Tag: Pakistan flag

  • ಗದಗ | ಕಾರಿನ ಮೇಲೆ ಪಾಕ್ ಧ್ವಜ ಪ್ರದರ್ಶನ – ಅಪ್ರಾಪ್ತನ ವಿರುದ್ಧ ಕೇಸ್

    ಗದಗ | ಕಾರಿನ ಮೇಲೆ ಪಾಕ್ ಧ್ವಜ ಪ್ರದರ್ಶನ – ಅಪ್ರಾಪ್ತನ ವಿರುದ್ಧ ಕೇಸ್

    ಗದಗ: ಕಾರಿನ ಮೇಲೆ ಪಾಕ್ ಧ್ವಜವನ್ನು (Pakistan Flag) ಪ್ರದರ್ಶಿಸಿದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಅಪ್ರಾಪ್ತನ ವಿರುದ್ಧ ಗದಗ ಶಹರ ಪೊಲೀಸರು (Gadag Police) ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡಿದ್ದಾರೆ.

    ಈದ್‌ಮಿಲಾದ್ (Eid Milad) ಹಬ್ಬದಂದು ಅಪ್ರಾಪ್ತ ಬಾಲಕ ಇನ್ಸ್ಟಾಗ್ರಾಮ್‌ನಲ್ಲಿ ಕಾರಿನ ಬೋನೆಟ್ ಮೇಲೆ ಪಾಕಿಸ್ತಾನ ಧ್ವಜವನ್ನು ಹಾಕಿದ್ದ ಫೋಟೋವನ್ನು ಪೋಸ್ಟ್ ಮಾಡಿದ್ದ. ಸಮಾಜದ ಐಕ್ಯತೆಗೆ ಧಕ್ಕೆ ತರುವ ಹಾಗೂ ಸೌಹಾರ್ದತೆಗೆ ಭಾದಕವಾಗುವ ಕೃತ್ಯವನ್ನು ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕನ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೋರ್ಟ್ ಆದೇಶ ಬಳಿಕ ದರ್ಶನ್‌ಗೆ ರಿಲ್ಯಾಕ್ಸ್ – ದಿಂಬು, ಚಾಪೆ ಜೊತೆಗೆ ಎರಡು ಜಮ್ಖಾನ ನೀಡಿದ ಅಧಿಕಾರಿಗಳು

    ಅಪ್ರಾಪ್ತ ಬಾಲಕ ಪೋಸ್ಟ್ ಮಾಡಿದ ಫೋಟೋವನ್ನು ಮತ್ತೊಮ್ಮೆ ಬೇರೊಬ್ಬ ವ್ಯಕ್ತಿಯ ಐಡಿಯಿಂದ ಶೇರ್ ಮಾಡಲಾಗಿತ್ತು. ಕಾರಿನ ಬೋನೆಟ್ ಮೇಲೆ ಪಾಕಿಸ್ತಾನ ಧ್ವಜ ಹಾಗೂ ನಂಬರ್ ಪ್ಲೇಟ್‌ಗೆ 5/9/25 ಎಂದು ಬರೆದು ಪಕ್ಕದಲ್ಲಿ ಪಾಕಿಸ್ತಾನ ಧ್ವಜದ ಚಿತ್ರ ಹಾಕಿ ಪೋಸ್ಟ್ ಮಾಡಿದ್ದ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಕೇಸ್‌ | ಕ್ರಿಕೆಟಿಗ ಪೃಥ್ವಿ ಶಾಗೆ 100 ರೂ. ದಂಡ ವಿಧಿಸಿದ ಮುಂಬೈ ಕೋರ್ಟ್

    ಇದೀಗ ಪೊಲೀಸರು ಬಿಎನ್‌ಎಸ್ ಕಾಯ್ದೆಯಡಿ ಕಲಂ 299, 353(2), ಆರ್/ಡಬ್ಲೂ 3/5 ಕೇಸ್ ದಾಖಲಾಗಿದೆ. ಗದಗ ಜಿಲ್ಲೆಯಲ್ಲಿ ಇಂತಹ ಪೋಸ್ಟ್ ಹಾಕಿ, ಪರಿಸ್ಥಿತಿ ಕದಡುವ ಮುನ್ನವೇ ಆರೋಪಿಯನ್ನು ಬಂಧಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

  • ಯುದ್ಧ ಭೀತಿ ನಡುವೆ ಮತ್ತೊಂದು ಶಾಕ್‌ – ಪಾಕಿಸ್ತಾನದ 51 ಸ್ಥಳಗಳ ಮೇಲೆ ಬಲೂಚ್‌ ಹೋರಾಟಗಾರರಿಂದ ದಾಳಿ

    ಯುದ್ಧ ಭೀತಿ ನಡುವೆ ಮತ್ತೊಂದು ಶಾಕ್‌ – ಪಾಕಿಸ್ತಾನದ 51 ಸ್ಥಳಗಳ ಮೇಲೆ ಬಲೂಚ್‌ ಹೋರಾಟಗಾರರಿಂದ ದಾಳಿ

    ಇಸ್ಲಾಮಾಬಾದ್‌: ಕದನ ವಿರಾಮದ (Ceasefire) ಬಳಕವೂ ಭಾರತದ ವಿರುದ್ಧ ಆಟಟೋಪ ನಡೆಸುತ್ತಿರುವ ಪಾಕಿಸ್ತಾನಕ್ಕೆ (Pakistan) ಬಲೂಚಿಸ್ತಾನ ಹೋರಾಟಗಾರರು ಶಾಕ್‌ ಮೇಲೆ ಶಾಕ್‌ ನೀಡುತ್ತಿದ್ದಾರೆ. ಭಾರತಕ್ಕೆ ಬೆಂಬಲ ಘೋಷಿಸಿದ್ದ ಬಲೂಚ್ ಲಿಬರೇಶನ್ ಆರ್ಮಿ (BLA) ಪಾಕಿಸ್ತಾನದ 51ಕ್ಕೂ ಹೆಚ್ಚು ಸ್ಥಳಗಳ ಮೇಲೆ ಏಕಾಏಕಿ ದಾಳಿ ನಡೆಸಿದೆ.

