Tag: Parishad Elections

  • ಚಿಕ್ಕಮಗಳೂರು | 2021ರ ಪರಿಷತ್ ಚುನಾವಣೆ – ಫೆ.28ಕ್ಕೆ ಮರು ಮತ ಎಣಿಕೆ

    ಚಿಕ್ಕಮಗಳೂರು | 2021ರ ಪರಿಷತ್ ಚುನಾವಣೆ – ಫೆ.28ಕ್ಕೆ ಮರು ಮತ ಎಣಿಕೆ

    ಚಿಕ್ಕಮಗಳೂರು: 2021ರಲ್ಲಿ ವಿಧಾನ ಪರಿಷತ್‍ಗೆ ನಡೆದಿದ್ದ ಚುನಾವಣೆಯ (Parishad Elections) ಮರು ಮತ ಎಣಿಕೆಯನ್ನು (Vote Recou) ಕೋರ್ಟ್‌ ಆದೇಶದಂತೆ ಫೆ.28ರಂದು ನಡೆಯಲಿದೆ. ಮರು ಮತ ಎಣಿಕೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

    ಈಗಾಗಲೇ ಅಭ್ಯರ್ಥಿಗಳಿಗೆ ಜಿಲ್ಲಾಡಳಿತ ನೋಟಿಸ್ ನೀಡಿದೆ. ಮರು ಮತ ಎಣಿಕೆ ಕಾರ್ಯಕ್ಕೆ ಚುನಾವಣಾ ಆಯೋಗದಿಂದ (Election Commission of India) ವೀಕ್ಷಕರ ನೇಮಕ ಮಾಡಲಾಗಿದೆ. ಮರು ಮತ ಎಣಿಕೆಯ ವೀಕ್ಷಕರಾಗಿ ಉಜ್ವಲ್ ಕುಮಾರ್ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.

    ಮರು ಮತ ಎಣಿಕೆ ಕಾರ್ಯದ ಸಂಪೂರ್ಣ ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ಮತ ಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ (Court) ಸಲ್ಲಿಸಲಾಗುತ್ತದೆ. ಅಭ್ಯರ್ಥಿಗಳು ಹಾಗೂ ಅಭ್ಯರ್ಥಿಗಳ ಪರ ಓರ್ವ ಏಜೆಂಟ್‍ಗೆ ಮಾತ್ರ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

    2021ರಲ್ಲಿ ನಡೆದಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಉಪಸಭಾಪತಿ ಪ್ರಾಣೇಶ್, ಕಾಂಗ್ರೆಸ್ಸಿನಿಂದ ಗಾಯತ್ರಿ ಶಾಂತೇಗೌಡ ಸ್ಪರ್ಧಿಸಿದ್ದರು. 6 ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸೋಲು ಕಂಡಿದ್ದರು. ನಾಮನಿರ್ದೇಶಿತ 12 ಮತಗಳ ಎಣಿಕೆ ಮಾಡಬಾರದೆಂದು ಪರಾಜಿತ ಅಭ್ಯರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ನಾಮನಿರ್ದೇಶಿತರ ಮತಗಳನ್ನ ಬಿಟ್ಟು ಎಣಿಕೆ ಮಾಡುವಂತೆ ಸೂಚಿಸಿತ್ತು. ಈ ತೀರ್ಪನ್ನು ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದೆ.

    ನಗರದ ಐ.ಡಿ.ಎಸ್.ಜಿ. ಕಾಲೇಜಿನಲ್ಲಿ ಶುಕ್ರವಾರ ಮರು ಮತ ಎಣಿಕೆ ಕಾರ್ಯ ನಡೆಯಲಿದೆ.

  • ಎಂಎಲ್‍ಸಿ ಉಪ ಚುನಾವಣೆ: ಎಂಬಿಪಿ ಸಹೋದರ ಕಣಕ್ಕೆ

    ಎಂಎಲ್‍ಸಿ ಉಪ ಚುನಾವಣೆ: ಎಂಬಿಪಿ ಸಹೋದರ ಕಣಕ್ಕೆ

    ವಿಜಯಪುರ: ಬಸನಗೌಡ ಪಾಟೀಲ್ ಯತ್ನಾಳ್‍ರಿಂದ ತೆರವಾದ ವಿಜಯಪುರ-ಬಾಗಲಕೋಟೆ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್ ಸಹೋದರ ಸುನೀಲಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ದಾರೆ.

    ಸುನೀಲಗೌಡ ಪಾಟೀಲ್ ಅವರು ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಎಂಬಿ ಪಾಟೀಲ್, ನನ್ನ ಸಹೋದರ ಸುನೀಲಗೌಡ ಪಾಟೀಲ್ ನನ್ನು ಪರಿಷತ್ ಅಭ್ಯರ್ಥಿಯಾಗಿ ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ಜೆಡಿಎಸ್ ನಿರ್ಧಾರ ತೆಗೆದುಕೊಂಡಿದೆ ತಿಳಿಸಿದರು.

    ಎಂಎಲ್ ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ದಾಖಲೆ ಮತಗಳಿಂದ ಗೆಲುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ಎಂಎಲ್‍ಸಿ ಚುನಾವಣಾ ಫಲಿತಾಂಶ ಬಂದ ಮೇಲೆ ಯಾರ ಸೋಲು, ಯಾರು ಗೆಲುವು ಗೊತ್ತಾಗುತ್ತದೆ ಎಂದು ಹೇಳಿ ತಿರುಗೇಟು ನೀಡಿದರು.

    ನಾವು ಮತದಾರರ ಮೇಲೆ ವಿಶ್ವಾಸ ಹೊಂದಿದ್ದೇವೆ. ಆದರೆ ಯತ್ನಾಳ್ ಹಾಗೆ ಸ್ವಯಂ ಘೋಷಿತ ಮಾಡಿಕೊಳ್ಳಲು ತಯಾರಿಲ್ಲ. ಮತದಾರರ ಆರ್ಶೀವಾದದಿಂದ ನಮ್ಮ ಗೆಲುವು ಆಗಲಿದೆ ಎಂದು ಎಂಪಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.

    ನಾಮಪತ್ರ ಸಲ್ಲಿಕೆಗೆ ಕಾಂಗ್ರೆಸ್ ನ ಮುಖಂಡರಾದ ಎಸ್ ಆರ್ ಪಾಟೀಲ್, ಉಮಾಶ್ರೀ, ಎಚ್ ವೈ ಮೇಟಿ, ಸಿಎಸ್ ನಾಡಗೌಡ ಮತ್ತು ಜೆಡಿಎಸ್ ಸಚಿವ ಎಂ ಸಿ ಮನಗೂಳಿ, ಶಾಸಕ ದೇವಾನಂದ ಚವ್ಹಾಣ ಕೂಡ ಸಾಥ್ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv