Tag: Parties

  • ಚುನಾವಣಾ ಪ್ರಚಾರ ಸಭೆಗೆ ಬಾಡಿಗೆ ವಾಹನದಲ್ಲಿ ಜನ ಕರೆತರುವಂತಿಲ್ಲ: ಹೈಕೋರ್ಟ್

    ಚುನಾವಣಾ ಪ್ರಚಾರ ಸಭೆಗೆ ಬಾಡಿಗೆ ವಾಹನದಲ್ಲಿ ಜನ ಕರೆತರುವಂತಿಲ್ಲ: ಹೈಕೋರ್ಟ್

    ಚೆನ್ನೈ: ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರ ಸಭೆಗಳಿಗೆ ಜನರನ್ನು ಬಾಡಿಗೆ ವಾಹನದ ಮೂಲಕ ಕರೆ ತರುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ.

    ಮದುರೈ ಮೂಲದ ಕಾರ್ಯಕರ್ತ ಕೆ.ವಿ.ರಮೇಶ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ನ್ಯಾ.ಕಿರುಬಕರನ್ ಮತ್ತು ನ್ಯಾ.ಎಸ್‍ಎಸ್ ಸುಂದರ್ ಅವರಿದ್ದ ದ್ವಿಸದಸ್ಯ ಪೀಠ ಈ ಆದೇಶವನ್ನು ಪ್ರಕಟಿಸಿದ್ದಾರೆ.

    ಲೋಕಸಭೆ ಚುನಾವಣಾ ಪ್ರಚಾರ ಸಭೆಗಳಿಗೆ ರಾಜಕೀಯ ಪಕ್ಷಗಳು ಜನರನ್ನು ಸೇರಿಸಲು ಅವರನ್ನು ಬಾಡಿಗೆ ರೂಪದ ಟ್ರಕ್, ಬಸ್ ಹಾಗೂ ವ್ಯಾನ್‍ಗಳಲ್ಲಿ ಕರೆತರುವಂತಿಲ್ಲ. ಈ ಸಂಬಂಧ ಮಾರ್ಚ್ 27ರೊಳಗೆ ಈ ಆದೇಶಕ್ಕೆ ತಮ್ಮ ಪ್ರತಿಕ್ರಿಯೆಯನ್ನು ತಿಳಿಸಬೇಕೆಂದು ರಾಜಕೀಯ ಪಕ್ಷಗಳಿಗೆ ಕೋರ್ಟ್ ಸೂಚನೆ ನೀಡಿದೆ.

    ಇದರ ಜೊತೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್ ಬ್ಯಾನರ್ ಹಾಕುವಂತಿಲ್ಲ ಎಂದು ರಾಜಕೀಯ ಪಕ್ಷಗಳಿಗೆ ಮಧ್ಯಂತರ ಆದೇಶ ಹೊರಡಿಸಿ ತಾಕೀತು ಮಾಡಿದೆ. ಈ ವೇಳೆ ವೋಟಿಗಾಗಿ ಹಣವನ್ನು ಪಡೆದುಕೊಂಡವರು ಮತ್ತು ಹಣವನ್ನು ನೀಡಿದವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕೆಂದು ಕೋರ್ಟ್ ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

    2016ರ ತಮಿಳುನಾಡು ಚುನಾವಣೆಯ ವೇಳೆ ಪಕ್ಷ ಒಂದರ ಬಹಿರಂಗ ಸಭೆಯ ವೇಳೆ ವ್ಯಕ್ತಿಯೊಬ್ಬರು ಮೃತಪಟ್ಟಿದ್ದರು. ಸಿಎಂ ಜಯಲಲಿತಾ ಅವರ ಪ್ರಚಾರದ ವೇಳೆ ತಾಪಮಾನ ಜಾಸ್ತಿ ಇದೆ ಎನ್ನುವ ಕಾರಣಕ್ಕೆ ಬಹಿರಂಗ ಸಭೆ ತಡವಾಗಿ ಆರಂಭವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೈ ಮುಗಿದು ಕೇಳ್ಕೊತೀನಿ, ಮಹದಾಯಿಗಾಗಿ ಪಕ್ಷಭೇದ ಮರೆತು ಹೋರಾಡೋಣ: ಡಿಕೆಶಿ

    ಕೈ ಮುಗಿದು ಕೇಳ್ಕೊತೀನಿ, ಮಹದಾಯಿಗಾಗಿ ಪಕ್ಷಭೇದ ಮರೆತು ಹೋರಾಡೋಣ: ಡಿಕೆಶಿ

    ಬೆಂಗಳೂರು: ಮಹದಾಯಿಗಾಗಿ ಪಕ್ಷಭೇದ ಮರೆತು ಹೋರಾಡೋಣ ಎಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರು ಎಲ್ಲಾ ಪಕ್ಷಗಳ ಮುಖಂಡರುಗಳಲ್ಲಿ ಕೈ ಮುಗಿದು ಕೇಳಿಕೊಂಡರು.

    ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಮ್ಮ ರಾಜ್ಯದ ಹಿತ ಕಾಪಾಡಲು, ನಾವು ಏನು ಬೇಕಾದರೂ ತ್ಯಾಗ ಮಾಡಲು ಸಿದ್ಧರಿದ್ದು, ಮಹದಾಯಿಗಾಗಿ ಹೋರಾಟ ಮಾಡಲು ನಾವು ಬದ್ಧರಾಗಿದ್ದೇವೆ. ಈ ಕುರಿತು ಎಲ್ಲಾ ಪಕ್ಷದ ಮುಖಂಡರಿಗೆ ನಾನು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಮಹಾದಾಯಿಗಾಗಿ ಎಲ್ಲರೂ ಪಕ್ಷಭೇದ ಮರೆತು ಹೋರಾಟ ಮಾಡೋಣ. ಇದರಲ್ಲಿ ರಾಜಕೀಯ ಮಾಡುವುದು ಬೇಡ. ನಮ್ಮ ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಮನಸ್ಸಿನಲ್ಲಿಟ್ಟುಕೊಂಡು ನಾವು ಮುಂದುವರಿಯಬೇಕಾಗಿದೆ. ಒಂದು ತೊಟ್ಟು ನೀರನ್ನು ಉಳಿಸಿಕೊಳ್ಳಲು, ನಾವೆಲ್ಲಾ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಹೇಳಿದರು. ಇದನ್ನೂ ಓದಿ: ಮಹದಾಯಿ ನದಿ ನೀರಿಗೆ ಗೋವಾ ಕ್ಯಾತೆ ಯಾಕೆ? ಆರಂಭದಿಂದ ಇಲ್ಲಿಯವರೆಗೆ ಏನಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

    ಮಹದಾಯಿ ವಿಚಾರದಲ್ಲಿ ನ್ಯಾಯಾಧೀಕರಣದ ಐ-ತೀರ್ಪಿನಿಂದಾಗಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಾರದಲ್ಲಿ ಹಿರಿಯ ಅಧಿಕಾರಿಗಳ ತಂಡದ ಜೊತೆ ಮಹಾದಾಯಿಗೆ ಭೇಟಿ ಮಾಡಿ ಪರಿಶೀಲನೆ ನಡೆಸುತ್ತೇವೆ. ಈ ಸಂಬಂಧ ಮುಖ್ಯಮಂತ್ರಿ ಕುಮಾರಸ್ವಾಮಿಗಳೊಂದಿಗೆ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಸಿದ್ಧತೆ ಮಾಡಿಕೊಳ್ಳುತ್ತೇವೆ. ಬೇರೆ ರಾಜ್ಯದ ನಡೆ ನಮಗೆ ಬೇಡದ ವಿಚಾರವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮಹದಾಯಿ ನ್ಯಾಯಾಧೀಕರಣದ ಐತೀರ್ಪಿಗೆ ಗೋವಾ-ಮಹಾರಾಷ್ಟ್ರ ವಿರೋಧ

    ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ಹೋಗುತ್ತೀರಾ ಎಂದು ಪ್ರಶ್ನಿಸಿದಾಗ, ಯಾವುದೇ ಪ್ರತಿಕ್ರಿಯೆ ನೀಡದೇ ಪ್ರಶ್ನೆ ಕೇಳುತ್ತಲೇ ಸ್ಥಳದಿಂದ ತರಾತುರಿಯಲ್ಲಿ ಸಚಿವರು ಹೊರಟು ಹೋಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv