Tag: panjab election

  • ಸೋನು ಸೂದ್ ಸಹೋದರಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಅಸಮಾಧಾನ – ಪಂಜಾಬ್‍ನ ಕಾಂಗ್ರೆಸ್ ಶಾಸಕ ಬಿಜೆಪಿ ಸೇರ್ಪಡೆ

    ಸೋನು ಸೂದ್ ಸಹೋದರಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಅಸಮಾಧಾನ – ಪಂಜಾಬ್‍ನ ಕಾಂಗ್ರೆಸ್ ಶಾಸಕ ಬಿಜೆಪಿ ಸೇರ್ಪಡೆ

    ಚಂಡೀಗಢ: ಪಂಚ ರಾಜ್ಯಗಳ ಚುನಾವಣೆಗೆ ಇನ್ನೇನು ಕೆಲವೇ ವಾರಗಳು ಬಾಕಿಯಿದ್ದು, ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್‍ಗೆ ಸ್ಥಾನ ನೀಡಿರುವುದಕ್ಕೆ ಅಸಮಾಧಾನಗೊಂಡು ಕಾಂಗ್ರೆಸ್ ಶಾಸಕ ಹರ್ಜೋತ್ ಕಮಲ್ ಅವರು ಬಿಜೆಪಿಗೆ ಸೇರಿದ್ದಾರೆ.

    ಈ ಬಗ್ಗೆ ಮಾತನಾಡಿದ ಹರ್ಜೋತ್ ಕಮಲ್, ನನಗೆ ಚುನಾವಣೆಗೆ ಟಿಕೆಟ್ ನೀಡಲು ಕಾಂಗ್ರೆಸ್ ನಿರಾಕರಿಸಿದೆ. ಬೇರೆ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿ ಎಂದು ಕಾಂಗ್ರೆಸ್ ನಾಯಕರಲ್ಲಿ ಕೇಳಿಕೊಂಡರೂ ಅವರು ಟಿಕೆಟ್ ನೀಡಿಲ್ಲ. ಇದರಿಂದ ನನಗೆ ಅವಮಾನ ಆಗಿದೆ. ಆದ್ದರಿಂದ ನಾನು ಬಿಜೆಪಿಯನ್ನು ಸೇರಿದ್ದೇನೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್ ರಾಜ್ಯಾಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ಮೊಗಾ ಕ್ಷೇತ್ರಕ್ಕೆ ಭೇಟಿ ನೀಡಿದಾಗಲೂ ನನ್ನನ್ನು ಭೇಟಿಯಾಗದೇ ನೇರವಾಗಿ ಮಾಳವಿಕಾ ಸೂದ್ ಮನೆಗೆ ಹೋಗಿದ್ದು, ಇದು ನನಗೆ ಬೇಸರ ತಂದಿದೆ ಎಂದು ಹೇಳಿದ್ದಾರೆ.

    ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿರುವುದಕ್ಕೆ ನನ್ನ ಅಭ್ಯಂತರವಿಲ್ಲ. ಸೋನು ಸೂದ್ ಅವರೇ ಕಾಂಗ್ರೆಸ್‍ನಿಂದ ಸ್ಪರ್ಧಿಸಬಹುದಿತ್ತು. ಮಾಳವಿಕಾ ಸೂದ್ ನನ್ನ ಸಹೋದರಿಯಿದ್ದಂತೆ. ಆದರೆ ಕಾಂಗ್ರೆಸ್ ನಾಯಕರು ನನಗೆ ಮೊಗದಿಂದ ಟಿಕೆಟ್ ನೀಡದಿರುವುದು ಬೇಸರವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್‌ ಸಿಎಂ ಮನವಿ ಪತ್ರ

    ಯುವ ಕಾಂಗ್ರೆಸ್ ನಾಯಕನಾಗಿ ಕಳೆದ 21 ವರ್ಷ ಪಕ್ಷಕ್ಕಾಗಿ ದುಡಿದಿದ್ದೇನೆ. ಮೊಗ ಕ್ಷೇತ್ರದಲ್ಲಿ ಕಾಂಗ್ರೆಸ್‍ನ್ನು ತರಲು ಅತಿ ಹೆಚ್ಚು ಶ್ರಮಿಸಿದ್ದೇನೆ. ಆದರೂ ಪಕ್ಷ ನನ್ನನ್ನು ಕಡೆಗಣಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಅಲ್ಲ, ಗೋರಖ್‌ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

    ಪಂಜಾಬ್ ವಿಧಾನಸಭಾ ಚುನಾವಣೆ ಫೆ.14ರಂದು ಒಂದೇ ಹಂತದಲ್ಲಿ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರಬೀಳಲಿದೆ. ಬಿಜೆಪಿ ಮತ್ತು ಎಎಪಿ ಪಕ್ಷಗಳು ಈಗಾಗಲೇ ಅಭ್ಯರ್ಥಿಗಳ 9 ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಳ್ಳಲು ಶತಪ್ರಯತ್ನ ನಡೆಸುತ್ತಿದೆ.

  • ಪಂಜಾಬ್‌ ಸಿಎಂ ಅಭ್ಯರ್ಥಿ ಘೋಷಣೆಗೆ ಚರಣ್‌ಜಿತ್‌ ಸಿಂಗ್‌ ಚನ್ನಿ ಒತ್ತಡ

    ಪಂಜಾಬ್‌ ಸಿಎಂ ಅಭ್ಯರ್ಥಿ ಘೋಷಣೆಗೆ ಚರಣ್‌ಜಿತ್‌ ಸಿಂಗ್‌ ಚನ್ನಿ ಒತ್ತಡ

    ಚಂಡೀಗಢ: ವಿಧಾನಸಭೆ ಚುನಾವಣೆಗೆ ಒಂದು ತಿಂಗಳು ಬಾಕಿ ಇರುವಾಗಲೇ ಮುಂದಿನ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು ಪಂಜಾಬ್‍ನ ಹಾಲಿ ಸಿಎಂ ಚರಣ್‌ಜಿತ್‌ ಸಿಂಗ್ ಚನ್ನಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜೊತೆಗೆ ಮಾತುಕತೆ ನಡೆಸಿರುವ ಅವರು, ಚುನಾವಣಾ ದೃಷ್ಟಿಯಿಂದ ಸಿಎಂ ಅಭ್ಯರ್ಥಿ ಘೋಷಣೆ ಸೂಕ್ತ ಎಂದು ಮನವಿ ಮಾಡಿದ್ದಾರೆ.

    ಪ್ರತಿಸ್ಪರ್ಧಿಯಾಗಿರುವ ಆಮ್ ಆದ್ಮಿಯಲ್ಲಿ ಸಿಎಂ ಅಭ್ಯರ್ಥಿಯನ್ನು ಮುಂದಿನ ವಾರ ಘೋಷಣೆ ಮಾಡಲಾಗುವುದು ಎಂದು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಕೇಜ್ರಿವಾಲ್ ಅವರೇ ಪಂಜಾಬ್‍ನಲ್ಲಿ ಸಿಎಂ ಆಗಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಈ ಗೊಂದಲಗಳಿಗೆ ತೆರೆ ಎಳೆಯುವ ದೃಷ್ಟಿಯಿಂದ ಅರವಿಂದ್ ಕೇಜ್ರಿವಾಲ್ ಸಿಎಂ ಅಭ್ಯರ್ಥಿಯನ್ನು ಘೋಷಿಸಲು ಮುಂದಾಗಿದ್ದಾರೆ.

    ಮೂಲಗಳ ಪ್ರಕಾರ ಸಂಸದ ಭಗವಂತ್ ಮಾನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಬಹುದು ಎಂದು ಹೇಳಲಾಗುತ್ತಿದೆ. ಹಿರಿಯ ನಾಯಕರು ಮತ್ತು ವರ್ಚಸ್ಸು ಹೊಂದಿರುವ ನಾಯಕರಾಗಿರುವ ಹಿನ್ನೆಲೆ ಅವರ ಆಯ್ಕೆ ಬಹುತೇಕ ಖಚಿತ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ:  ಯುಪಿಯಲ್ಲಿ 50-100 ಕ್ಷೇತ್ರಗಳಲ್ಲಿ ಶಿವಸೇನೆ ಸ್ಪರ್ಧೆ- ಮೈತ್ರಿ ಮಾಡಲ್ಲ ಎಂದ ರಾವತ್

    ಆಮ್ ಆದ್ಮಿಯಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಸುದ್ದಿ ಖಚಿತವಾಗುತ್ತಿದ್ದಂತೆ ಇತ್ತ ಚನ್ನಿ ಕೂಡಾ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಲು ಒತ್ತಡ ಹಾಕುತ್ತಿದ್ದಾರೆ. ಇದರಿಂದ ಆಮ್ ಆದ್ಮಿಗೆ ತಿರುಗೇಟು ನೀಡಬಹುದು. ಕಾಂಗ್ರೆಸ್‍ನಲ್ಲಿ ಭಿನ್ನಾಭಿಪ್ರಾಯಗಳಿದೆ. ಕಾಂಗ್ರೆಸ್ ಅಧ್ಯಕ್ಷ ನವಜೋತು ಸಿಂಗ್ ಸಿಧು ಕೂಡಾ ಸಿಎಂ ರೇಸ್‍ನಲ್ಲಿದ್ದು ಹಲವು ನಾಯಕರು ಆಕಾಂಕ್ಷಿಗಳಾಗಿದ್ದಾರೆ ಎಂದು ಆಮ್ ಆದ್ಮಿ ಪ್ರಚಾರ ಮಾಡುತ್ತಿದೆ. ಇವುಗಳಿಗೆ ತೆರೆ ಎಳೆಯಲು ಸಿಎಂ ಅಭ್ಯರ್ಥಿ ಘೋಷಣೆಯಾಗಬೇಕು ಎಂದು ಚನ್ನಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪಾದಯಾತ್ರೆ ಕೈ ಬಿಡುವಂತೆ ಸಿದ್ದರಾಮಯ್ಯ, ಡಿಕೆಶಿಗೆ ಸಿಎಂ ಬೊಮ್ಮಾಯಿ ಪತ್ರ