ಬಣ್ಣದ ಲೋಕದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿರುವ ಬಹುಭಾಷಾ ನಟಿ ಪಾರುಲ್ ಹಾಟ್ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ನಟಿಯ ಬೋಲ್ಡ್ ಲುಕ್ಕಿಗೆ ಫ್ಯಾನ್ಸ್ ಕೂಡ ಬೋಲ್ಡ್ ಆಗಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕನ್ನಡದ ಬಚ್ಚನ್, ಆಟಗಾರ, ಜೆಸ್ಸಿ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ಪಾರುಲ್ ಯಾದವ್, ಬೆಳ್ಳಿಪರದೆಯಲ್ಲಿ ಸಾಕಷ್ಟು ಸ್ಟಾರ್ ನಟರ ಜತೆ ತೆರೆಹಂಚಿಕೊಂಡಿದ್ದಾರೆ. ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಪಾರುಲ್ ಅಪಾರ ಅಭಿಮಾನಿಗಳ ಬಳಗವಿದೆ. ಸಿನಿಮಾಗಳ ಮಧ್ಯೆ ಟ್ರಾವೆಲಿಂಗ್ ಬಗ್ಗೆ ಹೆಚ್ಚು ಆಸಕ್ತಿ ಇರುವ ನಟಿ ಈಗ ಇದೀಗ ಹಾಟ್ ಫೋಟೋಶೂಟ್ನಲ್ಲಿ ಪಾರುಲ್ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಸರಕಾರಕ್ಕೆ ಟೀಸರ್ ಮೂಲಕ ಟಾಂಗ್ ಕೊಟ್ಟ ಟಾಲಿವುಡ್ ಬಾಲಕೃಷ್ಣ
ಗ್ರೀನ್ ಕಲರ್ ಚೆಂದದ ಡ್ರೆಸ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹೊಸ ಲುಕ್ ಮೂಲಕ ಪಾರುಲ್ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಪಾರುಲ್ ನಯಾ ಲುಕ್ ನೋಡಿರೋ ಹುಡುಗರ ಹಾರ್ಟ್ ಬೀಟ್ ಜೋರಾಗಿದೆ. ಇತ್ತೀಚೆಗಷ್ಟೇ (ಜೂ.5)ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈಗ ಹೊಸ ಲುಕ್ ಶೇರ್ ಮಾಡುವ ಮೂಲಕ ಬರ್ತಡೇ ಶುಭಾಶಯ ತಿಳಿಸಿದ ಅಭಿಮಾನಿಗಳಿಗೆ ಪಾರುಲ್ ಧನ್ಯವಾದ ತಿಳಿಸಿದ್ದಾರೆ. ಇನ್ನು ನೆಚ್ಚಿನ ನಟಿಯ ಮುಂಬರುವ ಸಿನಿಮಾಗಾಗಿ ಕಾಯ್ತಿದ್ದಾರೆ.
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಪಾರುಲ್ ಯಾದವ್ ಹಾಟ್ ಫೋಟೋ ಶೂಟ್ ಮಾಡಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತೀರುವ ಫೋಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಕಲರ್ಫುಲ್ ಆದಂತಹ ಫೋಟೋಶೂಟ್‍ಗಳ ಮೂಲಕ ಅವರು ಆಗಾಗ ಗಮನ ಸೆಳೆಯುತ್ತಾರೆ. ಇತ್ತೀಚೆಗೆ ಪಾರುಲ್ ಯಾದವ್ ಮಾಡಿಸಿರುವ ಹೊಸ ಫೋಟೋಶೂಟ್ ಕೂಡ ಆಕರ್ಷಕವಾಗಿದೆ. ಗ್ಲಾಮರಸ್ ಲುಕ್‍ನಲ್ಲಿ ಪಾರುಲ್ ಮಿಂಚಿದ್ದಾರೆ. ತಿಳಿ ನೀಲಿ ಬಣ್ಣದ ಉಡುಗೆ ಧರಿಸಿ, ಪಡ್ಡೆಗಳ ನಿದ್ದೆ ಕೆಡಿಸಿದ್ದಾರೆ.
ನಟಿ ಪಾರುಲ್ ಯಾದವ್ ಅವರಿಗೆ ಬಹುಭಾಷೆಯಲ್ಲಿ ಅಭಿಮಾನಿಗಳಿದ್ದಾರೆ. ಕನ್ನಡದಲ್ಲಿ ಹೆಚ್ಚು ಸಿನಿಮಾಗಳನ್ನು ಮಾಡಿದ ಅವರು ಮೂಲತಃ ಮುಂಬೈನವರು. ಕಿಚ್ಚ ಸುದೀಪ್, ಉಪೇಂದ್ರ ಮುಂತಾದ ಸ್ಟಾರ್ ನಟರ ಜೊತೆ ತೆರೆ ಹಂಚಿಕೊಳ್ಳುವ ಚಾನ್ಸ್ ಅವರಿಗೆ ಸಿಕ್ಕಿತ್ತು. 2000ನೇ ಇಸವಿಯಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಪಾರುಲ್‍ಗೆ ಒಂದು ದಶಕದ ಅನುಭವ ಇದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಅವರು ಸಿನಿಮಾ ಆಯ್ಕೆ ಮಾಡಿಕೊಳ್ಳಲು ವಿಳಂಬ ಮಾಡುತ್ತಿದ್ದಾರೆ. ಹಾಗಂತ ಅವರು ಅಭಿಮಾನಿಗಳಿಂದ ದೂರ ಇಲ್ಲ. ಸೋಶಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಜೊತೆ ಪಾರುಲ್ ಸದಾ ಸಂಪರ್ಕದಲ್ಲಿ ಇರುತ್ತಾರೆ.
2018ರ ಬಳಿಕ ಪಾರುಲ್ ಯಾವುದೇ ಸಿನಿಮಾದಲ್ಲೂ ಕಾಣಿಸಿಕೊಂಡಿಲ್ಲ. ಹೊಸ ಚಿತ್ರದ ಮೂಲಕವಾಗಿ ಮತ್ತೆ ಪರದೆ ಮೇಲೆ ಬರುತ್ತೇನೆ ಎಂದು ಹೇಳುತ್ತಾರೆ. ಪಾರುಲ್ ಇದೀಗ ಹೊಸ ಫೋಟೋಶೂಟ್ ಇವರ ಮುಂದಿನ ಚಿತ್ರದ್ದಾ ಎಂಬುವ ಕುರಿತಾಗಿ ತಿಳಿದುಬರಬೇಕಿದೆ.
ಹೌದು, ಇತ್ತೀಚೆಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಉತ್ತರಪ್ರದೇಶ ಹತ್ರಾಸ್ ಗ್ರಾಮದ ಯುವತಿಯ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಅಲ್ಲದೇ ಪೋಷಕರಿಗೂ ಮಗಳ ಮುಖವನ್ನು ತೋರಿಸಿದ ರಾತ್ರೋರಾತ್ರಿ ಪೊಲೀಸರೇ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಬಗ್ಗೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆಯ ಕುರಿತು ನಟ-ನಟಿಯರು ಸೇರಿದಂತೆ ಅನೇಕರು ಸೋಶಿಯಲ್ ಮೀಡಿಯಾದ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ
ಇದೀಗ ಗ್ಯಾಂಗ್‍ರೇಪ್ ಸಂತ್ರಸ್ತೆಯ ಸಾವಿನಿಂದ ನೊಂದ ನಟಿ ಪಾರುಲ್ ಯಾದವ್ ತಾಯಿಯಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ, “ತಾಯಿಯಾಗುವುದು ಹೆಣ್ತನದ ಸಾರಾಂಶ. ಆದರೆ ಇಂದು ನಾನು ಅಮ್ಮನಾಗಲು ಬಯಸುವುದಿಲ್ಲ. ಒಬ್ಬ ಹೆಣ್ಣಾಗಿ ಈ ರೀತಿ ಹೇಳುವುದು ತುಂಬಾ ಕಷ್ಟವಾಗಿದೆ. ಆದರೆ ನನ್ನ ಮಾತೃತ್ವವನ್ನು ತ್ಯಜಿಸುತ್ತಿದ್ದೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ” ಎಂದಿದ್ದಾರೆ.
Being a mother is the epitome of womanhood but, today I don't want to be a mother. It's the most difficult thing for a girl to say but I swear I'm giving up my motherhood. What if my child is a girl?? This country is brutal for women – all around.
ಅಲ್ಲದೇ, “ಒಂದು ವೇಳೆ ನನ್ನ ಮಗು ಹೆಣ್ಣಾದರೆ ಏನು ಮಾಡುವುದು? ಈ ದೇಶ ಎಲ್ಲ ಕಡೆಯಲ್ಲೂ ಹೆಣ್ಣಿಗೆ ಕೆಟ್ಟದಾಗಿಯೇ ಇದೆ” ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.
“ಹತ್ರಾಸ್‍ನಲ್ಲಿ ನಡೆದ ಭಯಾನಕ ಘಟನೆಯೇ ಇದಕ್ಕೆ ಇತ್ತೀಚಿನ ಉದಾಹರಣೆಯಾಗಿದೆ. ಕಾರಣಗಳು ಬೇರೆಯಾಗಿರಬಹುದು. ಆದರೆ ಯಾವಾಗಲೂ ಮಹಿಳೆಯರಿಗೆ ತೊಂದರೆ ಆಗುತ್ತದೆ. ಅದರಿಂದ ಆಕೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ನಟಿ ಪಾರುಲ್ ಯಾದವ್ ಹೇಳಿದ್ದಾರೆ.
The horrible horrific horror at #Hathras is just the latest example. The reasons vary but, the brunt is always borne by women. There is no escape. #JusticeForManishaValmiki
ಹತ್ರಾಸ್ ಪ್ರಕರಣ?
ಇದೇ ತಿಂಗಳ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮ ಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದಾರೆ. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಮೃತಪಟ್ಟಿದ್ದಳು.
ಯುವತಿ ಸಾವನ್ನಪ್ಪಿದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ಮಧ್ಯೆ ಉತ್ತರಪ್ರದೇಶದ ಪೊಲೀಸರು ಯುವತಿಯ ಕುಟುಂಬಕ್ಕೆ ತಿಳಿಯದಂತೆ ಮೃತದೇಹವನ್ನು ಆಸ್ಪತ್ರೆಯಿಂದ ಶಿಫ್ಟ್ ಮಾಡಿದ್ದಾರೆ ಎಂದು ಸಹೋದರ ಗಂಭೀರವಾಗಿ ಆರೋಪ ಮಾಡಿದ್ದಾರೆ. ಯುವತಿಯ ತಂದೆ ಹಾಗೂ ಸಹೋದರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನಮಗೆ ಗೊತ್ತಾಗಂದೆ ಪೊಲೀಸರು ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿದ್ದಾರೆ ಎಂದು ಕೂಡ ಸಹೋದರ ದೂರಿದ್ದರು.
