Tag: parliament

  • ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಮೋದಿ ಟ್ವೀಟ್

    ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಮೋದಿ ಟ್ವೀಟ್

    ನವದೆಹಲಿ: ಕೇಂದ್ರ ಸರ್ಕಾರವು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆ, ಕೇರಳದ ಮಾಜಿ ಅಥ್ಲಿಟ್ ಪಿಟಿ ಉಷಾ, ಆಂಧ್ರಪ್ರದೇಶದ ಕೆ.ವಿ.ವಿಜಯೇಂದ್ರ ಪ್ರಸಾದ್ ಹಾಗೂ ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

    ವೀರೇಂದ್ರ ಹೆಗ್ಗಡೆ ಅವರನ್ನು ಸಮಾಜ ಸೇವೆ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಪಿ.ಟಿ.ಉಷಾ ಅವರನ್ನು ಕ್ರೀಡಾ ಕ್ಷೇತ್ರದಿಂದ, ವಿಜಯೇಂದ್ರ ಪ್ರಸಾದ್ ಅವರನ್ನು ಸಿನಿಮಾ ಕ್ಷೇತ್ರದಿಂದ ಹಾಗೂ ಇಳಯರಾಜಾ ಅವರನ್ನು ಸಂಗೀತ ಕ್ಷೇತ್ರದಿಂದ ಆಯ್ಕೆ ಮಾಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಯ್ಕೆಯಾದ ಅಭ್ಯರ್ಥಿಗಳಿಗೆ ಶುಭ ಕೋರಿದ್ದಾರೆ.

    ಅಲ್ಲದೆ, ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶವಿದೆ. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಪುಷ್ಟೀಕರಿಸುತ್ತಾರೆ ಎಂಬ ಭರವಸೆಯಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ

    ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ

    ಬೆಂಗಳೂರು: ನಮ್ಮ ನಾಡಿನಲ್ಲಿ ಹುಟ್ಟಿ ಬೆಳೆದು ದೂರದ ಕೆನಡಾದಲ್ಲಿ ಮೂರನೇ ಬಾರಿಗೆ ಸಂಸದರಾಗಿರುವ ಚಂದ್ರ ಆರ್ಯ ಅವರು, ಇಂದು ಮಾತೃಭಾಷೆ ಕನ್ನಡದಲ್ಲಿ ಕೆನಡಾ ಸಂಸತ್ತಿನಲ್ಲಿ ಮಾತನಾಡಿದ್ದಾರೆ. ಈ ಮೂಲಕ ಇಡೀ ಕನ್ನಡಿಗರಲ್ಲಿ ಹೆಮ್ಮೆಯ ಪುತ್ರ ಚಂದ್ರ ಆರ್ಯ ಕುಟುಂಬಸ್ಥರಲ್ಲಿ ಸಂತಸ ಮನೆ ಮಾಡಿದೆ.

    ತುಮಕೂರು ಜಿಲ್ಲೆಯ ಶಿರಾ ಮೂಲದವರಾಗಿದ್ದು, ಪ್ರಸ್ತುತ ಬೆಂಗಳೂರು ಹೊರವಲಯ ಟಿ.ದಾಸರಹಳ್ಳಿಯ ಆತ್ಮೀಯ ಗೆಳೆಯರ ಬಳಗದ ಬಡಾವಣೆಯಲ್ಲಿ ಚಂದ್ರ ಆರ್ಯ ಅವರ ತಂದೆ ಹಾಗೂ ಅಕ್ಕ ವಾಸವಾಗಿದ್ದಾರೆ. ಈ ಹಿನ್ನೆಲೆ ತಂದೆ ಗೋವಿಂದಯ್ಯ ಹಾಗೂ ಅಕ್ಕ ಲೀಲಾ ʼಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿ ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು 

    ಮಧ್ಯಮ ವರ್ಗದಲ್ಲಿ ಹುಟ್ಟಿ ತುಮಕೂರು ಜಿಲ್ಲೆಯ ಶಿರಾ ಮೂಲದ ಚಂದ್ರ ಆರ್ಯ ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿದ್ದಾರೆ. ಇವರು ಸುಮಾರು 1 ನಿಮಿಷಗಳ ಕಾಲ ಕನ್ನಡದ ಕುರಿತು ಭಾಷಣ ಮಾಡಿದ್ದು, ಸಿಕ್ಕಾಪಟ್ಟೆ ವೈರಲ್ ಆಗಿದೆ. ಚಂದ್ರ ಆರ್ಯ ಬಿ.ಇ ಮತ್ತು ಎಂ.ಬಿ.ಎ ಪದವೀಧರರಾಗಿದ್ದಾರೆ. ಪ್ರಸ್ತುತ ಕೆನಡಾದ ನೇಪಿಯನ್ ಕ್ಷೇತ್ರದಿಂದ ಲಿಬರ್ಟಿ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ, 2018ರಲ್ಲಿ ಕೆನಡಾ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಿ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದರು.

    ಚಂದ್ರ ಆರ್ಯ ಅವರು 2003ರಲ್ಲಿ ಕೆನಡಾದ ಖಾಸಗಿ ಕಂಪನಿಯಲ್ಲಿ ಹಣಕಾಸು ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಬಳಿಕ ರಾಜಕೀಯಕ್ಕೆ ಧುಮುಕಿದ ಚಂದ್ರ ಆರ್ಯ ಅವರು ಮೂರನೇ ಬಾರಿಯು ಬಹುಮತದಿಂದ ಗೆದ್ದು ಆಯ್ಕೆಯಾಗಿದ್ದಾರೆ. ಈ ವೇಳೆ ತಂದೆ ಹಾಗೂ ಅಕ್ಕ ಚಂದ್ರ ಆರ್ಯ ಸಾಧನೆ ಹಾಗೂ ಕನ್ನಡ ಭಾಷೆಯ ಪ್ರೇಮವನ್ನು ಹಾಡಿ ಹೊಗಳಿ ಸಂತೋಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಹುಸಿ ಬಾಂಬ್ ಕರೆ ಮಾಡಿದ ಭೂಪ 

    ಇಂದು ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲಿ ಭಾಷಣ ಮಾಡಿ, ಕನ್ನಡಿಗನಾಗಿ ನನಗೆ ಹೆಮ್ಮೆ ಇದೆ ಎಂದು ಹೇಳಿದರು. ಕುವೆಂಪು ಅವರ ‘ಎಲ್ಲಾದರೂ ಇರು ಎಂತಾದರೂ ಇರು, ಎಂದೆಂದಿಗೂ ನೀ ಕನ್ನಡವಾಗಿರು’ ಎಂಬ ಪದ್ಯವನ್ನು ಓದುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ.

  • ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ

    ಕೆನಡಾ ಸಂಸತ್ತಿನಲ್ಲಿ ಕನ್ನಡದಲ್ಲೇ ಮಾತನಾಡಿದ ಕನ್ನಡಿಗ ಸಂಸದ ಚಂದ್ರ ಆರ್ಯ

    ಒಟ್ಟಾವಾ: ಭಾರತೀಯರು ಅದರಲ್ಲೂ ಕನ್ನಡಿಗರೊಬ್ಬರು ದೂರದ ಕೆನಡಾ ಸಂಸದರಾಗಿ ಆಯ್ಕೆಯಾಗಿರೋದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಅಂತಹದ್ರಲ್ಲಿ ಅದೇ ಕೆನಡಾ ದೇಶದ ಸಂಸತ್ತಿನಲ್ಲಿ ನಮ್ಮ ಮಾತೃಭಾಷೆ ಕನ್ನಡ ಭಾಷೆಯಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಕನ್ನಡ ನಾಡು, ಕನ್ನಡ ಭಾಷೆ, ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

    KANNADA FLAG

    ಚಂದ್ರ ಆರ್ಯ ಅವರು ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದವರು. ಇವರು ಕೆನಡಾ ದೇಶದ ಸಂಸದರಾಗಿ ಆಯ್ಕೆಯಾಗಿ ಅತ್ಯುತ್ತಮ ಕೆಲಸ ನಿವರ್ಹಿಸುತ್ತಿದ್ದಾರೆ. ಚಂದ್ರ,ಆರ್ಯ ಅವರು ಕೆನಡಾದಲ್ಲಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೆನಡಾ ದೇಶದ ಸಂಸತ್ತಿನಲ್ಲಿ ಮಾತನಾಡುವಾಗ ತಮ್ಮ ಮಾತೃಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮಳೆಯಿಂದ ಸಂಭವಿಸಿದ ಅವಾಂತರಗಳೇನು?

    https://twitter.com/AryaCanada/status/1527360696958459905?t=4Lm0HftrpsjWuj3H9_hjHg&s=08

    ಈ ಬಗ್ಗೆ ಸ್ವತಃ ಚಂದ್ರ ಆರ್ಯ ಅವರು ಟ್ವೀಟ್ ಮಾಡಿದ್ದು, ನಾನು ಕೆನಡಾ ಸಂಸತ್ತಿನಲ್ಲಿ ನನ್ನ ಮಾತೃಭಾಷೆಯಲ್ಲಿ ಮಾತನಾಡಿದ್ದೇನೆ. ಪುರಾತನ ಇತಿಹಾಸವುಳ್ಳ ಸುಂದರವಾದ ನಮ್ಮ ಕನ್ನಡ ಭಾಷೆಯನ್ನ, 5 ಕೋಟಿ ಜನ ಮಾತನಾಡುತ್ತಾರೆ. ಪ್ರಪಂಚದಲ್ಲಿ ಇದೇ ಮೊದಲ ಬಾರಿಗೆ ವಿದೇಶದ ಸಂಸತ್ತಿನಲ್ಲಿ ಕನ್ನಡ ಭಾಷೆಯ ಮೂಲಕ ಮಾತನಾಡಲಾಗಿದೆ ಎಂದು ಬರೆದುಕೊಂಡಿದ್ದಾರೆ.

    ಕೆನಡಾ ಸಂಸತ್ತಿನಲ್ಲಿ ಮಾತನಾಡಿರುವ ಚಂದ್ರ ಆರ್ಯ ಅವರು, ಮಾನ್ಯ ಸಭಾಪತಿ ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದು ನನಗೆ ಸಂತೋಷ ತಂದಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ದ್ವಾರಳು ಗ್ರಾಮದ ವ್ಯಕ್ತಿಯೊರ್ವ ಕೆನಡಾದಲ್ಲಿ ಸಂಸದನಾಗಿ ಅಯ್ಕೆಯಾಗಿ ಕನ್ನಡದಲ್ಲಿ ಮಾತನಾಡುವುದು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ಇದನ್ನೂ ಓದಿ:  ಮುಂದುವರಿದ ಮಳೆ ಅಬ್ಬರ: ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ

    ಕೆನಡಾ ದೇಶದ ಕನ್ನಡಿಗರು 2018ರಲ್ಲಿ ಕೆನಡಾ ಸಂಸತ್ತಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ಹಾಗೂ ನಟ ಸಾರ್ವಭೌಮ ಡಾ.ರಾಜ್‍ಕುಮಾರ್ ಹಾಡಿರುವ ‘ಎಲ್ಲಾದಾರೂ ಇರು ಎಂತಾದರೂ ಇರು. .ಎಂದೆಂದಿಗೂ ನೀ ಕನ್ನಡವಾಗಿರು’ ಎಂದು ಹೇಳಿ ತಮ್ಮ ಮಾತು ಮುಗಿಸಿದ್ದಾರೆ. ಚಂದ್ರ ಆರ್ಯ ಅವರ ಭಾಷಾ ಪ್ರೇಮ ಕಂಡು ಎಲ್ಲರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಸಂಸತ್ತಿನಲ್ಲಿ ಅಶ್ಲೀಲ ವೀಡಿಯೋ ವೀಕ್ಷಣೆ – ಬ್ರಿಟನ್ ಶಾಸಕ ರಾಜೀನಾಮೆ

    ಸಂಸತ್ತಿನಲ್ಲಿ ಅಶ್ಲೀಲ ವೀಡಿಯೋ ವೀಕ್ಷಣೆ – ಬ್ರಿಟನ್ ಶಾಸಕ ರಾಜೀನಾಮೆ

    ಲಂಡನ್: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಕನ್ಸರ್ವೇಟಿವ್ ಪಕ್ಷದ ಶಾಸಕರೊಬ್ಬರು ಶನಿವಾರ ಹೌಸ್ ಆಫ್ ಕಾಮನ್ಸ್‌ನಲ್ಲಿ ತಮ್ಮ ಫೋನ್‌ನಲ್ಲಿ 2 ಬಾರಿ ಅಶ್ಲೀಲ ವೀಡಿಯೋಗಳನ್ನು (ಪೋರ್ನ್) ನೋಡಿದ್ದೇನೆ ಎಂದು ಒಪ್ಪಿಕೊಂಡು ರಾಜೀನಾಮೆ ನೀಡಿದ್ದಾರೆ.

    ಶಾಸಕ ನೀಲ್ ಪ್ಯಾರಿಶ್ ಸಂಸತ್ತಿನಲ್ಲಿ ಪೋರ್ನ್ ವೀಕ್ಷಣೆ ಮಾಡಿರುವುದಾಗಿ ಆರೋಪಿಸಲಾಗಿದ್ದು, ಅವರನ್ನು ಶುಕ್ರವಾರ ಅಮಾನತುಗೊಳಿಸಲಾಗಿತ್ತು. ಬಳಿಕ ಶನಿವಾರ ತಮ್ಮ ತಪ್ಪನ್ನು ಒಪ್ಪಿಕೊಂಡ ನೀಲ್ ಪ್ಯಾರಿಶ್ ರಾಜೀನಾಮೆ ನೀಡಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಮಾರುವ ಪಾನೀಯಗಳಲ್ಲಿ ದುರ್ಬಲಕಾರಕ ಔಷಧಿಯ ಅಂಶವಿರುತ್ತೆ: ಕಾಂಗ್ರೆಸ್ ಮಾಜಿ ನಾಯಕ

    ತನ್ನ ತಪ್ಪನ್ನು ಒಪ್ಪಿಕೊಂಡ ಪ್ಯಾರಿಶ್, ಮೊದಲ ಬಾರಿಗೆ ವೀಕ್ಷಿಸಿದಾಗ ಅದು ತಮ್ಮ ಫೋನಿನಲ್ಲಿ ಆಕಸ್ಮಿಕವಾಗಿ ತೆರೆದುಕೊಂಡಿತ್ತು. ಆದರೆ ಎರಡನೇ ಬಾರಿ ನಾನು ಉದ್ದೇಶಪೂರ್ವಕವಾಗಿ ನೋಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪತಿ ಇನ್ನೊಬ್ಬಳನ್ನು ಮನೆಗೆ ಕರೆತರಲು ಯಾವ ಮುಸ್ಲಿಂ ಮಹಿಳೆಯೂ ಬಯಸಲ್ಲ: ಅಸ್ಸಾಂ ಸಿಎಂ

    ನಾನು ಮಾಡಿರುವುದು ಅತ್ಯಂತ ದೊಡ್ಡ ಅಪರಾಧ. ಅದು ನನ್ನ ಹುಚ್ಚುತನದ ಕ್ಷಣವಾಗಿತ್ತು. ನಾನು ಮಾಡಿರುವ ಕೃತ್ಯದ ಬಗ್ಗೆ ನನಗೆ ಹೆಮ್ಮೆ ಇಲ್ಲ. ನನ್ನ ತಪ್ಪನ್ನು ಸಮರ್ಥಿಸಿಕೊಳ್ಳಲು ನಾನು ಬಯಸುವುದಿಲ್ಲ. ಇದರಲ್ಲಿ ಸಂಪೂರ್ಣ ತಪ್ಪಿರುವುದರಿಂದ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

  • ಇಂಧನ ಬೆಲೆ ಏರಿಕೆ ನಡುವೆಯೇ ಹಸಿರು ಹೈಡ್ರೋಜನ್‌ ಕಾರಿನಲ್ಲಿ ಪಾರ್ಲಿಮೆಂಟ್‌ಗೆ ಬಂದ ನಿತಿನ್‌ ಗಡ್ಕರಿ

    ಇಂಧನ ಬೆಲೆ ಏರಿಕೆ ನಡುವೆಯೇ ಹಸಿರು ಹೈಡ್ರೋಜನ್‌ ಕಾರಿನಲ್ಲಿ ಪಾರ್ಲಿಮೆಂಟ್‌ಗೆ ಬಂದ ನಿತಿನ್‌ ಗಡ್ಕರಿ

    ನವದೆಹಲಿ: ದಿನೇ ದಿನೆ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಿಂದಾಗಿ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ಇಂತಹ ಸನ್ನಿವೇಶದಲ್ಲೇ ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ತಮ್ಮ ನಿವಾಸದಿಂದ ಸಂಸತ್‌ಗೆ ಹಸಿರು ಹೈಡ್ರೋಜನ್‌ ಚಾಲಿತ ಕಾರಿನಲ್ಲಿ ಆಗಮಿಸಿ ಗಮನ ಸೆಳೆದಿದ್ದಾರೆ.

