Tag: parliament

  • New Parliament Building – ಕರ್ನಾಟಕ ವಿಧಾನಸೌಧದ ಉದಾಹರಣೆ ನೀಡಿ ಕಾಂಗ್ರೆಸ್‌ಗೆ ಸಂಬಿತ್‌ ಪಾತ್ರ ತಿರುಗೇಟು

    New Parliament Building – ಕರ್ನಾಟಕ ವಿಧಾನಸೌಧದ ಉದಾಹರಣೆ ನೀಡಿ ಕಾಂಗ್ರೆಸ್‌ಗೆ ಸಂಬಿತ್‌ ಪಾತ್ರ ತಿರುಗೇಟು

    ನವದೆಹಲಿ: ಮಾಜಿ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರು ಕರ್ನಾಟಕ ವಿಧಾನಸೌಧಕ್ಕೆ (Karnataka Vidhan Sabha) ಅಡಿಪಾಯ ಹಾಕಿದ್ದರು. ಕರ್ನಾಟಕದ ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಲಿಲ್ಲ ಎಂದು ಬಿಜೆಪಿ ನಾಯಕ ಸಂಬಿತ್‌ ಪಾತ್ರ (Sambit Patra) ಪ್ರಶ್ನಿಸಿದ್ದಾರೆ.

     

    ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನೂತನ ಸಂಸತ್‌ ಭವನವನ್ನು (New Parliament Building) ಲೋಕಾರ್ಪಣೆ ಮಾಡಲಿದ್ದಾರೆ. ಉದ್ಘಾಟನಾ ಕಾರ್ಯಕ್ರಮವನ್ನು ರಾಷ್ಟ್ರಪತಿಗಳು ಮಾಡಬೇಕಿತ್ತು. ರಾಷ್ಟ್ರಪತಿಗಳು ಸಂಸತ್ ಭವನವನ್ನು ಉದ್ಘಾಟನೆ ಮಾಡದೇ ಇರುವುದು ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಎಂದು ವಿಪಕ್ಷಗಳು ಆರೋಪಿಸಿವೆ. ಈ ಕಾರಣ ನೀಡಿ ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ ಸೇರಿದಂತೆ 19 ವಿಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಇದನ್ನೂ ಓದಿ: 200 ಯೂನಿಟ್ ಫ್ರೀ – ವಿದ್ಯುತ್‌ ಉಪಕರಣ ಖರೀದಿಗೆ ಫುಲ್ ಡಿಮ್ಯಾಂಡ್

    ವಿಪಕ್ಷಗಳ ನಡೆಯನ್ನು ಖಂಡಿಸಿ ಸಂಬಿತ್‌ ಪಾತ್ರ ಟ್ವೀಟ್‌ ಮಾಡಿ ಈ ಹಿಂದೆ ಯಾವೆಲ್ಲ ಪ್ರಧಾನಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಎಲ್ಲಿ ಏನು ಉದ್ಘಾಟನೆ ಮಾಡಿದ್ದಾರೆ ಎಂಬ ಪಟ್ಟಿಯನ್ನು ರಿಲೀಸ್‌ ಮಾಡಿದ್ದಾರೆ. ಅಷ್ಟೇ ಅಲ್ಲದೇ ಈ ನಾಯಕರು ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಿದಾಗ ಯಾರೂ ಬಹಿಷ್ಕಾರ ಹಾಕಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

    ಟ್ವೀಟ್‌ನಲ್ಲಿ ಏನಿದೆ?
    ಮಾಜಿ ಪ್ರಧಾನಿ ಇಂದಿರಾಗಾಂಧಿ ಮಹಾರಾಷ್ಟ್ರ ವಿಧಾನ ಭವನವನ್ನು 1981ರಲ್ಲಿ ಉದ್ಘಾಟಿಸಿದ್ದಾರೆ. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಸಂಸತ್ತಿನ ಗ್ರಂಥಾಲಯ ಕಟ್ಟಡಕ್ಕೆ 1987ರಂದು ಶಂಕುಸ್ಥಾಪನೆ ಮಾಡಿದ್ದಾರೆ.

    ಮಾಜಿ ಪ್ರಧಾನಿ ಇಂದಿರಾ ಗಾಂಧಿ 1975ರ ಅಕ್ಟೋಬರ್‌ 24 ರಂದು ಪಾರ್ಲಿಮೆಂಟ್‌ ಹೌಸ್‌ ಅನೆಕ್ಸ್ ಉದ್ಘಾಟನೆ ಮಾಡಿದ್ದರು. ಅಂದು ಯಾರೂ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿರಲಿಲ್ಲ.

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಸೋನಿಯಾ ಗಾಂಧಿ (Sonia Gandhi) ಅವರು ಮಣಿಪುರದ ಹೊಸ ಅಸೆಂಬ್ಲಿ ಸಂಕೀರ್ಣವನ್ನು ಉದ್ಘಾಟಿಸಿದ್ದರು. ಮಣಿಪುರದ ಹೊಸ ಅಸೆಂಬ್ಲಿ ಸಂಕೀರ್ಣ ಉದ್ಘಾಟನೆ ಮಾಡಲು ಸೋನಿಯಾ ಗಾಂಧಿ ಅವರಿಗೆ ಯಾವ ಅರ್ಹತೆಯಿದೆ? ಸೋನಿಯಾ ಗಾಂಧಿ ಅಧಕ್ಷರಾಗಿದ್ದಾರಾ? ಅಥವಾ ಮಣಿಪುರದ ಸಿಎಂ ಅಥವಾ ಮಣಿಪುರದ ರಾಜ್ಯಪಾಲರೇ?

    ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ತಮಿಳುನಾಡು ಸರ್ಕಾರದ ಅಸೆಂಬ್ಲಿಯನ್ನು ಉದ್ಘಾಟನೆ ಮಾಡಿದ್ದರು. ತಮಿಳುನಾಡು ರಾಜ್ಯಪಾಲರು ಯಾಕೆ ಉದ್ಘಾಟನೆ ಮಾಡಿಲ್ಲ?

    ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಚಂಡೀಗಢದ ವಿಧಾನಸಭೆ ಹೊಸ ಕಟ್ಡಡಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಶಂಕುಸ್ಥಾಪನೆ ನಡೆಸಲು ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಅವರಿಗೆ ಯಾವ ಅರ್ಹತೆ ಇದೆ?

  • ಸಂಸತ್‌ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಪಕ್ಷಗಳ ಬಹಿಷ್ಕಾರ – ಭಾಗವಹಿಸುತ್ತೇವೆ ಎಂದ 2 ಪಕ್ಷಗಳು

    ಸಂಸತ್‌ ಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೆ ವಿಪಕ್ಷಗಳ ಬಹಿಷ್ಕಾರ – ಭಾಗವಹಿಸುತ್ತೇವೆ ಎಂದ 2 ಪಕ್ಷಗಳು

    ನವದೆಹಲಿ: ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ ಸೇರಿದಂತೆ 19 ವಿಪಕ್ಷಗಳು ಮೇ 28 ರಂದು ನಡೆಯಲಿರುವ ನೂತನ ಸಂಸತ್ ಭವನ (New Parliament Inauguration) ಉದ್ಘಾಟನೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿದರೆ 2 ಪಕ್ಷಗಳು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿವೆ.

    ಎನ್‌ಡಿಎ (NDA) ಮಿತ್ರ ಪಕ್ಷವಲ್ಲದ ಒಡಿಶಾದ ಬಿಜೆಡಿ (BJD) ಮತ್ತು ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿ (YSRCP) ಭಾಗವಹಿಸುವುದಾಗಿ ಅಧಿಕೃತವಾಗಿ ತಿಳಿಸಿವೆ. ನೂತನ ಸಂಸತ್‌ ಉದ್ಘಾಟನೆ ದೇಶದ ಪ್ರಜಾಪ್ರಭುತ್ವ ಪಾಲಿಗೆ ಮಹತ್ವದ ದಿನವಾಗಿದೆ. ಭಿನ್ನಾಭಿಪ್ರಾಯಗಳಿದ್ದರೆ ನಂತರ ಕುಳಿತು ಚರ್ಚಿಸೋಣ ಎಂದು ಬಿಜೆಡಿ ಮುಖ್ಯಸ್ಥ ಒಡಿಶಾ ಸಿಎಂ ನವೀನ್‌ ಪಟ್ನಾಯಕ್‌ ಹೇಳಿದ್ದಾರೆ.

    ವಿಪಕ್ಷಗಳಿಂದ ಬಹಿಷ್ಕಾರ
    ಪ್ರಧಾನಿ ಮೋದಿ (PM Narendra Modi) ನೂತನ ಸಂಸತ್ ಭವನವನ್ನು ಉದ್ಘಾಟನೆ ಮಾಡಲಿದ್ದು, ರಾಷ್ಟ್ರಪತಿಗಳು ಸಂಸತ್ ಭವನವನ್ನು ಉದ್ಘಾಟನೆ ಮಾಡದೇ ಇರುವುದನ್ನು ವಿಪಕ್ಷಗಳು ರಾಷ್ಟ್ರಪತಿಗಳ ಹುದ್ದೆಗೆ ಮಾಡಿದ ಅವಮಾನ ಎಂದು ಆರೋಪಿಸಿವೆ. ಇದನ್ನೂ ಓದಿ: ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?

     

    ಕಾರ್ಯಕ್ರಮವನ್ನು ಬಹಿಷ್ಕರಿಸುತ್ತಿರುವುದರ ಬಗ್ಗೆ ಜಂಟಿ ಹೇಳಿಕೆ ಬಿಡುಗಡೆ ಮಾಡಿರುವ ವಿಪಕ್ಷಗಳು ನೂತನ ಸಂಸತ್ ಕಟ್ಟಡ ಉದ್ಘಾಟನೆ ಒಂದು ಮಹತ್ವದ ಸಂದರ್ಭವಾಗಿದೆ. ಆದರೆ ಸರ್ಕಾರ ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಕುತ್ತಿದೆ ಎಂಬ ನಮ್ಮ ನಂಬಿಕೆ ಹಾಗೂ ಹೊಸ ಸಂಸತ್ತನ್ನು ನಿರ್ಮಿಸಿದ ನಿರಂಕುಶ ವಿಧಾನದ ಬಗ್ಗೆ ನಮ್ಮ ಅಸಮ್ಮತಿ ಹೊರತಾಗಿಯೂ ನಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಈ ಸಂದರ್ಭವನ್ನು ಗುರುತಿಸಲು ನಾವು ಮುಕ್ತರಾಗಿದ್ದೇವೆ. ಆದರೆ ಪ್ರಧಾನಿ ಮೋದಿ ಅವರು ಸ್ವತಃ ಸಂಸತ್ ಭವನವನ್ನು ಉದ್ಘಾಟಿಸುವ ನಿರ್ಧಾರ ತೆಗೆದುಕೊಂಡು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿರುವುದು ದೊಡ್ಡ ಅವಮಾನವಷ್ಟೇ ಅಲ್ಲದೇ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ ಎಂದು ಹೇಳಿವೆ.

  • ಇದೇ 28ರಂದು ಹೊಸ ಸಂಸತ್ ಭವನ ಉದ್ಘಾಟಿಸಲಿದ್ದಾರೆ ಮೋದಿ

    ಇದೇ 28ರಂದು ಹೊಸ ಸಂಸತ್ ಭವನ ಉದ್ಘಾಟಿಸಲಿದ್ದಾರೆ ಮೋದಿ

    ನವದೆಹಲಿ: ನೂತನವಾಗಿ ನಿರ್ಮಿಸಲಾಗಿರುವ ಸಂಸತ್ ಭವನವನ್ನು (Parliament Building) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮೇ 28ರಂದು ಉದ್ಘಾಟಿಸಲಿದ್ದಾರೆ ಎಂದು ಲೋಕಸಭೆಯ ಸಚಿವಾಲಯ ತಿಳಿಸಿದೆ.

    ಪ್ರಸ್ತುತ ಲೋಕಸಭೆಯ ಕಟ್ಟಡ ಸುಮಾರು 543 ಸದಸ್ಯರಿಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಿದರೆ ರಾಜ್ಯಸಭಾ ಕಟ್ಟಡದಲ್ಲಿ 250 ಸದಸ್ಯರು ಕುಳಿತುಕೊಳ್ಳಬಹುದು. ಇದೇ ತಿಂಗಳಿನಲ್ಲಿ ಲೋಕಾರ್ಪಣೆಗೊಳ್ಳಲಿರುವ ಸಂಸತ್ ಭವನದಲ್ಲಿ 888 ಸದಸ್ಯರು ಕುಳಿತುಕೊಳ್ಳಬಹುದಾಗಿದೆ.

    ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ನೂತನ ಸಂಸತ್ ಭವನವನ್ನು ಉದ್ಘಾಟಿಸುವಂತೆ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ: ಇಂದು ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ- ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್

    ಪ್ರಸ್ತುತ ಸಂಸತ್ತಿನ ಕಟ್ಟಡ 1927ರಲ್ಲಿ ನಿರ್ಮಿಸಲಾಗಿದ್ದು, ಸುಮಾರು 100 ವರ್ಷಗಳಷ್ಟು ಹಳೆಯದಾಗಿದೆ. ಉಭಯ ಸದನಗಳಲ್ಲಿ ಸಂಸದರಿಗೆ ಕುಳಿತುಕೊಳ್ಳಲು ಅನುಕೂಲಕರವಾದ ವ್ಯವಸ್ಥೆಯೂ ಇಲ್ಲದಿರುವ ಕಾರಣ ಇದೀಗ ಪ್ರಸ್ತುತ ಅಗತ್ಯತೆಗಳ ಪ್ರಕಾರ ಹೊಸ ಸಂಸತ್ ಭವನವನ್ನು ನಿರ್ಮಿಸಲಾಗಿದೆ.

    ಡಿಸೆಂಬರ್ 2020 ರಲ್ಲಿ ಹೊಸ ಸಂಸತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ನರೇಂದ್ರ ಮೋದಿ ಶಂಕುಸ್ಥಾಪನೆ ನಡೆಸಿದ್ದರು. ಸರ್ಕಾರ ಕಳೆದ ವರ್ಷದ ನವೆಂಬರ್ ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿಯನ್ನು ನಿಗದಿ ಪಡಿಸಿತ್ತು. ಆದರೆ ಕೋವಿಡ್ ಮತ್ತು ಇತರೆ ಕೆಲ ಸಮಸ್ಯೆಗಳಿಂದಾಗಿ ಡೆಡ್‌ಲೈನ್ ವಿಸ್ತರಣೆಯಾಗಿ ಈಗ ಉದ್ಘಾಟನೆಯ ಹಂತಕ್ಕೆ ಬಂದಿದೆ. ಇದನ್ನೂ ಓದಿ: ಗ್ಯಾಸ್ ಏಜೆನ್ಸಿ ಸಮೀಪದ ಸ್ಕ್ರಾಪ್ ಗೋಡೌನಲ್ಲಿ ಅಗ್ನಿ ಅವಘಡ

  • ಈ ತಿಂಗಳ ಕೊನೆಯಲ್ಲಿ ನೂತನ ಸಂಸತ್‌ ಭವನ ಲೋಕಾರ್ಪಣೆ

    ಈ ತಿಂಗಳ ಕೊನೆಯಲ್ಲಿ ನೂತನ ಸಂಸತ್‌ ಭವನ ಲೋಕಾರ್ಪಣೆ

    ನವದೆಹಲಿ: ನೂತನ ಸಂಸತ್ ಭವನವನ್ನು (New Parliament Building) ಈ ತಿಂಗಳ ಕೊನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಉದ್ಘಾಟಿಸುವ ಸಾಧ್ಯತೆಯಿದೆ.

    ಮೇ ಕೊನೆಯ ವಾರದಲ್ಲಿ ಮೋದಿ ನೇತೃತ್ವದ ಸರ್ಕಾರ (Modi Government) ಅಧಿಕಾರಕ್ಕೆ ಏರಿ 9 ವರ್ಷ ಪೂರ್ಣಗೊಳ್ಳುತ್ತದೆ. ಈ ಕಾರಣಕ್ಕೆ ಮೇ ಕೊನೆಯಲ್ಲಿ ಸಂಸತ್‌ ಭವನ ಲೋಕಾರ್ಪಣೆಯಾಗುವ ಸಾಧ್ಯತೆಯಿದೆ.

    ಸುಮಾರು 1,200 ಕೋಟಿ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಲಾದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ 1,224 ಸಂಸದರು ಕುಳಿತುಕೊಳ್ಳಲು ಅವಕಾಶವಿದೆ. ಇದನ್ನೂ ಓದಿ: ಸಚಿನ್‌ ಪೈಲೆಟ್‌ಗೆ ರಾಹುಲ್‌ ಆರಂಭದಲ್ಲಿ ಮಾತು ಕೊಟ್ಟಿದ್ದರು, ನಂತರ ಏನಾಯ್ತು? – ವೇಣುಗೋಪಾಲ್‌ಗೆ ಉಲ್ಟಾ ಹೊಡೆದ ಡಿಕೆಶಿ

    ಹೊಸ ಸಂಸತ್ತು ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ ಹೆಸರಿನ ಮೂರು ದ್ವಾರಗಳನ್ನು ಹೊಂದಿದೆ. ಸಂಸದರು, ವಿಐಪಿಗಳು ಮತ್ತು ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶವನ್ನು ಹೊಂದಿದೆ.

    ಡಿಸೆಂಬರ್ 2020 ರಲ್ಲಿ ಹೊಸ ಸಂಸತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನಡೆಸಿದ್ದರು. ಸರ್ಕಾರ ಕಳೆದ ವರ್ಷದ ನವೆಂಬರ್‌ ಒಳಗಡೆ ಕಾಮಗಾರಿ ಮುಕ್ತಾಯಗೊಳಿಸುವ ಗುರಿಯನ್ನು ನಿಗದಿ ಪಡಿಸಿತ್ತು. ಆದರೆ ಕೋವಿಡ್‌ ಮತ್ತು ಇತರೆ ಕೆಲ ಸಮಸ್ಯೆಗಳಿಂದಾಗಿ ಡೆಡ್‌ಲೈನ್‌ ವಿಸ್ತರಣೆಯಾಗಿ ಈಗ ಉದ್ಘಾಟನೆಯ ಹಂತಕ್ಕೆ ಬಂದಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು ಒಂಬತ್ತು ವರ್ಷಗಳ ಹಿಂದೆ ಮೇ 26, 2014 ರಂದು ಪ್ರಮಾಣ ವಚನ ಸ್ವೀಕರಿಸಿದ್ದರು. ಮೋದಿ ಸರ್ಕಾರಕ್ಕೆ 9 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಬಿಜೆಪಿ ಸಿದ್ಧತೆ ನಡೆಸಿದೆ.

    ಸೆಂಟ್ರಲ್‌ ವಿಸ್ಟಾ ಯೋಜನೆ ಭಾಗವಾಗಿ ಹೊಸ ಸಂಸತ್‌ ಭವನವನ್ನು ನಿರ್ಮಿಸಲಾಗುತ್ತಿದೆ. ತ್ರಿಕೋನಾಕಾರದ ಸಂಸತ್‌ ಭವನ ಇದಾಗಿದೆ. ಕಟ್ಟಡ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಕಟ್ಟಡದ ಒಳಾಂಗಣ ವಿನ್ಯಾಸದ ಕೆಲಸಗಳು ನಡೆಯುತ್ತಿವೆ.

    2020ರಲ್ಲಿ ಟಾಟಾ ಪ್ರಾಜೆಕ್ಟ್ಸ್‌ಗೆ ನೂತನ ಸಂಸತ್‌ ಭವನ ನಿರ್ಮಾಣದ ಹೊಣೆ ವಹಿಸಲಾಗಿತ್ತು. ಆ ಸಂದರ್ಭದಲ್ಲಿ 971 ಕೋಟಿ ವೆಚ್ಚಕ್ಕೆ ಅನುಮೋದನೆ ದೊರಕಿತ್ತು. ನಂತರ ಅದರ ಕಚ್ಚಾ ಸಾಮಾಗ್ರಿ ದರ ಹೆಚ್ಚಳದಿಂದಾಗಿ ಯೋಜನಾ ವೆಚ್ಚ ಅಂದಾಜು 1,200 ಕೋಟಿ ರೂ.ಗೆ ಏರಿಸಲಾಗಿತ್ತು.


    ನೂತನ ಸಂಸತ್‌ ಭವನದಲ್ಲಿ ಹಲವು ಆಕರ್ಷಣೆಗಳಿವೆ. ಅದರಂತೆ ಭವನದ ಮೇಲೆ ರಾಷ್ಟ್ರೀಯ ಲಾಂಛನವನ್ನು ಇರಿಸಲಾಗಿದೆ. ಈ ಲಾಂಛನದ ಪ್ರತಿಮೆಯನ್ನು ಕಂಚಿನಿಂದ ಮಾಡಲಾಗಿದೆ. ಅದರ ತೂಕ ಸುಮಾರು 9,500 ಕೆ.ಜಿ ಇದ್ದು, 6.5 ಮೀಟರ್‌ ಎತ್ತರವಿದೆ.

  • ವಾರಸುದಾರರಿಲ್ಲದ 35,000 ಕೋಟಿ ರೂ. RBIಗೆ ವರ್ಗಾವಣೆ

    ವಾರಸುದಾರರಿಲ್ಲದ 35,000 ಕೋಟಿ ರೂ. RBIಗೆ ವರ್ಗಾವಣೆ

    ನವದೆಹಲಿ: ವಾರಸುದಾರರಿಲ್ಲದ ಸುಮಾರು 35,000 ಕೋಟಿಗಳಷ್ಟು ಠೇವಣಿಗಳನ್ನು ಸಾರ್ವಜನಿಕ ವಲಯದ ಬ್ಯಾಂಕ್‍ಗಳು ರಿಸರ್ವ್ ಬ್ಯಾಂಕ್‍ಗೆ ವರ್ಗಾಯಿಸಿದೆ ಎಂದು ಸಂಸತ್ತಿಗೆ (Parliament) ತಿಳಿಸಿದೆ.

    ಈ ಬಗ್ಗೆ ಲೋಕಸಭೆಯಲ್ಲಿ ಹಣಕಾಸು ರಾಜ್ಯ ಸಚಿವ ಭಾಗವತ್ ಕರದ್ ಲಿಖಿತ ರೂಪದಲ್ಲಿ ತಿಳಿಸಿದ್ದಾರೆ. 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಕಾಲ ಕಾರ್ಯನಿರ್ವಹಿಸದ ಠೇವಣಿಗಳನ್ನು 2023ರ ಫೆ. ಅಂತ್ಯದ ವೇಳೆಗೆ 10.24 ಕೋಟಿ ಖಾತೆಗಳಿಂದ RBIಗೆ 35,012 ಕೋಟಿ ರೂ. ಹಣ ವರ್ಗಾಯಿಸಲಾಗಿದೆ.

    ಎಸ್‍ಬಿಐ ಅಗ್ರಸ್ಥಾನದಲ್ಲಿದ್ದು, 8,086 ಕೋಟಿ ವಾರಸುದಾರರಿಲ್ಲದ ಠೇವಣಿಗಳನ್ನು ಹೊಂದಿದೆ. 5,340 ಕೋಟಿ ಕ್ಲೈಮ್ ಮಾಡದ ಠೇವಣಿಗಳೊಂದಿಗೆ (Deposits) ಪಂಜಾಬ್ ನ್ಯಾಷನಲ್ ಬ್ಯಾಂಕ್ ನಂತರ ಸ್ಥಾನದಲ್ಲಿದೆ. ಇದರ ನಂತರ ಕೆನರಾ ಬ್ಯಾಂಕ್ 4,558 ಕೋಟಿ ರೂ. ಹಾಗೂ ಬ್ಯಾಂಕ್ ಆಫ್ ಬರೋಡಾ 3,904 ಕೋಟಿ ಕ್ಲೈಮ್ ಮಾಡದ ಠೇವಣಿಯನ್ನು ಹೊಂದಿದೆ. ಇದನ್ನೂ ಓದಿ: ಪ್ರಜಾಪ್ರಭುತ್ವ ಉಳಿಸುವ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ – ರಾಗಾ ಗುಡುಗು

    ಎಸ್‍ಬಿಐ ಗ್ರಾಹಕರ ಅನುಕೂಲಕ್ಕಾಗಿ, ಮೃತರ ಘಟಕಗಳ ಖಾತೆಗಳಿಗೆ ಸಂಬಂಧಿಸಿದಂತೆ ಕಾನೂನು ಪ್ರಾತಿನಿಧ್ಯವಿಲ್ಲದೆ ಕ್ಲೈಮ್‍ಗಳ ಇತ್ಯರ್ಥದ ಪ್ರಕ್ರಿಯೆಯನ್ನು ನಿಗದಿತ ನಮೂನೆಗಳ ಮಾದರಿಯ ಮೂಲಕ ಮತ್ತು ಸುಲಭವಾಗಿ ಅರ್ಥಮಾಡಿಕೊಳ್ಳಲು ಎಸ್‍ಬಿಐ ವೆಬ್‍ಸೈಟ್‍ಗಳಲ್ಲಿ ಅಪ್‍ಲೋಡ್ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಜಾರಕಿಹೊಳಿ – ಸವದಿ ಬಣ ರಾಜಕೀಯಕ್ಕೆ ಬ್ರೇಕ್‌; ಹೈಕಮಾಂಡ್‌ ಸಂದೇಶ ರವಾನಿಸಿದ ಜೋಶಿ

  • ಅನರ್ಹಗೊಂಡ ಸಂಸದ – ಅಧಿಕೃತ ಟ್ವಿಟ್ಟರ್ ಖಾತೆಯ ಬಯೋದಲ್ಲಿ ಬರೆದುಕೊಂಡ ರಾಹುಲ್ ಗಾಂಧಿ

    ಅನರ್ಹಗೊಂಡ ಸಂಸದ – ಅಧಿಕೃತ ಟ್ವಿಟ್ಟರ್ ಖಾತೆಯ ಬಯೋದಲ್ಲಿ ಬರೆದುಕೊಂಡ ರಾಹುಲ್ ಗಾಂಧಿ

    ನವದೆಹಲಿ: ಕಾಂಗ್ರೆಸ್ (Congress) ಮುಖಂಡ ರಾಹುಲ್ ಗಾಂಧಿ (Rahul Gandhi) ಅವರು ಸಂಸತ್ (Parliament) ಸದಸ್ಯತ್ವದಿಂದ ಅನರ್ಹಗೊಂಡ ಬೆನ್ನಲ್ಲೇ ತಮ್ಮ ಟ್ವಿಟ್ಟರ್ (Twitter) ಖಾತೆಯಲ್ಲಿ ಅನರ್ಹಗೊಂಡ ಸಂಸದ ಎಂದು ಬಯೋವನ್ನು ಬದಲಿಸಿದ್ದಾರೆ.

    ರಾಹುಲ್ ಗಾಂಧಿಯವರ ಟ್ವಿಟ್ಟರ್‌ನ ಅಧಿಕೃತ ಖಾತೆಯ ಬಯೋದಲ್ಲಿ ಈ ರೀತಿ ಬದಲಾಗಿದೆ. ಬಯೋದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯ ಹಾಗೂ ಅನರ್ಹಗೊಂಡ ಸಂಸದ ಎಂದು ಬರೆಯಲಾಗಿದೆ.

    ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹತೆಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದೆ.

    ಸಂಸದ ಸ್ಥಾನದಿಂದ ಅನರ್ಹ: ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

    ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹರಿಹಾಯ್ದಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹ – ವಯನಾಡಿನಲ್ಲಿ ಬ್ಲ್ಯಾಕ್ ಡೇ ಆಚರಣೆ

    ಈ ಹೇಳಿಕೆಯನ್ನು ಆಧರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು. ಇದನ್ನೂ ಓದಿ: ನಾನು ಸಾವರ್ಕರ್ ಅಲ್ಲ, ಕ್ಷಮೆ ಕೇಳುವುದಿಲ್ಲ: ಅನರ್ಹತೆ ಕುರಿತು ರಾಹುಲ್ ಗಾಂಧಿ

  • ಸಲಿಂಗಕಾಮಿಗಳು ಅಂತಾ ಹೇಳಿಕೊಂಡ್ರೆ ಮರಣದಂಡನೆ – ಮಸೂದೆ ಪಾಸ್‌ ಮಾಡಿದ ಉಗಾಂಡ

    ಸಲಿಂಗಕಾಮಿಗಳು ಅಂತಾ ಹೇಳಿಕೊಂಡ್ರೆ ಮರಣದಂಡನೆ – ಮಸೂದೆ ಪಾಸ್‌ ಮಾಡಿದ ಉಗಾಂಡ

    ಕಂಪಾಲಾ: ಉಗಾಂಡ (Uganda) ಸಂಸತ್ (Parliament) ಲೈಂಗಿಕ ಅಲ್ಪಸಂಖ್ಯಾತ (LGBTQ) ಸಮುದಾಯದ ವಿರುದ್ಧ ವಿವಾದಾತ್ಮಕ ಮಸೂದೆಯೊಂದನ್ನು ಅಂಗೀಕರಿಸಿದೆ. ಸಲಿಂಗ ಸಂಬಂಧಗಳಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ಮರಣದಂಡನೆಯಂತಹ ಕಠಿಣ ಕ್ರಮದ ಅಂಶಗಳನ್ನು ಮಸೂದೆ ಒಳಗೊಂಡಿದೆ.

    ಈಗಾಗಲೇ ಆಫ್ರಿಕನ್ ದೇಶಗಳು ಸಲಿಂಗ ಸಂಬಂಧಗಳನ್ನು ನಿಷೇಧಿಸಿ ಕಾನೂನು ರೂಪಿಸಿವೆ. ಆದರೆ ನೂತನ ಮಸೂದೆಯು ಹಿಂದಿನ ನಿಯಮಗಳನ್ನು ಮತ್ತಷ್ಟು ಭದ್ರಪಡಿಸುತ್ತವೆ. ಇದನ್ನೂ ಓದಿ: ಗಗನಕ್ಕೇರಿದ Gold Rate – 60 ಸಾವಿರ ಗಡಿ ದಾಟಿದ ಚಿನ್ನ

    ಮಸೂದೆಯ ಅನ್ವಯ ಅಧಿಕಾರಿಗಳಿಗೆ, ಸಲಿಂಗ ಸಂಬಂಧದಲ್ಲಿರುವವರನ್ನು ಗುರುತಿಸಿ ವರದಿ ಮಾಡಲು ಅವಕಾಶ ನೀಡಲಾಗಿದೆ. ಎಲ್‍ಜಿಬಿಟಿ ಸಮುದಾಯಗಳ ಹಕ್ಕುಗಳಿಗೆ ಹೋರಾಡುವ ಹಾಗೂ ಅಂತಹ ಸಂಸ್ಥೆಗಳಿಗೆ ಬೆಂಬಲ ನೀಡಿ ಹಣಕಾಸಿನ ನೆರವು ನೀಡುವ ವ್ಯಕ್ತಿಗಳಿಗೆ ಅಥವಾ ಸಂಸ್ಥೆಗಳನ್ನು ಶಿಕ್ಷೆಗೆ ಗುರಿಪಡಿಸಲು ನೆರವಾಗಲಿದೆ.

    ಚರ್ಚ್ ಸಂಸ್ಕಂತಿ ರಕ್ಷಿಸುವ ಗುರಿಯಿಂದ ಮಸೂದೆ ರಚಿಸಿ ಮಂಡಿಸಲಾಗಿದೆ. ಕೌಟುಂಬಿಕ ಹಾಗೂ ಧಾರ್ಮಿಕ ಮೌಲ್ಯಗಳನ್ನು ಎತ್ತಿ ಹಿಡಿದು ಲೈಂಗಿಕ ಅಶ್ಲೀಲತೆಯಿಂದ ದೇಶವನ್ನು ಕಾಪಾಡಬೇಕಿದೆ. 389 ಸದಸ್ಯರು ಮಸೂದೆಗೆ ಬೆಂಬಲ ಸೂಚಿಸಿದ್ದಾರೆ. ಪ್ರತಿಯನ್ನು ಅಧ್ಯಕ್ಷ ಯೊವೆರೆ ಮುಸೆವೆನಿಯವರ ಸಹಿಗೆ ಕಳುಹಿಸಿ ಕೊಡಲಾಗುವುದು ಎಂದು ಮಸೂದೆ ಮಂಡಿಸಿರುವ ಶಾಸಕ ಅಸುಮಾನ್ ಬಸಲಿರ್ವಾ ತಿಳಿಸಿದ್ದಾರೆ.

    ಮಸೂದೆಯನ್ನು ವಿರೋಧಿಸಿ ಕಂಪಾಲಾ (Kampala) ಮೂಲದ ವಕೀಲೆ ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತೆ (Lawyer and human rights activist)ಸಾರಾ ಕಸಂಡೆ ಟ್ವೀಟ್ ಮಾಡಿ, ಉಗಾಂಡದ ಇತಿಹಾಸದಲ್ಲಿ ದುರಂತದ ದಿನವಾಗಿದೆ. ದ್ವೇಷಕ್ಕೆ ಮಹತ್ವ ಕೊಟ್ಟು ಎಲ್‍ಜಿಬಿಟಿಐಕ್ಯೂ ಸಮುದಾಯದ ವ್ಯಕ್ತಿಗಳ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ಕಾನೂನಾಗಿದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: 2 ಸಾವಿರಕ್ಕೂ ಅಧಿಕ ಮೋದಿ ವಿರೋಧಿ ಪೋಸ್ಟರ್‌ಗಳು – ನಾಲ್ವರು ಅರೆಸ್ಟ್

  • ಕ್ಷಮೆ ಕೇಳದಿದ್ದರೆ ಸಂಸತ್ತಿನಲ್ಲಿ ಮಾತನಾಡಲು ಬಿಡಲ್ಲ: ರಾಹುಲ್ ವಿರುದ್ದ ಬಿಜೆಪಿ ಪಟ್ಟು

    ಕ್ಷಮೆ ಕೇಳದಿದ್ದರೆ ಸಂಸತ್ತಿನಲ್ಲಿ ಮಾತನಾಡಲು ಬಿಡಲ್ಲ: ರಾಹುಲ್ ವಿರುದ್ದ ಬಿಜೆಪಿ ಪಟ್ಟು

    ನವದೆಹಲಿ: ಲಂಡನ್‍ನಲ್ಲಿ ಭಾರತೀಯ ಪ್ರಜಾಪ್ರಭುತ್ವದ ಕುರಿತು ಮಾಡಿರುವ ಭಾಷಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಕ್ಷಮೆಯಾಚಿಸುವವರೆಗೂ ಸದನದಲ್ಲಿ ಮಾತನಾಡಲು ಬಿಡದೇ ಇರಲು ಬಿಜೆಪಿ ಪಟ್ಟುಹಿಡಿದಿದೆ.

    ಶುಕ್ರವಾರವೂ ಸಂಸತ್ತಿನಲ್ಲಿ (Parliament) ಹೈಡ್ರಾಮಾ ನಡೆದಿದ್ದು, ಎರಡನೇ ದಿನಕ್ಕೆ ಉಭಯ ಸದನಗಳನ್ನು ಮುಂದೂಡಲಾಯಿತು. ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ನೀಡಿದ ಹೇಳಿಕೆಗೆ ಕಾಂಗ್ರೆಸ್ (Congress) ಸಂಸದ ರಾಹುಲ್ ಗಾಂಧಿ ಅವರು ಕ್ಷಮೆಯಾಚಿಸಬೇಕು ಎಂದು ಬಿಜೆಪಿ  (BJP) ಒತ್ತಾಯಿಸಿದರೆ, ವಿರೋಧ ಪಕ್ಷಗಳು ಅದಾನಿ- ಹಿಂಡೆನ್‍ಬರ್ಗ್ (Adani-Hindenberg) ವಿವಾದದ ಬಗ್ಗೆ ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿದವು. ಭಾರೀ ಕೋಲಾಹಲ ನಡೆದ ಹಿನ್ನೆಲೆಯಲ್ಲಿ ಸದನವನ್ನು ಮುಂದೂಡಲಾಯಿತು.

    ಸಂಸತ್ತಿನಲ್ಲಿ ಗೊಂದಲ ಹೆಚ್ಚಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕರ ಮೈಕ್‍ಗಳನ್ನು ಮ್ಯೂಟ್ ಮಾಡಲಾಗಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪವನ್ನು ಪುನರಾವರ್ತಿಸಿದ ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ವಾಗ್ದಾಳಿ ನಡೆಸಿತು. ಇತ್ತ ಬಿಜೆಪಿ ರಾಹುಲ್ ಗಾಂಧಿ ಅವರು ಕ್ಷಮೆ ಕೇಳಲೇ ಬೇಕು. ರಾಹುಲ್ ಗಾಂಧಿ ಅವರ ಭಾಷಣದ ಬಗ್ಗೆ ತನಿಖೆ ಮಾಡಲು ಸಂಸದೀಯ ಸಮಿತಿಯನ್ನು ರಚನೆ ಮಾಡಬೇಕು. ಒಂದು ವೇಳೆ ರಾಹುಲ್ ಗಾಂಧಿ ಸಂಸತ್‍ನಲ್ಲಿ ಕ್ಷಮೆ ಕೇಳದೇ ಇದ್ದರೆ, ಅವರ ಲೋಕಸಭೆ ಸದಸ್ಯತ್ವವನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದೆ. ಇದನ್ನೂ ಓದಿ: ನಟಿ ಸ್ವರಾ ಭಾಸ್ಕರ್ ಆರತಕ್ಷತೆಯಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ

    ವಿವಾದದ ಬಳಿಕ ಗುರುವಾರ ಮೊದಲ ಬಾರಿ ಸಂಸತ್ತಿಗೆ ಆಗಮಿಸಿದ್ದ ರಾಹುಲ್ ಗಾಂಧಿ, ತನಗೆ ಮಾತನಾಡಲು ಅವಕಾಶ ನೀಡಬೇಕು ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ಶುಕ್ರವಾರ ಕೂಡ ಸಂಸತ್ತಿಗೆ ಆಗಮಿಸಿದ್ದರು. ಆದರೆ ಗದ್ದಲದ ನಡುವೆ ಅವರಿಗೆ ಮಾತನಾಡುವ ಅವಕಾಶ ಸಿಕ್ಕಿಲ್ಲ. ಭಾರೀ ಗದ್ದಲ ನಡೆದ ಹಿನ್ನೆಲೆಯಲ್ಲಿ ಸದನವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಲಾಗಿದೆ. ಇದನ್ನೂ ಓದಿ: ಕೋಮು ಪ್ರಚೋದನೆ ಭಾಷಣ ಪ್ರಕರಣ – ಆಂದೋಲ ಸಿದ್ದಲಿಂಗ ಶ್ರೀ ದೋಷಿ

  • ತ್ಯಾಜ್ಯಗಳಿಂದ ತಯಾರಿಸಲ್ಪಟ್ಟ ಜಾಕೆಟ್ ಧರಿಸಿ ಸದನಕ್ಕೆ ಬಂದ ಮೋದಿ

    ತ್ಯಾಜ್ಯಗಳಿಂದ ತಯಾರಿಸಲ್ಪಟ್ಟ ಜಾಕೆಟ್ ಧರಿಸಿ ಸದನಕ್ಕೆ ಬಂದ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಬುಧವಾರ ಸದನಕ್ಕೆ (Parliament) ತ್ಯಾಜ್ಯಗಳಿಂದ ತಯಾರಿಸಲ್ಪಟ್ಟ ಜಾಕೆಟ್ ಅನ್ನು ಧರಿಸಿ ಬಂದಿದ್ದು ವಿಶೇಷವಾಗಿತ್ತು.

    ಸೋಮವಾರ ಮೋದಿ ಬೆಂಗಳೂರಿಗೆ (Bengaluru) ಬಂದಿದ್ದಾಗ ಜಾಕೆಟ್ (Jacket) ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ಜಾಕೆಟ್ ಪ್ಲಾಸ್ಟಿಕ್ ಬಾಟಲಿಗಳಿಂದ ಮರುಬಳಕೆ ಮಾಡಲಾದ ವಸ್ತುಗಳಿಂದ ತಯಾರಿಸಲ್ಪಟ್ಟಿದೆ. ರಾಜ್ಯಸಭೆಯಲ್ಲಿ ತಿಳಿ ನೀಲಿ ಬಣ್ಣದ ಸದ್ರಿ ಜಾಕೆಟ್‍ನಲ್ಲಿ ಕಾಣಿಸಿಕೊಂಡಿದ್ದಾರೆ.

    ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬೆಂಗಳೂರಿನ ಮಾದವಾರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಭಾರತ ಇಂಧನ ಸಪ್ತಾಹ-2023ಕ್ಕೆ ಫೆ. 6ರಂದು ಪ್ರಧಾನಿ ಮೋದಿ ಚಾಲನೆ ನೀಡಿದ್ದರು. ಇದೇ ಸಂದರ್ಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ (ಐಒಸಿ) ತಯಾರಿಸಿರುವ ಸೌರಶಕ್ತಿ ಆಧಾರಿತ ಕುಕ್‍ಟಾಪ್ ಹಾಗೂ ಬಳಸಿದ ಪ್ಲಾಸ್ಟಿಕ್ ಬಾಟಲಿಗಳಿಂದ ತಯಾರಿಸಿರುವ ವಸ್ತ್ರಗಳನ್ನು ಬಿಡುಗಡೆ ಮಾಡಿದ್ದರು. ಈ ಸಮಾರಂಭದಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಈ ಜಾಕೆಟ್ ಅನ್ನು ಪ್ರಧಾನಿ ಅವರಿಗೆ ಉಡುಗೊರೆಯಾಗಿ ನೀಡಿತ್ತು.

    ಅಷ್ಟೇ ಅಲ್ಲದೇ ಇಂಡಿಯಾ ಎನರ್ಜಿ ವೀಕ್‍ನ ಅಂಗವಾಗಿ ಅಜೆರ್ಂಟೀನಾದ ವೈಪಿಎಫ್ ಅಧ್ಯಕ್ಷ ಪಾಬ್ಲೊ ಗೊನ್ಜಾಲೆಜ್ ಅವರು, ವಿಶ್ವಕಪ್ ವಿಜೇತ ಚಾಂಪಿಯನ್ ಲಿಯೊನೆಲ್ ಮೆಸ್ಸಿ ಅವರ ಹೆಸರನ್ನು ಒಳಗೊಂಡ ಅರ್ಜೆಂಟೀನಾ ಫುಟ್‍ಬಾಲ್ ತಂಡದ ಜೆರ್ಸಿಯನ್ನು ಮೋದಿಗೆ ಉಡುಗೊರೆಯಾಗಿ ನೀಡಿದ್ದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ – ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಿಗುತ್ತಾ ರಿಲೀಫ್?

    ಫೆ.1ಕ್ಕೆ ಕೇಂದ್ರ ಬಜೆಟ್ ಮಂಡನೆ – ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಸಿಗುತ್ತಾ ರಿಲೀಫ್?

    ನವದೆಹಲಿ: ಸಂಸತ್ (Parliament) ಹಾಲ್‌ನಲ್ಲಿ ಮೊದಲ ಹಂತದ ಬಜೆಟ್ ಅಧಿವೇಶನ (Union Budget 2023) ಇಂದಿನಿಂದ (ಮಂಗಳವಾರ) ಆರಂಭವಾಗಿದ್ದು, ಬುಧವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ಬಜೆಟ್ ಮಂಡಿಸಲಿದ್ದಾರೆ. ಸಾರ್ವತ್ರಿಕ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ಮಂಡಿಸಲಿರುವ ಕೊನೆಯ ಹಾಗೂ ಪೂರ್ಣ ಪ್ರಮಾಣದ ಬಜೆಟ್ ಇದಾಗಿದ್ದು, ಹಲವು ನಿರೀಕ್ಷೆಗಳನ್ನು ಹುಟ್ಟುಹಾಕಿದೆ.

    ಒಂದೆಡೆ ಜಾಗತಿಕ ಆರ್ಥಿಕ ಹಿಂಜರಿತದ ಭೀತಿ. ಮತ್ತೊಂದೆಡೆ ದಿನೇ ದಿನೇ ಹೆಚ್ಚುತ್ತಿರುವ ಅಗತ್ಯ ವಸ್ತುಗಳ ಬೆಲೆಗಳಿಂದ ಜನ ಸಾಮಾನ್ಯರು ತತ್ತರಿಸಿದ್ದಾರೆ. ಹೆಚ್ಚಿದ ಬಡ್ಡಿದರದಿಂದ ತಿಂಗಳ ಇಎಂಐಗಳು ಭಾರವಾಗಿ ಪರಿಣಮಿಸಿದೆ. ಜೊತೆಗೆ ಉದ್ಯೋಗ ಅಭದ್ರತೆಯ ಚಿಂತೆ ಕೂಡ ಶುರುವಾಗಿದೆ. ಇದರ ಮಧ್ಯೆ ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳು ಸರಣಿಯಾಗಿ ನಡೆಯಲಿವೆ. ಈ ಹೊತ್ತಲ್ಲಿಯೇ ಮತ್ತೊಮ್ಮೆ ಬಜೆಟ್ ಸಮಯ ಬಂದಿದೆ. ನಾಳೆ ಬೆಳಗ್ಗೆ 11 ಗಂಟೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಹೀಗಾಗಿ ಈ ಬಜೆಟ್ ಮೇಲೆ ನಿರೀಕ್ಷೆಗಳ ಭಾರ ಹೆಚ್ಚಿದೆ. ಇದನ್ನೂ ಓದಿ: ನನ್ನ ಸರ್ಕಾರ ಬಡವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ತಿದೆ: ಮುರ್ಮು

    ಬಜೆಟ್ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ ನೀಡಿದ್ದು, ಅಸ್ಥಿರ ಜಾಗತಿಕ ಆರ್ಥಿಕ ಪರಿಸ್ಥಿತಿಯ ಈ ಸಂದರ್ಭದಲ್ಲಿ ಕೇಂದ್ರದ ಬಜೆಟ್‌ಗಾಗಿ ಬರೀ ಭಾರತವಲ್ಲ ಇಡೀ ವಿಶ್ವವೇ ಎದಿರು ನೋಡ್ತಿದೆ ಎಂದಿದ್ದಾರೆ.

    ಕೇಂದ್ರ ಬಜೆಟ್; ತೆರಿಗೆ ಪಾವತಿದಾರರ ಬೇಡಿಕೆಗಳೇನು?
    ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಬೇಕು, ಶೇ.30ರಷ್ಟು ತೆರಿಗೆ ಸ್ಲಾಬ್ ಮಿತಿಯನ್ನು ಇನ್ನಷ್ಟು ಹೆಚ್ಚಿಸಬೇಕು, ಸೆಕ್ಷನ್ 80-ಸಿ ಅಡಿ ನೀಡುತ್ತಿರುವ ವಿನಾಯ್ತಿ ಮಿತಿ ಹೆಚ್ಚಿಸಬೇಕು, ಸ್ಟ್ಯಾಂಡರ್ಡ್‌ ಡಿಡಕ್ಷನ್ ಮಿತಿ 2 ಲಕ್ಷಕ್ಕೆ ಹೆಚ್ಚಳ ಮಾಡಬೇಕು, ಜೀವವಿಮೆ, ಆರೋಗ್ಯ ವಿಮೆ ಪ್ರೀಮಿಯಂಗಳಿಗೆ ತೆರಿಗೆ ವಿನಾಯ್ತಿ, ಗೃಹಸಾಲದ ಬಡ್ಡಿ ಏರಿಕೆಯಾಗುತ್ತಿದೆ.. ಇದನ್ನು ಇಳಿಕೆ ಮಾಡಬೇಕು, ಐಟಿ ರೂಲ್ 24ರ ಅಡಿ ಲಭ್ಯವಿರುವ ವಿನಾಯ್ತಿ ಮಿತಿಯನ್ನು 4 ಲಕ್ಷಕ್ಕೆ ಹೆಚ್ಚಿಸಬೇಕು, ಠೇವಣಿ, ಬಾಂಡ್, ಪಿಪಿಎಫ್ ಹೂಡಿಕೆಗಳ ಮೇಲಿನ ವಿನಾಯ್ತಿ ಮಿತಿ ಹೆಚ್ಚಿಸಬೇಕು. ಇದನ್ನೂ ಓದಿ: ಕೇಂದ್ರ ಬಜೆಟ್ ಮೇಲೆ ಜಗತ್ತು ಕಣ್ಣಿಟ್ಟಿದೆ: ಮೋದಿ

    ಜನಸಾಮಾನ್ಯರ ಬೇಡಿಕೆಗಳೇನು?
    ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಬೇಕು (ವಿಶೇಷವಾಗಿ ಬೇಳೆಕಾಳು, ಅಕ್ಕಿ, ಗೋಧಿ, ಹಾಲು), ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಇಳಿಕೆ ಮಾಡಬೇಕು, ಬೆಲೆ ಏರಿಕೆ ನಿಯಂತ್ರಿಸುವ ಕ್ರಮಗಳನ್ನು ತೆಗೆದುಕೊಳ್ಳಬೇಕು, ನಿರುದ್ಯೋಗ ಹೆಚ್ಚುತ್ತಿದೆ; ಹೆಚ್ಚೆಚ್ಚು ಉದ್ಯೋಗ ಸೃಷ್ಟಿಸಬೇಕು, ಮಧ್ಯಮ ವರ್ಗದ ಎಲ್ಲಾ ವೃತ್ತಿಯವರಿಗೆ ಒಳ್ಳೆಯದು ಮಾಡಬೇಕು, ಶಿಕ್ಷಣ ವೆಚ್ಚದ ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡಬೇಕು.

    ಕೃಷಿಕರ ಬೇಡಿಕೆಗಳೇನು?
    ರಸಗೊಬ್ಬರ, ರಾಸಾಯನಿಕಗಳ ಮೇಲೆ ಅಧಿಕ ಸಹಾಯಧನ, ಪಶುಸಂಗೋಪನಾ ವಲಯಕ್ಕೆ ಕಡಿಮೆ ದರದಲ್ಲಿ ಸಾಲ ಸೌಲಭ್ಯ, ಉದ್ಯೋಗ ಖಾತ್ರಿ ಯೋಜನೆಯಡಿ ದಿನಗೂಲಿ ಹೆಚ್ಚಿಸಬೇಕು, ಕೃಷಿ ಸಮ್ಮಾನ್ ಯೋಜನೆಯಡಿ ಸಹಾಯಧನ ಹೆಚ್ಚಿಸಬೇಕು.

    ರಕ್ಷಣಾ ಇಲಾಖೆ ನಿರೀಕ್ಷೆಗಳೇನು?
    ಐಎನ್‌ಎಸ್ ವಿಕ್ರಾಂತ್‌ಗೆ ಮರೇನ್ ರಫೇಲ್ ವಿಮಾನ ಖರೀದಿ, ಪ್ರಾಜೆಕ್ಟ್ 75ಐ ಅಡಿ 6 ಜಲಂತಾರ್ಗಾಮಿ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ, ಮಲ್ಟಿ ರೋಲ್ ಫೈಟರ್ ಏರ್‌ಕ್ರಾಫ್ಟ್‌ಗಳ ಖರೀದಿ, ಅನುದಾನ ಸಂಪೂರ್ಣ ಬಳಕೆಗಾಗಿ ನಾನ್ ಲ್ಯಾಪ್ಸೆಬಲ್ ಫಂಡ್, ಒನ್ ರ‍್ಯಾಂಕ್, ಒನ್ ಪೆನ್ಶನ್‌ಗಾಗಿ ಹೆಚ್ಚುವರಿ ಅನುದಾನ. ಇದನ್ನೂ ಓದಿ: Union Budget 2023: ಮಂಗಳವಾರದಿಂದ ಬಜೆಟ್ ಅಧಿವೇಶನ – ಫೆ. 1ಕ್ಕೆ ಬಜೆಟ್ ಮಂಡನೆ

    ಕೇಂದ್ರದ ಮುಂದಿರುವ ಸವಾಲುಗಳೇನು?
    ಜನಪರ ಕಾರ್ಯಸೂಚಿ ನಡುವೆ ಆರ್ಥಿಕ ಸಮತೋಲನ, ಶೇ.6.4ರಷ್ಟಿರುವ ವಿತ್ತೀಯ ಕೊರತೆ ನಿಯಂತ್ರಿಸುವುದು, ಹಣದುಬ್ಬರ ನಿಯಂತ್ರಣ, ಜನರ ಕೊಳ್ಳುವ ಶಕ್ತಿಗೆ ಇಂಬು, ಉದ್ಯೋಗ ಸೃಷ್ಟಿ, ರಫ್ತು ಪ್ರಮಾಣ ಹೆಚ್ಚಳ ಮಾಡುವುದು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k