Tag: Pakistani Taliban

  • ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ – 13 ಸೈನಿಕರು ಸಾವು

    ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ – 13 ಸೈನಿಕರು ಸಾವು

    – ಅಧಿಕಾರಿಗಳು ಸೇರಿ 29 ಜನರಿಗೆ ಗಾಯ

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ವಜೀರಿಸ್ತಾನ್ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್  (Sucide Bomb) ದಾಳಿಯಲ್ಲಿ 13 ಪಾಕ್ ಸೈನಿಕರು ಸಾವನ್ನಪ್ಪಿದ್ದಾರೆ. ಸ್ಥಳೀಯ ಅಧಿಕಾರಿಗಳು ಸೇರಿ 29 ಜನರು ಗಾಯಗೊಂಡಿದ್ದಾರೆ.

    ಆತ್ಮಾಹುತಿ ಬಾಂಬ್ ಇದ್ದ ವಾಹನವು ಮಿಲಿಟರಿ ಬೆಂಗಾವಲು ಪಡೆಯ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಂಬ್ ಸ್ಫೋಟಗೊಂಡಿದೆ. ಇದರಿಂದ 13 ಸೈನಿಕರು ಸಾವನ್ನಪ್ಪಿದ್ದಾರೆ. ಜೊತೆಗೆ ಎರಡು ಮನೆಯ ಛಾವಣಿ ಕುಸಿದು 6 ಮಕ್ಕಳು, 10 ಜನ ಸೇನಾ ಸಿಬ್ಬಂದಿ ಸೇರಿದಂತೆ ಒಟ್ಟು 29 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: `ಆಪರೇಷನ್ ಸಿಂಧೂರ’ದಲ್ಲಿ ನಿರ್ನಾಮವಾದ ಉಗ್ರರ ಲಾಂಚ್ ಪ್ಯಾಡ್ ಮರುನಿರ್ಮಾಣ ಮಾಡುತ್ತಿದೆ ಪಾಕ್‌

    ಗಾಯಗೊಂಡವರ ಪೈಕಿ ನಾಲ್ವರು ಸೈನಿಕರ ಸ್ಥಿತಿ ಗಂಭೀರವಾಗಿದೆ. ಆರಂಭದಲ್ಲಿ ಈ ಆತ್ಮಾಹುತಿ ದಾಳಿಯ ಹೊಣೆಯನ್ನು ಯಾರು ಹೊತ್ತುಕೊಂಡಿರಲಿಲ್ಲ. ಆದರೆ ಈ ಸ್ಥಳದಲ್ಲಿ ಆಗಾಗ ಪಾಕಿಸ್ತಾನಿ ತಾಲಿಬಾನ್ ಉಗ್ರರು ದಾಳಿ ನಡೆಸುತ್ತಿರುತ್ತಾರೆ. ಹೀಗಾಗಿ ಅವರೇ ಈ ದಾಳಿಯನ್ನು ಕೂಡ ನಡೆಸಿರಬಹುದು ಎಂದು ಅಂದಾಜಿಸಲಾಗಿತ್ತು. ಸದ್ಯ ಪಾಕಿಸ್ತಾನಿ ತಾಲಿಬಾನ್‌ನ ಒಂದು ಬಣವಾದ ಹಫೀಜ್ ಗುಲ್ ಬಹದ್ದೂರ್ ತಂಡ ದಾಳಿ ನಡೆಸಿರಬಹುದು ಎಂದು ವರದಿಯಾಗಿದೆ.

    ಇದಕ್ಕೂ ಮುನ್ನ 2021ರಲ್ಲಿ ಕಾಬೂಲ್‌ನಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದಾಗ ಅಫ್ಘಾನಿಸ್ತಾನದ ಗಡಿಯಲ್ಲಿನ ಪಾಕಿಸ್ತಾನದ ಪ್ರದೇಶಗಳಲ್ಲಿ ತೀವ್ರ ಹಿಂಸಾಚಾರ ನಡೆದಿತ್ತು. ಈ ವರ್ಷದ ಆರಂಭದಿಂದ ಈವರೆಗೂ ಖೈಬರ್ ಪಖ್ತುಂಖ್ವಾ ಮತ್ತು ಬಲೂಚಿಸ್ತಾನದಲ್ಲಿ ಸರ್ಕಾರದ ವಿರುದ್ಧ ಸಶಸ್ತ್ರ ಗುಂಪುಗಳು ನಡೆಸಿದ ದಾಳಿಯಲ್ಲಿ 290ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.ಇದನ್ನೂ ಓದಿ: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ?

  • ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ – ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

    ಪಾಕ್‌ನಲ್ಲಿ ನಡೆದಿದ್ದು ಪ್ರತೀಕಾರದ ದಾಳಿ – ಸ್ಫೋಟದ ಸ್ಥಳದಲ್ಲಿ ಆತ್ಮಾಹುತಿ ಬಾಂಬರ್‌ನ ತುಂಡರಿಸಿದ ತಲೆ ಪತ್ತೆ

    ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ವಾಯುವ್ಯ ಪೇಶಾವರದ ಮಸೀದಿಯಲ್ಲಿ (Peshawar Mosque) ಆತ್ಮಾಹುತಿ ಬಾಂಬ್ ಸ್ಫೋಟಗೊಂಡ ಸ್ಥಳದಲ್ಲಿ ಶಂಕಿತ ಉಗ್ರನ ತುಂಡರಿಸಿದ ತಲೆ ಪತ್ತೆಯಾಗಿದೆ.