    ಕಾರು ಪೂರ್ಣ ಟ್ಯಾಂಕ್‌ನಲ್ಲಿ 600 ಕಿ.ಮೀ. ಕ್ರಮಿಸಬಹುದೆಂದು ವರದಿಯಾಗಿದೆ. ಇದು ಪ್ರತಿ ಕಿ.ಮೀ.ಗೆ ಕೇವಲ 2 ರೂ. ಪ್ರಯಾಣದ ವೆಚ್ಚವನ್ನು ತರುತ್ತದೆ. ವಾಹನದ ಇಂಧನ ಟ್ಯಾಂಕ್ ತುಂಬಲು ಇದು ಕೇವಲ ಐದು ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಇದನ್ನೂ ಓದಿ: 8ನೇ ಬಾರಿ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ

    ಸಚಿವರು ಕಾರಿನ ಮುಂಭಾಗದ ಸೀಟಿನಲ್ಲಿ ಚಾಲಕನ ಪಕ್ಕದಲ್ಲಿ ಕುಳಿತು ಪಾರ್ಲಿಮೆಂಟ್‌ಗೆ ಆಗಮಿಸಿದರು. ಬಿಳಿ ಬಣ್ಣದ ಕಾರು ಹಸಿರು ನಂಬರ್ ಪ್ಲೇಟ್ ಅನ್ನು ಹೊಂದಿದ್ದು, ಇದನ್ನು ಇಲೆಕ್ಟ್ರಿಕ್‌ ವಾಹನಗಳಲ್ಲಿಯೂ ಬಳಸಲಾಗುತ್ತದೆ.

    ನಿತಿನ್ ಗಡ್ಕರಿ ಅವರು ಈಚೆಗಷ್ಟೇ ಭಾರತದ ಮೊದಲ ಹಸಿರು ಹೈಡ್ರೋಜನ್ ಆಧಾರಿತ ಸುಧಾರಿತ ಇಂಧನ ಕೋಶದ ಎಲೆಕ್ಟ್ರಿಕ್ ವೆಹಿಕಲ್ (ಎಫ್‌ಸಿಇವಿ) ‘ಟೊಯೊಟಾ ಮಿರೈ’ ಅನ್ನು ಬಿಡುಗಡೆ ಮಾಡಿದ್ದರು. ಇದು ಭಾರತದಲ್ಲಿನ ಮೊದಲ ಯೋಜನೆಯಾಗಿದೆ ಎಂದು ಅವರು ಹೇಳಿದ್ದರು. ಇದನ್ನೂ ಓದಿ: ಒಂದೇ ವಾರದಲ್ಲಿ 6 ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ..!

    ತಾವೇ ಹೈಡ್ರೋಜನ್ ಚಾಲಿತ ಕಾರನ್ನು ಬಳಸುವುದಾಗಿ ಸಚಿವರು ಜನವರಿಯಲ್ಲಿ ಘೋಷಿಸಿದ್ದರು. ಜಪಾನ್‌ನ ಟೊಯೊಟಾ ಕಂಪನಿಯು ಹಸಿರು ಹೈಡ್ರೋಜನ್‌ನಿಂದ ಚಲಿಸುವ ವಾಹನವನ್ನು ನನಗೆ ನೀಡಿದೆ. ನಾನು ಅದನ್ನು ಪೈಲಟ್ ಯೋಜನೆಯಾಗಿ (ಪರ್ಯಾಯ ಇಂಧನದಲ್ಲಿ) ಬಳಸುತ್ತೇನೆ ಎಂದು ಅವರು ಹೇಳಿದ್ದರು.

    ಕಳೆದ ಒಂಬತ್ತು ದಿನಗಳಲ್ಲಿ ಎಂಟನೇ ಬಾರಿಗೆ ಬುಧವಾರವು ಸಹ ಇಂಧನ ಬೆಲೆಯನ್ನು ಮತ್ತೆ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು ಕ್ರಮವಾಗಿ ಲೀಟರ್‌ಗೆ 80 ಪೈಸೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಸತತ 7ನೇ ದಿನವೂ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ

    ರಾಷ್ಟ್ರ ರಾಜಧಾನಿಯಲ್ಲಿ ಒಂದು ಲೀಟರ್ ಪೆಟ್ರೋಲ್ 100.21 ರೂ. ಇದ್ದದ್ದು ಈಗ 101.01 ರೂ. ಆಗಿದೆ. ಡೀಸೆಲ್ ಬೆಲೆ ಲೀಟರ್‌ಗೆ 91.47 ಇದ್ದದ್ದು ಈಗ 92.27 ಕ್ಕೆ ಏರಿಕೆಯಾಗಿದೆ.

  • ಪಾಕ್ ಸಂಸತ್ ಕಲಾಪ ಮುಂದೂಡಿಕೆ – ಅವಿಶ್ವಾಸದ ಸುಳಿಯಿಂದ ಪಾರಾದ ಇಮ್ರಾನ್ ಖಾನ್

    ಪಾಕ್ ಸಂಸತ್ ಕಲಾಪ ಮುಂದೂಡಿಕೆ – ಅವಿಶ್ವಾಸದ ಸುಳಿಯಿಂದ ಪಾರಾದ ಇಮ್ರಾನ್ ಖಾನ್

    ಇಸ್ಲಾಮಾಬಾದ್: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸೋಮವಾರದವರೆಗೆ ಅವಿಶ್ವಾಸದ ಸುಳಿಯಿಂದ ಪಾರಾಗಿದ್ದಾರೆ. ಪ್ರತಿಪಕ್ಷಗಳ ಸಂಸದರ ಗದ್ದಲ, ಪ್ರತಿಭಟನೆಯ ನಡುವೇ ಪಾಕ್ ಸಂಸತ್ ಕಲಾಪ ಮಾರ್ಚ್ 28ಕ್ಕೆ ಮುಂದೂಡಿಕೆ ಆಗಿದೆ.

    PAK

    ಕಲಾಪದಲ್ಲಿ ಮೃತ ಸಂಸದನಿಗೆ ಶೋಕಾಚರಣೆ ಸಲ್ಲಿಸಿ, ಮಾರ್ಚ್ 28ಕ್ಕೆ ಕಲಾಪ ಮುಂದೂಡಿಕೆ ಮಾಡಲಾಯ್ತು. ಹೀಗಾಗಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಆಗಿಲ್ಲ. ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಸಂಸದ ಖಯಾಲ್ ಜಮಾನ್ ಅವರ ನಿಧನದಿಂದಾಗಿ ಮಾರ್ಚ್ 28 ರಂದು ಸಂಜೆ 4 ಗಂಟೆಗೆ ಅಧಿವೇಶನ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಅಸಾದ್ ಕೈಸರ್ ಅವರು ತಿಳಿಸಿದ್ದಾರೆ. ಪಾಕಿಸ್ತಾನ ಸಂಸತ್ತಿನ ಸಂಪ್ರದಾಯದ ಪ್ರಕಾರ ಮೊದಲ ಅಧಿವೇಶನವು ಖಯಾಲ್ ಜಮಾನ್ ಅವರಿಗೆ ಗೌರವ ಸಲ್ಲಿಸಲು ಸೀಮಿತವಾಗಿದೆ. ಇದನ್ನೂ ಓದಿ: ಏನೇ ಆದರೂ ರಾಜೀನಾಮೆ ನೀಡಲ್ಲ: ವಿರೋಧಿಗಳಿಗೆ ಇಮ್ರಾನ್ ಖಾನ್ ಸೆಡ್ಡು

    ಇಮ್ರಾನ್‍ಖಾನ್ ನೇತೃತ್ವದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರವು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಪಾಕಿಸ್ತಾನ ಅಳಿವಿನ ಅಂಚಿನತ್ತ ಸಾಗುತ್ತಿದೆ ಮತ್ತು ಹಣದುಬ್ಬರ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಆರೋಪಿಸಿ ಮಾರ್ಚ್ 8 ರಂದು ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿ ಸಚಿವಾಲಯದ ಮುಂದೆ ಅವಿಶ್ವಾಸ ನಿರ್ಣಯ ಸಲ್ಲಿಸಿದ್ದವು. ಇದರಿಂದಾಗಿ ಮಾರ್ಚ್ 25ರಂದು ಇಮ್ರಾನ್‍ಖಾನ್‍ರನ್ನು ಪದಚ್ಯುತಿಗೊಳಿಸಲು ಅವಿಶ್ವಾಸ ಗೊತ್ತುವಳಿ ಮಂಡಿಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಇಂದು ಖಯಾಲ್ ಜಮಾನ್ ಅವರ ನಿಧನದ ಕಾರಣದಿಂದಾಗಿ ಸಭೆಯನ್ನು ಮಾರ್ಚ್ 28ಕ್ಕೆ ಮುಂದೂಡಲಾಗಿದೆ. ಇದನ್ನೂ ಓದಿ: ಶ್ರೀಲಂಕಾ ಆರ್ಥಿಕ ಸ್ಥಿತಿ ಗಂಭೀರ – ದಿನ ಬಳಕೆ ವಸ್ತುಗಳ ಬೆಲೆ ಎಷ್ಟು?

    ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್ 2018ರಲ್ಲಿ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಭಾರಿಗೆ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಸ್ವಪಕ್ಷದೊಂದಿಗೆ ಪ್ರತಿಪಕ್ಷದ ನಾಯಕರೂ ಭಿನ್ನಮತ ಮರೆತು ಒಂದಾಗಿವೆ. ಕೆಲ ವೇಳೆ ಅವಿಶ್ವಾಸ ನಿರ್ಣಯ ಸಭೆಯಲ್ಲಿ ತೆಹ್ರೀಕ್-ಎ-ಇನ್ ಸಾಫ್ ನೇತೃತ್ವದ ಸರ್ಕಾರವು ಬಹುಮತ ಕಳೆದುಕೊಂಡಿದೆ ಎಂದು ಪ್ರತಿಪಕ್ಷಗಳು ದೂರಿವೆ.

    ಪಾಕಿಸ್ತಾನದ ಸಂಸತ್ತು ಗುರುವಾರ ರಾತ್ರಿಯೇ 15 ಅಂಶಗಳ ಅಜೆಂಡಾ ಬಿಡುಗಡೆ ಮಾಡಿದೆ. ಇದರಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿಯೂ ಸೇರಿದೆ. ಆರ್ಥಿಕತೆಯನ್ನೂ ಇಮ್ರಾನ್ ಖಾನ್ ಸಮರ್ಪಕವಾಗಿ ನಿರ್ವಹಿಸಿಲ್ಲ. ಹಣದುಬ್ಬರ ಪ್ರಮಾಣ ಎರಡಂಕಿಗೆ ಹೆಚ್ಚಾಗಿರುವ ಕಾರಣ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಜನಸಾಮಾನ್ಯರಲ್ಲಿ ಸರ್ಕಾರದ ಬಗ್ಗೆ ಅಸಮಾಧಾನ ಮನೆಮಾಡಿದ್ದು, ರಾಜಕೀಯ ಭವಿಷ್ಯಕ್ಕೆ ಆತಂಕ ತಂದೊಡ್ಡಿದೆ. ವಿರೋಧ ಪಕ್ಷಗಳ ನಾಯಕರ ವಿರುದ್ಧ ಆಡಳಿತಾರೂಢ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ. ವಿರೋಧ ಪಕ್ಷಗಳು ಒಗ್ಗೂಡಲು ಸಹ ಇದು ಮುಖ್ಯಕಾರಣವಾಗಿದೆ ಎಂಬ ಅಂಶವನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧದ ನಡುವೆಯೇ ಮುರಿದು ಬಿತ್ತು ಪುಟಿನ್‌ ಮಗಳ ಮದುವೆ!

    ಪಾಕಿಸ್ತಾನದ ಸಂಸತ್ತು 342 ಸದಸ್ಯಬಲ ಹೊಂದಿದೆ. ಅಧಿಕಾರಕ್ಕೆ ಬರಲು 172 ಸದಸ್ಯ ಬಲ ಅಗತ್ಯವಿದೆ. ಇಮ್ರಾನ್ ಖಾನ್‌ರ ಪಿಟಿಐ ನೇತೃತ್ವದ ಮೈತ್ರಿಕೂಟವು 179 ಸದಸ್ಯಬಲ ಹೊಂದಿದೆ. ಪಿಟಿಐ ಪಕ್ಷದ 155 ಸಂಸದರು ಸಂಸತ್ತಿನಲ್ಲಿದ್ದಾರೆ. ಅವಿಶ್ವಾಸ ಗೊತ್ತುವಳಿಯಲ್ಲಿ ಪಾಲ್ಗೊಳ್ಳುವುದಾಗಿ 3 ಪ್ರಮುಖ ಮಿತ್ರಪಕ್ಷಗಳು ಹೇಳಿಕೆ ನೀಡಿವೆ. ಪಾಕಿಸ್ತಾನದ ಸಂಸತ್ತಿನಲ್ಲಿ ವಿರೋಧ ಪಕ್ಷಗಳು 163 ಸ್ಥಾನಗಳನ್ನು ಹೊಂದಿವೆ. ಪಿಟಿಐ ಪಕ್ಷ ತೊರೆದಿರುವ ಸಂಸದರು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದರೆ ಇಮ್ರಾನ್ ಖಾನ್ ಸರ್ಕಾರ ಸುಲಭವಾಗಿ ಪತನವಾಗಲಿದೆ.

  • ರದ್ದಾಗಿರುವ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಯೋಚನೆಯಿಲ್ಲ: ಕೇಂದ್ರ ಕೃಷಿ ಸಚಿವ

    ರದ್ದಾಗಿರುವ ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೊಳಿಸುವ ಯೋಚನೆಯಿಲ್ಲ: ಕೇಂದ್ರ ಕೃಷಿ ಸಚಿವ

    ನವದೆಹಲಿ: ರದ್ದುಪಡಿಸಿರುವ ಮೂರು ಕೃಷಿ ಕಾಯ್ದೆಗಳನ್ನು ಮತ್ತೆ ಜಾರಿಗೆ ತರುವ ಯಾವುದೇ ಯೋಚನೆ ಇಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಶುಕ್ರವಾರ ರಾಜ್ಯಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

    ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ಇತ್ಯಾದಿ ವಿಷಯ ಸಂಬಂಧಪಟ್ಟ ರಾಜ್ಯ ಸರ್ಕಾರದಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಾನು ಯಾವತ್ತೂ ಹಿಜಬ್, ಬುರ್ಖಾ ಪರ ಇಲ್ಲ: ಜಾವೇದ್ ಅಖ್ತರ್

    ಈವರೆಗೆ 11.78 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ವಿವಿಧ ಕಂತುಗಳ ಮೂಲಕ ಅಂದಾಜು 1.82 ಕೋಟಿ ಮೊತ್ತವನ್ನು ಜಮಾ ಮಾಡಲಾಗಿದೆ. ಅವರಲ್ಲಿ 48.04 ಲಕ್ಷ ಮಂದಿ ಅನರ್ಹರು ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

    ಕೋವಿಡ್‌ ಸಾಂಕ್ರಾಮಿಕ ಹೊರತಾಗಿಯೂ 2020-21ರ ಅವಧಿಯಲ್ಲಿ ಜಿಡಿಪಿಗೆ ಶೇ.1.6 ಪಾಲನ್ನು ಹೊಂದಿರುವ 3,09,939 ಕೋಟಿ ಮೊತ್ತದ ಕೃಷಿ ರಫ್ತುಗಳಲ್ಲಿ ಶೇ.22.8ರಷ್ಟು ಬೆಳವಣಿಗೆಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ: ಕಾಲೇಜುಗಳಿಗೆ ಫೆ.16ರವರೆಗೂ ರಜೆ ಘೋಷಿಸಿದ ಸರ್ಕಾರ

  • ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್‌ನಲ್ಲಿ ಕೇಂದ್ರ ಸ್ಪಷ್ಟನೆ

    ಆಧಾರ್ ಪೌರತ್ವದ ಪುರಾವೆಯಲ್ಲ: ಸಂಸತ್‌ನಲ್ಲಿ ಕೇಂದ್ರ ಸ್ಪಷ್ಟನೆ

    ನವದೆಹಲಿ: ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ನಡುವೆ ಲಿಂಕ್ ಮಾಡಲು ಸರ್ಕಾರಿ ಅಧಿಕಾರಿಗಳಿಗೆ ಸಾಧ್ಯವಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಶುಕ್ರವಾರ ಸಂಸತ್ತಿನಲ್ಲಿ ತಿಳಿಸಿದ್ದಾರೆ.

