Tag: Parvathi Siddaramaiah

  • ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಪತ್ನಿ

    ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಪತ್ನಿ

    ಹಾಸನ: ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ.

    ತಮ್ಮ ಆಪ್ತರ ಜೊತೆ ಆಗಮಿಸಿ ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಹಾಸನಾಂಬ ದೇವಿ ದರ್ಶನದ ನಂತರ ಸಿದ್ದೇಶ್ವರಸ್ವಾಮಿ ದರ್ಶನ ಪಡೆದು ತೆರಳಿದ್ದಾರೆ. ಇದನ್ನೂ ಓದಿ: ಶಕ್ತಿದೇವತೆ ಹಾಸನಾಂಬೆ ದರ್ಶನಕ್ಕೆ ಜನಸಾಗರ – ಬೆಂಗಳೂರು To ಹಾಸನ ಬಸ್ ಸಂಚಾರ ಸ್ಥಗಿತ

    ಇದೇ ಮೊದಲ ಬಾರಿಗೆ ಅವರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಇದನ್ನೂ ಓದಿ: ಹಾಸನಾಂಬ ದೇವಿ ದರ್ಶನ ಪಡೆದ ಬಾನು ಮುಷ್ತಾಕ್

  • ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು: ಸಿಎಂ

    ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು: ಸಿಎಂ

    ಬೆಂಗಳೂರು: ಮುಡಾ ಕೇಸ್‌ನಲ್ಲಿ (MUDA Case) ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಅವರ ಪತ್ನಿ ಪಾರ್ವತಿಯವರಿಗೆ (Parvathi Siddaramaiah) ಬಿಗ್ ರಿಲೀಫ್ ಸಿಕ್ಕಿದೆ. ಇ.ಡಿ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದ್ದು, ಸಿಎಂ ಪತ್ನಿ ವಿರುದ್ಧದ ಮುಡಾ ಪ್ರಕರಣದ ವಿಚಾರಣೆ ರದ್ದಾಗಿದೆ. ಸುಪ್ರೀಂ ಆದೇಶದ ಬೆನ್ನಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪತ್ನಿ ವಿರುದ್ಧ ಅಪಪ್ರಚಾರ ಮಾಡಿದ ವಿಪಕ್ಷಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದಾರೆ.

    ಎಕ್ಸ್‌ನಲ್ಲಿ ಏನಿದೆ?
    ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ಐತಿಹಾಸಿಕ ಆದೇಶ ಕೇಂದ್ರ ಸರ್ಕಾರದ ಕಪಾಳಕ್ಕೆ ನ್ಯಾಯದಂಡ ಬಾರಿಸಿರುವ ತಪರಾಕಿಯಾಗಿದೆ. ಇದನ್ನೂ ಓದಿ: ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ಕೋರ್ಟ್‌ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

    ಸುಪ್ರೀಂಕೋರ್ಟ್ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ.ವಿನೋದಚಂದ್ರ ಅವರ ಆದೇಶವನ್ನು ನಾನು ವಿನೀತನಾಗಿ ಸ್ವಾಗತಿಸುತ್ತೇನೆ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ನಾನು ಸದಾ ಸಂವಿಧಾನ ಮತ್ತು ನೆಲದ ಕಾನೂನಿಗೆ ತಲೆಬಾಗುತ್ತಾ ಬಂದವನು. ಈ ನಂಬಿಕೆಯನ್ನು ಸುಪ್ರೀಂ ಕೋರ್ಟ್ ಆದೇಶ ಉಳಿಸಿಕೊಂಡು ಕಾಪಾಡಿದೆ. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ

    ರಾಜಕೀಯವಾಗಿ ನನ್ನನ್ನು ಎದುರಿಸಲಾಗದ ಭಾರತೀಯ ಜನತಾ ಪಕ್ಷ ಮತ್ತು ಅದರ ಸಂಗಾತಿಗಳು ಸಾಂವಿಧಾನಿಕ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಂಡು ನನ್ನ ಪತ್ನಿಯ ವಿರುದ್ಧ ಸುಳ್ಳು ಪ್ರಕರಣವನ್ನು ಸೃಷ್ಟಿಸಿ, ನೀಡಿರುವ ಕಿರುಕುಳ ಅತ್ಯಂತ ಹೇಯವಾದುದು. ಇದರಿಂದ ನಾನು ಮತ್ತು ನನ್ನ ಕುಟುಂಬ ಅನುಭವಿಸಿದ ಮಾನಸಿಕವಾದ ಕಿರುಕುಳವನ್ನು ನಾನೆಂದೂ ಮರೆಯಲಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ SIT ಹೆಗಲಿಗೆ – ನಿಷ್ಪಕ್ಷಪಾತ ತನಿಖೆ ಬಗ್ಗೆ ಗೃಹ ಸಚಿವ ಪರಂ ಭರವಸೆ

    ನನ್ನ ಮನದಾಳದ ಮಾತನ್ನೇ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳಾದ ಗವಾಯಿ ಅವರು ಹೇಳಿದ್ದಾರೆ. ‘ರಾಜಕೀಯ ಸಮರಕ್ಕೆ ಮತದಾರರನ್ನು ಬಳಸಕೊಳ್ಳಬೇಕೇ ಹೊರತು, ಇದಕ್ಕಾಗಿ ಜಾರಿ ನಿರ್ದೇಶನಾಲಯದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಬಾರದು’ ಎಂಬ ಅವರ ಮಾತುಗಳು ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜ್ಞಾವಂತ ಭಾರತೀಯನ ಅಭಿಪ್ರಾಯವಾಗಿದೆ. ಇದನ್ನೂ ಓದಿ: ಮುಂಬೈಯಲ್ಲಿ ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ – ತಪ್ಪಿದ ಭಾರೀ ಅವಘಡ

    ಕಳೆದ 10-11 ವರ್ಷಗಳಿಂದ ಕೇಂದ್ರ ಸರ್ಕಾರ ಮತ್ತು ಬಿಜೆಪಿಯು ಐಟಿ, ಸಿಬಿಐ ಮತ್ತು ಇಡಿಯ ದುರ್ಬಳಕೆ ಮೂಲಕ ಸಾಧಿಸುತ್ತಿರುವ ರಾಜಕೀಯ ದ್ವೇಷಕ್ಕೆ ಬಲಿಯಾದವರೆಲ್ಲರಲ್ಲಿಯೂ ಈ ತೀರ್ಪು ಸಮಾಧಾನ ಉಂಟುಮಾಡಿದೆ ಮತ್ತು ನ್ಯಾಯ ವ್ಯವಸ್ಥೆಯ ಮೇಲೆ ಭರವಸೆ ಮೂಡಿಸಿದೆ. ಇದನ್ನೂ ಓದಿ: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    ಸುಪ್ರೀಂಕೋರ್ಟ್‌ನ ಈ ಕಣ್ಣುತೆರೆಸುವ ಆದೇಶದ ನಂತರವಾದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರು ಎಚ್ಚೆತ್ತುಕೊಂಡು ಐಟಿ, ಸಿಬಿಐ ಮತ್ತು ಇ.ಡಿ.ಯಂತಹ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಿ ಅವುಗಳಿಗೆ ಇರಬೇಕಾಗಿರುವ ಸ್ವಾಯತ್ತತೆಯನ್ನು ಕೊಟ್ಟು ತಮ್ಮ ಪಾಪ ತೊಳೆದುಕೊಳ್ಳಬೇಕು. ಇದನ್ನೂ ಓದಿ: CBSE ಯಿಂದ ಸೇಫ್ಟಿ ಗೈಡ್‌ಲೈನ್ಸ್ ‌- ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲಕಡೆ ಆಡಿಯೋವಿಶುವಲ್ ಸಿಸಿಟಿವಿ ಕಡ್ಡಾಯ

    ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಕಪೋಲಕಲ್ಪಿತ ಆರೋಪಗಳನ್ನು ಮಾಡುತ್ತಾ ಬಂದಿರುವ ರಾಜ್ಯದ ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ತಮ್ಮ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸೋಪ್ ಬಾಕ್ಸ್‌ಲ್ಲಿ 14.69 ಕೋಟಿ ಮೌಲ್ಯದ ಕೊಕೇನ್ ಸ್ಮಗ್ಲಿಂಗ್ – ಇಬ್ಬರು ಮಹಿಳೆಯರು ಅರೆಸ್ಟ್

  • ಚಾಮುಂಡಿ ಬೆಟ್ಟಕ್ಕೆ ಬಂದು ದೇವಿ ದರ್ಶನ ಪಡೆದ ಸಿಎಂ ಪತ್ನಿ, ಸೊಸೆ

    ಚಾಮುಂಡಿ ಬೆಟ್ಟಕ್ಕೆ ಬಂದು ದೇವಿ ದರ್ಶನ ಪಡೆದ ಸಿಎಂ ಪತ್ನಿ, ಸೊಸೆ

    ಮೈಸೂರು: ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ (Chamundi Hills) ಸಿಎಂ ಪತ್ನಿ ಹಾಗೂ ಸೊಸೆ ಭೇಟಿ ನೀಡಿದ್ದಾರೆ.

    ಇಂದು ನಾಲ್ಕನೇ ಆಷಾಢ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಹಾಗೂ ಸೊಸೆ ಸ್ಮಿತಾ ರಾಕೇಶ್ ಅವರು ಒಟ್ಟಿಗೆ ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ದೇವಸ್ಥಾನದ ಹಿಂಬಾಗಿಲಿನಿಂದ ಪ್ರವೇಶ ಪಡೆದು ತಾಯಿ ಚಾಮುಂಡಿಯ ದರ್ಶನ ಪಡೆದಿದ್ದಾರೆ. ಬಳಿಕ ಅದೇ ದಾರಿಯಲ್ಲಿ ನಿರ್ಗಮಿಸಿದ್ದಾರೆ. ಸಿಎಂ ಪತ್ನಿ ಹಾಗೂ ಸೊಸೆಗೆ ಪೊಲೀಸರು ಎಸ್ಕಾರ್ಟ್ ಮೂಲಕ ದೇವಸ್ಥಾನಕ್ಕೆ ಕರೆದುಕೊಂಡು ಬಂದರು.ಇದನ್ನೂ ಓದಿ:  ಮಗ ಯಾವುದೇ ತಪ್ಪು ಮಾಡಿಲ್ಲ, ನನ್ನನ್ನು ರಾಜಕೀಯವಾಗಿ ಮುಗಿಸಲು ನಮ್ಮ ಮೇಲೆ ಆರೋಪ: ಪ್ರಭು ಚೌಹಾಣ್‌

    ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರದ ಹಿನ್ನೆಲೆ ನಾಡದೇವಿ ಚಾಮುಂಡಿಗೆ ಸಿಂಹವಾಹಿನಿ ಅಲಂಕಾರ ಮಾಡಲಾಗಿದೆ. ಉತ್ಸವ ಮೂರ್ತಿಗೆ ವಿವಿಧ ಬಗೆಯ ಹೂ ಹಾಗೂ ನವಿಲಿನಗರಿ ಹಾರದ ಅಲಂಕಾರ ಮಾಡಲಾಗಿದೆ. ದೇವಾಲಯದ ಆವರಣಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ. ಮುಂಜಾನೆ 4:30ರಿಂದ ತಾಯಿಗೆ ವಿಶೇಷ ಪೂಜೆ ನೆರವೇರುತ್ತಿದೆ.

    ಮುಂಜಾನೆಯಿಂದಲೇ ಸರತಿ ಸಾಲಿನಲ್ಲಿ ಭಕ್ತರು ತಾಯಿಯ ದರ್ಶನ ಪಡೆಯುತ್ತಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳನ್ನು ನಿಷೇಧಿಸಲಾಗಿದೆ.ಇದನ್ನೂ ಓದಿ: ಕಂಡಕ್ಟರ್ ಯಡವಟ್ಟು, ಹೋಟೆಲ್‍ಗೆ ನುಗ್ಗಿದ ಬಿಎಂಟಿಸಿ ಬಸ್ – ಐವರಿಗೆ ಗಾಯ

  • ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

    ಮುಡಾ ಹಗರಣ | ಸಿಎಂ ಪತ್ನಿಗೆ ಹೈಕೋರ್ಟ್ ನೋಟಿಸ್

    ಬೆಂಗಳೂರು/ಮೈಸೂರು: ಮುಡಾ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ (CM Siddaramaiah) ಪತ್ನಿ ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಅವರಿಗೆ ಹೈಕೋರ್ಟ್ ನೋಟಿಸ್ ನೀಡಿದೆ.ಇದನ್ನೂ ಓದಿ: ನಮ್ಮಿಬ್ಬರನ್ನು ದೂರ ಮಾಡ್ತಾರೆ ಎಂಬ ಭಯದಲ್ಲಿ ಕಾಲುವೆಗೆ ಹಾರಿ ಪ್ರೇಮಿಗಳು ಆತ್ಮಹತ್ಯೆ

    ಮುಡಾ (MUDA) ತನಿಖೆಗೆ ರಾಜ್ಯಪಾಲರ ಅನುಮತಿ ಬಗ್ಗೆ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಇಂದು ನಡೆದ ಹೈಕೋರ್ಟ್ ವಿಚಾರಣೆ ನಡೆಸಿತು. ಈ ವೇಳೆ ಹಂಗಾಮಿ ಮುಖ್ಯ ನ್ಯಾ.ಕಾಮೇಶ್ವರ ರಾವ್ ಹಾಗೂ ಸಿಎಂ ಜೋಷಿ ಅವರು ಎಲ್ಲಾ ಮನವಿಗಳು ಒಟ್ಟಿಗೆ ಬರಲಿ. ಆದರೆ ಟ್ಯಾಗ್ ಮಾಡುವುದು ಬೇಡ ಎಂದು ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದ್ದಾರೆ.

    ಈ ವೇಳೆ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನೋಟಿಸ್ (High Court) ನೀಡಿದ್ದು, ಸೆ.4ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.ಇದನ್ನೂ ಓದಿ: ಕೊಯಮತ್ತೂರು ಬಾಂಬ್ ಬ್ಲಾಸ್ಟ್‌ನ ಪ್ರಮುಖ ಆರೋಪಿ ವಿಜಯಪುರದಲ್ಲಿ ಅರೆಸ್ಟ್

  • ಮುಡಾ ಕೇಸ್‌ ಸಿಬಿಐಗೆ ವರ್ಗಾಯಿಸಲು ಮನವಿ – ಆದೇಶ ಕಾಯ್ದಿರಿಸಿದ ಕೋರ್ಟ್‌

    ಮುಡಾ ಕೇಸ್‌ ಸಿಬಿಐಗೆ ವರ್ಗಾಯಿಸಲು ಮನವಿ – ಆದೇಶ ಕಾಯ್ದಿರಿಸಿದ ಕೋರ್ಟ್‌

    – 50:50 ಸೈಟು ಪಡೆದ ಫಲಾನುಭವಿಗಳಿಗೆ ಮತ್ತೆ ಸಂಕಷ್ಟ
    – 631 ಸೈಟುಗಳು ಜಪ್ತಿಯಾಗುತ್ತಾ?

    ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸನ್ನು ಸಿಬಿಐಗೆ ವರ್ಗಾಯಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ಮುಗಿಸಿರುವ ಹೈಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೇ, ಈ ಆದೇಶ ಹೊರಬೀಳುವವರೆಗೂ, ಲೋಕಾಯುಕ್ತ ತನಿಖೆಯ ವರದಿಯನ್ನು ಕೆಳಹಂತದ ಕೋರ್ಟ್‌ಗೆ ಸಲ್ಲಿಕೆ ಮಾಡದಂತೆ ಹೈಕೋರ್ಟ್ ನಿರ್ದೇಶನ ನೀಡಿದೆ.

    ಸೋಮವಾರ ಸಿಎಂ ಪರವಾಗಿ ಅಭಿಷೇಕ್ ಮನು ಸಿಂಘ್ವಿ, ರವಿ ವರ್ಮಾಕುಮಾರ್ ವಾದ ಮಂಡಿಸಿದ್ರು. ದೇವರಾಜ್ ಪರ ದುಶ್ಯಂತ್ ದವೆ, ದೂರುದಾರನ ಪರವಾಗಿ ಮಣಿಂದರ್ ಸಿಂಗ್, ಸರ್ಕಾರದ ಪರ ಕಪಿಲ್ ಸಿಬಲ್, ಸಿಬಿಐ ಪರವಾಗಿ ಪ್ರಸನ್ನಕುಮಾರ್ ವಕಾಲತ್ತು ವಹಿಸಿದ್ರು.

    ಸಿದ್ದರಾಮಯ್ಯಗೆ `ಹೈ’ ಟೆನ್ಶನ್ – ವಾದ-ಪ್ರತಿವಾದ ಹೇಗಿತ್ತು?

    * ಮಣೀಂದರ್ ಸಿಂಗ್ – ಮುಡಾದ 141 ಫೈಲ್ ಕಳುವಾಗಿವೆ.
    * ಮಣೀಂದರ್ ಸಿಂಗ್ – ಲೋಕಾಯುಕ್ತದಿಂದ ಪಾರದರ್ಶಕ ತನಿಖೆ ಸಾಧ್ಯವಿಲ್ಲ
    * ಮಣೀಂದರ್ ಸಿಂಗ್ – ಸಿಎಂ ಇಸಿಗೆ ಸಲ್ಲಿಸಿರೋ ಅಫಿಡವಿಟ್‌ನಲ್ಲಿ 14 ಸೈಟ್ ಬಗ್ಗೆ ಉಲ್ಲೇಖಿಸಿಲ್ಲ
    * ಮಣೀಂದರ್ ಸಿಂಗ್- ಲೋಕಾಯುಕ್ತ ತನಿಖೆ ವೇಳೆ ಸಿಎಂ ಪತ್ನಿ ಸೈಟ್ ಏಕೆ ಹಿಂತಿರುಗಿಸಿದ್ರು?
    * ಮಣೀಂದರ್ ಸಿಂಗ್ – ಆರೋಪಿಗೆ ತನಿಖಾ ಸಂಸ್ಥೆ ನಿರ್ಧಾರ ಮಾಡೋ ಅಧಿಕಾರ ಇಲ್ಲ
    * ಮಣೀಂದರ್ ಸಿಂಗ್ – ಹೀಗಾಗಿ ಮುಡಾ ಕೇಸನ್ನು ಸಿಬಿಐಗೆ ವಹಿಸುವ ಅಗತ್ಯವಿದೆ
    * ಕಪಿಲ್ ಸಿಬಲ್ – ಸಿಎಂ ಮೇಲೆ ಆರೋಪ ಇದ್ದ ಮಾತ್ರಗೆ ಸಿಬಿಐಗೆ ಕೊಡಲಾಗದು
    * ಕಪಿಲ್ ಸಿಬಲ್ – ಪ್ರಕರಣವನ್ನು ಸಿಬಿಐಗೆ ವಹಿಸುವುದು ಶಾಸನಕ್ಕೆ ವಿರುದ್ಧವಾದ ನಡೆ
    * ಕಪಿಲ್ ಸಿಬಲ್ – ಸಿಎಂ ವಿರುದ್ಧ ತನಿಖೆ ನಡೆಸುವ ಹಕ್ಕು ಲೋಕಾಯುಕ್ತರಿಗೆ ಇದೆ
    * ಕಪಿಲ್ ಸಿಬಲ್ – ಹೀಗಾಗಿ ಕೇಸನ್ನು ಸಿಬಿಐಗೆ ವಹಿಸುವುದು ಉಚಿತವಲ್ಲ
    * ಕಪಿಲ್ ಸಿಬಲ್ – ಸಿಬಿಐ ಅನ್ನು ಪಂಜರದ ಗಿಳಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ
    * ಕಪಿಲ್ ಸಿಬಲ್ – ಹಾಗಿದ್ದಾಗ ಸಿಬಿಐನಿಂದ ಪಾರದರ್ಶಕ ತನಿಖೆ ಹೇಗೆ ಸಾಧ್ಯ?

