Tag: parliament

  • ಆರೋಗ್ಯ ಕಾರ್ಯಕರ್ತರು ಸೇನಾನಿಗಳಂತೆ ಕೆಲಸ ಮಾಡಿದ್ದಾರೆ: ಕೋವಿಂದ್

    ಆರೋಗ್ಯ ಕಾರ್ಯಕರ್ತರು ಸೇನಾನಿಗಳಂತೆ ಕೆಲಸ ಮಾಡಿದ್ದಾರೆ: ಕೋವಿಂದ್

    ನವದೆಹಲಿ: ಕೊರೊನಾ ಕಷ್ಟಕಾಲದಲ್ಲಿ ವೈದ್ಯರು, ನರ್ಸ್, ಮುಂಚೂಣಿ ಕಾರ್ಯಕರ್ತರು ಸೇನಾನಿಗಳ ರೀತಿ ಕೆಲಸ ಮಾಡಿದ್ದಾರೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಬಜೆಟ್ ಅಧಿವೇಶನಕ್ಕೂ ಮೊದಲು ಸೆಂಟ್ರಲ್ ಹಾಲ್‌ನಲ್ಲಿ ಸಂಸತ್ ಸದಸ್ಯರನ್ನು ಉದ್ದೇಶಿಸಿ ರಾಷ್ಟ್ರಪತಿಗಳು ಮಾತನಾಡಿದರು. ಗಡಿಯಲ್ಲಿರುವ ಸೇನಾನಿಗಳಿಗೆ ನಮನ ಸಲ್ಲಿಸಿ ಅಜಾದ್ ಅಮೃತ್ ಮಹೋತ್ಸವ ಹಿನ್ನೆಲೆ ದೇಶದ ಜನತೆಗೆ ಅಭಿನಂದನೆ ತಿಳಿಸುತ್ತ ಭಾಷಣ ಪ್ರಾರಂಭಿಸಿದ ರಾಷ್ಟ್ರಪತಿ ಸರ್ಕಾರ ನೇತಾಜಿ ಜಯಂತಿ ಆಚರಣೆ ಮೂಲಕ ಗಣರಾಜ್ಯೋತ್ಸವ ಪ್ರಾರಂಭಿಸಿದೆ. ನಮ್ಮ ಸರ್ಕಾರ ಸಬ್ ಕಾ ವಿಕಾಸ್ ಸಬ್ ಕಾ ವಿಸ್ವಾಸ್ ರೂಪದ ಕೆಲಸ ಎಂದು ತಿಳಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಶಿಥಿಲಗೊಂಡ ಕಟ್ಟಡ, ಯಾವಾಗ ಬೇಕಾದರೂ ಬೀಳಬಹುದು: ದಿನೇಶ್ ಶರ್ಮಾ

    ಕೊರೊನಾ ಕಷ್ಟಕಾಲದಲ್ಲಿ ವೈದ್ಯರು, ನರ್ಸ್, ಮುಂಚೂಣಿ ಕಾರ್ಯಕರ್ತರು ಸೇನಾನಿಗಳ ರೀತಿ ಕೆಲಸ ಮಾಡಿದ್ದಾರೆ. ಕೊರೊನಾ ಲಸಿಕೆ ಅಭಿಯಾನದ ಮೂಲಕ ಸಾಮರ್ಥ್ಯ ಗೊತ್ತಾಗಿದೆ. ಕೇವಲ ಒಂದು ವರ್ಷದ ಒಳಗೆ 150 ಕೋಟಿ ಡೋಸ್ ನೀಡಲಾಗಿದೆ. ಶೇ.90ಕ್ಕೂ ಹೆಚ್ಚು ಜನರಿಗೆ ಮೊದಲನೇ ಡೋಸ್ ನೀಡಲಾಗಿದೆ. 8 ವ್ಯಾಕ್ಸಿನ್‌ಗಳಿಗೆ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಭಾರತದಲ್ಲಿ ಅಭಿವೃದ್ಧಿಯಾದ ಲಸಿಕೆಗಳು ವಿಶ್ವವನ್ನೇ ಕೊರೊನಾದಿಂದ ಬಚಾವ್ ಮಾಡಲು ಸಹಕಾರಿಯಾಗಿದೆ ಎಂದು ದೇಶದ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು. ಇದನ್ನೂ ಓದಿ: ಓಮಿಕ್ರಾನ್‍ಗಿಂತ ಓ ಮಿತ್ರೋನ್ ಹೆಚ್ಚು ಅಪಾಯಕಾರಿ: ಶಶಿ ತರೂರ್

    ಕೇಂದ್ರ ಸರ್ಕಾರ ಅನೇಕ ಆರೋಗ್ಯ ಯೋಜನೆಗಳನ್ನು ಜಾರಿಗೆ ತಂದಿದೆ. ಆಯುಷ್ಮಾನ್ ಭಾರತ್ ಯೋಜನೆ ಬಡವರಿಗೆ ಸೌಲಭ್ಯ ಸಿಗುವಂತಿದೆ. ಕೊರೊನಾ ಕಾಲದಲ್ಲಿ ಭಾರತೀಯ ಫಾರ್ಮಾ ಕಂಪನಿಗಳು ತಮ್ಮ ಸಾಮರ್ಥ್ಯ ಸಾಬೀತು ಮಾಡಿವೆ. ಆಯುರ್ವೇದ, ಪಾರಂಪರಿಕ ಚಿಕಿತ್ಸೆ ಬಗ್ಗೆ ತಿಳುವಳಿಕೆ ಹೆಚ್ಚಿದೆ. ಚಿಕಿತ್ಸೆ ಪಡೆಯುವವರ ಸಂಖ್ಯೆಯೂ ಭಾರತದಲ್ಲಿ ಹೆಚ್ಚಿದೆ ಎಂದರು.

    ಕೊರೊನಾದ ಪರಿಸ್ಥಿತಿಯಲ್ಲೂ ಬಡವರನ್ನು ಹಸಿವಿಂದ ದೂರ ಮಾಡಿದೆ. ಬಡಜನರಿಗೆ ಉಚಿತ ಪಡಿತರ ವಿತರಣೆ, ಬೀದಿ ಬದಿ ವ್ಯಾಪಾರಿಗಳಿಗೆ ಇ-ಶ್ರಮ್ ಯೋಜನೆ, ಬಡವರಿಗೆ ನೇರವಾಗಿ ಹಣ ವರ್ಗಾವಣೆಯನ್ನೂ ಮಾಡಲಾಗಿದೆ. ಡಿಜಿಟಲ್ ಇಂಡಿಯಾ ಸಫಲತೆ ಪಡೆದಿದೆ. ಎಂಟು ಲಕ್ಷ ಕೋಟಿ ವಹಿವಾಟು ನಡೆದಿದೆ ಎಂದು ತಿಳಿಸಿದರು.

  • Budget Session: ಜ.31, ಫೆ.1ರಂದು ಸಂಸತ್‌ನ ಎರಡೂ ಸದನಗಳಲ್ಲಿ ಪ್ರಶ್ನೋತ್ತರ, ಶೂನ್ಯ ವೇಳೆ ಇರಲ್ಲ

    Budget Session: ಜ.31, ಫೆ.1ರಂದು ಸಂಸತ್‌ನ ಎರಡೂ ಸದನಗಳಲ್ಲಿ ಪ್ರಶ್ನೋತ್ತರ, ಶೂನ್ಯ ವೇಳೆ ಇರಲ್ಲ

    ನವದೆಹಲಿ: ಜ.31ರಿಂದ ಬಜೆಟ್‌ ಅಧಿವೇಶನ ಆರಂಭವಾಗಲಿದ್ದು, ಮೊದಲೆರಡು ದಿನ ಲೋಕಸಭೆ ಮತ್ತು ರಾಜ್ಯಸಭೆ ಅಧಿವೇಶನ ಕಲಾಪಗಳಲ್ಲಿ ಶೂನ್ಯ ವೇಳೆ ಮತ್ತು ಪ್ರಶ್ನೋತ್ತರ ಅವಧಿ ಇರುವುದಿಲ್ಲ ಎಂದು ಸಂಸತ್‌ ಬುಲೆಟಿನ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

    ಮೊದಲ ದಿನ ಬಜೆಟ್‌ ಅಧಿವೇಶನವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಭಾಷಣ ಮಾಡಲಿದ್ದಾರೆ. ಫೆ.1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2022-23ನೇ ಸಾಲಿನ ಬಜೆಟ್‌ ಮಂಡಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಎರಡು ದಿನಗಳು ಉಭಯ ಸದನಗಳಿಗೆ ಶೂನ್ಯ ವೇಳೆ ಮತ್ತು ಪ್ರಶ್ನೋತ್ತರ ಅವಧಿ ಇರುವುದಿಲ್ಲ ಎಂದು ಬುಲೆಟಿನ್‌ ತಿಳಿಸಿದೆ. ಇದನ್ನೂ ಓದಿ: ಪೆಗಾಸಸ್ ಖರೀದಿಸಿ ಮೋದಿ ಸರ್ಕಾರ ದೇಶದ್ರೋಹ ಮಾಡಿದೆ: ರಾಹುಲ್ ಗಾಂಧಿ

    ಸದಸ್ಯರಿಂದ ಸಾರ್ವಜನಿಕ ತುರ್ತು ಪ್ರಶ್ನೆಗಳು ಇದ್ದಲ್ಲಿ ಅವುಗಳನ್ನು ಫೆ.2ರಂದು ನಡೆಯಲಿರುವ ಕಲಾಪಕ್ಕೆ ಪರಿಗಣಿಸಲಾಗುತ್ತದೆ. ಈ ಸಂಬಂಧ ಫೆ.1ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯೊಳಗೆ ಆನ್‌ಲೈನ್‌ ಇ-ಪೋರ್ಟಲ್‌ ಅಥವಾ ನೇರವಾಗಿ ಸಂಸತ್‌ ನೋಟಿಸ್‌ ಕಚೇರಿಗೆ ತಿಳಿಸಬೇಕೆಂದು ಸೂಚಿಸಲಾಗಿದೆ.

    ಸಂಸತ್‌ ನಿಯಮದ ಪ್ರಕಾರ, ಲೋಕಸಭೆ ಅಧಿವೇಶನದಲ್ಲಿ ಪ್ರತಿದಿನ 60 ನಿಮಿಷ ಪ್ರಶ್ನಾವಳಿ ಹಾಗೂ ಶೂನ್ಯ ಅವಧಿ ಇರುತ್ತದೆ. ರಾಜ್ಯಸಭೆಯಲ್ಲಿ ಬೆಳಿಗ್ಗೆ 11 ಗಂಟೆಯಿಂದ ಶೂನ್ಯ ವೇಳೆ ಆರಂಭವಾದರೆ ಮಧ್ಯಾಹ್ನಕ್ಕೆ ಪ್ರಶ್ನೋತ್ತರ ಸಮಯ ಇರುತ್ತದೆ. ಇದನ್ನೂ ಓದಿ: ಮತ ಎಣಿಕೆಯವರೆಗೆ ಮಾತ್ರ ಸಮಾಜವಾದಿ, ರಾಷ್ಟ್ರೀಯ ಲೋಕದಳದ ಮೈತ್ರಿ: ಅಮಿತ್ ಶಾ

  • ಸಂಸತ್ತಿನಲ್ಲೇ ಪರಸ್ಪರ ಹೊಡೆದಾಡಿಕೊಂಡ ಸಂಸದರು

    ಸಂಸತ್ತಿನಲ್ಲೇ ಪರಸ್ಪರ ಹೊಡೆದಾಡಿಕೊಂಡ ಸಂಸದರು

    ಅಮ್ಮಾನ್: ಸಂಸತ್‍ನಲ್ಲಿ ಜನರ ಸಮಸ್ಯೆಗಳನ್ನು ಪ್ರತಿಧ್ವನಿಸಬೇಕಾದ, ಜನತೆಗೆ ಮಾದರಿಯಾಗಬೇಕಾದ ಪ್ರತಿನಿಧಿಗಳೇ ಸಂಸತ್ತಿನಲ್ಲಿ ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಉದ್ವಿಗ್ನ ವಾತಾವರಣ ಸೃಷ್ಟಿಸಿದ ಘಟನೆ ಜೋರ್ಡಾನ್ ನಲ್ಲಿ ನಡೆದಿದೆ.

