Tag: Parivar Foundation

  • ಮಧ್ಯಪ್ರದೇಶ ಸಿಎಂ ಭೇಟಿಯಾದ ಸಚಿನ್

    ಮಧ್ಯಪ್ರದೇಶ ಸಿಎಂ ಭೇಟಿಯಾದ ಸಚಿನ್

    ಭೋಪಾಲ್: ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು ಮಂಗಳವಾರ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾದರು.

    ಮಧ್ಯಪ್ರದೇಶದ ವಿವಿಧ ಭಾಗಗಳಲ್ಲಿ ಸಚಿನ್ ತೆಂಡೂಲ್ಕರ್ ಅವರ ಸಂಸ್ಥೆಯ ಸಮಾಜಸೇವೆಗಳ ಬಗ್ಗೆ ಚರ್ಚಿಸಲು ಈ ಭೇಟಿ ನಡೆಯಿತು. ಇದನ್ನೂ ಓದಿ: ಯುವರತ್ನನಿಗೆ ಪದ್ಮಶ್ರೀ ನೀಡಲು ಶಿಫಾರಸ್ಸಿಗೆ ತೀರ್ಮಾನ’

    ಈ ಕುರಿತು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿರೋ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಮಧ್ಯಪ್ರದೇಶವು ಕ್ರಿಕೆಟ್ ದೇವರು ಸಚಿನ್ ಅವರನ್ನು ಆತ್ಮೀಯವಾಗಿ ಸ್ವಾಗತಿಸುತ್ತದೆ. ಮಾಸ್ಟರ್ ಬ್ಲಾಸ್ಟರ್ ಅವರ ಜೊತೆ ಇಂದು ನಮ್ಮ ಮನೆಯಲ್ಲಿ ಅದ್ಭುತವಾದ ಸಭೆ ನಡೆಯಿತು. ನೀವು ನಮ್ಮವರಾಗಿಯೇ ನಮ್ಮ ಜೊತೆ ಇರುವುದಕ್ಕೆ ಖುಷಿಯಾಗುತ್ತಿದೆ. ನಿಮ್ಮ ಮುಂದಿನ ಎಲ್ಲ ಯೋಜನೆಗಳಿಗೂ ನಮ್ಮ ಕಡೆಯಿಂದ ಶುಭಹಾರೈಕೆ ಎಂದು ಟ್ವೀಟ್ ಮಾಡಿದ್ದಾರೆ.

    ಭೇಟಿ ಬಳಿಕ ಸಚಿನ್ ತೆಂಡೂಲ್ಕರ್ ಕೂಡ ಟ್ವೀಟ್ ಮಾಡಿದ್ದು, ಮೈದಾನದೊಳಗೆ ಹಾಗೂ ಹೊರಗೆ ಟೀಂ ಇಂಡಿಯಾಗೆ ಆಡುವುದು ಖುಷಿಯ ವಿಚಾರ. ಸೇವಾ ಕುಟೀರಕ್ಕೆ ಭೇಟಿ ಹಾಗೂ ಪರಿವಾರ ಸಂಸ್ಥೆ ಜೊತೆ ಸೇರಿ ನಿರ್ಮಿಸುತ್ತಿರುವ ವಸತಿ ಶಾಲೆಯ ಕಾಮಗಾರಿ ವೀಕ್ಷಣೆ ತೃಪ್ತಿ ತಂದಿದೆ. ನಮ್ಮ ಮಕ್ಕಳು ಈ ಜಗತ್ತನ್ನು ಉತ್ತಮಗೊಳಿಸಬೇಕು ಹಾಗೂ ಬೆಳಗಬೇಕು. ಎಲ್ಲರಿಗೂ ಸಮಾನ ಅವಕಾಶ ಸಿಗುವಂತೆ ನಾವು ನೋಡಿಕೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:  ರಭಸವಾಗಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಕುರಿಗಳು – ಕುರಿಗಾಹಿಗಳ ಕಣ್ಣೀರು

    ಕೋವಿಡ್ ಸಂಖ್ಯೆ ಇಳಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಚಿನ್ ಮಧ್ಯಪ್ರದೇಶದ ಸೇವಾನಿಯಾ ಎಂಬ ಹಳ್ಳಿಯಲ್ಲಿ ಮಕ್ಕಳನ್ನು ಭೇಟಿಯಾದರು. ಸೇವಾ ಕುಟೀರ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಈ ಯೋಜನೆ ಅಡಿ ಮಕ್ಕಳಿಗೆ ಪೌಷ್ಠಿಕ ಆಹಾರ, ಪೂರಕ ಶಿಕ್ಷಣ ಹಾಗೂ ಕ್ರೀಡೆಗಳಲ್ಲಿ ಭಾಗಿಯಾಗಲು ಅವಕಾಶ ಸಿಗುತ್ತದೆ. ಸಚಿನ್ ತೆಂಡೂಲ್ಕರ್ ಅವರ ಪರಿವಾರ ಸಂಘಟನೆ ಬುಡಕಟ್ಟು ಮಕ್ಕಳಿಗಾಗಿ ಈ ಸೇವಾ ಕುಟೀರಗಳನ್ನು ನಡೆಸುತ್ತಿದೆ.