    ಇಷ್ಟೆಲ್ಲಾ ಬೆಳವಣಿಗೆ ಮಧ್ಯೆ, ಮುಡಾದ 50:50 ಅನುಪಾತದಲ್ಲಿ ಸೈಟ್ ಪಡೆದ ಫಲಾನುಭವಿಗಳಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಜಪ್ತಿ ಮಾಡಿರುವ 142 ಆಸ್ತಿಗಳ ಪಟ್ಟಿಯನ್ನು ಉಪ ನೋಂದಣಾಧಿಕಾರಿಗಳ ಕಚೇರಿಗೆ ಇಡಿ ಕಳಿಸಿಕೊಟ್ಟಿದೆ. ಮೈಸೂರಿನ ನಾಲ್ಕು ಉಪನೋಂದಣಾಧಿಕಾರಿಗಳಿಗೆ ಪಟ್ಟಿ ರವಾನಿಸಿರುವ ಇಡಿ, ಮುಂದಿನ ಆದೇಶದವರೆಗೂ ಈ ಆಸ್ತಿಗಳನ್ನ ಬೇರೆಯವರಿಗೆ ನೋಂದಣಿ ಮಾಡಿಕೊಡಬಾರದು ಎಂದು ನಿರ್ದೇಶನ ನೀಡಿದೆ.

    ಇನ್ನೂ 50:50 ಅನುಪಾತದ ಅನುಸಾರ ಕೆಲವರು ಪಡೆದಿದ್ದ 631 ಸೈಟ್‌ಗಳ ದಾಖಲೆಗಳನ್ನು ಇಡಿ ಕೇಳಿತ್ತು. ಈ ಎಲ್ಲಾ ದಾಖಲೆಗಳನ್ನು ಆಯುಕ್ತರು ಇಡಿಗೆ ಕಳುಹಿಸಿದ್ದಾರೆ. ಇದನ್ನು ಆಧಾರವಾಗಿಟ್ಟುಕೊಂಡು ಬಹುತೇಕ ಇದೇ ವಾರದಲ್ಲಿ 631 ಸೈಟ್‌ಗಳನ್ನು ಇಡಿ ಜಪ್ತಿ ಮಾಡುವ ಸಾಧ್ಯತೆ ಇದೆ. ಇದರ ನಡ್ವೆ, ಇಡಿ 3ನೇ ಹಂತದ ಸೈಟ್ ಸೀಜ್ ಪ್ರಕ್ರಿಯೆಯನ್ನು ಆರಂಭಿಸಿದೆ. ಮತ್ತೆ 550 ಸೈಟ್‌ಗಳ ಮಾಹಿತಿಯನ್ನು ಮುಡಾ ಬಳಿ ಕೇಳಿದೆ. ಇಡಿ ಕ್ರಮವನ್ನು ಬಿಜೆಪಿಯ ಸಿಟಿ ರವಿ ಸ್ವಾಗತಿಸಿದ್ದಾರೆ.

  • ಮುಡಾ ಕೇಸ್‌ನಲ್ಲಿ ಸಿಎಂ ಪತ್ನಿಗೆ `ಹೈ’ ರಿಲೀಫ್ – ಕೋರ್ಟ್‌ನಲ್ಲಿ ವಾದ ಪ್ರತಿವಾದ ಏನಿತ್ತು?

    ಮುಡಾ ಕೇಸ್‌ನಲ್ಲಿ ಸಿಎಂ ಪತ್ನಿಗೆ `ಹೈ’ ರಿಲೀಫ್ – ಕೋರ್ಟ್‌ನಲ್ಲಿ ವಾದ ಪ್ರತಿವಾದ ಏನಿತ್ತು?

    ಬೆಂಗಳೂರು: ಸಿಎಂ ವಿರುದ್ಧದ ಮುಡಾ ಹಗರಣಕ್ಕೆ ಇಂದು ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಕ್ಕಿದೆ. ಲೋಕಾ ತನಿಖೆಯಲ್ಲಿ ಸಿಎಂ ಸಿದ್ದರಾಮಯ್ಯಗೆ (Siddaramaiah) ಕ್ಲೀನ್‌ಚಿಟ್ ಕೊಡಲಾಗಿದೆ ಎಂಬ ವದಂತಿ ಬೆನ್ನಲ್ಲೇ, ಇಡಿ ಶಾಕ್ ಕೊಟ್ಟಿತ್ತು. ಈ ಬೆನ್ನಲ್ಲೇ ಇಡಿ ಸಮನ್ಸ್‌ಗೆ ಹೈಕೋರ್ಟ್‌ ತಡೆ ನೀಡಿ ಮತ್ತೊಂದು ಟ್ವಿಸ್ಟ್‌ ಕೊಟ್ಟಿದೆ.

    ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ಗೆ (byrathi suresh) ಇಡಿ ಸಮನ್ಸ್ ಜಾರಿಮಾಡಿತ್ತು. ಇದ್ರ ಪ್ರಕಾರ ಮಂಗಳವಾರ ಬೆಳಗ್ಗೆ 11 ಗಂಟೆಗೆ ಇಬ್ಬರೂ ವಿಚಾರಣೆಗೆ ಹಾಜರಾಗಬೇಕಿತ್ತು. ಆದ್ರೆ, ತಡ ಮಾಡದ ಸಿಎಂ ಮತ್ತು ಸಚಿವ ಬೈರತಿ ಸುರೇಶ್, ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಇಡಿ ಸಮನ್ಸ್‌ಗೆ (ED Summons) ತಡೆ ನೀಡಿದೆ. ಮುಂದಿನ ವಿಚಾರಣೆವರೆಗೂ ಇಡಿ ಯಾವುದೇ ಪ್ರಕ್ರಿಯೆ ನಡೆಸುವಂತಿಲ್ಲ. ಸಿಎಂ ಪತ್ನಿ ಮತ್ತು ಸಚಿವ ಬೈರತಿ ಸುರೇಶ್ ವಿಚಾರಣೆಗೆ ಹಾಜರಾಗುವ ಅಗತ್ಯವಿಲ್ಲ ಎಂದಿದೆ.

