Tag: parvathi arun

  • ಸದ್ಯದಲ್ಲೇ ವಿನೋದ್ ಪ್ರಭಾಕರ್ ಅಭಿನಯದ  ‘ಲಂಕಾಸುರ’ ಟೀಸರ್

    ಸದ್ಯದಲ್ಲೇ ವಿನೋದ್ ಪ್ರಭಾಕರ್ ಅಭಿನಯದ ‘ಲಂಕಾಸುರ’ ಟೀಸರ್

    ದೇ ಮೊದಲ ಬಾರಿಗೆ ನಿರ್ಮಾಣದ ಜೊತೆಗೆ ನಟನೆಯನ್ನೂ ಮಾಡಿರುವ ವಿನೋದ್ ಪ್ರಭಾಕರ್ ನಟಿಸಿರುವ ಲಂಕಾಸುರ ಚಿತ್ರದ ಶೂಟಿಂಗ್ ಮುಕ್ತಾಯವಾಗಿದೆ. ಬೆಂಗಳೂರು ಹಾಗೂ ಗೋವಾದಲ್ಲಿ ಸುಮಾರು 65 ದಿನಗಳ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ಸ್ ಕೆಲಸ ಬಿರುಸಿನಿಂದ ಸಾಗಿದೆ. ಸದ್ಯದಲ್ಲೇ ಟೀಸರ್ ಸಹ ಬಿಡುಗಡೆಯಾಗಲಿದೆ ಎಂದು ನಿರ್ಮಾಪಕಿ ನಿಶಾ ವಿನೋದ್ ಪ್ರಭಾಕರ್ ತಿಳಿಸಿದ್ದಾರೆ.

    ವಿನೋದ್ ಪ್ರಭಾಕರ್ ಹಾಗೂ ಲೂಸ್ ಮಾದ ಯೋಗಿ ಮೊದಲ ಬಾರಿಗೆ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ.   ನಾಯಕಿಯಾಗಿ ಪಾರ್ವತಿ ಅರುಣ್ ಅಭಿನಯಿಸಿದ್ದಾರೆ.  ಹಿರಿಯ ನಟರಾದ ದೇವರಾಜ್, ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ : ಹಾಸ್ಯನಟ ನರಸಿಂಹರಾಜು ಹಿರಿಯ ಪುತ್ರಿ, ನಿರ್ದೇಶಕ ಅರವಿಂದ್ ತಾಯಿ ಧರ್ಮವತಿ ನಿಧನ

    ಈ ಚಿತ್ರದ ಆಕ್ಷನ್ ಸನ್ನಿವೇಶಗಳು ಮೈನವಿರೇಳಿಸುವ ಹಾಗಿದೆ. ಐದು ಸಾಹಸ ಸನ್ನಿವೇಶಗಳಿದ್ದು, ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ , ಕುಂಗ್ಫು ಚಂದ್ರು ಸಾಹಸ ನಿರ್ದೇಶನ ಮಾಡಿದ್ದಾರೆ.  ಒಂದು ಸಾಹಸ ಸನ್ನಿವೇಶಕ್ಕಾಗಿ ವಿನೋದ್ ಪ್ರಭಾಕರ್ ಹತ್ತು ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಚಿತ್ರ ಬಿಡುಗಡೆಗಾಗಿ ಮರಿ ಟೈಗರ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ

    ಪ್ರಮೋದ್ ಕುಮಾರ್ ಈ ಚಿತ್ರದ ನಿರ್ದೇಶಕರು. ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

  • ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಕ್ಕೆ ಶಾನ್ವಿ ನಾಯಕಿ!

    ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರಕ್ಕೆ ಶಾನ್ವಿ ನಾಯಕಿ!

    ಗೋಲ್ಡನ್ ಸ್ಟಾರ್ ಗಣೇಶ್ ಗೀತಾ ಎಂಬ ಚಿತ್ರದಲ್ಲಿ ನಟಿಸುತ್ತಿರೋ ವಿಚಾರ ಗೊತ್ತೇ ಇದೆ. ಈ ಚಿತ್ರಕ್ಕೆ ಈಗಾಗಲೇ ಚಾಲನೆ ಸಿಕ್ಕಿದೆ. ಇದೇ ಸಮಯದಲ್ಲಿ ಬಾಕಿ ಉಳಿದಿದ್ದ ಮೂರನೇ ನಾಯಕಿಯ ಆಯ್ಕೆಯೂ ನಡೆದಿದೆ. ಶಾನ್ವಿ ಶ್ರೀವಾಸ್ತವ ಈ ಚಿತ್ರಕ್ಕೆ ಹೊಸತಾಗಿ ಎಂಟ್ರಿ ಕೊಟ್ಟಿದ್ದಾರೆ.

    ಗೀತಾ ಚಿತ್ರದಲ್ಲಿ ಮೂವರು ನಾಯಕಿಯರು ನಟಿಸಲಿದ್ದಾರೆ. ಈಗಾಗಲೇ ಮಲೆಯಾಳಿ ಚೆಲುವೆಯರಾದ ಪ್ರಯಾಗಾ ಮಾರ್ಟಿನ್ ಮತ್ತು ಪಾರ್ವತಿ ಅರುಣ್ ನಾಯಕಿಯರಾಗಿ ನಿಕ್ಕಿಯಾಗಿದ್ದರು. ಮೂರನೇ ನಾಯಕಿಗಾಗಿ ವ್ಯಾಪಕವಾಗಿ ಹುಡುಕಾಟ ಆರಂಭವಾಗಿತ್ತು. ಇದೀಗ ಆ ಪಾತ್ರಕ್ಕೆ ಶಾನ್ವಿ ಆಗಮನವಾಗಿದೆ.

    ಈ ಚಿತ್ರಕ್ಕೆ ಈ ಹಿಂದೆ ಮುಗುಳು ನಗೆ ಚಿತ್ರ ನಿರ್ಮಾಣ ಮಾಡಿದ್ದ ಸೈಯದ್ ಸಲಾಮ್ ಅವರೇ ಹಣ ಹೂಡಿದ್ದಾರೆ. ವಿಜಯ್ ನಾಗೇಂದ್ರ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಶಾನ್ವಿ ಶ್ರೀವಾಸ್ತವ ಮುಂದಿನ ಶೆಡ್ಯೂಲ್ ಹೊತ್ತಿಗೆಲ್ಲ ಚಿತ್ರತಂಡ ಸೇರಿಕೊಳ್ಳಲಿದ್ದಾರಂತೆ. ಮುಂದಿನ ಹಂತದ ಚಿತ್ರೀಕರಣ ಕೋಲ್ಕತ್ತಾದಲ್ಲಿ ನಡೆಯಲಿದೆ. ಅಲ್ಲಿಂದ ಕಾಶ್ಮೀರದಲ್ಲಿಯೂ ಚಿತ್ರೀಕರಣ ನಡೆಸಲು ಚಿತ್ರತಂಡ ತೀರ್ಮಾನಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews