Tag: Parliament Security Breach

  • ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಇಬ್ಬರು ಆರೋಪಿಗಳಿಗೆ ಜಾಮೀನು

    ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಇಬ್ಬರು ಆರೋಪಿಗಳಿಗೆ ಜಾಮೀನು

    – ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿನ ಮನೋರಂಜನ್‌ಗೆ ಸಿಗದ ಬೇಲ್‌

    ನವದೆಹಲಿ: 2023ರ ಡಿಸೆಂಬರ್‌ 13ರಂದು ನಡೆದಿದ್ದ ಸಂಸತ್ತಿನ ಭದ್ರತಾ ಲೋಪ ಪ್ರಕರಣದ (Parliament Security Breach Case) ಇಬ್ಬರು ಆರೋಪಿಗಳಿಗೆ ದೆಹಲಿ ಹೈಕೋರ್ಟ್ (Delhi High Court) ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ.

    ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ದ್ವಿಸದಸ್ಯ ಪೀಠವು ನೀಲಂ ಆಜಾದ್, ಮಹೇಶ್ ಕುಮಾವತ್‌ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆರೋಪಿಗಳಿಗೆ ತಲಾ 50,000 ರೂ. ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಸಲ್ಲಿಸುವಂತೆ ನಿರ್ದೇಶಿಸಿದೆ. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    Security breach in Lok Sabha

    ಪ್ರಕರಣ ಮುಗಿಯುವವರೆಗೆ ದೆಹಲಿ ಬಿಟ್ಟು ಹೋಗದಂತೆ ಸೂಚಿಸಿರುವ ಕೋರ್ಟ್‌ ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 10 ಗಂಟೆ ವೇಳೆಗೆ ಗೊತ್ತುಪಡಿಸಿದ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿದೆ. ಇದಕ್ಕೂ ಮುನ್ನ ವಿಚಾರಣೆ ನಡೆಸಿದ್ದ ಪಟಿಯಾಲ ಹೌಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ (ASJ) ಹರ್ದೀಪ್ ಕೌರ್ ಆಜಾದ್ ಜಾಮೀಜು ಅರ್ಜಿಯನ್ನು ತಿರಸ್ಕರಿಸಿದ್ದರು. ಇದನ್ನೂ ಓದಿ: Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್‌ ಛೀಮಾರಿ; ಐವರು ಪೊಲೀಸರು ಅರೆಸ್ಟ್‌

    ಮೈಸೂರಿನ ಮನೋರಂಜನ್‌ಗೆ ಸಿಗದ ಜಾಮೀನು
    ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಕೋರ್ಟ್‌ ಮಾಸ್ಟರ್‌ ಮೈಂಡ್‌ಗಳಾದ ಸಾಗರ್ ಶರ್ಮಾ ಮತ್ತು ಮನೋರಂಜನ್‌ಗೆ ಜಾಮೀನು ನಿರಾಕರಿಸಿದೆ. ಮೈಸೂರು ಮೂಲದ ಮನೋರಂಜನ್‌ ಅಂದಿನ ಸಂಸದ ಪ್ರತಾಪ್‌ ಸಿಂಹ ಅವರ ಮೂಲಕ ಪಾಸ್‌ ಪಡೆದು ಸಂಸತ್‌ ಪ್ರವೇಶಿಸಿದ್ದರು. ಇದನ್ನೂ ಓದಿ: ಓಲಾ, ಊಬರ್ ಬಳಕೆದಾರರಿಗೆ ಶಾಕ್ – ಪೀಕ್ ಅವರ್‌ನಲ್ಲಿ ದುಪ್ಪಟ್ಟು ದರ ವಿಧಿಸಲು ಕೇಂದ್ರ ಒಪ್ಪಿಗೆ

    Manoranjan

    ಏನಿದು ಪ್ರಕರಣ?
    2023ರ ಡಿಸೆಂಬರ್ 13 ರಂದು ಸಂಸತ್‌ ಭವನದಲ್ಲಿ ಅಧಿವೇಶನ ನಡೆಯುತ್ತಿದ್ದಾಗ ಕೆಲವು ವ್ಯಕ್ತಿಗಳು ಸದನಕ್ಕೆ ನುಗ್ಗಿ ಸ್ಮೋಕ್‌ ಬಾಂಬ್‌ ಎಸೆದಿದ್ದರು. ಸಾಗರ್‌ ಶರ್ಮಾ ಮತ್ತು ಮನೋರಂಜನ್ ಎಂಬ ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಬಂದು ಸ್ಮೋಕ್‌ ಬಾಂಬ್‌ ಎಸೆದಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ದೆಹಲಿ ಪೊಲೀಸರು ಮಾಸ್ಟರ್ ಮೈಂಡ್, ಲಲಿತ್ ಝಾ ಮತ್ತು ಸಹ-ಆರೋಪಿ ಮಹೇಶ್ ಕುಮಾವತ್ ಸೇರಿ ಕೆಲವು ಆರೋಪಿಗಳನ್ನ ಬಂಧಿಸಿದ್ದರು. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಮಾಸ್ಟರ್‌ಮೈಂಡ್‌ ಲಲಿತ್‌ ಬಂಧನ

  • ಸಂಸತ್ ಭವನದ ಮೇಲೆ ದಾಳಿ ಪ್ರಕರಣ – 6 ಆರೋಪಿಗಳ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ಸಂಸತ್ ಭವನದ ಮೇಲೆ ದಾಳಿ ಪ್ರಕರಣ – 6 ಆರೋಪಿಗಳ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ನವದೆಹಲಿ: ಸಂಸತ್‌ ಭವನದ ಮೇಲೆ ದಾಳಿ (Parliament Security Breach) ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಹೌಸ್‌ ಕೋರ್ಟ್‌ಗೆ 1,000 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

    2023 ರ ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರ ವಿಶೇಷ ತಂಡವು ಶುಕ್ರವಾರ ತನ್ನ ಮೊದಲ ಚಾರ್ಜ್‌ಶೀಟ್ (Charge Sheet) ಅನ್ನು ಇಲ್ಲಿನ ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದನ್ನೂ ಓದಿ: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ ಪ್ರವೇಶಿಸಲು ಯತ್ನಿಸಿದ ಮೂವರ ಬಂಧನ

    ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಾದ ಡಿ.ಮನರಂಜನ್, ಲಲಿತಾ ಝಾ, ಅಮೋಲ್ ಶಿಂಧೆ, ಮಹೇಶ್ ಕುಮವತ್, ಸಾಗರ್ ಶರ್ಮಾ, ನೀಲಂ ಅಜಾದ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಆಗಿದೆ. ಸದ್ಯ ಎಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

    ಮೇ 24 ರಂದು ನ್ಯಾಯಾಲಯವು ತನಿಖೆಯನ್ನು ಪೂರ್ಣಗೊಳಿಸಲು ಪೊಲೀಸರಿಗೆ 13 ದಿನಗಳ ಕಾಲಾವಕಾಶವನ್ನು ನೀಡಿತ್ತು. 1,000 ಪುಟಗಳ ಚಾರ್ಜ್‌ಶೀಟ್ ಅನ್ನು ಪಟಿಯಾಲ ಹೌಸ್ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಕೆಲವು ವರದಿಗಳನ್ನು ನಿರೀಕ್ಷಿಸಲಾಗಿದೆ. ಡಿಜಿಟಲ್ ಡೇಟಾ ದೊಡ್ಡದಾಗಿದೆ ಎಂದು ಪೊಲೀಸರು ಹೇಳಿಕೊಂಡ ನಂತರ ಕಳೆದ ಬಾರಿ ವಿಸ್ತರಣೆಯನ್ನು ನೀಡಿದ್ದರು. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    ಪಾರ್ಲಿಮೆಂಟ್‌ಗೆ ಎಂಟ್ರಿ ಕೊಟ್ಟಿದ್ದ ಕೆಲವರು ಒಳಗಡೆ ನುಗ್ಗಿ ಭದ್ರತಾ ನಿಯಮ ಉಲ್ಲಂಗಿದ್ದರು. ಸಂಸತ್‌ ಒಳಗೆ ಸ್ಮೋಕ್‌ ಬಾಂಬ್‌ ಸಿಡಿಸಿ ಗದ್ದಲ ಸೃಷ್ಟಿಸಿದ್ದರು. ಒಳಗಿದ್ದ ಸಂಸದರು ಭಯಭೀತರಾಗಿದ್ದರು.

