Tag: parivarthan yatra

  • ಬಿಜೆಪಿ ಪರಿವರ್ತನಾ ಯಾತ್ರೆಗೆ ಇಂದು ತೆರೆ- ಪ್ರಧಾನಿ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

    ಬಿಜೆಪಿ ಪರಿವರ್ತನಾ ಯಾತ್ರೆಗೆ ಇಂದು ತೆರೆ- ಪ್ರಧಾನಿ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ 85 ದಿನಗಳ ಪರಿವರ್ತನಾ ಯಾತ್ರೆಗೆ ಇಂದು ತೆರೆ ಬೀಳಲಿದೆ.

    ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಸಮಾವೇಶದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಮೂರೂವರೆ ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಮಧ್ಯಾಹ್ನ 1 ಗಂಟೆಗೆ ದೆಹಲಿಯಿಂದ ಹೊರಡಲಿರುವ ಪ್ರಧಾನಿ ಮೋದಿ 3.30ರ ವೇಳೆಗೆ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

    ಬಳಿಕ ಅಲ್ಲಿಂದ ನೇರವಾಗಿ ವಿಶೇಷ ಹೆಲಿಕಾಪ್ಟರ್ ಮೂಲಕ 3.50ಕ್ಕೆ ಜೆಸಿನಗರದ ಹೆಲಿಪ್ಯಾಡ್‍ಗೆ ಬಂದಿಳಿಯಲಿದ್ದಾರೆ. ಅಲ್ಲಿಂದ 3.55ಕ್ಕೆ ಸಮಾವೇಶಕ್ಕೆ ಆಗಮಿಸಿ, 1 ಗಂಟೆಗಳ ಕಾಲ ಭಾಷಣ ಮಾಡಲಿದ್ದಾರೆ.

    ಕೇಂದ್ರ ಬಜೆಟ್ ಬಳಿಕ ಮೊದಲ ಸಾರ್ವಜನಿಕ ಭಾಷಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮ ಹೆಚ್ಚಿನ ಮಹತ್ವ ಪಡೆದುಕೊಂಡಿದ್ದು, ವಿದೇಶಗಳಲ್ಲಿರುವ ಎನ್‍ಆರ್‍ಐಗಳಿಗೆ ಮೋದಿ ಭಾಷಣ ತಲುಪಿಸಲು ಬಿಜೆಪಿ ವ್ಯವಸ್ಥೆ ಮಾಡಿಕೊಂಡಿದೆ. ಬಿಜೆಪಿ ಕರ್ನಾಟಕ, ಬಿಜೆಪಿ ಇಂಡಿಯಾ, ಬಿಜೆಪಿ ಟ್ವಿಟ್ಟರ್ ಸಾಮಾಜಿಕ ಜಾಲತಾಣಗಳ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಮೋದಿ ಭಾಷಣ ಪ್ರಸಾರ ಮಾಡಲು ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇಷ್ಟೇ ಅಲ್ಲದೆ 200 ಸೋಶಿಯಲ್ ಮೀಡಿಯಾ ಕಾರ್ಯಕರ್ತರಿಂದ ಫೇಸ್ ಬುಕ್ ಮೂಲಕ ಲೈವ್ ನೀಡಲು ತೀರ್ಮಾನ ತೆಗೆದುಕೊಂಡಿದ್ದು, ಮೋದಿ ಭಾಷಣ ಲೈವ್ ಪ್ರಸಾರ ಮಾಡಲೆಂದೇ ಆಯ್ದ ಕಾರ್ಯಕರ್ತರಿಗೆ ಸೂಕ್ತ ತರಬೇತಿ ನೀಡಲಾಗಿದೆ.

    ಸಮಾವೇಶದಲ್ಲಿ ಮಾತನಾಡುವ ಪ್ರಧಾನಿ ಅವರು ಮಹದಾಯಿ ವಿಚಾರವನನ್ನು ಪ್ರಸ್ತಾಪ ಮಾಡಬೇಕೆಂದು ಕನ್ನಡ ಪರ ಸಂಘಟನೆಗಳು ಒತ್ತಾಯ ಮಾಡಿದ್ದವು. ಆದರೆ ಸಮಾವೇಶದಲ್ಲಿ ಚುನಾವಣಾ ಭಾಷಣ ಮಾತ್ರ ಮೋದಿ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಭಾಷಣದ ವೇಳೆ ಕೇಂದ್ರದಿಂದ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುತ್ತಾರ ಎಂಬ ಚರ್ಚೆಯೂ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ. ಪರಿವರ್ತನಾ ಯಾತ್ರೆ ಮುಕ್ತಾಯದ ನಂತರ ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಈ ಕಾರ್ಯಕ್ರಮದ ಮೂಲಕ ಚಾಲನೆ ನೀಡಲಾಗುತ್ತದೆ.

  • ರಾಜ್ಯದಲ್ಲಿ ಮುಸ್ಲಿಂ ಗೂಂಡಾಗಳು ಹೆಚ್ಚಾಗಿದ್ದಾರೆ- ಪರಿವರ್ತನಾ ಯಾತ್ರೆಯಲ್ಲಿ ಈಶ್ವರಪ್ಪ ಬೆಂಕಿ

    ರಾಜ್ಯದಲ್ಲಿ ಮುಸ್ಲಿಂ ಗೂಂಡಾಗಳು ಹೆಚ್ಚಾಗಿದ್ದಾರೆ- ಪರಿವರ್ತನಾ ಯಾತ್ರೆಯಲ್ಲಿ ಈಶ್ವರಪ್ಪ ಬೆಂಕಿ

    ಬೆಂಗಳೂರು: ಸಿಎಂ ಹಿಂದೂ ಆಗಿದ್ದೇ ಆದ್ರೆ ಗೋಹತ್ಯೆ ತಡೆಯಲಿ. ಲವ್ ಜಿಹಾದ್ ತಡೆಯಲಿ. ಪಿಎಫ್‍ಐ, ಎಸ್‍ಡಿಪಿಐ ಬ್ಯಾನ್ ಮಾಡದವರು ನಿಜವಾದ ಹಿಂದೂನಾ ಅಂತ ವಿಪಕ್ಷ ನಾಯಕ ಈಶ್ವರಪ್ಪ ಪ್ರಶ್ನಿಸಿದ್ದಾರೆ.  ಇದನ್ನೂ ಓದಿ: ಕರಾವಳಿಯಲ್ಲಿ ಹಿಂದೂಗಳು ಹತ್ಯೆ ಮಾಡ್ತಿದ್ದಾರೆ- ಸಿಎಂ ಎದುರೇ ರೈ ವಿವಾದಾತ್ಮಕ ಹೇಳಿಕೆ

    ಸಿಎಂ ವಿರುದ್ಧ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಮುಸ್ಲಿಂ ಗೂಂಡಾಗಳು ಹೆಚ್ಚಾಗಿದ್ದಾರೆ. ಕೆಲ ಮುಸ್ಲಿಮರು ಹಿಂದೂಗಳನ್ನು ಕೊಲ್ಲುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಿಂದೂ ಅಂತಾ ಹೇಳಿಕೊಳ್ತಾರೆ. ಸಿಎಂ ಹಿಂದೂ ಆಗಿದ್ರೆ ಗೋಹತ್ಯೆ ತಡೆಯಲಿ. ಲವ್ ಜಿಹಾದ್ ತಡೆಯಲಿ ಅಂತ ಹೇಳಿದ್ದಾರೆ. ಇದನ್ನೂ ಓದಿ: ಬಶೀರ್ ಸಾವಿನ ಕುರಿತು ಸಂಸದ ಪ್ರತಾಪ್ ಸಿಂಹ ಹೀಗಂದ್ರು

    ಕೃಷ್ಣನ ದೇವಸ್ಥಾನದವರು ಕರೆದಿಲ್ಲ ಅಂತಾರೆ ಸಿಎಂ. ಆದ್ರೆ ಅದೇನ್ ಮದ್ವೆನಾ ಸಿದ್ದರಾಮಯ್ಯ ಅವರನ್ನ ಕರೆಯೋದಕ್ಕೆ? ನಿಮ್ಮ ಕೈಯಲ್ಲಿ ಆರ್ ಎಸ್‍ಎಸ್ ನಿಷೇಧ ಮಾಡೋಕೆ ಆಗಲ್ಲ. ನಿಮಗಷ್ಟೇ ಅಲ್ಲ, ರಾಹುಲ್ ಗಾಂಧಿಗೂ ಆಗಲ್ಲ ಅಂತ ಅವರು ಸವಾಲ್ ಹಾಕಿದರು. ಇದನ್ನೂ ಓದಿ: ಬಿಜೆಪಿ ನಾಯಕ ಕೃಷ್ಣ ಪಾಲೇಮಾರ್ ವಿರುದ್ಧ ಬಶೀರ್ ಕುಟುಂಬಸ್ಥರ ಆಕ್ರೋಶ