    ಪಾಕಿಸ್ತಾನಿ ಮಿಲಿಟರಿ (Paklistan Army) ಮತ್ತು ಗುಪ್ತಚರ ತಾಣಗಳನ್ನು ಗುರಿಯಾಗಿಸಿಕೊಂಡು 51ಕ್ಕೂ ಹೆಚ್ಚು ಸ್ಥಳಗಳ ಮೇಲೆ ದಾಳಿ ನಡೆಸಿರುವುದಾಗಿ ಬಿಎಲ್‌ಎ ಅಧಿಕೃತವಾಗಿ ಹೇಳಿಕೊಂಡಿದೆ. ಇದನ್ನೂ ಓದಿ: ಕ್ವೆಟ್ಟಾದಿಂದ ಪಾಕ್‌ ಸೇನೆ ಪಲಾಯನ – ಸೇನಾ ಠಾಣೆಗಳನ್ನ ವಶಕ್ಕೆ ಪಡೆದ ಬಲೂಚ್‌ ಹೋರಾಟಗಾರರು

    Balochistan

    ಬಿಎಲ್‌ಎ ವಕ್ತಾರ ಜಿಯಾಂಡ್ ಬಲೋಚ್ ನೀಡಿದ ಮಾಹಿತಿ ಪ್ರಕಾರ, ಈ ವಾರದ ಆರಂಭದಲ್ಲಿ ಭಾರತ-ಪಾಕಿಸ್ತಾನ (India Pakistan) ಮಿಲಿಟರಿ ಉದ್ವಿಗ್ನತೆ ತೀವ್ರತೆ ಪಡೆದುಕೊಂಡಿತ್ತು. ಇದರ ಸದುಪಯೋಗ ಪಡೆದುಕೊಂಡು ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದ 51ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಲವು ಗಂಟೆಗಳ ಕಾಲ ದಾಳಿ ನಡೆಸಿದೆ ಎಂದು ಹೇಳಿದ್ದಾರೆ.

    ಈ ದಾಳಿಯಲ್ಲಿ ಪಾಕ್‌ ಬೆಂಗಾವಲು ವಾಹನ, ಗುಪ್ತಚರ ಕೇಂದ್ರಗಳು ಮತ್ತು ಖನಿಜ ಸಾಗಣೆ ವಾಹನಗಳೂ ಸೇರಿದ್ದವು. ಈ ದಾಳಿಗಳು ಶತ್ರುಗಳನ್ನ ನಿರ್ಮೂಲನೆ ಮಾಡುವುದು ಮಾತ್ರವಲ್ಲದೇ ಮುಂಬರುವ ದಿನಗಳಲ್ಲಿ ಬಲವಾದ ಯುದ್ಧಕ್ಕೆ ಸಿದ್ಧತೆ ಬಲಪಡುವ ನಿಟ್ಟಿನಲ್ಲಿ ಸೇನಾ ಸಿದ್ಧತೆಯೂ ಕೂಡ ಆಗಿದೆ ಎಂದು ಯುದ್ಧದ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ಸಂಘರ್ಷ – ಬಿನ್ ಲಾಡೆನ್ ಆಪ್ತನ ಮಗ ಈಗ ಪಾಕ್ ಸೇನಾ ವಕ್ತಾರ

    Pakistan Army

    ಇತ್ತೀಚೆಗಷ್ಟೇ ಪಾಕಿಸ್ತಾನದ ಸೇನಾ ಬೆಂಗಾಲವು ವಾಹನದ ಮೇಲೆ ಸುಧಾರಿತ ಸ್ಫೋಟಕ ಸಾಧನ (IED) ದಾಳಿ ನಡೆಸಿ 12 ಸೈನಿಕರನ್ನ ಬಿಎಲ್‌ಎ ಹತ್ಯೆಗೈದಿತ್ತು. ಈ ಬೆನ್ನಲ್ಲೇ ಬಲೂಚಿಸ್ತಾನದಾದ್ಯಂತ 39 ಸ್ಥಳಗಳಲ್ಲಿ ದಾಳಿ ನಡೆಸಿ ಪಾಕ್‌ ಪೊಲೀಸರನ್ನೇ ಅಪಹರಿಸಿತ್ತು.

