Tag: palace

  • ಶೋಭಾ ಕರಂದ್ಲಾಜೆ ಹುಟ್ಟುಹಬ್ಬ – ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ

    ಶೋಭಾ ಕರಂದ್ಲಾಜೆ ಹುಟ್ಟುಹಬ್ಬ – ಮಾವುತ, ಕಾವಾಡಿಗಳಿಗೆ ಉಪಹಾರಕೂಟ ಏರ್ಪಡಿಸಿ ಆಚರಣೆ

    ಮೈಸೂರು: ಇಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandalaje) ತಮ್ಮ ಹುಟ್ಟುಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಅರಮನೆ ಆವರಣದಲ್ಲಿ ಕಾವಾಡಿಗರಿಗೆ ಮತ್ತು ಮಾವುತರಿಗೆ ವಿಶೇಷ ಉಪಹಾರ (Breakfast) ಬಡಿಸಿ ವಿಭಿನ್ನ ರೀತಿಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.

    ವಿಶ್ವ ವಿಖ್ಯಾತ ಮೈಸೂರಿನಲ್ಲಿ (Mysuru) ದಸರಾ ಮಹೋತ್ಸವ ನಡೆಯುತ್ತಿದೆ. ಇಲ್ಲಿನ ಮಾವುತರು ಮತ್ತು ಕಾವಾಡಿಗಳಿಗೆ ಸ್ವತಃ ಶೋಭಾ ಕರಂದ್ಲಾಜೆ ಉಪಾಹಾರ ಬಡಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಅರಮನೆ ಆವರಣದಲ್ಲಿ ಉಪಾಹಾರಕ್ಕೆ ವ್ಯವಸ್ಥೆ ಮಾಡಿದ್ದು, ಮಾವುತರು ಮತ್ತು ಕಾವಾಡಿಗಳಿಗಾಗಿ ವಿಶೇಷ ಉಪಾಹಾರ ಸಿದ್ಧಪಡಿಸಲಾಗಿದೆ. ಇಷ್ಟುಮಾತ್ರವಲ್ಲದೇ ಕೇಕ್ ಕತ್ತರಿಸುವ ಮೂಲಕ ತಮ್ಮ ಹುಟ್ಟುಹಬ್ಬವನ್ನು ಶೋಭಾ ಆಚರಿಸಿಕೊಂಡಿದ್ದು, ಸಚಿವೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಸ್ಥಳಿಯ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಕೌಂಟ್‍ಡೌನ್?- ಶೋಭಾ ಕರಂದ್ಲಾಜೆ ಹೆಸರು ಮುಂಚೂಣಿ

     

    ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರೆ ಎಂಬ ಬೆನ್ನಲ್ಲೇ ಕೇಂದ್ರ ಗೃಹ ಸಚಿವರಿಂದ ಶೋಭಾ ಕರಂದ್ಲಾಜೆಗೆ ಫೋನ್ ಬಂದಿದೆ. ಹುಟ್ಟುಹಬ್ಬ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಶೋಭಾ ಕರಂದ್ಲಾಜೆಗೆ ಕರೆ ಮಾಡಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಇನ್ನು ಮೈಸೂರಿನಲ್ಲಿ ಶೋಭಾ ಕರಂದ್ಲಾಜೆಗೆ ಸಂಸದ ಪ್ರತಾಪ್ ಸಿಂಹ (Prathap Simha) ವಿಶ್ ಮಾಡಿ ಹುಟ್ಟು ಹಬ್ಬದ ಶುಭಾಶಯ ಹೇಳಿದ್ದಾರೆ. ಅಲ್ಲದೇ ರಾಜ್ಯ ರಾಜಕಾರಣಕ್ಕೆ ಆದಷ್ಟು ಬೇಗ ಬನ್ನಿ ಮೇಡಂ. ನಿಮಗೆ ರಾಜ್ಯದಲ್ಲಿ ಒಳ್ಳೆಯ ಹುದ್ದೆ ಸಿಗಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಪರಶುರಾಮ ಹೆಸರಲ್ಲಿ ಕಾಂಗ್ರೆಸ್, ಬಿಜೆಪಿ ಸಂಘರ್ಷ- ಎರಡೂ ಪಕ್ಷಗಳ ವಿರುದ್ಧ FIR

    ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರದ್ಲಾಂಜೆ, ನಾನು ಕೇಂದ್ರ ಸಚಿವೆಯಾಗಿಯೇ ಸಂತೋಷವಾಗಿದ್ದೇನೆ. ನಾನು ಅಲ್ಲಿಯೇ ಇರುತ್ತೇನೆ. ನಾನು ರಾಜ್ಯ ರಾಜಕಾರಣಕ್ಕೆ ಬರುವ ವಿಚಾರವೇ ಇಲ್ಲ. ನನಗೆ ಒಳ್ಳೆ ಖಾತೆ ಸಿಕ್ಕಿದೆ. ಅಲ್ಲಿಯೇ ಒಳ್ಳೆಯ ಕೆಲಸ ಮಾಡುತ್ತಿದ್ದೇನೆ. ಯಾವ ವರಿಷ್ಠರಿಂದಲೂ ನನಗೆ ಯಾವ ಸೂಚನೆಗಳು ಇಲ್ಲ. ಇವೆಲ್ಲ ಸುದ್ದಿ ಹೇಗೆ ಬರುತ್ತಿವೆಯೂ ನನಗೆ ಗೊತ್ತಿಲ್ಲ. ಮುಂದಿನ ಬಾರಿಯೂ ಮೋದಿ ಪ್ರಧಾನಿಯಾಗಬೇಕು ಎಂಬುದು ನನ್ನ ಇಚ್ಛೆ. ಅದನ್ನೇ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು. ಇದನ್ನೂ ಓದಿ: ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ- ಗಗನಕ್ಕೇರಿದ ಹೂ, ಹಣ್ಣುಗಳ ದರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2 ದಿನಗಳ ಕಾಲ ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿರ್ಬಂಧ

    2 ದಿನಗಳ ಕಾಲ ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿರ್ಬಂಧ

    ಮೈಸೂರು: ಜಿ20 ಶೃಂಗಸಭೆ ಗಣ್ಯರು ಮೈಸೂರು ಅರಮನೆಗೆ (Mysuru Palace) ಭೇಟಿ ನೀಡುತ್ತಿರುವ ಹಿನ್ನೆಲೆ ಎರಡು ದಿನಗಳ ಕಾಲ ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

    ಜಿ20 ಗಣ್ಯರು ಮತ್ತು ಅಧಿಕಾರಿಗಳು ಅರಮನೆಗೆ ಭೇಟಿ ನೀಡಲಿದ್ದು, ಆಗಸ್ಟ್ 1 ಮತ್ತು 2ರಂದು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಆಗಸ್ಟ್ 1ರಂದು ಮಧ್ಯಾಹ್ನ 2:30ರಿಂದ ನಿರ್ಬಂಧ ಆದೇಶವನ್ನು ಹೊರಡಿಸಲಾಗಿದ್ದು, ಆಗಸ್ಟ್ 2ರಂದು ಮಧ್ಯಾಹ್ನ ಧ್ವನಿ ಬೆಳಕು ಕಾರ್ಯಕ್ರಮವನ್ನು ಕೂಡಾ ರದ್ದುಗೊಳಿಸಲಾಗಿದೆ. ಇದನ್ನೂ ಓದಿ: ಮತ್ತೆ ಟೊಮೆಟೋ ದರ ಭಾರೀ ಏರಿಕೆ – ಗ್ರಾಹಕರು ಕಂಗಾಲು

    ಅಲ್ಲದೇ ಭದ್ರತಾ ದೃಷ್ಟಿಯಿಂದ ಅರಮನೆಯ ಸುತ್ತಮುತ್ತ ಡ್ರೋನ್ ಹಾರಾಟವನ್ನು ಸಹ ಪೊಲೀಸರು ನಿಷೇಧಿಸಿದ್ದಾರೆ. ಇದನ್ನೂ ಓದಿ: ತುಮಕೂರಿನ ಸಿದ್ದಗಂಗಾ ಮಠಕ್ಕೆ ಹೈಟೆಕ್ ಸ್ಪರ್ಶ – 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ ಥೀಮ್ ಪಾರ್ಕ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ – ರಾಜವಂಶಸ್ಥರ ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್

    ನಾಡಿನೆಲ್ಲೆಡೆ ಆಯುಧಪೂಜೆಯ ಸಂಭ್ರಮ – ರಾಜವಂಶಸ್ಥರ ಆಯುಧಗಳಿಗೆ ಪೂಜೆ ಸಲ್ಲಿಸಲಿರುವ ಯದುವೀರ್

    ಮೈಸೂರು: ನಾಡಿನೆಲ್ಲೆಡೆ ಇಂದು ಆಯುಧ ಪೂಜೆಯ ಸಂಭ್ರಮ. ಮೈಸೂರು ಅರಮನೆಯಲ್ಲಿ ರಾಜ ಪರಂಪರೆಯ ಆಯುಧಗಳಿಗೆ ಯದುವಂಶದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜೆ ಸಲ್ಲಿಸಲಿದ್ದಾರೆ.

    ಈಗಾಗಲೇ ಬೆಳಗ್ಗೆ 5.30ರಿಂದ ಅರಮನೆಯಲ್ಲಿ ಪೂಜಾ ವಿಧಿ ವಿಧಾನಗಳು ಆರಂಭಗೊಂಡಿದ್ದು, ಬೆಳಗ್ಗೆ 7.45ಕ್ಕೆ ರಾಜರ ಆಯುಧಗಳನ್ನು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನಿಸಲಾಗಿತ್ತು. ಆನೆ, ಕುದುರೆ, ಹಸು, ಪಟ್ಟದ ಕತ್ತಿ, ಪಲ್ಲಕ್ಕಿ ಸೇರಿ ಎಲ್ಲಾ ರೀತಿಯ ಆಯುಧಗಳಿಗೆ ಪೂಜೆ ಮಾಡಲಾಯಿತು. ಇದೇ ವೇಳೆ ಮಹಿಳೆಯರ ಜೊತೆಗೆ ರಾಜಪರಿವಾರದವರು ಸೇರಿ ಪೂರ್ಣಕುಂಭವನ್ನು ಹೊತ್ತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ:  ದಸರಾ ಉತ್ಸವದಲ್ಲಿ ಪೌರ ಕಾರ್ಮಿಕ ಮಹಿಳೆಯರಿಗೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಿದ ಚಂದ್ರಶೇಖರ್ ಶ್ರೀ

    ಕೋಡಿ ಸೋಮೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಅರಮನೆ ಕಲ್ಯಾಣಮಂಟಪಕ್ಕೆ ಆಗಮನಿಸಿ, ಬೆಳಗ್ಗೆ 11.02 ರಿಂದ 11.22ರ ಶುಭ ಮುಹೂರ್ತದಲ್ಲಿ ಪೂರ್ವಿಕರು ಬಳಸುತ್ತಿದ್ದ ಕತ್ತಿ, ಗುರಾಣಿ ಈಟಿ ಸೇರಿ ರಾಜಮನೆತನದ ಆಯುಧಗಳಿಗೆ ಯದುವೀರ ಕೃಷದತ್ತ ಚಾಮರಾಜ ಒಡೆಯರ್ ಪೂಜೆ ಸಲ್ಲಿಸಲಿದ್ದಾರೆ. ಜೊತೆಗೆ ರಾಜಪರಿವಾರದ ಆನೆ, ಕುದುರೆ, ಹಸು, ಪಲ್ಲಕ್ಕಿ, ಕಾರುಗಳಿಗೂ ಪೂಜೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ:  ನವರಾತ್ರಿಯ ಕೊನೆಯ ದಿನ ಆಚರಿಸುವ ಆಯುಧ ಪೂಜೆಯ ಮಹತ್ವವೇನು?

    ಮುಂಜಾನೆಯಿಂದ ಚಾಮುಂಡಿ ತೊಟ್ಟಿಯಲ್ಲಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪೂಜೆ ನೆರವೇರಿಸುತ್ತಿದ್ದು, ಖಾಸ್ ಆಯುಧಗಳ ಪೂಜೆಗೆ ಸಿದ್ದತೆ ನಡೆಸಲಾಗುತ್ತಿದೆ. ಅರಮನೆ ಆನೆ, ಬಾಗಿಲ ಮುಂದೆ ಪಲ್ಲಕ್ಕಿ, ಪಟ್ಟದ ಹಸು, ಪಟ್ಟದ ಒಂಟೆಗಳಿಗೂ ಪೂಜೆ ಸಲ್ಲಿಸಲಾಗುತ್ತದೆ. ಅದರಲ್ಲಿಯೂ ಪಲ್ಲಕ್ಕಿಯಲ್ಲಿ ಯುದ್ದ ಸಲಕರಣೆಗಳನ್ನು ಹೊತ್ತು ತರಲಾಗಿದೆ. ಅರಮನೆ ಮುಂಭಾಗ ಕೋಡಿ ಸೋಮೇಶ್ವರ ದೇವಸ್ಥಾನದಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸಿದ ನಂತರ ಅರಮನೆಯಲ್ಲಿ ಯದುವೀರ್ ರಿಂದ ಆಯುಧಗಳಿಗೆ ಪೂಜೆ ನೆರವೇರಿಸಲಿದ್ದಾರೆ. ಕೊರೊನಾ ಕಾರಣದಿಂದಾಗಿಅರಮನೆ ಆಚರಣೆಗಳ ವೀಕ್ಷಣೆಗೆ ಸಾರ್ವಜನಿಕರಿಗೆ ಮಾತ್ರವಲ್ಲದೇ ಬಂಧುಗಳು ಹಾಗೂ ನೆಂಟರಿಗೂ ಪ್ರವೇಷ ನಿರ್ಬಂಧ ಹೇರಲಾಗಿದೆ.

