Tag: panjab

  • ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

    ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

    ಚಂಡೀಗಢ: ಮನೆಯ ಬಳಿ ವಾಕಿಂಗ್ ಮಾಡುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ಮೃತಪಟ್ಟಿರುವ ಘಟನೆ ಜಲಂಧರ್‌ನಲ್ಲಿ ನಡೆದಿದೆ.

    ಫೌಜಾ ಸಿಂಗ್ ಅವರಿಗೆ 114 ವರ್ಷ ವಯಸ್ಸಾಗಿತ್ತು. ಫೌಜಾ ಅವರು ಸಂಜೆ ತಮ್ಮ ಮನೆಯ ಬಳಿ ವಾಕಿಂಗ್ ಹೋಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಉಕ್ರೇನ್ ಪ್ರಧಾನಿ ಡೆನಿಸ್ ಶ್ಮಿಹಾಲ್ ರಾಜೀನಾಮೆ

    2000ರಲ್ಲಿ ಮ್ಯಾರಥಾನ್ ಪ್ರಯಾಣ ಆರಂಭಿಸಿದ್ದ ಫೌಜಾ ಸಿಂಗ್, 8 ಮ್ಯಾರಾಥಾನ್‌ಗಳಲ್ಲಿ ಭಾಗವಹಿಸಿದ್ದರು. ಈ ಮೂಲಕ ಅತ್ಯಂತ ಹಿರಿಯ ಮ್ಯಾರಾಥಾನ್ ಓಟಗಾರ ಎಂದು ಪ್ರಸಿದ್ಧಿ ಪಡೆದಿದ್ದರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಿರಲಿಲ್ಲ. ಇದನ್ನೂ ಓದಿ: ಉತ್ತರಾಖಂಡ | 150 ಅಡಿ ಆಳದ ಕಂದಕಕ್ಕೆ ಬಿದ್ದ ಬೊಲೆರೋ – 8 ಮಂದಿ ದುರ್ಮರಣ, ಐವರು ಗಂಭೀರ

    ಅವರು ಕೊನೆಯದಾಗಿ 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಕಾಂಗ್‌ನಲ್ಲಿ ನಡೆದ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು. ಫೌಜಾ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಭೂಸ್ವಾಧೀನ ಕೈಬಿಟ್ಟ ಕರ್ನಾಟಕ ಸರ್ಕಾರ – ಏರೋಸ್ಪೇಸ್ ಉದ್ಯಮಿಗಳಿಗೆ ಬಹಿರಂಗ ಆಹ್ವಾನ ನೀಡಿದ ಆಂಧ್ರ ಸಿಎಂ ಪುತ್ರ

    ಫೌಜಾ ಸಿಂಗ್ ಅವರಿಗೆ ಡಿಕ್ಕಿ ಹೊಡೆದ ಕಾರಿನ ಮಾಹಿತಿ ಪತ್ತೆಯಾಗಿಲ್ಲ. ಈ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

  • ಪಂಜಾಬ್‌ನಲ್ಲಿ ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್ – ಪ್ರೊಫೆಸರ್ ಅರೆಸ್ಟ್

    ಪಂಜಾಬ್‌ನಲ್ಲಿ ಏರೋಸ್ಪೇಸ್ ಎಂಜಿನಿಯರ್ ಸಾವು ಕೇಸ್ – ಪ್ರೊಫೆಸರ್ ಅರೆಸ್ಟ್

    ಮಂಗಳೂರು: ಪಂಜಾಬ್‌ನಲ್ಲಿ ಧರ್ಮಸ್ಥಳ(Dharmasthala) ಮೂಲದ ಏರೋಸ್ಪೇಸ್ ಎಂಜಿನಿಯರ್(Aerospace Engineer) ಆಕಾಂಕ್ಷ ಸಾವು ಪ್ರಕರಣದಲ್ಲಿ ಪ್ರೊಫೆಸರ್(Professor) ಒಬ್ಬನನ್ನು ಜಲಂಧರ್ ಪೊಲೀಸರು ಬಂಧಿಸಿದ್ದಾರೆ.

    ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯ ಪ್ರೊಫೆಸರ್ ಬಿಜಿಲ್ ಮ್ಯಾಥ್ಯೂ(45) ಬಂಧಿತ ಆರೋಪಿ. ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ

    ಆಕಾಂಕ್ಷ ಸಾವಿಗೆ ಯೂನಿವರ್ಸಿಟಿಯ ಪ್ರಾಧ್ಯಾಪಕ ಬಿಜಿಲ್ ಮ್ಯಾಥ್ಯೂ(Bijil Mathew) ಕಾರಣ ಎಂದು ಜಲಂಧರ್ ಪೊಲೀಸ್ ಠಾಣೆಗೆ ಆಕಾಂಕ್ಷ ಹೆತ್ತವರು ದೂರು ನೀಡಿದ್ದರು. ಆಕಾಂಕ್ಷ ಮೊಬೈಲ್ ಪಡೆದು ತನಿಖೆ ನಡೆಸಿರುವ ಪೊಲೀಸರಿಗೆ ಸಾವಿಗೂ ಮುನ್ನ ಆಕಾಂಕ್ಷ, ಬಿಜಿಲ್ ಮಾಥ್ಯೂಗೆ ತಾನು ಆತ್ಮಹತ್ಯೆ ಮಾಡಿಕೊಳ್ಳೊದಾಗಿ ಮೆಸೇಜ್ ಮಾಡಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆ; ಕುಮಟಾ-ಸಿದ್ದಾಪುರ ರಸ್ತೆ ಜಲಾವೃತ

    ಅಲ್ಲದೇ ಆಕಾಂಕ್ಷ ಆತ್ಮಹತ್ಯೆಯ ಬಳಿಕ ಬಿಜಿಲ್ ಮಾಥ್ಯೂ ತಲೆಮರಿಸಿಕೊಂಡಿದ್ದ. ಇದೀಗ ಜಲಂಧರ್ ಪೊಲೀಸರು ಬಿಜಲ್ ಮ್ಯಾಥ್ಯೂನನ್ನು ಬಂಧಿಸಿದ್ದಾರೆ. ಕಾಲೇಜಿನಿಂದ ಕೂಡ ಮ್ಯಾಥ್ಯೂನನ್ನು ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ

    ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್‌ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಹೆಚ್ಚಿನ ತರಬೇತಿಗೆ ಜರ್ಮನಿಗೆ ತೆರಳಲು ತಯಾರಿ ನಡೆಡಸಿದ್ದ ಆಕಾಂಕ್ಷ ಕೆಲವು ಶೈಕ್ಷಣಿಕ ದಾಖಲೆಗಳನ್ನು ಶುಕ್ರವಾರ ಪಂಜಾಬ್‌ನ(Panjab) ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಬಳಿಕ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಳು. ಇದನ್ನೂ ಓದಿ: 1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್

    ಆಕಾಂಕ್ಷಗೆ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಜೊತೆ ಪ್ರೇಮಾಂಕುರವಾಗಿತ್ತು. ಅಲ್ಲದೇ ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದಳು. ಬಳಿಕ ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಳು.

  • ಅಮೆರಿಕ ನಾಲ್ಕನೇ ಹಂತದ ಗಡಿಪಾರು: 12 ಮಂದಿ ಅಕ್ರಮ ವಲಸಿಗರು ಭಾರತಕ್ಕೆ

    ಅಮೆರಿಕ ನಾಲ್ಕನೇ ಹಂತದ ಗಡಿಪಾರು: 12 ಮಂದಿ ಅಕ್ರಮ ವಲಸಿಗರು ಭಾರತಕ್ಕೆ

    ನವದೆಹಲಿ: ಅಮೆರಿಕದಿಂದ (America) ಗಡಿಪಾರು ಮಾಡಲಾದ ಭಾರತೀಯ ಅಕ್ರಮ ವಲಸಿಗರ (Indian Migrants) ನಾಲ್ಕನೇ ಬ್ಯಾಚ್ ಇಂದು ದೆಹಲಿಗೆ (Delhi) ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಅಮೆರಿಕದ ಮಿಲಿಟರಿ ವಿಮಾನದಲ್ಲಿ ಪನಾಮ ಮೂಲಕ 12 ಭಾರತೀಯರು ತಾಯ್ನಾಡಿಗೆ ಬಂದಿಳಿದಿದ್ದಾರೆ. 12 ಜನರಲ್ಲಿ ನಾಲ್ವರು ಪಂಜಾಬ್‌ನ ಅಮೃತಸರಕ್ಕೆ ತೆರಳಿದ್ದಾರೆ. ಇದನ್ನೂ ಓದಿ: ಲೆಕ್ಕಪತ್ರ ನೀಡದ್ದಕ್ಕೆ ಬಿಷಪ್‍ಗೆ ಘೇರಾವ್ – ಚರ್ಚ್‍ನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ!

    ಮೊದಲ ಹಂತದಲ್ಲಿ ಅಕ್ರಮವಾಗಿ ಅಮೆರಿಕ ಪ್ರವೇಶಿಸಿದ್ದ 205 ಭಾರತೀಯರನ್ನು ಅಮೆರಿಕ ಮಿಲಿಟರಿ ವಿಮಾನದಲ್ಲಿ ಭಾರತಕ್ಕೆ ವಾಪಾಸ್ ಕರೆತರಲಾಗಿತ್ತು. 2ನೇ ಹಂತದ ಗಡಿಪಾರಿನಲ್ಲಿ 119 ಮಂದಿ ಹಾಗೂ 3ನೇ ಹಂತದಲ್ಲಿ 112 ಭಾರತೀಯ ಅಕ್ರಮ ವಲಸಿಗರನ್ನು ಅಮೆರಿಕ ಸರ್ಕಾರ ಗಡಿಪಾರು ಮಾಡಿತ್ತು. ಇದನ್ನೂ ಓದಿ: ಪಾಕಿಸ್ತಾನ ಆಲೌಟ್‌ – ಭಾರತಕ್ಕೆ 242 ರನ್‌ಗಳ ಟಾರ್ಗೆಟ್‌

  • ಪಾಕ್‌ನಲ್ಲಿ ಉಗ್ರರ ದಾಳಿ | ಬಸ್ಸಿನಿಂದ ಇಳಿಸಿ ಗುರುತು ಚೆಕ್‌ ಮಾಡಿ ಶೂಟೌಟ್‌ – 23 ಮಂದಿ ಬಲಿ

    ಪಾಕ್‌ನಲ್ಲಿ ಉಗ್ರರ ದಾಳಿ | ಬಸ್ಸಿನಿಂದ ಇಳಿಸಿ ಗುರುತು ಚೆಕ್‌ ಮಾಡಿ ಶೂಟೌಟ್‌ – 23 ಮಂದಿ ಬಲಿ

    ಬಲೂಚಿಸ್ತಾನ್: ಪಾಕಿಸ್ತಾನದ (Pakistan) ಬಲೂಚಿಸ್ತಾನ್ ಮುಸಾಖೆಲ್ ಜಿಲ್ಲೆಯಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು ಕನಿಷ್ಠ 23 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಭಯೋತ್ಪಾದಕರು ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಿಸಲು ಒತ್ತಾಯಿಸಿ, ಅವರ ಗುರುತುಗಳನ್ನು ಪರಿಶೀಲಿಸಿದ ನಂತರ ಗುಂಡು ಹಾರಿಸಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ದ.ಕೊರಿಯಾ ಆಟಗಾರರ ಜೊತೆ ಸೆಲ್ಫಿ – ಕ್ರೀಡಾಪಟುಗಳ ವಿರುದ್ಧ ಕ್ರಮಕ್ಕೆ ಮುಂದಾದ ಉ.ಕೊರಿಯಾ

    ಮುಸಖೇಲ್‌ನ ರಾರಶಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಅಂತರ-ಪ್ರಾಂತೀಯ ಹೆದ್ದಾರಿಯನ್ನು ತಡೆದು ಪ್ರಯಾಣಿಕರನ್ನು ಬಸ್‌ಗಳಿಂದ ಕೆಳಗಿಳಿಸಿದರು ಎಂದು ಸಹಾಯಕ ಕಮಿಷನರ್ ಮುಸಖೈಲ್ ನಜೀಬ್ ಕಾಕರ್ ಉಲ್ಲೇಖಿಸಿ ಡಾನ್ ವರದಿ ಮಾಡಿದೆ. ಇದನ್ನೂ ಓದಿ: ಫುಟ್‌ಪಾತ್ ಮೇಲೆ ಮಲಗಿದ್ದವರ ಮೇಲೆ ಹರಿದ ಟ್ರಕ್ – ಮೂವರ ದುರ್ಮರಣ

     

    ಮೃತರು ಪಂಜಾಬ್ (Panjab) ಮೂಲದವರು ಎಂದು ಗುರುತಿಸಲಾಗಿದೆ. ಇದರ ಜೊತೆಗೆ ಉಗ್ರರು 10 ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇಲ್ಲಿಯವರೆಗೆ ಯಾವುದೇ ಗುಂಪು ದಾಳಿಯ ಹೊಣೆ ಹೊತ್ತುಕೊಂಡಿಲ್ಲ. ಘಟನೆಯನ್ನು ಖಂಡಿಸಿರುವ ಬಲೂಚಿಸ್ತಾನ ಮುಖ್ಯಮಂತ್ರಿ ಸರ್ಫರಾಜ್ ಬುಗ್ತಿ ಮೃತರ ಕುಟುಂಬಗಳಿಗೆ ಸಹಾನುಭೂತಿ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲಡಾಖ್‌ನಲ್ಲಿ 5 ಹೊಸ ಜಿಲ್ಲೆಗಳ ಸ್ಥಾಪನೆ: ಅಮಿತ್ ಶಾ ಘೋಷಣೆ

    ಪಾಕಿಸ್ತಾನದ ಫೆಡರಲ್ ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್, ಮುಸಖೈಲ್ ಬಳಿ ಮುಗ್ಧ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ನಡೆಸಿರುವ ದಾಳಿ ಭಯೋತ್ಪಾದಕರ ಕ್ರೂರತೆಯನ್ನು ತೋರಿಸಿದೆ. ಭಯೋತ್ಪಾದಕರು ಮತ್ತು ಅವರ ಸಹಾಯಕರನ್ನು ತಪ್ಪಿಸಿಕೊಳ್ಳಲು ನಾವು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರ ಚುನಾವಣೆ: ಇಂದು ಬೆಳಗ್ಗೆ ಬಿಡುಗಡೆ ಮಾಡಿದ್ದ ಮೊದಲ ಪಟ್ಟಿ ಹಿಂಪಡೆದ ಬಿಜೆಪಿ

    ಸುಮಾರು ನಾಲ್ಕು ತಿಂಗಳ ಹಿಂದೆ ಇದೇ ರೀ ತಿಯ ಕ್ರೂರ ಘಟನೆ ನಡೆದಿತ್ತು. ಏಪ್ರಿಲ್‌ನಲ್ಲಿ(April) ಒಂಬತ್ತು ಪ್ರಯಾಣಿಕರನ್ನು ನೋಶ್ಕಿ ಬಳಿ ಬಸ್‌ನಿಂದ ಬಲವಂತವಾಗಿ ಹೊರ ಕರೆದು ಬಂದೂಕುಧಾರಿಗಳು ಐಡಿ ತಪಾಸಣೆಯನ್ನು ಮಾಡಿ, ಗುರುತನ್ನು ಪರಿಶೀಲಿಸಿದ ಬಳಿ ಹತ್ಯೆ ಮಾಡಿದ್ದರು ಎಂದು ಡಾನ್ ವರದಿ ಮಾಡಿದೆ. ಇದನ್ನೂ ಓದಿ: ಕೀಬೋರ್ಡ್‌ನಲ್ಲಿ ಡಾಲರ್ ಬದಲು ರೂಪಿ ಚಿಹ್ನೆ ಯಾಕಿಲ್ಲ – ಓಲಾ ಸಿಇಒ ಪ್ರಶ್ನೆ

  • ಸಿಧು ಮೂಸೆವಾಲಾ ಹತ್ಯೆ ಕೇಸ್ – ಮೂವರು ಅರೆಸ್ಟ್

    ಸಿಧು ಮೂಸೆವಾಲಾ ಹತ್ಯೆ ಕೇಸ್ – ಮೂವರು ಅರೆಸ್ಟ್

    ನವದೆಹಲಿ: ಖ್ಯಾತ ಪಂಜಾಬಿ ಗಾಯಕ (Punjabi Singer) ಹಾಗೂ ರಾಜಕೀಯ ನಾಯಕ ಸಿಧು ಮೂಸೆವಾಲಾ (Sidhu MooseWala) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ.

    ದೀಪಕ್, ಕಪಿಲ್ ಪಂಡಿತ್, ರಾಜೇಂದ್ರ ಬಂಧಿತ ಆರೋಪಿಗಳು. ಪಂಜಾಬ್, ದೆಹಲಿ (NewDelhi) ಹಾಗೂ ಕೇಂದ್ರದ ತನಿಖಾ ಏಜೆನ್ಸಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂಸೆವಾಲಾರನ್ನ ಹತ್ಯೆ ಮಾಡಿದ ಆರೋಪಿ ದೀಪಕ್ ಹಾಗೂ ಈತನಿಗೆ ಸಹಕಾರ ನೀಡಿದ್ದ ಇಬ್ಬರನ್ನೂ ಬಂಧಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಈ ಬಾರಿ ದಸರಾ ಉದ್ಘಾಟನೆ – ಸಿಎಂ

    ಇತ್ತೀಚೆಗೆ ಸಿಧು ಮೂಸೆವಾಲಾರನ್ನ ಗುಂಡಿಕ್ಕಿ ಕೊಂದಿದ್ದ ಪ್ರಮುಖ ಆರೋಪಿಯನ್ನ ದೆಹಲಿ ಪೊಲೀಸರ ವಿಶೇಷ ತಂಡ ಬಂಧಿಸಿತು. ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗೋಲ್ಡಿ ಬ್ರಾರ್ ಗ್ಯಾಂಗ್‌ಗೆ ಸೇರಿದ ಇಬ್ಬರು ದರೋಡೆಕೋರರನ್ನು ಬಂಧಿಸಿದ್ದು, ಇಬ್ಬರ ಪೈಕಿ ಆರೋಪಿ ಅಂಕಿತ್ ಸಿರ್ಸಾ ಸಿಧು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಶೂಟರ್‌ಗಳಲ್ಲಿ ಒಬ್ಬನಾಗಿದ್ದ ಎಂದು ಪೊಲೀಸರ ತಂಡ ಹೇಳಿತ್ತು. ಇದನ್ನೂ ಓದಿ: ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ – ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

    ಇದಾದ ಬಳಿಕ ಪಂಜಾಬ್‌ನ ಅಮೃತಸರದ ಸಮೀಪ ಒಂಟಿ ಮನೆಯೊಂದರಲ್ಲಿ ಅವಿತು ಕುಳಿತಿದ್ದ ನಾಲ್ವರ ಮೇಲೆ ಪೊಲೀಸರು (Police) ಗುಂಡಿನ ದಾಳಿ ನಡೆಸಿದ್ದರು. ಪಾಕಿಸ್ತಾನ ಗಡಿಯಿಂದ ಕೇವಲ 10 ಕಿಮೀ ದೂರದ ಹಳ್ಳಿಯಲ್ಲಿ ಗುಂಡಿನ ಮಳೆಗರೆದು ಲಾರೆನ್ಸ್ ಬಿಷ್ಣೋಯ್ ಗೋಲ್ಡಿ ಬ್ರಾರ್ ಗ್ಯಾಂಗ್‌ನ ನಾಲ್ವರನ್ನು ಕೊಲ್ಲಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ

    ಪಂಜಾಬ್‍ನಲ್ಲಿ ಬಿಹಾರದ ಜನತೆ ಎಷ್ಟಿದ್ದಾರೆ ಎನ್ನುವುದು ಕಾಂಗ್ರೆಸ್‍ಗೆ ತಿಳಿದಿದೆಯೇ: ನಿತೀಶ್ ಕುಮಾರ್ ಕಿಡಿ

    ಪಾಟ್ನಾ: ಪಂಜಾಬ್‍ಗೆ ಬಿಹಾರದ ಜನರು ನೀಡಿರುವ ಕೊಡುಗೆ ಎಷ್ಟು ಮತ್ತು ಅಲ್ಲಿ ಎಷ್ಟು ಜನರು ವಾಸಿಸುತ್ತಿದ್ದಾರೆ ಎಂಬುದು ಕಾಂಗ್ರೆಸ್‍ನವರಿಗೆ ತಿಳಿದಿದೆಯೇ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಶ್ನಿಸಿದ್ದಾರೆ.

    ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್‍ಗೆ ಬರಲು ಬಿಡಬೇಡಿ ಎಂಬ ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಜನರು ಇಂತಹ ಹೇಳಿಕೆಗಳನ್ನು ಹೇಗೆ ನೀಡುತ್ತಾರೆಂದು ನನಗೆ ದಿಗ್ಭ್ರಮೆಯಾಗಿದೆ ಎಂದು ಹೇಳಿದರು.