    1971 ರಿಂದಲೂ ಪ್ರತ್ಯೇಕ ಬಲೂಚಿಸ್ತಾನ ದೇಶಕ್ಕಾಗಿ ಪಾಕಿಸ್ತಾನದ ಜತೆ ಸಂಘರ್ಷ ಜಾರಿಯಲ್ಲಿದೆ. ಪಾಕ್‌-ಭಾರತ ನಡುವಿನ ಉದ್ವಿಗ್ನತೆಯನ್ನು ಬಲೂಚ್‌ ಲಿಬರೇಷನ್‌ ಆರ್ಮಿ ಸದುಪಯೋಗಪಡಿಸಿಕೊಳ್ಳುತ್ತಿದೆ. ಇದನ್ನೂ ಓದಿ: ದೇಹದಲ್ಲಿ ಒಂದು ತೊಟ್ಟು ರಕ್ತ ಇರೋವರೆಗೂ ಯುದ್ಧ ಮಾಡ್ತೀನಿ – ಮೈ ಪರಚಿಕೊಂಡ ಪಾಕ್‌ ಪ್ರಧಾನಿ

  • ಕ್ವೆಟ್ಟಾದಿಂದ ಪಾಕ್‌ ಸೇನೆ ಪಲಾಯನ – ಸೇನಾ ಠಾಣೆಗಳನ್ನ ವಶಕ್ಕೆ ಪಡೆದ ಬಲೂಚ್‌ ಹೋರಾಟಗಾರರು

    ಕ್ವೆಟ್ಟಾದಿಂದ ಪಾಕ್‌ ಸೇನೆ ಪಲಾಯನ – ಸೇನಾ ಠಾಣೆಗಳನ್ನ ವಶಕ್ಕೆ ಪಡೆದ ಬಲೂಚ್‌ ಹೋರಾಟಗಾರರು

    ಇಸ್ಲಾಮಾಬಾದ್:‌ ಇತ್ತ ಭಾರತದ ದಾಳಿಗೆ (India’s Strike) ತತ್ತರಿಸಿರುವ ಪಾಕ್‌ ಅಕ್ಷರಶಃ ನಡುಗಿಹೋಗಿದೆ. ಇದೇ ಸಮಯ ಬಳಸಿಕೊಂಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA) ತನ್ನ ಪ್ರತ್ಯೇಕ ದೇಶದ ಹೋರಾಟವನ್ನು ತೀವ್ರಗೊಳಿಸಿದೆ.

    balochistan liberation army

    ಅಂತಾರಾಷ್ಟ್ರೀಯ ಗಡಿಯಲ್ಲಿ ಹೆಚ್ಚುತ್ತಿರುವ ಘರ್ಷಣೆಗಳಿಗೆ ಭಾರತ-ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡುತ್ತಿರುವಾಗ, ಇಸ್ಲಾಮಾಬಾದ್ ಈಗ ಮತ್ತೊಂದು ಭಾಗದಿಂದ ಮುತ್ತಿಗೆಗೆ ಒಳಗಾಗಿದೆ. ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಪ್ರಾಂತೀಯ ರಾಜಧಾನಿ ಕ್ವೆಟ್ಟಾ ಸೇರಿದಂತೆ ಬಲೂಚಿಸ್ತಾನದಾದ್ಯಂತ (Balochistan) ಹಲವಾರು ಕಾರ್ಯತಂತ್ರದ ಸೇನಾ ಠಾಣೆಗಳನ್ನ ವಶಪಡಿಸಿಕೊಂಡಿದೆ ಎಂದು ಹೇಳಿಕೊಂಡಿದೆ. ಇದು ಪಾಕಿಸ್ತಾನಿ ಸೇನೆಯನ್ನು ಹಿಮ್ಮೆಟ್ಟುವಂತೆ ಮಾಡಿದೆ ಮತ್ತು ದೇಶದ ಪಶ್ಚಿಮ ರಕ್ಷಣಾ ವ್ಯವಸ್ಥೆಯನ್ನು ಅಸ್ತವ್ಯಸ್ತಗೊಳಿಸಿದೆ.

    Balochistan

    ಇದಕ್ಕೂ ಮುನ್ನ ಬಲೂಚಿಸ್ತಾನದಲ್ಲಿ ಹಲವೆಡೆ ಪಾಕಿಸ್ತಾನದ ಧ್ವಜಗಳನ್ನು ಇಳಿಸಿ ಬಲೂಚಿಸ್ತಾನದ ಧ್ವಜವನ್ನು ಹೋರಾಟಗಾರರು ಹಾರಿಸಿದ್ದರು. ಜಗತ್ತು ಪಾಕಿಸ್ತಾನದಿಂದ ತಮ್ಮ ರಾಜತಾಂತ್ರಿಕ ಕಾರ್ಯಾಚರಣೆಗಳನ್ನು ಹಿಂದಕ್ಕೆ ಪಡೆದು ಹೊಸದಾಗಿ ಉದಯೋನ್ಮುಖ ರಾಷ್ಟ್ರವಾದ ಬಲೂಚಿಸ್ತಾನಕ್ಕೆ ಸ್ಥಳಾಂತರಿಸುವ ಸಮಯ ಬಂದಿದೆ ಎಂದು ಹೇಳುತ್ತಿದ್ದಾರೆ. ಪಾಕಿಸ್ತಾನಕ್ಕೆ ವಿದಾಯ, ಬಲೂಚಿಸ್ತಾನಕ್ಕೆ ಸ್ವಾಗತ ಎಂದು ಬಿಎಲ್‌ಹೆಚ್‌ ಹೇಳಿತ್ತು. ಇದನ್ನೂ ಓದಿ: ಪಾಕಿಸ್ತಾನಿಗಳಿಗೆ ಶಸ್ತ್ರಾಸ್ತ್ರಗಳನ್ನ ತ್ಯಜಿಸುವಂತೆ ಅಮೆರಿಕ ಹೇಳಲು ಸಾಧ್ಯವಿಲ್ಲ: ಜೆಡಿ ವ್ಯಾನ್ಸ್

    1971 ರಿಂದಲೂ ಪ್ರತ್ಯೇಕ ಬಲೂಚಿಸ್ತಾನ ದೇಶಕ್ಕಾಗಿ ಪಾಕಿಸ್ತಾನದ ಜತೆ ಸಂಘರ್ಷ ಜಾರಿಯಲ್ಲಿದೆ. ಪಾಕ್‌-ಭಾರತ ನಡುವಿನ ಉದ್ವಿಗ್ನತೆಯನ್ನು ಬಲೂಚ್‌ ಲಿಬರೇಷನ್‌ ಆರ್ಮಿ ಸದುಪಯೋಗಪಡಿಸಿಕೊಳ್ಳುತ್ತಿದೆ. ಇದನ್ನೂ ಓದಿ: ಕರಾಚಿಯ 15 ಕಡೆ ಭಾರೀ ಸ್ಫೋಟ – INS ವಿಕ್ರಾಂತ್‌ ನೌಕೆಯಿಂದ ಅಟ್ಯಾಕ್‌

  • ಪಾಕಿಸ್ತಾನದ ಧ್ವಜಗಳನ್ನು ಇಳಿಸಿ ಬಲೂಚಿಸ್ತಾನ ಧ್ವಜ ಹಾರಾಟ

    ಪಾಕಿಸ್ತಾನದ ಧ್ವಜಗಳನ್ನು ಇಳಿಸಿ ಬಲೂಚಿಸ್ತಾನ ಧ್ವಜ ಹಾರಾಟ

    * ಭಾರತ-ಪಾಕ್‌ ಯುದ್ಧದ ಮಧ್ಯೆ ಬಲೂಚ್‌ ಲಿಬರೇಷನ್‌ ಆರ್ಮಿ ಫುಲ್‌ ಆ್ಯಕ್ಟಿವ್

    ಇಸ್ಲಾಮಾಬಾದ್: ಭಾರತ ಮತ್ತು ಪಾಕಿಸ್ತಾನ ಯುದ್ಧ ಸನ್ನಿವೇಶದ ಮಧ್ಯೆ ಬಲೂಚಿಸ್ತಾನ ಲಿಬರೇಷನ್‌ ಆರ್ಮಿ (Balochistan Liberation Army) ಫುಲ್‌ ಆ್ಯಕ್ಟಿವ್ ಆಗಿದೆ.

    ಇದೇ ಸುಸಂದರ್ಭ ಎಂದು ತನ್ನ ಪ್ರತ್ಯೇಕ ದೇಶದ ಹೋರಾಟವನ್ನು ಬಲೂಚ್ ಲಿಬರೇಷನ್ ಆರ್ಮಿ ತೀವ್ರಗೊಳಿಸಿದೆ. ಮತ್ತೆ ಪಾಕಿಸ್ತಾನಕ್ಕೆ ಬಲೂಚಿಸ್ತಾನ ಸಂಕಷ್ಟ ತಂದೊಡ್ಡಿದೆ. ಇದನ್ನೂ ಓದಿ: ಬಲೂಚಿಸ್ತಾನ್‌ ಲಿಬರೇಶನ್ ಆರ್ಮಿಯಿಂದ ಐಇಡಿ ದಾಳಿ – 12 ಪಾಕ್ ಸೈನಿಕರು ಸಾವು

    ಭಾರತದ ಆಪರೇಷನ್ ಸಿಂಧೂರ, ಡ್ರೋನ್‌ ದಾಳಿಗಳ ನಡುವೆ ಬಲೂಚಿಸ್ತಾನದಲ್ಲಿ ಹಲವೆಡೆ ಪಾಕ್ ಧ್ವಜಗಳಿಗೆ ಗುಡ್ ಬೈ ಹೇಳುತ್ತಿದೆ. ಪಾಕಿಸ್ತಾನದ ಧ್ವಜಗಳನ್ನು ಇಳಿಸಿ ಬಲೂಚಿಸ್ತಾನದ ಧ್ವಜ ಹಾರಾಟ ಮಾಡಲಾಗಿದೆ. ಬಲೂಚ್‌ ಪರ ಘೋಷಣೆ ಕೂಗಿದ್ದಾರೆ.

    ಜಗತ್ತು ಪಾಕಿಸ್ತಾನದಿಂದ ತಮ್ಮ ರಾಜತಾಂತ್ರಿಕ ಕಾರ್ಯಾಚರಣೆಗಳನ್ನು ಹಿಂದಕ್ಕೆ ಪಡೆದು ಹೊಸದಾಗಿ ಉದಯೋನ್ಮುಖ ರಾಷ್ಟ್ರವಾದ ಬಲೂಚಿಸ್ತಾನಕ್ಕೆ ಸ್ಥಳಾಂತರಿಸುವ ಸಮಯ ಬಂದಿದೆ ಎಂದು ಹೇಳುತ್ತಿದ್ದಾರೆ. ಪಾಕಿಸ್ತಾನಕ್ಕೆ ವಿದಾಯ, ಬಲೂಚಿಸ್ತಾನಕ್ಕೆ ಸ್ವಾಗತ ಎಂದು ಬಿಎಲ್‌ಹೆಚ್‌ ಹೇಳಿದೆ.

    ಈಗಾಗಲೇ ಬಲೂಚ್ ಲಿಬರೇಷನ್ ಆರ್ಮಿಯಿಂದಲೂ ಪಾಕಿಸ್ತಾನ ಸೈನಿಕರನ್ನು ಗುರಿಯಾಗಿಟ್ಟುಕೊಂಡು ದಾಳಿ ಮುಂದುವರಿದಿದೆ. ಈ‌ ನಡುವೆ ಬಲೂಚಿಸ್ತಾನದ ನಾಗರಿಕರಿಂದ ಪಾಕ್ ಧ್ವಜ ತೆಗೆಯುವ ಕೆಲಸ ನಡೆದಿದೆ.

    1971 ರಿಂದಲೂ ಪ್ರತ್ಯೇಕ ಬಲೂಚಿಸ್ತಾನ ದೇಶಕ್ಕಾಗಿ ಪಾಕಿಸ್ತಾನದ ಜತೆ ಸಂಘರ್ಷ ಜಾರಿಯಲ್ಲಿದೆ. ಪಾಕ್‌-ಭಾರತ ನಡುವಿನ ಉದ್ವಿಗ್ನತೆಯನ್ನು ಬಲೂಚ್‌ ಲಿಬರೇಷನ್‌ ಆರ್ಮಿ ಸದುಪಯೋಗಪಡಿಸಿಕೊಳ್ಳುತ್ತಿದೆ. ಇದನ್ನೂ ಓದಿ: ರಫೇಲ್‌ ಬಗ್ಗೆ ಸುಳ್ಳು ಹೇಳಿ ಜಗತ್ತಿನ ಮುಂದೆ ಮತ್ತೆ ಬೆತ್ತಲಾದ ಪಾಕಿಸ್ತಾನ!

  • ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಪಾಕಿಸ್ತಾನ ಬಾವುಟ ಹಾರಾಡ್ತಿದೆ: ಯತ್ನಾಳ್ ಕಿಡಿ

    ಕಾಂಗ್ರೆಸ್ ಸರ್ಕಾರ ಬಂದ್ಮೇಲೆ ಪಾಕಿಸ್ತಾನ ಬಾವುಟ ಹಾರಾಡ್ತಿದೆ: ಯತ್ನಾಳ್ ಕಿಡಿ

    – ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ

    ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ. ಹಿಂದೂಗಳ ಹತ್ಯೆ ಹತ್ಯೆ ನಡೆಯುತ್ತಿದ್ದು, ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕಿಡಿಕಾರಿದ್ದಾರೆ.

    ವಿಧಾನಸಭೆಯಲ್ಲಿ (Vidhanasabha Session) ಮಾತನಾಡಿದ ಅವರು, ಈ ಸರ್ಕಾರ ಬಂದ್ಮೇಲೆ ಹಿಂದೂಗಳ ಕೊಲೆ ನಡೆಯುತ್ತಿದೆ. ಟೀ.ನರಸೀಪುರದಲ್ಲಿ ಹನುಮಜಯಂತಿ ವಿಚಾರದಲ್ಲಿ ಯುವ ಬ್ರಿಗೇಡ್ (Yuvara Brigade) ಯುವಕನ ಕೊಲೆ ಆಗಿದೆ. ಈ ಸರ್ಕಾರ ಬಂದ್ಮೇಲೆ ಪಾಕಿಸ್ತಾನ ಬಾವುಟ (Pakistan Flag) ಹಾರಾಡ್ತಿದೆ ಎಂದಾಗ ಕಾಂಗ್ರೆಸ್ ಶಾಸಕರು (Congress MLA) ಆಕ್ರೋಶ ಹೊರಹಾಕಿದ್ದಾರೆ., ಇದೇನಿದು..!? ಏನೇನೋ ಹೇಳ್ತಾರೆ. ಜೈನಮುನಿಗಳ ಬಗ್ಗೆ ಚರ್ಚೆ ಬಗ್ಗೆ ಮಾತಾಡಿ ಎಂದು ಆಕ್ಷೇಪ ವ್ಯಕ್ತಪಡಿಸಿದರು.

    ಜೈನ ಮುನಿಗಳು (Jain Monk) ಎಲ್ಲವನ್ನೂ ತ್ಯಾಗ ಮಾಡ್ತಾರೆ ಇಂತಹವರ ಹತ್ಯೆಯಿಂದ ರಾಜ್ಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಕರ್ನಾಟಕ ರಾಜ್ಯಕ್ಕೆ ಮುನಿಗಳ ಹತ್ಯೆ ಕಳಂಕವಾಗಿದೆ. ಈ ಹತ್ಯೆ ಹಿಂದೆ ಹಲವು ಅನುಮಾನಗಳಿದ್ದಾವೆ. ಬೆಂಗಳೂರಿನಿಂದ ಪೊಲೀಸರ ಮೇಲೆ ಏನ್ ಒತ್ತಡ ಬಂದಿದೇಯೋ..!?. ಪೊಲೀಸರ ಮೇಲೆ ಒತ್ತಡ ಬರುತ್ತೆ. ಬೆಳಗ್ಗೆ ಚೆನ್ನಾಗಿ ಇರುತ್ತಾರೆ, ರಾತ್ರಿ ಒಳಗಾಗಿ ಪೊಲೀಸರು ಬದಲಾಗ್ತಾರೆ ಎಂದರು. ಇದನ್ನೂ ಓದಿ: ಬೆಳಗಾವಿ ಜೈನಮುನಿ ಕೊಲೆ ಪ್ರಕರಣ- ಸಿಬಿಐ ತನಿಖೆಗೆ ಒಪ್ಪದ ಸರ್ಕಾರ