    ವಿಚಾರಣೆಯನ್ನು ಫೆಬ್ರವರಿ 10ಕ್ಕೆ ಮುಂದೂಡಿದೆ. ಅಲ್ಲಿಗೆ ಸಿಎಂ ಪತ್ನಿ ಮತ್ತು ಸಚಿವ ಬೈರತಿ ಸುರೇಶ್‌ಗೆ ರಿಲೀಫ್ ಸಿಕ್ತು.. ಇದಕ್ಕೂ ಮುನ್ನ, ಇಡಿ ಸಮನ್ಸ್ ಪ್ರಶ್ನಿಸಿದ್ದ ಮಾಜಿ ಆಯುಕ್ತ ನಟೇಶ್‌ಗೆ ಹೈಕೋರ್ಟ್ ರಿಲೀಫ್ ನೀಡಿತ್ತು. ನಟೇಶ್‌ಗೆ ನೀಡಿದ್ದ ಸಮನ್ಸ್ ಅನ್ನು ರದ್ದು ಮಾಡಿತ್ತು. ಇದನ್ನೇ ಆಧಾರವಾಗಿಟ್ಟುಕೊಂಡು ಸಚಿವ ಬೈರತಿ ಸುರೇಶ್ ಪರ ವಕೀಲರು ವಾದ ಮಂಡಿಸಿದ್ರು.

    ಕೋರ್ಟ್‌ನಲ್ಲಿ ವಾದ-ಪ್ರತಿವಾದ ಹೇಗಿತ್ತು?
    * ಸಿಎಂ ಪರ ವಕೀಲ : ಪಾರ್ವತಿ ಅವರಿಗೆ ನೀಡಲಾದ ಸಮನ್ಸ್‌ಗೆ ತಡೆ ನೀಡಬೇಕು
    * ನ್ಯಾಯಪೀಠ: ಈ ಅರ್ಜಿ ವಿಚಾರಣೆ ನಡೆಯಲಿ.. ನಿಮಗೇಕೆ ಆತುರ?
    * ಇಡಿ ಪರ ವಕೀಲ: ಸೈಟ್ ವಾಪಸ್ಸು ನೀಡಿರೋದೇ ಅಪರಾಧದ ಒಂದು ಭಾಗ
    * ಇಡಿ ಪರ ವಕೀಲ: ಅಪರಾಧ ಮಾಡಿದ್ದೇನೆ ಎಂದು ಎ2 ಒಪ್ಪಿಕೊಂಡಿದ್ದಾರೆ
    * ಸಿಎಂ ಪರ ವಕೀಲ: ಲೋಕಾಯುಕ್ತ ತನಿಖೆ ನಡೆಸ್ತಿದೆ.. ಹಾಗಿದ್ರೂ ಇಡಿ ತನಿಖೆ
    * ಬೈರತಿ ಪರ ವಕೀಲ: ಈ ಕೇಸಲ್ಲಿ ಆರೋಪಿ ಅಲ್ಲ.. ಆದರೂ ಇಡಿ ಸಮನ್ಸ್ ನೀಡಿದೆ
    * ಬೈರತಿ ಪರ ವಕೀಲ: ನಾಳೆಯಿಂದ ಪುತ್ರನ ಮದುವೆ ಕಾರ್ಯಕ್ರಮವಿದೆ. ನಾಳೆ ವಿಚಾರಣೆಗೆ ಕರೆದಿದ್ದಾರೆ
    * ಬೈರತಿ ಪರ ವಕೀಲ: ನಟೇಶ್ ಸಮನ್ಸ್ ರದ್ದು ಮಾಡಿ ಮತ್ತೊಂದು ಪೀಠ ಆದೇಶ ನೀಡಿದೆ..
    * ಬೈರತಿ ಪರ ವಕೀಲ: ಇಲ್ಲಿಯೂ ಅದೇ ನೋಟಿಸ್.. ಅದೇ ಆರೋಪ.. ಸಮನ್ಸ್ ರದ್ದು ಮಾಡಿ
    * ಇಡಿ ಪರ ವಕೀಲ: ಆ ಪೀಠದಲ್ಲಿ ಯಾವ ಆಧಾರದ ಮೇಲೆ ರದ್ದು ಮಾಡಿದೆ ಗೊತ್ತಿಲ್ಲ..
    * ಇಡಿ ಪರ ವಕೀಲ: ಸಮನ್ಸ್ ನೀಡುವ ಅಧಿಕಾರ ಇಡಿಗೆ ಇದೆ
    * ಇಡಿ ಪರ ವಕೀಲ: ತನಿಖೆ ಮಾಡುವಾಗ ಯಾರಿಗೆ ಬೇಕಾದರೂ ನೋಟಿಸ್ ನೀಡಬಹುದು
    * ನ್ಯಾಯಪೀಠ: ಪಾರ್ವತಿ, ಬೈರತಿ ಸುರೇಶ್‌ಗೆ ಇಡಿ ನೀಡಿದ್ದ ಸಮನ್ಸ್‌ಗೆ ತಡೆ
    * ನ್ಯಾಯಪೀಠ: ಮುಂದಿನ ಆದೇಶದ ತನಕ ವಿಚಾರಣೆಗೆ ತಡೆ

    ರಾಜಕೀಯ ವಾಕ್ಸಮರ:
    ಇನ್ನೂ ಮುಡಾ ಕೇಸಲ್ಲಿ ಸಿಎಂ ಪತ್ನಿ ಮತ್ತು ಸಚಿವ ಬೈರತಿ ಸುರೇಶ್‌ಗೆ ಇಡಿ ನೊಟೀಸ್ ನೀಡಿದ್ದು ರಾಜಕೀಯ ವಾಕ್ಸಮರಕ್ಕೂ ಕಾರಣವಾಗಿದೆ. ಇದು ರಾಜಕೀಯ ಪ್ರೇರಿತ ಎಂದು ಡಿಸಿಎಂ ಆಕ್ರೋಶ ಹೊರಹಾಕಿದ್ದಾರೆ. ಆದ್ರೆ, ಯಡಿಯೂರಪ್ಪ, ಜನಾರ್ದನ ರೆಡ್ಡಿಗೆ ನೊಟೀಸ್ ಕೊಟ್ಟಾಗ ಅದು ರಾಜಕೀಯ ಪ್ರೇರಿತ ಆಗಿರಲಿಲ್ವಾ ಎಂದು ಬಿಜೆಪಿಯ ಅಶೋಕ್ ಪ್ರಶ್ನಿಸಿದ್ದಾರೆ. ಆದ್ರೆ, ಸಚಿವ ಸತೀಶ್ ಜಾರಕಿಹೊಳಿ ಮಾತ್ರ, ಇದನ್ನು ರಾಜಕೀಯವಾಗಿ ನೋಡಬಾರದು.. ನೊಟೀಸ್‌ಗೆ ಮಹತ್ವ ಕೊಡಬೇಕಿಲ್ಲ.. ಅಂದ್ರು. ಇನ್ನು, ಸಿಎಂ ಅಧಿಕಾರದಲ್ಲಿ ಮುಂದುವರೆಯೋದು ತಪ್ಪಲ್ಲವೇ ಎಂದು ಕೇಂದ್ರ ಸಚಿವ ಜೋಶಿ ಕೇಳಿದ್ರು.

