Tag: pakistan occupied kashmir

  • ಯುದ್ಧ ಭೀತಿ – ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 10 ದಿನ ಮದರಸಾ ಬಂದ್!

    ಯುದ್ಧ ಭೀತಿ – ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 10 ದಿನ ಮದರಸಾ ಬಂದ್!

    ಇಸ್ಲಾಮಾಬಾದ್: ಪಹಲ್ಗಾಮ್ ಪ್ರವಾಸಿಗರ ದಾಳಿಯ (Pahalgam Terror Attack) ಬಳಿಕ ಯುದ್ಧದ ಭೀತಿಯಲ್ಲಿರುವ ಪಾಕಿಸ್ತಾನವು (Pakistan) ಮುಂಜಾಗ್ರತಾ ಕ್ರಮವಾಗಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (POK) 10 ದಿನಗಳ ಕಾಲ ಮದರಸಾ ಮುಚ್ಚುವ ನಿರ್ಧಾರವನ್ನು ಕೈಗೊಂಡಿದೆ.

    ಭಾರತವು ಎಲ್ಲಾ ಮದರಸಾಗಳನ್ನು ಗುರಿಯಾಗಿರಿಸಿಕೊಳ್ಳುವ ಭಯವನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಸರ್ಕಾರವು ಗುರುವಾರ ತಿಳಿಸಿದೆ. ಅಲ್ಲದೇ ಭಾರತ ಶೀಘ್ರದಲ್ಲೇ ಮಿಲಿಟರಿ ಕ್ರಮ ಕೈಗೊಳ್ಳಲು ಉದ್ದೇಶಿಸಿದೆ ಎಂದು ಗುಪ್ತಚರ ಮಾಹಿತಿ ಇದೆ ಎಂದು ಹೇಳಿದೆ. ಇದನ್ನೂ ಓದಿ: ರಕ್ಷಣೆಗೆ ಅಮೆರಿಕ, ಚೀನಾಗೆ ಪಾಕ್ ಮೊರೆ – ಪ್ರತೀಕಾರ ಕಟ್ಟಿಟ್ಟಬುತ್ತಿ: ಭಾರತ ಗುಡುಗು

    ಭಾರತೀಯ ಪಡೆಗಳು ಮದರಸಾಗಳನ್ನು ಗುರಿಯಾಗಿಸಿಕೊಂಡು ಅವುಗಳನ್ನು ಭಯೋತ್ಪಾದಕ ತರಬೇತಿ ಕೇಂದ್ರಗಳೆಂದು ದಾಳಿ ಮಾಡಬಹುದು ಎಂದು ಭದ್ರತಾ ಅಧಿಕಾರಿಗಳು ಭಯಪಡುತ್ತಿದ್ದಾರೆ ಎಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಧಾರ್ಮಿಕ ವ್ಯವಹಾರಗಳ ಇಲಾಖೆಯ ನಿರ್ದೇಶಕ ಹಫೀಜ್ ನಜೀರ್ ಅಹ್ಮದ್ ಏಜೆನ್ಸಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ನೀವು ಬರೋದು ಬೇಡ – ತನ್ನ ಪ್ರಜೆಗಳನ್ನೇ ದೇಶಕ್ಕೆ ಸೇರಿಸದ ಪಾಕ್‌

    ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ 445 ನೋಂದಾಯಿತ ಮದರಸಾಗಳಿದ್ದು, 26,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ನಾವು ಬುಧವಾರ ಸಭೆ ನಡೆಸಿದ್ದು, ಮುಗ್ಧ ಮಕ್ಕಳನ್ನು ಅಪಾಯದಿಂದ ಕಾಪಾಡಲು ಸರ್ವಾನುಮತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ, ಬುಡ ಸಮೇತ ಕಿತ್ತುಹಾಕ್ತೀವಿ: ಅಮಿತ್‌ ಶಾ ಗುಡುಗು

    ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದು, ಕೇಂದ್ರ ಸರ್ಕಾರವು ಪ್ರತೀಕಾರ ತೀರಿಸಿಕೊಳ್ಳಲು ಎದುರು ನೋಡುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳಿಗೆ ಪಾಕ್ ಪತರುಗುಟ್ಟಿದೆ.

  • ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನ – ಪ್ರತಿಭಟನಾಕಾರರು, ಪೊಲೀಸರ ನಡುವೆ ಘರ್ಷಣೆ

    ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಉದ್ವಿಗ್ನ – ಪ್ರತಿಭಟನಾಕಾರರು, ಪೊಲೀಸರ ನಡುವೆ ಘರ್ಷಣೆ

    ಶ್ರೀನಗರ: ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ (POK) ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಹಾಗೂ ನಾಗರಿಕರ ನಡುವೆ ಘರ್ಷಣೆ ನಡೆದಿದೆ.

    ಶನಿವಾರ ನಡೆದ ಹೊಸ ಘರ್ಷಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ. 90 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ನಿಮ್ಮ ನಾಚಿಕೆಗೇಡಿನ ನಡವಳಿಕೆ ತೋರಿಸುವ ವೀಡಿಯೋ ನನ್ನ ಬಳಿ ಇದೆ – ರಾಜ್ಯಪಾಲರ ವಿರುದ್ಧ ದೀದಿ ಗುಡುಗು

    ಹಣದುಬ್ಬರ, ಹೆಚ್ಚಿನ ತೆರಿಗೆ ಮತ್ತು ವಿದ್ಯುತ್ ಕೊರತೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ. ಪಿಒಕೆಯಾದ್ಯಂತ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಚಳವಳಿಯಾಗಿ ಮಾರ್ಪಟ್ಟಿವೆ.

    ಪ್ರತಿಭಟನಾಕಾರರು ‘ಆಜಾದಿ’ (ಸ್ವಾತಂತ್ರ್ಯ) ಘೋಷಣೆಗಳನ್ನು ಕೂಗುತ್ತಿದ್ದಾರೆ. ಪ್ರತಿಭಟನಾಕಾರರು ಮುಜಫರಾಬಾದ್ ಮತ್ತು ಇತರ ಜಿಲ್ಲೆಗಳಲ್ಲಿ ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳ ನಡುವೆ ಘರ್ಷಣೆಯಾಗಿದೆ. ಪ್ರತಿಭಟನೆಯ ನೇತೃತ್ವವನ್ನು ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ ಹೊತ್ತುಕೊಂಡಿದೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ 50 ಸ್ಥಾನ ಕೂಡ ಗಳಿಸಲ್ಲ: ಮೋದಿ ಭವಿಷ್ಯ

    ಶುಕ್ರವಾರ ಮುಷ್ಕರಕ್ಕೆ ಕರೆ ನೀಡಿದ ನಂತರ ಹತ್ತಾರು ನಾಯಕರು ಮತ್ತು ಕ್ರಿಯಾ ಸಮಿತಿಯ ಸದಸ್ಯರನ್ನು ಬಂಧಿಸಲಾಗಿದೆ.

  • ಪಿಒಕೆ ನಿವಾಸಿಗಳ ಮೇಲೆ ಪಾಕ್ ದಬ್ಬಾಳಿಕೆ – ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ

    ಪಿಒಕೆ ನಿವಾಸಿಗಳ ಮೇಲೆ ಪಾಕ್ ದಬ್ಬಾಳಿಕೆ – ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ

    ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದ  (Pakistan Occupied Kashmir) ನಿವಾಸಿಗಳ ಮೇಲೆ ಪಾಕಿಸ್ತಾನ ಸರ್ಕಾರ ಭಾರೀ ತೆರಿಗೆ ವಿಧಿಸಿ ದಬ್ಬಾಳಿಕೆ ನಡೆಸುತ್ತಿದ್ದು, ಇದರ ವಿರುದ್ಧ ಜನ ಬೀದಿಗಿಳಿದು (Protest) ಪ್ರತಿಭಟಿಸಿದ್ದಾರೆ. ಈ ವೇಳೆ ಪಾಕ್‍ನ ಪೊಲೀಸರು ಜನರೆಡೆ ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ್ದು ಇಬ್ಬರು ಪ್ರತಿಭಟನಾಕಾರರು ಸಾವಿಗೀಡಾಗಿದ್ದಾರೆ.

    ಪಿಒಕೆಯ ನಿವಾಸಿಗಳು ಸರ್ಕಾರದ ವಿರುದ್ಧ ಭಾರೀ ತೆರಿಗೆ, ಹಣದುಬ್ಬರ ಮತ್ತು ವಿದ್ಯುತ್ ಕೊರತೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆ ಶಾಂತಿಯುತವಾಗಿ ನಡೆಯುತ್ತಿತ್ತು. ಈ ವೇಳೆ ಪ್ರತಿಭಟನಾ ನಿರತರ ಮೇಲೆ ಪಾಕಿಸ್ತಾನದ ಸೇನೆ ಮತ್ತು ಸ್ಥಳೀಯ ಪೊಲೀಸರು ಗಾಳಿಯಲ್ಲಿ ಗುಂಡು, ಅಶ್ರುವಾಯು ಮತ್ತು ಪೆಲೆಟ್‍ಗಳನ್ನು ಸಿಡಿಸಿದ್ದಾರೆ. ಇದರಿಂದ ನಾಗರಿಕರು ಪೊಲೀಸರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ವಾಹನದಲ್ಲಿತ್ತು 7 ಕೋಟಿ ರೂ.!

    ಪ್ರತಿಭಟನೆಯ ವೇಳೆ ಪೊಲೀಸರು ಎಕೆ-47 ಬಂದೂಕಿನಿಂದ ಗಾಳಿಯಲ್ಲಿ ಮತ್ತು ಗುಂಪಿನ ಕಡೆಗೆ ಗುಂಡು ಹಾರಿಸಿರುವ ಹಾಗೂ ಆಸ್ಪತ್ರೆಗಳಲ್ಲಿ ವಿದ್ಯಾರ್ಥಿಗಳು, ಮಹಿಳೆಯರು ಅಳುತ್ತಿರುವ ವೀಡಿಯೋಗಳನ್ನು ಮಾಧ್ಯಮಗಳು ಹಂಚಿಕೊಂಡಿವೆ.

    ಪಿಒಕೆ ಪ್ರದೇಶಗಳಲ್ಲಿ ಉತ್ಪಾದನೆಯಾಗುವ ವಿದ್ಯುತ್‍ನ್ನು ಪಾಕಿಸ್ತಾನದ ಇತರ ದೊಡ್ಡ ನಗರಗಳಿಗೆ ತಿರುಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಪಾಕ್ ಭಾರೀ ಪ್ರಮಾಣದ ಆರ್ಥಿಕ ಕುಸಿತ ಕಂಡಿದೆ. ಇದರಿಂದ ಅಂತರರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವಬ್ಯಾಂಕ್‍ನಂತಹ ಜಾಗತಿಕ ಏಜೆನ್ಸಿಗಳಿಂದ ಸಹಾಯಕ್ಕೆ ಎದುರು ನೋಡುತ್ತಿದೆ. ಇದನ್ನೂ ಓದಿ: ಚಿಕ್ಕಬಳ್ಳಾಪುರ ಎಸ್ಪಿ ಕಚೇರಿ ಎದುರು ಪೊಲೀಸ್ ಪೇದೆಗಳಿಂದಲೇ ಪ್ರತಿಭಟನೆ – ಕಾರಣ ಏನು?

  • ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಕಂದಕಕ್ಕೆ ಬಸ್‌ ಬಿದ್ದು 20 ಮಂದಿ ಸಾವು

    ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಕಂದಕಕ್ಕೆ ಬಸ್‌ ಬಿದ್ದು 20 ಮಂದಿ ಸಾವು

    ಬಾಲ್ಟಿಸ್ತಾನ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (Pakistan-Occupied Kashmir) ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದ ಡೈಮರ್ ಜಿಲ್ಲೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ಸೊಂದು ಕಿರಿದಾದ ಪರ್ವತ ರಸ್ತೆಯಿಂದ ಬಿದ್ದು ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ.