    ಹಸನ್ ಎಂಬ ಹೆಸರನ್ನ ಏಕೆ ಬಹಿರಂಗಪಡಿಸಿಲ್ಲ ಎಂದು ಪ್ರಶ್ನಿಸಿದ ಶಾಸಕರು, ರಾಜ್ಯದ ಪೊಲೀಸರ ಮೇಲೆ ಭರವಸೆ ಇಲ್ಲ. ಸಿಬಿಐ ತನಿಖೆಗೆ (CBI Investigation) ಈ ಕೇಸ್ ಕೊಡಬೇಕು. ಒಂದು ಕೋಮಿನ ತೃಪ್ತಿಪಡಿಸುವ ಕೆಲಸ ಆಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಒಂದು ಸಂತಾಪವನ್ನ ಕೂಡ ಹೇಳಲಿಲ್ಲ. ಬೇರೆ ಯಾರಾದರೂ ಸತ್ತಿದ್ರೆ ಸಂತಾಪ ಸೂಚಿಸುತ್ತಿದ್ದರು ಎಂದು ಯತ್ನಾಳ್ ವಾಗ್ದಾಳಿ ನಡೆಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕಿಸ್ತಾನ ಧ್ವಜದ ಸಿಂಹ ಪೋಸ್ಟ್ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

    ಪಾಕಿಸ್ತಾನ ಧ್ವಜದ ಸಿಂಹ ಪೋಸ್ಟ್ ಪ್ರಶ್ನಿಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

    ವಿಜಯಪುರ: ಪಾಕಿಸ್ತಾನ ಧ್ವಜ ಮಾದರಿಗೆ ಸಿಂಹದ ಚಿತ್ರ ಹಾಕಿದ್ದನ್ನು ಪ್ರಶ್ನಿಸಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದ ಬಳಿ ಘಟನೆ ನಡೆದಿದೆ.

    ಹೊನವಾಡ ಗ್ರಾಮದ ಪೈಲ್ವಾನ್ ಉಮೇಶ ಹರಗಿ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಜತ್ತ ತಾಲ್ಲೂಕಿನ ಆಸಂಗಿ ಗ್ರಾಮದ ಅಫ್ಜಲ್ ಖಾನ್ ಮುಜಾವರ ಹಾಗೂ ಮೂವರು ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೊ ಳಗಾದ ಉಮೇಶ್ ಆರೋಪಿಸಿದ್ದಾನೆ. ಇದನ್ನೂ ಓದಿ: ಶಿರಸಿಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ 1 ರೂ. ಇಳಿಕೆ

    ಪೈಲ್ವಾನ್ ಅಫ್ಜಲ್, ಹಸಿರು ಸಿಂಹದ ಮೇಲೆ ಅರ್ಧ ಚಂದ್ರನ ಫೋಟೋವನ್ನು ವಾಟ್ಸ್ಆ್ಯಪ್‌ನಲ್ಲಿ ಪೋಸ್ಟ್ ಮಾಡಿದ್ದ. ಇದನ್ನು ಪೈಲ್ವಾನ್ ಉಮೇಶ ಹರಗಿ ವಾಟ್ಸಪ್‌ನಲ್ಲಿ ಪ್ರಶ್ನಿಸಿದ್ದ.

    ಇದಕ್ಕೆ ಹೊನವಾಡ ಗ್ರಾಮದ ಬಳಿ ರಾಡ್‌ನಿಂದ ಹಲ್ಲೆಗೈದು ಆರೋಪಿಗಳು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸದ್ಯ ಗಾಯಗೊಂಡಿರುವ ಉಮೇಶ ಜಿಲ್ಲಾಸ್ಪತ್ರೆ ದಾಖಲಾಗಿದ್ದಾನೆ. ತಿಕೋಟಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: 2 ಮಕ್ಕಳ ತಾಯಿಯೊಂದಿಗೆ ಪರಾರಿಯಾಗಿ ಜೀವನಕ್ಕೆ ಗಾರೆ ಕೆಲಸ ಮಾಡ್ತಿದ್ದ BE ಗ್ರ್ಯಾಜುಯೆಟ್‌ – ಪೊಲೀಸರ ಅತಿಥಿ

    Live Tv
    [brid partner=56869869 player=32851 video=960834 autoplay=true]

  • ಕಾಲೇಜು ವಾಟ್ಸಾಪ್ ಗ್ರೂಪ್‍ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ ವಿದ್ಯಾರ್ಥಿನಿ

    ಕಾಲೇಜು ವಾಟ್ಸಾಪ್ ಗ್ರೂಪ್‍ನಲ್ಲಿ ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ ವಿದ್ಯಾರ್ಥಿನಿ

    ಶಿವಮೊಗ್ಗ: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದನ್ನು ಖಂಡಿಸಿ ಎಬಿವಿಪಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

    ಕಳೆದ ತಿಂಗಳು ಹಿಜಬ್ ವಿಚಾರವಾಗಿ ಗಲಾಟೆ ನಡೆಯುತ್ತಿದ್ದ ವೇಳೆ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪಿನಲ್ಲಿ ಚರ್ಚೆ ನಡೆಯುತ್ತಿತ್ತು. ಈ ವೇಳೆ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದಳು. ಇದೀಗ ಈ ವಿಷಯ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನನ್ನ ದಾರಿ ತಪ್ಪಿಸಲು ಈಶ್ವರಪ್ಪ ಜಗಳ ಮಾಡುಬೇಕು ಅಂತಾ ಬರ್ತಾರೆ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ ವಿದ್ಯಾರ್ಥಿನಿ ವಿರುದ್ಧ ದೇಶದ್ರೋಹದ ಆರೋಪದಡಿ ಪ್ರಕರಣ ದಾಖಲಿಸಬೇಕು. ವಿದ್ಯಾರ್ಥಿನಿಯನ್ನು ಕಾಲೇಜಿನಿಂದ ಅಮಾನತುಪಡಿಸುವಂತೆ ಆಗ್ರಹಿಸಿ ಕಾಲೇಜಿನ ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

    ಪಾಕಿಸ್ತಾನ ಧ್ವಜದ ಸ್ಟಿಕರ್ ಹಾಕಿದ್ದ ವಿದ್ಯಾರ್ಥಿನಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಈ ಹಿಂದೆಯೇ ಕಾಲೇಜಿನ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ್ದೆವು. ಆದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ದೇಶದ್ರೋಹದ ಕೃತ್ಯ ಎಸಗಿರುವ ವಿದ್ಯಾರ್ಥಿನಿ ವಿರುದ್ಧ ಇನ್ನು ಎರಡು ದಿನದೊಳಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳುವುವರೆಗೂ ಕಾಲೇಜಿನಲ್ಲಿ ಯಾವುದೇ ತರಗತಿಗಳು ನಡೆಯಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಸೈಯದ್ ಅಲಿ ಶಾ ಗೀಲಾನಿ ಮೃತದೇಹಕ್ಕೆ ಪಾಕ್ ಧ್ವಜ ಹೊದಿಸಿದ ಕುಟುಂಬಸ್ಥರ ವಿರುದ್ಧ FIR

    ಸೈಯದ್ ಅಲಿ ಶಾ ಗೀಲಾನಿ ಮೃತದೇಹಕ್ಕೆ ಪಾಕ್ ಧ್ವಜ ಹೊದಿಸಿದ ಕುಟುಂಬಸ್ಥರ ವಿರುದ್ಧ FIR

    ಶ್ರೀನಗರ: ಕಾಶ್ಮೀರ ಪ್ರತ್ಯೇಕವಾದಿ ನಾಯಕ ಸೈಯದ್ ಅಲಿ ಗೀಲಾನಿ(92)ಯವರ ಮೃತದೇಹಕ್ಕೆ ಪಾಕಿಸ್ತಾನ ಧ್ವಜ ಹೊದಿಸಿ, ದೇಶ ವಿರೋಧಿ ಘೋಷಣೆ ಕೂಗಿದ ಗೀಲಾನಿಯವರ ಕುಟುಂಬದವರ ವಿರುದ್ಧ ಬದ್ಗಾಂ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸೈಯದ್ ಅಲಿ ಗೀಲಾನಿಯವರು ಬುಧವಾರ ರಾತ್ರಿ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದರು. ನಂತರ ಅವರ ಮೃತ ದೇಹವನ್ನು ಸಮೀಪದಲ್ಲಿರು ಮಸೀದಿಯ ಸ್ಮಶಾನದಲ್ಲಿ ಹೂಳುವ ಮುನ್ನ ಪಾಕಿಸ್ತಾನ ರಾಷ್ಟ್ರ ಧ್ವಜವನ್ನು ಹೊದಿಸಲಾಗಿತ್ತು. ಇದನ್ನೂ ಓದಿ: ಮೈಸೂರಿನ ದರೋಡೆ, ಶೂಟ್‍ಔಟ್ ಪ್ರಕರಣ- ಖತರ್ನಾಕ್ ಬಾಂಬೆ ಬುಡ್ಡಾ ಅಂದರ್

    Syed Ali Shah Geelani

    ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಕಾಶ್ಮೀರದಲ್ಲಿ ಶುಕ್ರವಾರ ರಾತ್ರಿ ಮೊಬೈಲ್ ಇಂಟರ್‍ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ನಡುವೆ ಪುತ್ರ ನಸೀಮ್ ಗಿಲಾನಿ ನಮ್ಮ ತಂದೆಯ ಮೃತ ದೇಹವನ್ನು ಪೊಲೀಸರು ಬಲವಂತವಾಗಿ ತೆಗೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಅಲ್ಲದೇ ಮನೆಯ ಮಹಿಳೆಯರಿಗೆ ಮತ್ತು ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಹಾಸನದಲ್ಲೊಂದು ತ್ರಿಕೋನ ಪ್ರೇಮ ಕಥೆ – ವಿಷ ಸೇವಿಸಿದವಳ ಆಯ್ಕೆ ಬಳಿಕ ಮತ್ತೊಬ್ಬಳು ಕೊಟ್ಟಿದ್ದೇಕೆ ಎಚ್ಚರಿಕೆ.?

    ಆದರೆ ಪೊಲೀಸರು ಸೈಯದ್ ಅಲಿ ಶಾ ಗೀಲಾನಿಯವರ ಅಂತ್ಯ ಕ್ರಿಯೆ ನಡೆಸಲು ಕುಟುಂಬಸ್ಥರಿಗೆ ಸಹಾಯ ಮಾಡಲಾಗಿದೆ ಎಂಬ ಮಾಹಿತಿ ಇದ್ದು, ಶ್ರೀನಗರದ ವಿಮಾನ ನಿಲ್ದಾಣದ ರಸ್ತೆಯಲ್ಲಿರುವ ಹೈದರ್‍ಪೋರಾದಲ್ಲಿ ಗೀಲಾನಿಯವರನ್ನು ಸಮಾಧಿ ಮಾಡಿಲಾಗಿದೆ. ಅಲ್ಲದೇ ಅಂತ್ಯಕ್ರಿಯೆಯಲ್ಲಿ ಗೀಲಾನಿಯವರ ಕೆಲ ಸಂಬಂಧಿಕರು ಕೂಡ ಪಾಲ್ಗೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