    ಲೋಕಸಭೆಯಲ್ಲಿ ನಡೆದ ಪ್ರತ್ಯೇಕ ಪ್ರಶ್ನೋತ್ತರ ಅವಧಿಯಲ್ಲಿ ಕಿರಣ್ ರಿಜಿಜು ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ಜೋಡಣೆ ಬಗ್ಗೆ ಇದ್ದ ಗೊಂದಲಕ್ಕೆ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್‍ನಿಂದ ವಿದ್ಯಾರ್ಥಿನಿಯ ಶಿಕ್ಷಣ ಭವಿಷ್ಯ ಕಸಿದುಕೊಳ್ಳುತ್ತಿದ್ದೇವೆ: ರಾಹುಲ್ ಗಾಂಧಿ

    ಆಧಾರ್ ಬಳಸಿಕೊಂಡು ಪೌರತ್ವ ದೃಢೀಕರಿಸಲು ಸರ್ಕಾರ ಪ್ರೊಟೋಕಾಲ್ ರಚಿಸಿದೆಯೇ? ಎಂಬ ಲಿಖಿತ ಪ್ರಶ್ನೆಗೆ ಸಂಸತ್ತಿನಲ್ಲಿ ಪ್ರತಿಕ್ರಿಯಿಸಿದ ಕಿರಣ್ ರಿಜಿಜು, ಆಧಾರ್ ಹಾಗೂ ಮತದಾರರ ಗುರುತಿನ ಚೀಟಿಗಳ ನಡುವೆ ಯಾವುದೇ ರೀತಿಯ ಜೋಡಣೆ ನಡೆಸಲಾಗುವುದಿಲ್ಲ. ಆಧಾರ್ ಪೌರತ್ವದ ಪುರಾವೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಸಾವು

    ಆಧಾರ್ ಅನ್ನು ಕಾನೂನುಬದ್ಧ ಸಾಧನವಾಗಿ ಬಳಸುವ ವಿಚಾರವಾಗಿ ಉತ್ತರಿಸಿದ ಕಿರಣ್ ರಿಜಿಜು, ಆಧಾರ್ ಪೌರತ್ವದ ಪುರಾವೆಯಲ್ಲ. ಹೀಗಾಗಿ ಅದನ್ನು ಮತದಾರರ ಗುರುತಿನ ಚೀಟಿಯೊಂದಿಗೆ ಜೋಡಿಸುವ ಬಗ್ಗೆ ಗೊಂದಲ ಬೇಡ ಎಂದಿದ್ದಾರೆ.

  • ಏಕರೂಪ ನಾಗರಿಕ ಸಂಹಿತೆ, ಹೊಸ ಕಾನೂನು ಆಯೋಗದ ಸುಪರ್ದಿಗೆ: ಕಿರಣ್‌ ರಿಜಿಜು

    ಏಕರೂಪ ನಾಗರಿಕ ಸಂಹಿತೆ, ಹೊಸ ಕಾನೂನು ಆಯೋಗದ ಸುಪರ್ದಿಗೆ: ಕಿರಣ್‌ ರಿಜಿಜು

    ನವದೆಹಲಿ: ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಸಮಸ್ಯೆಗಳ ಪರಿಶೀಲನೆಯನ್ನು ಹೊಸ ಕಾನೂನು ಆಯೋಗವು ತನ್ನ ಸುಪರ್ದಿಗೆ ತೆಗೆದುಕೊಂಡಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ತಿಳಿಸಿದ್ದಾರೆ.

    ಕಳೆದ ವರ್ಷ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಡಿ.1ರಂದು ಬಿಜೆಪಿ ಸಂಸದ ನಿಶಿಕಾಂತ್‌ ದುಬೆ ಅವರು ಲೋಕಸಭೆಯ ಶೂನ್ಯವೇಳೆಯಲ್ಲಿ ಏಕರೂಪ ನಾಗರಿಕ ಸಂಹಿತೆಯ ವಿಷಯವನ್ನು ಪ್ರಸ್ತಾಪಿಸಿದ್ದರು. ಇದನ್ನೂ ಓದಿ: ನಾನು ಸಾವಿಗೆ ಹೆದರಲ್ಲ – Z ಶ್ರೇಣಿಯ ಭದ್ರತೆ ತಿರಸ್ಕರಿಸಿದ ಓವೈಸಿ

    ಈ ಕುರಿತು ಪ್ರತಿಕ್ರಿಯಿಸಿರುವ ರಿಜಿಜು ಅವರು, ವಿವಿಧ ಸಮುದಾಯಗಳನ್ನು ನಿಯಂತ್ರಿಸುವ ವಿವಿಧ ವೈಯಕ್ತಿಕ ಕಾನೂನುಗಳ ನಿಬಂಧನೆಗಳ ಆಳವಾದ ಅಧ್ಯಯನದ ಅಗತ್ಯವಿದೆ. ಹೀಗಾಗಿ ಈ ವಿಷಯದ ಸೂಕ್ಷ್ಮತೆಯ ಅಂಶವನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನು ಆಯೋಗದ ತೆಕ್ಕೆಗೆ ವಹಿಸಲಾಗಿದೆ ಎಂದು ಹೇಳಿದ್ದಾರೆ.

    21ನೇ ಕಾನೂನು ಆಯೋಗದ ಅವಧಿಯು 2018ರ ಆ.31ಕ್ಕೆ ಕೊನೆಗೊಂಡಿತ್ತು. ಹೀಗಾಗಿ 22ನೇ ಹೊಸ ಕಾನೂನು ಆಯೋಗವು ಏಕರೂಪ ನಾಗರಿಕ ಸಂಹಿತೆ ವಿಷಯವನ್ನು ಕೈಗೆತ್ತಿಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳುಗಾರಿಕೆಯಲ್ಲಿ ಸೋದರಳಿಯ ಬಂಧನಕ್ಕೆ ಪಂಜಾಬ್ ಸಿಎಂ ಪ್ರತಿಕ್ರಿಯೆ

    ಡಿಸೆಂಬರ್‌ 2020ರಲ್ಲಿ, ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಗೋವಾದ ವಿಮೋಚನೆಯ 60ನೇ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಗೋವಾದ ಸಾಮಾನ್ಯ ನಾಗರಿಕ ಸಂಹಿತೆಯನ್ನು ಶ್ಲಾಘಿಸಿದ್ದರು.

    ವಿವಿಧ ಧಾರ್ಮಿಕ ಸಮುದಾಯಗಳನ್ನು ನಿಯಂತ್ರಿಸುವ ವಿವಿಧ ವೈಯಕ್ತಿಕ ಕಾನೂನುಗಳನ್ನು ಬದಲಿಸಲು ಏಕರೂಪ ನಾಗರಿಕ ಸಂಹಿತೆ ಜಾರಿ ವಿಷಯವು ಆಡಳಿತಾರೂಢ ಬಿಜೆಪಿಯ ಪ್ರಮುಖ ರಾಜಕೀಯ ಗುರಿಗಳಲ್ಲಿ ಒಂದಾಗಿದೆ. ಪಕ್ಷದ 2019ರ ಪ್ರಣಾಳಿಕೆಯನ್ನು ಈ ವಿಷಯ ಕಾಣಿಸಿಕೊಂಡಿತ್ತು.

  • ಸೈಕಲ್ ರೈಡ್‌ನಲ್ಲಿ ಸಂಸತ್ತಿಗೆ ಬಂದ ಕೇಂದ್ರ ಆರೋಗ್ಯ ಸಚಿವ

    ಸೈಕಲ್ ರೈಡ್‌ನಲ್ಲಿ ಸಂಸತ್ತಿಗೆ ಬಂದ ಕೇಂದ್ರ ಆರೋಗ್ಯ ಸಚಿವ

    ನವದೆಹಲಿ: ಸೈಕಲ್ ಮೂಲಕವಾಗಿ ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವಿಯಾ ಅವರು ಸಂಸತ್ತಿಗೆ ಬಂದಿದ್ದಾರೆ. ಈ ವೀಡೀಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    2021ರ ನವೆಂಬರ್‌ನಲ್ಲಿ ಭಾರತ ಅಂತರಾಷ್ಟ್ರೀಯ ವ್ಯಾಪಾರ ಮೇಳದಲ್ಲಿ ಹೆಲ್ತ್ ಪೆವಿಲಿಯನ್ ಅನ್ನು ಉದ್ಘಾಟಿಸಲು ಮತ್ತು ಹೆಚ್ಚುತ್ತಿರುವ ಮಾಲಿನ್ಯ, ಆರೋಗ್ಯ ಜಾಗೃತಿ ಮತ್ತು ಫಿಟ್‍ನೆಸ್‍ಗೆ ಜನರನ್ನು ಪ್ರೇರೇಪಿಸಲು  ಸೈಕಲ್ ಸವಾರಿ ಮಾಡಿದ್ದರು. ಕೇಂದ್ರ ಸಚಿವರು ಮನೆಯಿಂದ ಸಂಸತ್ತಿಗೆ ಸೈಕಲ್ ಮೂಲಕ ಬರುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಹಲವಾರು ಸಂದರ್ಭಗಳಲ್ಲಿ, ಅವರು ಆರೋಗ್ಯ ಜಾಗೃತಿಗಾಗಿ ಸಂದೇಶವನ್ನು ಕಳುಹಿಸಲು ಸೈಕಲ್ ಸವಾರಿ ಮಾಡಿದ್ದಾರೆ. ಇದನ್ನೂ ಓದಿ:  ಬಿಜೆಪಿಗೆ ಸೇರಿದರೆ ನನ್ನನ್ನು ಹೇಮಾ ಮಾಲಿನಿಯಾಗಿ ಮಾಡುತ್ತಿದ್ದರು: ಜಯಂತ್ ಚೌಧರಿ

    2022-23ರ ಕೇಂದ್ರ ಬಜೆಟ್‍ನಲ್ಲಿ ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಪರಿಸರ ವ್ಯವಸ್ಥೆಯ ಘೋಷಣೆಯನ್ನು ಸಚಿವ ಮಾಂಡವಿಯಾ ಮಂಗಳವಾರ ಶ್ಲಾಘಿಸಿದರು. ಇದು ನಾಗರಿಕರ ಜೀವನ ಸೌಕರ್ಯವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ. ಸ್ವಾವಲಂಬಿ ಭಾರತವನ್ನಾಗಿಸಲು ಮತ್ತು ಉದ್ದೇಶಿತ ಅಂತ್ಯೋದಯ ಯೋಜನೆಗಳನ್ನು ಬಲಪಡಿಸಲು ಬಜೆಟ್ ಪರಿಣಾಮಕಾರಿ ಎಂದು ಸಾಬೀತುಪಡಿಸಿದೆ ಎಂದು ಮಾಂಡವೀಯ ಹೇಳಿದರು. ಇದನ್ನೂ ಓದಿ:  ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