RSS ನಿಷೇಧದ ಬಗ್ಗೆ ಗೃಹ ಇಲಾಖೆಗೆ ಪ್ರಸ್ತಾವನೆ ಬಂದರೆ ಪರಿಶೀಲನೆ
ಬೆಂಗಳೂರು: ಪ್ರಿಯಾಂಕ್ ಖರ್ಗೆ (Priyank Kharge) RSS ಕಾರ್ಯಕ್ರಮಗಳನ್ನ ನಿಷೇಧ ಮಾಡಬೇಕು ಅಂತ ಸಿಎಂಗೆ ಪತ್ರ ಬರೆದಿರೋದು ನನಗೇನು ಗೊತ್ತಿಲ್ಲ. ಗೃಹ ಇಲಾಖೆಗೆ ಆ ಪತ್ರ ಬಂದರೆ ಪರಿಶೀಲನೆ ಮಾಡುತ್ತೇವೆ ಅಂತ ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದರು.
RSS ಬ್ಯಾನ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರ ಬರೆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪತ್ರ ಬರೆದಿರೋದು ಎಲ್ಲವೂ ನಿಮಗೆ ಗೊತ್ತಿದೆಯಲ್ಲ. ನೀವೇ ಹೇಳಿದಂತೆ ಅವರು ಪತ್ರ ಬರೆದಿದ್ದಾರೆ. ಶಾಲೆ, ಸರ್ಕಾರಿ ಜಾಗದಲ್ಲಿ ಬೇಡ ಅಂತ ಹೇಳಿದ್ದಾರೆ ಅದರ ಬಗ್ಗೆ ನನಗೆ ಗೊತ್ತಿಲ್ಲ. ಸಿಎಂ ಅವರು ಅದರ ಬಗ್ಗೆ ಚರ್ಚೆ ಮಾಡ್ತಾರೇನೋ, ಸಿಎಸ್ ಅವರು ನಿರ್ಧಾರ ತೆಗೆದುಕೊಳ್ತಾರೆ ಅಂತ ಹೇಳಿದರು.
ಈ ಬಗ್ಗೆ ನಮ್ಮ ಇಲಾಖೆಗೆ ಬಂದರೆ ಪರಿಶೀಲನೆ ಮಾಡ್ತೇವೆ. ಅದರ ಸಾಧಕ ಬಾಧಕ ಪರಿಶೀಲನೆ ಮಾಡ್ತೇವೆ. ದೂರು ಬಂದರೆ ಮಾಡಬಹುದು. ವೈಯುಕ್ತಿಕವಾಗಿ ನನ್ನ ಅಭಿಪ್ರಾಯ ಯಾಕೆ ಹೇಳಬೇಕು? ಎಂದರು.
ಎಬಿವಿಪಿ ಕಾರ್ಯಕ್ರಮದಲ್ಲಿ ನಾನು ಎಲ್ಲಿ ಭಾಗಿಯಾಗಿದ್ದೆ? ಮೆರವಣಿಗೆ ಬರ್ತಿತ್ತು ಕೈಮುಗಿದೆ. ಅಬ್ಬಕ್ಕನಿಗೆ ಕೈಮುಗಿಯೋದು ತಪ್ಪೇ?ಅದನ್ನೇ ತಪ್ಪು ಅಂದ್ರೆ ಹೇಗೆ? ಅವತ್ತೇ ಕ್ಲಾರಿಪಿಕೇಶನ್ ಕೊಟ್ಟಿದ್ದೇನೆ. ಇವತ್ತು ನಾನು ಕೊಡ್ತಿದ್ದೇನೆ. ನನಗೆ ಪರ್ಮಿಷನ್ ಕೇಳಿದ್ರೆ ಪೊಲೀಸರು ಕೊಡ್ತಾರೆ. ಸರ್ಕಾರ ಬ್ಯಾನ್ ಮಾಡಿದ್ರೆ ಕೊಡಲ್ಲ. ಇನ್ನೂ ಏನು ಬ್ಯಾನ್ ಆಗಿಲ್ಲವಲ್ಲ. ನಮ್ಮ ಇಲಾಖೆಗೆ ಫಾರ್ವರ್ಡ್ ಮಾಡಬೇಕು. ಆಗ ನಾವು ನೋಡ್ತೇವೆ ಅಂತ ತಿಳಿಸಿದರು.
ಬೆಂಗಳೂರು: ಬಿಹಾರ ಚುನಾವಣೆಯಲ್ಲಿ (Bihar Election) ಇಂಡಿ ಕೂಟ ಗೆದ್ದರೆ ಪ್ರತಿ ಮನೆಗೆ ಸರ್ಕಾರಿ ಉದ್ಯೋಗ ಕೊಡುವ ಗ್ಯಾರಂಟಿ ಘೋಷಣೆಯನ್ನ ಗೃಹಸಚಿವ ಪರಮೇಶ್ವರ್ (Parameshwar) ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಜನಗಳಿಗೆ ಏನು ಬೇಕಾಗುತ್ತೆ ಅನ್ನೋದನ್ನ ತಿಳಿದುಕೊಂಡು ಚುನಾವಣೆ ಸಮಯದಲ್ಲಿ ಘೋಷಣೆ ಮಾಡುತ್ತೇವೆ. ಎಲ್ಲರೂ ಮಾಡೋದು ಅದೇ ಕೆಲಸ. ನಮ್ಮ ಮೈತ್ರಿ ಪಕ್ಷದವರು ಪ್ರತಿ ಮನೆಗೆ ಉದ್ಯೋಗ ಕೊಡ್ತೀನಿ ಅಂತ ಘೋಷಣೆ ಮಾಡಿದ್ದಾರೆ. ಉದ್ಯೋಗ ಅನ್ನೋದು ಬಹಳ ಮುಖ್ಯ. ಎಲ್ಲಾ ಕಡೆ ನಿರುದ್ಯೋಗದ ಸಮಸ್ಯೆ ಬಹಳ ಕಾಡ್ತಿದೆ. ಯುವಕರಿಗೆ ಉದ್ಯೋಗ ಸಿಕ್ತಿಲ್ಲ ಅನ್ನೋದು ದೊಡ್ಡ ಪ್ರಶ್ನೆ. ಹಾಗಾಗಿ ಚುನಾವಣೆ ಪ್ರಣಾಳಿಕೆ ಮಾಡಬೇಕು ಅಂತ ಹೇಳಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ: ಪರಮೇಶ್ವರ್
3 ಕೋಟಿ ಉದ್ಯೋಗ ಸೃಷ್ಟಿ ಸಾಧ್ಯನಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಹಂತ ಹಂತವಾಗಿ ಮಾಡ್ತಾರೆ. ಒಂದೇ ದಿನ ಘೋಷಣೆ ಮಾಡಿ, ಒಂದೇ ದಿನ ಕೆಲಸ ಕೊಡೋಕೆ ಆಗುತ್ತಾ? ನಾವು ಕರ್ನಾಟಕದಲ್ಲಿ 2.5 ಲಕ್ಷ ಖಾಲಿ ಇರೋ ಹುದ್ದೆ ಭರ್ತಿ ಮಾಡ್ತೀವಿ ಅಂತ ಪ್ರಣಾಳಿಕೆಯಲ್ಲಿ ಹೇಳಿದ್ವಿ. ನಾವು ಒಂದೇ ಬಾರಿ ಹುದ್ದೆ ಭರ್ತಿ ಮಾಡ್ತೀವಿ ಅಂತ ಅಲ್ಲ. ಈಗ ಪ್ರಾರಂಭ ಮಾಡಿದ್ದೇವೆ. ಒಳ ಮೀಸಲಾತಿ ತೊಂದರೆ ಆಗಿತ್ತು. ಈಗ ಅದೆಲ್ಲ ಬಗೆಹರಿಸಿಕೊಂಡು ನೇಮಕಾತಿ ಪ್ರಾರಂಭ ಮಾಡ್ತಿದ್ದೇವೆ. ಪೊಲೀಸ್ ಇಲಾಖೆ ಸೇರಿ ಬೇರೆ ಇಲಾಖೆಯಲ್ಲಿ ನೇಮಕಾತಿ ನಡೆಯುತ್ತಿದೆ ಎಂದಿದ್ದಾರೆ.
ಪ್ರಧಾನಿ ಮೋದಿ 2 ಕೋಟಿ ಉದ್ಯೋಗ ಕೊಡ್ತೀನಿ ಅಂದ್ರು. ಅವರು ಕೊಡಲಿಲ್ಲ. ಅವರು ಮಾಡಿದ್ರೆ ನಾವು ಯಾಕೆ ಟೀಕೆ ಮಾಡ್ತಿದ್ವಿ. ಮೋದಿ ಚುನಾವಣೆ ಸಮಯದಲ್ಲಿ ಹೇಳಿದ್ದು ನಿಜ. ಹೇಳಿದ್ದು ಮಾಡಿದ್ರೆ ಯಾರು ಕೇಳ್ತಿದ್ರು? ಅವರು ಮಾಡಿದ್ರೆ ಹೊಗಳುತಿದ್ವಿ. ನಾವು 5 ಗ್ಯಾರಂಟಿ ಕೊಡ್ತೀವಿ ಅಂತ ಹೇಳಿದ್ವಿ ನಾವು ಮಾಡಿದ್ದೇವೆ ಎಂದು ಹೇಳಿದ್ದಾರೆ.
– ಸಿಎಂ ಡಿನ್ನರ್ ಪಾರ್ಟಿ ಅಜೆಂಡಾ ಊಟ ಅಷ್ಟೆ, ನವೆಂಬರ್ ಕ್ರಾಂತಿ ಯಾವುದು ಇಲ್ಲ
ಬೆಂಗಳೂರು: ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ ಯಾವುದೇ ಪೊಲಿಟಿಕಲ್ ಮೀಟಿಂಗ್ ಮಾಡಿಲ್ಲ ಎಂದು ಗೃಹಸಚಿವ ಪರಮೇಶ್ವರ್ (Parameshwar) ಸ್ಪಷ್ಟಪಡಿಸಿದ್ದಾರೆ.
ಗುರುವಾರ ಮಹದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೊಳಿ (Satish Jarkiholi) ಅಪಾರ್ಟ್ಮೆಂಟ್‌ನಲ್ಲಿ ಸಭೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆ ಸಭೆಯಲ್ಲಿ ಯಾವುದೇ ವಿಶೇಷ ಇಲ್ಲ. ಮಾಧ್ಯಮಗಳಿಗೆ ಯಾವ ರೀತಿ ಕಣ್ಣಿಗೆ ಕಾಣಿಸುತ್ತೆ ಅಂತ ಗೊತ್ತಿಲ್ಲ. ಹಾಗೆ ಸಭೆ ಮಾಡಿರೋದು ಮೊದಲ ಬಾರಿ ಅಲ್ಲ. ಅನೇಕ ಬಾರಿ ನಾನು ಜಾರಕಿಹೊಳಿ, ಮಹದೇವಪ್ಪ ಸಭೆ ಮಾಡಿದ್ದೇವೆ. ನಾವೆಲ್ಲ ಸ್ನೇಹಿತರು, ಕೆಲವು ವಿಷಯಗಳು ಚರ್ಚೆ ಮಾಡಬೇಕು ಅಂದಾಗ ಭೇಟಿ ಮಾಡುತ್ತೇವೆ. ಅದು ಪೊಲಿಟಿಕಲ್ ಮೀಟಿಂಗ್ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸಂಪುಟ ಪುನರ್‌ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್‌ಫಾಸ್ಟ್ ಮೀಟಿಂಗ್
ರಾಜಣ್ಣ ಮಂತ್ರಿ ಅಲ್ಲ ಅದಕ್ಕೆ ಬಂದಿರಲಿಲ್ಲ. ನಿನ್ನೆ ಕ್ಯಾಬಿನೆಟ್ ಸಭೆ ಇತ್ತು. ಕೆಲವು ವಿಷಯ ಸೂಕ್ಷ್ಮ ಇತ್ತು ಹಾಗೇ ಮಾತಾಡಿಕೊಂಡು, ತಿಂಡಿ ತಿಂದು ಹೋಗೋಣ ಅಂತ ಸಭೆ ಮಾಡಿದ್ವಿ. ಅದೊಂದು ಸಾಮಾನ್ಯ ಮೀಟಿಂಗ್ ಅಷ್ಟೇ. ಈ ಹಿಂದೆ ಬೇಕಾದಷ್ಟು ಬಾರಿ ನಾವು ಸಭೆ ಮಾಡಿದ್ದೇವೆ. ಇದೇನು ಮೊದಲ ಸಭೆ ಅಲ್ಲ. ಸತೀಶ್ ಜಾರಕಿಹೊಳಿ, ಮಹದೇವಪ್ಪ ಮನೆಯಲ್ಲಿ ಅನೇಕ ಬಾರಿ ಮೀಟ್ ಮಾಡಿದ್ದೇವೆ. ಹೊಸದೇನು ಅಲ್ಲ ಎಂದಿದ್ದಾರೆ.
ದಲಿತ ನಾಯಕರ ಬೇಡಿಕೆ ಕಾಂಗ್ರೆಸ್‌ನಲ್ಲಿ ಈಡೇರುತ್ತಿಲ್ಲ ಅಂತ ಯಾರು ಹೇಳಿದ್ರು? ಹೆಚ್ಚುವರಿ ಡಿಸಿಎಂ ಬೇಕು ಅಂತ ನಾನು ಹೇಳಿರಲಿಲ್ಲ. ಯಾರು ಹೇಳಿದ್ರು, ಯಾರು ಒತ್ತಾಯ ಮಾಡಿದ್ರು? ಸತೀಶ್ ಜಾರಕಿಹೊಳಿ, ರಾಜಣ್ಣ ಒತ್ತಾಯ ಮಾಡಿರೋದು ನನಗೆ ಗೊತ್ತಿಲ್ಲ. ಸತೀಶ್ ಜಾರಕಿಹೊಳಿ, ನಾವು ಜನರಲ್ ಆಗಿ ಮಾತಾಡಿದ್ದೇವೆ. ಇದೇ ರೀತಿ ಆಗಬೇಕು ಅಂತ ನಾವ್ಯಾರು ಮಾತಾಡಿಲ್ಲ ಎಂದು ತಿಳಿಸಿದ್ದಾರೆ.
ಸಿಎಂ ಡಿನ್ನರ್ ಸಭೆ ಅಜೆಂಡಾ ಊಟ ಅಷ್ಟೇ
ಸಿಎಂ ಡಿನ್ನರ್ ಮೀಟಿಂಗ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಹಿಂದೆಯೂ ಅನೇಕ ಬಾರಿ ಊಟಕ್ಕೆ ಕರೆದಿದ್ದಾರೆ. ತುಂಬಾ ದಿನ ಆಗಿತ್ತು. ಹೀಗಾಗಿ ಊಟಕ್ಕೆ ಕರೆದಿದ್ದಾರೆ. ಡಿನ್ನರ್ ಕರೆಯೋದಕ್ಕೆ ಏನು ವಿಶೇಷತೆ ಇಲ್ಲ. ಊಟ ಹಾಕ್ತಾರೆ, ಊಟ ಮಾಡಿಕೊಂಡು ಬರುತ್ತೇವೆ. ಸಿಎಂ ಡಿನ್ನರ್ ಸಭೆ ಅಜೆಂಡಾ ಊಟ ಅಷ್ಟೇ. ಸಿಎಂ ಊಟಕ್ಕೆ ಕರೆದಿರೋದು ಒಂದು ಸಾಮಾನ್ಯ ಮೀಟಿಂಗ್ ಅಷ್ಟೆ. ಜಾಸ್ತಿ ದಿನ ಆಗಿದೆ ಅಂತ ಊಟಕ್ಕೆ ಕರೆದಿದ್ದಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ವಿಚಾರವಾಗಿ ಮಾತನಾಡಿದ ಅವರು, ಎಲ್ಲಿದೆ ನವೆಂಬರ್ ಕ್ರಾಂತಿ? ಯಾರು ಹೇಳಿದ್ರು ನವೆಂಬರ್ ಕ್ರಾಂತಿ ಅಂತ? ಯಾವ ಕ್ರಾಂತಿಯೂ ಇಲ್ಲ. ಸಂಪುಟ ಪುನಾರಚನೆ ಆಗೋದು ಎಲ್ಲಾ ಸಿಎಂ ಅವರನ್ನ ಕೇಳಬೇಕು. ಸಂಪುಟ ಪುನರಾಚನೆ ಇದ್ಯಾ, ಯಾರನ್ನಾದ್ರು ಹೊಸಬರನ್ನ ಮಂತ್ರಿಯಾಗಿ ತಗೋತೀರಾ ಅಂತ ಸಿಎಂ ಅವರನ್ನ ಕೇಳಿ ಎಂದಿದ್ದಾರೆ.
ಹೈಕಮಾಂಡ್ ಸಚಿವರ ಮೌಲ್ಯಮಾಪನ ಏನು ಮಾಡಿಲ್ಲ. ಸಚಿವರ ಬಗ್ಗೆ ಬೇರೆ ಬೇರೆ ಸಮಯದಲ್ಲಿ ಮಾಹಿತಿ ತಗೊಂಡಿದ್ರು. ಇದೆಲ್ಲ ಸಾಮಾನ್ಯವಾಗಿ ಹಾಗೂ ನಿರಂತರವಾಗಿ ನಡೆಯುತ್ತದೆ. ಅದಕ್ಕೂ ಇದಕ್ಕೂ ಹೋಲಿಕೆ ಮಾಡೋದು ಸರಿಯಲ್ಲ. ಕಾಂಗ್ರೆಸ್‌ನಲ್ಲಿ ಯಾವುದೇ ಕ್ರಾಂತಿ ಇಲ್ಲ ಎಂದು ತಿಳಿಸಿದ್ದಾರೆ.
ಬೆಂಗಳೂರು: ಬುರುಡೆ ಗ್ಯಾಂಗ್‌ಗೆ ಸುಪ್ರೀಂ ಕೋರ್ಟ್ (Supreme Court) ಛೀಮಾರಿ ಹಾಕಿದ ವಿಚಾರದ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಉತ್ತರ ನೀಡಲು ಗೃಹ ಸಚಿವ ಪರಮೇಶ್ವರ್ (Parameshwar) ನಿರಾಕರಿಸಿದ್ದಾರೆ.
ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಅದರ ಬಗ್ಗೆ ನನಗೆ ಗೊತ್ತಿಲ್ಲ. ತಿಳಿದುಕೊಂಡು ಮಾತನಾಡುತ್ತೇನೆ. ತಿಳಿದುಕೊಂಡು ಮಾತನಾಡದೇ ಹೋದರೆ ಹೋದ್ರೆ ಸಚಿವರಿಗೆ ಏನು ಗೊತ್ತಿಲ್ಲ ಎನ್ನುತ್ತೀರಿ. ತಿಳಿದುಕೊಂಡು ಅಮೇಲೆ ಮಾತನಾಡುತ್ತೇನೆ ಎಂದು ಉತ್ತರ ನೀಡಿದ್ದಾರೆ.
ಏನಿದು ಪ್ರಕರಣ?
ಕಳೆದ ಏಪ್ರಿಲ್ 30 ರಂದು ಧರ್ಮಸ್ಥಳ ಪ್ರಕರಣದ ಕುರಿತು ಎಸ್‌ಐಟಿ ರಚನೆ ಮಾಡುವಂತೆ ಒತ್ತಾಯಿಸಿ ಬುರುಡೆ ಗ್ಯಾಂಗ್ ಸಾರ್ವಜನಿಕಾ ಹಿತಾಸಕ್ತಿ ಅರ್ಜಿ ಸಲ್ಲಿಕೆ ಮಾಡಿತ್ತು. ಆದರೆ ಮೇ 5ರಂದೇ ಸುಪ್ರೀಂ ಕೋರ್ಟ್ ಬುರುಡೆ ಗ್ಯಾಂಗ್‌ಗೆ ಛೀಮಾರಿ ಹಾಕಿ ಅರ್ಜಿ ವಜಾಗೊಳಿಸಿತ್ತು.
ಇದರಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಕಾಣುತ್ತಿಲ್ಲ, ವೈಯಕ್ತಿಕ ಹಿತಾಸಕ್ತಿ ಕಾಣಿಸುತ್ತಿದೆ. ಇದು ಪೈಸಾ ಇಂಟರೆಸ್ಟ್ ಲಿಟಿಗೇಷನ್, ಪೊಲಿಟಿಕಲ್ ಇಂಟರೆಸ್ಟ್ ಲಿಟಿಗೇಷನ್, ಪ್ರೈವೇಟ್ ಇಂಟರೆಸ್ಟ್ ಲಿಟಿಗೇಷನ್ ಎಂದು ಬುರುಡೆ ಗ್ಯಾಂಗ್‌ಗೆ ತಪರಾಕಿ ಹಾಕಿತ್ತು. ನಾಚಿಕೆ ಮಾನಾ ಮರ್ಯಾದೆ ಎಲ್ಲವನ್ನೂ ಬಿಟ್ಟು ಬಂದು ದೂರು ನೀಡಿದ್ದೀರಿ ದಶಕಗಳು ಕಳೆದ ಬಳಿಕ ತಡವಾಗಿ ಯಾಕೆ ಈ ಅರ್ಜಿ ಸಲ್ಲಿಸಿದ್ದೀರಿ ಎಂದು ಗ್ಯಾಂಗನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಲ್ಲದೇ ಸಾರಾಸಗಟಾಗಿ ಅರ್ಜಿಯನ್ನ ತಿರಸ್ಕರಿಸಿತ್ತು. ಆದರೆ ಈ ವಿಚಾರವನ್ನು ಮುಚ್ಚಿಟ್ಟು ಬುರುಡೆ ಗ್ಯಾಂಗ್ ಬೆಳ್ತಂಗಡಿ ನ್ಯಾಯಾಲಯದಲ್ಲಿ ಶವ ಹೂಳಲು ಅನುಮತಿ ನೀಡುವಂತೆ ಅರ್ಜಿ ಸಲ್ಲಿಸಿತ್ತು ಮತ್ತು ಚಿನ್ನಯ್ಯನ ಹೇಳಿಕೆಯನ್ನು ದಾಖಲು ಮಾಡಿಸಿತ್ತು.
ಈ ಬೆಳವಣಿಗೆಯ ಬೆನ್ನಲ್ಲೇ ದಕ್ಷಿಣ ಕನ್ನಡ ಪೊಲೀಸರು ಚಿನ್ನಯ್ಯ ಮಂಪರು ಪರೀಕ್ಷೆ ನಡೆಸಲು ಅರ್ಜಿ ಹಾಕಿದ್ದರು. ಈ ವಿಚಾರ ಚರ್ಚೆ ಆಗುತ್ತಿದ್ದಂತೆ ಸರ್ಕಾರ ದಿಡೀರ್ ಎಂಬಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶ ಪ್ರಕಟಿಸಿತ್ತು.
ಬೆಂಗಳೂರು: ನಾನು ದಾರಿಯಲ್ಲಿ ಬರುತ್ತಿದ್ದಾಗ ರಾಣಿ ಅಬ್ಬಕ್ಕನ ಮೆರವಣಿಗೆ ನಡೆಯುತ್ತಿತ್ತು. ಪುಷ್ಪನಮನ ಸಲ್ಲಿಸಿ ಎಂದಾಗ ನಾನು ನಮನ ಸಲ್ಲಿಸಿದ್ದೇನೆಯೇ ಹೊರತು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ಹೇಳಿದ್ದಾರೆ.
ತಿಪಟೂರಿನ ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗಿಯಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಎಬಿವಿಪಿ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ನನ್ನ ಕಾಂಗ್ರೆಸ್ ಬದ್ಧತೆ, ಸೈದ್ಧಾಂತಿಕ ನಿಲುವು ಯಾರೂ ಪ್ರಶ್ನೆ ಮಾಡುವಂತಿಲ್ಲ. ನಾನು ಏನು ಎನ್ನುವುದು ಇಡೀ ಕರ್ನಾಟಕ ಜನಕ್ಕೆ ಗೊತ್ತಿದೆ ಎಂದು ತಿಳಿಸಿದರು. ಇದನ್ನೂಓದಿ: ರಾಮನನ್ನು ವಿರೋಧಿಸಿದ್ದಕ್ಕೆ ಅಧಿಕಾರ ಹೋಯ್ತು: ಭಾರತದ ಮೇಲೆ ಗೂಬೆ ಕೂರಿಸಿದ ನೇಪಾಳದ ಮಾಜಿ ಪ್ರಧಾನಿ
ತಿಪಟೂರು ಎಬಿವಿಪಿಯಿಂದ ಗಣೇಶ ಪಂಜಿನ ಮೆರವಣಿಗೆ ಮಂಗಳವಾರ ರಾತ್ರಿ ನಡೆದಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ತೆರಳುತ್ತಿದ್ದ ಗೃಹ ಸಚಿವ ಪರಮೇಶ್ವರ್ ಅವರು ರಾಣಿ ಅಬ್ಬಕ್ಕನ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಬೆಂಗಳೂರು: ತಾನು ನೆಟ್ಟಿದ್ದ ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವು ಮಾಡಿದ್ದಾರೆಂದು ಆರೋಪಿಸಿ ಬೇಲೂರು ತಹಶೀಲ್ದಾರ್ ವಿರುದ್ಧ ಗೃಹಸಚಿವ ಪರಮೇಶ್ವರ್ (Parameshwar) ಅವರಿಗೆ ಸಾಲು ಮರದ ತಿಮ್ಮಕ್ಕ (Saalumarda Thimmakka) ದೂರು ನೀಡಿದ್ದಾರೆ.
ಹಾಸನದ ಬೇಲೂರು ತಾಲೂಕು ಕಚೇರಿ ಹಿಂಭಾಗದಲ್ಲಿ ಸಾಲು ಮರದ ತಿಮ್ಮಕ್ಕ ನೆಟ್ಟಿದ್ದ ಮರಗಳನ್ನು ಕಡಿದಿದ್ದಾರೆ ಎಂದು ಆರೋಪ ಮಾಡಲಾಗಿದೆ. ಸುಮಾರು ಇನ್ನೂರಕ್ಕೂ ಹೆಚ್ಚು ಮರಗಳನ್ನು ಅಕ್ರಮವಾಗಿ ತೆರವು ಮಾಡಿದ್ದಾರೆ ಎಂದು ಬೇಲೂರು ತಾಲೂಕು ತಹಶೀಲ್ದಾರ್ (Belur Tahsildar) ಶ್ರೀಧರ್ ಕಂಕನವಾಡಿ ವಿರುದ್ಧ ಆರೋಪ ಕೇಳಿಬಂದಿದೆ. ಈ ಬಗ್ಗೆ ತಹಶೀಲ್ದಾರ್ ವಿರುದ್ಧ ಗೃಹ ಸಚಿವರಿಗೆ ಸಾಲು ಮರದ ತಿಮ್ಮಕ್ಕ ದೂರು ಕೊಟ್ಟಿದ್ದಾರೆ. ಇದನ್ನೂ ಓದಿ: ಉದ್ಯಮ ಆರಂಭಿಸಲು ಆಸಕ್ತಿ ಇರುವ ಮಹಿಳೆಯರಿಗೆ ಗುಡ್ ನ್ಯೂಸ್!
ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಅವರ ಪರಿಸರ ಪ್ರೇಮವನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇವರು ರಸ್ತೆ ಬದಿಯಲ್ಲಿ ನೂರಾರು ಮರಗಳನ್ನು ನೆಟ್ಟು, ಅವುಗಳಿಗೆ ನೀರುಣಿಸಿ ಪೋಷಿಸಿ ವೃಕ್ಷಮಾತೆಯೆಂದೇ ಖ್ಯಾತಿಗಳಿಸಿದ್ದರು. ಮಕ್ಕಳು ಇಲ್ಲವೆನ್ನುವ ಕಾರಣಕ್ಕೆ ರಸ್ತೆ ಬದಿಯ ಆಲದ ಮರಗಳನ್ನೇ ತಮ್ಮ ಮಕ್ಕಳೆಂದು ಭಾವಿಸಿ ಬೆಳೆಸಿ, ಪೋಷಿಸಿ ಪರಿಸರ ಉಳಿಸಿ ಎಂದು ಲೋಕಕ್ಕೆ ಸಾರಿದ್ದಾರೆ.
ಬೆಂಗಳೂರು: ಇಂದು ಸಂಜೆಯೊಳಗೆ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarod) ಅವರನ್ನು ಬಂಧಿಸುವಂತೆ ಗೃಹ ಸಚಿವ ಜಿ. ಪರಮೇಶ್ವರ್ (G Parameshwar) ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿಗಳು 24 ಕೊಲೆ ಮಾಡಿದ್ದಾರೆಂದು ತಿಮರೋಡಿ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಸೂಚನೆ ನೀಡಿದರು. ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಪರಮೇಶ್ವರ್ ಸಂಜೆಯೊಳಗೆ ಅರೆಸ್ಟ್ ಮಾಡುವಂತೆ ಸೂಚನೆ ನೀಡಿದರು. ಸಿಎಂ ವಿರುದ್ಧವೇ ಮಾತನಾಡಿದವನನ್ನಾ ಸುಮ್ನೆ ಬಿಡಬೇಕಾ ಅಂತಲೂ ಪ್ರಶ್ನೆ ಮಾಡಿದರು. ಈ ವೇಳೆ ಅಧಿಕಾರಿಗಳು ಅದು 2023ರ ಮೇನಲ್ಲಿ ಮಾತನಾಡಿದ್ದ ವಿಡಿಯೋ ಅಂತ ಗೃಹ ಸಚಿವರ ಗಮನಕ್ಕೆ ತಂದರು. ಇದನ್ನೂ ಓದಿ: 2026ರ ಡಿಸೆಂಬರ್ ಒಳಗೆ 1,80,253 ಮನೆ ಪೂರ್ಣ – ಜಮೀರ್ ಗ್ಯಾರಂಟಿ
ಸದನದಲ್ಲೂ ಜೋರು ಚರ್ಚೆ
ಇನ್ನೂ ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ವಿಧಾನ ಸಭೆಯಲ್ಲೂ ಆಗ್ರಹ ಕೇಳಿಬಂದಿತು. ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡುತ್ತಾ, ಸಿಎಂ 24 ಕೊಲೆ ಮಾಡಿದ್ದಾರೆಂಬ ಆರೋಪ ಬಗ್ಗೆ ಪ್ರಸ್ತಾಪ ಮಾಡಿದರು. ಏನ್ ನಡೀತಿದೆ ರಾಜ್ಯದಲ್ಲಿ, ಸಿಎಂ ಮೇಲೆಯೇ ಆಪಾದನೆ ಮಾಡಿದ್ದಾರೆ. ಹಾಗಾದರೆ ಸಿಎಂ ಕೊಲೆಗಾರರಾ? ಆರೋಪ ಮಾಡಿದವರ ಮೇಲೆ ಕ್ರಮ ಏನು? ನೀವು ಮೌನವಾಗಿದ್ರೆ ಏನ್ ತಿಳ್ಕೊಳ್ಳೋದು ನಾವು? ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: ತುಂಗಭದ್ರಾ ಡ್ಯಾಮ್‌ನ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಿ: ವಿಜಯೇಂದ್ರ ಆಗ್ರಹ
ಇದಕ್ಕೆ ದನಿಗೂಡಿಸಿದ ಶಾಸಕ ಸುರೇಶ್ ಕುಮಾರ್, ಸಿಎಂ ಮೇಲೆ ಧೈರ್ಯವಾಗಿ ಆರೋಪ ಮಾಡಿದ್ದಾನೆ ಆವ್ಯಕ್ತಿ, ಸರ್ಕಾರ ಇದನ್ನು ಹೇಗೆ ಸಹಿಸಿಕೊಳ್ಳುತ್ತೆ? ಸರ್ಕಾರ ಯಾಕೆ ಸುಮ್ಮನಿದೆ? ಅಂತ ಪ್ರಶ್ನಿಸಿದರು.
ಇದಕ್ಕೆ ಉತ್ತರ ಕೊಟ್ಟ ಪರಮೇಶ್ವರ್ ಸರ್ಕಾರ ಅಷ್ಟೊಂದು ಹೆಲ್ಪ್ ಲೆಸ್ ಆಗಿದೆ ಅನ್ಕೊಂಡಿದ್ದೀರಾ? ಅಂತ ತಿರುಗೇಟು ಕೊಟ್ಟರು. ಈ ವೇಳೆ ಸುನೀಲ್ ಕುಮಾರ್ ದೇಶದ ನಂ.1 ಗೃಹ ಸಚಿವರು ಕ್ರಮ ತಗೊಳ್ಳಿ ಅಂತ ಕಾಲೆಳೆದರು. ನಂತ್ರ ಮಾತು ಮುಂದುವರಿಸಿದ ಪರಂ, ಆ ವ್ಯಕ್ತಿ ವಿರುದ್ಧ ಹಲವು ಕೇಸ್ ಇವೆ, ಆ ವ್ಯಕ್ತಿ ಹೆಸರು ಹೇಳಲ್ಲ. ಇಂಥ ವ್ಯಕ್ತಿಯನ್ನು ಸಮಾಜದಲ್ಲಿ ಹೀಗೇ ಸುಮ್ಮನೆ ಬಿಡಲ್ಲ. ಕಾನೂನು ಚಲಾಯಿಸಿ ಕ್ರಮ ತಗೋತೀವಿ. ಏನು ಕ್ರಮ ತಗೋಬೇಕೋ ತಗೋತೀವಿ. ಈಗಾಗಲೇ ಕ್ರಮ ತಗೊಳ್ಳೋಕ್ಕೆ ಪೊಲೀಸರಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಅಪಪ್ರಚಾರಕರ ವಿರುದ್ಧ ಸ್ವಯಂಪ್ರೇರಿತ ಕೇಸ್ ಹಾಕಿ: ಅಶ್ವಥ್ ನಾರಾಯಣ್ ಆಗ್ರಹ
ಬೆಂಗಳೂರು: ರಾಜ್ಯಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಎಸ್‌ಐಟಿ ತನಿಖೆಯ ಬಗ್ಗೆ ಇಂದು ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ಉತ್ತರ ನೀಡಲಿದ್ದಾರೆ.
ಸದನದಲ್ಲಿ ಧರ್ಮಸ್ಥಳ (Dharmasthala) ವಿರುದ್ಧದ ಷಡ್ಯಂತ್ರ ನಡೆಸಿರುವವರ ಹೆಸರು ಬಹಿರಂಗಪಡಿಸಬೇಕು. ಮುಸುಕುಧಾರಿ ವ್ಯಕ್ತಿಯನ್ನು ಬಂಧಿಸಿ ಎಸ್‌ಐಟಿ ತನಿಖೆಯ ಮಧ್ಯಂತರ ವರದಿಯನ್ನು ಮಂಡಿಸಬೇಕು ಎಂದು ವಿಪಕ್ಷ ನಾಯಕರು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಗೃಹ ಸಚಿವರು ಎಸ್‌ಐಟಿ (SIT) ತನಿಖೆಯ ಬಗ್ಗೆ ಏನು ಹೇಳುತ್ತಾರೆ? ಈ ಪ್ರಕರಣದಲ್ಲಿ ಸರ್ಕಾರದ ನಿಲುವೇನು ಎಂಬುದು ಎಲ್ಲರಲ್ಲಿ ಕುತೂಹಲ ಕೆರಳಿಸಿದೆ. ಇದನ್ನೂ ಓದಿ: ದರ್ಶನ್ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
ಅನಾಮಿಕ ವ್ಯಕ್ತಿ ನೀಡಿದ ದೂರಿನ ಮೇಲೆ ಎಸ್‌ಐಟಿ ರಚನೆ ಮಾಡಿರುವುದು, ಧರ್ಮಸ್ಥಳದಲ್ಲಿ ಹೂತಿಟ್ಟಿರುವ ಶವಗಳಿಗಾಗಿ 15ಕ್ಕೂ ಹೆಚ್ಚು ದಿನಗಳಿಂದ ಗುಂಡಿ ಅಗೆದು ಏನೂ ಸಿಗದ ವಿಚಾರವಾಗಿ ಬಿಜೆಪಿ ನಾಯಕರು ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಸಬಹುದು. ಜೊತೆಗೆ ಧರ್ಮಸ್ಥಳದ ಬಗ್ಗೆ ಷಡ್ಯಂತ್ರ ನಡೆದಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಒಪ್ಪಿಕೊಂಡಿರುವುದು. ಇವೆಲ್ಲವೂ ಸದನದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುವ ಸಾಧ್ಯತೆಗಳಿವೆ.
– ಹಿಂದೂ ಧಾರ್ಮಿಕ ಕೇಂದ್ರವನ್ನ ಟಾರ್ಗೆಟ್ ಮಾಡಲಾಗಿದೆ
– ಇನ್ನೆಷ್ಟು ಗುಂಡಿ ಅಗೆಯುತ್ತೀರಾ? – ಸುನೀಲ್ ಕುಮಾರ್ ಪ್ರಶ್ನೆ
ಬೆಂಗಳೂರು: ವಿಧಾನಸಭೆಯಲ್ಲಿಂದು ಧರ್ಮಸ್ಥಳ ಪ್ರಕರಣ (Dharmasthala Burials Case) ಪ್ರತಿಧ್ವನಿಸಿ ಗದ್ದಲಕ್ಕೆ ಕಾರಣವಾಯ್ತು. ಶೂನ್ಯವೇಳೆಯಲ್ಲಿ ಬಿಜೆಪಿ (BJP_ ಶಾಸಕ ಸುನೀಲ್ ಕುಮಾರ್ ಪ್ರಸ್ತಾಪಿಸಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡರು.
ತನಿಖೆಗೆ ನಮ್ಮ ಆಕ್ಷೇಪ ಇಲ್ಲ. ಆದ್ರೆ ಹಿಂದೂ ಧಾರ್ಮಿಕ ಕೇಂದ್ರ ಟಾರ್ಗೆಟ್ ಮಾಡಲಾಗಿದೆ. ಅಪಪ್ರಚಾರ ನಡೆಯುತ್ತಿದೆ. ಅನಾಮಿಕ, ಐದು ಗುಂಡಿ, ಹತ್ತು ಗುಂಡಿ ಅಂತ ಹೇಳ್ತಾ 13 ಗುಂಡಿ ಆಗಿದೆ. ಊಹಾಪೋಹಗಳಿಗೆ ಸರ್ಕಾರ ತೆರೆ ಎಳೆಯಬೇಕು. ಧಾರ್ಮಿಕ ನಂಬಿಕೆ ಮೇಲೆ ಅಪಪ್ರಚಾರ ಮಾಡ್ತಿರುವವರ ಮೇಲೆ ಕ್ರಮ ಆಗಬೇಕು. ತನಿಖೆ ಎಲ್ಲಿವರೆಗೆ ಬಂದಿದೆ? ಇನ್ನೆಷ್ಟು ಗುಂಡಿ ತೆಗಿಯುತ್ತೀರಾ? ಅಂತ ಗೃಹ ಸಚಿವರು ಸ್ಪಷ್ಟನೆ ಕೊಡಬೇಕು ಅಂತಾ ಸುನೀಲ್ ಕುಮಾರ್ (Sunil Kumar) ಆಗ್ರಹಿಸಿದ್ರು. ಇದನ್ನೂ ಓದಿ: ನನ್ನ ಮಾತು ಇಷ್ಟೊಂದು ತೀವ್ರ ಸ್ವರೂಪಕ್ಕೆ ಹೋಗುತ್ತೆ ಅಂತ ಗೊತ್ತಿರಲಿಲ್ಲ: ರಾಜಣ್ಣ ಪಶ್ಚಾತ್ತಾಪದ ಮಾತು
ಈ ವೇಳೆ ಉತ್ತರ ಕೊಟ್ಟ ಗೃಹ ಸಚಿವ ಪರಮೇಶ್ವರ್ (Parameshwar), ತನಿಖೆ ನಡೆಯುತ್ತಿದೆ, ತನಿಖೆ ಮಧ್ಯೆ ನಾವು ಮಧ್ಯ ಪ್ರವೇಶ ಮಾಡಲ್ಲ. ತನಿಖೆ ಒಂದು ಹಂತಕ್ಕೆ ಬಂದ ನಂತರ ವರದಿ ಕೊಡ್ತಾರೆ. ವರದಿ ಕೊಟ್ಟ ನಂತರ ನಾನು ಪೂರ್ಣ ಉತ್ತರ ಕೊಡ್ತೇನೆ ಅಂದ್ರು. ಆದರೆ ಪರಮೇಶ್ವರ್ ಉತ್ತರಕ್ಕೆ ಬಿಜೆಪಿ ಸದಸ್ಯರು ಒಗ್ಗಟ್ಟಾಗಿ ವಿರೋಧ ವ್ಯಕ್ತಪಡಿಸಿ, ಸ್ಪಷ್ಟೀಕರಣ ಕೊಡಬೇಕು, ಇನ್ನೂ ಎಷ್ಟು ಗುಂಡಿ ಅಗೆಯುತ್ತೀರಾ ಹೇಳಿ? ಅಪಪ್ರಚಾರ ನಿಲ್ಲಿಸಿ, ಸುಳ್ಳುಪ್ರಚಾರ ಇದು, ಪ್ರಕರಣದ ಚರ್ಚೆಗೆ ಅವಕಾಶ ಕೊಡಿ ಅಂತ ಬಿಜೆಪಿ ಸದಸ್ಯರು ಆಗ್ರಹಿಸಿದ್ರು. ಇದನ್ನೂ ಓದಿ: ಸಚಿವ ಸ್ಥಾನದಿಂದ ಕೆ.ಎನ್.ರಾಜಣ್ಣ ವಜಾ ಖಂಡಿಸಿ ಬೆಂಬಲಿಗರ ಆಕ್ರೋಶ – ಮಧುಗಿರಿ ಬಂದ್
ಆಗ ಸದನದಲ್ಲಿ ಧರ್ಮಸ್ಥಳ ಗದ್ದಲ ಜೋರಾಯ್ತು. ಮಧ್ಯಪ್ರವೇಶ ಮಾಡಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ನಾವು ಯಾರ ಪರವೂ ಇಲ್ಲ, ನಾವು ಸತ್ಯದ ಪರ ಅಂದ್ರು. ಚರ್ಚೆಗೆ ಈಗ ಅವಕಾಶ ಕೊಡಿ ಅಂತಾ ಆರ್.ಅಶೋಕ್ ಆಗ್ರಹಿಸಿದ್ರೆ, ಮಧ್ಯಂತರ ವರದಿ ಪಡೆದುಕೊಂಡು ಕ್ಲಾರಿಟಿ ಕೊಡಿ. ಇನ್ನೊಬ್ಬ ಬಂದು ಗುಂಡಿ ಅಗೆಯಬೇಕು ಅಂತಾನೆ, ಅಗೆಯುತ್ತೀರಾ? ಅಂತಾ ಸುನೀಲ್ ತಿರುಗೇಟು ನೀಡಿದ್ರು.
ಮತ್ತೆ ಉತ್ತರ ಕೊಟ್ಟ ಪರಮೇಶ್ವರ್, ಎಸ್‌ಐಟಿ ತನಿಖೆ ಮುಗಿಯುವವರೆಗೂ ನಾವು ಮಧ್ಯಪ್ರವೇಶ ಮಾಡಲ್ಲ, ತನಿಖೆ ನಂತರ ವರದಿ ಪಡೆಯುತ್ತೇವೆ ಅಂತಾ ಸ್ಪಷ್ಟನೆ ಕೊಟ್ಟರು. ನಿಯಮ 69ರಡಿ ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಮನವಿ ಮಾಡಿದ್ದು, ನಾಳೆ, ನಾಡಿದ್ದು ಕಲಾಪದಲ್ಲಿ ಚರ್ಚೆಗೆ ಅವಕಾಶ ಸಿಗುತ್ತಾ ಎಂಬುದನ್ನ ಕಾದುನೋಡಬೇಕಿದೆ. ಇದನ್ನೂ ಓದಿ: ರಾಜಣ್ಣ ಮಾಡಿದ ಘೋರ ಅಪರಾಧವೇನು? ಸಿಎಂ ಸದನದಲ್ಲಿ ಉತ್ತರಿಸಲಿ: ವಿಜಯೇಂದ್ರ ಆಗ್ರಹ
ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ (Dharmasthala Case) ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪರಮೇಶ್ವರ್ (Parameshwar) ಎಚ್ಚರಿಕೆ ನೀಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್ ಮಾಧ್ಯಮದಲ್ಲಿ (Digital Media) ಹರಿದಾಡುತ್ತಿರುವ ಉಹಾಪೋಹದ ಸುದ್ದಿಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಪ್ರಚೋದನಕಾರಿ ವಿಷಯಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧ ಇಲ್ಲದ ಇರುವ ಇಲ್ಲಸಲ್ಲದ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಪಾಯಿಂಟ್ ನಂ.1ರಲ್ಲಿ ಸಿಕ್ಕ ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು; ವಾರಸುದಾರರು ಪತ್ತೆ
ಹೇಟ್ ಸ್ಪೀಚ್ ಬಗ್ಗೆ ಕಾನೂನು ಮಾಡಿದ ನಂತರ ದಕ್ಷಿಣ ಕನ್ನಡದಲ್ಲಿ ದ್ವೇಷ ಭಾಷಣದ (Hate Speech) ಈಗ ಕಡಿಮೆಯಾಗಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರಾದರೂ ದ್ವೇಷದ ಪೋಸ್ಟ್ ಹಾಕಿದರೆ ಅವರನ್ನು ಬಿಡುವ ಪ್ರಶ್ನೆಯೇ ಇಲ್ಲ. ಕ್ರಮ ಕೈಗಳ್ಳುತ್ತೇವೆ ಎಂದು ತಿಳಿಸಿದರು.
ಫೇಕ್ ಸುದ್ದಿಗಳ ಮೇಲೆ ಹದ್ದಿನ ಕಣ್ಣಿಡಲು ಸರ್ಕಾರ ಈಗ ಮುಂದಾಗಿದ್ದು ವಿಧಾನಸೌಧದಲ್ಲಿ ಗೃಹ ಸಚಿವ ಪರಮೇಶ್ವರ್ ನೇತೃತ್ವದಲ್ಲಿ ಈಗ ಮಹತ್ವದ ಸಭೆ ನಡೆಯುತ್ತಿದೆ. ಈ ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ, ಡಿಜಿಪಿ ಪ್ರಣಬ್ ಮೊಹಂತಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹಿರಿಯ ಪೊಲೀಸ್ ಅಧಿಕಾರಿಗಳಾದ ಮುರುಗನ್, ಶರತ್ ಚಂದ್ರ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದಾರೆ.