Tag: parishad Election

  • ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

    ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

    ಬೆಂಗಳೂರು: ರಾಜ್ಯದ 5 ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ (Parishad Election) ಕಾಂಗ್ರೆಸ್ (Congress) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

    ಒಟ್ಟು 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯೂರಿನ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮ ತಮ್ಮ ಪತಿ ಶ್ರೀನಿವಾಸ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೂರ್ಣಿಮ ವಾರದ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಪೂರ್ಣಿಮ ಕಾಂಗ್ರೆಸ್ ಸೇರ್ಪಡೆ ಆದ ಒಂದೇ ವಾರದಲ್ಲಿ ಪೂರ್ಣಿಮ ಪತಿ ಶ್ರೀನಿವಾಸ್‌ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ: ವೀರಪ್ಪ ಮೊಯ್ಲಿ

    ಬೆಂಗಳೂರು ಪದವೀಧರರ ಕ್ಷೇತ್ರ – ರಾಮೋಜಿ ಗೌಡ
    ಬೆಂಗಳೂರು ಶಿಕ್ಷಕರ ಕ್ಷೇತ್ರ – ಪುಟ್ಟಣ್ಣ
    ನೈಋತ್ಯ ಶಿಕ್ಷಕರ ಕ್ಷೇತ್ರ – ಕೆಕೆ ಮಂಜುನಾಥ್
    ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿಟಿ ಶ್ರೀನಿವಾಸ್
    ಈಶಾನ್ಯ ಪದವೀಧರರು ಕ್ಷೇತ್ರ – ಡಾ. ಚಂದ್ರಶೇಖರ ಬಿ. ಪಾಟೀಲ್ ಹೆಸರನ್ನು ಘೋಷಿಸಲಾಗಿದೆ. ಇದನ್ನೂ ಓದಿ: ಜನವರಿಯಲ್ಲಿ ಜಾತಿಗಣತಿ ವರದಿ ಸ್ವೀಕಾರ: ಸಿದ್ದರಾಮಯ್ಯ

    Web Stories 
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೈಕಮಾಂಡ್ ಗಮನ ಸೆಳೆಯಲು ಕೆಜಿಎಫ್ ಬಾಬು ಹೊಸ ಪ್ಲ್ಯಾನ್!

    ಹೈಕಮಾಂಡ್ ಗಮನ ಸೆಳೆಯಲು ಕೆಜಿಎಫ್ ಬಾಬು ಹೊಸ ಪ್ಲ್ಯಾನ್!

    ನವದೆಹಲಿ: ಕಳೆದ ಬಾರಿ ಪರಿಷತ್ ಚುನಾವಣೆಯಲ್ಲಿ ಸೋಲನ್ನಪ್ಪಿದ್ದ ಕಾಂಗ್ರೆಸ್ ನಾಯಕ ಯೂಸುಫ್ ಷರಿಫ್ ಅಲಿಯಾಸ್ ಕೆಜಿಎಫ್ ಬಾಬು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರ ಗಮನ ಸೆಳೆಯುವ ಮೂಲಕ ಟಿಕೆಟ್ ಪಡೆಯಲು ಹೊಸ ತಂತ್ರ ಮಾಡಿದ್ದಾರೆ.

    2023ರ ವಿಧಾನಸಭೆ ಚುನಾವಣೆಗೆ ಚಿಕ್ಕಪೇಟೆಯಿಂದ ಸ್ಪರ್ಧಿಸಲು ಕೆಜಿಎಫ್ ಬಾಬು ತಯಾರಿ ಆರಂಭಿಸಿದ್ದಾರೆ. ಇದಕ್ಕಾಗಿ 350 ಕೋಟಿ ಹಣವನ್ನು ಕ್ಷೇತ್ರಕ್ಕೆ ಖರ್ಚು ಮಾಡಲು ನಿರ್ಧರಿಸಿದ್ದಾರೆ. ಬಡ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್, ಬೈಕ್, ಉಚಿತ ಮನೆ, ಕ್ಷೇತ್ರದಲ್ಲಿನ ಪ್ರತಿ ಕುಟುಂಬಕ್ಕೆ 5,000 ರೂಪಾಯಿ ಚೆಕ್ ವಿತರಣೆ ಮಾಡಲು ತೀರ್ಮಾನಿಸಿದ್ದಾರೆ. ಇದನ್ನೂ ಓದಿ: ದಲಿತನಿಗೆ ಚಪ್ಪಲಿಯಿಂದ ಥಳಿಸಿದ ಗ್ರಾಮದ ಮುಖ್ಯಸ್ಥ – ಬಂಧನ

    ಈಗಾಗಲೇ ಸಾಕಷ್ಟು ತಯಾರಿ ಮಾಡಿಕೊಂಡಿರುವ ಅವರಿಗೆ ಚಿಕ್ಕಪೇಟೆಯಿಂದ ಟಿಕೆಟ್ ಸಿಗುವುದು ಇನ್ನು ಖಚಿತವಾಗಿಲ್ಲ. ರಾಜ್ಯ ನಾಯಕರ ಮುಂದೆ ಟಿಕೆಟ್‍ಗಾಗಿ ಮನವಿ ಮಾಡಿದ್ದು ಕೆಲವು ನಾಯಕರಿಂದ ಭರವಸೆ ಸಿಕ್ಕಿದೆ ಎನ್ನಲಾಗಿದೆ. ಈ ಭರವಸೆಯನ್ನೇ ನಂಬಿ ಕೂರದ ಕೆಜಿಎಫ್ ಬಾಬು ಈಗ ಹೈಕಮಾಂಡ್ ಗಮನ ಸೆಳೆಯಲು ಪ್ಲ್ಯಾನ್ ಮಾಡಿದ್ದಾರೆ.

    Congress

    ಕೆಜಿಎಫ್ ಬಾಬು ಈಗ ತಾವು ಚಿಕ್ಕಪೇಟೆ ಕ್ಷೇತ್ರಕ್ಕೆ ಮಾಡುತ್ತಿರುವ ಕೆಲಸಗಳನ್ನು ವಿವರಿಸುವ ಫ್ಲೆಕ್ಸ್‌ಗಳನ್ನು ದೆಹಲಿಯ ಎಐಸಿಸಿ ಕಚೇರಿಯ ಮುಂಭಾಗದಲ್ಲಿ ಅಳವಡಿಸಿದ್ದಾರೆ. ಕಾಂಗ್ರೆಸ್ ಕಚೇರಿಯ ಕಾಂಪೌಂಡ್‍ಗೆ ಎರಡು ಹಾಗೂ ಕಚೇರಿಯ ಮುಖ್ಯದ್ವಾರಕ್ಕೆ ಅಭಿಮುಖವಾಗಿ ಮತ್ತೊಂದು ದೊಡ್ಡ ಫ್ಲೆಕ್ಸ್‌ ಹಾಕುವ ಮೂಲಕ ದೆಹಲಿ ನಾಯಕರ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ ಮಾಂಸಾಹಾರ ತಿಂದು ಸಂಜೆ ದೇವಸ್ಥಾನಕ್ಕೆ ಹೋಗಬಾರದಾ : ಸಿದ್ದರಾಮಯ್ಯ ಪ್ರಶ್ನೆ

    ದೆಹಲಿಯಲ್ಲಿರುವ ಎಐಸಿಸಿ ಕಚೇರಿಗೆ ನಿತ್ಯ ಹಲವು ಪ್ರಮುಖ ನಾಯಕರು ಆಗಮಿಸುತ್ತಾರೆ. ಈ ಫ್ಲೆಕ್ಸ್‌ಗಳನ್ನು ಇಲ್ಲಿ ಅಳವಡಿಸುವುದರಿಂದ ತಮ್ಮ ಸೇವೆ ದೆಹಲಿ ನಾಯಕರವರೆಗೂ ತಲುಪಬಹುದು ಎಂದು ಅವರು ಲೆಕ್ಕಚಾರ ಹಾಕಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಕಿ ಇಲ್ಲದೆ ಹೊಗೆಯಾಡುತ್ತಾ? – ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಸಿದ್ದು ಗುದ್ದು

    ಬೆಂಕಿ ಇಲ್ಲದೆ ಹೊಗೆಯಾಡುತ್ತಾ? – ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಸಿದ್ದು ಗುದ್ದು

    ಕೋಲಾರ: ರಾಜ್ಯದಲ್ಲಿ 25 ಸ್ಥಾನಗಳ ಪೈಕಿ ಜೆಡಿಎಸ್ 7 ಕಡೆ ಮಾತ್ರ ಅಭ್ಯರ್ಥಿಗಳನ್ನ ಹಾಕಿದೆ ಅಂದ್ರೆ ಉಳಿದ 18 ಕಡೆ ಅಭ್ಯರ್ಥಿಗಳೇ ಇಲ್ಲ ಅಂದ್ರೆ ಏನು ಅರ್ಥ. ಹೊಂದಾಣಿಕೆ ಅಲ್ಲದೆ ಇನ್ನೇನು ಮಾಡಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ರು.

    ಕೋಲಾರ ತಾಲೂಕಿನ ನರಸಾಪುರ ಬಳಿ ಮಳೆಯಿಂದ ಹಾನಿಯಾದ ಪ್ರದೇಶದಲ್ಲಿ ಬೆಳೆ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈಗಾಗಲೇ ಯಡಿಯೂರಪ್ಪನವರು ಬೆಂಬಲ ಕೇಳಿದ್ದೇವೆ ಎಂದಿದ್ದಾರೆ. ಅಂದರೆ ಚುನಾವಣೆಗೂ ಮೊದಲೇ ಮಾತುಕತೆ ನಡೆದಿದೆ ತಾನೆ ಎಂದ್ರು. ಬೆಂಕಿ ಇಲ್ಲದೆ ಹೊಗೆ ಆಡುತ್ತಾ ಯಡಿಯೂರಪ್ಪ ಸುಮ್ನೆ ಹೇಳ್ತಾರಾ ಎಂದು ಮಾಧ್ಯಮದವರನ್ನೇ ಪ್ರಶ್ನೆ ಮಾಡಿದ್ರು. ಇದನ್ನೂ ಓದಿ: ರೈತರಿಗೆ ಎಲ್ಲ ರೀತಿಯ ನೆರವು ನೀಡಲು ಸರ್ಕಾರ ಬದ್ಧ: ಆರ್. ಅಶೋಕ್

    ಇದೇ ವೇಳೆ ಪರಿಷತ್ ಚುನಾವಣೆಯಲ್ಲಿ ಎಷ್ಟು ಸ್ಥಾನ ಗೆಲ್ತೀರಾ ಅನ್ನೋ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ನಾನೇನ್ ಜ್ಯೋತಿಷ್ಯ ಹೇಳಲಾ ಎಂದು ಗುಡುಗಿದ್ರು. ಬಳಿಕ ಕಳೆದ ಬಾರಿ 14 ಸ್ಥಾನ ಗೆದ್ದಿದ್ದೆವು. ಈ ಬಾರಿ 15 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ರು. ಅಲ್ಲದೆ ಹಾಸನದ ಎ.ಮಂಜು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರ ಮಗ ಬಿಜೆಪಿ ಸೇರಿಲ್ಲ ಅಂತಾ ಹೇಳಿದ್ದಾನೆ. ಮಂತರ್ ಗೌಡ ಅವರ ತಾಯಿ ಕೊಡಗಿನವರು ಹಾಗಾಗಿ ನಾನು ಅವರನ್ನು ಮಾತನಾಡಿಲ್ಲ, ಇಲ್ಲಿ ಎ ಮಂಜು ಪ್ರಶ್ನೆ ಅಲ್ಲ, ಮಂತರ್ ಗೌಡ ಮುಖ್ಯ ಎಂದು ಹೇಳಿದ್ರು.

  • ನಾನು ಮಂತ್ರಿ ಆಗಿರುವವರೆಗೆ ನನ್ನ ಮಗ MLA,MLC ಆಗುವುದು ಬೇಡ: ಈಶ್ವರಪ್ಪ

    ನಾನು ಮಂತ್ರಿ ಆಗಿರುವವರೆಗೆ ನನ್ನ ಮಗ MLA,MLC ಆಗುವುದು ಬೇಡ: ಈಶ್ವರಪ್ಪ

    ಶಿವಮೊಗ್ಗ: ರಾಜ್ಯ ವಿಧಾನ ಪರಿಷತ್‍ನ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಪಡೆಯಲು ಪೈಪೋಟಿ ನಡೆಯುತ್ತಿದೆ. ಆದರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಾನು ಮಂತ್ರಿ ಆಗಿರುವವರೆಗೂ ನನ್ನ ಪುತ್ರ ಕಾಂತೇಶ್ ಎಂಎಲ್‍ಎ, ಎಂಎಲ್‍ಸಿ ಸ್ಥಾನಕ್ಕೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಿವಮೊಗ್ಗದಿಂದ ಪರಿಷತ್ ಸ್ಥಾನಕ್ಕೆ ನನ್ನ ಪುತ್ರ ಕಾಂತೇಶ್ ಈ ಬಾರಿ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ನಾನು ಮಂತ್ರಿ ಆಗಿರುವ ಕಾರಣ ನನ್ನ ಪುತ್ರ ಎಂಎಲ್‍ಎ ಅಥವಾ ಎಂಎಲ್‍ಸಿ ಆಗಕೂಡದು ಎಂದು ತೀರ್ಮಾನಿಸಿದ್ದೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಮೂಲಕ ಕೋವಿಡ್ ಲಸಿಕೆ ಟ್ರಯಲ್

    ಅಭ್ಯರ್ಥಿ ಆಯ್ಕೆ ಸಂಬಂಧ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದೆ. ಅಭ್ಯರ್ಥಿಗಳ ಪಟ್ಟಿ ಹೆಚ್ಚು ಕಡಿಮೆ ಫೈನಲ್ ಮಾಡಿ ತೀರ್ಮಾನಿಸಲಾಗಿದೆ. ಅಧ್ಯಕ್ಷರು ಹಾಗು ಮುಖ್ಯಮಂತ್ರಿ ಅವರು ಮತ್ತೊಮ್ಮೆ ಚರ್ಚೆ ಮಾಡಿ ಕೇಂದ್ರದ ನಾಯಕರಿಗೆ ಕಳುಹಿಸುತ್ತಾರೆ. ಕೇಂದ್ರದ ನಾಯಕರು ಇನ್ನೆರಡು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ದೆಹಲಿಯಲ್ಲಿ ಪೊಲ್ಯೂಷನ್ ಲಾಕ್‍ಡೌನ್ – 1 ವಾರ ಆನ್‌ಲೈನ್‌ ಕ್ಲಾಸ್‌, ವರ್ಕ್‌ ಫ್ರಂ ಹೋಂ

    ಈಗಾಗಲೇ ವರಿಷ್ಠರ ಮುಂದೆ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಪುತ್ರನ ಹೆಸರು ಬೇಡ ಎಂದು ತಿಳಿಸಿದ್ದೇನೆ. ನನ್ನ ಅಭಿಪ್ರಾಯವನ್ನು ಪಕ್ಷದ ವರಿಷ್ಠರು ಒಪ್ಪುತ್ತಾರೆ ಎಂದು ಭಾವಿಸುತ್ತೇನೆ. ಆದರೆ ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತದೋ, ಅದಕ್ಕೆ ಯಾವಾಗಲೂ ಬದ್ದನಾಗಿರುತ್ತೇನೆ ಎಂದರು. ಇದನ್ನೂ ಓದಿ: ಲಸಿಕೆ ಹಾಕಿಸದಿದ್ರೂ ಬರುತ್ತೆ ಎರಡು ಡೋಸ್ ವ್ಯಾಕ್ಸಿನೇಷನ್ ಸಕ್ಸಸ್ ಮೆಸೇಜ್!