Tag: pan india film

  • ತುಳುವಿನಲ್ಲೂ ರಿಲೀಸ್ ಆಗಲಿದೆ `ಕಾಂತಾರ’: ರಿಲೀಸ್ ಡೇಟ್ ಫಿಕ್ಸ್

    ತುಳುವಿನಲ್ಲೂ ರಿಲೀಸ್ ಆಗಲಿದೆ `ಕಾಂತಾರ’: ರಿಲೀಸ್ ಡೇಟ್ ಫಿಕ್ಸ್

    ರಿಷಬ್ ಶೆಟ್ಟಿ(Rishab Shetty) ನಿರ್ದೇಶಿಸಿ, ನಟಿಸಿರುವ `ಕಾಂತಾರ'(Kantara Film) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಿದೆ. `ಕಾಂತಾರ’ ಕನ್ನಡದಲ್ಲಿ ಕಮಾಲ್ ಮಾಡಿದ ಬೆನ್ನಲ್ಲೇ ತೆಲುಗು, ತಮಿಳು, ಮಲಯಾಳಂ ಭಾಷೆಯಲ್ಲೂ ಡಬ್ ಆಗಿ ತೆರೆಕಂಡಿತ್ತು. ಇದೀಗ ತುಳು ಭಾಷೆಯಲ್ಲೂ ಡಬ್ ಆಗಲಿದೆ. ಸದ್ಯದಲ್ಲೇ ತೆರೆಗೆ ಅಪ್ಪಳಿಸಲಿದೆ.

    ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ `ಕಾಂತಾರ’ ಸೂಪರ್ ಸಕ್ಸಸ್ ಖುಷಿಯಲ್ಲಿದ್ದಾರೆ. ಕನ್ನಡದ `ಕಾಂತಾರ'(Kantara Film) ಕಂಪು ಪಸರಿಸಿದ ಮೇಲೆ ಬಹುಭಾಷೆಯಲ್ಲಿ ಡಬ್ ಆಗಿ ರಿಲೀಸ್ ಬಳಿಕ ಗಲ್ಲಾಪೆಟ್ಟಿಗೆ ಕೋಟಿಗಟ್ಟಲ್ಲೇ ಕಲೆಕ್ಷನ್ ಮಾಡಿತ್ತು. ದೈವದ ಕಥೆಯಾಗಿರುವ `ಕಾಂತಾರ’ ತುಳುವಿನಲ್ಲಿಯೂ ತೆರೆ ಕಾಣುತ್ತಿದೆ. ಇದನ್ನೂ ಓದಿ:ಧ್ರುವ ಸರ್ಜಾ ಚಿತ್ರಕ್ಕೆ ಮಾಲಾಶ್ರೀ ಪುತ್ರಿ ರಾಧನಾ ರಾಮ್ ನಾಯಕಿ

    ಹೊಂಬಾಳೆ ಬ್ಯಾನರ್‌ನ `ಕಾಂತಾರ’ ಸಿನಿಮಾ ತುಳು ಭಾಷೆಯಲ್ಲೂ ಕೂಡ ಡಬ್ ಆಗಲಿದೆ. ಈಗಾಗಲೇ ಡಬ್ಬಿಂಗ್ ಪ್ರಕ್ರಿಯೆ ಕೂಡ ಶುರುವಾಗಿದೆ. ಸೆನ್ಸಾರ್ ಬಳಿಕ ಡಿಸೆಂಬರ್ ಮೊದಲ ವಾರದಲ್ಲಿ `ಕಾಂತಾರ’ ತುಳುವಿನಲ್ಲಿ ತೆರೆ ಕಾಣಲಿದೆ.

    ಇನ್ನೂ `ಕಾಂತಾರ’ ದೇಶದ ಎಲ್ಲೆಡೆ ಸಂಚಲನ ಮೂಡಿಸುತ್ತಿದೆ. ವರ್ಲ್ಡ್ ವೈಡ್ ಕಲೆಕ್ಷನ್ 367 ಕೋಟಿ ರೂ. ಕಲೆಕ್ಷನ್ ಮಾಡಿ 400 ಕೋಟಿ ರೂ. ಕಲೆಕ್ಷನ್ ಮಾಡುತ್ತ ರಿಷಬ್ ಶೆಟ್ಟಿ ಸಿನಿಮಾ ಮುನ್ನುಗ್ಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮೇಘಾ ಶೆಟ್ಟಿ-ಕವೀಶ್ ಶೆಟ್ಟಿ ನಟನೆಯ ಪ್ಯಾನ್ ಇಂಡಿಯಾ ಚಿತ್ರಕ್ಕೆ ರಿಷಬ್ ಶೆಟ್ಟಿ ಸಾಥ್

    ಮೇಘಾ ಶೆಟ್ಟಿ-ಕವೀಶ್ ಶೆಟ್ಟಿ ನಟನೆಯ ಪ್ಯಾನ್ ಇಂಡಿಯಾ ಚಿತ್ರಕ್ಕೆ ರಿಷಬ್ ಶೆಟ್ಟಿ ಸಾಥ್

    ಕಿರುತೆರೆಯ `ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಫೇಮಸ್ ಆಗಿರುವ ಮೇಘಾ ಶೆಟ್ಟಿ ಈಗ ಕನ್ನಡಸ ಸ್ಟಾರ್ ನಟರ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಜತೆಗೆ ಹೊಸ ಹೀರೋ ಕವೀಶ್ ಶೆಟ್ಟಿ ಜೊತೆಗೆ ಪ್ಯಾನ್ ಇಂಡಿಯಾದಲ್ಲೂ ಮೇಘಾ ಶೆಟ್ಟಿ ನಟಿಸಿದ್ದಾರೆ. ಇದೀಗ ಚಿತ್ರದ ಫಸ್ಟ್ ಲುಕ್ ಮತ್ತು ಟೈಟಲ್ ಅನ್ನು ನಟ ರಿಷಬ್ ಶೆಟ್ಟಿ ರಿವೀಲ್ ಮಾಡಿದ್ದಾರೆ. ಈ ಚಿತ್ರಕ್ಕೆ `ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಎಂದು ಹೆಸರು ಇಡಲಾಗಿದೆ.

    ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್‌ನ `ಆಫ್ಟರ್ ಆಪರೇಷನ್ ಲಂಡನ್ ಕೆಫೆ’ ಸಿನಿಮಾವು ಕನ್ನಡ, ಮರಾಠಿ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗಿದ್ದು, ಬಹುತೇಕ ಚಿತ್ರೀಕರಣ ಮುಗಿಸಿದೆ ಚಿತ್ರತಂಡ. ಇನ್ನು ನಾಯಕ ಕವೀಶ್ ಶೆಟ್ಟಿ ಹುಟ್ಟುಹಬ್ಬದ ಸಂದರ್ಭದಲ್ಲಿ ಉಡುಗೊರೆಯಾಗಿ ಟೈಟಲ್ ಬಿಡುಗಡೆ ಮಾಡಲಾಗಿದೆ. ನಿರ್ದೇಶಕ ರಿಷಬ್ ಶೆಟ್ಟಿ ಚಿತ್ರದ ಟೈಟಲ್ ರಿವೀಲ್ ಮಾಡಿ ಇಡೀ ಚಿತ್ರತಂಡಕ್ಕೆ ವಿಶ್ ಮಾಡಿದ್ದಾರೆ. ಇದೊಂದು ಆಕ್ಷನ್ ಜೊತೆ ಮುದ್ದಾದ ಪ್ರೇಮಕಥೆ ಇರೋ ಚಿತ್ರವಾಗಿದೆ. ಇದನ್ನೂ ಓದಿ:ಅಲ್ಲು ಅರ್ಜುನ್-ರಶ್ಮಿಕಾ ನಟನೆಯ ಸಾಮಿ ಸಾಮಿ ಹಾಡಿಗೆ ಹೆಜ್ಜೆ ಹಾಕಿದ ಅನನ್ಯಾ ಪಾಂಡೆ

     

    View this post on Instagram

     

    A post shared by Megha Shetty (@meghashetty_officiall)

    ಮೇಘಾ ಶೆಟ್ಟಿ, ಕವೀಶ್ ಶೆಟ್ಟಿ ಜೊತೆಗೆ ಮರಾಠಿ ಕಲಾವಿದರಾದ ಶಿವಾನಿ ಸುರ್ವೆ ಹಾಗೂ ವಿರಾಟ್ ಮಡ್ಕೆ ಕೂಡ ಬಣ್ಣ ಹಚ್ಚಿದ್ದಾರೆ. ಉಳಿದಂತೆ, ಈ ಸಿನಿಮಾದಲ್ಲಿ ಕನ್ನಡ, ಮರಾಠಿ ಸೇರಿದಂತೆ ಬಹುಭಾಷಾ ಕಲಾವಿದರು ಇರೋ ಚಿತ್ರಕ್ಕೆ ಸಡಗರ ರಾಘವೇಂದ್ರ ನಿರ್ದೇಶನ ಮಾಡಿದ್ದಾರೆ. ಹೆಸರಾಂತ ಡ್ರೀಮರ್ಸ್ ಪ್ರೊಡಕ್ಷನ್ ದೀಪಕ್ ರಾಣೆ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಭಿನ್ನ ಕಥೆಯ ಮೂಲಕ ನಟಿ ಮೇಘಾ ಶೆಟ್ಟಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಸದ್ಯದಲ್ಲೇ ರಿಲೀಸ್ ಆಗಲಿರುವ ಈ ಚಿತ್ರಕ್ಕೆ ಅಭಿಮಾನಿಗಳು ಅಪ್ಪಿ ಒಪ್ಪಿಕೊಳ್ತಾರಾ ಅಂತಾ ಕಾದು ನೋಡಬೇಕಿದೆ.

  • ರಾಮ್ ಪೋತಿನೇನಿ ಸಿನಿಮಾಗೆ ಅಖಂಡ ಡೈರೆಕ್ಟರ್ ನಿರ್ದೇಶನ

    ರಾಮ್ ಪೋತಿನೇನಿ ಸಿನಿಮಾಗೆ ಅಖಂಡ ಡೈರೆಕ್ಟರ್ ನಿರ್ದೇಶನ

    ತೆಲುಗಿನ ಕ್ರೇಜಿಸ್ಟಾರ್ ಎಂದೇ ಖ್ಯಾತರಾಗಿರುವ ರಾಮ್ ಪೋತಿನೇನಿ ಇದೀಗ ಪ್ಯಾನ್ ಇಂಡಿಯಾ ಸಿನಿಮಾವನ್ನು ಒಪ್ಪಿಕೊಂಡಿದ್ದು, ಈ ಚಿತ್ರಕ್ಕೆ ಅಖಂಡ ಚಿತ್ರ ಖ್ಯಾತಿಯ ನಿರ್ದೇಶಕ ಬೋಯಾಪಟಿ ಶ್ರೀನು ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ : ಹಿರಿಯ ನಟ ರಾಜೇಶ್ ಅವರ ಅಪರೂಪದ ಫೋಟೋಗಳು


    ಟಾಲಿವುಡ್ ನ ಸೂಪರ್ ಸ್ಟಾರ್ ನಂದಮೂರಿ ಬಾಲಕೃಷ್ಣ ಹಾಗೂ ಬೋಯಾಪಟಿ ಶ್ರೀನು ಕಾಂಬೋದ ‘ಅಖಂಡ’ ಸಿನಿಮಾ ಬ್ಲಾಕ್ ಬಸ್ಟರ್ ಲಿಸ್ಟ್ ಗೆ ಸೇರಿದ ಬೆನ್ನಲ್ಲೇ ಈ ಹೊಸ ಸಿನಿಮಾ ಬರುತ್ತಿದ್ದು ಪ್ರೇಕ್ಷಕರಿಗೆ ಕುತೂಹಲ ಮೂಡಿಸಿದೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದರಿಂದ, ಚಿತ್ರದಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವ ಚರ್ಚೆ ಕೂಡ ನಡೆದಿದೆ. ಇದನ್ನೂ ಓದಿ : ರಾಜೇಶ್ ನಟನೆಯ ಸೂಪರ್ ಹಿಟ್ ಹಾಡುಗಳಿವು


    ನಿರ್ಮಾಪಕ ಶ್ರೀನಿವಾಸ ಚಿತ್ತೂರಿ ಶ್ರೀನಿವಾಸ ತಮ್ಮದೇ ಸಿಲ್ವರ್ ಸ್ಕ್ರೀನ್ ಬ್ಯಾನರ್‌ನ ಅಡಿಯಲ್ಲಿ ಎರಡು ಬ್ಯಾಕ್ ಟು ಬ್ಯಾಕ್ ಬ್ಲಾಕ್‌ಬಸ್ಟರ್‌ಗಳ ನೀಡಿದ್ದು, ಸದ್ಯ ರಾಮ್ ಪೋತಿನೇನಿ ಅಭಿನಯದ ಮತ್ತು ಎನ್ ಲಿಂಗುಸಾಮಿ ನಿರ್ದೇಶನದ ದಿ ವಾರಿಯರ್ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈ ಸಿನಿಮಾ ರಿಲೀಸ್ ಮುನ್ನ ಮತ್ತೊಂದು ಸಿನಿಮಾವನ್ನು ಅನೌನ್ಸ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಇದನ್ನೂ ಓದಿ : ಮುನಿ ಚೌಡಪ್ಪ (ವಿದ್ಯಾಸಾಗರ್) ಹೆಸರು ರಾಜೇಶ್ ಆಗಿದ್ದು ಹೇಗೆ?


    ಒಂದು ಮೆಗಾ ಪ್ರಾಜೆಕ್ಟ್ ಸಿನಿಮಾ ಆಗಿದ್ದು, ಸದ್ಯದಲ್ಲಿಯೇ ಸಿನಿಮಾದ ಟೈಟಲ್, ನಾಯಕಿ ಮತ್ತು ಇತರ ಪಾತ್ರವರ್ಗಗಳ‌ ಬಗ್ಗೆ ಮಾಹಿತಿ ನೀಡಲಿದೆಯಂತೆ ಚಿತ್ರತಂಡ.