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿಯನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಪಾರೂಲ್ ಯಾದವ್ ಗರಂ ಆಗಿದ್ದು, ಇದೀಗ ಇವರ ಬೆನ್ನಿಗೆ ಶೃತಿ ಹರಿಹರನ್ ಕೂಡ ನಿಂತಿದ್ದಾರೆ.
ನಟಿ ಪಾರೂಲ್ ಆಕ್ರೋಶ ವ್ಯಕ್ತಪಡಿಸಿ ಮಾಡಿರುವ ಪೋಸ್ಟ್ ಅನ್ನು ಸೃಇ ತಮ್ಮ ಇನ್ಸ್ ಸ್ಟಾಗ್ರಾಂ ಸ್ಟೇಟಸ್ ನಲ್ಲಿ ಹಾಕಿಕೊಂಡು ಕೈ ಮುಗಿದಿದ್ದಾರೆ. ಅಲ್ಲದೆ ಒಳ್ಳೆಯ ಮಾತುಗಳನ್ನಾಡಿದ್ದೀರಿ. ನಮ್ಮಲ್ಲಿ ಹಲವರು ಒಂದೇ ರೀತಿಯ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಪಾರೂಲ್ ಹೇಳಿದ್ದೇನು..?
ಅಂತಿಮವಾಗಿ ಲಿಂಗ ಸಮಾನತೆ ಹೋರಾಟಕ್ಕೆ ಗೆಲುವು ಸಿಕ್ಕಿದೆ. ಮಾದಕ ವಸ್ತುಗಳ ವಿರುದ್ಧ ನಾನು ಸೇರಿದಂತೆ ಎಲ್ಲರೂ ಹೋರಾಡಬೇಕು. ಆದರೆ ಭಾರತದಲ್ಲಿ ಡ್ರಗ್ಸ್ ಮಾರಾಟಗಾರರು ಅಥವಾ ಬಳಕೆದಾರರು ಕೇವಲ ಮೂವರು ಮಹಿಳೆಯರು ಮಾತ್ರನಾ?, ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆಯಲ್ಲಿ ಬೇರೆ ಯಾರೂ ಭಾಗಿಯಾಗಿಲ್ವಾ ಎಂದು ಪ್ರಶ್ನೆ ಮಾಡಿದ್ದರು.
ಯಾವುದೇ ಕಾರ್ಪೋರೇಟರ್ ಸಿಬ್ಬಂದಿ, ವ್ಯಾಪಾರಸ್ಥರು, ಕ್ರೀಡಾಪಟುಗಳು ಅಥವಾ ನಟರು ಸಹ ಡ್ರಗ್ಸ್ ಧಂದೆಯಲ್ಲಿ ಭಾಗಿಯಾಗಿಲ್ವಾ? ನಾವು ಲಿಂಗ ಸಮಾನತೆಯ ಹೋರಾಟವನ್ನು ಗೆದ್ದಿದ್ದೇವೆ ಎಂದು ಸಂಭ್ರಮಿಸಬೇಕಾ? ಅಥವಾ ನಮ್ಮಲ್ಲಿ ಕೆಲವರನ್ನು ಮಾತ್ರ ಬೇಟೆಯಾಡುವುದು ಎಷ್ಟು ಸುಲಭ ಎಂದು ನಾವು ಅಳಬೇಕೇ ಎಂದು ಡ್ರಗ್ಸ್ ದಂಧೆ ಬಗ್ಗೆ ನಟಿ ಪಾರುಲ್ ಯಾದವ್ ಪ್ರಶ್ನಿಸಿದ್ದರು.
ರಾಗಿಣಿ, ಸಂಜನಾ ಬಂಧನ:
ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿಯನ್ನು ಬಂಧಿಸಲಾಗಿತ್ತು. ನಂತರ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ ನಗರದ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದಿತ್ತು. ಈ ವೇಳೆ 10 ದಿನ ನಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಸಿಸಿಬಿ ವಕೀಲರ ವಾದವವನ್ನು ಆಲಿಸಿದ ಬಳಿಕ ನ್ಯಾ.ಜಗದೀಶ್ ಅವರು 5 ದಿನ ಕಸ್ಟಡಿಗೆ ನೀಡಿದ್ದಾರೆ. ಹೀಗಾಗಿ ಕೋರ್ಟ್ ಆದೇಶದ ಅನ್ವಯ ಶುಕ್ರವಾರದವರೆಗೂ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲಿ ಇರಲಿದ್ದಾರೆ.
ಇತ್ತ ನಟಿ ಸಂಜನಾ ಆಪ್ತ ರಾಹುಲ್ ಹೇಳಿಕೆಯಿಂದಾಗಿ ಮಂಗಳವಾರ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಹಲವು ಗಂಟೆ ಶೋಧ ಕಾರ್ಯ ನಡೆಸಿ, ಸಂಜನಾರನ್ನು ಅರೆಸ್ಟ್ ಮಾಡಿದ್ದಾರೆ. ಎಫ್ಐಆರ್ನಲ್ಲಿ ಸಂಜನಾರನ್ನು ಎ-14 ಎಂದು ಉಲ್ಲೇಖಿಸಲಾಗಿದೆ. ಡ್ರಗ್ ಮಾಫಿಯಾ ಜೊತೆ ನಂಟಿರುವ ಅನುಮಾನದ ಮೇಲೆ ತೀವ್ರ ವಿಚಾರಣೆ ನಡೆಸಲಾಗಿದೆ. ಮೆಡಿಕಲ್ ಚೆಕಪ್ ಬಳಿಕ ವಸಂತನಗರದ ಸ್ಪೆಷಲ್ ರಿಮ್ಯಾಂಡ್ ಕೋರ್ಟ್‍ಗೆ ಹಾಜರುಪಡಿಸಿ ಸಂಜನಾರನ್ನು ಐದು ದಿನ ಕಸ್ಟಡಿಗೆ ಪಡೆದುಕೊಂಡಿದೆ.
ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಟಿ ರಾಗಿಣಿ ಮತ್ತು ಸಂಜನಾರನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ಆದರೆ ಡ್ರಗ್ಸ್ ವಿಚಾರದಲ್ಲಿ ನಟಿಯರ ಹೆಸರು ಮಾತ್ರ ಕೇಳಿ ಬಂದ ಹಿನ್ನೆಲೆಯಲ್ಲಿ ನಟಿ ಪಾರೂಲ್ ಯಾದವ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ವಿಚಾರಣೆ ವೇಳೆ ಬರೋಬ್ಬರಿ 24 ಜನರ ಹೆಸರು ಬಾಯ್ಬಿಟ್ಟ ಸಂಜನಾ
ಡ್ರಗ್ಸ್ ದಂಧೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಟಿ ರಾಗಿಣಿ ಮನೆಯ ಮೇಲೆ ದಾಳಿ ಮಾಡಿದ್ದು, ಕಳೆದ ವಾರ ನಟಿಯನ್ನು ಬಂಧಿಸಲಾಗಿತ್ತು. ಮಂಗಳವಾರ ನಟಿ ಸಂಜನಾ ಮನೆಯ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದುವರೆಗೂ ಡ್ರಗ್ಸ್ ವಿಚಾರದಲ್ಲಿ ಸ್ಯಾಂಡಲ್‍ವುಡ್‍ನ ಇಬ್ಬರನ್ನು ನಟಿಯರನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಪಾರೂಲ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಯಮಾಡಿ ಇಡೀ ಚಿತ್ರರಂಗವನ್ನು ಟಾರ್ಗೆಟ್ ಮಾಡಬೇಡಿ: ಸುಮಲತಾ
“ಅಂತಿಮವಾಗಿ ಲಿಂಗ ಸಮಾನತೆ ಹೋರಾಟಕ್ಕೆ ಗೆಲುವು ಸಿಕ್ಕಿದೆ. ಮಾದಕ ವಸ್ತುಗಳ ವಿರುದ್ಧ ನಾನು ಸೇರಿದಂತೆ ಎಲ್ಲರೂ ಹೋರಾಡಬೇಕು. ಆದರೆ ಭಾರತದಲ್ಲಿ ಡ್ರಗ್ಸ್ ಮಾರಾಟಗಾರರು ಅಥವಾ ಬಳಕೆದಾರರು ಕೇವಲ ಮೂವರು ಮಹಿಳೆಯರು ಮಾತ್ರನಾ?, ಸ್ಯಾಂಡಲ್‍ವುಡ್ ಡ್ರಗ್ಸ್ ದಂಧೆಯಲ್ಲಿ ಬೇರೆ ಯಾರೂ ಭಾಗಿಯಾಗಿಲ್ವಾ?” ಎಂದು ಪ್ರಶ್ನೆ ಮಾಡಿದ್ದಾರೆ.
Finally the fight for #genderequality has been won!! I am all for cleansing societal evils and drug abuse must be dealt with firmly but apparently the only drug dealers/ users in India are three women…
“ಯಾವುದೇ ಕಾರ್ಪೋರೇಟರ್ ಸಿಬ್ಬಂದಿ, ವ್ಯಾಪಾರಸ್ಥರು, ಕ್ರೀಡಾಪಟುಗಳು ಅಥವಾ ನಟರು ಸಹ ಡ್ರಗ್ಸ್ ಧಂದೆಯಲ್ಲಿ ಭಾಗಿಯಾಗಿಲ್ವಾ? ನಾವು ಲಿಂಗ ಸಮಾನತೆಯ ಹೋರಾಟವನ್ನು ಗೆದ್ದಿದ್ದೇವೆ ಎಂದು ಸಂಭ್ರಮಿಸಬೇಕಾ? ಅಥವಾ ನಮ್ಮಲ್ಲಿ ಕೆಲವರನ್ನು ಮಾತ್ರ ಬೇಟೆಯಾಡುವುದು ಎಷ್ಟು ಸುಲಭ ಎಂದು ನಾವು ಅಳಬೇಕೇ? ಎಂದು ಡ್ರಗ್ಸ್ ದಂಧೆ ಬಗ್ಗೆ ನಟಿ ಪಾರುಲ್ ಯಾದವ್ ಪ್ರಶ್ನಿಸಿದ್ದಾರೆ.
no one else – no corporate execs, business people, sportspeople or even male actors is doing/ dealing drugs… should we celebrate winning the gender equality fight or should we cry at how easy it is to prey on some of us..@narcoticsbureau#Drugsmafia#NCB#SandalwoodDrugMafia
ಮೊದಲಿಗೆ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿಯನ್ನು ಬಂಧಿಸಲಾಗಿತ್ತು. ನಂತರ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಗರದ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದಿತ್ತು. ಈ ವೇಳೆ 10 ದಿನ ನಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಸಿಸಿಬಿ ವಕೀಲರ ವಾದವವನ್ನು ಆಲಿಸಿದ ಬಳಿಕ ನ್ಯಾ.ಜಗದೀಶ್ ಅವರು 5 ದಿನ ಕಸ್ಟಡಿಗೆ ನೀಡಿದ್ದಾರೆ. ಹೀಗಾಗಿ ಕೋರ್ಟ್ ಆದೇಶದ ಅನ್ವಯ ಶುಕ್ರವಾರದವರೆಗೂ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲಿ ಇರಲಿದ್ದಾರೆ.
ಇನ್ನೂ ನಟಿ ಸಂಜನಾ ಆಪ್ತ ರಾಹುಲ್ ಹೇಳಿಕೆಯಿಂದಾಗಿ ಮಂಗಳವಾರ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಹಲವು ಗಂಟೆ ಶೋಧ ಕಾರ್ಯ ನಡೆಸಿ, ಸಂಜನಾರನ್ನು ಅರೆಸ್ಟ್ ಮಾಡಿದ್ದಾರೆ. ಎಫ್ಐಆರ್ನಲ್ಲಿ ಸಂಜನಾರನ್ನು ಎ-14 ಎಂದು ಉಲ್ಲೇಖಿಸಲಾಗಿದೆ. ಡ್ರಗ್ ಮಾಫಿಯಾ ಜೊತೆ ನಂಟಿರುವ ಅನುಮಾನದ ಮೇಲೆ ತೀವ್ರ ವಿಚಾರಣೆ ನಡೆಸಲಾಗಿದೆ. ಮೆಡಿಕಲ್ ಚೆಕಪ್ ಬಳಿಕ ವಸಂತನಗರದ ಸ್ಪೆಷಲ್ ರಿಮ್ಯಾಂಡ್ ಕೋರ್ಟ್ ಗೆ ಹಾಜರುಪಡಿಸಿ ಸಂಜನಾರನ್ನು ಐದು ದಿನ ಕಸ್ಟಡಿಗೆ ಪಡೆದುಕೊಂಡಿದೆ.
ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ವಿರುದ್ಧ ಕಳೆದ ವಾರ ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಹೀಗಾಗಿ ಸೂಕ್ತ ಸಾಕ್ಷ್ಯಕ್ಕಾಗಿ ಕಾಯುತ್ತಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಹಲವು ಮಾಹಿತಿಗಳನ್ನು ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್‍ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಮಾಹಿತಿ ಸಿಕ್ಕಿದೆ.
ಬೆಂಗಳೂರು: ಪ್ಯಾರ್ ಗೆ ಆಗ್ಬಿಟೈತೆ ಅಂತ ಹಾಡುತ್ತಲೇ ಕನ್ನಡ ಚಿತ್ರ ಪ್ರೇಕ್ಷಕರ ಮನಸಿಗೆ ಲಗ್ಗೆಯಿಟ್ಟಿದ್ದವರು ಪಾರೂಲ್ ಯಾದವ್. ಪರಭಾಷಾ ನಟಿಯಾದರೂ ಕನ್ನಡಿಗರಿಗೆ ಹತ್ತಿರವಾಗಿದ್ದ ಅವರು ಆ ನಂತರವೂ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಈಗೊಂದಷ್ಟು ಕಾಲದಿಂದ ಕಣ್ಮರೆಯಾದಂತಿದ್ದ ಪಾರುಲ್ ಈಗ ಪಾರ್ವತಿಯ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರೋ ಖುಷಿಯಲ್ಲಿದ್ದಾರೆ.
ರಮೇಶ್ ಅರವಿಂದ್ ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲದಲ್ಲಿಯೇ ನಿರ್ದೇಶನ ಮಾಡುತ್ತಿರೋ ಚಿತ್ರ ಬಟರ್ ಫ್ಲೈ. ಈ ಮೂರೂ ಭಾಷೆಗಳಲ್ಲಿ ಆಯಾ ಭಾಷೆಯ ನಟಿಯರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಕನ್ನಡದಲ್ಲಿ ಕಂಗನಾ ಪಾತ್ರವನ್ನು ಪಾರುಲ್ ಯಾದವ್ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಖುದ್ದು ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ವಿಚಾರ ಹಂಚಿಕೊಂಡಿದ್ದಾರೆ. ತಾನು ಪಾರ್ವತಿಯಾಗಿ ಕನ್ನಡದ ಪ್ರೇಕ್ಷಕರ ಮುಂದೆ ಬರಲು ಅಣಿಯಾಗಿರೋದರ ಬಗ್ಗೆ ಖುಷಿಯಿಂದಲೇ ಹೇಳಿಕೊಂಡಿರೋ ಪಾರುಲ್, ಪಾರ್ವತಿಯಾಗಿ ತಮ್ಮ ಲುಕ್ಕು ಹೇಗಿದೆ ಎಂಬುದಕ್ಕೆ ಒಂದು ಭಾವಚಿತ್ರವನ್ನೂ ಜಾಹೀರು ಮಾಡಿದ್ದಾರೆ.
ತಮಿಳಿನಲ್ಲಿ ಈ ಪಾತ್ರವನ್ನು ಕಾಜಲ್ ನಿರ್ವಹಿಸಿದ್ದಾರೆ. ತೆಲುಗಿನಲ್ಲಿ ಈ ಪಾತ್ರ ಮಿಲ್ಕಿ ಬ್ಯೂಟಿ ತಮನ್ನಾ ಪಾಲಾಗಿದೆ. ಕನ್ನಡದಲ್ಲಿ ಪಾರುಲ್ ಪಾರ್ವತಿಯಾಗಿ ಈ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಚಿತ್ರದಲ್ಲಿ ಕೇವಲ ನಾಯಕಿ ಮಾತ್ರವಲ್ಲದೇ ಪಾರುಲ್ ನಿರ್ಮಾಪಕಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಈ ಮೂಲಕವೇ ಕನ್ನಡದಲ್ಲಿ ತನ್ನ ಮತ್ತೊಂದು ಇನ್ನಿಂಗ್ಸ್ ಭರ್ಜರಿಯಾಗಿ ಶುರುವಾಗೋ ನಿರೀಕ್ಷೆ ಪಾರುಲ್ ಗಿದೆ.
ಬೆಂಗಳೂರು: ಹಿಂದಿಯಲ್ಲಿ ಕಂಗನಾ ರಣಾವತ್ ನಟಿಸಿ ಸೂಪರ್ ಹಿಟ್ ಆಗಿದ್ದ ಕ್ವೀನ್ ಚಿತ್ರ ಕನ್ನಡದಲ್ಲಿ ‘ಬಟರ್ ಫ್ಲೈ’ ಆಗಿ ಅವತಾರವೆತ್ತುತ್ತಿದೆ. ಯಾವ ಕಥೆಯನ್ನಾದರೂ ಇಲ್ಲಿನ ನೇಟಿವಿಟಿಗೆ ತಕ್ಕುದಾಗಿ ಒಗ್ಗಿಸಿಕೊಳ್ಳುವ ಕಲೆ ಕರಗತ ಮಾಡಿಕೊಂಡಿರೋ ರಮೇಶ್ ಅರವಿಂದ್ ನಿರ್ದೇಶನದಲ್ಲಿ ಈ ಚಿತ್ರ ರೆಡಿಯಾಗುತ್ತಿದೆ.
ಚಿತ್ರೀಕರಣವನ್ನು ಅಂದುಕೊಂಡಂತೆಯೇ ಸುಸೂತ್ರವಾಗಿ ನಡೆಸುತ್ತಿದ್ದರೂ ರಮೇಶ್ ಅವರವಿಂದ್ ಅವರನ್ನು ಭಾರೀ ಚಿಂತೆಗೀಡು ಮಾಡಿದ್ದದ್ದು ವಿಶೇಷವಾದ ಒಂದು ಹಾಡು. ಮೂಲ ಚಿತ್ರ ಕ್ವೀನ್‍ನಲ್ಲಿ ಹಿಂದಿಯ ಹಳೆಯ ಹಾಡೊಂದನ್ನು ವಿಶೇಷವಾಗಿ ಬಳಸಿಕೊಳ್ಳಲಾಗಿತ್ತು. ಆ ಹಾಡು ಸೂಪರ್ ಹಿಟ್ ಆಗಿತ್ತು. ಕನ್ನಡದಲ್ಲಿಯೂ ಕೂಡಾ ಈ ಹಾಡನ್ನು ಅದೇ ರೀತಿ ರೂಪಿಸೋ ಕನಸು ಹೊಂದಿದ್ದ ರಮೇಶ್ ಅವರನ್ನು ಬಹು ದಿನದಿಂದಲೂ ಯಾವ ಗೀತೆಯನ್ನು ಆಯ್ಕೆ ಮಾಡಿಕೊಳ್ಳೋದೆಂಬ ಗೊಂದಲ ಕಾಡುತ್ತಿತ್ತಂತೆ. ಕಡೆಗೂ ಅವರು ಇದಕ್ಕಾಗಿ ಪ್ರಸಿದ್ಧ ರಂಗಗೀತೆಯೊಂದನ್ನು ಆಯ್ಕೆ ಮಾಡಿಕೊಂಡಿದ್ದಾರೆ.
Truly a pleasure directing an army of phenomenal talents in #ParisParis#MovieButterfly pic.twitter.com/lx7RMWPlCk
ಅದು ದೇವದಾಸಿ ನಾಟಕಕ್ಕಾಗಿ ಮಾಸ್ಟರ್ ಹಿರಣ್ಣಯ್ಯನವರು ಬರೆದಿದ್ದ ಪ್ರಸಿದ್ಧ ರಂಗಗೀತೆ. ಸುಖವೀವ ಸುರಪಾನವಿದೇ ಸ್ವರ್ಗಸಮಾನನಂ ಎಂಬ ರಂಗಗೀತೆಯನ್ನು ರಮೇಶ್ ಅರವಿಂದ್ ಈ ಚಿತ್ರಕ್ಕೆ ಹೊಸಾ ಥರದಲ್ಲಿ ಬಳಸಿಕೊಂಡಿದ್ದಾರೆ. ಇದಕ್ಕೆ ಕೇವಲ ಅರ್ಧ ದಿನದಲ್ಲಿಯೇ ಕೊರಿಯೋಗ್ರಫಿ ಮಾಡಿರೋ ಗಣೇಶ್ ಆಚಾರ್ಯ ಚಿತ್ರೀಕರಣ ಮುಗಿಸಿಕೊಟ್ಟಿದ್ದಾರಂತೆ. ಈ ವಿಶೇಷವಾದ ಹಾಡಿಗೆ ಕುಣಿದಿರುವ ಪಾರುಲ್ ಕೂಡಾ ಇದನ್ನೊಂದು ಗ್ರೇಟ್ ಎಕ್ಸ್ ಪೀರಿಯನ್ಸ್ ಅಂತ ಖುಷಿಯಿಂದಲೇ ಹೇಳಿಕೊಂಡಿದ್ದಾರೆ.
ಸದಾ ಹೊಸತೇನನ್ನೋ ಸೃಷ್ಟಿಸಲು ಹಂಬಲಿಸುವ ರಮೇಶ್ ಅರವಿಂದ್ ಅವರು ತಮ್ಮ ಚಿತ್ರಕ್ಕೆ ರಂಗಗೀತೆಯೊಂದನ್ನು ಆರಿಸಿಕೊಂಡಿರುವುದು ಸಕಾರಾತ್ಮಕ ಬೆಳವಣಿಗೆ.
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಪಾರೂಲ್ ಯಾದವ್ ಓಲಾ ಚಾಲಕನ ವಿರುದ್ಧ ರೊಚ್ಚಿಗೆದಿದ್ದಾರೆ.
ನಟಿ ಪಾರೂಲ್ ಯಾದವ್ ತಮ್ಮ ಮನೆಯನ್ನು ಶಿಫ್ಟ್ ಮಾಡಿದ್ದಾರೆ. ಹಾಗಾಗಿ ಅವರು ಓಲಾ ಕ್ಯಾಬ್ ಬುಕ್ ಮಾಡಿ ಅದರಲ್ಲಿ ಪ್ರಯಾಣಿಸಿದ್ದರು. ದಾರಿ ಮಧ್ಯೆದಲ್ಲಿ ಸ್ನೇಹಿತೆಯ ಮದುವೆ ವಾರ್ಷಿಕೋತ್ಸವಕ್ಕಾಗಿ ಒಂದು ವಾಚ್ ನ್ನು ಖರೀದಿಸಿದ್ದರು. ವಾಚ್ ಖರೀದಿಸಿ ಅದನ್ನು ಓಲಾದಲ್ಲಿ ಇಟ್ಟು ಮರೆತು ಹೋಗಿದ್ದಾರೆ.
ಓಲಾದಲ್ಲಿ ಬರುತ್ತಿದ್ದ ವಸ್ತುಗಳನ್ನು ಹೊಸ ಮನೆಗೆ ಶಿಫ್ಟ್ ಮಾಡಲು ಪಾರೂಲ್ ಮುಂಬೈಗೆ ಹೋಗಲು ವಿಮಾನ ನಿಲ್ದಾಣದತ್ತ ಹೋಗಿದ್ದಾರೆ. ವಿಮಾನ ನಿಲ್ದಾಣ ತಲುಪುತ್ತಿದ್ದಂತೆ ವಾಚ್ ಕಾಣೆ ಆಗಿರುವುದು ತಿಳಿದು ಬಂದಿದೆ. ಆಗ ಓಲಾ ಚಾಲಕನಿಗೆ ಕರೆ ಮಾಡಿ ವಾಚ್ ಬಗ್ಗೆ ವಿಚಾರಿಸಿದ್ದಾರೆ. ಆಗ ಚಾಲಕ ನನಗೆ ಯಾವ ವಾಚ್ ಬಗ್ಗೆಯೂ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾನೆ.
Dear friends – Please note that @olacabs don't verify their drivers. I just went through a crazy situation where the driver hid a package containing expensive watches bought as gifts for a 50th wedding anniversary when I stepped out of the car for a couple of mins.
ತಕ್ಷಣವೇ ಪಾರೂಲ್ ಯಾದವ್ ವಿಮಾನ ನಿಲ್ದಾಣನಲ್ಲಿರುವ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಪೊಲೀಸರು ಮೂರು ದಿನದಲ್ಲೇ ಓಲಾ ಚಾಲಕನನ್ನು ಸೆರೆ ಹಿಡಿದಿದ್ದಾರೆ. ಆಗ ಓಲಾ ಚಾಲಕ ಆ ವಾಚ್ ಅನ್ನು ಪಾರೂಲ್‍ಗೆ ಹಿಂದಿರುಗಿಸಿದ್ದಾರೆ.
ನಂತರ ಪಾರೂಲ್ ಇ-ಮೇಲ್ ಮೂಲಕ ಓಲಾದವರಿಗೆ ದೂರು ನೀಡಿದ್ದಾರೆ. ಆದರೆ ಮೂರು ದಿನವಾದರೂ ಓಲಾದವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಹಾಗೂ ಪಾರೂಲ್ ಅವರನ್ನು ಸಂಪರ್ಕಿಸಿ ವಿಚಾರಿಸಲಿಲ್ಲ ಎಂದು ಹೇಳಲಾಗಿದೆ.
He then pretended we never had the package when dropping me to the airport. @ola_support didn't respond at all initially. Thank God we didn't wait for them and filed a police complaint instantly. I want to let you know that the fab @BlrCityPolice have recovered the watches
But sadly @ola_supports still haven't been able to even contact their driver. @bhash Shame on you. Everyone please be careful of using Ola. Their drivers are not verified and Ola can't reach them in an emergency. And yes a big thank you to the Karnataka Police
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಪಾರುಲ್ ಯಾದವ್‍ಗೆ ಆರೋಗ್ಯದಲ್ಲಿ ಮತ್ತೊಮ್ಮೆ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಟರ್ ಫ್ಲೈ ಸಿನಿಮಾ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಪಾರುಲ್ ಆರೋಗ್ಯದಲ್ಲಿ ಸಮಸ್ಯೆ ಕಾಣಸಿಕೊಂಡಿದ್ದು, ಅವರು ಆಸ್ಪತ್ರೆಗೆ ದಾಖಲಾಗಿರುವ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪಾರುಲ್ ಯಾದವ್ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಟರ್ ಫ್ಲೈ ಸಿನಿಮಾ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಪಾರುಲ್ ಯಾದವ್ ಸಿನಿಮಾ ಶೂಟಿಂಗ್‍ನಲ್ಲಿ ಪಾಲ್ಗೊಂಡಿದ್ದರು. ರಮೇಶ್ ಅರವಿಂದ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಟರ್ ಫ್ಲೈ ಸಿನಿಮಾ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ.
ಬೆಂಗಳೂರು: ‘ಪ್ಯಾರ್ ಗೆ ಆಗ್ಬಿಟೈತೆ’ ಬೆಡಗಿ ಪಾರೂಲ್ ಯಾದವ್ ಸೀಜರ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿ ಹಣ ಪಡೆಯದೇ ಚಿತ್ರದ ಪ್ರಚಾರಕ್ಕೂ ಬರದೇ ಕಾಣೆಯಾಗಿದ್ದಾರೆ ಎಂಬ ಸುದ್ದಿಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಚಿರಂಜೀವಿ ಸರ್ಜಾ ಅಭಿನಯದ ಸೀಜರ್ ಸಿನಿಮಾದಲ್ಲಿ ಪಾರೂಲ್ ಯಾದವ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಇವರಿಗೆ ಚಿತ್ರತಂಡ 1.5 ಲಕ್ಷ ರೂ.ಕೊಡಬೇಕಿತ್ತು. ಬಾಕಿ ಉಳಿದಿರುವ ಹಣವನ್ನು ನೀಡಿ ಸಿನಿಮಾ ಪ್ರಮೋಶನ್ ಗೆ ಕರೆಯಬೇಕೆಂದರೂ ಸಂಪರ್ಕಕ್ಕೆ ಸಿಗ್ತಿಲ್ಲ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಖುದ್ದಾಗಿ ಹಣ ನೀಡಲು ನಿರ್ಧರಿಸಿದೆ ಅಂತಾ ಹೇಳಲಾಗಿದೆ.
ವಿನಯ್ ಕೃಷ್ಣ ಸಾರಥ್ಯದ ಸೀಜರ್ ಸಿನಿಮಾ ಮುಹೂರ್ತ ಆಚರಿಸಿಕೊಂಡು ಬರೋಬ್ಬರಿ 4 ವರ್ಷ ಆಗಿದೆ. ಲಾಂಗ್‍ಜರ್ನಿ ಕಂಪ್ಲೀಟ್ ಮಾಡಿರೋ ಸೀಜರ್ ಎಲ್ಲಾ ಕೆಲಸ ಮುಗಿಸಿಕೊಂಡು ಥಿಯಟೇರ್ ಗೆ ಎಂಟ್ರಿ ಕೊಡಲು ರೆಡಿಯಾಗಿದೆ. ಇದೇ ಶುಕ್ರವಾರ ರವಿಚಂದ್ರನ್, ಚಿರು ಕಾಂಬಿನೇಷನ್‍ನ ಸಿನಿಮಾ 230 ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ರಿಲೀಸ್ ಆಗ್ತಿದೆ.
ನಾಲ್ಕು ವರ್ಷಗಳ ಹಿಂದೆ ಚಂದನ್ ಸೈನ್ ಮಾಡಿದ ಮೊದಲ ಸಿನಿಮಾ ಇದು. ಈ ಸೀಜರ್ ಗೆ ಟ್ಯೂನ್ಸ್ ಕಂಪೋಸ್ ಮಾಡುವ ಮೂಲಕ ಟಾಲಿವುಡ್, ಕಾಲಿವುಡ್ ಜೊತೆ ಮಾಲಿವುಡ್‍ಗೂ ಎಂಟ್ರಿ ಕೊಡ್ತಿದ್ದಾರೆ ಚಂದನ್ ಶೆಟ್ಟಿ. ನಾಲ್ಕು ಭಾಷೆಯಲ್ಲಿ ರೆಡಿಯಾಗಿರೋ ಸೀಜರ್ ಬೇರೆ ಬೇರೆ ಟೈಮ್‍ನಲ್ಲಿ ಪರಭಾಷೆಯಲ್ಲಿ ಮಿಂಚಲಿದೆ.
ನಾಯಕಿ ಪಾರುಲ್ ಯಾದವ್ ಪ್ರಚಾರಕ್ಕೆ ಬರದೆ ಇರೋದರ ಬಗ್ಗೆ ಚಿತ್ರತಂಡ ಬೇಸರ ವ್ಯಕ್ತಪಡಿಸಿದೆ. 12 ರಿಂದ 13 ಕೋಟಿ ವೆಚ್ಚದಲ್ಲಿ ರೆಡಿಯಾಗಿರುವ ಅದ್ಧೂರಿ ಸೀಜರ್ ಸಿನಿಮಾ ಈ ಶುಕ್ರವಾರ ಬಿಡುಗಡೆಯಾಗಲಿದೆ. ಇದನ್ನೂ ಓದಿ: ಸೀಜರ್ ಸಿನೆಮಾದ ತಂತ್ರಜ್ಞರು ಹೇಳೋದೇನು ಗೊತ್ತಾ..?