  • ತುಲಾ ಲಗ್ನದಲ್ಲಿ ಮೈಸೂರು ಅರಮನೆ ಪ್ರವೇಶಿಸಿದ ದಸರಾ ಆನೆಗಳು

    ತುಲಾ ಲಗ್ನದಲ್ಲಿ ಮೈಸೂರು ಅರಮನೆ ಪ್ರವೇಶಿಸಿದ ದಸರಾ ಆನೆಗಳು

    ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಇಂದು ತುಲಾ ಲಗ್ನದಲ್ಲಿ ಗಜಪಡೆ ಅರಮನೆಯನ್ನು ಪ್ರವೇಸಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಆನೆಗಳನ್ನು ಸ್ವಾಗತಿಸಿದ್ದಾರೆ.

    ಅಂಬಾವಿಲಾಸ ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಬಂದಿವೆ. ಬೆಳಗ್ಗೆ 6:45ಕ್ಕೆ ಮೈಸೂರಿನ ಅಶೋಕಪುರಂನ ಅರಣ್ಯ ಭವನದಲ್ಲಿ ಸಾಂಪ್ರದಾಯಿಕ ಪೂಜೆ ನೆರವೇರಿದ್ದು, ಬಳಿಕ 7:35ಕ್ಕೆ ಅರಣ್ಯ ಭವನದಿಂದ ಅರಮನೆಯತ್ತ ಮೆರವಣಿಗೆ ಮೂಲಕ ಆನೆಗಳು ಆಗಮಿಸಿವೆ. ಇದನ್ನೂ ಓದಿ: 2022ರಲ್ಲಿ ಭಾರತದ ಜಿಡಿಪಿ ಶೇ.6.7 – ವಿಶ್ವದಲ್ಲೇ ಅತ್ಯಂತ ವೇಗದ ಬೆಳವಣಿಗೆ

    ಬೆಳಗ್ಗೆ 8:36 ರಿಂದ 9:11ರ ತುಲಾ ಲಗ್ನದಲ್ಲಿ ಆನೆಗಳು ಅರಮನೆ ಪ್ರವೇಶ ಮಾಡಿವೆ. ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ದಸರಾ ಗಜಪಡೆಗೆ ಸಾಂಪ್ರದಾಯಿಕ, ಪೂಜೆ, ಸರ್ಕಾರಿ ಗೌರವಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗಜಪಡೆಗೆ ಸ್ವಾಗತ ಕೋರಿದ್ದಾರೆ. ಕಾರ್ಯಕ್ರಮದಲ್ಲಿ ಗಣ್ಯರು ಭಾಗಿಯಾಗಿದ್ದಾರೆ.

    ಬೆಚ್ಚಿದ ಅಶ್ವತ್ಥಾಮ
    ನಗರದ ಸದ್ದುಗದ್ದಲಕ್ಕೆ ಅಶ್ವತ್ಥಾಮ ಬೆಚ್ಚಿದ್ದಾನೆ. ಅಶ್ವತ್ಥಾಮ ಆನೆ ಮೊದಲ ಬಾರಿಗೆ ದಸರಾಗೆ ಬಂದಿದೆ. ಹೀಗಾಗಿ ನಗರದ ಸದ್ದುಗದ್ದಲಕ್ಕೆ ಬೆಚ್ಚಿ ಫುಟ್‍ಪಾತ್ ಏರಿತ್ತು. ಅರಣ್ಯಭವನದಿಂದ ಅರಮನೆಗೆ ಬರುವ ವೇಳೆ ರಸ್ತೆಯಿಂದ ಫುಟ್‍ಪಾತ್ ಮಾರ್ಗಕ್ಕೆ ತೆರಳಿತ್ತು. ಬಳಿಕ ಮಾವುತ, ಕಾವಾಡಿ ಆನೆಯನ್ನು ನಿಯಂತ್ರಿಸಿ, ಫುಟ್‍ಪಾತ್‍ನಿಂದ ಕೆಳಗಿಳಿಸಿ, ರಸ್ತೆಯಲ್ಲಿ ಆನೆಯನ್ನು ಕರೆದುಕೊಂಡು ಅರಮನೆಗೆ ಕರೆತರಲಾಯಿತು.

  • ಚೇತರಿಕೆಯತ್ತ ಮೈಸೂರು ಪ್ರವಾಸೋದ್ಯಮ- ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ

    ಚೇತರಿಕೆಯತ್ತ ಮೈಸೂರು ಪ್ರವಾಸೋದ್ಯಮ- ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ

    ಮೈಸೂರು: ಅರಮನೆ ವೀಕ್ಷಿಸಲು ನಿಧಾನವಾಗಿ ಪ್ರವಾಸಿಗರ ಸಂಖ್ಯೆ ಏರುತ್ತಿದೆ. ಕಳೆದ ಒಂದು ವಾರದಲ್ಲಿ ಪ್ರವಾಸಿಗರ ಸಂಖ್ಯೆ ತುಂಬಾ ಕಡಿಮೆ ಇತ್ತು. ಇಂದು ಇದರ ಸಂಖ್ಯೆ ಹೆಚ್ಚಾಗಿದೆ.

    ಕೊರೊನಾ ಮೊದಲ ಅಲೆ ನಂತರದಲ್ಲಿ ಪ್ರವಾಸಿ ತಾಣಗಳ ವೀಕ್ಷಣೆಗೆ ಜನ ಬರುವುದು ಬಹಳ ವಿರಳವಾಗಿತ್ತು. ಆದರೆ ಎರಡನೇ ಅಲೆಯ ನಂತರ ಪ್ರವಾಸಿ ತಾಣಗಳ ವೀಕ್ಷಣೆಗೆ ಅವಕಾಶ ಕಲ್ಪಿಸಿದ ಮೇಲೆ ಒಂದೇ ವಾರಕ್ಕೆ ಜನ ಏರಿಕೆ ಕಾಣುತ್ತಿರುವುದು ಮೈಸೂರಲ್ಲಿ ಪ್ರವಾಸೋದ್ಯಮ ಚೇತರಿಕೆ ಕಾಣುವ ಶುಭ ಲಕ್ಷಣವಾಗಿದೆ.

    ಜೂಗೆ ಬರ್ತಿಲ್ಲ ಪ್ರವಾಸಿಗರು
    ಮೈಸೂರು ಮೃಗಾಲಯ ವೀಕ್ಷಣೆಗೆ ನಿರೀಕ್ಷಿತ ಮಟ್ಟದಲ್ಲಿ ಪ್ರವಾಸಿಗರು ಆಗಮಿಸಿಲ್ಲ. ಭಾನುವಾರದಂದು ಮೃಗಾಲಯ ವೀಕ್ಷಣೆಗೆ ಅತಿ ಹೆಚ್ಚಿನ ಪ್ರವಾಸಿಗರು ಬರುತ್ತಿದ್ದರು. ಆದರೆ ಇಂದು ಸಹ ಅಂತಹ ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಜೂ ವೀಕ್ಷಣೆಗೆ ಬಂದಿಲ್ಲ.

    ಕಳೆದ ಸೋಮವಾರದಿಂದ ಮೃಗಾಲಯ ವೀಕ್ಷಣೆಗೆ ಅವಕಾಶವಿದೆ. ಅವತ್ತಿನಿಂದ ನಿಧಾನವಾಗಿ ಪ್ರವಾಸಿಗರ ಸಂಖ್ಯೆ ಏರುತ್ತಿದೆ. ಆದರೆ ಭಾನುವಾರವೂ ನಿರೀಕ್ಷಿತ ಮಟ್ಟಕ್ಕೆ ತಲುಪಿಲ್ಲ. ಬಹುತೇಕ ಇಡೀ ದಿನಕ್ಕೆ ಜೂ ವೀಕ್ಷಿಸುವವರ ಸಂಖ್ಯೆ 2 ಸಾವಿರ ಗಡಿ ದಾಟುವುದು ಕಷ್ಟ. ಮಾಮೂಲಿಯ ದಿನಗಳಲ್ಲಿ ಭಾನುವಾರದಂದು ಕನಿಷ್ಟ 15 ಸಾವಿರ ಜನ ಜೂ ವೀಕ್ಷಣೆಗೆ ಬರುತ್ತಿದ್ದರು. ಆದರೆ ಇದೀಗ ತೀರಾ ಇಳಿಕೆ ಕಂಡಿದೆ.

  • ರಥ ಸಪ್ತಮಿ – ಕೋಟೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್

    ರಥ ಸಪ್ತಮಿ – ಕೋಟೆ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ ಯದುವೀರ್

    ಮೈಸೂರು: ಇಂದು ರಥ ಸಪ್ತಮಿ ಹಿನ್ನೆಲೆಯಲ್ಲಿ ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಉತ್ಸವ ಮೂರ್ತಿಗೆ ರಾಜವಂಶಸ್ಥ ಯದುವೀರ್ ವಿಶೇಷ ಪೂಜೆ ಸಲ್ಲಿಸಿದರು.

    ಕೋಟೆ ಆಂಜನೇಯ ದೇವಾಲಯ ಮುಂಭಾಗ ಮೈಸೂರು ಯೋಗ ಒಕ್ಕೂಟ ಪ್ರತಿ ವರ್ಷದಂತೆ ಈ ವರ್ಷವೂ ಸಾಮೂಹಿಕ ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಇದರಲ್ಲಿ ನೂರಾರು ಯೋಗ ಪಟುಗಳು ಭಾಗವಹಿಸಿ 108 ಸೂರ್ಯ ವಂದನೆ ಮಾಡಿದರು.

    ಈ ಸಂದರ್ಭದಲ್ಲಿ ಭಗವಾನ್ ಸೂರ್ಯ ನಾರಾಯಣ ಭಾವ ಚಿತ್ರವನ್ನು ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು.

  • ಬಂದ್ ಹೊತ್ತಲ್ಲೇ ಅರಮನೆ ಮುಂಭಾಗ ಪ್ರಿ ವೆಡ್ಡಿಂಗ್ ಫೋಟೋಶೂಟ್!

    ಬಂದ್ ಹೊತ್ತಲ್ಲೇ ಅರಮನೆ ಮುಂಭಾಗ ಪ್ರಿ ವೆಡ್ಡಿಂಗ್ ಫೋಟೋಶೂಟ್!

    ಮೈಸೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಸರ್ಕಾರದ ವಿರುದ್ಧ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡುತ್ತಿದ್ದರೆ ಇತ್ತ ನವ ಜೋಡಿಗಳಿಂದ ಪ್ರಿ ವೆಡ್ಡಿಂಗ್ ಫೋಟೋಶೂಟ್ ನಡೆದಿದೆ.

    ಹೌದು. ನಗರದಲ್ಲಿ ಸರ್ಕಾರ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಈ ಮಧ್ಯೆ ಮೂರಕ್ಕೂ ಹೆಚ್ಚು ನವಜೋಡಿಗಳು ಅರಮನೆ ಮುಂಭಾಗ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ನವಜೋಡಿಗಳು ಬಂದ್ ಮರೆತು ಫೋಟೋಶೂಟ್ ನಲ್ಲಿ ಮಗ್ನರಾಗಿದ್ದಾರೆ. ಕುದುರೆ ಸಾರೋಟ್ ನಲ್ಲಿ ಜೋಡಿಗಳ ಫೋಟೋಶೂಟ್ ನಡೆದಿದೆ.

    ಇತ್ತ ಮೈಸೂರಿನ ನಗರ ಬಸ್ ನಿಲ್ದಾದ ಬಳಿ ಕನ್ನಡಪರ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರ‍್ಯಾಲಿ ಮಾರ್ಗ ಬದಲಿಸಿ ಸಾಗಿದ ಕಾರ್ಯಕರ್ತರು, ಬಸ್ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ತಡೆಯಲು ಮುಂದಾಗಿದ್ದಾರೆ. ಅಲ್ಲದೆ ರಸ್ತೆಯಲ್ಲಿ ಮಲಗಿ ಪ್ರತಿಭಟನೆಗೆ ಮುಂದಾದರು. ಈ ವೇಳೆ ಎಲ್ಲ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

  • ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು, ಮಾಧ್ಯಮಕ್ಕೆ ನಿರ್ಬಂಧ

    ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು, ಮಾಧ್ಯಮಕ್ಕೆ ನಿರ್ಬಂಧ

    ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಪರಿಣಾಮ ಮೈಸೂರು ಅರಮನೆಯಲ್ಲಿ 2020ರ ಸಾಲಿನ ಮೈಸೂರು ರಾಜವಂಶದ ಖಾಸಗಿ ದಸರಾಗೆ ಸಾರ್ವಜನಿಕರು ಹಾಗೂ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ.

    ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಅರಮನೆಯ ದರ್ಬಾರ್ ಹಾಲ್‍ನಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಅಲ್ಲದೇ ಖಾಸಗಿ ದರ್ಬಾರ್ ವೀಕ್ಷಣೆ ಹಾಗೂ ನೇರ ಪ್ರಸಾರಕ್ಕೂ ಅವಕಾಶ ಇಲ್ಲದಂತಾಗಿದೆ.

    ಪ್ರತಿಕಾ ಪ್ರಕಟಣೆ:
    ಮೈಸೂರಿನಲ್ಲಿ ಹೆಚ್ಚಿನ ಕೋವಿಡ್ ಪ್ರಕರಣಗಳ ದೃಷ್ಟಿಯಿಂದ ಅರಮನೆಯಲ್ಲಿ 2020ರ ಸಾಲಿನ ಶರನ್ನವರಾತ್ರಿ ಸಂದರ್ಭದಲ್ಲಿ ಪೂಜಾ ವಿಧಿವಿಧಾನಗಳನ್ನ ಸಾಂಪ್ರದಾಯಿಕವಾಗಿ ನಡೆಸಲಾಗುವುದು. ಮುನ್ನೆಚ್ಚರಿಕೆ ಕ್ರಮ ಅವಶ್ಯಕವಾಗಿರುವುದರಿಂದ ಆಚರಣೆಯಲ್ಲಿ ಕುಟುಂಬ ಸದಸ್ಯರನ್ನು ಒಳಗೊಂಡಂತೆ ಸಾರ್ವಜನಿಕರು ಹಾಗೂ ಮಾಧ್ಯಮಗಳು ಭಾಗವಹಿಸುವಿಕೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

    ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ಸಹಕರಿಸಬೇಕು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

