Tag: Pakistani Terrorist

  • ಸ್ಥಳೀಯ ಉಗ್ರರನ್ನು ಮುಂದಿಟ್ಟುಕೊಂಡು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ದಾಳಿ: ಉನ್ನತ ಅಧಿಕಾರಿ

    ಸ್ಥಳೀಯ ಉಗ್ರರನ್ನು ಮುಂದಿಟ್ಟುಕೊಂಡು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕರ ದಾಳಿ: ಉನ್ನತ ಅಧಿಕಾರಿ

    ಶ್ರೀನಗರ: ಕಾಶ್ಮೀರದಲ್ಲಿ ಭಯೋತ್ಪಾದಕರ ದಾಳಿ ಹೆಚ್ಚಾಗಲು ಸ್ಥಳೀಯ ಉಗ್ರರು, ಪಾಕಿಸ್ತಾನಿ ಉಗ್ರರಿಗೆ ನೀಡುತ್ತಿರುವ ಸಹಕಾರವೇ ಪ್ರಮುಖ ಕಾರಣವಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸ್ಥಳೀಯ ಭಯೋತ್ಪಾದಕರ ಎನ್‌ಕೌಂಟರ್‌ಗಳ ಸಂಖ್ಯೆಯಲ್ಲಿನ ಹೆಚ್ಚಳದ ಹಿಂದಿನ ಕಾರಣವನ್ನು ವಿವರಿಸಿದ ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ವಿಜಯ್ ಕುಮಾರ್, ಪಾಕಿಸ್ತಾನಿ ಭಯೋತ್ಪಾದಕರು ದಾಳಿ ನಡೆಸಿ ತಪ್ಪಿಸಿಕೊಳ್ಳಲು ಕಾಶ್ಮೀರದ ಸ್ಥಳೀಯ ಭಯೋತ್ಪಾದಕರನ್ನು ಬಳಸುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 22 ಐಪಿಎಸ್‌ ಅಧಿಕಾರಿಗಳು ಕ್ರಿಮಿನಲ್‌ ಪ್ರಕರಣ ಎದುರಿಸುತ್ತಿದ್ದಾರೆ- ಎಂಎಚ್‌ಒ

    ಇತ್ತೀಚಿನ ಎನ್‌ಕೌಂಟರ್‌ಗಳಲ್ಲಿ ಸ್ಥಳೀಯ ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಪಾಕಿಸ್ತಾನಿ ಭಯೋತ್ಪಾದಕರು ಪರಾರಿಯಾಗಿದ್ದಾರೆ. ಸ್ಥಳೀಯ ಭಯೋತ್ಪಾದಕರನ್ನು ಮುಂದಿಟ್ಟುಕೊಂಡು ಪಾಕಿಸ್ತಾನಿ ಭಯೋತ್ಪಾದಕರು ಹಿಂದಿನಿಂದ ದಾಳಿ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಇಂದು ನಡೆದ ಟ್ರಾಲ್ ಎನ್‌ಕೌಂಟರ್ ಕುರಿತು ಮಾತನಾಡಿದ ಐಜಿಪಿ ಕುಮಾರ್, ಉಮರ್ ತೇಲಿ ಮತ್ತು ಸಫತ್ ಇಬ್ಬರೂ ಸ್ಥಳೀಯ ಭಯೋತ್ಪಾದಕರು. ಶ್ರೀನಗರದಲ್ಲಿ ಉಗ್ರ ಕಾರ್ಯಾಚರಣೆ ನಡೆಸುತ್ತಿದ್ದರು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಅನಿಲ್ ದೇಶಮುಖ್‍ರನ್ನು ವಶಕ್ಕೆ ಪಡೆದ ಸಿಬಿಐ

    ಇವರು ನಾಗರಿಕರ ಹತ್ಯೆ ಮತ್ತು ಇತರೆ ಹಲವಾರು ಕೃತ್ಯಗಳನ್ನು ಎಸಗಿದ ನಂತರ ಟ್ರಾಲ್‌ಗೆ ಪರಾರಿಯಾಗಿದ್ದರು. ಇಬ್ಬರೂ ಭಯೋತ್ಪಾದಕರನ್ನು ಇಂದು ಹತ್ಯೆ ಮಾಡಲಾಗಿದೆ. ಇವರು ಅನೇಕ ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

  • ಪಾಕಿಸ್ತಾನ ನನಗೆ 20 ಸಾವಿರ ನೀಡಿದೆ – ತಪ್ಪೊಪ್ಪಿಕೊಂಡ ಲಷ್ಕರ್ ಉಗ್ರ

    ಪಾಕಿಸ್ತಾನ ನನಗೆ 20 ಸಾವಿರ ನೀಡಿದೆ – ತಪ್ಪೊಪ್ಪಿಕೊಂಡ ಲಷ್ಕರ್ ಉಗ್ರ

    ಶ್ರೀನಗರ: ಪಾಕಿಸ್ತಾನದ ಭಯೋತ್ಪಾದಕ ಅಲಿ ಬಾಬರ್ ಪತ್ರಾ ನಾನು ನಾನು ಲಷ್ಕರ್-ಎ-ತೊಯ್ಬಾ ಮತ್ತು ಪಾಕಿಸ್ತಾನದ ಸೇನೆಯಿಂದ ತರಬೇತಿ ಪಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ.

    ಸೆಪ್ಟೆಂಬರ್ 26 ರಂದು ಉರಿ ಸೆಕ್ಟರ್‍ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯಿಂದ ಜೀವಂತವಾಗಿ ಸೆರೆಹಿಡಿಯಲಾದ ಪಾಕಿಸ್ತಾನಿ ಭಯೋತ್ಪಾದಕನನ್ನು ಬುಧವಾರ ಮಾಧ್ಯಮದವರ ಮುಂದೆ ಹಾಜರುಪಡಿಸಲಾಯಿತು ಈ ವೇಳೆ 19 ವರ್ಷದ ಅಲಿ ಬಾಬರ್ ಪತ್ರಾ ಪ್ರತಿಕ್ರಿಯಿಸಿದ್ದು, ನಾನು ಲಷ್ಕರ್-ಎ-ತೊಯ್ಬಾ ಮತ್ತು ಪಾಕಿಸ್ತಾನದ ಸೇನೆಯಿಂದ ತರಬೇತಿ ಪಡೆದುಕೊಂಡಿದ್ದೇನೆ. ನನಗೆ ಪಾಕಿಸ್ತಾನಿ ಹ್ಯಾಂಡ್ಲರ್‌ಗಳಿಂದ 20 ಸಾವಿರ ರೂ. ನೀಡಲಾಗಿತ್ತು ಎಂದಿದ್ದಾನೆ.

    ಈ ನಡುವೆ ತನ್ನ ತಾಯಿಯನ್ನು ನೆನೆದ ಅಲಿ, ಪಾಕಿಸ್ತಾನದಲ್ಲಿ ತನ್ನ ತಾಯಿಯ ಬಳಿಗೆ ಕರೆದುಕೊಂಡು ಹೋಗುವಂತೆ ಗೋಳಾಡಿದರೂ, ನನ್ನನ್ನು ಭಾರತಕ್ಕೆ ಕಳುಹಿಸಿದರು ಎಂದು ಹೇಳಿಕೊಂಡನು. ಇದನ್ನೂ ಓದಿ:  ವಿದ್ಯಾರ್ಥಿಗಳು ತರಗತಿಗೆ ಚಕ್ಕರ್, ರೊಮ್ಯಾನ್ಸ್​ಗೆ ಹಾಜರ್

    ಭಾರತೀಯ ಸೇನೆಯು ರಕ್ತಪಾತವನ್ನು ನಡೆಸುತ್ತೆ ಎಂದು ನಾವು ತಿಳಿದುಕೊಂಡಿದ್ದೆ. ಆದರೆ ಇಲ್ಲಿ ಎಲ್ಲವೂ ಶಾಂತಿಯುತವಾಗಿವೆ. ಭಾರತೀಯ ಸೇನೆಯು ನನ್ನನ್ನು ಚೆನ್ನಾಗಿ ನೋಡಿಕೊಂಡಿದೆ ಎಂದು ನಾನು ನನ್ನ ತಾಯಿಗೆ ಹೇಳುತ್ತೇನೆ ಎಂದು ಭಾರತೀಯ ಸೇನೆವನ್ನು ಪ್ರಶಂಸಿದ್ದಾನೆ. ಇದನ್ನೂ ಓದಿ:  ವಾಹನ ಸವಾರರ ಮೇಲೆ ಹಿರೇಹಳ್ಳಿ ಟೋಲ್ ಗೇಟ್ ಸಿಬ್ಬಂದಿ ಗೂಂಡಾಗಿರಿ

    ಭಾರತದಲ್ಲಿ ನಾನು ದಿನಕ್ಕೆ ಐದು ಬಾರಿ ಅಜಾನ್(ಪ್ರಾರ್ಥನೆಗಾಗಿ ಕರೆ) ಕೇಳಬಹುದು. ಭಾರತೀಯ ಸೇನೆಯ ನಡವಳಿಕೆ ಪಾಕಿಸ್ತಾನದ ಸೇನೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಇದರಿಂದ ನನಗೆ ಕಾಶ್ಮೀರದಲ್ಲಿ ಶಾಂತಿ ಇದೆ ಎಂದು ಅನಿಸುತ್ತದೆ ಎಂದು ತಿಳಿಸಿದ್ದಾನೆ.