    ಈಗಾಗಲೇ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ (Suicide Bomb Blast) ಸಾವಿನ ಸಂಖ್ಯೆ 93ಕ್ಕೆ ಏರಿಕೆಯಾಗಿದ್ದು 221 ಮಂದಿ ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಉಳಿದ ಅವಶೇಷಗಳನ್ನು ಹೊರತೆಗೆಯಲು ರಕ್ಷಣಾ ಕಾರ್ಯ ಮುಂದುವರಿದಿದೆ. ಇದನ್ನೂ ಓದಿ: ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ – 89ಕ್ಕೇರಿದ ಸಾವಿನ ಸಂಖ್ಯೆ

    ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ - 89ಕ್ಕೇರಿದ ಸಾವಿನ ಸಂಖ್ಯೆ

    ಸ್ಫೋಟಕ್ಕೂ ಮುನ್ನ ಆತ್ಮಾಹುತಿ ದಾಳಿಕೋರ ಪೊಲೀಸರ ಸಾಲಿನಲ್ಲೂ ಇದ್ದ ಸಾಧ್ಯತೆಗಳಿವೆ. ಅಲ್ಲದೇ ಮಸೀದಿ ಪ್ರವೇಶಿಸಲು ಅಧಿಕೃತ ವಾಹನವನ್ನೇ ಬಳಸಿರಬಹುದು. ರಕ್ಷಣಾ ಕಾರ್ಯಾಚರಣೆ ಮುಗಿದ ಬಳಿಕ ಸ್ಫೋಟದ ನಿಖರ ಸ್ವರೂಪ ತಿಳಿಯಲಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

    ಪಾಕಿಸ್ತಾನಿ ತಾಲಿಬಾನ್ (Pakistani Taliban) ಎಂದು ಕರೆಯಲ್ಪಡುವ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (TTP) ಸಂಘಟನೆಯು ಆತ್ಮಾಹುತಿ ದಾಳಿಯ ಹೊಣೆ ಹೊತ್ತಿದೆ. ಇದು ಕಳೆದ ಆಗಸ್ಟ್ನಲ್ಲಿ ಅಫ್ಘಾನಿಸ್ತಾನದಲ್ಲಿ ಹತ್ಯೆಗೀಡಾದ ಟಿಟಿಪಿ ಕಮಾಂಡರ್ ಉಮರ್ ಖಾಲಿದ್ ಖುರಾಸಾನಿಯ ಪ್ರತೀಕಾರದ ದಾಳಿಯ ಭಾಗವಾಗಿದೆ ಎಂದು ಹೇಳಿದೆ.

    ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ - 89ಕ್ಕೇರಿದ ಸಾವಿನ ಸಂಖ್ಯೆ

    2014ರಲ್ಲಿಯೂ ಪಾಕಿಸ್ತಾನಿ ತಾಲಿಬಾನ್ (Pakistani Taliban) ವಾಯುವ್ಯ ನಗರದ ಪೇಶಾವರ್‌ನಲ್ಲಿರುವ ಆರ್ಮಿ ಪಬ್ಲಿಕ್ ಸ್ಕೂಲ್ (ಎಪಿಎಸ್) ಮೇಲೆ ದಾಳಿ ಮಾಡಿ 131 ವಿದ್ಯಾರ್ಥಿಗಳು ಸೇರಿದಂತೆ 150 ಮಂದಿಯನ್ನು ಕೊಂದಿತ್ತು. ಇದನ್ನೂ ಓದಿ: ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್‌ ಸ್ಫೋಟ- 28 ಮಂದಿ ಸಾವು, 150 ಮಂದಿಗೆ ಗಾಯ

    ಏನಿದು ಘಟನೆ?
    ಪಾಕಿಸ್ತಾನದ ಪೇಶಾವರದ ಮಸೀದಿಯೊಂದರಲ್ಲಿ ಸೋಮವಾರ (ಜ.30) ಮಧ್ಯಾಹ್ನ 1:40 ಸುಮಾರಿಗೆ ಝುಹರ್ ನಮಾಜ್ ಬಳಿಕ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಫೋಟದ ರಭಸಕ್ಕೆ ಮಸೀದಿಯ ಒಂದು ಬದಿ ಕುಸಿದುಬಿದ್ದಿತ್ತು.

    ಪೇಶಾವರ ಮಸೀದಿಯಲ್ಲಿ ಬಾಂಬ್ ಸ್ಫೋಟ - 89ಕ್ಕೇರಿದ ಸಾವಿನ ಸಂಖ್ಯೆ

    ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಸ್ಫೋಟವನ್ನು ಖಂಡಿಸಿದ್ದರು. ಅಲ್ಲದೇ ಈ ಸ್ಫೋಟ ಇಸ್ಲಾಂನೊಂದಿಗೆ ಯಾವುದೇ ಸಂಬಂಧ ಹೊಂದಿಲ್ಲ. ಭಯೋತ್ಪಾದಕರು ಪಾಕಿಸ್ತಾನ ರಕ್ಷಿಸಲು ಕರ್ತವ್ಯ ನಿರ್ವಹಿಸುವವರನ್ನ ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ ಎಂದು ಹೇಳಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k