  • ಮೈಸೂರಿಗೆ ಕ್ಯಾಪ್ಟನ್ ಅಭಿಮನ್ಯು ಟೀಂ ಎಂಟ್ರಿ – ಇಂದು ಅರಮನೆ ಪ್ರವೇಶ

    ಮೈಸೂರಿಗೆ ಕ್ಯಾಪ್ಟನ್ ಅಭಿಮನ್ಯು ಟೀಂ ಎಂಟ್ರಿ – ಇಂದು ಅರಮನೆ ಪ್ರವೇಶ

    ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಅಧಿಕೃತವಾಗಿ ಗುರುವಾರ ಚಾಲನೆ ಸಿಕ್ಕಿದ್ದು, ದಸರಾದ ಮೊದಲ ಕಾರ್ಯಕ್ರಮವಾದ ಗಜಪಯಣ ಸಾಂಪ್ರದಾಯಿಕವಾಗಿ ನೇರವೇರಿದೆ.

    ಜಿಲ್ಲೆಯ ಹುಣಸೂರು ತಾಲೂಕಿನ ವೀರನಹೊಸಳ್ಳಿಯಲ್ಲಿ ಅಭಿಮನ್ಯು ನೇತೃತ್ವದ ಗಜಪಡೆಗೆ ಸಾಂಪ್ರದಾಯಿಕವಾಗಿ ಪೂಜೆ ನೇರವೇರಿಸಲಾಗಿದ್ದು, ಗುರುವಾರ ಮೈಸೂರಿನ ಅರಣ್ಯ ಭವನಕ್ಕೆ ಗಜಪಡೆ ಎಂಟ್ರಿ ಕೊಟ್ಟಿದೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮ್ಮುಖದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಪೂಜೆ ನೇರವೇರಿದೆ. ಶುಭ ಲಗ್ನದಲ್ಲಿ ಗಜಪಡೆಗೆ ಪುಷ್ಪಾರ್ಚನೆ ಮೂಲಕ ಪೂಜೆ ನೇರವೇರಿಸಿದ ಜಿಲ್ಲಾಡಳಿತ ಬಳಿಕ ಗಜಪಯಣಕ್ಕೆ ಚಾಲನೆ ನೀಡಿತು.

    ಸಿಂಗಾರಗೊಂಡ ಅಭಿಮನ್ಯು, ವಿಕ್ರಂ, ಗೋಪಿ, ವಿಜಯ, ಕಾವೇರಿ ಆನೆಗಳಿಗೆ ಫಲತಾಂಬೂಲ ನೀಡಿದರು. ಬಳಿಕ ಜಿಲ್ಲಾಡಳಿತದ ವತಿಯಿಂದ ಆನೆ ಮಾವುತರಿಗೆ ಸನ್ಮಾನ ಮಾಡಿ ಆತ್ಮೀಯವಾಗಿ ಗೌರವಿಸಿದರು. ನಂತರ ಅರಣ್ಯ ಇಲಾಖೆಯ ಟ್ರಕ್‍ಗಳ ಮೂಲಕ ಗಜಪಡೆ ಮೈಸೂರಿನ ಅರಣ್ಯ ಭವನಕ್ಕೆ ಎಂಟ್ರಿ ಕೊಟ್ಟಿದೆ. ನಿನ್ನೆಯೇ ಮೈಸೂರಿಗೆ ಗಜಪಡೆ ಬಂದರು ಸಹ ಇಂದು ಆನೆಗಳು ಅರಮನೆ ಪ್ರವೇಶ ಮಾಡಲಿವೆ.

    ಸದ್ಯಕ್ಕೆ ಮೈಸೂರಿನ ಅಶೋಕಪುರಂನ ಅರಣ್ಯ ಭವನದಲ್ಲೇ ಅಭಿಮನ್ಯು ತಂಡವನ್ನು ಇರಿಸಲಾಗಿದೆ. ಇಂದು ಅರಣ್ಯ ಭವನದಲ್ಲೂ ವಿಶೇಷ ಪೂಜೆ ನೇರವೇರಿಸಿ, ಮಧ್ಯಾಹ್ನ 12.18 ನಿಮಿಷದ ಶುಭ ಲಗ್ನದಲ್ಲಿ ಅರಮನೆಯಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ಸಿಗಲಿದೆ. ಈ ಕಾರ್ಯಕ್ರಮಕ್ಕೂ ಸಹ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗಜಪಡೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಅರಮನೆಗೆ ಗಜಪಡೆಯನ್ನ ಸಾಂಪ್ರದಾಯಿಕವಾಗಿ ಸ್ವಾಗತ ಕೋರಲಿದ್ದಾರೆ.

  • ಅರಮನೆ ಒಳಗೆ ಜಂಬೂ ಸವಾರಿಗಾಗಿ ಕಾಂಕ್ರೀಟ್ ರಸ್ತೆ

    ಅರಮನೆ ಒಳಗೆ ಜಂಬೂ ಸವಾರಿಗಾಗಿ ಕಾಂಕ್ರೀಟ್ ರಸ್ತೆ

    ಮೈಸೂರು: ಈ ಬಾರಿಯ ನಾಡಹಬ್ಬ ದಸರಾ ಅತಿ ಸರಳವಾದರೂ ಕೂಡ ಸಂಭ್ರಮದಿಂದ ಮಾಡುವುದಕ್ಕೆ ಅರಮನೆ ಆಡಳಿತ ಮಂಡಳಿ ಸಿದ್ಧವಾಗುತ್ತಿದೆ.

    ಅರಮನೆ ಅಂಗಳಕ್ಕೆ ಅ.2 ರಂದು ಐದು ಆನೆಗಳು ಬರಲಿವೆ. ಆನೆಗಳ ತಾಲೀಮಿಗೆ ಅರಮನೆ ಒಳ ಆವರಣದಲ್ಲೇ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿಸಿದೆ. ಈ ಮೂಲಕ ಆನೆಯ ತಾಲೀಮು ಹಾಗೂ ಕೋವಿಡ್ ಎಚ್ಚರಿಕೆಯನ್ನು ಸೂಕ್ಷ್ಮವಾಗಿ ನಿಭಾಯಿಸಲು ಸಿದ್ಧತೆ ನಡೆದಿದೆ.

    ಈ ಬಾರಿಯ ದಸರಾ ಜಂಬೂ ಸವಾರಿ ಅರಮನೆ ಒಳಗೆ ಮಾತ್ರ ನಡೆಯಲಿದೆ. ಹೀಗಾಗಿ ಕಾಡಿನಿಂದ ನಾಡಿಗೆ ಬರುವ ಐದು ಆನೆಗಳಿಗೆ ವಾಕಿಂಗ್ ಎಲ್ಲವು ಅರಮನೆ ಆವರಣದಲ್ಲೇ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ದಸರಾ ಗಜಪಡೆಯ ಆನೆಗಳಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿದ್ದು, ಸ್ವಚ್ಛತೆ ಹಾಗೂ ಆನೆಗಳ ತಾಲೀಮಿಗೆ ಸಿದ್ಧತೆ ಮಾಡಿಕೊಂಡಿದೆ.

    ಅ.2ರಂದು ಮೈಸೂರು ಅರಮನೆಗೆ ಬರುವ ಗಜಪಡೆಗೆ ವಾಕಿಂಗ್ ಮಾಡಲು ಅನುಕೂಲವಾಗುವಂತೆ ಅರಮನೆ ಒಳಗೆ ಕಾಂಕ್ರೀಟ್ ರಸ್ತೆಯನ್ನ ಮಾಡಿಸಲಾಗಿದೆ. ಈಗಾಗಲೇ ಜೆಸಿಬಿ ಮೂಲಕ ಗಿಡಗಂಟೆಗಳ ಶುಚಿತ್ವ ಕಾರ್ಯ ಮಾಡಲಾಗುತ್ತಿದೆ. ಅರಮನೆ ಅಂಗಳಕ್ಕೆ ಆನೆ ಬರುವ ಮುನ್ನವೇ ಅರಮನೆಯಲ್ಲಿ ಆನೆ ಇರಿಸುವ ಸ್ಥಳ, ಸ್ನಾನ ಮಾಡಿಸುವ ಸ್ಥಳ ಸೇರಿದಂತೆ ಸುತ್ತಮುತ್ತಲಿನ ವಾತಾವರಣ ಸ್ವಚ್ಛ ಮಾಡಲಾಗುತ್ತಿದೆ ಎಂದು ಅರಮನೆ ಆಡಳಿತ ಮಂಡಳಿಯ ಉಪ ನಿರ್ದೇಶಕ ಸುಬ್ರಮಣ್ಯ ತಿಳಿಸಿದರು.

    ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ಬಳಿಕ ಅರಮನೆಗೆ ಮಾತ್ರ ಸೀಮಿತವಾಗುವ ನಾಡಹಬ್ಬ ದಸರಾ ಕಳೆ ಕಟ್ಟಲು ಅರಮನೆ ಆಡಳಿತ ಮಂಡಳಿ ಸಾಕಷ್ಟು ಕ್ರಮವಹಿಸುತ್ತಿದೆ. ಕೋವಿಡ್‍ನಲ್ಲೂ ಅತಿ ಸರಳ ದಸರಾ ಮಾಡುತ್ತಿರುವ ಸರ್ಕಾರ ಎಲ್ಲಾ ವಿಚಾರಗಳ ಬಗ್ಗೆ ಸೂಕ್ಷ್ಮ ರೀತಿಯಲ್ಲಿ ಎಚ್ಚರವಹಿಸುತ್ತಿದೆ.