುವ ಫೋಟೋವನ್ನು ಬಹಿರಂಗಪಡಿಸಿದರು.

    ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಸರ್ಕಾರಿ ಅಂತ್ಯಕ್ರಿಯೆ ನೀಡುವುದು ಒಂದು ಪದ್ಧತಿಯಾಗಿರಬಹುದು. ಆದರೆ ಈ ಫೋಟೋ ಮೂಲಕ ಭಯೋತ್ಪಾದಕ ಸಂಘಟನೆಗಳಿಗೆ ಪಾಕಿಸ್ತಾನ ನಿರಂತರವಾಗಿ ಪೋತ್ಸಾಹ ನೀಡುತ್ತಿದೆ ಎಂದು ಹೈಲೆಟ್ ಮಾಡಿದರು. ಜೊತೆಗೆ ಅಂತ್ಯಕ್ರಿಯೆಯಲ್ಲಿ ಹಾಜರಿದ್ದ ಪಾಕಿಸ್ತಾನದ ಉನ್ನತ ಅಧಿಕಾರಿಗಳ ಹೆಸರುಗಳನ್ನು ಬಿಡುಗಡೆ ಮಾಡಿದ್ದಾರೆ.ಇದನ್ನೂ ಓದಿ: ಯುದ್ಧ ಭೀತಿ ನಡುವೆ ಮತ್ತೊಂದು ಶಾಕ್‌ – ಪಾಕಿಸ್ತಾನದ 51 ಸ್ಥಳಗಳ ಮೇಲೆ ಬಲೂಚ್‌ ಹೋರಾಟಗಾರರಿಂದ ದಾಳಿ

  • ಭಾರತ-ಪಾಕ್ ʻಕದನ-ವಿರಾಮʼ ಮಾತುಕತೆ – ಇಂದು ಎರಡೂ ದೇಶಗಳ ಡಿಜಿಎಂಒಗಳ ಸಭೆ

    ಭಾರತ-ಪಾಕ್ ʻಕದನ-ವಿರಾಮʼ ಮಾತುಕತೆ – ಇಂದು ಎರಡೂ ದೇಶಗಳ ಡಿಜಿಎಂಒಗಳ ಸಭೆ

    ನವದೆಹಲಿ: ಭಾರತ – ಪಾಕಿಸ್ತಾನ (India vs Pakistan) ಸಂಘರ್ಷ ಮತ್ತು ಕದನ ವಿರಾಮದ ಬಳಿಕ ಇದೇ ಮೊದಲ ಬಾರಿಗೆ ಉಭಯ ದೇಶಗಳ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರ (DGMO) ಮಟ್ಟದ ಮಾತುಕತೆ ಸೋಮವಾರ (ಇಂದು) ಮಧ್ಯಾಹ್ನ 12 ಗಂಟೆಗೆ ನಿಗದಿಯಾಗಿದೆ ಎಂದು ಭಾರತದ ಡಿಜಿಎಂಓ ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಪ್ರಕಟಿಸಿದ್ದಾರೆ.

    ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎ.ಎನ್.ಪ್ರಮೋದ್ ಮತ್ತು ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ.ಭಾರ್ತಿ ಅವರು ಸುದ್ದಿಗೋಷ್ಠಿಯಲ್ಲಿದ್ದರು. ಆಪರೇಷನ್ ಸಿಂಧೂರ (Operation Sindoor) ಬಗ್ಗೆ ಸಮಗ್ರ ಮಾಹಿತಿಗಳನ್ನು ಮಾಧ್ಯಮಗಳ ಜತೆ ಹಂಚಿಕೊಳ್ಳುವ ಸಂದರ್ಭದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. ಇಂದಿನ ಉನ್ನತ ಮಟ್ಟದ ಸಭೆಯಲ್ಲಿ ಉಭಯ ರಾಷ್ಟ್ರ ನಾಯಕರು ಪರಿಸ್ಥಿತಿತಿಗಳ ಕುರಿತು ಅವಲೋಕಿಸಲಿದ್ದಾರೆ ಎಂದು ಸಹ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಯುದ್ಧ ಭೀತಿ ನಡುವೆ ಮತ್ತೊಂದು ಶಾಕ್‌ – ಪಾಕಿಸ್ತಾನದ 51 ಸ್ಥಳಗಳ ಮೇಲೆ ಬಲೂಚ್‌ ಹೋರಾಟಗಾರರಿಂದ ದಾಳಿ

    ಇದೇ ವೇಳೆ ಭಾರತದ ಕಾರ್ಯಾಚರಣೆಯಲ್ಲಿ ಯೂಸಫ್ ಅಝರ್, ಅಬ್ದುಲ್ ಮಲಿಕ್ ರವೂಫ್ ಮತ್ತು ಮುದಾಸಿರ್ ಅಹ್ಮದ್ ಸೇರಿದಂತೆ 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ. ಆರ್ಟಿಲರಿ ಮತ್ತು ಶೆಲ್ ಚಕಮಕಿಯಲ್ಲಿ ಪಾಕಿಸ್ತಾನ ಸೇನೆಯ 35-40 ಸೈನಿಕರು ಮೃತಪಟ್ಟಿದ್ದಾರೆ ಎಂದು ವಿವರಿಸಿದರು.  ಇದನ್ನೂ ಓದಿ: ಉಗ್ರರ ಸಂಹಾರಕ್ಕೆ ಭಾರತೀಯ ಸೇನೆಗೆ ನೆರವಾಗಿದ್ದು ಬೆಂಗಳೂರಿನ ʻಇಸ್ರೋʼ

    ಪಾಕಿಸ್ತಾನದ ಒಳಗೆ 11 ವಾಯುನೆಲೆಗಳು ನಾಶವಾಗಿವೆ ಮತ್ತು ಆ ದೇಶದ ಮಿಲಿಟರಿ ಸಾಮರ್ಥ್ಯಕ್ಕೆ ವ್ಯಾಪಕ ಹಾನಿಯಾಗಿದೆ. ಆದ್ರೆ ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕವೂ ಪಾಕಿಸ್ತಾನ ಹಲವು ಬಾರಿ ಇದನ್ನು ಉಲ್ಲಂಘಿಸಿದೆ. ಶನಿವಾರ ರಾತ್ರಿ ಜಮ್ಮು ಪ್ರದೇಶದಲ್ಲಿ ಡ್ರೋನ್‌ಗಳು ಪತ್ತೆಯಾಗಿದ್ದು, ದೊಡ್ಡ ಸ್ಫೋಟದ ಸದ್ದು ಕೇಳಿಬಂದಿದೆ ಎಂದು ತಿಳಿಸಿದರು.

    ಸಭೆಯಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರ ಬಿಟ್ಟುಕೊಡಬೇಕು, ಜೊತೆಗೆ ಅಗತ್ಯವಿರುವ ಮೋಸ್ಟ್‌ ವಾಂಟೆಡ್‌ ಉಗ್ರರನ್ನ ಭಾರತಕ್ಕೆ ಹಸ್ತಾಂತರಿಸಬೇಕು ಎಂಬ ಷರತ್ತನ್ನು ಭಾರದ ವಿಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್‌ ಉಪಗ್ರಹ – ಡ್ರೋನ್‌ ಅಂತ ಬೆಚ್ಚಿದ ಜನ

  • ಉಗ್ರರ ಸಂಹಾರಕ್ಕೆ ಭಾರತೀಯ ಸೇನೆಗೆ ನೆರವಾಗಿದ್ದು ಬೆಂಗಳೂರಿನ ʻಇಸ್ರೋʼ

    ಉಗ್ರರ ಸಂಹಾರಕ್ಕೆ ಭಾರತೀಯ ಸೇನೆಗೆ ನೆರವಾಗಿದ್ದು ಬೆಂಗಳೂರಿನ ʻಇಸ್ರೋʼ

    ಬೆಂಗಳೂರು: ಭಾರತೀಯ ಸೇನೆ ನಡೆಸಿದ ಕ್ರೂಸ್ ಕ್ಷಿಪಣಿ ದಾಳಿಯಲ್ಲಿ ಪಾಕಿಸ್ತಾನದ ಮಿಲಿಟರಿ ನೆಲೆಗಳಿಗೆ ಆಗಿರುವ ಹಾನಿಗಳ ಕುರಿತು ಸಾಕ್ಷಿ ಸಮೇತ ಓಪನ್ ಸೋರ್ಸ್ ಇಂಟೆಲಿಜೆನ್ಸ್ (OSINT) ತಜ್ಞರು ಮಾಹಿತಿ ಹಂಚಿಕೊಂಡಿದ್ದಾರೆ. ಆದ್ರೆ ಸೇನೆಯ ಈ ಕಾರ್ಯಾಚರಣೆಗೆ ನೆರವಾಗಿದ್ದು ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ನಮ್ಮ ಇಸ್ರೋ (ISRO) ಸಂಸ್ಥೆ ಅನ್ನೋದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

    ಹೌದು, ಭಾರತೀಯ ಸೇನೆಗೆ (Indian Army) ಉಗ್ರರ ನೆಲೆಗಳನ್ನ ತೋರಿಸಿದ್ದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ). ಯುದ್ಧದ ಸಂದರ್ಭ ನಿರ್ಮಾಣ ಆಗ್ತಿದ್ದಂತೆ ಭಾರತೀಯ ಸೇನೆ ಇಸ್ರೋ ಸಂಸ್ಥೆಯ ಸಹಾಯ ಕೇಳಿತ್ತು. ಹೀಗಾಗಿ 10 ಉಪಗ್ರಹಗಳಿಂದ ಸತತ ನಿಗಾ ವಹಿಸಿದ್ದ ಇಸ್ರೋ ಉಗ್ರರ ನೆಲೆ ಫೋಟೋಗಳನ್ನ ಕಳಿಸಿಕೊಟ್ಟಿತ್ತು. ಪಾಕಿಸ್ತಾನದ ಸೇನಾ ನೆಲೆಗಳು, ಡ್ರೋನ್‌ ಲಾಂಚ್‌ ಪ್ಯಾಡ್‌ಗಳ ಮಾಹಿತಿಯನ್ನು ಚಿತ್ರ ಸಮೇತ ಸಂಗ್ರಹಿಸಿಕೊಟ್ಟಿತ್ತು. ಹೀಗಾಗಿ ನಿಕರ ಗುರಿಯಿಟ್ಟ ಭಾರತೀಯ ಸೇನೆ ಉಗ್ಗರ ಸೇನಾ ನೆಲೆಗಳು ಹಾಗೂ ವಾಯು ನೆಲೆಗಳನ್ನು ಛಿದ್ರಗೊಳಿಸಿತ್ತು ಎಂದು ಇಸ್ರೋದ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಪಾಕ್‌ನಲ್ಲಿರುವ ಉಗ್ರರ ನೆಲೆಗಳಿಗೆ ಹೊಡೀತೀವಿ: ಅಮೆರಿಕಗೆ ಮೊದಲೇ ಹೇಳಿದ್ದ ಜೈಶಂಕರ್‌