  • ಸಿಎಂ ಪತ್ನಿಗೆ ಇಡಿ ನೋಟಿಸ್ ರಾಜಕೀಯ ಅನ್ನೋಕ್ಕಾಗಲ್ಲ, ಉತ್ತರ ಕೊಡಲಿ – ಸತೀಶ್ ಜಾರಕಿಹೊಳಿ

    ಸಿಎಂ ಪತ್ನಿಗೆ ಇಡಿ ನೋಟಿಸ್ ರಾಜಕೀಯ ಅನ್ನೋಕ್ಕಾಗಲ್ಲ, ಉತ್ತರ ಕೊಡಲಿ – ಸತೀಶ್ ಜಾರಕಿಹೊಳಿ

    ಬೆಂಗಳೂರು: ಪಾರ್ವತಿ ಸಿದ್ದರಾಮಯ್ಯ ಅವರಿಗೆ ಇಡಿ ನೋಟಿಸ್ ನೀಡಿರುವುದು ಎಲ್ಲ ಬಾರಿಯೂ ರಾಜಕೀಯ ಎನ್ನಲು ಸಾಧ್ಯವಿಲ್ಲ. ನೋಟಿಸ್ ಕೊಟ್ಟಿದ್ದಾರೆ ಅವರು ಉತ್ತರ ಕೊಡಲಿ ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಪತ್ನಿ, ಬೈರತಿ ಸುರೇಶ್ ಅವರಿಗೆ ಇಡಿ ನೋಟಿಸ್ ವಿಚಾರವಾಗಿ ಮಾತನಾಡಿದ ಅವರು, ಎಲ್ಲ ಸಮಯದಲ್ಲಿಯೂ ಅದನ್ನು ರಾಜಕೀಯ ಎನ್ನಲು ಸಾಧ್ಯವಿಲ್ಲ. ಅದು ಹೊಸದೇನಲ್ಲ. ನಾವು ರಾಜಕೀಯವಾಗಿ ನೋಡಬಾರದು. ನೋಟಿಸ್‌ಗೆ ಅಷ್ಟೊಂದು ಮಹತ್ವ ಕೊಡಬೇಕಿಲ್ಲ. ಪ್ರತಿಕ್ರಿಯಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ನಾನು ಆ ಡಿಪಾರ್ಟ್ಮೆಂಟ್ ಹೆಡ್ ಅಲ್ಲ. ನೋಟಿಸ್ ಕೊಟ್ಟಿದ್ದಾರೆ. ಉತ್ತರ ಕೊಡಬೇಕು ಅಷ್ಟೇ ಎಂದರು.ಇದನ್ನೂ ಓದಿ: ಸಿಎಂ ಪತ್ನಿಗೆ ಇಡಿ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ – ಡಿಕೆಶಿ

    ಇದೇ ವೇಳೆ ದಲಿತ ನಾಯಕರ ಸಭೆ ಕುರಿತು ಮಾತನಾಡಿ, ಸಭೆಯಲ್ಲಿ ನಾನು ಕೇವಲ ಸದಸ್ಯ. ಮಾನವ ಬಂಧುತ್ವ ವೇದಿಕೆ ಮೂಲಕ ಮೊದಲಿನಿಂದಲೂ ಪಕ್ಷ ಸಂಘಟನೆ ಮಾಡ್ತಿದ್ದೇವೆ. ಈಗ ಮಾಡುತ್ತಿರುವುದಲ್ಲ. ಮೊದಲಿನಿಂದಲೂ ಟ್ರೈನಿಂಗ್ ಕೊಡುತ್ತಿದ್ದೇವೆ. ಮೊದಲಿನಿಂದಲೂ ವೇದಿಕೆ ಮೂಲಕ ನಡೆದಿದೆ. ಇನ್ನೂ ದಲಿತ ಸಚಿವರ ಸಭೆ ಮುಂದೂಡಿಕೆ ವಿಚಾರವಾಗಿ ನನ್ನನ್ನು ಕೇಳಿದ್ರ‍್ರೆ ಹೇಗೆ ನೀವು ಗೃಹ ಮಂತ್ರಿಯವರನ್ನ ಕೇಳಬೇಕು. ನಾವು ಸದಸ್ಯರಷ್ಟೆ. ನೀವು ಅವರನ್ನೇ ಕೇಳಬೇಕು ಎಂದರು.

    ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಜಮೀರ್ ಹೇಳಿಕೆ ವಿಚಾರವಾಗಿ, ಉತ್ತರಕ್ಕೆ ನಾನೇನು ಮಾಡಲಿ. ನಾನು ಹೈಕಮಾಂಡ್ ಅಲ್ಲ. ಅದೇನು ಪ್ರಯೋಜನ ಇಲ್ಲ, ಎಲ್ಲ ಅವರವರ ಸ್ಥಾನದಲ್ಲಿ ಇದ್ದಾರೆ. ನಮ್ಮ ಡಿಮಾಂಡ್‌ನ್ನು ಪ್ರತಿದಿನ ಹೇಳಬೇಕು ಅಂತಿಲ್ಲ. ಒಂದು ಸಲ ಹೇಳಿದ್ರೆ ಸಾಕು. ಅದು ಹೈಕಮಾಂಡ್‌ಗೆ ಇರಸುಮುರುಸು ಆಗಿದೆ. ಅದಕ್ಕೆ ಹೈಕಮಾಂಡ್ ಹೇಳಿರಬೇಕು. ಈಗ ಚರ್ಚೆ ನಡೆಯುತ್ತಿಲ್ಲ, ಅದೆಲ್ಲ ಅನಾವಶ್ಯಕ. ಮಾತನಾಡಿದರೆ ಏನು ಪ್ರಯೋಜನ? ಅನವಶ್ಯಕ ಚರ್ಚೆ ಯಾಕೆ? ಗಾಳಿಯಲ್ಲಿ ಸುತ್ತೋದು ಯಾಕೆ? ದೆಹಲಿಗೆ ಹೋಗುವುದು ಫಿಕ್ಸ್ ಆಗಿಲ್ಲ. ಕಾರ್ಯಕ್ರಮ ಮುಂದಕ್ಕೆ ಹೋಗಿದೆ ಎಂದು ಹೇಳಿದರು.ಇದನ್ನೂ ಓದಿ: ಬೆಂಗ್ಳೂರಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್ ಶೋರೂಂ – 70 ಬೈಕ್‌ಗಳು ಭಸ್ಮ