  • ಪಾಕ್ ಮಾದರಿ ಧ್ವಜವನ್ನು ಕಾರಿಗೆ ಹಾಕಿದ್ದ ಚಾಲಕನಿಗೆ ಪೊಲೀಸರಿಂದ ಕ್ಲಾಸ್

    ಪಾಕ್ ಮಾದರಿ ಧ್ವಜವನ್ನು ಕಾರಿಗೆ ಹಾಕಿದ್ದ ಚಾಲಕನಿಗೆ ಪೊಲೀಸರಿಂದ ಕ್ಲಾಸ್

    – ಪೊಲೀಸರ ಕಾರ್ಯಕ್ಕೆ ನೆಟ್ಟಿಗರು ಫಿದಾ, ವಿಡಿಯೋ ವೈರಲ್

    ಬೆಂಗಳೂರು: ಪಾಕಿಸ್ತಾನ ಮಾದರಿಯ ಫ್ಲಾಗ್ ಅನ್ನು ಕಾರಿನ ಮುಂಭಾಗಕ್ಕೆ ಹಾಕಿಕೊಂಡಿದ್ದ ಕಾರು ಚಾಲಕನಿಗೆ ಎಲೆಕ್ಟ್ರಾನ್ ಸಿಟಿ ಸಂಚಾರ ಪೊಲೀಸರು ಕ್ಲಾಸ್ ತೆಗೆದುಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಈ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಮೀಪದ ವೀರಸಂದ್ರ ಬಳಿ ನಡೆದಿದೆ ಎಂದು ತಿಳಿದು ಬಂದಿದೆ. ಪಾಕಿಸ್ತಾನದ ಧ್ವಜ ಹೋಲುವ ಧ್ವಜವನ್ನು ಕಾರಿನ ಮುಂಭಾಗ ಅಳವಡಿಸಿಕೊಂಡಿರುವುದನ್ನು ಕಂಡ ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸರು ಕಾರನ್ನು ತಡೆದು, ಚಾಲಕನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

    ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದ ಕಾರಿನ ಮುಂಭಾಗದಲ್ಲಿ ಅರ್ಧ ಚಂದ್ರನಿರುವ ಹಸಿರು ಬಣ್ಣ ಧ್ವಜ ಇರುವುದನ್ನು ಕಂಡ ಪೊಲೀಸರು, ಕಾರನ್ನು ತಡೆದು ಆ ಧ್ವಜವನ್ನು ಬಿಚ್ಚಿಸಿ ಭಾರತದ ತ್ರಿವರ್ಣ ಧ್ವಜವನ್ನು ಅಳವಡಿಸಿದ್ದಾರೆ. ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

  • ದೇವಸ್ಥಾನದ ಮೇಲೆ ಹಾರಾಡಿದ ಪಾಕಿಸ್ತಾನ ಬಾವುಟ

    ದೇವಸ್ಥಾನದ ಮೇಲೆ ಹಾರಾಡಿದ ಪಾಕಿಸ್ತಾನ ಬಾವುಟ

    ಭೋಪಾಲ್: ಮಧ್ಯಪ್ರದೇಶದ ನರಸಿಂಗ್‍ಪುರ್ ಎಂಬಲ್ಲಿ ಗುರುವಾರದಂದು ಆಂಜನೇಯ ದೇವಸ್ಥಾನದ ಮೇಲೆ ಪಾಕಿಸ್ತಾನದ ಬಾವುಟ ಹಾರಿಸಲಾಗಿದೆ.

    ಅಲ್ಲದೆ ಹಿಂದೂಗಳನ್ನ ನಿರ್ನಾಮ ಮಾಡುವುದಾಗಿ ದೇವಸ್ಥಾನದ ಗೋಡೆಯ ಮೇಲೆ ಹಿಂದಿಯಲ್ಲಿ ಬರೆಯಲಾಗಿದೆ. ಈ ಕೃತ್ಯವೆಸಗಿದವರು ಯಾರು ಎಂದು ಪತ್ತೆಹಚ್ಚಲು ಪೊಲೀಸರು ಇದೂವರೆಗೂ 100 ಜನರನ್ನು ವಿಚಾರಣೆ ಮಾಡಿದ್ದಾರೆ.

    ನರಸಿಂಗ್‍ಪುರ್‍ನ ಎಸ್‍ಪಿ ಮೋನಿಕಾ ಶುಕ್ಲಾ ಮಾಧ್ಯಮಗಳೊಂದಿಗೆ ಮಾತನಾಡಿ, ದೇವಸ್ಥಾನದ ಹತ್ತಿರದ ಸಿಸಿಟಿವಿಯಲ್ಲಿ ಕಿಡಿಗೇಡಿಗಳ ದೃಶ್ಯ ಸೆರೆಯಾಗಿರಬಹುದು. ಆದ್ರೆ ಆ ಸಿಸಿಟಿವಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಅದರ ರಿಪೇರಿಗಾಗಿ ಮೆಕಾನಿಕ್‍ನನ್ನು ಕರೆಸಲಾಗಿದೆ ಎಂದು ತಿಳಿಸಿದ್ದಾರೆ.

    ಘಟನೆ ಹಿನ್ನೆಲೆಯಲ್ಲಿ ಬಲಪಂಥೀಯ ಹಿಂದೂ ಸಂಘಟನೆಗಳು ಗುರುವಾರದಂದು ಪ್ರತಿಭಟನೆ ನಡೆಸಿದ್ದು, ಒಂದು ನಿರ್ದಿಷ್ಟ ಧರ್ಮದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

    ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ಅಪರಿಚಿತ ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    https://twitter.com/reallysravan/status/901026974239301632