Tag: Parliament Election 2024

  • ಸೋಮವಾರ ಕುಮಾರಸ್ವಾಮಿ ‌ದೆಹಲಿಗೆ – NDA ಸೇರ್ಪಡೆ ಬಗ್ಗೆ ಚರ್ಚೆ?

    ಸೋಮವಾರ ಕುಮಾರಸ್ವಾಮಿ ‌ದೆಹಲಿಗೆ – NDA ಸೇರ್ಪಡೆ ಬಗ್ಗೆ ಚರ್ಚೆ?

    ಬೆಂಗಳೂರು: ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ದೋಸ್ತಿ ಚರ್ಚೆ ಜೋರಾಗಿ ನಡೆಯುತ್ತಿದೆ. ಮಂಗಳವಾರ ನಡೆಯಲಿರುವ NDA ಮೈತ್ರಿ ಕೂಟಗಳ ಸಭೆಗೆ ಕುಮಾರಸ್ವಾಮಿ (HD Kumaraswamy) ಭಾಗವಹಿಸ್ತಾರೆ ಎನ್ನಲಾಗ್ತಿದ್ದು, ದೋಸ್ತಿ ರಾಜಕೀಯ ಗರಿಗೆದರಿದೆ.

    ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ (BJP-JDS) ದೋಸ್ತಿ ಆಗಬಹುದು ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿದೆ. ಮೊನ್ನೆಯಷ್ಟೆ ಮಾಜಿ ಸಿಎಂ ಕುಮಾರಸ್ವಾಮಿ ವಿಧಾನಸಭೆ ಸದನದಲ್ಲಿ ಪ್ರಧಾನಿ ಮೋದಿಯವರ ಜೊತೆ 4 ವರ್ಷಗಳ ಹಿಂದಿನ ಮಾತುಕತೆ ರಹಸ್ಯ ಬಯಲು ಮಾಡಿದ್ರು. ಕುಮಾರಸ್ವಾಮಿ ಅವರ ಈ ನಡೆ ಈಗ ದೋಸ್ತಿಯ ಬಗ್ಗೆಗಿನ ಚರ್ಚೆ ಗರಿಗೆದರುವಂತೆ ಮಾಡಿದೆ. ಕುಮಾರಸ್ವಾಮಿ ಅವರ ಈ ನಡೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಆಗಬಹುದು ಎಂಬ ಚರ್ಚೆಯನ್ನೂ ಹುಟ್ಟು ಹಾಕಿದೆ.

    ಬಿಜೆಪಿ ಜೊತೆ ದೋಸ್ತಿ ಎಂಬ ಚರ್ಚೆಗಳು ‌ನಡೆಯುತ್ತಿರೋ ಬೆನ್ನಲ್ಲೆ NDA ಸಭೆಗೆ ಮಾಜಿ ಸಿಎಂ ಕುಮಾರಸ್ವಾಮಿ ಹೋಗ್ತಾರಾ ಎಂಬ ಪ್ರಶ್ನೆಗಳು ಶುರುವಾಗಿದೆ. ಜುಲೈ 18ರಂದು ‌ದೆಹಲಿಯಲ್ಲಿ‌ NDA ಮೈತ್ರಿ ಕೂಟಗಳ ಸಭೆ ಇದೆ. ಈ ಸಭೆಗೆ ಭಾಗವಹಿಸುವ ಹಿನ್ನೆಲೆಯಲ್ಲಿ ಸೋಮವಾರ ದೆಹಲಿಗೆ ಹೆಚ್‌ಡಿಕೆ ಹೋಗ್ತಾರೆ ಎನ್ನಲಾಗ್ತಿದೆ. ಇದನ್ನೂ ಓದಿ: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೂ ಸೋಮಣ್ಣ ಟವೆಲ್? – ಕಾರ್ಯಕರ್ತರ ಸಭೆಯಲ್ಲಿ ಇಂಗಿತ

    ದೆಹಲಿಯಲ್ಲಿ ಸೋಮವಾರ ಕೇಂದ್ರದ ನಾಯಕರ ಜೊತೆ ಚರ್ಚೆ ಆಗಬಹುದು ಅಂತ‌ ಜೆಡಿಎಸ್ ಮೂಲಗಳು ಹೇಳ್ತೀವಿ. ಎಲ್ಲವೂ ಅಂದುಕೊಂಡಂತೆ‌ ಆದರೆ ಮಂಗಳವಾರದ ಸಭೆಗೆ ಕುಮಾರಸ್ವಾಮಿ ಹಾಜರಾಗಿ, NDA ಮೈತ್ರಿ ಕೂಟ ಸೇರಬಹುದು ಎನ್ನಲಾಗ್ತಿದೆ. ಇದನ್ನೂ ಓದಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಲಕ್ಷ್ಮಿ ಹೆಬ್ಬಾಳ್ಕರ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುಜರಾತ್ ಆಯ್ತು, ಇಂದಿನಿಂದಲೇ ಕರ್ನಾಟಕ ಚುನಾವಣೆಗೆ ತಯಾರಿ

    ಗುಜರಾತ್ ಆಯ್ತು, ಇಂದಿನಿಂದಲೇ ಕರ್ನಾಟಕ ಚುನಾವಣೆಗೆ ತಯಾರಿ

    ನವದೆಹಲಿ: ಹಿಮಾಚಲ ಪ್ರದೇಶ, ಗುಜರಾತ್ ಚುನಾವಣೆ (Gujarat Election) ಅಂತ್ಯವಾದ ಬೆನ್ನಲ್ಲೇ ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳ ಬಗ್ಗೆ ಚರ್ಚಿಸಲು ಬಿಜೆಪಿ (BJP) ರಾಷ್ಟ್ರೀಯ ಪದಾಧಿಕಾರಿಗಳು ಸಭೆ ನಡೆಸುತ್ತಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ನೇತೃತ್ವದಲ್ಲಿ ದೆಹಲಿಯ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯುತ್ತಿದೆ.

    ಈ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah) ಕೂಡಾ ಭಾಗಿಯಾಗಿದ್ದು, ಹಲವು ರಾಜ್ಯಗಳ ರಾಜ್ಯಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪ್ರಮುಖ ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಮಧ್ಯಪ್ರದೇಶ, ಕರ್ನಾಟಕ, ರಾಜಸ್ಥಾನ, ತ್ರಿಪುರ ವಿಧಾನಸಭೆ ಚುನಾವಣೆಗಳು ಹಾಗೂ 2024ರ ಲೋಕಸಭೆ ಚುನಾವಣೆ (Parliament Election 2024) ತಯಾರಿ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ಕ್ಯಾಚ್ ಕೈಚೆಲ್ಲಿದ ಸುಂದರ್‌ಗೆ ಕೆಟ್ಟದಾಗಿ ಬೈದ ರೋಹಿತ್ – ನೆಟ್ಟಿಗರ ಆಕ್ರೋಶ

    ವಿಧಾನಸಭೆ ಚುನಾವಣೆ ಮುಂಬರುವ ರಾಜ್ಯಗಳಲ್ಲಿ ಕೇಂದ್ರ ಸರ್ಕಾರ ಯೋಜನೆಗಳನ್ನು ಜಾರಿ ಮಾಡುವುದು, ಫಲಾನುಭವಿಗಳನ್ನು ಗುರುತಿಸುವುದು, ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸುವುದು ಸೇರಿ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಯಲಿದೆ. ಇದನ್ನೂ ಓದಿ: ಸ್ಯಾಂಡಲ್‌ವುಡ್‌ ನಟ ಮನದೀಪ್ ರಾಯ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

    2024 ಲೋಕಸಭೆ ಚುನಾವಣೆ ದೃಷ್ಟಿಯಿಂದ ಈ ರಾಜ್ಯಗಳಲ್ಲಿ ಅಧಿಕಾರ ಹಿಡಿಯುವುದು ಮುಖ್ಯವಾಗಿರುವ ಹಿನ್ನಲೆ ಹಿಮಾಚಲ, ಗುಜರಾತ್ ಬೆನ್ನಲ್ಲೇ ಬಾಕಿ ರಾಜ್ಯಗಳ ಚುನಾವಣೆಗೆ ಸಜ್ಜಾಗಿರುವ ಬಿಜೆಪಿ ಹೈಕಮಾಂಡ್ ಬಾಕಿ ನಾಯಕರಿಗೆ ಬೇರೆ ಬೇರೆ ಟಾಸ್ಕ್ಗಳನ್ನು ನೀಡಲಿದೆ.

    Live Tv
    [brid partner=56869869 player=32851 video=960834 autoplay=true]