  • ಸಿಎಂ ಪತ್ನಿಗೆ ಇಡಿ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ – ಡಿಕೆಶಿ

    ಸಿಎಂ ಪತ್ನಿಗೆ ಇಡಿ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ – ಡಿಕೆಶಿ

    ಬೆಂಗಳೂರು: ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) ಅವರಿಗೆ ಇಡಿ ನೋಟಿಸ್ ನೀಡಿರುವುದು ರಾಜಕೀಯ ಪ್ರೇರಿತ ಎಂದು ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದರು.ಇದನ್ನೂ ಓದಿ: ಬೆಂಗ್ಳೂರಲ್ಲಿ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್ ಶೋರೂಂ – 70 ಬೈಕ್‌ಗಳು ಭಸ್ಮ

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಪತ್ನಿ, ಬೈರತಿ ಸುರೇಶ್‌ಗೆ ನೋಟಿಸ್ ವಿಚಾರವಾಗಿ ಇದೆಲ್ಲಾ ರಾಜಕೀಯ ಪ್ರೇರಿತ. ನನ್ನ ಕೇಸ್‌ನಲ್ಲಿಯೂ ಇದೇ ರೀತಿ ಆಗಿತ್ತು. ಎರಡು ಘಟನೆಗಳು ಒಂದೇ ಸಲ ನಡೆಯಲ್ಲ. ಈಗಾಗಲೇ ಲೋಕಾಯುಕ್ತದಲ್ಲಿ ತನಿಖೆ ನಡೀತಿದೆ. ಈ ವೇಳೆ ಬೇರೆ ಸಂಸ್ಥೆಯವರು ತನಿಖೆ ಮಾಡೋದಕ್ಕೆ ಆಗಲ್ಲ ಎಂದು ಅನೇಕ ತೀರ್ಪಿನಲ್ಲಿದೆ. ಅದೇನು ಎಂದು ಮಾಹಿತಿ ತಿಳಿದುಕೊಂಡು ಮಾತನಾಡುತ್ತೇನೆ. ನನ್ನ ಕೇಸ್‌ನಲ್ಲಿ ಸಿಬಿಐ ಮತ್ತು ಇಡಿಯವರು ತನಿಖೆ ಮಾಡುತ್ತಿದ್ದರು. ಈ ರೀತಿ ಮಾಡೋದಕ್ಕೆ ಬರಲ್ಲ ಎಂದು ಕೆಲವು ಜಡ್ಜ್ಮೆಂಟ್ ಇದೆ. ನಮ್ಮ ಸ್ಟ್ಯಾಂಡ್ ಕ್ಲಿಯರ್ ಇದೆ. ಇದೆಲ್ಲ ರಾಜಕೀಯ ಪ್ರೇರಿತ ಎಂದರು.

    ಐದು ವರ್ಷ ಸಿದ್ದರಾಮಯ್ಯ ಸಿಎಂ ಎಂಬ ಬಗ್ಗೆ ನಾಯಕರ ಹೇಳಿಕೆ ವಿಚಾರವಾಗಿ, ಅವರು ಯಾರು ಏನೂ ಮಾತಾಡಿಲ್ಲ. ಸರ್ಕಾರ ಸುಭದ್ರವಾಗಿದೆ. ನಾವೆಲ್ಲಾ ಸಿಎಂ ಕೆಳಗೆ ಕೆಲಸ ಮಾಡುತ್ತಿದ್ದೇವೆ. ಯಾವ ಐದು ವರ್ಷವೂ ಇಲ್ಲ ಎಂದಿದ್ದಾರೆ.ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆ – 14 ತಿದ್ದುಪಡಿಗಳಿಗೆ ಜಂಟಿ ಸಮಿತಿಯ ಒಪ್ಪಿಗೆ

     

  • MUDA Case | ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ – ಸಿಎಂ ಪತ್ನಿ ಪಾರ್ವತಿಗೆ ತಾತ್ಕಾಲಿಕ ರಿಲೀಫ್

    MUDA Case | ಇಡಿ ಸಮನ್ಸ್‌ಗೆ ಹೈಕೋರ್ಟ್ ತಡೆ – ಸಿಎಂ ಪತ್ನಿ ಪಾರ್ವತಿಗೆ ತಾತ್ಕಾಲಿಕ ರಿಲೀಫ್

    ಬೆಂಗಳೂರು: ಮುಡಾ ಹಗರಣ ಕೇಸ್‌ನಲ್ಲಿ (MUDA Case) ಸಿಎಂ ಪತ್ನಿ ಪಾರ್ವತಿ ಹಾಗೂ ಸಿಎಂ ಅಪ್ತ ಸಚಿವ ಬೈರತಿ ಸುರೇಶ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಮುಡಾ ಹಗರಣ ಕೇಸ್‌ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಎಂ ಪತ್ನಿ ಪಾರ್ವತಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್‌ಗೆ ಹೈಕೋರ್ಟ್ (Highcourt) ತಡೆ ನೀಡಿದೆ.

    ಹೈಕೋರ್ಟ್‌ ನ್ಯಾಯಮೂರ್ತಿ ನಾಗಪ್ರಸನ್ನ (NagaPrasanna) ಅವರಿದ್ದ ಪೀಠ ಇಡಿ ಸಮನ್ಸ್‌ಗೆ ತಡೆ ನೀಡಿದ್ದು, ಮುಂದಿನ ಆದೇಶದ ವರೆಗೆ ಯಾವುದೇ ವಿಚಾರಣೆ ನಡೆಸದಂತೆ ಸೂಚಿಸಿದೆ. ಪ್ರಕರಣದ ವಿಚಾರಣೆಯನ್ನು ಫೆ.10ಕ್ಕೆ ಮುಂದೂಡಿದೆ.

    ಏನಿದು ಕೇಸ್?
    ಸಿಎಂ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಇಡಿ ಮೇಜರ್ ಟ್ವಿಸ್ಟ್ ನೀಡಿತ್ತು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ (BM Parvathi) ಹಾಗೂ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಮಾಡಿತ್ತು. ಇಡಿ ಬೆಂಗಳೂರು ವಲಯ ಕಚೇರಿಯ ಸಹಾಯಕ ನಿರ್ದೇಶಕ ವಿ. ಮುರಳಿಕೃಷ್ಣನ್ ಅವರು ಹಣದ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಬ್ಬರಿಗೂ ನೋಟಿಸ್ ಜಾರಿಮಾಡಿದ್ದರು.