    ಭಾರತವು ಪಾಕಿಸ್ತಾನದ ಪ್ರದೇಶದೊಳಗೆ ಆಯ್ದ ಮಿಲಿಟರಿ ಗುರಿಗಳ ಮೇಲೆ ನಿಖರ ದಾಳಿಗಳನ್ನು ನಡೆಸಿತು. ಇವುಗಳಲ್ಲಿ ರಫಿಕಿ, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಸಿಯಾಲ್‌ಕೋಟ್‌ನಲ್ಲಿರುವ ರಾಡಾರ್ ಸ್ಥಾಪನೆಗಳು, ಕಮಾಂಡ್ ಮತ್ತು ನಿಯಂತ್ರಣ ಕೇಂದ್ರಗಳು ಮತ್ತು ಮದ್ದುಗುಂಡು ಡಿಪೋಗಳು ಸೇರಿವೆ. ಇದನ್ನೂ ಓದಿ: ಜಮ್ಮು & ಕಾಶ್ಮೀರದ ವಾಯುಪ್ರದೇಶ ಮೂಲಕ ಹಾದುಹೋದ ಸ್ಟಾರ್‌ಲಿಂಕ್‌ ಉಪಗ್ರಹ – ಡ್ರೋನ್‌ ಅಂತ ಬೆಚ್ಚಿದ ಜನ

    ಪಾಕಿಸ್ತಾನದ ಭೋಲಾರಿಯಲ್ಲಿರುವ ಪಿಎಎಫ್ ನೆಲೆಯ ಬಿಡಿಎ (ಬಾಂಬ್ ಹಾನಿ ಮೌಲ್ಯಮಾಪನ) ಚಿತ್ರವನ್ನು ಕಾವಾ ಸ್ಪೇಸ್ ಹಂಚಿಕೊಂಡಿದೆ. ಭಾರತೀಯ ಎಎಲ್‌ಸಿಎಂ (ವಾಯು-ಉಡಾವಣಾ ಕ್ರೂಸ್ ಕ್ಷಿಪಣಿ) ನಡೆಸಿದ ನಿಖರ ದಾಳಿಯ ಕುರಿತು ಸಾಕ್ಷಿ ಸಮೇತ ಮಾಹಿತಿ ಹಂಚಿಕೊಳ್ಳಲಾಗಿದೆ. ಪಿಎಎಫ್ (ಪಾಕಿಸ್ತಾನ ವಾಯುಪಡೆ) ಹ್ಯಾಂಗರ್ ಮೇಲೆ ಆಗಿರುವ ಎಫೆಕ್ಟ್‌ ಬಗ್ಗೆ ಸಾಕ್ಷಿ ಇದೆ. ಇದನ್ನೂ ಓದಿ: ಭಾರತೀಯ ಕ್ರೂಸ್ ಕ್ಷಿಪಣಿಗಳಿಂದ ಪಾಕ್ ವಾಯುನೆಲೆಗಳು ಧ್ವಂಸ – ಸೇನೆಯಿಂದ ಸಾಕ್ಷಿ ರಿಲೀಸ್‌

    ಸರ್ಗೋಧಾದಲ್ಲಿರುವ ಪಿಎಎಫ್ ನೆಲೆ ಮುಷಾಫ್‌ನ ಬಿಡಿಎ ವಿಶ್ಲೇಷಣೆ ಎಂಬ ಫೊಟೊವೊಂದನ್ನು ಒಸಿಂಟ್ ಹ್ಯಾಂಡಲ್ ಕಾವಾ ಸ್ಪೇಸ್ ಹಂಚಿಕೊಂಡಿದೆ. ದಾಳಿಯ ನಂತರದ ಚಿತ್ರಣ ವಿಶ್ಲೇಷಣೆಯು ಭಾರತೀಯ ಪಡೆಗಳಿಂದ ನಾಶವಾದ ರನ್‌ವೇಯನ್ನು ತೋರಿಸುತ್ತದೆ ಎಂದು ಕಾವಾ ಸ್ಪೇಸ್ ಹೇಳಿದೆ. ಜಾಕೋಬಾಬಾದ್‌ನಲ್ಲಿರುವ ಪಿಎಎಫ್ ಬೇಸ್ ಶಹಬಾಜ್‌ನ ಕಾವಾ ಸ್ಪೇಸ್ ನಡೆಸಿದ ಬಿಡಿಎ ವಿಶ್ಲೇಷಣೆಯು, ಪಿಎಎಫ್ ಹ್ಯಾಂಗರ್ ಮೇಲೆ ಭಾರತೀಯ ಎಎಲ್‌ಸಿಎಂ ನಡೆಸಿದ ನಿಖರ ದಾಳಿಯ ಪರಿಣಾಮವನ್ನು ತೋರಿಸುತ್ತದೆ.

  • 6 ವರ್ಷಗಳ ಬಳಿಕ ಪುಲ್ವಾಮಾ ದಾಳಿಯಲ್ಲಿ ತನ್ನ ಪಾತ್ರ ಒಪ್ಪಿಕೊಂಡ ಕುತಂತ್ರಿ ಪಾಕ್‌

    6 ವರ್ಷಗಳ ಬಳಿಕ ಪುಲ್ವಾಮಾ ದಾಳಿಯಲ್ಲಿ ತನ್ನ ಪಾತ್ರ ಒಪ್ಪಿಕೊಂಡ ಕುತಂತ್ರಿ ಪಾಕ್‌

    ಇಸ್ಲಾಮಾಬಾದ್‌: ಪಹಲ್ಗಾಮ್‌ನಲ್ಲಿ (Pahalgam) ಹಿಂದೂಗಳ ನರಮೇಧ ಈಗ ಉಭಯ ರಾಷ್ಟ್ರಗಳ ನಡುವೆ ಯುದ್ಧದ ಭೀತಿ ತಂದೊಡ್ಡಿದೆ. ಆದ್ರೆ ಈವರೆಗೂ ಪಹಲ್ಗಾಮ್‌ ದಾಳಿಯ ಹೊಣೆ ಹೊತ್ತುಕೊಳ್ಳದ ಪಾಕ್‌ 6 ವರ್ಷಗಳ ಬಳಿಕ ಪರೋಕ್ಷವಾಗಿ ಪುಲ್ವಾಮಾ ದಾಳಿಯ (Pulwama Terror Attack) ಹೊಣೆ ಹೊತ್ತುಕೊಂಡಿದೆ. ಪಾಕಿಸ್ತಾನದ ಸೇನಾಧಿಕಾರಿಯೊಬ್ಬರು ನೀಡಿದ ಹೇಳಿಕೆ ಇದಕ್ಕೆ ಪುಷ್ಠಿ ನೀಡಿದೆ.

    ಹೌದು. ಪಾಕಿಸ್ತಾನದ ಮಿಲಿಟರಿ ಅಧಿಕಾರಿಗಳು (Pakistan Army Official) ನಡೆಸಿದ ಸುದ್ದಿಗೋಷ್ಠಿಯಲ್ಲಿ ಏರ್‌ ಮಾರ್ಷಲ್ ಔರಂಗಜೇಬ್ ಅಹ್ಮದ್ ಮಾತನಾಡಿ, ಪುಲ್ವಾಮಾ ಭಯೋತ್ಪಾದಕ ದಾಳಿಯು ಪಾಕಿಸ್ತಾನಿ ಮಿಲಿಟರಿಯ ʻಯುದ್ಧತಂತ್ರದ ಭಾಗʼ ಎಂದು ಹೇಳಿದ್ದಾರೆ. ಈ ಮೂಲಕ ಪುಲ್ವಾಮಾ ದಾಳಿಯಲ್ಲಿ ತನ್ನ ಪಾತ್ರವನ್ನು ಬಹಿರಂಗವಾಗಿ ಪಾಕ್‌ ಒಪ್ಪಿಕೊಂಡಿದೆ. ಇದನ್ನೂ ಓದಿ: ದೇಹದಲ್ಲಿ ಒಂದು ತೊಟ್ಟು ರಕ್ತ ಇರೋವರೆಗೂ ಯುದ್ಧ ಮಾಡ್ತೀನಿ – ಮೈ ಪರಚಿಕೊಂಡ ಪಾಕ್‌ ಪ್ರಧಾನಿ

    ಮುಂದುವರಿದು…. ಪಾಕಿಸ್ತಾನದ ವಾಯುಪ್ರದೇಶ, ಭೂಮಿ, ಜಲಪ್ರದೇಶಗಳು ಅಥವಾ ಇಲ್ಲಿನ ಜನರಿಗೆ ಬೆದರಿಕೆಯೊಡ್ಡಿದರೆ, ಯಾವುದೇ ರಾಜಿ ಸಾಧ್ಯವಿಲ್ಲ. ಅದನ್ನು ಗಮನಿಸದೆ ಬಿಡಲೂ ಸಾಧ್ಯವಿಲ್ಲ. ನಾವು ನಮ್ಮ ರಾಷ್ಟ್ರಕ್ಕೆ ಋಣಿಯಾಗಿದ್ದೇವೆ. ಪಾಕಿಸ್ತಾನಿ ಜನರು ತಮ್ಮ ಸಶಸ್ತ್ರ ಪಡೆಗಳ ಬಗ್ಗೆ ಹೊಂದಿರುವ ಹೆಮ್ಮೆ ಮತ್ತು ನಂಬಿಕೆಯನ್ನ ನಾವು ಯಾವಾಗಲೂ ಎತ್ತಿಹಿಡಿಯುತ್ತೇವೆ. ಪುಲ್ವಾಮಾದಲ್ಲಿ ನಮ್ಮ ಯುದ್ಧತಂತ್ರದ ಪ್ರತಿಭೆಯ ಮೂಲಕ ನಾವು ಅದನ್ನು ತಿಳಿಸಲು ಪ್ರಯತ್ನಿಸಿದ್ದೇವೆ. ಈಗಲೂ ನಮ್ಮ ಕಾರ್ಯಾಚರಣೆ ಮತ್ತು ಕಾರ್ಯತಂತ್ರವನ್ನು ಪ್ರದರ್ಶಿಸಿದ್ದೇವೆ. ಇದನ್ನ ಅವರು ಕೂಡ ಗಮನಿಸಿರುತ್ತಾರೆ ಅಂತ ಭಾವಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ-ಪಾಕಿಸ್ತಾನದಿಂದ ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ: ಟ್ರಂಪ್‌ ಘೋಷಣೆ

    ಏನಿದು ಪುಲ್ವಾಮಾ ಘಟನೆ?
    2019ರ ಫೆ. 14 ರಂದು ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರಿದ್ದ ಬಸ್ಸಿಗೆ ಜೈಷ್ ಉಗ್ರ ಅದಿಲ್ ಅಹ್ಮದ್ ದಾರ್ ಸ್ಫೋಟಕ ತುಂಬಿದ್ದ ಇಕೋ ಕಾರನ್ನು ಗುದ್ದಿಸಿದ್ದ. ಪರಿಣಾಮ 40 ಮಂದಿ ಸೈನಿಕರು ಹುತಾತ್ಮರಾಗಿದ್ದರು. ಸ್ಫೋಟದ ತೀವ್ರತೆಗೆ ಯೋಧರ ದೇಹದ ಭಾಗಗಳು ಛಿದ್ರ ಛಿದ್ರವಾಗಿ ದೂರದವರೆಗೆ ಚಿಮ್ಮಿತ್ತು. ಈ ದಾಳಿಗೆ ಪ್ರತೀಕಾರವಾಗಿ ಭಾರತದ ವಾಯುಸೇನೆ ಮೊದಲ ಬಾರಿಗೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಉಗ್ರರ ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸಿತ್ತು. ಇದನ್ನೂ ಓದಿ: ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಸಿಕ್ಕಿಬಿದ್ದ ಲಷ್ಕರ್‌ ಟಾಪ್‌ ಕಮಾಂಡರ್ಸ್‌

    2019ರ ದಾಳಿ ನಂತರ ಏನೇನಾಯ್ತು?
    * ಫೆಬ್ರವರಿ 14: ಜೈಶ್ ಆತ್ಮಾಹುತಿ ಬಾಂಬರ್ ದಾಳಿಯಲ್ಲಿ 40 ಸಿಆರ್‌ಪಿಎಫ್ ಸಿಬ್ಬಂದಿ ಹುತಾತ್ಮ.
    * ಫೆಬ್ರವರಿ 15: ಪಾಕಿಸ್ತಾನಕ್ಕೆ ನೀಡಿದ್ದ ಅತ್ಯಂತ ಆಪ್ತ ರಾಷ್ಟ್ರದ ಸ್ಥಾನಮಾನವನ್ನು ಭಾರತ ಹಿಂತೆಗೆದುಕೊಂಡಿತು. ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಅದನ್ನು ಪ್ರತ್ಯೇಕಿಸಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದೆ. ದಾಳಿಯಲ್ಲಿ ತನ್ನ ಕೈವಾಡ ಇಲ್ಲ ಎಂದು ಪಾಕ್ ತಿರಸ್ಕರಿಸಿತು.
    * ಫೆಬ್ರವರಿ 16: 40 ಸಿಆರ್‌ಪಿಎಫ್ ಸೈನಿಕರ ಪಾರ್ಥಿವ ಶರೀರಗಳನ್ನು ಅವರ ತವರುಗಳಲ್ಲಿ ಭಾರೀ ಜನಸ್ತೋಮದ ನಡುವೆ ಅಂತ್ಯಕ್ರಿಯೆ ಮಾಡಲಾಯಿತು.
    * ಫೆಬ್ರವರಿ 17: ಕಣಿವೆಯ ಐದು ಪ್ರತ್ಯೇಕತಾವಾದಿ ನಾಯಕರಿಗೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಭದ್ರತಾ ರಕ್ಷಣೆಯನ್ನು ಹಿಂತೆಗೆದುಕೊಂಡಿತು. ಭಯೋತ್ಪಾದಕ ದಾಳಿಯ ಬಗ್ಗೆ ಭಾರತ ವಿವಿಧ ದೇಶಗಳಿಗೆ ಮಾಹಿತಿ ನೀಡಿತು.
    * ಫೆಬ್ರವರಿ 18: ಪುಲ್ವಾಮಾದ ಪಿಂಗ್ಲೆನಾ ಪ್ರದೇಶದಲ್ಲಿ ಸುಮಾರು 18 ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಸೇನಾ ಮೇಜರ್ ಮತ್ತು ಮೂವರು ಜೈಶ್ ಭಯೋತ್ಪಾದಕರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದರು. ಪಾಕಿಸ್ತಾನವು ಭಾರತಕ್ಕೆ ತನ್ನ ರಾಯಭಾರಿಯನ್ನು ಸಮಾಲೋಚನೆಗಾಗಿ ಕರೆಸಿತು.
    * ಫೆಬ್ರವರಿ 19: ನಂತರ ಪ್ರಧಾನಿ ಇಮ್ರಾನ್ ಖಾನ್ ಮೌನ ಮುರಿದರು. ಭಾರತ ಅವರ ವಿರುದ್ಧ ದಂಡನಾತ್ಮಕ ಮಿಲಿಟರಿ ಕ್ರಮ ಕೈಗೊಂಡರೆ ಪಾಕ್ ಪ್ರತೀಕಾರ ತೀರಿಸಿಕೊಳ್ಳುತ್ತದೆ ಎಂದು ಹೇಳಿದರು.
    * ಫೆಬ್ರವರಿ 20: ಭಯೋತ್ಪಾದಕ ದಾಳಿ ತನಿಖೆಗಳು ಎನ್‌ಐಎಗೆ ವಹಿಸಲಾಯಿತು. ಎಫ್‌ಐಆರ್‌ನಲ್ಲಿ ಜೈಶ್ ಹೆಸರು ಸೇರಿಸಲಾಗಿದೆ.
    * ಫೆಬ್ರವರಿ 22: ಜೈಶ್ ಕೇಂದ್ರ ಕಚೇರಿಯ ಆಡಳಿತಾತ್ಮಕ ನಿಯಂತ್ರಣವನ್ನು ಪಾಕ್ ಸರ್ಕಾರ ವಹಿಸಿಕೊಂಡಿದೆ.
    * ಫೆಬ್ರವರಿ 23: ದಂಗೆ ನಿಗ್ರಹ ಕಾರ್ಯಾಚರಣೆಗಳನ್ನು ಬಲಪಡಿಸಲು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಕಾಶ್ಮೀರ ಕಣಿವೆಗೆ 10,000 ಕೇಂದ್ರ ಪಡೆಗಳ ಸಿಬ್ಬಂದಿಯನ್ನು ಕಳುಹಿಸಲಾಗಿದೆ.
    * ಫೆಬ್ರವರಿ 26: ಪಾಕ್‌ನ ಬಾಲಕೋಟ್‌ನಲ್ಲಿರುವ ಜೈಶ್‌ನ ಅತಿದೊಡ್ಡ ಭಯೋತ್ಪಾದಕ ತರಬೇತಿ ಶಿಬಿರದ ಮೇಲೆ ಐಎಎಫ್ ಬಾಂಬ್ ದಾಳಿ.
    * ಫೆಬ್ರವರಿ 27: ಗಡಿಯ ಇನ್ನೊಂದು ಬದಿಯಲ್ಲಿ ಮಿಗ್ ಪತನಗೊಂಡ ನಂತರ ಐಎಎಫ್ ಪೈಲಟ್, ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಪಾಕ್ ಸೆರೆಹಿಡಿಯಿತು.
    * ಫೆಬ್ರವರಿ 28: ಉಭಯ ದೇಶಗಳ ನಡುವಿನ ಸಂಜೋತಾ ಎಕ್ಸ್‌ಪ್ರೆಸ್ ಸೇವೆಯನ್ನು ಪಾಕ್ ಸ್ಥಗಿತಗೊಳಿಸಿದೆ. ಜೈಶ್ ನಾಯಕ ಮಸೂದ್ ಅಜರ್‌ಗೆ ಪ್ರಯಾಣ ನಿಷೇಧ ಹೇರುವಂತೆ ಒತ್ತಾಯಿಸಿ ಅಮೆರಿಕ, ಯುಕೆ, ಫ್ರಾನ್ಸ್ ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ವಿನಂತಿ.
    * ಮಾರ್ಚ್ 1: ಅಂತರರಾಷ್ಟ್ರೀಯ ಮಟ್ಟದ ಒತ್ತಡದ ನಂತರ ಪಾಕ್ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್‌ ಅವರ ಬಿಡುಗಡೆ.

  • Ceasefire | ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯುವಂತೆ ಕಾಂಗ್ರೆಸ್‌ ಆಗ್ರಹ

    Ceasefire | ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯುವಂತೆ ಕಾಂಗ್ರೆಸ್‌ ಆಗ್ರಹ

    ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿ, ಆಪರೇಷನ್‌ ಸಿಂಧೂರ, ಭಾರತ ಮತ್ತು ಪಾಕ್‌ ನಡುವಿನ ಕದನ ವಿರಾಮ (Ceasefire) ಕುರಿತು ಪ್ರಧಾನಿ ಮೋದಿ (Narendra Modi) ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಬೇಕು. ಜೊತೆಗೆ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ನಡೆಸಬೇಕು ಎಂದು ರಾಷ್ಟ್ರೀಯ ಕಾಂಗ್ರೆಸ್‌ ಆಗ್ರಹಿಸಿದೆ.

    ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ (Jairam Ramesh) ತಮ್ಮ ಎಕ್ಸ್‌ ಖಾತೆಯಲ್ಲಿ ಆಗ್ರಹಿಸಿದ್ದಾರೆ. ಕೂಡಲೇ ಮೋದಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಹಾಗೂ ಸಂಸತ್‌ನಲ್ಲಿ ವಿಶೇಷ ಅಧಿವೇಶನ ಕರೆದರೆ ಈ ಎಲ್ಲ ವಿಷಯಗಳ ಬಗ್ಗೆ‌ ಸಮಗ್ರವಾಗಿ ಚರ್ಚಿಸಬಹುದು ಎಂದು ಹೇಳಿದ್ದಾರೆ.

    ಮುಂದುವರಿದು… ಭಾರತ ಮತ್ತು ಪಾಕಿಸ್ತಾನದ (Pakistan) ನಡುವಿನ ಕದನ ವಿರಾಮ ಕುರಿತ ಚರ್ಚೆಗೆ ʻತಟಸ್ಥ ವೇದಿಕೆʼಯ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಪ್ರಸ್ತಾಪಿಸಿರುವುದು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ನಂಬುತ್ತದೆ. ನಾವು ಶಿಮ್ಲಾ ಒಪ್ಪಂದವನ್ನು ಕೈಬಿಟ್ಟಿದ್ದೇವೆಯೇ? 3ನೇ ವ್ಯಕ್ತಿಯ ಮಧ್ಯಸ್ಥಿಕೆಗೆ ಆಹ್ವಾನ ಕೊಟ್ಟಿದ್ದೇವೆ ಎಂಬ ಅನುಮಾನ ಮೂಡಿದೆ ಅಂತ ಕಳವಳ ವ್ಯಕ್ತಪಡಿಸಿದ್ದಾರೆ.

    ಭಾರತ ಮತ್ತು ಪಾಕಿಸ್ತಾನ (India – Pakistan) ನಡುವೆ ರಾಜತಾಂತ್ರಿಕ ಮಾರ್ಗಗಳನ್ನು ಮತ್ತೆ ತೆರೆಯಲಾಗುತ್ತಿದೆಯೇ? ಎಂದು ಕಾಂಗ್ರೆಸ್ ಕೇಳಲು ಬಯಸುತ್ತದೆ. ನಾವು ಪಾಕಿಸ್ತಾನದಿಂದ ಯಾವ ಬದ್ಧತೆ ಬಯಸಿದ್ದೇವೆ, ಅದರಿಂದ ನಮಗೆ ಏನು ಸಿಕ್ಕಿದೆ? ಈ ಇಡೀ ಪರಿಸ್ಥಿತಿಯ ಕುರಿತು ದೇಶದ ಇಬ್ಬರು ಮಾಜಿ ಸೇನಾ ಮುಖ್ಯಸ್ಥರು ನೀಡಿದ ಹೇಳಿಕೆಗಳ ಬಗ್ಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಗಮನ ಸೆಳೆಯಲು ಬಯಸುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನ ಮಂತ್ರಿಗಳೇ ಪ್ರತಿಕ್ರಿಯಿಸಬೇಕು ಎಂದು ಮನವಿ ಮಾಡಿದ್ದಾರೆ.

    ಕೊನೆಯದ್ದಾಗಿ, 1971 ರಲ್ಲಿ ಇಂದಿರಾ ಗಾಂಧಿಯವರು ಪ್ರದರ್ಶಿಸಿದ ಅಸಾಧಾರಣ ದಿಟ್ಟ ಮತ್ತು ದೃಢನಿಶ್ಚಯದ ನಾಯಕತ್ವವನ್ನು ದೇಶವು ನೆನಪಿಸಿಕೊಳ್ಳುವುದು ಸ್ವಾಭಾವಿಕ ಎಂದು ರಾಷ್ಟ್ರೀಯ ಕಾಂಗ್ರೆಸ್ ನಂಬುತ್ತದೆ ಎಂದು ಎಕ್ಸ್‌ನಲ್ಲಿ ಜೈರಾಮ್‌ ರಮೇಶ್‌ ತಿಳಿಸಿದ್ದಾರೆ.

    ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್‌ ದಾಳಿ ಉದ್ದೇಶಿಸಿ ನಡೆದ ಮೊದಲ ಸರ್ವಪಕ್ಷ ಸಭೆ ಹಾಗೂ ಆಪರೇಷನ್‌ ಸಿಂಧೂರ ಬಗ್ಗೆ ನಡೆದ ಸರ್ವಪಕ್ಷ ಸಭೆಗಳಿಗೆ ಮೋದಿ ಗೈರಾಗಿದ್ದರು.

  • ದೇಹದಲ್ಲಿ ಒಂದು ತೊಟ್ಟು ರಕ್ತ ಇರೋವರೆಗೂ ಯುದ್ಧ ಮಾಡ್ತೀನಿ – ಮೈ ಪರಚಿಕೊಂಡ ಪಾಕ್‌ ಪ್ರಧಾನಿ

    ದೇಹದಲ್ಲಿ ಒಂದು ತೊಟ್ಟು ರಕ್ತ ಇರೋವರೆಗೂ ಯುದ್ಧ ಮಾಡ್ತೀನಿ – ಮೈ ಪರಚಿಕೊಂಡ ಪಾಕ್‌ ಪ್ರಧಾನಿ

    – ಚೀನಾ ನಮ್ಮೊಂದಿಗಿದೆ, ಟ್ರಂಪ್‌ಗೂ ಧನ್ಯವಾದ ಹೇಳಿದ ಷರೀಫ್​
    – ಭಾರತದ ದಾಳಿಗಳು ವಿಫಲವಾಗಿದೆ ಎಂದು ಬುರುಡೆ ಬಿಟ್ಟ ಪಿಎಂ

    ನವದೆಹಲಿ: ಕದನ ವಿರಾಮ (Ceasefire) ಮುರಿಯುವುದು ಪಾಕ್‌ ಹಳೆಯ ಚಾಳಿಯಾಗಿಬಿಟ್ಟಿದೆ. ಭಾರತೀಯ ಸೇನಾ ದಾಳಿಗೆ ʻಕಪಟ ವಿರಾಮʼದ ನಾಟಕವಾಡಿದ್ದ ಪಾಕ್‌ ಮತ್ತೆ ಬಾಲ ಬಿಚ್ಚಿದೆ. ಕದನ ವಿರಾಮ ಘೋಷಣೆಯಾದ ಕೆಲವೇ ಗಂಟೆಗಳ‌ ಬಳಿಕ ಭಾರತದ ಗಡಿಯಲ್ಲಿ ದಾಳಿ ನಡೆಸಿದೆ ಎನ್ನಲಾಗಿದ್ದು, ಜಮ್ಮುವಿನ ಅಖ್ನೂರ್‌, ಕನಾಚಕ್‌, ಪರ್ಗ್ವಾಲ್‌, ರಾಮನಗರ ವಲಯಗಳಲ್ಲಿ ಜೋರಾಗಿ ಸ್ಫೋಟದ ಸದ್ದು ಕೇಳಿಬಂದಿವೆ.

    Ceasefire violation

    ಶನಿವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif), ಭಾರತ ಇತ್ತೀಚೆಗೆ ಮಾಡಿದ್ದು ತಪ್ಪು, ಅದಕ್ಕೆ ನಮ್ಮ ಸೇನೆ ಸೂಕ್ತ ಉತ್ತರ ಕೊಟ್ಟಿದೆ. ಪಹಲ್ಗಾಮ್ ದಾಳಿಯನ್ನ ನೆಪವಾಗಿಟ್ಟುಕೊಂಡು ಭಾರತ ನಮ್ಮ ಮೇಲೆ ಯುದ್ಧ ಹೇರಿತು. ಭಾರತದ ಆಧಾರರಹಿತ ಆರೋಪಗಳ ಬಗ್ಗೆ ಪಾಕಿಸ್ತಾನ ಮತ್ತೊಮ್ಮೆ ನಿಷ್ಪಕ್ಷಪಾತ ತನಿಖೆಯನ್ನು ನಡೆಸುತ್ತದೆ ಎಂದಿದ್ದಾರೆ. ಇದನ್ನೂ ಓದಿ: ಮತ್ತೆ ಕದನ ವಿರಾಮ ಉಲ್ಲಂಘಿಸಿ ಬಾಲ ಬಿಚ್ಚಿದ ಪಾಕ್‌ – ಜಮ್ಮು, ರಾಜಸ್ಥಾನದ ಹಲವೆಡೆ ಸ್ಫೋಟದ ಸದ್ದು

    ಭಾರತವು ಡ್ರೋನ್ ಮತ್ತು ಕ್ಷಿಪಣಿ ದಾಳಿಗಳ ಮೂಲಕ ಪಾಕಿಸ್ತಾನಿ ನಾಗರಿಕರನ್ನು ಗುರಿಯಾಗಿಸಿಕೊಂಡಿದೆ. ಭಾರತ ವಸತಿ ಪ್ರದೇಶಗಳ ಮೇಲೆ ದಾಳಿ ಮಾಡುವ ಮೂಲಕ ನಮ್ಮ ತಾಳ್ಮೆಯನ್ನ ಪರೀಕ್ಷಿಸಿತು. ಪಾಕಿಸ್ತಾನದ ಸೇನಾ ಶಿಬಿರಗಳು ಮತ್ತು ಶಸ್ತ್ರಾಸ್ತ್ರ ಡಿಪೋಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಭಾರತೀಯ ಸೇನೆ ವಿಫಲ ಪ್ರಯತ್ನಗಳನ್ನು ಮಾಡಿತು ಎಂದು ಬೊಗಳೆ ಬಿಟ್ಟಿದ್ದಾರೆ. ಇದನ್ನೂ ಓದಿ: ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

    ಟ್ರಂಪ್‌ಗೆ ಕೃತಜ್ಞತೆ
    ಇದೇ ವೇಳೆ ಕದನ ವಿರಾಮಕ್ಕಾಗಿ ಶೆಹಬಾಜ್ ಷರೀಫ್ ಚೀನಾ, ಡೊನಾಲ್ಡ್ ಟ್ರಂಪ್ ಮತ್ತು ಗಲ್ಫ್ ರಾಷ್ಟ್ರಗಳಿಗೆ ಧನ್ಯವಾದ ಅರ್ಪಿಸಿದರು. ನಾನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಜೊತೆಗೆ ಕದನ ವಿರಾಮದಲ್ಲಿ ಪ್ರಮುಖ ಪಾತ್ರ ವಹಿಸಿದ ಸೌದಿ ಅರೇಬಿಯಾ, ಯುಎಇ, ಟರ್ಕಿ ಮತ್ತು ಕತಾರ್‌ಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಗುಂಡಿನ ದಾಳಿ, ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ-ಪಾಕ್‌ ಒಪ್ಪಂದ: ಜೈಶಂಕರ್‌

    ಚೀನಾಕ್ಕೆ ವಿಶೇಷ ಧನ್ಯವಾದ
    ಇನ್ನೂ ಪಾಕ್‌ ಪ್ರಧಾನಿ ಚೀನಾವನ್ನ ತನ್ನ ವಿಶ್ವಾಸಾರ್ಹ ಸ್ನೇಹಿತ ಎಂದು ಬಣ್ಣಿಸಿದ್ರು. ಚೀನಾವನ್ನ ಉಲ್ಲೇಖಿಸದೆ ನನ್ನ ಭಾಷಣ ಅಪೂರ್ಣ. ನಾನು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆ ಅರ್ಪಿಸುತ್ತೇನೆ. 5 ದಶಕಗಳಿಗೂ ಹೆಚ್ಚು ಕಾಲ, ಪ್ರತಿಯೊಂದು ಬಿಕ್ಕಟ್ಟಿನಲ್ಲಿಯೂ ಚೀನಾ ನಮ್ಮೊಂದಿಗೆ ನಿಂತಿದೆ ಎಂದು ಬೀಗಿದರು. ಇದನ್ನೂ ಓದಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಯನ್ನು ಚೀನಾ ಖಂಡಿಸುತ್ತದೆ: ಅಜಿತ್‌ ದೋವಲ್‌ಗೆ ಫೋನ್‌ ಕರೆಯಲ್ಲಿ ಚೀನಾ ಸ್ಪಷ್ಟನೆ