Tag: parliament building

  • ಇದೇ 28ರಂದು ಹೊಸ ಸಂಸತ್ ಭವನ ಉದ್ಘಾಟಿಸಲಿದ್ದಾರೆ ಮೋದಿ

    ಇದೇ 28ರಂದು ಹೊಸ ಸಂಸತ್ ಭವನ ಉದ್ಘಾಟಿಸಲಿದ್ದಾರೆ ಮೋದಿ

    ನವದೆಹಲಿ: ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು (Parliament Building) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 28ರಂದು ಉದ್ಘಾಟಿಸಲಿದ್ದಾರೆ ಎಂದು ಲೋಕಸಭೆಯ ಸಚಿವಾಲಯ ತಿಳಿಸಿದೆ.

    ಪ್ರಸ್ತುತ ಲೋಕಸಭೆಯ ಕಟ್ಟಡ ಸುಮಾರು 543 ಸದಸ್ಯರಿಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಿದರೆ ರಾಜ್ಯಸಭಾ ಕಟ್ಟಡದಲ್ಲಿ 250 ಸದಸ್ಯರು ಕುಳಿತುಕೊಳ್ಳಬಹುದು. ಇದೇ ತಿಂಗಳಿನಲ್ಲಿ ಲೋಕಾರ್ಪಣೆಗೊಳ್ಳಲಿರುವ ಸಂಸತ್ ಭವನದಲ್ಲಿ 888 ಸದಸ್ಯರು ಕುಳಿತುಕೊಳ್ಳಬಹುದಾಗಿದೆ.

    ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ: ಇಂದು ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ- ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್

    ಪ್ರಸ್ತುತ ಸಂಸತ್ತಿನ ಕಟ್ಟಡ 1927ರಲ್ಲಿ ನಿರ್ಮಿಸಲಾಗಿದ್ದು, ಸುಮಾರು 100 ವರ್ಷಗಳಷ್ಟು ಹಳೆಯದಾಗಿದೆ. ಉಭಯ ಸದನಗಳಲ್ಲಿ ಸಂಸದರಿಗೆ ಕುಳಿತುಕೊಳ್ಳಲು ಅನುಕೂಲಕರವಾದ ವ್ಯವಸ್ಥೆಯೂ ಇಲ್ಲದಿರುವ ಕಾರಣ ಇದೀಗ ಪ್ರಸ್ತುತ ಅಗತ್ಯತೆಗಳ ಪ್ರಕಾರ ಹೊಸ ಸಂಸತ್ ಭವನವನ್ನು ನಿರ್ಮಿಸಲಾಗಿದೆ.

    ಡಿಸೆಂಬರ್ 2020 ರಲ್ಲಿ ಹೊಸ ಸಂಸತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ನರೇಂದ್ರ ಮೋದಿ ಶಂಕುಸ್ಥಾಪನೆ ನಡೆಸಿದ್ದರು. ಸರ್ಕಾರ ಕಳೆದ ವರ್ಷದ ನವೆಂಬರ್ ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿಯನ್ನು ನಿಗದಿ ಪಡಿಸಿತ್ತು. ಆದರೆ ಕೋವಿಡ್ ಮತ್ತು ಇತರೆ ಕೆಲ ಸಮಸ್ಯೆಗಳಿಂದಾಗಿ ಡೆಡ್‌ಲೈನ್ ವಿಸ್ತರಣೆಯಾಗಿ ಈಗ ಉದ್ಘಾಟನೆಯ ಹಂತಕ್ಕೆ ಬಂದಿದೆ. ಇದನ್ನೂ ಓದಿ: ಗ್ಯಾಸ್ ಏಜೆನ್ಸಿ ಸಮೀಪದ ಸ್ಕ್ರಾಪ್ ಗೋಡೌನಲ್ಲಿ ಅಗ್ನಿ ಅವಘಡ

  • ಈ ತಿಂಗಳ ಕೊನೆಯಲ್ಲಿ ನೂತನ ಸಂಸತ್‌ ಭವನ ಲೋಕಾರ್ಪಣೆ

    ಈ ತಿಂಗಳ ಕೊನೆಯಲ್ಲಿ ನೂತನ ಸಂಸತ್‌ ಭವನ ಲೋಕಾರ್ಪಣೆ

    ನವದೆಹಲಿ: ನೂತನ ಸಂಸತ್ ಭವನವನ್ನು (New Parliament Building) ಈ ತಿಂಗಳ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸುವ ಸಾಧ್ಯತೆಯಿದೆ.

    ಮೇ ಕೊನೆಯ ವಾರದಲ್ಲಿ ಮೋದಿ ನೇತೃತ್ವದ ಸರ್ಕಾರ (Modi Government) ಅಧಿಕಾರಕ್ಕೆ ಏರಿ 9 ವರ್ಷ ಪೂರ್ಣಗೊಳ್ಳುತ್ತದೆ. ಈ ಕಾರಣಕ್ಕೆ ಮೇ ಕೊನೆಯಲ್ಲಿ ಸಂಸತ್‌ ಭವನ ಲೋಕಾರ್ಪಣೆಯಾಗುವ ಸಾಧ್ಯತೆಯಿದೆ.

    ಸುಮಾರು 1,200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ. ಇದನ್ನೂ ಓದಿ: ಸಚಿನ್‌ ಪೈಲೆಟ್‌ಗೆ ರಾಹುಲ್‌ ಆರಂಭದಲ್ಲಿ ಮಾತು ಕೊಟ್ಟಿದ್ದರು, ನಂತರ ಏನಾಯ್ತು? – ವೇಣುಗೋಪಾಲ್‌ಗೆ ಉಲ್ಟಾ ಹೊಡೆದ ಡಿಕೆಶಿ

    ಹೊಸ ಸಂಸತ್ತು ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ ಹೆಸರಿನ ಮೂರು ದ್ವಾರಗಳನ್ನು ಹೊಂದಿದೆ. ಸಂಸದರು, ವಿಐಪಿಗಳು ಮತ್ತು ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶವನ್ನು ಹೊಂದಿದೆ.

    ಡಿಸೆಂಬರ್ 2020 ರಲ್ಲಿ ಹೊಸ ಸಂಸತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿದ್ದರು. ಸರ್ಕಾರ ಕಳೆದ ವರ್ಷದ ನವೆಂಬರ್‌ ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿಯನ್ನು ನಿಗದಿ ಪಡಿಸಿತ್ತು. ಆದರೆ ಕೋವಿಡ್‌ ಮತ್ತು ಇತರೆ ಕೆಲ ಸಮಸ್ಯೆಗಳಿಂದಾಗಿ ಡೆಡ್‌ಲೈನ್‌ ವಿಸ್ತರಣೆಯಾಗಿ ಈಗ ಉದ್ಘಾಟನೆಯ ಹಂತಕ್ಕೆ ಬಂದಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು ಒಂಬತ್ತು ವರ್ಷಗಳ ಹಿಂದೆ ಮೇ 26, 2014 ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಮೋದಿ ಸರ್ಕಾರಕ್ಕೆ 9 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸಿದೆ.

    ಸೆಂಟ್ರಲ್‌ ವಿಸ್ಟಾ ಯೋಜನೆ ಭಾಗವಾಗಿ ಹೊಸ ಸಂಸತ್‌ ಭವನವನ್ನು ನಿರ್ಮಿಸಲಾಗುತ್ತಿದೆ. ತ್ರಿಕೋನಾಕಾರದ ಸಂಸತ್‌ ಭವನ ಇದಾಗಿದೆ. ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಟ್ಟಡದ ಒಳಾಂಗಣ ವಿನ್ಯಾಸದ ಕೆಲಸಗಳು ನಡೆಯುತ್ತಿವೆ.

    2020ರಲ್ಲಿ ಟಾಟಾ ಪ್ರಾಜೆಕ್ಟ್ಸ್‌ಗೆ ನೂತನ ಸಂಸತ್‌ ಭವನ ನಿರ್ಮಾಣದ ಹೊಣೆ ವಹಿಸಲಾಗಿತ್ತು. ಆ ಸಂದರ್ಭದಲ್ಲಿ 971 ಕೋಟಿ ವೆಚ್ಚಕ್ಕೆ ಅನುಮೋದನೆ ದೊರಕಿತ್ತು. ನಂತರ ಅದರ ಕಚ್ಚಾ ಸಾಮಾಗ್ರಿ ದರ ಹೆಚ್ಚಳದಿಂದಾಗಿ ಯೋಜನಾ ವೆಚ್ಚ ಅಂದಾಜು 1,200 ಕೋಟಿ ರೂ.ಗೆ ಏರಿಸಲಾಗಿತ್ತು.


    ನೂತನ ಸಂಸತ್‌ ಭವನದಲ್ಲಿ ಹಲವು ಆಕರ್ಷಣೆಗಳಿವೆ. ಅದರಂತೆ ಭವನದ ಮೇಲೆ ರಾಷ್ಟ್ರೀಯ ಲಾಂಛನವನ್ನು ಇರಿಸಲಾಗಿದೆ. ಈ ಲಾಂಛನದ ಪ್ರತಿಮೆಯನ್ನು ಕಂಚಿನಿಂದ ಮಾಡಲಾಗಿದೆ. ಅದರ ತೂಕ ಸುಮಾರು 9,500 ಕೆ.ಜಿ ಇದ್ದು, 6.5 ಮೀಟರ್‌ ಎತ್ತರವಿದೆ.

  • ನೂತನ ಸಂಸತ್‌ ಭವನ ವೀಕ್ಷಿಸಿದ ಮೋದಿ: ಹೊಸ ಸಂಸತ್‌ ಹೇಗಿದೆ ಗೊತ್ತಾ? – ಇಲ್ಲಿದೆ Photos

    ನೂತನ ಸಂಸತ್‌ ಭವನ ವೀಕ್ಷಿಸಿದ ಮೋದಿ: ಹೊಸ ಸಂಸತ್‌ ಹೇಗಿದೆ ಗೊತ್ತಾ? – ಇಲ್ಲಿದೆ Photos

    ನವದೆಹಲಿ: ನವದೆಹಲಿಯಲ್ಲಿ (New Delhi) ನಿರ್ಮಾಣವಾಗುತ್ತಿರುವ ಹೊಸ ಸಂಸತ್‌ ಭವನಕ್ಕೆ (New Parliament Building) ದಿಢೀರ್‌ ಭೇಟಿ ನೀಡಿ ಕಾಮಗಾರಿಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಪರಿಶೀಲಿಸಿದರು.

    ಒಂದು ಗಂಟೆಗೂ ಅಧಿಕ ಕಾಲ ಕಾಮಗಾರಿ ಪರಿಶೀಲನೆ ನಡೆಸಿದರು. ಹೊಸ ಲೋಕಸಭೆ ಮತ್ತು ರಾಜ್ಯಸಭೆ ಸದನದ ಒಳಾಂಗಣಕ್ಕೆ ತೆರಳಿ ವೀಕ್ಷಣೆ ನಡೆಸಿದರು. ಇದನ್ನೂ ಓದಿ: ತಂದೆ-ತಾಯಿ ಪರಸ್ಪರ ಬೇರಾಗಿದ್ದನ್ನು ಹೇಳಿಕೊಳ್ಳೋಕೆ ನನಗೆ 40 ವರ್ಷ ಬೇಕಾಯ್ತು: ಸ್ಮೃತಿ ಇರಾನಿ

    ಸೆಂಟ್ರಲ್‌ ವಿಸ್ಟಾ ಯೋಜನೆ ಭಾಗವಾಗಿ ಹೊಸ ಸಂಸತ್‌ ಭವನವನ್ನು ನಿರ್ಮಿಸಲಾಗುತ್ತಿದೆ. ತ್ರಿಕೋನಾಕಾರದ ಸಂಸತ್‌ ಭವನ ಇದಾಗಿದೆ. ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಟ್ಟಡದ ಒಳಾಂಗಣ ವಿನ್ಯಾಸದ ಕೆಲಸಗಳು ನಡೆಯುತ್ತಿವೆ.

    2020ರಲ್ಲಿ ಟಾಟಾ ಪ್ರಾಜೆಕ್ಟ್ಸ್‌ಗೆ ನೂತನ ಸಂಸತ್‌ ಭವನ ನಿರ್ಮಾಣದ ಹೊಣೆ ವಹಿಸಲಾಗಿತ್ತು. ಆ ಸಂದರ್ಭದಲ್ಲಿ 971 ಕೋಟಿ ವೆಚ್ಚಕ್ಕೆ ಅನುಮೋದನೆ ದೊರಕಿತ್ತು. ನಂತರ ಅದರ ಕಚ್ಚಾ ಸಾಮಾಗ್ರಿ ದರ ಹೆಚ್ಚಳದಿಂದಾಗಿ ಯೋಜನಾ ವೆಚ್ಚ ಅಂದಾಜು 1,200 ಕೋಟಿಗೆ ಏರಿಸಲಾಗಿತ್ತು. ಇದನ್ನೂ ಓದಿ: ನಮಗೇ ಬಹುಮತ, ನಮ್ಮದೇ ಸರ್ಕಾರ; ಕಾಂಗ್ರೆಸ್ ಸಾಮರ್ಥ್ಯ 60-70 ಸೀಟ್‌ಗಳಷ್ಟೇ – ಬಿಎಸ್‌ವೈ ವಿಶ್ವಾಸ

    ನೂತನ ಸಂಸತ್‌ ಭವನದಲ್ಲಿ ಹಲವು ಆಕರ್ಷಣೆಗಳಿವೆ. ಅದರಂತೆ ಭವನದ ಮೇಲೆ ರಾಷ್ಟ್ರೀಯ ಲಾಂಛನವನ್ನು ಇರಿಸಲಾಗಿದೆ. ಈ ಲಾಂಛನದ ಪ್ರತಿಮೆಯನ್ನು ಕಂಚಿನಿಂದ ಮಾಡಲಾಗಿದೆ. ಅದರ ತೂಕ ಸುಮಾರು 9,500 ಕೆ.ಜಿ ಇದ್ದು, 6.5 ಮೀಟರ್‌ ಎತ್ತರವಿದೆ.

    ಸಂಸತ್‌ ಭವನ ನಿರ್ಮಾಣ ಕಾರ್ಯ ಮಾಡುತ್ತಿರುವ ಕಾರ್ಮಿಕರ ಕುಶಲೋಪರಿಯನ್ನು ಪ್ರಧಾನಿ ಮೋದಿ ಅವರು ವಿಚಾರಿಸಿದರು. ಇದನ್ನೂ ಓದಿ: ಬೇಲೂರಿನ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಬೇಕೆಂದು ಎಲ್ಲೂ ಇಲ್ಲ: ರಾಜ್ಯ ಪುರಾತತ್ವ ಇಲಾಖೆ

  • ಲಿಬಿಯಾದಲ್ಲಿ ಸಂಸತ್ ಭವನಕ್ಕೆ ಬೆಂಕಿ

    ಲಿಬಿಯಾದಲ್ಲಿ ಸಂಸತ್ ಭವನಕ್ಕೆ ಬೆಂಕಿ

    ಟ್ರಿಪೋಲಿ: ಲಿಬಿಯಾದಲ್ಲಿ ಆಂತರಿಕ ಸಂಘರ್ಷ ಮುಗಿಲುಮುಟ್ಟಿದೆ. ಸರ್ಕಾರದ ವಿರುದ್ಧ ಬಂಡೆದ್ದ ಪ್ರತಿಭಟನಾಕಾರರು ಸಂಸತ್ ಭವನಕ್ಕೆ ಬೆಂಕಿ ಹಚ್ಚಿದ್ದಾರೆ.

    ಸರ್ಕಾರವನ್ನು ಈ ಕೂಡಲೇ ವಿಸರ್ಜಿಸಿ ಚುನಾವಣೆ ನಡೆಸುವಂತೆ ಒತ್ತಾಯಿಸಿ ಸಂಸತ್ ಭವನದ ಕಡೆಗೆ ಮೆರವಣಿಗೆ ಹೋಗುತ್ತಿದ್ದ ಪ್ರತಿಭಟನಾಕಾರರನ್ನು ಭದ್ರತಾ ಸಿಬ್ಬಂದಿ ತಡೆದಿದ್ದಾರೆ. ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರನು ಸಂಸತ್ ಭವನಕ್ಕೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಇದನ್ನೂ ಓದಿ: ಸುದೀಪ್‌ಗೆ ಅವಹೇಳನ ಮಾಡಿದವನಿಗೆ ನಂದಕಿಶೋರ್ ತರಾಟೆ – ನೀನು ಗಂಡಸಾಗಿದ್ರೆ ಸಾಕ್ಷಿ ಸಮೇತ ಪ್ರೂವ್ ಮಾಡು ಎಂದ ನಿರ್ದೇಶಕ

    ಟ್ರಿಪೋಲಿ, ಟೋಬ್ರೂಕ್‍ನ ಸೇರಿದಂತೆ ಲಿಬಿಯಾದ ಅನೇಕ ನಗರಗಳಲ್ಲಿ ಸರ್ಕಾರಿ ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ. ಅಲ್ಲದೇ ಸಂಸತ್ತಿನ ಕಟ್ಟಡದ ಮೇಲೆ ನಡೆಸಿರುವ ಈ ದಾಳಿಯನ್ನು ವಿಶ್ವಸಂಸ್ಥೆ ಖಂಡಿಸಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಜನರ ಹಕ್ಕನ್ನು ಗೌರವಿಸಬೇಕು ಮತ್ತು ರಕ್ಷಿಸಬೇಕು. ಆದರೆ ಗಲಭೆ ಮತ್ತು ವಿಧ್ವಂಸಕ ಕೃತ್ಯಗಳನಲ್ಲ ಎಂದು ವಿಶ್ವಸಂಸ್ಥೆ ತಿಳಿಸಿದೆ. ಇದನ್ನೂ ಓದಿ:  ಪ್ರವಾಹಕ್ಕೆ ಕೊಚ್ಚಿ ಹೋದ ಚೀನಾ-ಭಾರತ ಗಡಿಯಲ್ಲಿನ ಸೇತುವೆ

    Live Tv
    [brid partner=56869869 player=32851 video=960834 autoplay=true]