    ಆಜಾದ್ ಮತ್ತು ಶಿಂಧೆ ಸಂಸತ್ತಿನ ಹೊರಗೆ ಸ್ಮೋಕ್‌ ಬಾಂಬ್ ಸಿಡಿಸಿ ಘೋಷಣೆಗಳನ್ನು ಕೂಗಿದರು. ಝಾ ಸಂಪೂರ್ಣ ಯೋಜನೆಯ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಇತರ ನಾಲ್ವರು ಆರೋಪಿಗಳ ಮೊಬೈಲ್ ಫೋನ್‌ಗಳೊಂದಿಗೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಕುಮಾವತ್ ಕೂಡ ಆರೋಪಿಗಳ ಜತೆ ನಂಟು ಹೊಂದಿದ್ದರು.

  • ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ಹಿಂದೆ ಬಿಜೆಪಿ ಕೈವಾಡ: ಸಚಿವ ತಂಗಡಗಿ

    ಸಂಸತ್‌ನಲ್ಲಿ ಸ್ಮೋಕ್ ಬಾಂಬ್ ದಾಳಿ ಹಿಂದೆ ಬಿಜೆಪಿ ಕೈವಾಡ: ಸಚಿವ ತಂಗಡಗಿ

    ಆರೋಪಿಗಳು ಅಬ್ದುಲ್, ನಜೀರ್, ಖಾನ್ ಆಗಿದ್ರೆ ಬಿಜೆಪಿಗರು ಚಿತ್ರಣವನ್ನೇ ಬೇರೆಯಾಗಿಸ್ತಿದ್ರು

    ಕೊಪ್ಪಳ: ದೆಹಲಿಯ ಪಾರ್ಲಿಮೆಂಟ್ ಒಳಗೆ‌ ನುಗ್ಗಿ ಅಧಿವೇಶನದ ವೇಳೆ ನಡೆದ ಸ್ಮೋಕ್ ಬಾಂಬ್ ದಾಳಿಯ ಹಿಂದೆ ಬಿಜೆಪಿ ನಾಯಕರ ಕೈವಾಡ ಇದೆ ಎಂದು‌ ಸಚಿವ ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ (Shivaraj Tangadagi) ಆರೋಪಿಸಿದರು.

    ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ, ಅಧಿವೇಶನದಿಂದ ಸಂಸದರನ್ನು ಅಮಾನತು ಮಾಡಿದ ನಡೆ ಖಂಡಿಸಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಇಂದು (ಶುಕ್ರವಾರ) ಮಾತನಾಡಿದರು. ಕೇಂದ್ರ ಸರ್ಕಾರದ ಭದ್ರತೆ ವೈಫಲ್ಯದಿಂದಲೇ ಸ್ಮೋಕ್ ಬಾಂಬ್ ದಾಳಿ ನಡೆದಿದೆ.‌ ಘಟನೆ ಕುರಿತು ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಉತ್ತರಿಸುವಂತೆ ಪಟ್ಟು ಹಿಡಿದ ಒಟ್ಟು 145 ಸಂಸದರನ್ನು ಅಮಾನತು ಮಾಡಿ, ಹೊರಗೆ ಹಾಕಲಾಗಿದೆ. ಬಿಜೆಪಿಗರು ತಮ್ಮ ಲೋಪ ಮುಚ್ಚಿ ಹಾಕಲು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ಕಗ್ಗೊಲೆ, ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    ದಾಳಿ ಮಾಡಿದವರಿಗೆ ನಮ್ಮ ರಾಜ್ಯದ ಸಂಸದ ಪ್ರತಾಪ್ ಸಿಂಹ ಪಾಸ್ ನೀಡಿದ್ದಾರೆ.‌ ಆದರೆ‌ ಪೊಲೀಸರು ಪ್ರತಾಪ್ ಸಿಂಹ ಅವರ ವಿಚಾರಣೆ ನಡೆಸಿಲ್ಲ. ಅವರ ಮೇಲೆ ಕ್ರಮ ಆಗಿಲ್ಲ. ಒಂದೊಮ್ಮೆ ಆರೋಪಿತರ ಹೆಸರುಗಳು ಅಬ್ದುಲ್, ನಜೀರ್, ಖಾನ್ ಆಗಿದ್ದರೆ ಬಿಜೆಪಿಗರು ಇದರ ಚಿತ್ರಣವೇ ಬೇರೆ ಆಗಿಸುತ್ತಿದ್ದರು. ಈ ಬಗ್ಗೆ ಮಾತನಾಡದ ಮೈಸೂರಿನ ಸಿಂಹ ಈಗ ಕಾಡಿಗೆ ಹೋಗಿದೆ ಎಂದು ಸಂಸದ ಪ್ರತಾಪ್ ಸಿಂಹ ಬಗ್ಗೆ ಲೇವಡಿ ಮಾಡಿದರು.

    ರಾಜ್ಯಸಭೆ ಛೇರ್ಮನ್ ಹಾಗೂ ಉಪ ರಾಷ್ಟ್ರಪತಿ ಬಗ್ಗೆ ಅಣಕು ಮಾಡಿದರು ಎಂದು ಸ್ಥಳೀಯ ಬಿಜೆಪಿ ನಾಯಕರು ಪ್ರತಿಭಟನೆ ಮಾಡಿದ್ದಾರೆ. ಹಾಗಿದ್ದರೆ ಅಣಕು ಮಾಡುವವರನ್ನೆಲ್ಲ ದೇಶದಿಂದ ಹೊರಗೆ ಹಾಕಿ. ಅಣಕು ಮಾಡುವುದೊಂದು ಕಲೆ. ರಾಜಕೀಯ ನಾಯಕರನ್ನು ಅಣಕು ಮಾಡುವುದು ಸಹಜ. ಇದು ಪ್ರತಿಭಟನಾ ಸ್ವಾತಂತ್ರ್ಯಕ್ಕೆ ಧಕ್ಕೆ. ಕಲಾವಿದರಿಗೆ ಅವಮಾನ ಮಾಡಿದಂತೆ.‌ ಸಂಸತ್ ಭವನಕ್ಕೆ ಭದ್ರತೆ ಕೊಡಲು ವಿಫಲರಾದವರು ದೇಶಕ್ಕೇನು ಭದ್ರತೆ ನೀಡುತ್ತಾರೆ? ನೀವು ದೇಶ ಭಕ್ತರಲ್ಲ, ಮೋದಿ ಭಕ್ತರು ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ವಂತ ಮನೆಯಲ್ಲಿ ಪಿಜಿ ಮಾದರಿ ವಾಸ ಮಾಡ್ತಿದ್ದ ಮನೋರಂಜನ್

    ಅಧಿವೇಶನದಲ್ಲಿ ರೈತರು, ನಿರುದ್ಯೋಗ‌ ಸಮಸ್ಯೆ ಬಗ್ಗೆ ಮಾತನಾಡುವುದಿಲ್ಲ.‌ ಬದಲಿಗೆ ರಾಮನ ಬಗ್ಗೆ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿ ಕಳೆದ ಒಂಬತ್ತು ವರ್ಷದಲ್ಲಿ ಮಾಧ್ಯಮದ ಮುಂದೆ ಬಂದು ಮಾತನಾಡಿಲ್ಲ. ಮನ್ ಕಿ ಬಾತ್‌ನಿಂದ ದೇಶದ ಜನರ ಹೊಟ್ಟೆ ತುಂಬಲ್ಲ. ದೇಶದಲ್ಲಿ ಹಿಟ್ಲರ್ ಆಡಳಿತವಿದೆ ಎಂದು ಕುಟುಕಿದರು.

    ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಮಾತನಾಡಿ, ಸಂಸದರನ್ನು ಅಧಿವೇಶನದಿಂದ ಅಮಾನತು ಮಾಡಿರುವುದು ಸರ್ವಾಧಿಕಾರಿ ಧೋರಣೆ. ಈ ದುರ್ಘಟನೆ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಕೇಂದ್ರ ಸರ್ಕಾರದ ಸಂಪೂರ್ಣ ವೈಫಲ್ಯ ಕಾರಣ. ಪುಲ್ವಾಮಾ ದಾಳಿ, ಸಂಸದರ ಅಮಾನತು ಮಾಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆ. ಅಹಂ, ಅಹಂಕಾರ, ಮದ, ಮತ್ಸರಗಳಿಂದ ತುಂಬಿರುವ ಕೇಂದ್ರ ಸರ್ಕಾರ ವಿರೋಧ ಪಕ್ಷದ ನಾಯಕರ ಮೇಲೆ ಇ.ಡಿ, ಸಿಬಿಐ ದಾಳಿ ಮಾಡಿಸುತ್ತಿದೆ. ಇದು ದೇಶದ ಜನತೆಗೆ ನೀಡಿರುವ ಕೆಟ್ಟ ಸಂದೇಶ ಎಂದರು.

  • ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    ನವದೆಹಲಿ: ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಕೋಲಾಹಲ ಎಬ್ಬಿಸಿದ ಲೋಕಸಭಾ ಭದ್ರತಾ ಲೋಪ (Parliament Security Breach) ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈ ಸ್ಮೋಕ್‌ ಬಾಂಬ್‌ ದಾಳಿ ಹಿಂದಿನ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌ (Manoranjan) ಎಂಬ ಅಚ್ಚರಿದಾಯಕ ಅಂಶವನ್ನು ದೆಹಲಿ ಪೊಲೀಸ್‌ ಮೂಲಗಳು ಬಹಿರಂಗಪಡಿಸಿವೆ.

    ವರ್ಷದ ಹಿಂದೆಯೇ ಈ ಮಾಸ್ಟರ್‌ ಪ್ಲಾನ್‌ ನಡೆದಿತ್ತು. ಸರ್ಕಾರದ ವಿರುದ್ಧ ಏನಾದರು ದೊಡ್ಡದು ಮಾಡ್ಬೇಕು. ಎಲ್ಲರ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಮೈಸೂರಿನಲ್ಲಿಯೇ ಮನೋರಂಜನ್‌ ಯೋಜನೆ ರೂಪಿಸಿದ್ದ ಎಂದು ಪೊಲೀಸ್‌ ಮೂಲಗಳು ಹೇಳಿವೆ. ಇದನ್ನೂ ಓದಿ: ಸಂಸತ್‌ನಲ್ಲಿ ಭದ್ರತಾ ಲೋಪ ಕೇಸ್‌ – ತನಿಖೆಗೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ವಿಶೇಷ ಸೆಲ್‌

    ಬಂಧನಕ್ಕೆ ಒಳಗಾಗಿರುವ 6 ಜನಕ್ಕೂ ಟಿಕೆಟ್ ಬುಕ್ ಮಾಡಿಸಿ ಮೈಸೂರಿಗೆ ಕರೆಸಿಕೊಂಡಿದ್ದ. ವಾಟ್ಸಾಪ್‌ನ ಮೂಲಕ ಟಿಕೆಟ್ ಕೊಡಿಸಿ ಮೈಸೂರಿಗೆ ಕರೆಸಿದ್ದ. ಮೈಸೂರಿನಲ್ಲಿ ಎಲ್ಲದರ ಪ್ಲಾನ್ ನಡೆದಿತ್ತು. ಈ ಮೂಲಕ ಇಡೀ ಕೇಸ್‌ನ ಮಾಸ್ಟರ್ ಮೈಂಡ್ ಮನೋರಂಜನ್ ಆಗಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಮನೋರಂಜನ್ ಎಲ್ಲರ ಮೈಂಡ್ ವಾಷ್ ಮಾಡಿದ್ದ. ಸಾಗರ್‌ಗೆ ಅತಿ ಹೆಚ್ಚಾಗಿ ಮೈಂಡ್ ವಾಷ್ ಮಾಡಿದ್ದು, ತನಿಖೆಯಲ್ಲಿ ಬಹಿರಂಗವಾಗಿದೆ. ನಿರುದ್ಯೋಗಿ ಆಗಿದ್ದರೂ ಕಾಂಬೋಡಿಯಾಗೆ ಹೇಗೆ ಹೋದಾ? ಕಾಂಬೋಡಿಯಾಗೆ ಕರೆಸಿಕೊಂಡಿದ್ದು ಯಾರು ಎಂಬ ಪ್ರಶ್ನೆಗಳು ಪೊಲೀಸಲ್ಲಿ ಉದ್ಭವಿಸಿದ್ದು, ಈ ಬಗ್ಗೆ ತನಿಖೆಯ ಜಾಡು ಹಿಡಿದಿದ್ದಾರೆ. ಇದನ್ನೂ ಓದಿ: ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ಪ್ರಕರಣ ತನಿಖೆ ಆದ್ರೆ ಟೀಕೆ ಮಾಡ್ತಿರೋರೆ ಸಿಕ್ಕಿ ಬೀಳ್ತಾರೆ: ಯತ್ನಾಳ್

    ದೆಹಲಿ ಪೊಲೀಸರು ತನಿಖೆಯಲ್ಲಿ ಮಹತ್ವದ ಅಂಶಗಳು ಪತ್ತೆಯಾಗಿವೆ. ಮನೋರಂಜನ್ ಆಣತಿಯಂತೆ ಕೆಲಸ ನಡೆಸಿದ್ದಾರೆ ಎನ್ನುವುದು ಗೊತ್ತಾಗಿದೆ. ಈತನಿಗೆ ಹಣಕಾಸು ನೀಡುತ್ತಾ ಇದ್ದವರು ಯಾರು ಎಂಬುದನ್ನು ತಿಳಿದುಕೊಳ್ಳಲು ಪೊಲೀಸರು ಮುಂದಾಗಿದ್ದಾರೆ.

