Tag: Pakistan Spy

  • ಪಾಕ್ ಬೇಹುಗಾರ್ತಿಗೆ ಕೇರಳ ಸರ್ಕಾರ ಧನಸಹಾಯ – ಸರ್ಕಾರದ ಖರ್ಚಿನಲ್ಲಿ ವ್ಲಾಗರ್ ಜ್ಯೋತಿ ಪ್ರವಾಸ

    ಪಾಕ್ ಬೇಹುಗಾರ್ತಿಗೆ ಕೇರಳ ಸರ್ಕಾರ ಧನಸಹಾಯ – ಸರ್ಕಾರದ ಖರ್ಚಿನಲ್ಲಿ ವ್ಲಾಗರ್ ಜ್ಯೋತಿ ಪ್ರವಾಸ

    ನವದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ (Pakistan Spy) ಮಾಡಿದ ಆರೋಪ ಎದುರಿಸುತ್ತಿರುವ ಹರಿಯಾಣ ಮೂಲದ ವ್ಲಾಗರ್ ಜ್ಯೋತಿ ಮಲ್ಹೋತ್ರಾ (Jyoti Malhotra) ಕೇರಳ ಸರ್ಕಾರದ ಧನಸಹಾಯದಲ್ಲಿ ಪ್ರವಾಸ ಕೈಗೊಂಡಿದ್ದರು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

    ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾದ ಅರ್ಜಿಯ ಮೂಲಕ ಒದಗಿಸಲಾದ ದಾಖಲೆಗಳ ಪ್ರಕಾರ, ಜನವರಿ 2024 ಮತ್ತು ಮೇ 2025ರ ನಡುವೆ ಜ್ಯೋತಿ ಮಲ್ಹೋತ್ರಾ ಕೇರಳದ ಕೊಚ್ಚಿ, ತಿರುವನಂತಪುರಂ ಮತ್ತು ಇತರ ಕೆಲವು ಪ್ರಮುಖ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಈ ಭೇಟಿಯನ್ನು ಸಾಂಸ್ಕೃತಿಕ ಅಧ್ಯಯನ ಅಥವಾ ಸಂಶೋಧನೆಯ ಭಾಗವೆಂದು ವರ್ಗೀಕರಿಸಲಾಗಿತ್ತು. ಈ ಭೇಟಿಗಳಿಗೆ ಸಂಬಂಧಿಸಿದ ವೆಚ್ಚಗಳನ್ನು ಸರ್ಕಾರಿ ಯೋಜನೆಯಡಿ ಭರಿಸಲಾಗಿದೆ. ಆದರೆ, ಈ ಯೋಜನೆಯ ನಿಖರ ಸ್ವರೂಪ ಮತ್ತು ಜ್ಯೋತಿಯ ಚಟುವಟಿಕೆಗಳ ಕುರಿತು ಸ್ಪಷ್ಟ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಇದನ್ನೂ ಓದಿ: ಯಾರ ಕೈಗೂ ಸಿಗದೇ ಸರಳವಾಗಿ ಹುಟ್ಟುಹಬ್ಬ ಆಚರಿಸಿದ ರಿಷಬ್ ಶೆಟ್ಟಿ

    ಇನ್ನೂ ವಿದೇಶಿ ಗೂಢಚರ್ಯೆ ಆರೋಪಿತ ವ್ಯಕ್ತಿಯೊಬ್ಬರು ಸರ್ಕಾರಿ ಧನಸಹಾಯದ ಮೂಲಕ ರಾಜ್ಯಕ್ಕೆ ಭೇಟಿ ನೀಡಿರುವುದು, ಗೂಢಚರ್ಯೆಗೆ ಸಂಬಂಧಿಸಿದ ಶಂಕೆಗಳನ್ನು ಹೆಚ್ಚಿಸಿದೆ. ಕೇರಳದ ಸೂಕ್ಷ್ಮ ಭೌಗೋಳಿಕ ಸ್ಥಾನ ಮತ್ತು ರಾಜಕೀಯ ವಾತಾವರಣವನ್ನು ಗಮನಿಸಿದಾಗ, ಈ ಘಟನೆ ಇನ್ನಷ್ಟು ಗಂಭೀರವಾಗಿದೆ. ಈ ಆರೋಪದ ಕುರಿತು ಸಂಪೂರ್ಣ ತನಿಖೆಗೆ ಒತ್ತಾಯ ಕೇಳಿಬಂದಿದೆ. ಇದನ್ನೂ ಓದಿ: ಶಾಲೆ ಬಳಿ ಇದ್ದ ನೇರಳೆ ತಿಂದು 7 ವಿದ್ಯಾರ್ಥಿಗಳು ಅಸ್ವಸ್ಥ – ಆಸ್ಪತ್ರೆಗೆ ದಾಖಲು

  • ಪಾಕ್‌ಗೆ ಆಪರೇಷನ್ ಸಿಂಧೂರದ ಸೂಕ್ಷ್ಮ ಮಾಹಿತಿ ಹಂಚಿಕೆ – ಪಂಜಾಬ್ ವ್ಯಕ್ತಿ ಅರೆಸ್ಟ್

    ಪಾಕ್‌ಗೆ ಆಪರೇಷನ್ ಸಿಂಧೂರದ ಸೂಕ್ಷ್ಮ ಮಾಹಿತಿ ಹಂಚಿಕೆ – ಪಂಜಾಬ್ ವ್ಯಕ್ತಿ ಅರೆಸ್ಟ್

    ಚಂಡೀಗಢ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯ ಸಮಯದಲ್ಲಿ ಸೈನಿಕರ ನಿಯೋಜನೆ ಮತ್ತು ಕಾರ್ಯತಂತ್ರದ ಬಗ್ಗೆ ಪಾಕಿಸ್ತಾನದ ಗುಪ್ತಚರ ಕಾರ್ಯಕರ್ತರೊಂದಿಗೆ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಂಡ ಆರೋಪದ ಮೇಲೆ ಪಂಜಾಬ್‌ನ (Punjab) ತರಣ್ ತರಣ್ ಜಿಲ್ಲೆಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

    ತರಣ್‌ನ ಮೊಹಲ್ಲಾ ನಿವಾಸಿ ಗಗನ್‌ದೀಪ್ ಸಿಂಗ್ ಅಲಿಯಾಸ್ ಗಗನ್ ಬಂಧಿತ ಆರೋಪಿ. ಈತ ಪಾಕಿಸ್ತಾನ ಮೂಲದ ಖಲಿಸ್ತಾನ್ ಪರ ನಾಯಕ ಗೋಪಾಲ್ ಸಿಂಗ್ ಚಾವ್ಲಾ ಸಂಪರ್ಕದಲ್ಲಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ನೋಂದಣಿ ಮಾಡಿರುವ ರೈತರ ಜೋಳ ಖರೀದಿಸಲು ರೈತರ ನಿಯೋಗದಿಂದ ಆಹಾರ ಸಚಿವರಿಗೆ ಮನವಿ

    ಪಾಕಿಸ್ತಾನಿ ಗುಪ್ತಚರ ಕಾರ್ಯಕರ್ತರೊಂದಿಗೆ ಆರೋಪಿ ಮಾಹಿತಿ ಹಂಚಿಕೊಂಡಿದ್ದ ಮೊಬೈಲ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಗನ್ ಸೇನೆಯ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಲು ಪಿಐಒಗಳ ಜೊತೆ ಹಣ ಹಾಕಿಸಿಕೊಂಡಿದ್ದಾನೆ. ಆತನ ಮೊಬೈಲ್‌ನಲ್ಲಿ 20ಕ್ಕೂ ಹೆಚ್ಚು ಐಎಸ್‌ಐ ಸಂಪರ್ಕಗಳ ವಿವರಗಳು ಪತ್ತೆಯಾಗಿವೆ. ಈ ಸಂಬಂಧ ತರಣ್ ತರಣ್ ನಗರದ ಪೊಲೀಸ್ ಠಾಣೆಯಲ್ಲಿ ಅಧಿಕೃತ ರಹಸ್ಯ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ. ಇದನ್ನೂ ಓದಿ: ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ

  • ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

    ಯುದ್ಧ ಹಡಗು, ಜಲಾಂತರ್ಗಾಮಿಗಳ ಸೂಕ್ಷ್ಮ ಮಾಹಿತಿಯನ್ನ ಪಾಕ್‌ಗೆ ರವಾನಿಸ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಅರೆಸ್ಟ್‌!

    – ರೇಖಾಚಿತ್ರ, ಧ್ವನಿ ರೆಕಾರ್ಡಿಂಗ್‌ ಸಮೇತ ಮಾಹಿತಿ ಹಂಚಿಕೊಂಡಿದ್ದ‌ ಸ್ಪೈ

    ಮುಂಬೈ: ಆಪರೇಷನ್‌ ಸಿಂಧೂರ ಬಳಿಕ ದೇಶದಲ್ಲಿ ಪಾಕಿಸ್ತಾನ (Pakistan) ಪರ ಬೇಹುಗಾರಿಕೆ ನಡೆಸುತ್ತಿದ್ದವರ ಬಗ್ಗೆ ಹದ್ದಿನ ಕಣ್ಣಿಡಲಾಗಿದೆ. ಹೀಗಾಗಿ ಕಳೆದ ಎರಡು ವಾರಗಳಲ್ಲಿ ಸುಮಾರು 20 ಮಂದಿ ಬೇಹುಗಾರರ (Spying) ಹೆಡೆಮುರಿ ಕಟ್ಟಲಾಗಿದೆ. ಒಂದು ದಿನದ ಹಿಂದೆಯಷ್ಟೇ ಐಎಸ್‌ಐ ಅಧಿಕಾರಿಗಳಿಗೆ ಭಾರತದ ಸಿಮ್‌ ಕಾರ್ಡ್‌ಗಳನ್ನ ಪೂರೈಸುತ್ತಿದ್ದ ರಾಜಸ್ಥಾನದ ವ್ಯಕ್ತಿಯನ್ನ ಬಂಧಿಸಲಾಗಿತ್ತು. ಇಂದು ಥಾಣೆಯಲ್ಲಿ ಮತ್ತೊರ್ವ ವ್ಯಕ್ತಿಯನ್ನ ಬಂಧಿಸಲಾಗಿದೆ.

    ಥಾಣೆಯ ಕಲ್ವಾ ನಿವಾಸಿಯಾದ ಮೆಕ್ಯಾನಿಕಲ್ ಎಂಜಿನಿಯರ್ (Mechanical Engineer) ರವೀಂದ್ರ ವರ್ಮಾ (27) ಬಂಧಿತ ಆರೋಪಿ. ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ (ATS) ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ರವೀಂದ್ರನನ್ನ ಬಂಧಿಸಲಾಗಿದೆ.

    ಪೊಲೀಸರ ಪ್ರಕಾರ, ಫೇಸ್‌ಬುಕ್‌ನಲ್ಲಿ ಮಹಿಳೆಯಂತೆ ಡ್ರಾಮಾ ಮಾಡ್ತಿದ್ದ ಪಾಕಿಸ್ತಾನಿ ಏಜೆಂಟ್‌ನಿಂದ (Pakistani Agent) ಹನಿಟ್ರ್ಯಾಪ್‌ಗೆ ರವೀಂದ್ರ ಒಳಗಾಗಿದ್ದ. ಬಳಿಕ ಹಣದ ಆಮಿಷ ಒಡ್ಡಿ ಆತನಿಂದ ಸೂಕ್ಷ್ಮ ಮಾಹಿತಿಗಳನ್ನ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಈತ 2024 ರಿಂದ ಪಾಕಿಸ್ತಾನಿ ಏಜೆಂಟ್‌ನೊಂದಿಗೆ ಸಂಪರ್ಕದಲ್ಲಿದ್ದ. ದೇಶದ ಯುದ್ಧನೌಕೆಗಳು, ಜಲಾಂತರ್ಗಾಮಿ ನೌಕೆಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನ ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳಿಗೆ ನೀಡಿದ್ದ. ರೇಖಾಚಿತ್ರಗಳು ಮತ್ತು ಆಡಿಯೋ ರೆಕಾರ್ಡಿಂಗ್‌ ಸಮೇತ ಪಾಕಿಸ್ತಾನಿ ಗುಪ್ತಚರ ಆಪರೇಟಿವ್ (POI)ಗೆ ಮಾಹಿತಿ ಹಂಚಿಕೊಂಡಿದ್ದ. ಇದಕ್ಕೆ ಪ್ರತಿಯಾಗಿ ವಿದೇಶಗಳಲ್ಲಿನ ವಿವಿಧ ಬ್ಯಾಂಕ್‌ ಖಾತೆಗಳಿಂದ ಭಾರೀ ಮೊತ್ತದ ಹಣ ಪಡೆದುಕೊಂಡಿದ್ದ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ತನಿಖೆ ಸಮಯದಲ್ಲಿ ಉದ್ದೇಶಪೂರ್ವಕವಾಗಿಯೇ ರವೀಂದ್ರ ವರ್ಮಾ ಸೂಕ್ಷ್ಮ ಮಾಹಿತಿಯನ್ನ ಪಾಕ್‌ ಏಜೆಂಟ್‌ಗಳೊಂದಿಗೆ ಹಂಚಿಕೊಂಡಿದ್ದಾನೆ ಎಂಬುದೂ ಗೊತ್ತಾಗಿದೆ ಎಂದು ವರದಿಗಳು ತಿಳಿಸಿವೆ.

    ವರ್ಮಾ ರಕ್ಷಣಾ ತಂತ್ರಜ್ಞಾನ ಸಂಸ್ಥೆಯಲ್ಲಿ ಜೂನಿಯರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ. ಇದೇ ಕಾರಣದಿಂದ ದಕ್ಷಿಣ ಮುಂಬೈನಲ್ಲಿರುವ ನೇವಲ್ ಡಾಕ್‌ಯಾರ್ಡ್‌ಗೆ ಪ್ರವೇಶಿಸಲು ಅಧಿಕಾರವಿತ್ತು. ಅಲ್ಲದೇ ಈತ ನೌಕಾ ಹಡಗುಗಳು ಮತ್ತು ಜಲಾಂತರ್ಗಾಮಿ ನೌಕೆಗಳಲ್ಲಿಯೂ ಪ್ರಯಾಣಿಸುತ್ತಿದ್ದ. ಡಾರ್ಕ್‌ಯಾರ್ಡ್‌ಗೆ ಮೊಬೈಲ್‌ ಕೊಂಡೊಯ್ಯಲು ಅನುಮತಿ ಇಲ್ಲದಿದ್ದ ಕಾರಣ ರೇಖಾ ಚಿತ್ರಗಳನ್ನ ರೆಡಿ ಮಾಡಿಕೊಂಡಿದ್ದ. ಅಲ್ಲಿಂದ ಆಚೆಬಂದ ನಂತರ ವಾಯ್ಸ್‌ ರೆಕಾರ್ಡಿಂಗ್‌ ಮಾಡಿ ರೇಖಾ ಚಿತ್ರಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಎಟಿಎಸ್ ಸೋಮವಾರದ ವರೆಗೆ ಕಸ್ಟಡಿಗೆ ಪಡೆದು ವಿಚಾರಣೆ ಮುಂದುವರಿಸಿದೆ.

  • ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

    ಬೇಹುಗಾರಿಕೆಗಾಗಿ ಭಾರತೀಯ ಮೊಬೈಲ್‌ ಸಿಮ್‌ ಕಾರ್ಡ್‌ ಪೂರೈಸುತ್ತಿದ್ದ ಪಾಕ್‌ ಸ್ಪೈ ಅರೆಸ್ಟ್‌

    – 90 ದಿನ ಪಾಕಿಸ್ತಾನದಲ್ಲೇ ಉಳಿದಿದ್ದ ರಾಜಸ್ಥಾನದ ವ್ಯಕ್ತಿ

    ಬೆಂಗಳೂರು: ಬೇಹುಗಾರಿಕೆ ಚಟುವಟಿಕೆಗಳಿಗಾಗಿ ಭಾರತೀಯ ಮೊಬೈಲ್‌ ಸಿಮ್‌ (Indian SIMs) ಕಾರ್ಡ್‌ಗಳನ್ನು ಪೂರೈಸುತ್ತಾ, ದೇಶದ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದ ಪಾಕ್‌ ಪರ ಬೇಹುಗಾರನನ್ನ (Spy) ದೆಹಲಿ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಬಂಧಿಸಿದ್ದಾರೆ.

    ರಾಜಸ್ಥಾನದ (Rajasthan) ದೀಗ್ ಜಿಲ್ಲೆಯ ಗಂಗೋರಾ ಗ್ರಾಮದ ನಿವಾಸಿ ಕಾಸಿಮ್ (34) ಬಂಧಿತ ಬೇಹುಗಾರ. ಪಾಕಿಸ್ತಾನಿ ಗುಪ್ತಚರ ಕಾರ್ಯಾಚರಣೆಗಳಿಗೆ ಸಹಾಯ ಮಾಡಿದ ಆರೋಪದ ಮೇಲೆ ಈತನನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

    ಪಾಕಿಸ್ತಾನಕ್ಕೆ 2024ರ ಆಗಸ್ಟ್‌ ಮತ್ತು 2025ರ ಮಾರ್ಚ್‌ನಲ್ಲಿ 2 ಬಾರಿ ಭೇಟಿ ನೀಡಿದ್ದ ಕಾಸಿಮ್‌ 90 ದಿನಗಳ ಕಾಲ ಅಲ್ಲಿಯೇ ಉಳಿದುಕೊಂಡಿದ್ದ. ಈ ಸಮಯದಲ್ಲಿ ಪಾಕ್‌ ಗುಪ್ತಚರ ಸಂಸ್ಥೆ ಐಎಸ್‌ಐ ಅಧಿಕಾರಿಗಳನ್ನೂ ಭೇಟಿ ಮಾಡಿದ್ದ ಎಂದು ಶಂಕಿಸಲಾಗಿದೆ. ಇಂದು ಬೆಳಗ್ಗೆ ಕಾಸಿಮ್‌ನನ್ನ ಬಂಧಿಸಿದ್ದು, ಪೊಲೀಸ್‌ ರಿಮ್ಯಾಂಡ್‌ನಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸುಳಿವು ಸಿಕ್ಕಿದ್ದು ಹೇಗೆ?
    2024ರ ಸೆಪ್ಟೆಂಬರ್‌ನಲ್ಲಿ ಭಾರತೀಯ ಸೇನೆ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಂಬಂಧಿಸಿದ್ದ ಸೂಕ್ಷ್ಮ ಮಾಹಿತಿಯನ್ನ ಸಂಗ್ರಹಿಸಲು ಪಾಕ್‌ ಗುಪ್ತಚರ ಅಧಿಕಾರಿಗಳು ಭಾರತೀಯ ಮೊಬೈಲ್‌ ಸಂಖ್ಯೆಗಳನ್ನ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರ ಎಂಬ ಮಾಹಿತಿ ಭಾರತೀಯ ಗುಪ್ತಚರ ಅಧಿಕಾರಿಗಳಿಗೆ ಬಂದಿತ್ತು. ಭಾರತದಲ್ಲೇ ಸಿಮ್‌ ಕಾರ್ಡ್‌ಗಳನ್ನ ಖರೀದಿಸಿ, ಇಲ್ಲಿನವರ ಸಹಾಯದಿಂದಲೇ ಗಡಿಯಾಚೆಗೆ ಪೂರೈಸಲಾಗಿದೆ ಎಂದು ಹೇಳಲಾಗಿತ್ತು. ಇದನ್ನೂ ಓದಿ: ಪಾಕಿಸ್ತಾನದ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್

    ಈ ಸಿಎಮ್‌ ಕಾರ್ಡ್‌ಗಳನ್ನೇ ಬಳಸಿಕೊಂಡು ಐಎಸ್‌ಐ ಅಧಿಕಾರಿಗಳು ಭಾರತೀಯರನ್ನ ಸೋಷಿಯಲ್‌ ಮೀಡಿಯಾಗಳ ಮೂಲಕ ಸಂಪರ್ಕಿಸುತ್ತಿದ್ದರು, ಜೊತೆಗೆ ಸೂಕ್ಷ್ಮ ಮಾಹಿತಿಯನ್ನ ಹೊರತೆಗೆಯಲು ಯತ್ನಿಸುತ್ತಿದ್ದರು. ಈ ಕುರಿತು ತನಿಖೆ ನಡೆಸಿದಾಗ ಕಾಸಿಮ್‌ ಹೆಸರು ಹೊರಬಂದಿತು. ಕೂಡಲೇ ಆತನನ್ನ ಬಂಧಿಸಲಾಗಿದೆ ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿದೆ.

    ಸದ್ಯ ಕಾಸಿಮ್‌ ಹಿನ್ನೆಲೆ, ಪಾಕ್‌ಗೆ ಭೇಟಿ ನೀಡಿದ ಪ್ರಯಾಣ ವಿವರ ಹಾಗೂ ಈತನ ಸಂಪರ್ಕದಲ್ಲಿ ಯಾರ‍್ಯಾರು ಇದ್ದಾರೆ ಅನ್ನೋ ಬಗ್ಗೆ ತನಿಖೆ ನಡೆಯುತ್ತಿದೆ.  ಇದನ್ನೂ ಓದಿ: ಭಾರತ ಜಲಯುದ್ಧ; ಇತ್ತ ಅಫ್ಘಾನಿಸ್ತಾನದಿಂದಲೂ ಶಾಕ್‌ ಆತಂಕ, ಪಾಕ್‌ನಲ್ಲಿ ಚೀನಾ ಅಣೆಕಟ್ಟೆ ನಿರ್ಮಾಣ ಯಾಕೆ?

  • ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದ CRPF ಸಿಬ್ಬಂದಿ ಅರೆಸ್ಟ್ – ಜೂ.6ರ ವರೆಗೆ NIA ಕಸ್ಟಡಿಗೆ

    ಪಾಕ್‌ ಪರ ಬೇಹುಗಾರಿಕೆ ನಡೆಸುತ್ತಿದ್ದ CRPF ಸಿಬ್ಬಂದಿ ಅರೆಸ್ಟ್ – ಜೂ.6ರ ವರೆಗೆ NIA ಕಸ್ಟಡಿಗೆ

    – ಭಯೋತ್ಪಾದಕ ದಾಳಿಗೆ 6 ದಿನ ಮುಂಚಿತವಾಗಿ ಪಹಲ್ಗಾಮ್‌ಗೆ ವರ್ಗವಣೆಯಾಗಿದ್ದ ಸಿಬ್ಬಂದಿ
    – 2 ವಾರಗಳಲ್ಲಿ 15 ಪಾಕ್‌ ಸ್ಪೈಗಳು ಅರೆಸ್ಟ್‌

    ನವದೆಹಲಿ: ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ (PIO) ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೇಂದ್ರ ಮೀಸಲು ಪಡೆ (CRPF) ಸಿಬ್ಬಂದಿಯೊಬ್ಬರನ್ನು ಬಂಧಿಸಿದೆ.

    ಬಂಧಿಸಲ್ಪಟ್ಟ ಸಿಆರ್‌ಪಿಎಫ್‌ ಸಿಬ್ಬಂದಿಯನ್ನ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಪಹಲ್ಗಾಮ್‌ನಲ್ಲಿ 26 ಮಂದಿಯ ನರಮೇಧ ನಡೆಯುವುದಕ್ಕೆ 6 ದಿನಗಳ ಮುಂಚೆ ಅವರನ್ನ ಅಲ್ಲಿಗೆ ವರ್ಗಾತಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಬಂಧಿತ ಆರೋಪಿಯನ್ನ ಮೋತಿ ರಾಮ್‌ ಜಾಟ್‌ ಎಂದು ಗುರುತಿಸಲಾಗಿದೆ.

    ಈತ 2023 ರಿಂದ ಪಾಕಿಸ್ತಾನ ಗುಪ್ತಚರ ಅಧಿಕಾರಿಗಳೊಂದಿಗೆ (ಪಿಐಒ) ಬೇಹುಗಾರಿಕೆ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ. ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದ. ಅದಕ್ಕಾಗಿ ಪಾಕಿಸ್ತಾನಿ ಅಧಿಕಾರಿಗಳಿಂದ ಬಹು ಮಾರ್ಗಗಳ ಮೂಲಕ ಹಣ ಪಡೆಯುತ್ತಿದ್ದ ಎಂದು ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.

    ಸಿಆರ್‌ಪಿಎಫ್‌ನ 116ನೇ ಬೆಟಾಲಿಯನ್‌ನಲ್ಲಿ ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ಆಗಿ ಸೇವೆ ಸಲ್ಲಿಸುತ್ತಿದ್ದ ಮೋತಿ ರಾಮ್ ಜಾಟ್‌ರನ್ನ ಕಳೆದ ಏಪ್ರಿಲ್ 22 ರಂದು ಹಿಂದೂಗಳ ನರಮೇಧ ನಡೆಯುವುದಕ್ಕೆ 6 ದಿನಗಳ ಹಿಂದೆ ಪಹಲ್ಗಾಮ್‌ಗೆ ವರ್ಗಾವಣೆ ಮಾಡಲಾಗಿತ್ತು.

    ದೆಹಲಿಯಲ್ಲಿ ಮೋತಿ ರಾಮ್ ಅವರನ್ನು ಎನ್‌ಐಎ ಬಂಧಿಸಿದ್ದು, ಪಟಿಯಾಲ ಹೌಸ್ ವಿಶೇಷ ನ್ಯಾಯಾಲಯವು ಮೋತಿ ರಾಮ್ ಅವರನ್ನ ಜೂನ್ 6ರ ವರೆಗೆ ಎನ್‌ಐಎ ಕಸ್ಟಡಿಗೆ ನೀಡಿದೆ ಆದೇಶಿಸಿದೆ.

    ಏಪ್ರಿಲ್‌ 22ರ ಪಹಲ್ಗಾಮ್‌ ದಾಳಿಯ ಬಳಿಕ ರಾಷ್ಟ್ರೀಯ ತನಿಖಾ ಸಂಸ್ಥೆ ಬೇಹುಗಾರಿಕೆ ಚಟುವಟಿಕೆಗಳ ವಿರುದ್ಧ ಸಮರ ಸಾರಿದೆ. ಇದರ ಪರಿಣಾಮ ಕಳೆದ 2 ವಾರಗಳಲ್ಲಿ ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದಿಂದ 15ಕ್ಕೂ ಹೆಚ್ಚು ಬೇಹುಗಾರರನ್ನ ಬಂಧಿಸಲಾಗಿದೆ.