Tag: Palghar

  • ಸಾರಿಗೆ ಬಸ್‍ಗಳ ನಡುವೆ ಅಪಘಾತ – 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    ಸಾರಿಗೆ ಬಸ್‍ಗಳ ನಡುವೆ ಅಪಘಾತ – 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

    ಮುಂಬೈ: ಮಹಾರಾಷ್ಟ್ರ (Maharashtra) ರಾಜ್ಯ ಸಾರಿಗೆ ನಿಗಮದ ಎರಡು ಬಸ್‍ಗಳ (State Transport Bus) ನಡುವೆ ಅಪಘಾತವಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

    ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಜವಾಹರ್-ಸಿಲ್ವಾಸ್ಸಾ (Jawhar-Silvassa) ರಸ್ತೆಯಲ್ಲಿ ಘಟನೆ ನಡೆದಿದ್ದು, ಸಾರಿಗೆ ಸಂಸ್ಥೆಯ ಬಸ್‍ಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿವೆ. ಪರಿಣಾಮ 20ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪಾಲ್ಘರ್ ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಭೀಕರ ಅಪಘಾತದಲ್ಲಿ 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ದುರ್ಮರಣ

    ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳ ಸಂಖ್ಯೆ ಏರಿಕೆ ಆಗುವ ಸಾಧ್ಯತೆ ಇದೆ. ಎರಡು ಬಸ್‍ಗಳ ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಪಾಲ್ಘರ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದಯವಿಟ್ಟು ಭಾವೋದ್ವೇಗದಿಂದ ಮಾತನಾಡಬೇಡಿ – ರೇಣುಕಾಚಾರ್ಯಗೆ ಆರಗ ಜ್ಞಾನೇಂದ್ರ ಮನವಿ

    Live Tv
    [brid partner=56869869 player=32851 video=960834 autoplay=true]

  • ಕಿಡ್ನಾಪ್ ಮಾಡಿ  ನೌಕಾಪಡೆಯ ಅಧಿಕಾರಿಯನ್ನು ಪಾಲ್ಘಾರ್‌ನಲ್ಲಿ ಜೀವಂತ ಸುಟ್ಟರು

    ಕಿಡ್ನಾಪ್ ಮಾಡಿ ನೌಕಾಪಡೆಯ ಅಧಿಕಾರಿಯನ್ನು ಪಾಲ್ಘಾರ್‌ನಲ್ಲಿ ಜೀವಂತ ಸುಟ್ಟರು

    ಮುಂಬೈ: ನೌಕಾಪಡೆಯ ಅಧಿಕಾರಿಯೊಬ್ಬರನ್ನು ಅಪಹರಣ ಜೀವಂತವಾಗಿ ಸುಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ನಲ್ಲಿ ನಡೆದಿದೆ.

    ಹತ್ಯೆಯಾದ ನೌಕಾಪಡೆಯ ಅಧಿಕಾರಿಯನ್ನು ಸೂರಜ್ ಕುಮಾರ್ ದುಬೆ (27) ಎಂದು ಗುರುತಿಸಲಾಗಿದೆ. ಮೂಲತಃ ಜಾರ್ಖಂಡ್ ರಾಂಚಿಯವರಾದ ಸೂರಜ್ ಕುಮಾರ್ ಅವರನ್ನು ಚೆನ್ನೈ ವಿಮಾನ ನಿಲ್ದಾಣದಿಂದ 3 ಜನ ಅಪಹರಣಕಾರರು ಅಪಹರಣ ಮಾಡಿ ಮೊಬೈಲ್ ಕಸಿದುಕೊಂಡು ಕಾರಿನಲ್ಲಿ 3ದಿನ ಚೆನ್ನೈನಲ್ಲಿ ಇರಿಸಿ ನಂತರ ಪಾಲ್ಘರ್‍ ನ ವಿವಾಜಿಗೆ ಕರೆದುಕೊಂಡು ಹೋಗಿ ಇರಿಸಿಕೊಂಡಿದ್ದಾರೆ.

    ಅಪಹರಣಕಾರರು 10 ಲಕ್ಷ ರೂಪಾಯಿಗಾಗಿ ನೌಕಾಪಡೆಯ ಅಧಿಕಾರಿಯೊಂದಿಗೆ ಬೇಡಿಕೆ ಇಟ್ಟಿದ್ದರು. ಅದರೆ ಈ ಹಣವನ್ನು ಕೊಡಲು ಒಪ್ಪದ ಕಾರಣ ಫೆಬ್ರವರಿ 5ರಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸೂರಜ್ ಕುಮಾರ್ ಅವರನ್ನು ಕೊಂದಿದ್ದಾರೆ.

    ತೀವ್ರ ಸುಟ್ಟಗಾಯವಾಗಿದ್ದ ದುಬೆ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆದಿತ್ತು. ಆದರೆ ಅಷ್ಟರಲ್ಲಾಗಲೇ ಕೊನೆಯುಸಿರೆಳೆದಿದ್ದರು ಎಂದು ಪಾಲ್ಘರ್ ಎಸ್.ಪಿ ದತ್ತಾತ್ರೇಯ ಶಿಂಧೆ ತಿಳಿಸಿದ್ದಾರೆ.

    ಪಾಲ್ಘರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಹರಣಕಾರರನ್ನು ಪತ್ತೆಹಚ್ಚುವ ಕಾರ್ಯಕ್ಕೆ ಮುಂದಾಗಿದ್ದಾರೆ. ಈ ಹಿಂದೆ ಇಬ್ಬರು ಸಾಧುಗಳನ್ನು ಪಾಲ್ಘರ್‍ ನಲ್ಲಿ ಹತ್ಯೆ ಮಾಡಲಾಗಿತ್ತು, ಇದು ದೇಶಾದ್ಯಂತ ಬಾರಿ ಸುದ್ದಿಗೆ ಗ್ರಾಸವಾಗಿತ್ತು.

  • ಪೊಲೀಸರ ಮುಂದೆಯೇ ಎಳೆದಾಡಿ ಸಾಧುಗಳ ಹತ್ಯೆ – ವರದಿ ಕೇಳಿದ ಕೇಂದ್ರ

    ಪೊಲೀಸರ ಮುಂದೆಯೇ ಎಳೆದಾಡಿ ಸಾಧುಗಳ ಹತ್ಯೆ – ವರದಿ ಕೇಳಿದ ಕೇಂದ್ರ

    – ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
    – ಮಹಾರಾಷ್ಟ್ರದ ಪಾಲ್ಗಾರ್ ಜಿಲ್ಲೆಯಲ್ಲಿ ಘಟನೆ

    ನವದೆಹಲಿ: ಪೊಲೀಸರ ಎದುರೇ ಇಬ್ಬರು ಸಾಧು ಸೇರಿದಂತೆ ಮೂವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯ ಮಹಾರಾಷ್ಟ್ರ ಸರ್ಕಾರದಿಂದ ವರದಿ ಕೇಳಿದೆ.

    ಪಾಲ್ಗಾರ್ ಜಿಲ್ಲೆಯ ಗಡ್ಚಿಂಚಾಲೆ ಗ್ರಾಮದಲ್ಲಿ ಗುರುವಾರ ರಾತ್ರಿ ಮಕ್ಕಳ ಕಳ್ಳರೆಂದು ಭಾವಿಸಿ ಇಬ್ಬರು ಸಾಧು ಸೇರಿದಂತೆ ಕಾರು ಚಾಲಕನನ್ನು ಗ್ರಾಮಸ್ಥರು ದೊಣ್ಣೆಗಳಿಂದ ಬಡಿದು ಹತ್ಯೆ ಮಾಡಿದ್ದರು. ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ದೇಶಾದ್ಯಂತ ಭಾರೀ ಚರ್ಚೆಯಾಗುತ್ತಿದ್ದು, ಈ ಸಂಬಂಧ ಮಹಾರಾಷ್ಟ್ರ ಪೊಲೀಸರು ಇಲ್ಲಿಯವರೆಗೆ 110 ಮಂದಿಯನ್ನು ಬಂಧಿಸಿದ್ದಾರೆ.

    ವಿಡಿಯೋದಲ್ಲಿ ಏನಿದೆ?
    ಸಾಧುಗಳನ್ನು ಎಳೆದಾಡಿ ದೊಣ್ಣೆ, ಕಲ್ಲುಗಳಿಂದ ಹೊಡೆದಿದ್ದಾರೆ. ಈ ವೇಳೆ ಪೊಲೀಸರು ತಮ್ಮನ್ನು ರಕ್ಷಿಸಿ ಎಂದು ಪೊಲೀಸರ ಬಳಿ ಬೇಡಿಕೊಂಡಿದ್ದಾರೆ. ಪೊಲೀಸರು ಇದ್ದರೂ ಗ್ರಾಮಸ್ಥರು ಸಾಧುಗಳು ಪ್ರಯಾಣಿಸುತ್ತಿದ್ದ ಕಾರು ಮತ್ತು ಪೊಲೀಸರ ಗಸ್ತು ವಾಹನವನ್ನು ಧ್ವಂಸಗೊಳಿಸಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಮೂವರನ್ನು ಪೊಲೀಸರು ಆಸ್ಪತ್ರೆಗೆ ಸೇರಿಸಿದ್ದಾರೆ. ಅಷ್ಟರಲ್ಲಿ ಅವರು ಮೃತಪಟ್ಟಿದ್ದರು.

    ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದು, ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಈ ಕೃತ್ಯದಲ್ಲಿ ಭಾಗಿಯಾದವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಎಲ್ಲರಿಗೂ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಹೇಳಿದ್ದಾರೆ.

    ಈ ಕೃತ್ಯ ಎಸಗಿದ 110 ಮಂದಿಯನ್ನು ಬಂಧಿಸಲಾಗಿದೆ. ಈ ಪೈಕಿ 9 ಮಂದಿ ಬಾಲಾರೋಪಿಗಳಾಗಿದ್ದು, 101 ಮಂದಿಯನ್ನು ಏ.30ರ ವರೆಗೆ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪಾಲ್ಗಾರ್ ಪೊಲೀಸರು ಟ್ವೀಟ್ ಮಾಡಿ ತಿಳಿಸಿದ್ದಾರೆ.