    ದಾಳಿ ಮಾಸ್ಟರ್‌ ಮೈಂಡ್‌ ಎನ್ನಲಾಗುತ್ತಿದ್ದ ಲಲಿತ್‌ ಝಾ, ಕೃತ್ಯದ ನಂತರ ಸಾಕ್ಷ್ಯವನ್ನು ನಾಶ ಮಾಡುವ ಕಾರ್ಯವನ್ನು ಮಾತ್ರ ವಹಿಸಿಕೊಂಡಿದ್ದ ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಮೈಸೂರಿಗನೇ ಆದ ಮನೋರಂಜನ್‌ ಈ ದಾಳಿಯ ಮಾಸ್ಟರ್‌ ಮೈಂಡ್‌ ಎಂಬುದು ಪೊಲೀಸ್‌ ತನಿಖೆಯಲ್ಲಿ ಬಹಿರಂಗಗೊಂಡಿದೆ. ಇದನ್ನೂ ಓದಿ: ಸಂಸತ್‌ ಮೇಲಿನ ದಾಳಿ ಗಂಭೀರವಾದದ್ದು; ಚರ್ಚೆ ಬೇಡ, ವಿಸ್ತೃತ ತನಿಖೆಯಾಗಲಿ: ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

  • ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸ್ಫೋಟ ಪ್ರಕರಣ – ಸಂಸತ್ ಭವನಕ್ಕೆ CISFನಿಂದ ಭದ್ರತೆ?

    ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸ್ಫೋಟ ಪ್ರಕರಣ – ಸಂಸತ್ ಭವನಕ್ಕೆ CISFನಿಂದ ಭದ್ರತೆ?

    ನವದೆಹಲಿ: ಸಂಸತ್ ಭವನದಲ್ಲಿ ಭದ್ರತಾ ನಿಯಮಗಳ ಉಲ್ಲಂಘನೆ (Parliament Security Breach) ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮಗ್ರ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (CISF) ಹಸ್ತಾಂತರಿಸಲು ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

    CISF ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF) ಆಗಿದ್ದು, ಇದು ಪ್ರಸ್ತುತ ದೆಹಲಿಯಲ್ಲಿನ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳಾದ ಪರಮಾಣು ಮತ್ತು ಏರೋಸ್ಪೇಸ್ ಡೊಮೇನ್, ಸಿವಿಲ್ ಏರ್‌ಪೋರ್ಟ್‌ಗಳು (Civil Airports) ಮತ್ತು ದೆಹಲಿ ಮೆಟ್ರೋ ನಿಲ್ದಾಣಗಳಿಗೆ (Metro Stations) ಭದ್ರತೆ ನೀಡುತ್ತಿದೆ. ಇದನ್ನೂ ಓದಿ: ಅಜಿತ್ ಪವಾರ್, ಶಿಂಧೆಯ ಪೈಕಿ ಯಾರು ಮೊದಲು ಬರುತ್ತಾರೋ ಕಾದುನೋಡಿ – ಕರ್ನಾಟಕ ಕಾಂಗ್ರೆಸ್‌ ಬಗ್ಗೆ ಹೆಚ್‌ಡಿಕೆ ಬಾಂಬ್‌

    ಕೇಂದ್ರ ಗೃಹಸಚಿವಾಲಯವು ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಸಂಸತ್‌ನಲ್ಲಿ ಸಿಐಎಸ್‌ಎಫ್ ಭದ್ರತೆ ಮತ್ತು ಅಗ್ನಿಶಾಮಕ ವಿಭಾಗವನ್ನು ಸಮಗ್ರ ಮಾದರಿಯಲ್ಲಿ ನಿಯೋಜನೆ ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಐಎಸ್‌ಎಫ್‌ನ ತಜ್ಞರು, ಸಂಸತ್ತಿನ ಭದ್ರತಾ ತಂಡದ ಅಧಿಕಾರಿಗಳೊಂದಿಗೆ ಈ ವಾರದ ಕೊನೆಯಲ್ಲಿ ಸಂಸತ್‌‌ನ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ

    ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಮಿತ್ರ ಕಟ್ಟಡಗಳನ್ನು ಸಿಐಎಸ್‌ಎಫ್‌ನ ಸಮಗ್ರ ಭದ್ರತೆಯ ಅಡಿಯಲ್ಲಿ ತರಲಾಗುವುದು, ಸಂಸತ್ತಿನ ಭದ್ರತಾ ಸೇವೆ (ಪಿಎಸ್‌ಎಸ್), ದೆಹಲಿ ಪೊಲೀಸ್ ಮತ್ತು ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ (PDG) ಭದ್ರತೆಯಲ್ಲಿ ಮುಂದುವರಿಯಲಿದೆ. ಡಿಸೆಂಬರ್ 13 ರಂದು ಲೋಕಸಭೆಯಲ್ಲಿ ಮೈಸೂರು ಮೂಲದ ಮನೋರಂಜರ್ ಮತ್ತು ಸಾಗರ್ ಶರ್ಮಾ ಹೆಸರಿನ ಇಬ್ಬರು ಯುವಕರು ಭದ್ರತಾ ನಿಯಮ ಉಲ್ಲಂಘಿಸಿ ಸ್ಮೋಕ್‌ ಬಾಂಬ್ ಸ್ಫೋಟಿಸಿದ್ದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಬೆಂಗಳೂರು, ನೀರಾವರಿ ಯೋಜನೆಗಳಿಗೆ ಅನುಮತಿ & ಹಣಕಾಸು ನೆರವು ಕೋರಿದ ಡಿಸಿಎಂ

  • ಅಶಿಸ್ತಿನ ವರ್ತನೆ, 49 ಸಂಸದರ ಅಮಾನತು – ಇಲ್ಲಿಯವರೆಗೆ 149 ಮಂದಿ ಸಸ್ಪೆಂಡ್‌

    ಅಶಿಸ್ತಿನ ವರ್ತನೆ, 49 ಸಂಸದರ ಅಮಾನತು – ಇಲ್ಲಿಯವರೆಗೆ 149 ಮಂದಿ ಸಸ್ಪೆಂಡ್‌

    ನವದೆಹಲಿ: ಡಿ. 13ರಂದು ಸಂಸತ್‌ ಭವನದಲ್ಲಿ ಸಂಭವಿಸಿದ್ದ ಭದ್ರತಾ ಲೋಪ (Parliament Security Breach) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಅವರ ಉತ್ತರಕ್ಕೆ ಒತ್ತಾಯಿಸಿ, ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ವಿಪಕ್ಷಗಳ 49 ಸದಸ್ಯರನ್ನ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಇಂದು) ಅಮಾನತುಗೊಳಿಸಿದ್ದಾರೆ.

    ಈ ಮೂಲಕ ಚಳಿಗಾಲದ ಅಧಿವೇಶನದಲ್ಲಿ ಒಟ್ಟು ಅಮಾನತುಗೊಂಡ ಸಂಸದರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಸೋಮವಾರ ಕಲಾಪ ಮುಗಿಯುವವರೆಗೆ ರಾಜ್ಯಸಭೆ ಮತ್ತು ಲೋಕಸಭೆಯಿಂದ ಒಟ್ಟು 92 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಮಂಗಳವಾರ ಅಮಾನತು ಆದವರಲ್ಲಿ ನ್ಯಾಷನಲ್ ಕಾನ್ಸರೆನ್ಸ್ ಫಾರೂಕ್ ಅಬ್ದುಲ್ಲಾ ಹಾಗೂ ಕಾಂಗ್ರೆಸ್ ಮುಖಂಡರಾದ (Congress Leaders) ಶಶಿ ತರೂರ್, ಮನೀಶ್ ತಿವಾರಿ ಅವರೂ ಸೇರಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ಬರಬೇಡಿ – ಅಡ್ವಾಣಿ, ಜೋಶಿಯಲ್ಲಿ ಮನವಿ – ಬರಲಿರುವ VIP ಗಣ್ಯರು ಯಾರು?

    ಲೋಕಸಭೆಯಲ್ಲಿನ ಭದ್ರತಾ ಲೋಪಕ್ಕೆ ಅಮಿತ್ ಶಾ ಅವರು ಪ್ರತಿಕ್ರಿಯೆ ನೀಡುವಂತೆ ವಿರೋಧ ಪಕ್ಷಗಳ INDIA ಒಕ್ಕೂಟದ ಸದಸ್ಯರು ಕಳೆದ ಕೆಲ ದಿನಗಳಿಂದ ತೀವ್ರ ಒತ್ತಡ ಹೇರುತ್ತಿದ್ದಾರೆ. ಫಲಕ ಹಿಡಿದು ಮತ್ತು ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅಶಿಸ್ತಿನ ವರ್ತನೆಗಾಗಿ ಲೋಕಸಭೆ ಮತ್ತು ರಾಜ್ಯಸಭೆಗಳಿಂದ ಒಟ್ಟು 141 ಸದಸ್ಯರನ್ನು ಅಮಾನತುಗೊಳಿಸಿದ್ದು, ಇತಿಹಾಸವಾಗಿದೆ.

    ಸಂಸತ್‌ ಭದ್ರತಾ ಲೋಪ ವಿಷಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪಟ್ಟು ಹಿಡಿದು ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದ್ದಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ 79 ಸದಸ್ಯರನ್ನು ಸೋಮವಾರ ಅಮಾನತು ಮಾಡಲಾಗಿತ್ತು. ಈ ಪೈಕಿ 11 ಸದಸ್ಯರ ನಡವಳಿಕೆ ಪ್ರಕರಣವನ್ನು ಸದನದ ಹಕ್ಕುಬಾಧ್ಯತಾ ಸಮಿತಿಗೆ ನೀಡಲಾಗಿದ್ದು, ಆ ವರದಿ ಬರುವವರೆಗೆ ಸದನದಿಂದ ದೂರ ಉಳಿಯುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಅಂದು ಪುಲ್ವಾಮಾ, ಇಂದು ಸ್ಮೋಕ್‌ ಬಾಂಬ್‌ – ಚುನಾವಣೆ ಬಂದಾಗ ಬಿಜೆಪಿಗರಿಂದ ಗಲಾಟೆ ಸೃಷ್ಟಿ: ಎಸ್.ಆರ್ ಶ್ರೀನಿವಾಸ್

    ಅತಿಹೆಚ್ಚು ಸಂಸದರ ಅಮಾನತು:
    ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸಂಸದರನ್ನು ಈ ಬಾರಿ ಅಮಾನತು ಮಾಡಲಾಗಿದೆ. 1989 ರಲ್ಲಿ ಅತಿ ಹೆಚ್ಚು ಸಂಸದರು ಅಮಾನತಾಗಿದ್ದರು. ಅದು ಇದವರೆಗಿನ ದಾಖಲೆಯಾಗಿತ್ತು. ಆ ದಾಖಲೆಯೂ ಬ್ರೇಕ್‌ ಆಗಿದೆ. ಹಾಗಾದರೆ ಯಾವ್ಯಾವ ಅವಧಿಯಲ್ಲಿ ಎಷ್ಟು ಸಂಸದರ ಅಮಾನತಾಗಿತ್ತು ಎಂಬ ವಿವರ ಇಲ್ಲಿದೆ.

    2023ರಲ್ಲಿ 92 ಸಂಸದರು ಅಮಾನತು
    ಡಿಸೆಂಬರ್ 13 ರಂದು ಉಂಟಾದ ಭದ್ರತಾ ಲೋಪ ವಿಚಾರವಾಗಿ ಆಡಳಿತ ಪಕ್ಷ ವಿಪಕ್ಷಗಳ‌ ನಡುವೆ ಗದ್ದಲ ನಡೆಯುತ್ತಿದೆ. ಪ್ರತಾಪ್ ಸಿಂಹ ವಿರುದ್ಧ ಕ್ರಮ ಹಾಗೂ ಸದನದಲ್ಲಿ ಅಮಿತ್ ಶಾ ಉತ್ತರ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಡಿಸೆಂಬರ್ 14 ರಂದು ರಾಜ್ಯಸಭೆಯಲ್ಲಿ ಓರ್ವ ಸಂಸದ ಹಾಗೂ ಲೋಕಸಭೆಯಲ್ಲಿ 13 ಸಂಸದರನ್ನ ಅಮಾನತು ಮಾಡಲಾಗಿತ್ತು. ಸೋಮವಾರ 79 ಸಂಸದರನ್ನು ಅಮಾನುಗೊಳಿಸಲಾಗಿತ್ತು. ಮಂಗಳವಾರವಾದ ಇಂದು 49 ಸಂಸದರನ್ನ ಅಮಾನತು ಮಾಡಲಾಗಿದೆ.

    1989 – 63 ಸಂಸದರು ಅಮಾನತು
    1989 ರಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ 63 ಸಂಸದರನ್ನ ಅಮಾನತುಗೊಳಿಸಲಾಗಿತ್ತು. ಮಾರ್ಚ್ 15, 1989 ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ಕುರಿತು ತನಿಖೆ ನಡೆಸಿದ್ದ ಠಕ್ಕರ್ ಆಯೋಗದಿಂದ ವರದಿ ಮಂಡನೆ ಮಾಡಲಾಗುತ್ತಿತ್ತು. ಈ ವೇಳೆ ವಿಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ಕಾರಣ 63 ಸಂಸದರನ್ನು ಅಮಾನತು ಮಾಡಲಾಗಿತ್ತು.

    2019 – 45 ಸಂಸದರು ಅಮಾನತು
    2019 ರಲ್ಲಿ 45 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಎರಡು ದಿನದ ಅವಧಿಯಲ್ಲಿ 45 ಸಂಸದರು ಅಮಾನತುಗೊಂಡಿದ್ದರು. ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಅಂದಿನ ಸ್ಪೀಕರ್ ಸುಮಿತ್ರಾ ಮಹಾಜನ್, ಟಿಡಿಪಿ ಮತ್ತು ಎಐಎಡಿಎಂಕೆಯ 45 ಸಂಸದರನ್ನ ಅಮಾನತು ಮಾಡಿದ್ದರು.

    2015- 25 ಸಂಸದರ ಅಮಾನತು
    ಕಲಾಪ ನಡೆಯುವ ವೇಳೆ ಪ್ರತಿಭಟನೆ ನಡೆಸಿದ್ದಕ್ಕೆ ಹಾಗೂ ಭಿತ್ತಿಪತ್ರ ತೋರಿ, ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ 25 ಸಂಸದರನ್ನ ಲೋಕಸಭೆಯಲ್ಲಿ ಅಮಾನತುಗೊಳಿಸಲಾಗಿತ್ತು.

    2014- 18 ಸಂಸದರ ಅಮಾನತು
    2014ರಲ್ಲಿ ತೆಲಂಗಾಣ ರಾಜ್ಯ ಆಂಧ್ರಪ್ರದೇಶದಿಂದ ಬೇರ್ಪಟ್ಟು ನೂತನ ರಾಜ್ಯವಾಗಿತ್ತು. ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ಸಂಸದರು, ತೆಲಂಗಾಣ ವಿಚಾರವಾಗಿ ಕಲಾಪದಲ್ಲಿ ಗದ್ದಲ ಸೃಷ್ಟಿ ಮಾಡಿದ್ದರು. ಈ ಹಿನ್ನೆಲೆ ಸ್ಪೀಕರ್ ಸುಮಿತ್ರಾ ಮಹಾಜನ್ 18 ಸಂಸದರನ್ನು ಅಮಾನತುಗೊಳಿಸಿದ್ದರು.