    ಉತ್ತರ ಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಪಂಜಾಬ್ ಸಿಎಂ ಚರಣ್‍ಜಿತ್ ಸಿಂಗ್ ಹೇಳಿಕೆಗೆ ಬಿಜೆಪಿ ವ್ಯಾಪಕ ವಿರೋಧ ವ್ಯಕ್ತಪಡಿಸಿತ್ತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತನಾಡಿ, ಕಾಂಗ್ರೆಸ್ ಮತ್ತು ಪಂಜಾಬ್ ಮುಖ್ಯಮಂತ್ರಿ ಮತಕ್ಕಾಗಿ ದೇಶವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿ, ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಮತಕ್ಕಾಗಿ ಕಾಂಗ್ರೆಸ್, ಪಂಜಾಬ್ ಸಿಎಂ ದೇಶವನ್ನು ವಿಭಜಿಸಲು ಯತ್ನಿಸುತ್ತಿದ್ದಾರೆ: ಯೋಗಿ ಆದಿತ್ಯನಾಥ್

    ನಿನ್ನೆ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿದ್ದರು. ಇದನ್ನೂ ಓದಿ: ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

  • ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

    ಯುಪಿ, ಬಿಹಾರದ ಜನತೆಗೆ ಪಂಜಾಬ್ ಪ್ರವೇಶಿಸಲು ಬಿಡಬೇಡಿ: ಚನ್ನಿ ವಿರುದ್ಧ ಬಿಜೆಪಿ, ಆಪ್ ಕೆಂಡ

    ಚಂಡೀಗಢ: ಉತ್ತರಪ್ರದೇಶ, ಬಿಹಾರದವರನ್ನು ಪಂಜಾಬ್‍ಗೆ ಪ್ರವೇಶಿಸಲು ಬಿಡಬೇಡಿ ಎಂಬ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಹೇಳಿಕೆಗೆ ಬಿಜೆಪಿ ಹಾಗೂ ದೆಹಲಿ ಮುಖ್ಯಮಂತ್ರಿ ಕಿಡಿಕಾರಿದ್ದಾರೆ.

    ಉತ್ತರಪ್ರದೇಶ ಮತ್ತು ಬಿಹಾರದ ಜನರನ್ನು ಪಂಜಾಬ್‍ನ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವಮಾನಿಸಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

    ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರೂ ಚನ್ನಿ ಹೇಳಿಕೆಯನ್ನು ಟೀಕಿಸಿದ್ದಾರೆ. ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಕಾಮೆಂಟ್ ಮಾಡುವುದನ್ನು ಖಂಡಿಸುತ್ತೇನೆ. ಪ್ರಿಯಾಂಕಾ ಗಾಂಧಿ ಕೂಡ ಉತ್ತರ ಪ್ರದೇಶಕ್ಕೆ ಸೇರಿದವರು. ಆದ್ದರಿಂದ ಅವರನ್ನು ಬರಲು ಬಿಡಬಾರದು ಎಂದು ವಾಗ್ದಾಳಿ ನಡೆಸಿದರು.

    ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ಉತ್ತರಪ್ರದೇಶ, ಬಿಹಾರದ ಜನರನ್ನು ಪಂಜಾಬ್ ಪ್ರವೇಶಿಸಲು ಬಿಡಬೇಡಿ ಎಂದು ಹೇಳಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ನಗುತ್ತಾ ಚಪ್ಪಾಳೆ ತಟ್ಟಿದ್ದರು. ಇದನ್ನೂ ಓದಿ: NSA ಅಜಿತ್ ದೋವಲ್ ನಿವಾಸಕ್ಕೆ ಅಕ್ರಮ ಪ್ರವೇಶ – ವ್ಯಕ್ತಿ ಬಂಧನ

    ಪಂಜಾಬ್‍ನಲ್ಲಿ ಫೆಬ್ರವರಿ 20 ರಂದು 117 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪಂಜಾಬ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತವಾಗಿ ಚರಣ್‍ಜಿತ್ ಸಿಂಗ್ ಚನ್ನಿಯನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಈಗಾಗಲೇ ಘೋಷಿಸಿದೆ. ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಚನ್ನಿ ಅವರ ನಾಮನಿರ್ದೇಶನದೊಂದಿಗೆ, ಪಂಜಾಬ್‍ನ ದಲಿತ ಮತದಾರರನ್ನು ಗೆಲ್ಲಲು ಕಾಂಗ್ರೆಸ್ ಯೋಚಿಸುತ್ತಿದೆ. ಪಂಜಾಬ್‍ನ ಜನಸಂಖ್ಯೆಯ ಶೇಕಡಾ 32ಕ್ಕಿಂತ ಹೆಚ್ಚು ದಲಿತರು ಇದ್ದಾರೆ. ಪಂಜಾಬ್‍ನಲ್ಲಿ ದಲಿತ ಸಮುದಾಯದಿಂದ ಚನ್ನಿ ಮೊದಲ ಮುಖ್ಯಮಂತ್ರಿಯಾಗಿದ್ದಾರೆ. ಇದನ್ನೂ ಓದಿ: ತಾಜ್ ಮಹಲ್‌ನಲ್ಲಿ ಹನುಮಾನ್ ಚಾಲೀಸಾ – ಪ್ರತಿಭಟನಕಾರರನ್ನು ತಡೆದ ಪೊಲೀಸರು

  • ಪಂಜಾಬ್‍ನಲ್ಲಿ ಕಾಳಿ ವಿಗ್ರಹ ವಿರೂಪಗೊಳಿಸಲು ಯತ್ನ

    ಪಂಜಾಬ್‍ನಲ್ಲಿ ಕಾಳಿ ವಿಗ್ರಹ ವಿರೂಪಗೊಳಿಸಲು ಯತ್ನ

    ಚಂಡೀಗಢ: ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಾಗಲೇ ಪಂಜಾಬ್‍ನ ಪಟಿಯಾಲದ ಐತಿಹಾಸಿಕ ಕಾಳಿ ಮಂದಿರದಲ್ಲಿ ವಿಗ್ರಹವನ್ನು ವಿರೂಪಗೊಳಿಸುವ ಯತ್ನ ನಡೆದಿದೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಆರೋಪಿಯನ್ನು ನೈಂಕಾಲನ್ ಗ್ರಾಮದ ನಿವಾಸಿಯೆಂದು ಗುರುತಿಸಲಾಗಿದೆ. ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಕಾಳಿ ದೇವಿಯ ಮೂರ್ತಿಯನ್ನು ನಾಶ ಮಾಡಲು ಪ್ರಯತ್ನಿಸಿದ್ದಾನೆ. ಆತ ವಿಗ್ರಹ ಇರಿಸಿರುವ ಹೊಸ್ತಿಲ ಮೇಲೆ ಹತ್ತುತ್ತಾನೆ. ಆತನನ್ನು ನೋಡಿದ ದೇವಾಲಯದ ಅರ್ಚಕ ಹಾಗೂ ಸ್ಥಳೀಯರು ಹೊರದಬ್ಬುವ ವೀಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

    ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಮಾತನಾಡಿ, ಚುನಾವಣೆಗೂ ಮುನ್ನ ಪಂಜಾಬ್‍ನ ಶಾಂತಿಯನ್ನು ಹಾಳು ಮಾಡಲು ಕಿಡಿಗೇಡಿಗಳು ಯತ್ನಿಸಿದ್ದಾರೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಪ್ರತಿಯೊಬ್ಬರು ಸಮಾಜದ ಶಾಂತಿಯನ್ನು ಕಾಪಾಡಿ ಎಂದು ಮನವಿ ಮಾಡಿದ್ದಾರೆ.

    ಘಟನೆ ಕುರಿತು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಪ್ರತಿಕ್ರಿಯಿಸಿದ್ದಾರೆ.

    ಅಮರಿಂದರ್ ಸಿಂಗ್ ಮಾತನಾಡಿ, ಪಂಜಾಬ್‍ನಲ್ಲಿ ಶಾಂತಿ ಕದಡುವ ಈ ರೀತಿಯ ಪ್ರಯತ್ನಗಳನ್ನು ಎಂದಿಗೂ ಸಹಿಸಲಾಗುವುದಿಲ್ಲ. ರಾಜ್ಯದಲ್ಲಿ ವಾತಾವರಣಕ್ಕೆ ಧಕ್ಕೆಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು ಒತ್ತಾಯಿಸುತ್ತೇನೆ ಎಂದು ತಿಳಿಸಿದರು.

    ಹಿಂದೂಗಳ ಮತ್ತು ಸಿಖ್ ದೇಗುಲಗಳ ನಡುವೆ ಕೋಮು ದ್ವೇಷವನ್ನು ಹರಡಲು ಪಂಜಾಬ್‍ನ ಹೊರಗಿನವರು ಈ ರೀತಿ ಪಿತೂರಿ ನಡೆಸುತ್ತಿದ್ದಾರೆ ಎಂದು ಸುಖಬೀರ್ ಬಾದಲ್ ಆರೋಪಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಚುನಾವಣೆ: ರಾಮನಗರದಿಂದ ಮಾಜಿ ಸಿಎಂ ಹರೀಶ್ ರಾವತ್ ಕಣಕ್ಕೆ

    ಘಟನೆ ಕುರಿತು ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಬೇಕು. ಪಂಜಾಬ್‍ನಲ್ಲಿ ಶಾಂತಿ ಕದಡಲು ಹಲವಾರು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಎರಡೂ ಡೋಸ್‌ ಲಸಿಕೆ ಪಡೆದ ಪ್ರಯಾಣಿಕರಿಗೆ ಕೋವಿಡ್‌ ಪರೀಕ್ಷೆ ಕಡ್ಡಾಯವಲ್ಲ: ಬ್ರಿಟನ್‌ ಪ್ರಧಾನಿ

    ಈ ಪ್ರಯತ್ನ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಘಟನೆ ಕುರಿತು ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ಕಂಗನಾ ಕಾರನ್ನು ತಡೆ ಹಿಡಿದು ಕ್ಷಮೆಗೆ ಆಗ್ರಹಿಸಿದ ರೈತರು

    ಕಂಗನಾ ಕಾರನ್ನು ತಡೆ ಹಿಡಿದು ಕ್ಷಮೆಗೆ ಆಗ್ರಹಿಸಿದ ರೈತರು

    ಚಂಡೀಗಢ: ರೈತರನ್ನು ಭಯೋತ್ಪಾದಕರೆಂದು ಕರೆದಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿ ಕಂಗನಾ ಅವರ ಕಾರನ್ನು ತಡೆ ಹಿಡಿದ ಘಟನೆ ಪಂಜಾಬ್‍ನ ಕಿರಾತ್‍ಪುರ ಸಾಹಿಬ್‍ನಲ್ಲಿ ನಡೆದಿದೆ.