    ಮಂಗಳವಾರ (ಜ.28) ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಪಾರ್ವತಿ ಅವರಿಗೆ ಜನವರಿ 3ರಂದು ಮೊದಲ ನೋಟಿಸ್ ನೀಡಿದ್ದು, ಜ.9ಕ್ಕೆ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಪುನಃ ಜನವರಿ 24ರಂದು ಎರಡನೇ ನೋಟಿಸ್ ಜಾರಿಮಾಡಲಾಗಿತ್ತು. ದಾಖಲೆ ಸಂಗ್ರಹದ ಅಗತ್ಯವಿದೆ ಎಂಬ ಕಾರಣ ನೀಡಿ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡುವಂತೆ ಕೋರಿ ಪಾರ್ವತಿ ಅವರು ಇಡಿ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ವಯಸ್ಸಿನ ಕಾರಣದಿಂದ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡುವಂತೆಯೂ ಕೋರಿದ್ದಾರೆ ಎನ್ನಲಾಗಿತ್ತು.

    ಇನ್ನು ಬೈರತಿ ಸುರೇಶ್ ಅವರಿಗೂ ಮುರಳಿಕೃಷ್ಣನ್ ನೋಟಿಸ್ ಜಾರಿಗೊಳಿಸಿದ್ದರು. ನೋಟಿಸ್ ಬಂದಿರುವುದನ್ನು ಸ್ವತಃ ಸಚಿವ ಸುರೇಶ್ ಅವರೇ ಖಚಿತಪಡಿಸಿದ್ದರು. ಮಗನ ಮದುವೆ ಇರುವ ಕಾರಣ. ಫೆ.6, 7 ರಂದು ವಿಚಾರಣೆಗೆ ಹಾಜರಾಗುವುದಾಗಿ ಬೈರತಿ ಸುರೇಶ್ ಮನವಿ ಮಾಡಿದ್ದರು. ನೋಟಿಸ್ ನೀಡಿರೋದನ್ನು ಸಿಎಂ ಸಿದ್ದರಾಮಯ್ಯ ಕೂಡ ಖಚಿತಪಡಿಸಿದ್ದರು.

    ಇಡಿ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಹಾಗೂ ಬೈರತಿ ಸುರೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇಂದು ಮಧ್ಯಾಹ್ನ 2:30ರಿಂದ ವಿಚಾರಣೆ ಪ್ರಾರಂಭವಾಗಿತ್ತು. ಇಡಿ ಪರವಾಗಿ ವಕೀಲ ಅರವಿಂದ ಕಾಮತ್ ಹಾಗೂ ಬೈರತಿ ಸುರೇಶ್ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್, ಪಾರ್ವತಿ ಸಿದ್ದರಾಮಯ್ಯ ಅವರ ಪರವಾಗಿ ವಕೀಲ ಸಂದೇಶ್ ಚೌಟಾ ವಾದ ಮಂಡಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಇಡಿ ಸಮನ್ಸ್‌ಗೆ ತಡೆ ನೀಡಿತು. ಅಲ್ಲದೇ ಪ್ರಕರಣದ ವಿಚಾರಣೆನ್ನು ಫೆ.10ಕ್ಕೆ ಮುಂದೂಡಿ ಆದೇಶ ಪ್ರಕಟಿಸಿತು.

  • ನೋಂದಣಿಗೂ ಮುನ್ನವೇ ಶುಲ್ಕ ಪಾವತಿ; ಸಿಎಂ ವಿರುದ್ಧ ಮತ್ತೊಂದು ದಾಖಲೆ ರಿಲೀಸ್!

    ನೋಂದಣಿಗೂ ಮುನ್ನವೇ ಶುಲ್ಕ ಪಾವತಿ; ಸಿಎಂ ವಿರುದ್ಧ ಮತ್ತೊಂದು ದಾಖಲೆ ರಿಲೀಸ್!

    ಬೆಂಗಳೂರು: ಮುಡಾ ಹಗರಣದ (MUDA Scam) ತನಿಖೆ ಚುರುಕುಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಮತ್ತೊಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

    ನೋಂದಣಿಗೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸಿಎಂ ಪತ್ನಿ ಪಾರ್ವತಿ ಪತ್ರ ಬರೆದಿದ್ದರು. 2020ರ ಜನವರಿ 12ರಂದು ಪಾರ್ವತಿಯವರು ಮುಡಾ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದರು. ಆದರೆ ನೋಂದಣಿ ಶುಲ್ಕವನ್ನು ಒಂದು ದಿನ ಮುಂಚಿತವಾಗಿ ಪಾವತಿ ಮಾಡಿದ್ದರು. ಅಂದರೆ 2020ರ ಜನವರಿ 11ರಂದು ತಹಶೀಲ್ದಾರರಿಂದ ನೋಂದಣಿ ಶುಲ್ಕ ಪಾವತಿ ಮಾಡಿದ್ದಾರೆ. ಸಿದ್ದರಾಮಯ್ಯನವರ ಪ್ರಭಾವ ಅಧಿಕಾರಿಗಳ ಮೇಲೆ ಬೀರಿದೆ ಎಂಬುದಕ್ಕೆ ಮತ್ತೆರಡು ದಾಖಲೆಗಳು ಇದು ಎಂದು ಸ್ನೇಹಮಯಿ ಕೃಷ್ಣ (Snehamayi Krishna) ಆರೋಪಿಸಿದ್ದಾರೆ. ಇದನ್ನೂ ಓದಿ: ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು

    ಅರ್ಜಿ ಕೊಡುವ ಒಂದು ದಿನದ ಮೊದಲೇ ಶುಲ್ಕ ಪಾವತಿ ಮಾಡಲಾಗಿದೆ. ಈ ರೀತಿ ಪಾವತಿ ಮಾಡಲು ಯಾವ ಕಾನೂನಿನಲ್ಲಿ ಅವಕಾಶ ಇದೆಯಾ? ಇದು ಅಧಿಕಾರಿಗಳ ಮೇಲೆ ನಿಮ್ಮ ಪ್ರಭಾವ ಬೀರಿದೆ ಎಂಬುದನ್ನು ಸಾಬೀತು ಪಡಿಸುವುದಿಲ್ಲವೆ? ಸ್ವತಃ ವಕೀಲರಾದ ಮತ್ತು ಮುಡಾ ಪ್ರಕರಣದಲ್ಲಿ ತಮ್ಮ ಯಾವುದೇ ಪ್ರಭಾವ ಇಲ್ಲ ಎಂದು ಹೇಳುತ್ತಿರುವ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸ್ಪಷ್ಟೀಕರಣ ಕೊಡುವರೆ ಎಂದು ಸ್ನೇಹಮಯಿ ಕೃಷ್ಣ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸ್ವತಃ ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿಬಂದರೂ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ: ಅಮಿತ್‌ ಶಾ