Tag: Papa Reddy

  •  ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲು

     ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲು

    ರಾಯಚೂರು: ಪ್ರತಿಭಟನೆ ವೇಳೆ  ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣದಲ್ಲಿ ರಾಯಚೂರು ನಗರದ ಮಾಜಿ ಶಾಸಕ ಎ.ಪಾಪಾರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ.

    ನವೆಂಬರ್ 3 ರಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆದಿದ್ದ  ಪೊಲೀಸರ ಮೇಲಿನ ಹಲ್ಲೆ ಸಂಬಂಧಿಸಿದಂತೆ ಪಾಪರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ದಲಿತ ವಿರೋಧಿ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಹೋರಾಟ ನಡೆಸುತ್ತಿದ್ದರು. ಈ ವೇಳೆ ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ ನೀಡದ್ದಕ್ಕೆ  ಪೊಲೀಸರ ಮೇಲೆ ಪಾಪರೆಡ್ಡಿ ಮತ್ತು ಬೆಂಬಲಿಗರು ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾಗಿದ್ದ ನಗರದ ಪಶ್ಚಿಮ ಠಾಣೆ ಕಾನ್‌ಸ್ಟೇಬಲ್ ರಾಘವೇಂದ್ರ ಪಶ್ಚಿಮ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಪೊಲೀಸ್‍ಗೆ ಕಪಾಳಮೋಕ್ಷ ಮಾಡಿದ ಮಾಜಿ ಶಾಸಕ ಎ.ಪಾಪಾರೆಡ್ಡಿ

    ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿ ಪಕ್ಷ ಸೇರಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಇದು ಖಂಡನೀಯ ಅಂತ ಬಿಜೆಪಿ ಎಸ್‍ಸಿ ಮೋರ್ಚಾ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪ್ರತಿಕೃತಿ ದಹಿಸಲು ಅವಕಾಶ ನೀಡದಿದ್ದಾಗ ಏಕಾಏಕೀ ನೂಕುನುಗ್ಗಲು ಮಾಡಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿತ್ತು. ಇದನ್ನೂ ಓದಿ: ಸುಳ್ಳು ಆರೋಪ ಮಾಡಿದ ಮಾಜಿ ಶಾಸಕನ ಮೇಲೆ ಮಾನನಷ್ಟ ಮೊಕದ್ದಮೆ ಹಾಕ್ತೀನಿ: ಪಾಪೇಶ್