    ಇಂದು ಬೆಳಗ್ಗೆ 6 ಗಂಟೆಗೆ ಪಿಒಕೆಯ (POK) ಡೈಮರ್‌ನಲ್ಲಿರುವ ಕಾರಕೋರಂ ಹೆದ್ದಾರಿಯ ಯಶೋಖಲ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಪಾಕಿಸ್ತಾನದ ರಾವಲ್ಪಿಂಡಿಯಿಂದ ಪಿಒಕೆಯ ಗಿಲ್ಗಿಟ್‌ಗೆ ತೆರಳುತ್ತಿತ್ತು. ಬಸ್‌ನಲ್ಲಿ 40 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇದನ್ನೂ ಓದಿ: ಚೀನಾದಲ್ಲಿ ಹೆದ್ದಾರಿ ಕುಸಿತಕ್ಕೆ 48 ಬಲಿ

    ರಕ್ಷಣಾ ತಂಡಗಳನ್ನು ಅಪಘಾತದ ಸ್ಥಳಕ್ಕೆ ರವಾನಿಸಲಾಗಿದೆ. ಗಾಯಗೊಂಡವರನ್ನು ಚಿಲಾಸ್‌ನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಕನಿಷ್ಠ ಐವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನು ಗಿಲ್ಗಿಟ್‌ಗೆ ಸ್ಥಳಾಂತರಿಸಲಾಗಿದೆ.

    ಈ ಅಪಘಾತವು ಚಿಲಾಸ್‌ನಿಂದ 20 ಕಿಲೋಮೀಟರ್ ದೂರದಲ್ಲಿ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: 7 ವರ್ಷದ ಮಗುವಿಗೆ ಕಚ್ಚಿದ್ದಕ್ಕೆ ಸಾಕು ನಾಯಿಯನ್ನೇ ಕೊಂದು ತಿಂದ!

  • ಪಾಕ್‌ ಆಕ್ರಮಿತ ಕಾಶ್ಮೀರ 2025 ರೊಳಗೆ ಭಾರತದೊಂದಿಗೆ ವಿಲೀನಗೊಳ್ಳುತ್ತೆ: ಜ್ಯೋತಿಷಿ ಭವಿಷ್ಯ

    ಪಾಕ್‌ ಆಕ್ರಮಿತ ಕಾಶ್ಮೀರ 2025 ರೊಳಗೆ ಭಾರತದೊಂದಿಗೆ ವಿಲೀನಗೊಳ್ಳುತ್ತೆ: ಜ್ಯೋತಿಷಿ ಭವಿಷ್ಯ

    ನವದೆಹಲಿ: ಪಾಕ್‌ ಆಕ್ರಮಿತ ಕಾಶ್ಮೀರ (POK) 2025 ರೊಳಗೆ ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಪ್ರಸಿದ್ಧ ವೈದಿಕ ಜ್ಯೋತಿಷಿ ರುದ್ರ ಕರಣ್‌ ಪ್ರತಾಪ್‌ (Rudra Karan Partaap) ಭವಿಷ್ಯ ನುಡಿದಿದ್ದಾರೆ.

    ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಅವರು, ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರಧಾನಿ ಮೋದಿಯವರು ಸದ್ಯಕ್ಕೆ ಮಂಗಳ ಮಹಾದಶಾ ನಡೆಸುತ್ತಿದ್ದಾರೆ. ಈ ಅವಧಿಯಲ್ಲಿ ಭೂಮಿಗೆ ಸಂಬಂಧಿಸಿದ ವಿಷಯಗಳು ಗಮನಾರ್ಹವಾದ ಗಮನವನ್ನು ನೀಡುತ್ತವೆ ಎಂದು ಊಹಿಸಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) 2025 ರ ಏಪ್ರಿಲ್‌ನಿಂದ ಸೆಪ್ಟೆಂಬರ್ ಒಳಗೆ ಭಾರತದೊಂದಿಗೆ ವಿಲೀನಗೊಳ್ಳಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಪ್ರಣಾಳಿಕೆ ಪಾಕ್ ಚುನಾವಣೆಗೆ ಹೆಚ್ಚು ಸೂಕ್ತವಾಗಿದೆ: ಹಿಮಂತ್ ಶರ್ಮಾ

    ಪ್ರಧಾನಿ ಮೋದಿ ಅವರು 2024 ರಲ್ಲಿ ಮತ್ತೊಂದು ಅವಧಿಗೆ ಅಧಿಕಾರ ನಡೆಸುವುದು ಸ್ಪಷ್ಟ ಎಂದು ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

    ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲ್ ಅವರು 2024 ಮಾರ್ಚ್‌ನಿಂದ ಗಮನಾರ್ಹ ಹಿನ್ನಡೆ ಎದುರಿಸಬಹುದು ಎಂದು ರುದ್ರ ಅವರು 2022 ರ ಮಾರ್ಚ್‌ ತಿಂಗಳಲ್ಲಿ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದರು. ಈ ಭವಿಷ್ಯವು ನಿಖರವಾದಂತೆ ತೋರಿದೆ. ಏಕೆಂದರೆ, ಜಾರಿ ನಿರ್ದೇಶನಾಲಯವು ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧಿಸಿದೆ. ಇದನ್ನೂ ಓದಿ: ಕಂಗನಾ ರಣಾವತ್ ಗೋಮಾಂಸ ಇಷ್ಟ ಎಂದಿದ್ದರು: ಕೈ ನಾಯಕ ವಿವಾದಾತ್ಮಕ ಹೇಳಿಕೆ

    2023 ರ ತೆಲಂಗಾಣ ಚುನಾವಣೆಯಲ್ಲಿ ಕೆ. ಚಂದ್ರಶೇಖರ್ ರಾವ್ ಅವರ ಹಾಲಿ ಸರ್ಕಾರ ಮರು ಆಯ್ಕೆಯಾಗಲಿದ್ದು, ಅಧಿಕಾರಾವಧಿಯನ್ನು ಮುಂದುವರಿಸಲಿದೆ ಎಂದು ರುದ್ರ ಭವಿಷ್ಯ ನುಡಿದಿದ್ದರು. ನಂತರ ಟ್ವೀಟ್‌ ಅನ್ನು ಡಿಲೀಟ್‌ ಮಾಡಲಾಗಿತ್ತು. ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಬೆಳವಣಿಗೆ ಎಂಬಂತೆ ಕಾಂಗ್ರೆಸ್‌ ಬಹುಮತದಿಂದ ಗೆದ್ದು ಅಧಿಕಾರ ಹಿಡಿಯಿತು.

  • ಪಿಒಕೆ ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ: ರಾಜನಾಥ್ ಸಿಂಗ್

    ಪಿಒಕೆ ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ: ರಾಜನಾಥ್ ಸಿಂಗ್

    ಶ್ರೀನಗರ: ಭಾರತ ಗಿಲ್ಗಿಟ್, ಬಾಲ್ಟಿಸ್ತಾನ್ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಸಂಪೂರ್ಣ ಭಾಗವನ್ನು ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿಕೆ ನೀಡಿದ್ದಾರೆ. ಈ ಮೂಲಕ ಪಾಕ್ ಆಕ್ರಮಿತ ಕಾಶ್ಮೀರವನ್ನು (POK) ವಶಪಡಿಸಿಕೊಳ್ಳುವ ಸುಳಿವು ನೀಡಿದ್ದಾರೆ.

    ಇಂದು ಬುದ್ಗಾಮ್‌ನಲ್ಲಿ ಭಾರತೀಯ ಸೇನೆ ಆಯೋಜಿಸಿದ್ದ 76ನೇ ಪದಾತಿ ದಳದ ದಿನದ ಅಂಗವಾಗಿ ಶೌರ್ಯ ದಿವಸ್ ಕಾರ್ಯಕ್ರಮದಲ್ಲಿ ರಾಜನಾಥ್ ಸಿಂಗ್ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ಸಂಪೂರ್ಣ ಜಮ್ಮು ಮತ್ತು ಕಾಶ್ಮೀರವನ್ನು ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಶೀಘ್ರವೇ ಸರ್ಕಾರ ಕ್ರಮ ಕೈಗೊಳ್ಳದಿದ್ರೆ ಕಾಶ್ಮೀರದಲ್ಲಿ ಹಿಂದೂಗಳೇ ಇರುವುದಿಲ್ಲ: ಫಾರೂಕ್ ಅಬ್ದುಲ್ಲಾ