    ಜೋರ್ಡಾನ್‍ನಲ್ಲಿ ಸಂಸತ್‍ನ ಅಧಿವೇಶನದಲ್ಲಿ ನಿನ್ನೆ ಸಂವಿಧಾನದ ಪ್ರಸ್ತಾವಿತ ತಿದ್ದುಪಡಿಗಳ ಬಗ್ಗೆ ಚರ್ಚೆ ಇತ್ತು. ಅನಗತ್ಯ ಟೀಕೆಗಳ ಬಗ್ಗೆ ಕ್ಷಮೆಯಾಚಿಸುವಂತೆ ಕೇಳಲಾಯಿತು. ಇದಕ್ಕೆ ಸದಸ್ಯರು ನಿರಾಕರಿಸಿದ್ದು, ಪ್ರತಿನಿಧಿಗಳ ನಡುವೆ ಮಾತಿಗೆ ಮಾತು ಬೆಳೆದು ಗದ್ದಲ ಏರ್ಪಟ್ಟಿದೆ. ಈ ವೇಳೆ ಪ್ರತಿನಿಧಿಗಳು ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್‍ಗೆ ಎರಡೇ ದಿನ ಬಾಕಿ – ಹಲವು ವಲಯಗಳಿಂದ ಇನ್ನು ಸಿಕ್ಕಿಲ್ಲ ಪರಿಪೂರ್ಣ ಬೆಂಬಲ

    ಹೊಡೆದಾಟದಲ್ಲಿ ಒಬ್ಬ ಜನಪ್ರತಿನಿಧಿ ನೆಲಕ್ಕೆ ಕುಸಿದು ಬಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

    ಸಂಸತ್‍ನಲ್ಲಿ ಜನಪ್ರತಿನಿಧಿಗಳ ಈ ರೀತಿಯ ನಡವಳಿಕೆಯು ಸ್ವೀಕಾರಾರ್ಹವಲ್ಲ. ಇದು ನಮ್ಮ ದೇಶದ ಪ್ರತಿಷ್ಠೆಗೆ ಧಕ್ಕೆ ತರುತ್ತದೆ ಎಂದು ಸಂಸತ್ತಿನ ಸದಸ್ಯ ಖಲೀಲ್ ಅತಿಯೆಹ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಾರತದ ಮಹಿಳಾ ಯುವ ಉದ್ಯಮಿ ಪಂಖೂರಿ ಶ್ರೀವಾಸ್ತವ ಹೃದಯ ಸ್ತಂಭನದಿಂದ ನಿಧನ

  • ಸಿಬಿಐ, ಇ.ಡಿ ನಿರ್ದೇಶಕರ ಅಧಿಕಾರವಧಿ ವಿಸ್ತರಣೆಗೆ ಸಂಸತ್‌ ಒಪ್ಪಿಗೆ

    ಸಿಬಿಐ, ಇ.ಡಿ ನಿರ್ದೇಶಕರ ಅಧಿಕಾರವಧಿ ವಿಸ್ತರಣೆಗೆ ಸಂಸತ್‌ ಒಪ್ಪಿಗೆ

    ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ) ಹಾಗೂ ಜಾರಿ ನಿರ್ದೇಶನಾಲಯ (ಇಡಿ) ನಿರ್ದೇಶಕರ ಅವಧಿಯನ್ನು ಎರಡು ವರ್ಷಗಳಿಂದ ಐದು ವರ್ಷಗಳವರೆಗೆ ವಿಸ್ತರಿಸುವ ಮಸೂದೆಯನ್ನು ಸಂಸತ್ತು ಮಂಗಳವಾರ ಅಂಗೀಕರಿಸಿದೆ.

    ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಮಂಡಿಸಿದ್ದ ʻಕೇಂದ್ರ ವಿಚಕ್ಷಣಾ ದಳ (ತಿದ್ದುಪಡಿ) ಮಸೂದೆ 2021ʼ ಅನ್ನು ಮಂಗಳವಾರ 12 ಸದಸ್ಯರ ಅಮಾನತು ಖಂಡಿಸಿ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆ ನಡುವೆಯೂ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಯಿತು. ಇದನ್ನೂ ಓದಿ: ‘ಸುಶಾಂತ್ ಸ್ಟಾರ್ ಅಲ್ಲ’ ಎಂದು ಸಿನಿಮಾ ಮಾಡಲು ನಿರ್ಮಾಪಕರು ಮುಂದೆ ಬಂದಿರಲಿಲ್ಲ: ಅಭಿಷೇಕ್ ಕಪೂರ್

    ಸಿಬಿಐ ನಿರ್ದೇಶಕರ ಅಧಿಕಾರವಧಿ ವಿಸ್ತರಿಸಲು ದೆಹಲಿ ವಿಶೇಷ ಪೊಲೀಸ್‌ ವ್ಯವಸ್ಥೆ (ತಿದ್ದುಪಡಿ) ಸುಗ್ರೀವಾಜ್ಞೆ-2021 ಮತ್ತು ಇ.ಡಿ ನಿರ್ದೇಶಕರ ಅಧಿಕಾರಾವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲು ಕೇಂದ್ರೀಯ ಜಾಗೃತ ಆಯೋಗ (ತಿದ್ದುಪಡಿ) ಸುಗ್ರೀವಾಜ್ಞೆ-2021 ಅನ್ನು ಕೇಂದ್ರ ಸರ್ಕಾರವು ಈ ಹಿಂದೆ ಹೊರಡಿಸಿತ್ತು. ಅದಕ್ಕೆ ರಾಷ್ಟ್ರಪತಿ ಅವರು ಸಹಿ ಹಾಕಿದ್ದರು.

    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಲ್‍ಎನ್ ರಾವ್ ನೇತೃತ್ವದ ಪೀಠವು, ಜಾರಿ ನಿರ್ದೇಶನಾಲಯದ ಎಸ್.ಕೆ.ಮಿಶ್ರಾ ಅವರ ಅಧಿಕಾರವಧಿಯ ವಿಸ್ತರಣೆ ಸಂಬಂಧ ತೀರ್ಪು ನೀಡಿತ್ತು. ಅಪರೂಪದ ಹಾಗೂ ಅಸಾಧಾರಣ ಪ್ರಕರಣಗಳಲ್ಲಿ ಮಾತ್ರ ಅಧಿಕಾರವಧಿ ವಿಸ್ತರಿಸಬಹುದು ಎಂದು ಪೀಠವು ಒತ್ತಿ ಹೇಳಿತ್ತು. ಇದನ್ನೂ ಓದಿ: ಮಿಸ್ ಯುನಿವರ್ಸ್ ಕಿರೀಟದ ಬೆಲೆ 37 ಕೋಟಿ ರೂ.- ಏನೇನು ವಿಶೇಷತೆ ಇದೆ?

  • ಮಾರ್ಷಲ್‌ಗಳ ಮೇಲೆ ಹಲ್ಲೆ – ರಾಜ್ಯಸಭೆಯ 12 ಸದಸ್ಯರು ಅಮಾನತು

    ಮಾರ್ಷಲ್‌ಗಳ ಮೇಲೆ ಹಲ್ಲೆ – ರಾಜ್ಯಸಭೆಯ 12 ಸದಸ್ಯರು ಅಮಾನತು

    ನವದೆಹಲಿ: ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ  ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಮತ್ತು ತೃಣಮೂಲ ಸಂಸದ ಡೋಲಾ ಸೇನ್ ಸೇರಿದಂತೆ 12  ರಾಜ್ಯಸಭೆಯ ಸದಸ್ಯರನ್ನು ಪ್ರಸಕ್ತ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ.

    ಮುಂಗಾರು ಅಧಿವೇಶನದ ಕೊನೆಯ ದಿನದಂದು ಮೇಲ್ಮನೆಯಲ್ಲಿ ಗದ್ದಲ ಸೃಷ್ಟಿಸಿ ಅಶಿಸ್ತು ತೋರಿದ್ದಕ್ಕೆ ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಾಗಿದೆ.

    ಯಾರೆಲ್ಲ ಅಮಾನತು?
    ಪ್ರಿಯಾಂಕಾ ಚತುರ್ವೇದಿ, ಡೋನಾ ಸೇನ್, ಎಳಮರಮ್ ಕರೀಂ (ಸಿಪಿಎಂ), ಕಾಂಗ್ರೆಸ್‌ನ ಫುಲೋ ದೇವಿ ನೇತಮ್, ಛಾಯಾ ವರ್ಮಾ, ಆರ್ ಬೋರಾ, ರಾಜಮಣಿ ಪಟೇಲ್, ಸೈಯದ್ ನಾಸಿರ್ ಹುಸೇನ್, ಅಖಿಲೇಶ್ ಪ್ರಸಾದ್ ಸಿಂಗ್, ಸಿಪಿಐನ ಬಿನೋಯ್ ವಿಶ್ವಂ, ಟಿಎಂಸಿಯ ಶಾಂತಾ. ಛೆಟ್ರಿ ಮತ್ತು ಶಿವಸೇನೆಯ ಅನಿಲ್ ದೇಸಾಯಿ ಅಮಾನತುಗೊಂಡಿದ್ದಾರೆ.

    ಅಮಾನತು ನೋಟಿಸ್‌ನಲ್ಲಿ ಏನಿದೆ?
    ಮುಂಗಾರು ಅಧಿವೇಶನದ ಕೊನೆಯ ದಿನವಾದ ಆಗಸ್ಟ್‌ 11 ರಂದು ಸಂಸದರು ಭದ್ರತಾ ಸಿಬ್ಬಂದಿಯ ಮೇಲೆ ಉದ್ದೇಶಪೂರ್ವಕವಾಗಿ ದುರ್ನಡತೆ, ಅವಹೇಳನಕಾರಿ, ಅಶಿಸ್ತಿನ ಮತ್ತು ಹಿಂಸಾತ್ಮಕ ನಡವಳಿಕೆ ತೋರಿದ್ದಾರೆ. ಈ ಮೂಲಕ ಸದನದ ಘನತೆಯನ್ನು ಕಡಿಮೆಗೊಳಿಸಿ ಅಪಖ್ಯಾತಿ ತಂದಿದ್ದಾರೆ. ಈ ಕಾರಣದಿಂದ ಈ ಸದಸ್ಯರನ್ನು 255ನೇ ಅಧಿವೇಶನದ ಉಳಿದ ಅವಧಿಗೆ ಸದನದ ಸೇವೆಯಿಂದ ರಾಜ್ಯಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ನಿಯಮ 256 ರ ಅಡಿಯಲ್ಲಿ ಅಮಾನತುಗೊಳಿಸಲಾಗಿದೆ.  ಇದನ್ನೂ ಓದಿ: ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಕೃಷಿ ಕಾಯ್ದೆ ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ: ರಾಹುಲ್ ಗಾಂಧಿ

    ನಡೆದಿದ್ದು ಏನು?
    ಆಗಸ್ಟ್‌ 11 ರಂದು ಸಂಜೆ ಪೆಗಾಸಸ್‌ ವಿಚಾರ ಮತ್ತು  ವಿಮಾ ಖಾಸಗೀಕರಣ ಮಸೂದೆ ಅಂಗೀಕಾರದ ಸಮಯದಲ್ಲಿ ಪ್ರತಿಪಕ್ಷಗಳ ತೀವ್ರ ಆಕ್ರೋಶ ವ್ಯಕ್ತಪಡಿಸಿ ಬಾವಿಗಿಳಿದು ಧರಣಿ, ಗದ್ದಲ ಎಬ್ಬಿಸಿದ್ದರು.  ಈ ವೇಳೆ ವಿಪಕ್ಷಗಳ ಸದಸ್ಯರು ಹಾಗೂ ಮಾರ್ಷಲ್‌ಗಳ ನಡುವೆ ಘರ್ಷಣೆ ನಡೆದಿತ್ತು. ಇದನ್ನೂ ಓದಿ: ಮುಂದಿನ ತಿಂಗಳು ಗೋರಖ್‍ಪುರದಲ್ಲಿ AIIMS ಉದ್ಘಾಟನೆ: ಯೋಗಿ ಆದಿತ್ಯನಾಥ್

    ಹೊರಗಿನವರನ್ನು ಕರೆಸಿ ಸ್ತ್ರೀಯರ ಮೇಲೆ ಹಲ್ಲೆ ಮಾಡಿದ್ದಾರೆ ವಿಪಕ್ಷ ಆರೋಪಿಸಿದ್ದವು. ಆದರೆ ಕೇಂದ್ರ ಸರ್ಕಾರ ಆರೋಪವನ್ನು ನಿರಾಕರಿಸಿ ವಿಪಕ್ಷದವರೇ ದಾಳಿ ನಡೆಸಿದ್ದಾರೆಂದು ಕಿಡಿ ಕಾರಿ ಕಲಾಪದ ವಿಡಿಯೋವನ್ನು ರಿಲೀಸ್‌ ಮಾಡಿತ್ತು.

    ಈ ಸಿಸಿಟಿವಿ ವಿಡಿಯೋದಲ್ಲಿ ಮಹಿಳಾ ಸಂಸದರೇ ಮಾರ್ಷಲ್‌ಗಳ ಮೇಲೆ ಹಲ್ಲೆ ನಡೆಸಿರುವುದು ದೃಢಪಟ್ಟಿತ್ತು. ಕೆಲ ಪುರುಷ ಸದಸ್ಯರು ಮೇಜಿನ ಮೇಲೆ ಹತ್ತಿ ಅಗೌರವ ತಂದಿರುವುದು ಸೆರೆಯಾಗಿತ್ತು.

  • ನಾಳೆಯಿಂದ ಚಳಿಗಾಲದ ಅಧಿವೇಶನ – ಆಡಳಿತ ಪಕ್ಷ ವಿರುದ್ಧ ಮುಗಿಬೀಳಲು ವಿಪಕ್ಷ ತಯಾರಿ

    ನಾಳೆಯಿಂದ ಚಳಿಗಾಲದ ಅಧಿವೇಶನ – ಆಡಳಿತ ಪಕ್ಷ ವಿರುದ್ಧ ಮುಗಿಬೀಳಲು ವಿಪಕ್ಷ ತಯಾರಿ

    ನವದೆಹಲಿ: ನಾಳೆಯಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಈ ಅಧಿವೇಶನ ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿದ್ದು, ಆಡಳಿತ ಪಕ್ಷದ ಕಾರ್ಯವೈಕರಿ ವಿರುದ್ಧ ಮುಗಿಬೀಳಲು ವಿಪಕ್ಷಗಳು ತಯಾರಿ ನಡೆಸಿಕೊಂಡಿವೆ.

    PM MODI

    ಕಲಾಪದ ಮೊದಲ ದಿನವೇ ಮೂರು ವಿವಾದಾತ್ಮಕ ಕೃಷಿ ಕಾಯ್ದೆ ಹಿಂಪಡೆಯುವ ವಿಧೇಯಕವನ್ನು ಕೇಂದ್ರ ಸರ್ಕಾರ ಮಂಡಿಸಲಿದೆ. ಹೀಗಾಗಿ ನಾಳೆಯ ಅಧಿವೇಶನದಲ್ಲಿ ಖಡ್ಡಾಯವಾಗಿ ಹಾಜರು ಇರಬೇಕೆಂದು ಬಿಜೆಪಿ ತನ್ನೆಲ್ಲಾ ಸಂಸದರಿಗೆ ವಿಪ್ ಜಾರಿ ಮಾಡಿದೆ. ಮೂರು ಕಾಯ್ದೆಗಳನ್ನು ಹಿಂಪಡೆಯುವ ಮೂಲಕ ಕೃಷಿಕರ ಹೋರಾಟವನ್ನು ಆದಷ್ಟು ಬೇಗ ಮುಗಿಸುವಂತೆ ಓಲೈಸುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಆದರೆ ಈ ಬಗ್ಗೆ ಚರ್ಚೆಗೆ ಕಾಂಗ್ರೆಸ್ ಪಟ್ಟು ಹಿಡಿಯುವ ಸಂಭವ ಇದೆ. ಇದನ್ನೂ ಓದಿ: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜಾತೀಯತೆ ನಿರ್ಮೂಲನೆಯಾಗಿಲ್ಲ: ಸುಪ್ರೀಂ ಬೇಸರ

    ಕೇಂದ್ರ ಸರ್ಕಾರ ಈ ಹಿಂದೆ ರೈತ ಹೋರಾಟದ ಬಗ್ಗೆ ನೀಡಿದ್ದ ಹೇಳಿಕೆಗಳನ್ನು ಉಲ್ಲೇಖಿಸಿ, ರೈತರ ಜೊತೆ ಯಾವುದೇ ಚರ್ಚೆ ನಡೆಸದೇ, ಸಂಪುಟದ ಅನುಮೋದನೆ ಪಡೆಯದೇ ಮೋದಿ ಮಾಡಿದ ಪ್ರಕಟಣೆಯನ್ನು ಕಾಂಗ್ರೆಸ್ ಪ್ರಶ್ನಿಸಿ, ಕೇಂದ್ರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್ ತಯಾರಿ ನಡೆಸಿದೆ. ಹೀಗಾಗಿಯೇ ಉಭಯ ಸದನಗಳಲ್ಲಿ ಎಲ್ಲಾ ಸದಸ್ಯರು ಕಡ್ಡಾಯವಾಗಿ ಹಾಜರು ಇರಬೇಕೆಂದು ಎರಡು ಸಾಲಿನ ವಿಪ್ ಜಾರಿ ಮಾಡಿದೆ. ಇನ್ನೂ ಕ್ರಿಪ್ಟೋ ಕರೆನ್ಸಿ ಬಿಲ್, ಎರಡು ರಾಷ್ಟ್ರೀಕೃತ ಬ್ಯಾಂಕ್‍ಗಳ ಖಾಸಗೀಕರಣ ವಿಧೇಯಕ ಸೇರಿ ಒಟ್ಟು 26 ವಿಧೇಯಕಗಳಿಗೆ ಅನುಮೋದನೆ ಪಡೆಯಲು ಕೇಂದ್ರ ಪ್ಲಾನ್ ಮಾಡಿಕೊಂಡಿದೆ. ಇದನ್ನೂ ಓದಿ: ತ್ರಿಪುರ ಸ್ಥಳೀಯ ಸಂಸ್ಥೆಗಳ ಚುನಾವಣೆ: 334ಕ್ಕೆ 329 ಸ್ಥಾನಗಳಲ್ಲಿ ಬಿಜೆಪಿ ಗೆಲುವು, ಎಎಂಸಿಯಲ್ಲಿ ʼಕಮಲʼ ಕ್ಲೀನ್‌ಸ್ವೀಪ್‌

  • ಅತ್ಯಾಚಾರಿಗಳ ಲೈಂಗಿಕ ಶಕ್ತಿಗೆ ಕತ್ತರಿ ಶಿಕ್ಷೆ

    ಅತ್ಯಾಚಾರಿಗಳ ಲೈಂಗಿಕ ಶಕ್ತಿಗೆ ಕತ್ತರಿ ಶಿಕ್ಷೆ

    – ಪಾಕ್ ಸಂಸತ್ತಿನಲ್ಲಿ ಮಸೂದೆ ಅಂಗೀಕಾರ

    ಇಸ್ಲಾಮಾಬಾದ್: ಪದೇ-ಪದೇ ಅತ್ಯಾಚಾರ ಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮಕ್ಕೆ ಪಾಕಿಸ್ತಾನ ಮುಂದಾಗಿದೆ. ಇಂಥ ಕೃತ್ಯಗಳಲ್ಲಿ ಆಗ್ಗಾಗ್ಗೆ ಭಾಗಿಯಾಗಿ ಬಂಧನಕ್ಕೊಳಗಾಗುವವರಿಗೆ ಲೈಂಗಿಕ ಉತ್ಸಾಹವನ್ನೇ ಕುಂಠಿತ ಗೊಳಿಸುವ ಶಿಕ್ಷೆಗೆ ಗುರಿ ಪಡಿಸಲು ನಿರ್ಧರಿಸಿದೆ.

    ಅತ್ಯಾಚಾರ ಪ್ರಕರಣಗಳ ತ್ವರಿತ ತನಿಖೆ, ಸಾಕ್ಷ್ಯ ಸಂಗ್ರಹ, ವಿಚಾರಣೆ ಪೂರ್ಣ ಮತ್ತು ಲೈಂಗಿಕ ಶಕ್ತಿ ಕುಂಠಿತಗೊಳಿಸುವ ಶಿಕ್ಷೆ ಜಾರಿ ಸೇರಿದಂತೆ ಮಹತ್ವದ ಅಂಶಗಳನ್ನು ಒಳಗೊಂಡ ಮಸೂದೆಗೆ ಪಾಕ್ ಸಂಸತ್ ಬುಧವಾರ ಅಂಗೀಕಾರ ನೀಡಿದೆ. ಇದನ್ನೂ ಓದಿ: ತಿರುಪತಿಯಲ್ಲಿ ಪ್ರವಾಹ- ಜಲಪಾತದಂತೆ ಧುಮ್ಮಿಕ್ಕುತ್ತಿದೆ ಮಳೆ ನೀರು, ಕೊಚ್ಚಿ ಹೋಗ್ತಿವೆ ವಾಹನಗಳು!

    ಪಾಕ್‍ನಲ್ಲಿ ಅತ್ಯಚಾರ ಪ್ರಕರಣದ ದೋಷಿಗಳಿಗೆ 20-25 ವರ್ಷ ಜೈಲು ಅಥವಾ ಮರಣದಂಡನೆ ವಿಧಿಸುವ ಅವಕಾಶ ಇದೆ. ಆದರೆ ಸಾವಿರಾರು ಅತ್ಯಾಚಾರ ಪ್ರಕರಣ ದಾಖಲಾದರೂ ಶಿಕ್ಷೆ ಜಾರಿಯಾಗುವ ಪ್ರಮಾಣ ಕೇವಲ ಶೇ.3 ಕ್ಕಿಂತ ಕಡಿಮೆ ಇದೆ. ಇದನ್ನೂ ಓದಿ: ಸೋನಿಯಾ ಮಗಳು, ಉಪೇಂದ್ರ ಪತ್ನಿ ಹೆಸರು ಪ್ರಿಯಾಂಕಾ ಆದ್ರೆ ಖರ್ಗೆ ಪುತ್ರ ಯಾವ ಪ್ರಿಯಾಂಕ: ಪ್ರತಾಪಸಿಂಹ ಪ್ರಶ್ನೆ

    RAPE CASE

    ಜೊತೆಗೆ ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಮಕ್ಕಳು ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣ ಹೆಚ್ಚುತ್ತಿದೆ. ಈ ಬಗ್ಗೆ ದೇಶದಾದ್ಯಂತ ಭಾರೀ ಪ್ರತಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇಂಥ ಕಠಿಣ ಕ್ರಮಕ್ಕೆ ಮುಂದಾಗಿದೆ. ಈ ಶಿಕ್ಷೆ ಯನ್ನು ಕೆಲವೊಂದು ರಾಸಾಯನಿಕ ಬಳಸಿ ಇಂಜೆಕ್ಷನ್ ಮೂಲಕ ಜಾರಿಗೊಳಿಸಲಾಗುತ್ತದೆ. ಶಿಕ್ಷೆ ಈಗಾಗಲೇ ದಕ್ಷಿಣ ಕೊರಿಯಾ, ಪೊಲೆಂಡ್, ಅಮೆರಿಕಾದ ಕೆಲ ರಾಜ್ಯಗಳು ಜೆಕ್‍ರಿಪಬ್ಲಿಕ್ ಮೊದಲಾದ ದೇಶಗಳಲ್ಲಿ ಜಾರಿಯಲ್ಲಿದೆ.

  • ರಾಹುಲ್ ಗಾಂಧಿ ಬ್ರೇಕ್‍ಫಾಸ್ಟ್ ಮೀಟಿಂಗ್ – ಸಂಸತ್‍ವರೆಗೂ ಸೈಕಲ್ ಮಾರ್ಚ್

    ರಾಹುಲ್ ಗಾಂಧಿ ಬ್ರೇಕ್‍ಫಾಸ್ಟ್ ಮೀಟಿಂಗ್ – ಸಂಸತ್‍ವರೆಗೂ ಸೈಕಲ್ ಮಾರ್ಚ್

    ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯೋಜಿಸಿರುವ ಉಪಹಾರ ಕೂಟದಲ್ಲಿ ವಿಪಕ್ಷ ನಾಯಕರು ಸೇರಿದ್ದು, ಚರ್ಚೆ ನಡೆಸುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್, ಶಿವಸೇನೆ, ಸಮಾವಾದಿ ಪಾರ್ಟಿ ಸೇರಿದಂತೆ ಅನೇಕ ವಿಪಕ್ಷ ನಾಯಕರು ಉಪಹಾರ ಕೂಟದಲ್ಲಿ ಭಾಗಿಯಾಗಿದ್ದಾರೆ.

    ಈ ಬಾರಿಯ ಅಧಿವೇಶನದಲ್ಲಿ ವಿಪಕ್ಷಗಳು ಪೆಗಾಸಸ್ ಗೂಢಚಾರಿಕೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ. ಕಾಂಗ್ರೆಸ್ ಸೇರಿದಂತೆ ಅನೇಕ ವಿಪಕ್ಷಗಳು ಈ ಸಂಬಂಧ ಚರ್ಚೆಗೆ ಆಗ್ರಹಿಸುತ್ತಿವೆ. ವಿಪಕ್ಷಗಳ ಒಗ್ಗಟ್ಟು ಪ್ರದರ್ಶಿಸಲು ರಾಹುಲ್ ಗಾಂಧಿ ಉಪಹಾರಕೂಟ ಆಯೋಜಿಸಿದ್ದರು ಎಂದು ವರದಿಯಾಗಿದೆ.

    ಉಪಹಾರ ಕೂಟದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ವಿಪಕ್ಷಗಳ ಮಧ್ಯೆ ಏನೇ ವಾದಗಳಿರಬಹುದು. ಆದ್ರೆ ಅಧಿವೇಶನದಲ್ಲಿ ಎಲ್ಲರೂ ಒಟ್ಟಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಕುರಿತು ಧ್ವನಿ ಎತ್ತಬೇಕಿದೆ. ಹಾಗಾಗಿ ಸಭೆ ಬಳಿಕ ಎಲ್ಲರೂ ಸೈಕಲ್ ಮೂಲಕ ಅಧಿವೇಶನಕ್ಕೆ ತೆರಳೋಣ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಮಾತಿನಂತೆ ವಿಪಕ್ಷ ನಾಯಕರು ಸೈಕಲ್ ಮೇಲೆ ಸಂಸತ್ ಬಂದು ತೈಲ ಬೆಲೆ ಏರಿಕೆಯನ್ನು ಖಂಡಿಸಿದರು.

    ಸರ್ಕಾರ ನಮ್ಮ ಮಾತುಗಳನ್ನು ಕೇಳಿಸಿಕೊಳ್ಳುತ್ತಿಲ್ಲ. ನಮ್ಮ ಪ್ರತಿಭಟನೆ ರಸ್ತೆಯಿಂದ ಸಂಸತ್ ವರೆಗೂ ನಡೆಯಬೇಕು. ಅದೇ ರೀತಿ ಸದನದಲ್ಲಿ ಕೊರೊನಾ ಮತ್ತು ಪೆಗಾಸಸ್ ಸಂಬಂಧ ಸುಧೀರ್ಘ ಚರ್ಚೆ ನಡೆಯಬೇಕಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಇದನ್ನೂ ಓದಿ: 2024ಕ್ಕೆ ಭಾರತದ ಪ್ರಧಾನಿ ಮಹಿಳೆಯಾಗಲಿ: ಜಯಾ ಬಚ್ಚನ್

    ರಾಹುಲ್ ಗಾಂಧಿ ಉಪಹಾರಕೂಟದಲ್ಲಿ ಭಾಗಿಯಾದ ಪಕ್ಷಗಳು: INC, NCP, SS, RJD, SP, CPIM, CPI, IUML, RSP, KCM, JMM, NC, TMC,LJD

  • ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ- ಸುಮಲತಾ

    ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ- ಸುಮಲತಾ

    – ಮೈಶುಗರ್ ಕಾರ್ಖಾನೆ ಈ ವರ್ಷ ಆರಂಭ

    ಮಂಡ್ಯ: ರಾಜಕೀಯ ವಿರೋಧ ಎಷ್ಟೇ ಇದ್ದರು ಸಹ ನಾನು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ, ನಾನು ಕೊಟ್ಟ ಮಾತಿನ ಪ್ರಕಾರ ನಡೆದುಕೊಳ್ಳುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

     

    ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೇಂದ್ರ ಪುರಸ್ಕೃತ ಅಮೃತ್ ಯೋಜನೆಯ ಕಾಮಗಾರಿಗಳನ್ನು ಸುಮಲತಾ ಅಂಬರೀಶ್ ವೀಕ್ಷಣೆ ಮಾಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಶುಗರ್ ಕಾರ್ಖಾನೆ ಈ ವರ್ಷ ಆರಂಭವಾಗುತ್ತದೆ. ಪ್ರತಿಯೊಂದು ವಿಷಕ್ಕೂ ವಿರೋಧಗಳು ಇರುತ್ತವೆ. ಇದರ ಬಗ್ಗೆ ತಲೆಕೆಡಿಸಿಕೊಂಡರೇ ಯಾವುದೇ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

    ನಾನು ಜನರಿಗೆ ಮಾತು ಕೊಟ್ಟಿರುವ ಪ್ರಕಾರ ಮೈಶುಗರ್ ಕಾರ್ಖಾನೆ ಪುನಾರಂಭವಾಗುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರದ ಮೇಲು ಒತ್ತಡ ತರುತ್ತಿದ್ದೇನೆ. ಟೆಂಡರ್‍ನಲ್ಲಿ ಸ್ಪಲ್ಪ ವ್ಯತ್ಯಾಸ ಆಗಿದೆ. ಇದು ಸರಿ ಪಡಿಸಿಕೊಂಡು ಕಾರ್ಖಾನೆಯ ಆರಂಭ ಮಾಡಲಾಗುತ್ತದೆ. ಈ ವರ್ಷದಲ್ಲಿ ಮೈಶುಗರ್ ಆರಂಭವಾಗುತ್ತದೆ. ಇದರಿಂದ ರೈತರಿಗೆ ಒಳ್ಳೆಯದು ಆಗಲಿದೆ ಎಂದು ತಿಳಿಸಿದ್ದಾರೆ.

  • ಈ ಬಾರಿಯ ಚಳಿಗಾಲದ ಅಧಿವೇಶನ ನಡೆಯಲ್ಲ: ಪ್ರಹ್ಲಾದ್ ಜೋಶಿ

    ಈ ಬಾರಿಯ ಚಳಿಗಾಲದ ಅಧಿವೇಶನ ನಡೆಯಲ್ಲ: ಪ್ರಹ್ಲಾದ್ ಜೋಶಿ

    ನವದೆಹಲಿ: ಕೊರೊನಾ ಎರಡನೇ ಅಲೆ ಹಿನ್ನೆಲೆ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನಡೆಸದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಆದರೆ ಇದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

    ಈ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಸೋಮವಾರ ಪತ್ರದ ಮೂಲಕ ಸ್ಪಷ್ಟಪಡಿಸಿದ್ದು, ಕೊರೊನಾ ಹರಡುವ ಭೀತಿಯಿಂದ ಚಳಿಗಾಲದ ಅಧಿವೇಶನವನ್ನು ನಡೆಸಲಾಗುತ್ತಿಲ್ಲ. ಅಲ್ಲದೆ ಒಮ್ಮೆಲೆ ಜನವರಿಯಲ್ಲಿ ಬಜೆಟ್ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಕಾಂಗ್ರೆಸ್ ಲೋಕಸಭಾ ನಾಯಕ ಅಧೀರ್ ರಂಜನ್ ಚೌಧರಿ ಅವರು ಚಳಿಗಾಲದ ಅಧಿವೇಶನ ನಡೆಸಬೇಕು. ಅಲ್ಲದೆ ರೈತರ ಕಾನೂನುಗಳ ಬಗ್ಗೆ ಚರ್ಚೆ ನಡೆಸಬೇಕು. ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದಕ್ಕೆ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಪತ್ರದ ಮೂಲಕ ಪ್ರತಿಕ್ರಿಯಿಸಿದ್ದಾರೆ. ಕೊರೊನಾ ಹಿನ್ನೆಲೆ ಚಳಿಗಾಲದ ಅಧಿವೇಶನ ನಡೆಸುತ್ತಿಲ್ಲ ಎಂದು ತಿಳಿಸಿದ್ದಾರೆ.

    ಈ ಕುರಿತು ಎಲ್ಲ ಪಕ್ಷಗಳ ಮುಖಂಡರೊಂದಿಗೆ ಚರ್ಚೆ ನಡೆಸಲಾಗಿದೆ. ಕೊರೊನಾ ಹಿನ್ನೆಲೆ ಅಧೀವೇಶನ ನಡೆಸದಿರಲು ಒಮ್ಮತವಿದೆ. ಸೆಪ್ಟೆಂಬರ್ ನಲ್ಲಿ ನಡೆದ ಮಾನ್ಸೂನ್ ಅಧಿವೇಶದ ಸಂದರ್ಭದಲ್ಲಿ ಹಲವರಿಗೆ ಸೋಂಕು ತಗುಲಿರುವುದು ಪತ್ತೆಯಾಗಿತ್ತು ಎಂದು ಜೋಷಿ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ. 10 ನಿರಂತರ ಸಭೆಯಲ್ಲಿ 27 ಮಸೂದೆಗಳನ್ನು ಸರ್ಕಾರ ಪಾಸ್ ಮಾಡಿದೆ. ಇವುಗಳ ಪೈಕಿ ಮೂರು ರೈತರ ಬಗೆಗಿನ ಕಾನೂನುಗಳು ಆಕ್ರೋಶಕ್ಕೆ ಕಾರಣವಾಗಿದ್ದು, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

    ಕೊರೊನಾ ವೈರಸ್ ನಿಯಂತ್ರಣಕ್ಕೆ ಚಳಿಗಾಲದ ತಿಂಗಳುಗಳು ನಿರ್ಣಾಯಕವಾಗಿದ್ದು, ಈ ಅವಧಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ದೆಹಲಿಯಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ ಎಂದು ಜೋಷಿ ಅವರು ತಮ್ಮ ಪತ್ರದಲ್ಲಿ ಬರೆದಿದ್ದಾರೆ.