  • ಅಂದು ಪುಲ್ವಾಮಾ, ಇಂದು ಸ್ಮೋಕ್‌ ಬಾಂಬ್‌ – ಚುನಾವಣೆ ಬಂದಾಗ ಬಿಜೆಪಿಗರಿಂದ ಗಲಾಟೆ ಸೃಷ್ಟಿ: ಎಸ್.ಆರ್ ಶ್ರೀನಿವಾಸ್

    ಅಂದು ಪುಲ್ವಾಮಾ, ಇಂದು ಸ್ಮೋಕ್‌ ಬಾಂಬ್‌ – ಚುನಾವಣೆ ಬಂದಾಗ ಬಿಜೆಪಿಗರಿಂದ ಗಲಾಟೆ ಸೃಷ್ಟಿ: ಎಸ್.ಆರ್ ಶ್ರೀನಿವಾಸ್

    ತುಮಕೂರು: ಚುನಾವಣೆ ಬಂದಾಗ ಬಿಜೆಪಿಗರು (BJP) ಯಾವುದಾರೂ ಒಂದು ಗಲಾಟೆಯನ್ನ ಸೃಷ್ಟಿ ಮಾಡ್ತಾರೆ. ಅಂದು ಪುಲ್ವಾಮಾ ದಾಳಿ (Pulwama Attack) ಮಾಡಿಸಿದ್ದು ಬಿಜೆಪಿಗರೇ ಎಂದು ಗುಬ್ಬಿ ಶಾಸಕ ಎಸ್‌.ಆರ್‌ ಶ್ರೀನಿವಾಸ್‌ (SR Srinivas) ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

    ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪುಲ್ವಾಮಾ ದಾಳಿ ಮಾಡಿಸಿದ್ದು, ಬಿಜೆಪಿಗರೇ, ಚುನಾವಣೆ ಬಂದಾಗ ಯಾವುದಾರೂ ಒಂದು ಗಲಾಟೆ ಸೃಷ್ಟಿ ಮಾಡಿಸುತ್ತಾರೆ. ಸ್ಮೋಕ್‌ ಬಾಂಬ್‌ ಪ್ರಕರಣ (Smoke Bomb Parliament) ವಿಚಾರದಲ್ಲಿಯೂ ಪಾಸ್‌ ಕೊಟ್ಟಿದ್ದು ಪ್ರತಾಪ್‌ ಸಿಂಹ. ಅದೇ ಪಾಸನ್ನ ಪೀರ್‌ ಸಾಬ್‌ನೋ ಅಥವಾ ಕಾಂಗ್ರೆಸ್‌ನವರೋ ಕೊಟ್ಟಿದ್ದರೇ ಅದರ ಲಾಭವನ್ನ ಬಿಜೆಪಿಯವರೇ ಪಡೆಯುತ್ತಿದ್ದರು. ಈ ದೇಶದಲ್ಲಿ ಎಷ್ಟು ಗಲಾಟೆ ಮಾಡಿಸುತಿದ್ರು ಎಂದು ಕಿಡಿ ಕಾರಿದ್ದಾರೆ.

    ಸಂಸದ ಪ್ರತಾಪ್‌ ಸಿಂಹನನ್ನ ವಿಚಾರಣೆ ಮಾಡುತ್ತಿಲ್ಲ. ಯಾವ ಮೂಲದಿಂದ ಹೇಗೆ ಪಾಸ್‌ ಕೊಟ್ಟ ಅನ್ನೋದನ್ನ ತನಿಖೆ ಮಾಡಿಸಬೇಕು. ಸಂಸದ ಸದಸ್ಯತ್ವದಿಂದಲೇ ಪ್ರತಾಪ್‌ ಸಿಂಹನನ್ನ ವಜಾಗೊಳಿಸಬೇಕು ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇಂದು ನಡೆಯಲಿದೆ INDIA ಒಕ್ಕೂಟದ ಸಭೆ – ಏನೇನು ಚರ್ಚೆ ನಡೆಯಲಿದೆ?

    ಬಿಜೆಪಿಯವರು ಎಷ್ಟು ಲೂಟಿ ಮಾಡಿದ್ರೂ ಪರ್ವಾಗಿಲ್ಲ, ಬೇರೆ ಪಕ್ಷದವರು ನ್ಯಾಯಯುತವಾಗಿದ್ದರೂ ಅವರ ಮೇಲೆ ದಾಳಿ ನಡೆಸುತ್ತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತಯಾರಿ ಶುರು – ಗುರುವಾರ ದೆಹಲಿಯಲ್ಲಿ ಹೈವೋಲ್ಟೇಜ್‌ ಸಭೆ

  • ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸಂಸದರ ಅಮಾನತು – ಯಾವ್ಯಾವ ಅವಧಿಯಲ್ಲಿ ಎಷ್ಟು ಮಂದಿ ಸಸ್ಪೆಂಡ್‌?

    ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸಂಸದರ ಅಮಾನತು – ಯಾವ್ಯಾವ ಅವಧಿಯಲ್ಲಿ ಎಷ್ಟು ಮಂದಿ ಸಸ್ಪೆಂಡ್‌?

    – ರಾಜೀವ್‌ ಗಾಂಧಿ ಪ್ರಧಾನಿಯಾಗಿದ್ದಾಗ 63 ಸಂಸದರು ಸಸ್ಪೆಂಡ್‌ 

    ನವದೆಹಲಿ: ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸಂಸದರನ್ನು ಈ ಬಾರಿ ಅಮಾನತು ಮಾಡಲಾಗಿದೆ. 1989 ರಲ್ಲಿ ಅತಿ ಹೆಚ್ಚು ಸಂಸದರು ಅಮಾನತಾಗಿದ್ದರು. ಅದು ಇದವರೆಗಿನ ದಾಖಲೆಯಾಗಿತ್ತು. ಆ ದಾಖಲೆಯೂ ಬ್ರೇಕ್‌ ಆಗಿದೆ. ಹಾಗಾದರೆ ಯಾವ್ಯಾವ ಅವಧಿಯಲ್ಲಿ ಎಷ್ಟು ಸಂಸದರ ಅಮಾನತಾಗಿತ್ತು ಎಂಬ ವಿವರ ಇಲ್ಲಿದೆ.

    2023ರಲ್ಲಿ 92 ಸಂಸದರು ಅಮಾನತು
    ಡಿಸೆಂಬರ್ 13 ರಂದು ಉಂಟಾದ ಭದ್ರತಾ ಲೋಪ ವಿಚಾರವಾಗಿ ಆಡಳಿತ ಪಕ್ಷ ವಿಪಕ್ಷಗಳ‌ ನಡುವೆ ಗದ್ದಲ ನಡೆಯುತ್ತಿದೆ. ಪ್ರತಾಪ್ ಸಿಂಹ ವಿರುದ್ಧ ಕ್ರಮ ಹಾಗೂ ಸದನದಲ್ಲಿ ಅಮಿತ್ ಶಾ ಉತ್ತರ ನೀಡಬೇಕು ಎಂಬ ಆಗ್ರಹ ಕೇಳಿಬಂದಿದೆ. ಡಿಸೆಂಬರ್ 14 ರಂದು ರಾಜ್ಯಸಭೆಯಲ್ಲಿ ಓರ್ವ ಸಂಸದ ಹಾಗೂ ಲೋಕಸಭೆಯಲ್ಲಿ 13 ಸಂಸದರನ್ನ ಅಮಾನತು ಮಾಡಲಾಗಿತ್ತು. ನಿನ್ನೆ ಮತ್ತೆ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಇದೆ ವಿಚಾರಕ್ಕೆ ಗದ್ದಲ ಉಂಟಾದ ಕಾರಣ ಲೋಕಸಭೆಯಲ್ಲಿ 33 ಹಾಗೂ ರಾಜ್ಯಸಭೆಯಲ್ಲಿ 45 ಸಂಸದರನ್ನ ಅಮಾನತು ಮಾಡಲಾಗಿದೆ. ಕಳೆದ ವಾರ ಹಾಗೂ ನಿನ್ನೆ ಸೇರಿ ಒಟ್ಟು 92 ಸಂಸದರು ಅಮಾನತುಗೊಂಡಿದ್ದಾರೆ. ಇದನ್ನೂ ಓದಿ: ಲೋಕಸಭೆಯಿಂದ ಮತ್ತೆ 31 ಸಂಸದರು ಅಮಾನತು

    1989 – 63 ಸಂಸದರು ಅಮಾನತು
    1989 ರಲ್ಲಿ ರಾಜೀವ್ ಗಾಂಧಿ ಪ್ರಧಾನಿಯಾಗಿದ್ದಾಗ 63 ಸಂಸದರನ್ನ ಅಮಾನತುಗೊಳಿಸಲಾಗಿತ್ತು. ಮಾರ್ಚ್ 15, 1989 ರಂದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ಕುರಿತು ತನಿಖೆ ನಡೆಸಿದ್ದ ಠಕ್ಕರ್ ಆಯೋಗದಿಂದ ವರದಿ ಮಂಡನೆ ಮಾಡಲಾಗುತ್ತಿತ್ತು. ಈ ವೇಳೆ ವಿಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ಕಾರಣ 63 ಸಂಸದರನ್ನು ಅಮಾನತು ಮಾಡಲಾಗಿತ್ತು.

    2019 – 45 ಸಂಸದರು ಅಮಾನತು
    2019 ರಲ್ಲಿ 45 ಸಂಸದರನ್ನು ಅಮಾನತುಗೊಳಿಸಲಾಗಿತ್ತು. ಎರಡು ದಿನದ ಅವಧಿಯಲ್ಲಿ 45 ಸಂಸದರು ಅಮಾನತುಗೊಂಡಿದ್ದರು. ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಅಂದಿನ ಸ್ಪೀಕರ್ ಸುಮಿತ್ರಾ ಮಹಾಜನ್, ಟಿಡಿಪಿ ಮತ್ತು ಎಐಎಡಿಎಂಕೆಯ 45 ಸಂಸದರನ್ನ ಅಮಾನತು ಮಾಡಿದ್ದರು. ಇದನ್ನೂ ಓದಿ: ಸಂಸತ್‌ನಲ್ಲಿ ಭದ್ರತಾ ಲೋಪ ಕೇಸ್‌ – ತನಿಖೆಗೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ವಿಶೇಷ ಸೆಲ್‌

    2015- 25 ಸಂಸದರ ಅಮಾನತು
    ಕಲಾಪ ನಡೆಯುವ ವೇಳೆ ಪ್ರತಿಭಟನೆ ನಡೆಸಿದ್ದಕ್ಕೆ ಹಾಗೂ ಭಿತ್ತಿಪತ್ರ ತೋರಿ, ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ 25 ಸಂಸದರನ್ನ ಲೋಕಸಭೆಯಲ್ಲಿ ಅಮಾನತುಗೊಳಿಸಲಾಗಿತ್ತು.

    2014- 18 ಸಂಸದರ ಅಮಾನತು
    2014ರಲ್ಲಿ ತೆಲಂಗಾಣ ರಾಜ್ಯ ಆಂಧ್ರಪ್ರದೇಶದಿಂದ ಬೇರ್ಪಟ್ಟು ನೂತನ ರಾಜ್ಯವಾಗಿತ್ತು. ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ಸಂಸದರು, ತೆಲಂಗಾಣ ವಿಚಾರವಾಗಿ ಕಲಾಪದಲ್ಲಿ ಗದ್ದಲ ಸೃಷ್ಟಿ ಮಾಡಿದ್ದರು. ಈ ಹಿನ್ನೆಲೆ ಸ್ಪೀಕರ್ ಸುಮಿತ್ರಾ ಮಹಾಜನ್ 18 ಸಂಸದರನ್ನು ಅಮಾನತುಗೊಳಿಸಿದ್ದರು. ಇದನ್ನೂ ಓದಿ: ಕೇಂದ್ರದಲ್ಲಿ ಬೇರೆ ಪಕ್ಷ ಇರ್ತಿದ್ರೆ ಬಿಜೆಪಿ ಇಡೀ ದೆಹಲಿ ಬಂದ್ ಮಾಡ್ತಿತ್ತು: ಸಂಜಯ್ ರಾವತ್

  • ಲೋಕಸಭೆಯಿಂದ ಮತ್ತೆ 31 ಸಂಸದರು ಅಮಾನತು

    ಲೋಕಸಭೆಯಿಂದ ಮತ್ತೆ 31 ಸಂಸದರು ಅಮಾನತು

    ನವದೆಹಲಿ: ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ (Lok Sabha) ಅಮಾನತುಗೊಳಿಸಲಾಗಿದೆ.

    ಕಳೆದ ವಾರ ಆಗಿದ್ದ ಲೋಕಸಭಾ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ವಿಪಕ್ಷಗಳು ಪ್ರತಿಭಟಿಸಿದ್ದವು. ಇದನ್ನೂ ಓದಿ: ಕೇಂದ್ರದಲ್ಲಿ ಬೇರೆ ಪಕ್ಷ ಇರ್ತಿದ್ರೆ ಬಿಜೆಪಿ ಇಡೀ ದೆಹಲಿ ಬಂದ್ ಮಾಡ್ತಿತ್ತು: ಸಂಜಯ್ ರಾವತ್

    ಕಲಾಪಕ್ಕೆ ಅಡ್ಡಿಪಡಿಸಿದ್ದರಿಂದ ಪ್ರತಿಪಕ್ಷಗಳ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಯಿತು.

    ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಕಳೆದ ವಾರ ವಿಪಕ್ಷಗಳ 13 ಸಂಸದರು ಅಮಾನತುಗೊಂಡಿದ್ದರು. ಈಗ ಮತ್ತೊಂದು ಸುತ್ತಿನಲ್ಲಿ 31 ಸಂಸದರು ಅಮಾನತುಗೊಂಡಿದ್ದಾರೆ. ಇದಲ್ಲದೇ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ. ಇದರರ್ಥ ಒಟ್ಟು 46 ಸಂಸದರನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ 43 ಮಂದಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಂಸತ್‌ ಮೇಲಿನ ದಾಳಿ ಗಂಭೀರವಾದದ್ದು; ಚರ್ಚೆ ಬೇಡ, ವಿಸ್ತೃತ ತನಿಖೆಯಾಗಲಿ: ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

    ಅಮಾನತುಗೊಂಡ ಸಂಸದರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಸದನದಲ್ಲಿ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಸೇರಿದ್ದಾರೆ.

  • ಸಂಸತ್‌ನಲ್ಲಿ ಭದ್ರತಾ ಲೋಪ ಕೇಸ್‌ – ತನಿಖೆಗೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ವಿಶೇಷ ಸೆಲ್‌

    ಸಂಸತ್‌ನಲ್ಲಿ ಭದ್ರತಾ ಲೋಪ ಕೇಸ್‌ – ತನಿಖೆಗೆ ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ವಿಶೇಷ ಸೆಲ್‌

    – ಅಜ್ಞಾತ ಸ್ಥಳಗಳಲ್ಲಿ ಆರೋಪಿಗಳ ವಿಚಾರಣೆ

    ನವದೆಹಲಿ: ಇತ್ತೀಚೆಗೆ ನಡೆದ ಸಂಸತ್‌ನಲ್ಲಿ ಭದ್ರತಾ ಲೋಪ (Parliament Security Breach) ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಕರ್ನಾಟಕ ಸೇರಿದಂತೆ 6 ರಾಜ್ಯಗಳಲ್ಲಿ ದೆಹಲಿ ಪೊಲೀಸರ ವಿಶೇಷ ಕೋಶ ಘಟಕಗಳನ್ನ (Delhi Police Special Cell) ರಚಿಸಲಾಗಿದೆ.

    ಡಿಸೆಂಬರ್‌ 13ರಂದು ನಡೆದ ಭದ್ರತಾ ಲೋಪ ಪ್ರಕರಣ ತನಿಖೆಗೆ ಕರ್ನಾಟಕ (Karnataka), ರಾಜಸ್ಥಾನ, ಹರಿಯಾಣ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ತನಿಖೆ ನಡೆಸಲು ಈ ಘಟಕಗಳನ್ನ ರಚಿಸಲಾಗಿದೆ. ಇದನ್ನೂ ಓದಿ: ಹಿಂದೂಗಳು ಹಲಾಲ್ ಮಾಂಸ ಸೇವನೆ ಬಿಡಿ, ಝಟ್ಕಾಗೆ ಆದ್ಯತೆ ನೀಡಿ: ಕೇಂದ್ರ ಸಚಿವ

    ಇದಲ್ಲದೇ ಇನ್ನೂ 50 ಪ್ರತ್ಯೇಕ ತಂಡಗಳನ್ನ ರಚಿಸಲಾಗಿದ್ದು, ಆರೋಪಿಗಳ ಡಿಜಿಟಲ್‌ ಬಳಕೆ, ಬ್ಯಾಂಕಿಂಗ್‌ (Banking) ವಿವರ, ಪೂರ್ವಾಪರ ಹಿನ್ನೆಲೆಯ ತನಿಖೆ ನಡೆಸಲಾಗುತ್ತಿದೆ. ವಿಶೇಷ ಕೋಶದ ತಂಡವು ಆರೋಪಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ 6 ರಾಜ್ಯಗಳಲ್ಲಿ ಸುರಕ್ಷಿತ ಸ್ಥಳಗಳಲ್ಲಿ ಇರಿಸಿರುವುದಾಗಿ ಉನ್ನತ ಮೂಲಗಳು ಮಾಹಿತಿ ಹಂಚಿಕೊಂಡಿದೆ.

    6 ಆರೋಪಿಗಳಲ್ಲಿ ಒಬ್ಬನಾದ ಸಾಗರ್‌ ಶರ್ಮಾನನ್ನ ದಕ್ಷಿಣ ವಲಯದ ವಿಶೇಷ ಸೆಲ್ ಸಾಕೇತ್ ತಂಡವು ವಿಚಾರಣೆ ನಡೆಸುತ್ತಿದೆ. ಇನ್ನೂ ಮಾಸ್ಟರ್‌ ಮೈಂಡ್‌ ಲಲಿತ್‌ ಝಾನನ್ನ ವಿಶೇಷ ಸೆಲ್‌ ತಂಡವು ಜನಕರಪುರಿ ಸೌತ್ ವೆಸ್ಟರ್ನ್ ರೇಂಜ್‌ಗೆ ಹಸ್ತಾಂತರಿಸಿದೆ. ಮೈಸೂರು ಮೂಲದ ಆರೋಪಿ ಮನೋರಂಜನ್‌ನನ್ನ ನವದೆಹಲಿ ರೇಂಜ್ (NDR) ಸೆಲ್‌ಗೆ ಹಸ್ತಾಂತರಿಸಿದ್ದು, ಅಲ್ಲಿನ ತಂಡ ವಿಚಾರಣೆ ನಡೆಸುತ್ತಿದೆ. ಸಂಸತ್‌ ಹೊರಗೆ ಪ್ರತಿಭಟನೆ ಮಾಡಿದ್ದ ನೀಲಂ ದೇವಿಯನ್ನ ದೆಹಲಿಯ ನ್ಯೂ ಫ್ರೆಂಡ್ಸ್ ಕಾಲೋನಿಯ ವಿಶೇಷ ಕೋಶದ ಕೌಂಟರ್-ಇಂಟೆಲಿಜೆನ್ಸ್ ಯುನಿಟ್ ಸುಪರ್ದಿಯಲ್ಲಿರಿಸಿ ವಿಚಾರಣೆ ನಡೆಸಲಾಗುತ್ತಿದೆ.

    6 ಜನ ಆರೋಪಿಗಳನ್ನ ಶನಿವಾರವೇ ವಿಶೇಷ ಕೋಶದ ವಿವಿಧ ಘಟಕಗಳಿಗೆ ಹಸ್ತಾಂತರಿಸಲಾಗಿದೆ. ಆರೋಪಿಯನ್ನು ವಿಶೇಷ ಕೋಶದಿಂದ ತನಿಖೆ ಮಾಡಿದ ನಂತರ ಹೆಚ್ಚಿನ ತನಿಖೆಗಾಗಿ ಎನ್‌ಎಫ್‌ಸಿ ವಿಶೇಷ ತಂಡಕ್ಕೆ ಹಸ್ತಾಂತರಿಸಲಾಗುವುದು ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಕೇಂದ್ರದಲ್ಲಿ ಬೇರೆ ಪಕ್ಷ ಇರ್ತಿದ್ರೆ ಬಿಜೆಪಿ ಇಡೀ ದೆಹಲಿ ಬಂದ್ ಮಾಡ್ತಿತ್ತು: ಸಂಜಯ್ ರಾವತ್

    ಡಿಸೆಂಬರ್‌ 13 ರಂದು ನಡೆದ ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6 ಮಂದಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ 5ನೇ ಆರೋಪಿ ಲಲಿತ್ ಝಾ, ದೆಹಲಿ ಪೊಲೀಸರ ಮುಂದೆ ಗುರುವಾರ ಶರಣಾದನು. ಇಡೀ ಪ್ರಕರಣದ ಮಾಸ್ಟರ್‌ಮೈಂಡ್ ಎಂದು ಲಲಿತ್ ಝಾ ನನ್ನ ನಂಬಲಾಗಿದೆ. ಇತರೆ ಆರೋಪಿಗಳ ಕುರಿತ ಸಾಕ್ಷ್ಯ ನಾಶ ಮಾಡಿರುವ ಆರೋಪಗಳೂ ಕೇಳಿ‌ಬಂದಿವೆ. ಈ ನಡುವೆ ದೆಹಲಿ ಪೊಲೀಸರು ಆರೋಪಿಗಳ ಸುಟ್ಟ ಮೊಬೈಲ್‌ಗಳನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ತನಿಖೆ ವೇಳೆ ಹಲವು ಸ್ಪೋಟಕ ರಹಸ್ಯಗಳು ಬೆಳಕಿಗೆ ಬಂದಿವೆ.