    ಇತ್ತೀಚೆಗೆ ರದ್ದುಪಡಿಸಿದ ವಿವಾದಾತ್ಮಕ ಕೃಷಿ ಕಾಯ್ದೆಯ ವಿರುದ್ಧ ಸುಮಾರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದರು. ಬಿಜೆಪಿ ಬೆಂಬಲಿಗರಾದ ಕಂಗನಾ ಅವರು ರೈತರ ವಿರುದ್ಧ ಕಿಡಿಕಾರಿದ್ದರು. ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರು, ಖಲಿಸ್ಥಾನಿಗಳು ಮತ್ತು ಸಮಾಜ ವಿರೋಧಿಗಳು ಎಂದು ಟೀಕಿಸಿದ್ದರು.

    ಈ ಹಿನ್ನೆಲೆಯಲ್ಲಿ ಕಂಗನಾ ಅವರು ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ ಪಂಜಾಬ್‍ನಲ್ಲಿ ಹಾದು ಹೋಗುತ್ತಿದ್ದಾಗ ಪ್ರತಿಭಟನಾಕಾರರು ಧ್ವಜಗಳನ್ನು ಬೀಸುತ್ತಾ ಮತ್ತು ಘೋಷಣೆಗಳನ್ನು ಕೂಗುತ್ತಾ ಅವರ ಕಾರನ್ನು ತಡೆದರು. ಇದನ್ನೂ ಓದಿ: ಐ ಡೋಂಟ್ ಕೇರ್, ಐ ಡೋಂಟ್ ಲೈಕ್ – ಲಸಿಕೆ ಬೇಡವೆಂದು ಹಠ ಹಿಡಿದ ವೃದ್ಧ

    ಘಟನೆ ಕುರಿತು ಕಂಗನಾ ತಮ್ಮ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಹಾಕಿಕೊಂಡಿದ್ದಾರೆ. ನನ್ನನ್ನು ಇಲ್ಲಿಯ ಗುಂಪೊಂದು ಸುತ್ತುವರಿದಿದ್ದು, ನನ್ನನ್ನು ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಬರೆದುಕೊಂಡಿದ್ದಾರೆ. ನಟಿಯು ಕೆಲವು ಮಹಿಳಾ ಪ್ರತಿಭಟನಾಕಾರರೊಂದಿಗೆ ಮಾತನಾಡಿದ ನಂತರ ಅಂತಿಮವಾಗಿ ಆ ಸ್ಥಳವನ್ನು ತೊರೆಯುವಲ್ಲಿ ಯಶಸ್ವಿಯಾದರು. ಇದನ್ನೂ ಓದಿ: ಓಮಿಕ್ರಾನ್ ಬಗ್ಗೆ ಆತಂಕ ಬೇಡ- ಸೋಂಕಿತನ ಅಭಯ

  • ಪತ್ನಿ ಬಿಟ್ಟು ಹೋಗಿದ್ದಕ್ಕೆ ಕಾಮತೃಷೆಗಾಗಿ ಮಗಳನ್ನೇ ಬಳಸಿಕೊಂಡ ಪಾಪಿ ತಂದೆ!

    ಪತ್ನಿ ಬಿಟ್ಟು ಹೋಗಿದ್ದಕ್ಕೆ ಕಾಮತೃಷೆಗಾಗಿ ಮಗಳನ್ನೇ ಬಳಸಿಕೊಂಡ ಪಾಪಿ ತಂದೆ!

    ಚಂಡೀಗಢ: ಲೂಧಿಯಾನದಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ 32 ವರ್ಷದ ಕಾರ್ಮಿಕನೊಬ್ಬನನ್ನು ಭಾನುವಾರ ಪೊಲೀಸರು ಬಂಧಿಸಿದ್ದಾರೆ.

    ಬಾಲಕಿಯ ತಾಯಿಗೆ ವರ್ಷದ ಹಿಂದೆಯಷ್ಟೇ ಬೇರೆ ಮದುವೆಯಾಗಿದ್ದು, ತನ್ನ ಎರಡನೇಯ ಪತಿಯ ಜೊತೆ ಆಕೆ ವಾಸವಿದ್ದರು. ಇದೀಗ ಬಾಲಕಿ, ತಂದೆ ತನ್ನೊಂದಿಗೆ ಮೆರೆದ ವಿಕೃತಿಯನ್ನು ತಾಯಿ ಬಳಿ ಹೇಳಿಕೊಂಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ.

    ದುಷ್ಟ ತಂದೆ ಸ್ಕೂಟರಿನ ಬಿಡಿಭಾಗಗಳ ತಯಾರಿಕಾ ಕಾರ್ಖಾನೆಯಲ್ಲಿ ಕಳೆದ ಒಂದು ವರ್ಷಗಳಿಂದ ಕಾರ್ಮಿಕನಾಗಿದ್ದಾನೆ. ತನ್ನ ಪತ್ನಿ ಎರಡನೇ ಮದುವೆ ಮಾಡಿಕೊಂಡ ಬಳಿಕ ಈತ 8 ವರ್ಷದ ಹಾಗೂ 2 ವರ್ಷದ ಹೆಣ್ಣು ಮಕ್ಕಳೊಂದಿಗೆ ಉತ್ತರಪ್ರದೇಶದ ಕಾನ್ಪುರದಲ್ಲಿ ವಾಸವಾಗಿದ್ದನು. ಇದೀಗ ಮಗಳ ಮೇಲಿನ ಅತ್ಯಾಚಾರವನ್ನು ಖಂಡಿಸಿದ ತಾಯಿ ಕೂಡಲೇ ತನ್ನ ಮಗಳ ಜೊತೆ ಪೊಲೀಸ್ ಠಾಣೆಗೆ ತೆರಳಿ ಮಾಜಿ ಪತಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಸದ್ಯ ಪ್ರಕರಣ ಸಂಬಂಧಿಸಿದಂತೆ ಆರೋಪಿ ತಂದೆಯನ್ನು ಬಂಧಿಸಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ) ಮತ್ತು 379(ಲೈಂಗಿಕ ದೌರ್ಜನ್ಯ), ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಘಟನೆಗೆ ಬೆಳಕಿಗೆ ಬಂದಿದ್ದು ಹೇಗೆ?: ಕಳೆದ 9 ವರ್ಷದ ಹಿಂದೆ ನಾನು ಆರೋಪಿಯನ್ನು ವರಿಸಿದ್ದೇನೆ. ನಮಗಿಬ್ಬರು ಹೆಣ್ಣು ಮಕ್ಕಳಿದ್ದಾರೆ. ಆ ಬಳಿಕ ಆತ ನನಗೆ ಮತ್ತು ನನ್ನಿಬ್ಬರು ಹೆಣ್ಣು ಮಕ್ಕಳಿಗೆ ಕಿರುಕುಳ ನೀಡಲು ಆರಂಭಿಸಿದ್ದನು. ಹೀಗಾಗಿ ಕಳೆದ ವರ್ಷ ಆತ ನನ್ನಿಂದ ದೂರವಾಗಿ ಇಬ್ಬರು ಮಕ್ಕಳನ್ನು ಕರೆದುಕೊಂಡು ಹೋಗಿ ಕಾನ್ಪುರದ ಗ್ರಾಮವೊಂದರಲ್ಲಿ ನೆಲೆಸಿದ್ದನು. ಆದ್ರೂ ಕೆಲ ತಿಂಗಳ ಕಾಲ ನಾನು ಆತನಿಗಾಗಿ ಕಾದೆ. ನಂತರ ಬೇರೊಬ್ಬನನ್ನು ಮದುವೆಯಾಗಿ ಹೊಸ ಜೀವನ ನಡೆಸಲು ಆರಂಭಿಸಿದೆನು ಅಂತ ಬಾಲಕಿಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಮಾರ್ಕೆಟ್ ನಲ್ಲಿ ನನ್ನ ಮಾಜಿ ಪತಿಯನ್ನು ಭೇಟಿಯಾಗಿದೆ. ಈ ವೇಳೆ ತನ್ನ ಮಕ್ಕಳನ್ನು ನೋಡುವ ಆಸೆ ವ್ಯಕ್ತಪಡಿಸಿದೆ. ಅದಕ್ಕೆ ಆತ ಒಪ್ಪಿಗೆ ಸೂಚಿಸಿದ. ಹೀಗೆ ಮಕ್ಕಳನ್ನು ನೋಡಲು ಹೋದವಳು ಅವರನ್ನು ತನ್ನೊಂದಿಗೆ ಕರೆದುಕೊಂಡು ಬಂದಿದ್ದೆ. ಈ ವೇಳೆ ದೊಡ್ಡ ಮಗಳು ಆಕೆಯ ಮೇಲೆ ತಂದೆ ನಡೆಸಿದ ಅತ್ಯಾಚಾರವನ್ನು ನನಗೆ ತಿಳಿಸಿದ್ದಾಳೆ. ಮಗಳ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ, ಆ ವಿಚಾರವನ್ನು ಯಾರೊಂದಿಗೂ ಹೇಳಿಕೊಳ್ಳದಂತೆ ಹೊಡೆದಿದ್ದಾರೆ ಮತ್ತು ಬೆದರಿಕೆ ಕೂಡ ಹಾಕಿದ್ದಾನೆ ಅಂತ ಮಗಳು ತಿಳಿಸಿರುವುದಾಗಿ ಹೇಳಿದ್ದಾರೆ.

    ನನ್ನ ಮಕ್ಕಳನ್ನು ನಾನೇ ನೋಡಿಕೊಳ್ಳುತ್ತೇನೆ. ಅವರಿಗೆ ಶಿಕ್ಷಣವನ್ನು ಕೊಡಿಸುತ್ತೇನೆ ಅಂತ ಹೇಳಿದ್ದಾರೆ. ಮಕ್ಕಳು ಆರೋಪಿ ಜೊತೆ ಇದ್ದರೆ ಆತ ಶಾಲೆಗೆ ಕಳುಹಿಸಲ್ಲ. ಹೀಗಾಗಿ ನಾನೇ ಅವರನ್ನು ನೋಡಿಕೊಳ್ಳುತ್ತೇನೆ ಅಂತ ತಾಯಿ ಹೇಳಿದ್ದಾರೆ.

    ಘಟನೆಗೆ ಸಂಬಂಧಿಸಿದಂತೆ ತಾಯಿ ದೂರು ನೀಡುತ್ತಿದ್ದಂತೆಯೇ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮನೆಯಿಂದಲೇ ಆರೋಪಿ ತಂದೆಯನ್ನು ಬಂಧಿಸಿದ್ದಾರೆ. ಅಲ್ಲದೇ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆಯೇ ಇಲ್ಲವೇ ಎಂಬುದರ ಬಗ್ಗೆ ತನಿಖೆ ನಡೆಸಲು ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಆರೋಪಿಯನ್ನು ಕೂಡ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಅಂತ ಸಹಾಯ ಪೊಲೀಸ್ ಇನ್ಸ್ ಪೆಕ್ಟರ್ ರಾಜ್ ವಂತ್ ಸಿಂಗ್ ಮಾಧ್ಯಮಕ್ಕೆ ತಿಳಿಸಿದ್ದಾರೆ.