    ದಾಳಿಕೋರರ ಕ್ರೂರ ದಾಳಿಯಿಂದ ಈ ಭೂಮಿಯನ್ನು ಮುಕ್ತಗೊಳಿಸಲು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಎಲ್ಲಾ ಹುತಾತ್ಮರ ಮುಂದೆ ನಾನು ತಲೆಬಾಗುತ್ತೇನೆ. ಭಾರತ ವಿಭಜನೆಯಾದ ನಂತರ ಪಾಕಿಸ್ತಾನ ತನ್ನ ನಿಜವಾದ ಬಣ್ಣವನ್ನು ತೋರಿಸಿದೆ. ಪಾಕಿಸ್ತಾನ ಇಷ್ಟೊಂದು ಕೆಳಮಟ್ಟಕ್ಕೆ ಇಳಿದು ಜಮ್ಮು ಮತ್ತು ಕಾಶ್ಮೀರದ ಮೇಲೆ ದಾಳಿ ಮಾಡುತ್ತದೆ ಎಂದು ನಾವು ಊಹಿಸಿರಲಿಲ್ಲ ಎಂದರು. ಇದನ್ನೂ ಓದಿ: ಈ ಹಿಂದೆ ಪಠ್ಯಪುಸ್ತಕಗಳಲ್ಲಿ ಟಿಪ್ಪು ವೈಭವೀಕರಣ ಇತ್ತು ಈಗ ಇಲ್ಲ: ಬಿ.ಸಿ ನಾಗೇಶ್

    ಪಾಕಿಸ್ತಾನ ತನ್ನ ಆಕ್ರಮಿತ ಕಾಶ್ಮೀರದಲ್ಲಿ ಜನರ ಮೇಲೆ ದೌರ್ಜನ್ಯ ಎಸಗುತ್ತಿರುವುದರ ವಿರುದ್ಧ ವಾಗ್ದಾಳಿ ನಡೆಸಿದ ರಾಜನಾಥ್ ಸಿಂಗ್, ಇದರ ಪರಿಣಾಮವನ್ನು ಪಾಕಿಸ್ತಾನ ಎದುರಿಸಬೇಕಾಗುತ್ತದೆ. ನಾವು ಈಗಾಗಲೇ ಜಮ್ಮು ಮತ್ತು ಕಾಶ್ಮೀರ, ಹಾಗೂ ಲಡಾಕ್‌ನಲ್ಲಿ ನಮ್ಮ ಅಭಿವೃದ್ಧಿಯ ಪ್ರಯಾಣವನ್ನು ಪ್ರಾರಂಭಿಸಿದ್ದೇವೆ. ಇನ್ನು ಗಿಲ್ಗಿಟ್ ಹಾಗೂ ಬಾಲ್ಟಿಸ್ತಾನ್ ತಲುಪಿ, ಅಲ್ಲಿ ನಮ್ಮ ಗುರಿಯನ್ನು ಸಾಧಿಸಿ ತೋರಿಸುತ್ತೇವೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಪಾಕ್‌ ಆಕ್ರಮಿತ ಕಾಶ್ಮೀರಕ್ಕೆ ಅಮೆರಿಕ ಕಾಂಗ್ರೆಸ್‌ ಸದಸ್ಯೆ ಇಲ್ಹಾನ್‌ ಭೇಟಿ – ಭಾರತ ಖಂಡನೆ

    ಪಾಕ್‌ ಆಕ್ರಮಿತ ಕಾಶ್ಮೀರಕ್ಕೆ ಅಮೆರಿಕ ಕಾಂಗ್ರೆಸ್‌ ಸದಸ್ಯೆ ಇಲ್ಹಾನ್‌ ಭೇಟಿ – ಭಾರತ ಖಂಡನೆ

    ನವದೆಹಲಿ: ಪಾಕ್‌ ಆಕ್ರಮಿತ ಕಾಶ್ಮೀರಕ್ಕೆ (POK) ಅಮೆರಿಕದ ಕಾಂಗ್ರೆಸ್‌ ಸದಸ್ಯೆ ಇಲ್ಹಾನ್‌ ಓಮರ್‌ ಭೇಟಿಯನ್ನು ಭಾರತ ಖಂಡಿಸಿದೆ.

    ಯುಎಸ್‌ ಕಾಂಗ್ರೆಸ್‌ ಸದಸ್ಯೆ ಓಮರ್‌ ಏ.20ರಿಂದಲೇ ಪಾಕಿಸ್ತಾನಕ್ಕೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಹಾಲಿ ಪ್ರಧಾನಿ ಶೆಹಬಾಜ್‌ ಶರೀಫ್‌ ಅವರನ್ನು ಭೇಟಿಯಾಗಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಓಮರ್‌ ಭೇಟಿ ಕುರಿತ ಪ್ರಶ್ನೆಗೆ ಉತ್ತರಿಸಿದ ವಿದೇಶಾಂಗ ಸಚಿವಾಲಯದ ವಕ್ತಾರರು, ಇದು ಖಂಡನೀಯ ಎಂದಿದ್ದಾರೆ. ಇದನ್ನೂ ಓದಿ: ಮುಂಬೈ ವಿಎಸ್ ಚೆನ್ನೈ ನಡುವಿನ ಪಂದ್ಯ ಭಾರತ-ಪಾಕ್ ಕಾದಾಟವಿದ್ದಂತೆ: ಭಜ್ಜಿ

    ತಮ್ಮ ವ್ಯಾಪ್ತಿಗೆ ಸಂಬಂಧಿಸಿದ ವಿಚಾರಗಳಲ್ಲಿ ಅವರು ರಾಜಕೀಯ ಮಾಡಬಹುದು. ಅದು ಅವರ ವ್ಯವಹಾರವೂ ಆಗಬಹುದು. ಆದರೆ ನಮ್ಮ ಪ್ರಾದೇಶಿಕ ಸಮಗ್ರತೆಯನ್ನು ಉಲ್ಲಂಘಿಸುವುದು ಖಂಡನೀಯ ಎಂದು ತಿಳಿಸಿದ್ದಾರೆ.

    ಅಮೆರಿಕ ಕಾಂಗ್ರೆಸ್‌ ಸದಸ್ಯೆ ಏ.20ರಿಂದ 24ರವರೆಗೆ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದಾರೆ. ಇಸ್ಲಾಮಾಬಾದ್‌ನಲ್ಲಿ ರಾಜಕೀಯ ನಾಯಕರೊಂದಿಗೆ ಸಭೆಯನ್ನೂ ನಡೆಸಲಿದ್ದಾರೆ. ಪಾಕಿಸ್ತಾನದ ಸಾಂಸ್ಕೃತಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸಾಮರ್ಥ್ಯದ ಬಗ್ಗೆ ತಿಳಿದುಕೊಳ್ಳಲು ಅವರು ಲಾಹೋರ್ ಮತ್ತು ʼಆಜಾದ್ ಜಮ್ಮು ಮತ್ತು ಕಾಶ್ಮೀರʼಕ್ಕೆ ಭೇಟಿ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ. ಇದನ್ನೂ ಓದಿ: ಇಂಗ್ಲೆಂಡ್ ರಾಣಿ ಎಲಿಜಬೆತ್‍ರ 2 ವರ್ಷದವರಿದ್ದಾಗಿನ ಫೋಟೋ ವೈರಲ್

    ಭಾರತ ವಿರೋಧಿ ನಿಲುವಿಗೆ ಹೆಸರುವಾಸಿಯಾದ ಶಾಸಕರೊಂದಿಗೆ ಕಾಶ್ಮೀರವನ್ನು ಬೆಳೆಸಿದ್ದೇನೆ. ಜಮ್ಮು ಮತ್ತು ಕಾಶ್ಮೀರ ಸಮಸ್ಯೆ ಶಾಂತಿಯುತ ಪರಿಹಾರದ ಪ್ರಾಮುಖ್ಯತೆ ಕುರಿತು ಒತ್ತಿ ಹೇಳಲಾಗಿದೆ ಎಂದು ಷರೀಫ್ ತಿಳಿಸಿದ್ದಾರೆ.

    ಅವಿಶ್ವಾಸ ನಿರ್ಣಯದ ಮೂಲಕ ತಮ್ಮನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸುವಲ್ಲಿ ಅಮೆರಿಕ ಕೈವಾಡವಿದೆ ಎಂದು ಇಮ್ರಾನ್‌ ಖಾನ್‌ ಗಂಭೀರ ಆರೋಪ ಮಾಡಿದ್ದರು. ಹೊಸ ಪ್ರಧಾನಿ ಬಂದ ನಂತರ ಪಾಕಿಸ್ತಾನಕ್ಕೆ ಓಮರ್‌ ಭೇಟಿ ನೀಡಿರುವುದು ಯುಎಸ್‌ ಮತ್ತು ಪಾಕಿಸ್ತಾನ ಸಂಬಂಧವನ್ನು ಮತ್ತೆ ಗಟ್ಟಿಗೊಳಿಸುವ ಸೂಚನೆ ನೀಡುತ್ತಿದೆ.